Close Menu
    What's Hot

    ವೆಲೆನ್ಸಿಯಾ ಚರ್ಚ್ ಪಾದ್ರಿಯ ವಿರುದ್ಧ ಪೋಕ್ಸೊ ಪ್ರಕರಣ : ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

    October 18, 2026

    ಕೋಲ್ಕತ್ತಾ ದುರ್ಗಾ ಪೂಜಾ ಸಂಭ್ರಮದಲ್ಲಿ ಕಾಲ್ತುಳಿತ: 19 ಸಾವು, ಘಟನೆಗೆ ಉನ್ನತ ಮಟ್ಟದ ತನಿಖೆಗೆ ಸಿಎಂ ಆದೇಶ

    October 18, 2026

    ಕೊಳತ್ತಮಜಲು ರಹ್ಮಾನ್ ಕೊಲೆ ಪ್ರಕರಣ : ಜಾಮೀನು ಪ್ರಶ್ನಿಸಿ ಸರ್ಕಾರದ ಅರ್ಜಿ, ಹೈಕೋರ್ಟ್‌ನಿಂದ ತಡೆ

    October 18, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ರಾಷ್ಟ್ರೀಯ»ಕೋಲ್ಕತ್ತಾ ದುರ್ಗಾ ಪೂಜಾ ಸಂಭ್ರಮದಲ್ಲಿ ಕಾಲ್ತುಳಿತ: 19 ಸಾವು, ಘಟನೆಗೆ ಉನ್ನತ ಮಟ್ಟದ ತನಿಖೆಗೆ ಸಿಎಂ ಆದೇಶ
    ರಾಷ್ಟ್ರೀಯ

    ಕೋಲ್ಕತ್ತಾ ದುರ್ಗಾ ಪೂಜಾ ಸಂಭ್ರಮದಲ್ಲಿ ಕಾಲ್ತುಳಿತ: 19 ಸಾವು, ಘಟನೆಗೆ ಉನ್ನತ ಮಟ್ಟದ ತನಿಖೆಗೆ ಸಿಎಂ ಆದೇಶ

    adminBy adminOctober 18, 2026No Comments2 Mins Read

    ಕೋಲ್ಕತ್ತಾ: ಉತ್ತರ ಕೋಲ್ಕತ್ತಾದ ಚೋರ್‌ಬಗಾನ್‌ನ ದುರ್ಗಾ ಪೂಜಾ ಪೆಂಡಾಲ್‌ನಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ  ಮೃತಪಟ್ಟವರ ಸಂಖ್ಯೆ 19ಕ್ಕೆ ಏರಿಕೆಯಾಗಿದೆ ಎಂದು ಬಂಗಾಳ ಸಿಎಂ ಸುವೇಂದು ಅಧಿಕಾರಿ ಭಾನುವಾರ ತಿಳಿಸಿದ್ದಾರೆ. ಈ ಘಟನೆಯಲ್ಲಿ ಇನ್ನೂ 25 ಮಂದಿ ಗಾಯಗೊಂಡಿದ್ದಾರೆ.

    ಇನ್ನೂ ತಡರಾತ್ರಿ ಘಟನಾ ಸ್ಥಳಕ್ಕೆ ಹಾಗೂ ಕೋಲ್ಕತ್ತಾ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿದ ಸಿಎಂ, ಸಂತ್ರಸ್ತರಿಗೆ ಅಗತ್ಯ ನೆರವು ನೀಡುವುದಾಗಿ ಭರವಸೆ ನೀಡಿದರು.

    ಇದೇ ವೇಳೆ ಮೃತರ ಕುಟುಂಬಗಳಿಗೆ ತಲಾ 25 ಲಕ್ಷ ರೂಪಾಯಿ ಪರಿಹಾರ ಮತ್ತು ‘ಗ್ರೂಪ್ ಡಿ’  ಶ್ರೇಣಿಯ ಸರ್ಕಾರಿ ಉದ್ಯೋಗ ನೀಡುವುದಾಗಿ ಅವರು ಘೋಷಿಸಿದರು. ಇದರೊಂದಿಗೆ ಗಾಯಗೊಂಡವರ ಚಿಕಿತ್ಸೆಯ ಸಂಪೂರ್ಣ ವೆಚ್ಚವನ್ನ ಸರ್ಕಾರವೇ ಭರಿಸಲಿದೆ. ಜೊತೆಗೆ ತಲಾ 5 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿಯೂ ಘೋಷಿಸಿದರು.

    ಅಮಿತ್‌ ಶಾ ಕಾರ್ಯಕ್ರಮ ರದ್ದು
    ನಂತರ ಮಾತನಾಡಿ, ಇದು ಅತ್ಯಂತ ದುರದೃಷ್ಟಕರ ಘಟನೆ. 19 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಅವರಲ್ಲಿ 17 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. 25 ಮಂದಿ ಗಾಯಗೊಂಡಿದ್ದು, ಅವರಲ್ಲಿ 24 ಮಂದಿ ಅಪಾಯದಿಂದ ಪಾರಾಗಿದ್ದಾರೆ. ಒಬ್ಬರ ಸ್ಥಿತಿ ಗಂಭೀರವಾಗಿದೆ. ಸರ್ಕಾರ ಎಲ್ಲ ರೀತಿಯ ಪ್ರಯತ್ನ ಮಾಡುತ್ತಿದೆ. ಸಂತ್ರಸ್ತ ಕುಟುಂಬಗಳ 13 ಸದಸ್ಯರು ನನ್ನನ್ನು ಭೇಟಿಯಾಗಿ, ಸರ್ಕಾರದ ಮೇಲೆ ತಮಗಿರುವ ನಂಬಿಕೆ ವ್ಯಕ್ತಪಡಿಸಿದ್ದಾರೆ. ಕೇಂದ್ರ ಗೃಹ ಸಚಿವರ ನಿಗದಿತ ಕಾರ್ಯಕ್ರಮಗಳನ್ನ ರದ್ದುಗೊಳಿಸಲಾಗಿದೆ. ನಾವು ಸಂತ್ರಸ್ತ ಕುಟುಂಬಗಳೊಂದಿಗೆ ಇದ್ದೇವೆ ಎಂದು ಹೇಳಿದರು.

    ಉನ್ನತ ಮಟ್ಟದ ತನಿಖೆಗೆ ಆಗ್ರಹ
    ಇನ್ನೂ ಈ ಘಟನೆ ಬಗ್ಗೆ ಕೂಲಂಕಷವಾಗಿ ತನಿಖೆ ನಡೆಸಲು ‘ವಾಸ್ತವಾಂಶ ಪರಿಶೀಲನಾ ಸಮಿತಿ’ಯನ್ನು  ರಚಿಸುವಂತೆ ಕೋರಿ, ಕೋಲ್ಕತ್ತಾ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಗಳಿಗೆ ಪತ್ರ ಬರೆಯುವುದಾಗಿ ಮುಖ್ಯಮಂತ್ರಿ ತಿಳಿಸಿದರು. ಈ ಸಮಿತಿಯಲ್ಲಿ ವಿಧಿವಿಜ್ಞಾನ ತಂಡಗಳು  ಮತ್ತು ವಿಶೇಷ ಕಾರ್ಯಪಡೆ (STF) ಸದಸ್ಯರು ಇರಲಿದ್ದಾರೆ.

    ಇದರೊಂದಿಗೆ, ರಾಜ್ಯದ ಪ್ರಮುಖ ದುರ್ಗಾ ಪೂಜಾ ಪೆಂಡಾಲ್‌ಗಳಲ್ಲಿನ ಸುರಕ್ಷತಾ ವ್ಯವಸ್ಥೆಗಳನ್ನು ಪರಿಶೀಲಿಸಲು ಸುವೇಂದು ಅಧಿಕಾರಿ ಉನ್ನತ ಮಟ್ಟದ ಸಮಿತಿಯೊಂದನ್ನ ರಚಿಸಿದ್ದಾರೆ. ವಿಪತ್ತು ನಿರ್ವಹಣಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಾಜೇಶ್ ಸಿನ್ಹಾ, ಅಗ್ನಿಶಾಮಕ ಸೇವೆಗಳ ಮಹಾನಿರ್ದೇಶಕ ಅನುಜ್ ಶರ್ಮಾ ಮತ್ತು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಕಾನೂನು ಮತ್ತು ಸುವ್ಯವಸ್ಥೆ) ಜಾವೇದ್ ಶಮೀಮ್ ಅವರನ್ನು ಒಳಗೊಂಡ ಈ ಸಮಿತಿಯು, ಪ್ರಮುಖ ಪೂಜಾ ಸ್ಥಳಗಳಲ್ಲಿ ಜನಸಂದಣಿ ನಿರ್ವಹಣೆ, ನಿರ್ಗಮನ ಮಾರ್ಗಗಳು ಮತ್ತು ರಚನಾತ್ಮಕ ಸುರಕ್ಷತೆಯ ಬಗ್ಗೆ ಪರಿಶೀಲನೆ ನಡೆಸಲಿದೆ ಎಂದು ವಿವರಿಸಿದರು.




    #national
    Previous Articleಕೊಳತ್ತಮಜಲು ರಹ್ಮಾನ್ ಕೊಲೆ ಪ್ರಕರಣ : ಜಾಮೀನು ಪ್ರಶ್ನಿಸಿ ಸರ್ಕಾರದ ಅರ್ಜಿ, ಹೈಕೋರ್ಟ್‌ನಿಂದ ತಡೆ
    Next Article ವೆಲೆನ್ಸಿಯಾ ಚರ್ಚ್ ಪಾದ್ರಿಯ ವಿರುದ್ಧ ಪೋಕ್ಸೊ ಪ್ರಕರಣ : ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

    Related Posts

    ಅಜಯ್ ದೇವಗನ್ ಬಂಗಲೆಯಲ್ಲಿ ಅಕ್ರಮ ನಿರ್ಮಾಣ ಆರೋಪ : ಬಿಎಂಸಿ ಬುಲ್ಡೋಜರ್ ಕಾರ್ಯಾಚರಣೆ‌ಗೆ ಸಿದ್ಧತೆ

    October 17, 2026

    ‘ಲೆಹ್ರಾ ದೋ ತಿರಂಗಾ’ ರ‍್ಯಾಲಿಗೂ ಮುನ್ನ ಪೊಲೀಸ್ ಕ್ರಮ; ಸಿಜೆಪಿ ಸಂಸ್ಥಾಪಕನ ಬಂಧನ, ನೇಹಾ ಬೋರಾ ಬಿಡುಗಡೆ

    October 17, 2026

    ಬಿಜೆಪಿ ಹಿರಿಯ ನಾಯಕ ಎಲ್‌ಕೆ ಅಡ್ವಾಣಿ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಗೆ ದಾಖಲು

    October 17, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ವೆಲೆನ್ಸಿಯಾ ಚರ್ಚ್ ಪಾದ್ರಿಯ ವಿರುದ್ಧ ಪೋಕ್ಸೊ ಪ್ರಕರಣ : ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

    October 18, 2026

    ಕೋಲ್ಕತ್ತಾ ದುರ್ಗಾ ಪೂಜಾ ಸಂಭ್ರಮದಲ್ಲಿ ಕಾಲ್ತುಳಿತ: 19 ಸಾವು, ಘಟನೆಗೆ ಉನ್ನತ ಮಟ್ಟದ ತನಿಖೆಗೆ ಸಿಎಂ ಆದೇಶ

    October 18, 2026

    ಕೊಳತ್ತಮಜಲು ರಹ್ಮಾನ್ ಕೊಲೆ ಪ್ರಕರಣ : ಜಾಮೀನು ಪ್ರಶ್ನಿಸಿ ಸರ್ಕಾರದ ಅರ್ಜಿ, ಹೈಕೋರ್ಟ್‌ನಿಂದ ತಡೆ

    October 18, 2026

    ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷ ಸ್ಥಾನಕ್ಕೆ ಸೌಮ್ಯಾ ರೆಡ್ಡಿ ರಾಜೀನಾಮೆ

    October 17, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷ ಸ್ಥಾನಕ್ಕೆ ಸೌಮ್ಯಾ ರೆಡ್ಡಿ ರಾಜೀನಾಮೆ

    October 17, 2026

    ರಾಜ್ಯಾದ್ಯಂತ ಸ್ವೀಟ್ ಅಂಗಡಿಗಳ ತಪಾಸಣೆ ಚುರುಕು: 145 ಮಾದರಿ ಸಂಗ್ರಹ, 15 ಘಟಕಗಳಿಗೆ ನೋಟಿಸ್

    October 17, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.