Close Menu
    What's Hot

    ಮಂಗಳೂರು: ಪಣಂಬೂರು ಬೀಚ್ ಸಮೀಪದ ರೆಸ್ಟೋರೆಂಟ್ ಮೇಲೆ ಪೊಲೀಸರ ದಾಳಿ; ಇಬ್ಬರು ಬಾಂಗ್ಲಾದೇಶ ಪ್ರಜೆಗಳು ವಶಕ್ಕೆ

    November 14, 2026

    ಉಡುಪಿ: ತಾಯಿಯ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಲು ಅಂಡರ್‌ವರ್ಲ್ಡ್ ಡಾನ್ ರವಿ ಪೂಜಾರಿಗೆ ನ್ಯಾಯಾಲಯದ ಅನುಮತಿ; ಪೊಲೀಸ್ ಭದ್ರತೆಯಲ್ಲಿ ಉಡುಪಿಗೆ ಪ್ರಯಾಣ

    November 14, 2026

    ಮಂಗಳೂರು: ಕೋಟಿ ರೂಪಾಯಿ ದರೋಡೆ ಪ್ರಕರಣದಲ್ಲಿ ಖಾಕಿ ಕೈವಾಡ; ಕಾರವಾರ ಪೊಲೀಸ್ ಕಾನ್‌ಸ್ಟೇಬಲ್ ಉರ್ವ ಪೊಲೀಸರ ವಶಕ್ಕೆ

    November 14, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಅಪರಾಧ»ಆರೆಸ್ಸೆಸ್ ಹಿರಿಯ ಕಾರ್ಯಕರ್ತ ಗುರುದಾಸ್ ಶೆಣೈ ಬಳಿಕ ಪ್ರದೀಪ್ ಕಾಂಚನ್ ಕೂಡ ಸಾವು; ಕೋಟ ಅಪಘಾತದಲ್ಲಿ ಮೃತರ ಸಂಖ್ಯೆ 2ಕ್ಕೆ ಏರಿಕೆ
    ಅಪರಾಧ

    ಆರೆಸ್ಸೆಸ್ ಹಿರಿಯ ಕಾರ್ಯಕರ್ತ ಗುರುದಾಸ್ ಶೆಣೈ ಬಳಿಕ ಪ್ರದೀಪ್ ಕಾಂಚನ್ ಕೂಡ ಸಾವು; ಕೋಟ ಅಪಘಾತದಲ್ಲಿ ಮೃತರ ಸಂಖ್ಯೆ 2ಕ್ಕೆ ಏರಿಕೆ

    adminBy adminOctober 29, 2026No Comments1 Min Read

    ಕೋಟ : ಉಡುಪಿ ಜಿಲ್ಲೆಯ ಕೋಟ ಅಮೃತೇಶ್ವರೀ ಸರ್ಕಲ್ ಬಳಿ ಅಕ್ಟೋಬರ್ 26ರ ಸೋಮವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಕಾರು ಚಾಲಕ, ಯುವ ಕ್ರಿಕೆಟ್ ಆಟಗಾರ ಪ್ರದೀಪ್ ಕಾಂಚನ್ (28) ಅವರು ಚಿಕಿತ್ಸೆ ಫಲಕಾರಿಯಾಗದೇ ಅಕ್ಟೋಬರ್ 27ರ ಮಂಗಳವಾರ ಮೃತಪಟ್ಟಿದ್ದಾರೆ.

    ಈ ಅಪಘಾತದಲ್ಲಿ ಈಗಾಗಲೇ ಆರೆಸ್ಸೆಸ್ ಹಿರಿಯ ಕಾರ್ಯಕರ್ತ ಗುರುದಾಸ್ ಶೆಣೈ ಮೃತಪಟ್ಟಿದ್ದು, ಇದೀಗ ಕಾರು ಚಾಲಕ ಪ್ರದೀಪ್ ಕೂಡ ಮೃತಪಡುವುದರೊಂದಿಗೆ ದುರಂತದಲ್ಲಿ ಮೃತರ ಸಂಖ್ಯೆ 2ಕ್ಕೆ ಏರಿಕೆಯಾಗಿದೆ.
    ಕೋಟೇಶ್ವರ ನಿವಾಸಿಯಾದ 28 ವರ್ಷದ ಪ್ರದೀಪ್ ಕಾಂಚನ್ ಅವರು ಅಪಘಾತದ ಬಳಿಕ ತೀವ್ರ ಗಾಯಗೊಂಡು ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಅವರು ಕೊನೆಯುಸಿರೆಳೆದಿದ್ದಾರೆ. ಅವಿವಾಹಿತರಾಗಿದ್ದ ಪ್ರದೀಪ್ ಅವರು ತಂದೆ ಹಾಗೂ ತಾಯಿಯನ್ನು ಅಗಲಿದ್ದಾರೆ.

    ಪ್ರದೀಪ್ ಕಾಂಚನ್ ಅವರು ಉತ್ತಮ ಕ್ರಿಕೆಟ್ ಆಟಗಾರರಾಗಿದ್ದು, ಕೋಟೇಶ್ವರ ಮತ್ತು ಕುಂದಾಪುರ ಭಾಗದ ಪ್ರಮುಖ ಕ್ರಿಕೆಟ್ ತಂಡಗಳ ಪರವಾಗಿ ಹಲವು ರಾಜ್ಯಮಟ್ಟದ ಪಂದ್ಯಾವಳಿಗಳಲ್ಲಿ ಆಡಿ ಉದಯೋನ್ಮುಖ ಆಟಗಾರರಾಗಿ ಗುರುತಿಸಿಕೊಂಡಿದ್ದರು. ಅಲ್ಲದೆ ಸ್ಥಳೀಯ ಸಂಘ-ಸಂಸ್ಥೆಗಳಲ್ಲೂ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ಅಪಘಾತ ಸಂಭವಿಸುವ ಹಿಂದಿನ ದಿನ ರಾತ್ರಿ ಕೋಟೇಶ್ವರದಲ್ಲಿ ನಡೆದಿದ್ದ ಕ್ರಿಕೆಟ್ ಪಂದ್ಯಾವಳಿಯಲ್ಲೂ ಪ್ರದೀಪ್ ಭಾಗವಹಿಸಿದ್ದರು. ಪಂದ್ಯ ಮುಗಿದ ಬಳಿಕ ಸ್ನೇಹಿತನೊಬ್ಬನನ್ನು ಆತನ ಮನೆಗೆ ಬಿಟ್ಟು ವಾಪಸ್ ಮನೆಗೆ ಮರಳುತ್ತಿದ್ದ ವೇಳೆ ಈ ದುರಂತ ಸಂಭವಿಸಿರಬಹುದು ಎಂದು ಅವರ ಸ್ನೇಹಿತರು ಕಂಬನಿ ಮಿಡಿದಿದ್ದಾರೆ.

    ಸೋಮವಾರ ಬೆಳ್ಳಂಬೆಳಗ್ಗೆ ಸೈಕಲ್‌ನಲ್ಲಿ ರಸ್ತೆ ದಾಟುತ್ತಿದ್ದ ಆರೆಸ್ಸೆಸ್‌ ಹಿರಿಯ ಕಾರ್ಯಕರ್ತ ಗುರುದಾಸ್ ಶೆಣೈ ಅವರಿಗೆ ಪ್ರದೀಪ್ ಚಲಾಯಿಸುತ್ತಿದ್ದ ಕಾರು ಢಿಕ್ಕಿಯಾಗಿತ್ತು. ಢಿಕ್ಕಿಯ ರಭಸಕ್ಕೆ ಕಾರು ರಸ್ತೆಯ ತಡೆಬೇಲಿಗೂ (Guardrail) ಜೋರಾಗಿ ಅಪ್ಪಳಿಸಿತ್ತು. ಘಟನೆಯಲ್ಲಿ ತೀವ್ರ ಗಾಯಗೊಂಡಿದ್ದ ಗುರುದಾಸ್ ಶೆಣೈ ಅವರನ್ನು ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯೆಯೇ ಅವರು ಮೃತಪಟ್ಟಿದ್ದರು. ಇದೀಗ ಚಿಕಿತ್ಸೆಯಲ್ಲಿದ್ದ ಪ್ರದೀಪ್ ಕೂಡ ಮೃತಪಟ್ಟಿದ್ದಾರೆ. ಘಟನೆ ಕುರಿತು ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




    #crime #udupi
    Previous Articleಉಳ್ಳಾಲ: 9ನೇ ತರಗತಿ ಬಾಲಕಿ ಅಪಹರಣ ಪ್ರಕರಣ; ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲು,ಆರೋಪಿ ಅರೆಸ್ಟ್
    Next Article ಮಂಗಳೂರು: ಆನ್‌ಲೈನ್ ಸಾಲದ ಕಿರುಕುಳಕ್ಕೆ ಮಹಿಳೆ ಕಂಗಾಲು; ಸಾಲ ತೀರಿಸಿದರೂ ಫೋಟೋ ಮಾರ್ಫ್ ಬೆದರಿಕೆ, ಲಕ್ಷಾಂತರ ರೂ. ವಸೂಲಿ

    Related Posts

    ಮಂಗಳೂರು: ಪಣಂಬೂರು ಬೀಚ್ ಸಮೀಪದ ರೆಸ್ಟೋರೆಂಟ್ ಮೇಲೆ ಪೊಲೀಸರ ದಾಳಿ; ಇಬ್ಬರು ಬಾಂಗ್ಲಾದೇಶ ಪ್ರಜೆಗಳು ವಶಕ್ಕೆ

    November 14, 2026

    ಉಡುಪಿ: ತಾಯಿಯ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಲು ಅಂಡರ್‌ವರ್ಲ್ಡ್ ಡಾನ್ ರವಿ ಪೂಜಾರಿಗೆ ನ್ಯಾಯಾಲಯದ ಅನುಮತಿ; ಪೊಲೀಸ್ ಭದ್ರತೆಯಲ್ಲಿ ಉಡುಪಿಗೆ ಪ್ರಯಾಣ

    November 14, 2026

    ಮಂಗಳೂರು: ಕೋಟಿ ರೂಪಾಯಿ ದರೋಡೆ ಪ್ರಕರಣದಲ್ಲಿ ಖಾಕಿ ಕೈವಾಡ; ಕಾರವಾರ ಪೊಲೀಸ್ ಕಾನ್‌ಸ್ಟೇಬಲ್ ಉರ್ವ ಪೊಲೀಸರ ವಶಕ್ಕೆ

    November 14, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಮಂಗಳೂರು: ಪಣಂಬೂರು ಬೀಚ್ ಸಮೀಪದ ರೆಸ್ಟೋರೆಂಟ್ ಮೇಲೆ ಪೊಲೀಸರ ದಾಳಿ; ಇಬ್ಬರು ಬಾಂಗ್ಲಾದೇಶ ಪ್ರಜೆಗಳು ವಶಕ್ಕೆ

    November 14, 2026

    ಉಡುಪಿ: ತಾಯಿಯ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಲು ಅಂಡರ್‌ವರ್ಲ್ಡ್ ಡಾನ್ ರವಿ ಪೂಜಾರಿಗೆ ನ್ಯಾಯಾಲಯದ ಅನುಮತಿ; ಪೊಲೀಸ್ ಭದ್ರತೆಯಲ್ಲಿ ಉಡುಪಿಗೆ ಪ್ರಯಾಣ

    November 14, 2026

    ಮಂಗಳೂರು: ಕೋಟಿ ರೂಪಾಯಿ ದರೋಡೆ ಪ್ರಕರಣದಲ್ಲಿ ಖಾಕಿ ಕೈವಾಡ; ಕಾರವಾರ ಪೊಲೀಸ್ ಕಾನ್‌ಸ್ಟೇಬಲ್ ಉರ್ವ ಪೊಲೀಸರ ವಶಕ್ಕೆ

    November 14, 2026

    ಮಡಿಕೇರಿ: ಹಾರಂಗಿ ಹಿನ್ನೀರಿನಲ್ಲಿ ಪ್ರವಾಸಿಗರ ಬೋಟ್ ಪಲ್ಟಿ; ಇಬ್ಬರು ಮಕ್ಕಳು ಪಾರು, ದಂಪತಿ ಸಾವು

    November 14, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಮಂಗಳೂರು: ಕೋಟಿ ರೂಪಾಯಿ ದರೋಡೆ ಪ್ರಕರಣದಲ್ಲಿ ಖಾಕಿ ಕೈವಾಡ; ಕಾರವಾರ ಪೊಲೀಸ್ ಕಾನ್‌ಸ್ಟೇಬಲ್ ಉರ್ವ ಪೊಲೀಸರ ವಶಕ್ಕೆ

    November 14, 2026

    ಮಡಿಕೇರಿ: ಹಾರಂಗಿ ಹಿನ್ನೀರಿನಲ್ಲಿ ಪ್ರವಾಸಿಗರ ಬೋಟ್ ಪಲ್ಟಿ; ಇಬ್ಬರು ಮಕ್ಕಳು ಪಾರು, ದಂಪತಿ ಸಾವು

    November 14, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.