Close Menu
    What's Hot

    ಎಸ್‌ಬಿಐ ಗ್ರಾಹಕರಿಗೆ ಶಾಕ್ : ಡಾರ್ಕ್ ವೆಬ್‌ನಲ್ಲಿ ಸಾವಿರಾರು ಗ್ರಾಹಕರ ವೈಯಕ್ತಿಕ ಮಾಹಿತಿ ಸೋರಿಕೆ

    October 21, 2026

    “ಅವರೇ ಪಾಕಿಸ್ತಾನದ ಜೊತೆ ನಂಟು ಬೆಳೆಸುತ್ತಿದ್ದಾರೆ” : ಆರ್‌ಎಸ್‌ಎಸ್‌ ವಿರುದ್ಧ ಪ್ರಿಯಾಂಕ್ ಖರ್ಗೆ ವಿವಾದಾತ್ಮಕ ಹೇಳಿಕೆ

    October 21, 2026

    ದೆಹಲಿಯ ದಸರಾ ಆಚರಣೆಯಲ್ಲಿ ಹೊಸ ವಿವಾದ : ರಾವಣನ ಜೊತೆ ಜಿರಳೆ ಪ್ರತಿಕೃತಿ ದಹನಕ್ಕೆ ಆಕ್ಷೇಪ

    October 21, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಕರ್ನಾಟಕ»“ಅವರೇ ಪಾಕಿಸ್ತಾನದ ಜೊತೆ ನಂಟು ಬೆಳೆಸುತ್ತಿದ್ದಾರೆ” : ಆರ್‌ಎಸ್‌ಎಸ್‌ ವಿರುದ್ಧ ಪ್ರಿಯಾಂಕ್ ಖರ್ಗೆ ವಿವಾದಾತ್ಮಕ ಹೇಳಿಕೆ
    ಕರ್ನಾಟಕ

    “ಅವರೇ ಪಾಕಿಸ್ತಾನದ ಜೊತೆ ನಂಟು ಬೆಳೆಸುತ್ತಿದ್ದಾರೆ” : ಆರ್‌ಎಸ್‌ಎಸ್‌ ವಿರುದ್ಧ ಪ್ರಿಯಾಂಕ್ ಖರ್ಗೆ ವಿವಾದಾತ್ಮಕ ಹೇಳಿಕೆ

    adminBy adminOctober 21, 2026No Comments1 Min Read

    ಆರ್‌ಎಸ್‌ಎಸ್‌ ಪಥಸಂಚಲನಕ್ಕೆ ಅನುಮತಿ ಪಡೆಯುವ ವಿಚಾರವಾಗಿ ಆರಂಭವಾಗಿರುವ ಚರ್ಚೆ ಇದೀಗ ಮತ್ತೊಂದು ಹಂತಕ್ಕೆ ತಲುಪಿದೆ. ಪೊಲೀಸ್ ಇಲಾಖೆ ಆರ್‌ಎಸ್‌ಎಸ್‌ನ ಮನೆ ಆಳೇ ಎಂದು ಪ್ರಶ್ನಿಸಿರುವ ಗೃಹ ಸಚಿವ ಪ್ರಿಯಾಂಕ್ ಖರ್ಗೆ, ‘‘ಅವರೇ’’ ಪಾಕಿಸ್ತಾನದ ಜೊತೆ ನಂಟು ಬೆಳೆಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಆರ್‌ಎಸ್‌ಎಸ್‌ ಪಥಸಂಚಲನಕ್ಕೆ ಅನುಮತಿ ಪಡೆಯುವ ಬದಲು ಪೊಲೀಸರಿಗೆ ಕೇವಲ ಮಾಹಿತಿ ನೀಡಿರುವ ಪತ್ರದ ವಿಚಾರವಾಗಿ ಪ್ರತಿಕ್ರಿಯಿಸಿದ ಪ್ರಿಯಾಂಕ್ ಖರ್ಗೆ, “ಅದರಲ್ಲಿ ಮಾಹಿತಿ ನೀಡಲು ಎಂದು ಬರೆದಿದ್ದಾರೆಯೇ ಹೊರತು, ಅನುಮತಿಗಾಗಿ ಎಂದು ಬರೆದಿಲ್ಲ. ಅನುಮತಿ ಕೇಳಲಿ. ಪೊಲೀಸ್ ಇಲಾಖೆ ಅವರ ಮನೆ ಆಳೇನ್ರಿ?” ಎಂದು ಪ್ರಶ್ನಿಸಿದ್ದಾರೆ.

    ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಅವರ ಹೇಳಿಕೆಗಳ ಬಗ್ಗೆಯೂ ಆಕ್ಷೇಪ ವ್ಯಕ್ತಪಡಿಸಿದ ಪ್ರಿಯಾಂಕ್ ಖರ್ಗೆ, ಆಡಳಿತ ವ್ಯವಸ್ಥೆಯನ್ನು ಬದಲಿಸುವ (ರಿಜೀಮ್ ಚೇಂಜ್) ಹಾಗೂ ರಾಜಕೀಯದ ಬಗ್ಗೆ ಮಾತನಾಡಲು ಅವರು ಯಾರು ಎಂದು ಪ್ರಶ್ನಿಸಿದ್ದಾರೆ. ಫಾರ್ಮ್ 6 ಮತ್ತು 7ರ ವಿಚಾರವನ್ನು ಪ್ರಸ್ತಾಪಿಸಿದ ಅವರು, ಶಾಶ್ವತವಾಗಿ ಅಧಿಕಾರದಲ್ಲಿ ಉಳಿಯುವ ಸಂಚು ನಡೆಯುತ್ತಿದೆ ಎಂದು ಆರೋಪಿಸಿದ್ದಾರೆ. ಇದೇ ಕಾರಣಕ್ಕೆ ಕೆಲವರು ಆತ್ಮವಿಶ್ವಾಸದಿಂದ ನಡೆದುಕೊಳ್ಳುತ್ತಿದ್ದಾರೆ ಎಂದೂ ಹೇಳಿದ್ದಾರೆ.

    ‘ಯಾವ ದುಷ್ಟ ಶಕ್ತಿ ರೀ? ‘‘ಅವರೇ’’ ಪಾಕಿಸ್ತಾನದ ಜೊತೆ ನಂಟು ಬೆಳೆಸುತ್ತಿರುವುದು?” ಎಂದ ಸಚಿವರು, ಆರ್‌ಎಸ್‌ಎಸ್‌ನ ಇತಿಹಾಸವನ್ನು ಪರಿಶೀಲಿಸುವಂತೆ ಹೇಳಿದ್ದಾರೆ. ಈ ಹಿಂದೆ ಅವರು ಯಾವ ಪ್ರತಿಭಟನೆಗಳನ್ನು ನಡೆಸಿದ್ದಾರೆ ಎಂಬುದನ್ನೂ ಪ್ರಶ್ನಿಸಿದ್ದಾರೆ.

    ವಿದೇಶಗಳ ಪ್ರತಿಭಟನೆ, ಭಾರತದ ಪ್ರತಿಭಟನೆ ಹೋಲಿಕೆ ಸಲ್ಲ: ಖರ್ಗೆ

    ವಿದೇಶಗಳಲ್ಲಿ ನಡೆಯುತ್ತಿರುವ ಪ್ರತಿಭಟನೆಗಳ ಉದಾಹರಣೆಗಳನ್ನು ಇಲ್ಲಿನ ಪರಿಸ್ಥಿತಿಗೆ ಹೋಲಿಸಬಾರದು ಎಂದು ಹೇಳಿದ ಪ್ರಿಯಾಂಕ್ ಖರ್ಗೆ, ಫ್ರಾನ್ಸ್‌ನಲ್ಲಿ ಬೆಲೆ ಏರಿಕೆ ಮತ್ತು ಶಿಕ್ಷಣದ ವಿಚಾರವಾಗಿ ಪ್ರತಿಭಟನೆಗಳು ನಡೆಯುತ್ತಿದ್ದರೆ, ಇಲ್ಲಿ ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ ನಡೆಯುತ್ತಿದೆ ಎಂದು ಹೇಳಿದ್ದಾರೆ.ವಿಜಯದಶಮಿ ಹಿನ್ನೆಲೆಯಲ್ಲಿ ಆರ್‌ಎಸ್‌ಎಸ್‌ ಪಥಸಂಚಲನಕ್ಕೆ ಸಂಬಂಧಿಸಿದಂತೆ ಪ್ರಿಯಾಂಕ್ ಖರ್ಗೆ ಅವರು ಅಕ್ಟೋಬರ್ 20ರಂದು ಪ್ರತಿಕ್ರಿಯೆ ನೀಡಿದ್ದರು. ಪಥಸಂಚಲನ ನಡೆಸುವ ಸಂಘಟನೆಗಳು ನಿಗದಿತ ಅರ್ಜಿ ಸಲ್ಲಿಸಿ, ಸಂಬಂಧಪಟ್ಟ ಅಧಿಕಾರಿಗಳಿಂದ ಅಧಿಕೃತ ಅನುಮತಿ ಪಡೆಯಬೇಕು ಎಂದು ಅವರು ಹೇಳಿದ್ದರು.

     




    #karnataka
    Previous Articleದೆಹಲಿಯ ದಸರಾ ಆಚರಣೆಯಲ್ಲಿ ಹೊಸ ವಿವಾದ : ರಾವಣನ ಜೊತೆ ಜಿರಳೆ ಪ್ರತಿಕೃತಿ ದಹನಕ್ಕೆ ಆಕ್ಷೇಪ
    Next Article ಎಸ್‌ಬಿಐ ಗ್ರಾಹಕರಿಗೆ ಶಾಕ್ : ಡಾರ್ಕ್ ವೆಬ್‌ನಲ್ಲಿ ಸಾವಿರಾರು ಗ್ರಾಹಕರ ವೈಯಕ್ತಿಕ ಮಾಹಿತಿ ಸೋರಿಕೆ

    Related Posts

    ಬೀಡಿ ಹಚ್ಚಲು ಕಡ್ಡಿ ಗೀರಿದಾಗ ಸಿಲಿಂಡರ್ ಸ್ಫೋಟ; 6 ಜನ ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ

    October 19, 2026

    ಟ್ರಾಲಿ ಬ್ಯಾಗ್‌ಗಳಲ್ಲಿ ನಕಲಿ ಸಿಗರೇಟ್ ಸಾಗಾಟ : ಸಿಸಿಬಿ ಪೊಲೀಸರಿಂದ ಇಬ್ಬರ ಬಂಧನ

    October 19, 2026

    ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆ ; ಜನಸಾಮಾನ್ಯರಿಗೆ ನೆರವಾಗುವ ಕ್ರಮ ಎಂದ ಸಚಿವ ಖಾದರ್

    October 19, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಎಸ್‌ಬಿಐ ಗ್ರಾಹಕರಿಗೆ ಶಾಕ್ : ಡಾರ್ಕ್ ವೆಬ್‌ನಲ್ಲಿ ಸಾವಿರಾರು ಗ್ರಾಹಕರ ವೈಯಕ್ತಿಕ ಮಾಹಿತಿ ಸೋರಿಕೆ

    October 21, 2026

    “ಅವರೇ ಪಾಕಿಸ್ತಾನದ ಜೊತೆ ನಂಟು ಬೆಳೆಸುತ್ತಿದ್ದಾರೆ” : ಆರ್‌ಎಸ್‌ಎಸ್‌ ವಿರುದ್ಧ ಪ್ರಿಯಾಂಕ್ ಖರ್ಗೆ ವಿವಾದಾತ್ಮಕ ಹೇಳಿಕೆ

    October 21, 2026

    ದೆಹಲಿಯ ದಸರಾ ಆಚರಣೆಯಲ್ಲಿ ಹೊಸ ವಿವಾದ : ರಾವಣನ ಜೊತೆ ಜಿರಳೆ ಪ್ರತಿಕೃತಿ ದಹನಕ್ಕೆ ಆಕ್ಷೇಪ

    October 21, 2026

    ಫೇಸ್‌ಬುಕ್ ಜಾಹೀರಾತು ನಂಬಿ ಎಪಿಕೆ ಫೈಲ್ ಡೌನ್‌ಲೋಡ್ : ವ್ಯಕ್ತಿಯ ಬ್ಯಾಂಕ್ ಖಾತೆಯಿಂದ ₹1.78 ಲಕ್ಷ ಮಾಯ

    October 21, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    “ಅವರೇ ಪಾಕಿಸ್ತಾನದ ಜೊತೆ ನಂಟು ಬೆಳೆಸುತ್ತಿದ್ದಾರೆ” : ಆರ್‌ಎಸ್‌ಎಸ್‌ ವಿರುದ್ಧ ಪ್ರಿಯಾಂಕ್ ಖರ್ಗೆ ವಿವಾದಾತ್ಮಕ ಹೇಳಿಕೆ

    October 21, 2026

    ಬೀಡಿ ಹಚ್ಚಲು ಕಡ್ಡಿ ಗೀರಿದಾಗ ಸಿಲಿಂಡರ್ ಸ್ಫೋಟ; 6 ಜನ ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ

    October 19, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.