Close Menu
    What's Hot

    ಉಪ್ಪಿನಂಗಡಿ: ಆಟೊಗೆ ಹಿಂಬದಿಯಿಂದ ಕಾರು ಡಿಕ್ಕಿ; ಗಂಭೀರ ಗಾಯಗೊಂಡಿದ್ದ ಚಾಲಕ ಸಾವು

    November 14, 2026

    ಮಂಗಳೂರು: ಪಣಂಬೂರು ಬೀಚ್ ಸಮೀಪದ ರೆಸ್ಟೋರೆಂಟ್ ಮೇಲೆ ಪೊಲೀಸರ ದಾಳಿ; ಇಬ್ಬರು ಬಾಂಗ್ಲಾದೇಶ ಪ್ರಜೆಗಳು ವಶಕ್ಕೆ

    November 14, 2026

    ಉಡುಪಿ: ತಾಯಿಯ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಲು ಅಂಡರ್‌ವರ್ಲ್ಡ್ ಡಾನ್ ರವಿ ಪೂಜಾರಿಗೆ ನ್ಯಾಯಾಲಯದ ಅನುಮತಿ; ಪೊಲೀಸ್ ಭದ್ರತೆಯಲ್ಲಿ ಉಡುಪಿಗೆ ಪ್ರಯಾಣ

    November 14, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಅಪರಾಧ»ಮದ್ರಸಾ ಶಿಕ್ಷಕನಿಂದ ವಿದ್ಯಾರ್ಥಿನಿಯೊಂದಿಗೆ ಮದುವೆ; ಮೊದಲ ಮದುವೆ ವಿಚಾರ ಮರೆಮಾಚಿ ಯುವತಿಯನ್ನು ವರಿಸಿದ 40ರ ಧರ್ಮಗುರು
    ಅಪರಾಧ

    ಮದ್ರಸಾ ಶಿಕ್ಷಕನಿಂದ ವಿದ್ಯಾರ್ಥಿನಿಯೊಂದಿಗೆ ಮದುವೆ; ಮೊದಲ ಮದುವೆ ವಿಚಾರ ಮರೆಮಾಚಿ ಯುವತಿಯನ್ನು ವರಿಸಿದ 40ರ ಧರ್ಮಗುರು

    adminBy adminOctober 30, 2026Updated:October 30, 2026No Comments2 Mins Read

    ಮಂಗಳೂರು: ಧಾರ್ಮಿಕ ಪ್ರವಚನ ನೀಡುತ್ತಾ ಸನ್ಮಾರ್ಗದ ಪಾಠ ಹೇಳಿಕೊಡಬೇಕಾದ ಮುಸ್ಲಿಂ ಧರ್ಮಗುರುವೊಬ್ಬ, ತನ್ನಲ್ಲೇ ಶಿಕ್ಷಣ ಪಡೆಯುತ್ತಿದ್ದ ಯುವತಿಯನ್ನು ಪ್ರೀತಿಸಿ, ಮೊದಲ ಮದುವೆಯ ವಿಚಾರ ಮುಚ್ಚಿಟ್ಟು ಎರಡನೇ ಮದುವೆಯಾಗಿರುವ ವಿವಾದಾತ್ಮಕ ಘಟನೆ ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರಿ ಸಂಚಲನ ಮೂಡಿಸಿದೆ.

    ಮದ್ರಸಾ ಪಾಠದ ಹೆಸರಲ್ಲಿ ಪ್ರೇಮ ಪಯಣ: ಪೋಷಕರ ಕಣ್ಣೀರು

    ಉತ್ತರ ಕನ್ನಡ ಜಿಲ್ಲೆಯ ಕುಮಟಾದ ಬೆಟಗುಳಿಯ ದಾವುದ್ ಖಾಸಿಂ ಎಂಬುವರ 22 ವರ್ಷದ ಪುತ್ರಿ ಮಗದುಮ್ಮ ಹಾಗೂ ಮಂಗಳೂರಿನ ಅಸೈಗೋಳಿ ನಿವಾಸಿ, 40 ವರ್ಷದ ಧರ್ಮಗುರು ಅಶ್ರಫ್ ‘ಸ’ ಅದಿ ನಡುವೆ ಈ ಪ್ರೇಮ ಪ್ರಸಂಗ ನಡೆದಿದೆ. ಅಶ್ರಫ್ ಸ ಅದಿ ಹಿಂದೆ ಕುಮಟಾದ ಮದ್ರಸಾದಲ್ಲಿ ಧರ್ಮಗುರುವಾಗಿ ಕೆಲಸ ಮಾಡುತ್ತಿದ್ದಾಗ ಅಲ್ಲಿಗೆ ಧಾರ್ಮಿಕ ಶಿಕ್ಷಣಕ್ಕೆ ಬರುತ್ತಿದ್ದ ಮಗದುಮ್ಮ ಜೊತೆ ಕಳೆದ ಮೂರು ವರ್ಷಗಳಿಂದ ಪ್ರೇಮ ಸಂಪರ್ಕದಲ್ಲಿದ್ದ ಎನ್ನಲಾಗಿದೆ.

    ಬಳಿಕ ಕುಮಟಾ ತೊರೆದು ಮುಂಬೈಗೆ ತೆರಳಿದ್ದ ಈತ, ಇತ್ತೀಚೆಗೆ ಅಕ್ಟೋಬರ್ 22 ರಂದು ಕುಮಟಾಗೆ ವಾಪಸಾಗಿ ಯುವತಿಯನ್ನು ಮಂಗಳೂರಿಗೆ ಕರೆತಂದಿದ್ದಾನೆ. ಅಲ್ಲದೆ, ಆಕೆಯೊಂದಿಗೆ ನಿಖಾ (ಮದುವೆ) ಮಾಡಿಕೊಂಡು ಅಧಿಕೃತವಾಗಿ ನೋಂದಣಿ ಕೂಡ ಮಾಡಿಸಿಕೊಂಡಿದ್ದಾನೆ. ಮಗಳು ಕಾಣೆಯಾದ ಹಿನ್ನೆಲೆಯಲ್ಲಿ ಆಕೆಯ ಪೋಷಕರು ಹುಡುಕಿಕೊಂಡು ಮಂಗಳೂರಿಗೆ ಆಗಮಿಸಿ, ಕೊಣಾಜೆ ಪೊಲೀಸ್ ಠಾಣೆ ಮೆಟ್ಟಿಲೇರಿದ್ದರು.

    ಠಾಣೆಯಲ್ಲೇ ಪೋಷಕರನ್ನು ನಿರಾಕರಿಸಿದ ಯುವತಿ

    ಪ್ರಕರಣ ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆ ಕೊಣಾಜೆ ಪೊಲೀಸರು ಧರ್ಮಗುರು ಹಾಗೂ ಯುವತಿ ಇಬ್ಬರನ್ನೂ ಠಾಣೆಗೆ ಕರೆಸಿ ವಿಚಾರಣೆ ನಡೆಸಿದ್ದಾರೆ. ಈ ವೇಳೆ ಪೋಷಕರು ತಮ್ಮ ಮಗಳ ಮನವೊಲಿಸಲು ಎಷ್ಟೇ ಪ್ರಯತ್ನಿಸಿದರೂ, ಆಕೆ ಪೋಷಕರ ಜೊತೆ ವಾಪಸ್ ಹೋಗಲು ಸಂಪೂರ್ಣವಾಗಿ ನಿರಾಕರಿಸಿದ್ದಾಳೆ. ತಾನು ವಯಸ್ಕಳಾಗಿದ್ದು, ಧರ್ಮಗುರು ಜೊತೆಯೇ ಜೀವಿಸುವುದಾಗಿ ಪೊಲೀಸರ ಮುಂದೆ ಖಡಕ್ ಆಗಿ ಹೇಳಿಕೆ ನೀಡಿದ್ದಾಳೆ. ಕಣ್ಣೆದುರೇ ಮಗಳು ಧರ್ಮಗುರುವಿನ ಜೊತೆ ಹೋಗುವುದನ್ನು ಕಂಡ ಪೋಷಕರು ಠಾಣೆಯ ಆವರಣದಲ್ಲೇ ಕಣ್ಣೀರಿಟ್ಟು ಅಸಹಾಯಕರಾಗಿ ನಿಂತಿದ್ದಾರೆ.

    ಧರ್ಮಗುರುವಿನ ನಡೆಗೆ ಮುಸ್ಲಿಂ ಸಮುದಾಯದ ಆಕ್ರೋಶ

    ಆರೋಪಿ ಅಶ್ರಫ್ ‘ಸ’ ಅದಿಗೆ ಈಗಾಗಲೇ ಮದುವೆಯಾಗಿ ಮಕ್ಕಳಿದ್ದಾರೆ. ಆದರೆ, ಈ ವಿಚಾರವನ್ನು ಮುಚ್ಚಿಟ್ಟು ಯುವತಿಯ ಮೈಂಡ್ ವಾಶ್ ಮಾಡಿ ಮದುವೆಯಾಗಿದ್ದಾನೆ ಎಂಬುದು ಪೋಷಕರ ಗಂಭೀರ ಆರೋಪವಾಗಿದೆ. ಈ ಘಟನೆ ಸ್ವತಃ ಮುಸ್ಲಿಂ ಸಮುದಾಯದಲ್ಲೇ ತೀವ್ರ ಅಸಮಾಧಾನ ಹಾಗೂ ಆಕ್ರೋಶಕ್ಕೆ ಕಾರಣವಾಗಿದೆ. ಧರ್ಮದ ಹಾದಿ ತೋರಿಸಬೇಕಾದ ಮೌಲ್ವಿಯೇ ಈ ರೀತಿ ಅಧರ್ಮದ ಕೆಲಸ ಎಸಗಿದ್ದಾನೆ ಎಂದು ಕಿಡಿಕಾರಿರುವ ಸಮುದಾಯದ ಮುಖಂಡರು, ಈ ಧರ್ಮಗುರುವಿನ ಯಾವುದೇ ಧಾರ್ಮಿಕ ಕಾರ್ಯಕ್ರಮಗಳನ್ನು ಬಹಿಷ್ಕರಿಸಲು ನಿರ್ಧರಿಸಿದ್ದಾರೆ. ಇನ್ನು ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದ ಅಶ್ರಫ್, ಯುವತಿಯೊಂದಿಗೆ ತೆರಳಿದ್ದು, ಮಗಳಿಲ್ಲದೆ ಕುಟುಂಬಸ್ಥರು ಅಕ್ಷರಶಃ ಕಂಗಾಲಾಗಿದ್ದಾರೆ.

     




    #crime #dakshinakannada
    Previous Articleಜಪ್ಪಿನಮೊಗರು ಹಿಟ್ ಆ್ಯಂಡ್ ರನ್ ಪ್ರಕರಣ ಪ್ರಕರಣಕ್ಕೆ ಟ್ವಿಸ್ಟ್; ಸಿಸಿಟಿವಿ ಮೂಲಕ ಪರಾರಿಯಾಗಿದ್ದ ಬಸ್ ಪತ್ತೆ
    Next Article PNB ಗ್ರಾಹಕರಿಗೆ ಶಾಕ್; ಉಳಿತಾಯ ಖಾತೆ, ಸ್ಥಿರ ಠೇವಣಿಗಳಿಂದ ₹35 ಕೋಟಿ ನಾಪತ್ತೆ

    Related Posts

    ಉಪ್ಪಿನಂಗಡಿ: ಆಟೊಗೆ ಹಿಂಬದಿಯಿಂದ ಕಾರು ಡಿಕ್ಕಿ; ಗಂಭೀರ ಗಾಯಗೊಂಡಿದ್ದ ಚಾಲಕ ಸಾವು

    November 14, 2026

    ಮಂಗಳೂರು: ಪಣಂಬೂರು ಬೀಚ್ ಸಮೀಪದ ರೆಸ್ಟೋರೆಂಟ್ ಮೇಲೆ ಪೊಲೀಸರ ದಾಳಿ; ಇಬ್ಬರು ಬಾಂಗ್ಲಾದೇಶ ಪ್ರಜೆಗಳು ವಶಕ್ಕೆ

    November 14, 2026

    ಉಡುಪಿ: ತಾಯಿಯ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಲು ಅಂಡರ್‌ವರ್ಲ್ಡ್ ಡಾನ್ ರವಿ ಪೂಜಾರಿಗೆ ನ್ಯಾಯಾಲಯದ ಅನುಮತಿ; ಪೊಲೀಸ್ ಭದ್ರತೆಯಲ್ಲಿ ಉಡುಪಿಗೆ ಪ್ರಯಾಣ

    November 14, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಉಪ್ಪಿನಂಗಡಿ: ಆಟೊಗೆ ಹಿಂಬದಿಯಿಂದ ಕಾರು ಡಿಕ್ಕಿ; ಗಂಭೀರ ಗಾಯಗೊಂಡಿದ್ದ ಚಾಲಕ ಸಾವು

    November 14, 2026

    ಮಂಗಳೂರು: ಪಣಂಬೂರು ಬೀಚ್ ಸಮೀಪದ ರೆಸ್ಟೋರೆಂಟ್ ಮೇಲೆ ಪೊಲೀಸರ ದಾಳಿ; ಇಬ್ಬರು ಬಾಂಗ್ಲಾದೇಶ ಪ್ರಜೆಗಳು ವಶಕ್ಕೆ

    November 14, 2026

    ಉಡುಪಿ: ತಾಯಿಯ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಲು ಅಂಡರ್‌ವರ್ಲ್ಡ್ ಡಾನ್ ರವಿ ಪೂಜಾರಿಗೆ ನ್ಯಾಯಾಲಯದ ಅನುಮತಿ; ಪೊಲೀಸ್ ಭದ್ರತೆಯಲ್ಲಿ ಉಡುಪಿಗೆ ಪ್ರಯಾಣ

    November 14, 2026

    ಮಂಗಳೂರು: ಕೋಟಿ ರೂಪಾಯಿ ದರೋಡೆ ಪ್ರಕರಣದಲ್ಲಿ ಖಾಕಿ ಕೈವಾಡ; ಕಾರವಾರ ಪೊಲೀಸ್ ಕಾನ್‌ಸ್ಟೇಬಲ್ ಉರ್ವ ಪೊಲೀಸರ ವಶಕ್ಕೆ

    November 14, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಮಂಗಳೂರು: ಕೋಟಿ ರೂಪಾಯಿ ದರೋಡೆ ಪ್ರಕರಣದಲ್ಲಿ ಖಾಕಿ ಕೈವಾಡ; ಕಾರವಾರ ಪೊಲೀಸ್ ಕಾನ್‌ಸ್ಟೇಬಲ್ ಉರ್ವ ಪೊಲೀಸರ ವಶಕ್ಕೆ

    November 14, 2026

    ಮಡಿಕೇರಿ: ಹಾರಂಗಿ ಹಿನ್ನೀರಿನಲ್ಲಿ ಪ್ರವಾಸಿಗರ ಬೋಟ್ ಪಲ್ಟಿ; ಇಬ್ಬರು ಮಕ್ಕಳು ಪಾರು, ದಂಪತಿ ಸಾವು

    November 14, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.