Close Menu
    What's Hot

    ಖಾಸಗಿ ಆಸ್ಪತ್ರೆಗಳ ಚಿಕಿತ್ಸಾ ವೆಚ್ಚಕ್ಕೆ ಕಡಿವಾಣ; ಏಕರೂಪದ ದರ ನಿಗದಿಗೆ ಆರೋಗ್ಯ ಇಲಾಖೆ ಸಿದ್ಧತೆ

    October 17, 2026

    ‘ಲೆಹ್ರಾ ದೋ ತಿರಂಗಾ’ ರ‍್ಯಾಲಿಗೂ ಮುನ್ನ ಪೊಲೀಸ್ ಕ್ರಮ; ಸಿಜೆಪಿ ಸಂಸ್ಥಾಪಕನ ಬಂಧನ, ನೇಹಾ ಬೋರಾ ಬಿಡುಗಡೆ

    October 17, 2026

    ಬಿಜೆಪಿ ಹಿರಿಯ ನಾಯಕ ಎಲ್‌ಕೆ ಅಡ್ವಾಣಿ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಗೆ ದಾಖಲು

    October 17, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಕರ್ನಾಟಕ»ಗೂಗಲ್ ಮ್ಯಾಪ್ ಎಡವಟ್ಟು: ದಟ್ಟ ಕಾಡಿನಲ್ಲಿ ಸಿಲುಕಿದ 9 ಟೆಕ್ಕಿಗಳು; ಬೆಳಗ್ಗೆ ಪೊಲೀಸರಿಂದ ರಕ್ಷಣೆ
    ಕರ್ನಾಟಕ

    ಗೂಗಲ್ ಮ್ಯಾಪ್ ಎಡವಟ್ಟು: ದಟ್ಟ ಕಾಡಿನಲ್ಲಿ ಸಿಲುಕಿದ 9 ಟೆಕ್ಕಿಗಳು; ಬೆಳಗ್ಗೆ ಪೊಲೀಸರಿಂದ ರಕ್ಷಣೆ

    adminBy adminOctober 17, 2026No Comments1 Min Read

    ಚಾಮರಾಜನಗರ: ಗೂಗಲ್ ಮ್ಯಾಪ್ ತೋರಿಸಿದ ದಾರಿಯಲ್ಲಿ ಸಾಗಿ ಸೇತುವೆಯಿಂದ ಕೆಳಬಿದ್ದ ಕಾರು, ಗೂಗಲ್ ಮ್ಯಾಪ್ ನೋಡಿಕೊಂಡು ಹೋಗಿ ಅಪಘಾತಕ್ಕೀಡಾದ ಸುದ್ದಿಗಳನ್ನು ನಾವು ನೋಡಿದ್ದೇವೆ. ಆದರೀಗ ನವರಾತ್ರಿ ಉತ್ಸವವನ್ನು ಕಣ್ತುಂಬಿಕೊಳ್ಳಲು ಮೈಸೂರಿಗೆ ಬಂದಿದ್ದ ಒಂಬತ್ತು ಟೆಕ್ಕಿಗಳು, ಗೂಗಲ್ ಮ್ಯಾಪ್ ತೋರಿಸಿದ ಮಾರ್ಗವನ್ನು ಅನುಸರಿಸಿ ದಟ್ಟ ಕಾಡಿನಲ್ಲಿ ಸಿಲುಕಿ ಸಂಕಷ್ಟಕ್ಕೆ ಸಿಲುಕಿದ ಘಟನೆ ನಡೆದಿದೆ. ಬೆಂಗಳೂರಿನಿಂದ ಮೈಸೂರಿಗೆ ಆಗಮಿಸಿದ್ದ ಈ ತಂಡ, ಉತ್ಸವ ವೀಕ್ಷಿಸಿದ ಬಳಿಕ ಚೆನ್ನೈಗೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ. ರೋಜರ್ ಪ್ರಿನ್ಸ್, ಪ್ರಿನ್ಸ್ ಮಾರ್ಟಿನ್, ಮಣಿ, ಅರಿವುಮತಿ, ಗಣ, ಶರ್ಮಿಳಾ, ತ್ರಿಷಾ, ಬೊಪೇಶ್ ಹಾಗೂ ಜೋಸಯ್ಯ ಸೇರಿದಂತೆ ಒಂಬತ್ತು ಮಂದಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಚಾಮರಾಜನಗರ ಮಾರ್ಗವಾಗಿ ದಿಂಬಂ ಘಾಟ್ ಮೂಲಕ ಚೆನ್ನೈಗೆ ತೆರಳಲು ನಿರ್ಧರಿಸಿದ್ದ ತಂಡ, ರಾತ್ರಿ ಗೂಗಲ್ ಮ್ಯಾಪ್ ಸಹಾಯದಿಂದ ಪ್ರಯಾಣ ಮುಂದುವರಿಸಿತ್ತು.

    ಈ ವೇಳೆ ಗೂಗಲ್ ಮ್ಯಾಪ್ ಕಾಡಿನ ಒಳಭಾಗದ ರಸ್ತೆಯನ್ನು ತೋರಿಸಿದ್ದು, ಅದೇ ಮಾರ್ಗದಲ್ಲಿ ಸಾಗಿದ ಕಾರು ರಸ್ತೆ ಬದಿಯ ಕಂದಕದಲ್ಲಿ ಸಿಲುಕಿಕೊಂಡಿದೆ. ದಟ್ಟ ಕಾಡಿನ ಮಧ್ಯೆ ಸಿಲುಕಿದ ತಂಡಕ್ಕೆ ರಾತ್ರಿ ಅಲ್ಲಿಯೇ ಕಳೆಯುವ ಪರಿಸ್ಥಿತಿ ಎದುರಾಗಿದೆ.

    ಕಾಡಾನೆಯ ಶಬ್ದ ಕೇಳಿ ರಾತ್ರಿ ಜಾಗರಣೆ

    ರಾತ್ರಿ ವೇಳೆ ಕಾಡಾನೆ ಘೀಳಿಡುವ ಶಬ್ದ ಕೇಳಿಬಂದ ಹಿನ್ನೆಲೆಯಲ್ಲಿ ಆತಂಕಗೊಂಡ ಟೆಕ್ಕಿಗಳು ಕಾರಿನಿಂದ ಕೆಳಗಿಳಿಯದೆ ಒಳಗೇ ಉಳಿದುಕೊಂಡಿದ್ದಾರೆ. ಬೆಳಗ್ಗೆಯವರೆಗೂ ದಟ್ಟ ಕಾಡಿನಲ್ಲೇ ಕಾಲ ಕಳೆದ ತಂಡ, ಬಳಿಕ ಪೊಲೀಸರಿಗೆ ಮಾಹಿತಿ ನೀಡಿದೆ. ಮಾಹಿತಿ ತಿಳಿದ ಬಳಿಕ ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿ ಕಂದಕದಲ್ಲಿ ಸಿಲುಕಿದ್ದ ಕಾರನ್ನು ಮೇಲಕ್ಕೆತ್ತಿದ್ದಾರೆ. ತಮಿಳುನಾಡು ಪೊಲೀಸರು ಒಂಬತ್ತು ಟೆಕ್ಕಿಗಳನ್ನು ಸುರಕ್ಷಿತವಾಗಿ ಕಳುಹಿಸಿಕೊಟ್ಟಿದ್ದಾರೆ.

    ಗೂಗಲ್ ಮ್ಯಾಪ್ ತೋರಿಸಿದ ಮಾರ್ಗವನ್ನು ಅನುಸರಿಸಿದ ಪರಿಣಾಮ ತಂಡ ದಟ್ಟ ಕಾಡಿನಲ್ಲಿ ಸಿಲುಕಿಕೊಂಡಿದ್ದು, ರಾತ್ರಿ ಇಡೀ ಆತಂಕದಲ್ಲೇ ಕಾಲ ಕಳೆಯುವಂತಾಯಿತು.




    #karnataka
    Previous Articleಪುತ್ತೂರಿನಲ್ಲಿ ಮಹಿಳೆಯ ಮೇಲಿನ ಹಲ್ಲೆ ಪ್ರಕರಣ: ಮೊದಲ ಆರೋಪಿಗೆ 2 ವರ್ಷ ಜೈಲು, ತಲಾ ₹5,000 ದಂಡ
    Next Article ಬಿಜೆಪಿ ಹಿರಿಯ ನಾಯಕ ಎಲ್‌ಕೆ ಅಡ್ವಾಣಿ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಗೆ ದಾಖಲು

    Related Posts

    ಖಾಸಗಿ ಆಸ್ಪತ್ರೆಗಳ ಚಿಕಿತ್ಸಾ ವೆಚ್ಚಕ್ಕೆ ಕಡಿವಾಣ; ಏಕರೂಪದ ದರ ನಿಗದಿಗೆ ಆರೋಗ್ಯ ಇಲಾಖೆ ಸಿದ್ಧತೆ

    October 17, 2026

    ಕೆಪಿಎಸ್‌ಸಿ ನೇಮಕಾತಿ ಹಗರಣಕ್ಕೆ ಬಿಗ್ ಟ್ವಿಸ್ಟ್: ಅಭ್ಯರ್ಥಿಗಳಿಗೆ ಫೈವ್‌ಸ್ಟಾರ್ ಹೋಟೆಲ್​ನಲ್ಲಿ ಪರೀಕ್ಷೆ ಬರೆಸಿದರೇ ಸದಸ್ಯರು?

    October 16, 2026

    ಸ್ಟಿಂಗ್ ಆಪರೇಷನ್ ವಿಡಿಯೋ ಅಪ್‌ಲೋಡ್‌ಗೆಂದೇ ಹೊಸ ಚಾನೆಲ್; ಮಾಸ್ಟರ್‌ಮೈಂಡ್‌ಗಾಗಿ ತನಿಖೆ ಚುರುಕು

    October 16, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಖಾಸಗಿ ಆಸ್ಪತ್ರೆಗಳ ಚಿಕಿತ್ಸಾ ವೆಚ್ಚಕ್ಕೆ ಕಡಿವಾಣ; ಏಕರೂಪದ ದರ ನಿಗದಿಗೆ ಆರೋಗ್ಯ ಇಲಾಖೆ ಸಿದ್ಧತೆ

    October 17, 2026

    ‘ಲೆಹ್ರಾ ದೋ ತಿರಂಗಾ’ ರ‍್ಯಾಲಿಗೂ ಮುನ್ನ ಪೊಲೀಸ್ ಕ್ರಮ; ಸಿಜೆಪಿ ಸಂಸ್ಥಾಪಕನ ಬಂಧನ, ನೇಹಾ ಬೋರಾ ಬಿಡುಗಡೆ

    October 17, 2026

    ಬಿಜೆಪಿ ಹಿರಿಯ ನಾಯಕ ಎಲ್‌ಕೆ ಅಡ್ವಾಣಿ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಗೆ ದಾಖಲು

    October 17, 2026

    ಗೂಗಲ್ ಮ್ಯಾಪ್ ಎಡವಟ್ಟು: ದಟ್ಟ ಕಾಡಿನಲ್ಲಿ ಸಿಲುಕಿದ 9 ಟೆಕ್ಕಿಗಳು; ಬೆಳಗ್ಗೆ ಪೊಲೀಸರಿಂದ ರಕ್ಷಣೆ

    October 17, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಖಾಸಗಿ ಆಸ್ಪತ್ರೆಗಳ ಚಿಕಿತ್ಸಾ ವೆಚ್ಚಕ್ಕೆ ಕಡಿವಾಣ; ಏಕರೂಪದ ದರ ನಿಗದಿಗೆ ಆರೋಗ್ಯ ಇಲಾಖೆ ಸಿದ್ಧತೆ

    October 17, 2026

    ಗೂಗಲ್ ಮ್ಯಾಪ್ ಎಡವಟ್ಟು: ದಟ್ಟ ಕಾಡಿನಲ್ಲಿ ಸಿಲುಕಿದ 9 ಟೆಕ್ಕಿಗಳು; ಬೆಳಗ್ಗೆ ಪೊಲೀಸರಿಂದ ರಕ್ಷಣೆ

    October 17, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.