Close Menu
    What's Hot

    ಉಪ್ಪಿನಂಗಡಿ: ಆಟೊಗೆ ಹಿಂಬದಿಯಿಂದ ಕಾರು ಡಿಕ್ಕಿ; ಗಂಭೀರ ಗಾಯಗೊಂಡಿದ್ದ ಚಾಲಕ ಸಾವು

    November 14, 2026

    ಮಂಗಳೂರು: ಪಣಂಬೂರು ಬೀಚ್ ಸಮೀಪದ ರೆಸ್ಟೋರೆಂಟ್ ಮೇಲೆ ಪೊಲೀಸರ ದಾಳಿ; ಇಬ್ಬರು ಬಾಂಗ್ಲಾದೇಶ ಪ್ರಜೆಗಳು ವಶಕ್ಕೆ

    November 14, 2026

    ಉಡುಪಿ: ತಾಯಿಯ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಲು ಅಂಡರ್‌ವರ್ಲ್ಡ್ ಡಾನ್ ರವಿ ಪೂಜಾರಿಗೆ ನ್ಯಾಯಾಲಯದ ಅನುಮತಿ; ಪೊಲೀಸ್ ಭದ್ರತೆಯಲ್ಲಿ ಉಡುಪಿಗೆ ಪ್ರಯಾಣ

    November 14, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಅಪರಾಧ»ಪೋಕ್ಸೊ ಪ್ರಕರಣದಲ್ಲಿ ಬಂಧಿತ ವೆಲೆನ್ಸಿಯಾ ಚರ್ಚ್‌ನ ಮಾಜಿ ಧರ್ಮಗುರುಗೆ ಕೋರ್ಟ್‌ನಿಂದ ಜಾಮೀನು ಮಂಜೂರು
    ಅಪರಾಧ

    ಪೋಕ್ಸೊ ಪ್ರಕರಣದಲ್ಲಿ ಬಂಧಿತ ವೆಲೆನ್ಸಿಯಾ ಚರ್ಚ್‌ನ ಮಾಜಿ ಧರ್ಮಗುರುಗೆ ಕೋರ್ಟ್‌ನಿಂದ ಜಾಮೀನು ಮಂಜೂರು

    adminBy adminOctober 30, 2026No Comments2 Mins Read

    ಮಂಗಳೂರು: ನಗರದ ವೆಲೆನ್ಸಿಯಾದ ಸೇಂಟ್ ವಿನ್ಸೆಂಟ್ ಫೆರರ್ ಚರ್ಚ್‌ಗೆ ಬರುತ್ತಿದ್ದ ಅಪ್ರಾಪ್ತನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಬಂಧನಕ್ಕೊಳಗಾಗಿದ್ದ ಚರ್ಚ್‌ನ ಮಾಜಿ ಧರ್ಮಗುರು ರೆ. ಫಾ. ಸಿಪ್ರಿಯನ್ ಪಿಂಟೊ (65) ಅವರಿಗೆ ಇಲ್ಲಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

    ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಅಕ್ಟೋಬರ್ 15ರಂದು ದಾಖಲಾಗಿದ್ದ ಪೋಕ್ಸೊ ಪ್ರಕರಣಕ್ಕೆ ಸಂಬಂಧಿಸಿದಂತೆ, ಅಕ್ಟೋಬರ್ 18ರಂದು ಪೊಲೀಸರ ಮುಂದೆ ಶರಣಾಗಿದ್ದ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. ಜಾಮೀನು ಅರ್ಜಿಯನ್ನು ಪುರಸ್ಕರಿಸಿ ನ್ಯಾಯಾಧೀಶರಾದ ಮಾನು ಕೆ.ಎಸ್. ಅವರು ಈ ಆದೇಶ ಹೊರಡಿಸಿದ್ದಾರೆ .

    ಚರ್ಚ್ ಆವರಣದಲ್ಲಿ ಶಿಸ್ತು ಕಾಪಾಡುವ ಉದ್ದೇಶದಿಂದ ಸಂಜೆ 7 ಗಂಟೆಯ ನಂತರ ಗೇಟ್ ಮುಚ್ಚುವುದು ಸೇರಿದಂತೆ ಕೆಲ ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೆ ತಂದಿದ್ದರಿಂದ ಅಸಮಾಧಾನಗೊಂಡ ಕೆಲವರು ಸುಳ್ಳು ದೂರು ದಾಖಲಿಸಿದ್ದಾರೆ ಎಂದು ಅರ್ಜಿದಾರರ ಪರ ವಕೀಲರಾದ ರಾಜೇಶ್ ಕುಮಾರ್ ಅಮ್ಟಾಡಿ ವಾದ ಮಂಡಿಸಿದ್ದರು.

    ಕೃತ್ಯ ನಡೆದಿದೆ ಎನ್ನಲಾದ ಅವಧಿಗೂ ಮತ್ತು ದೂರು ದಾಖಲಾದ ದಿನಾಂಕಕ್ಕೂ ಎರಡು ತಿಂಗಳಿಗೂ ಹೆಚ್ಚು ಕಾಲಾವಕಾಶವಿದೆ, ಅಲ್ಲದೆ ಇದೇ ವಿಷಯವಾಗಿ ಈ ಹಿಂದೆ ಮಕ್ಕಳ ರಕ್ಷಣಾ ನಿರ್ದೇಶನಾಲಯದ ಸೂಚನೆಯಂತೆ ಪೊಲೀಸರು ನಡೆಸಿದ ವಿಚಾರಣೆಯಲ್ಲೂ ಆರೋಪದಲ್ಲಿ ಹುರುಳಿಲ್ಲ ಎಂಬ ವರದಿ ಬಂದಿತ್ತು ಎಂದು ಅವರು ನ್ಯಾಯಾಲಯದ ಗಮನಕ್ಕೆ ತಂದರು.

    ಆರೋಪಿಗೆ 65 ವರ್ಷ ವಯಸ್ಸಾಗಿದ್ದು, ವಿವಿಧ ಅನಾರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದಾರೆ ಎಂಬುದನ್ನು ಪರಿಗಣಿಸುವಂತೆ ಕೋರಿದ್ದರು. ವಾದ-ಪ್ರತಿವಾದಗಳನ್ನು ಆಲಿಸಿದ ನ್ಯಾಯಾಲಯವು ಆರೋಪಿಗೆ 1 ಲಕ್ಷ ರೂ. ಮೊತ್ತದ ವೈಯಕ್ತಿಕ ಬಾಂಡ್ ಹಾಗೂ ಅಷ್ಟೇ ಮೊತ್ತದ ಒಬ್ಬರ ಭದ್ರತಾ ಖಾತರಿಯೊಂದಿಗೆ ಜಾಮೀನು ನೀಡಿದೆ. ವಿಚಾರಣೆಯ ದಿನಾಂಕಗಳಂದು ನ್ಯಾಯಾಲಯಕ್ಕೆ ತಪ್ಪದೇ ಹಾಜರಾಗಬೇಕು, ತನಿಖಾಧಿಕಾರಿಗಳು ಕರೆದಾಗ ಹಾಜರಾಗಿ ಸಹಕಾರ ನೀಡಬೇಕು, ಸಂತ್ರಸ್ತ ಅಪ್ರಾಪ್ತನನ್ನು ಭೇಟಿಯಾಗುವುದಾಗಲಿ ಅಥವಾ ಆತನಿಗೆ ಕಿರುಕುಳ ನೀಡುವುದಾಗಲಿ ಮಾಡಬಾರದು, ಸಾಕ್ಷ್ಯಾಧಾರಗಳನ್ನು ನಾಶಪಡಿಸಬಾರದು, ನ್ಯಾಯಾಲಯದ ಅನುಮತಿ ಇಲ್ಲದೆ ದೇಶ ಬಿಟ್ಟು ತೆರಳುವಂತಿಲ್ಲ ಹಾಗೂ ವಾಸಸ್ಥಳದ ವಿಳಾಸ ಮತ್ತು ಮೊಬೈಲ್ ಸಂಖ್ಯೆಗಳನ್ನು ಒದಗಿಸಬೇಕು ಎಂಬ ಷರತ್ತುಗಳನ್ನು ವಿಧಿಸಲಾಗಿದೆ. ಈ ಯಾವುದೇ ಷರತ್ತುಗಳನ್ನು ಉಲ್ಲಂಘಿಸಿದಲ್ಲಿ ಜಾಮೀನು ರದ್ದುಪಡಿಸಲು ಪ್ರಾಸಿಕ್ಯೂಷನ್‌ಗೆ ಅವಕಾಶವಿದೆ ಎಂದು ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.

     




    #crime #dakshinakannada
    Previous Article“ನಾನೇ ಸರ್ಕಾರ, ₹60ಕ್ಕೆ ಎರಡು ಲಾಡು ನೀಡಬೇಕು”; ಹಾಸನಾಂಬ ಜಾತ್ರೆಯಲ್ಲಿ ಸಚಿವ ಶಿವಲಿಂಗೇಗೌಡ ಗರಂ
    Next Article ಬದರಿನಾಥದಿಂದ ಹೊರಟ ಹೆಲಿಕಾಪ್ಟರ್ ಪತನ; ಆರು ಮಂದಿಯ ದಾರುಣ ಸಾವು

    Related Posts

    ಉಪ್ಪಿನಂಗಡಿ: ಆಟೊಗೆ ಹಿಂಬದಿಯಿಂದ ಕಾರು ಡಿಕ್ಕಿ; ಗಂಭೀರ ಗಾಯಗೊಂಡಿದ್ದ ಚಾಲಕ ಸಾವು

    November 14, 2026

    ಮಂಗಳೂರು: ಪಣಂಬೂರು ಬೀಚ್ ಸಮೀಪದ ರೆಸ್ಟೋರೆಂಟ್ ಮೇಲೆ ಪೊಲೀಸರ ದಾಳಿ; ಇಬ್ಬರು ಬಾಂಗ್ಲಾದೇಶ ಪ್ರಜೆಗಳು ವಶಕ್ಕೆ

    November 14, 2026

    ಉಡುಪಿ: ತಾಯಿಯ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಲು ಅಂಡರ್‌ವರ್ಲ್ಡ್ ಡಾನ್ ರವಿ ಪೂಜಾರಿಗೆ ನ್ಯಾಯಾಲಯದ ಅನುಮತಿ; ಪೊಲೀಸ್ ಭದ್ರತೆಯಲ್ಲಿ ಉಡುಪಿಗೆ ಪ್ರಯಾಣ

    November 14, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಉಪ್ಪಿನಂಗಡಿ: ಆಟೊಗೆ ಹಿಂಬದಿಯಿಂದ ಕಾರು ಡಿಕ್ಕಿ; ಗಂಭೀರ ಗಾಯಗೊಂಡಿದ್ದ ಚಾಲಕ ಸಾವು

    November 14, 2026

    ಮಂಗಳೂರು: ಪಣಂಬೂರು ಬೀಚ್ ಸಮೀಪದ ರೆಸ್ಟೋರೆಂಟ್ ಮೇಲೆ ಪೊಲೀಸರ ದಾಳಿ; ಇಬ್ಬರು ಬಾಂಗ್ಲಾದೇಶ ಪ್ರಜೆಗಳು ವಶಕ್ಕೆ

    November 14, 2026

    ಉಡುಪಿ: ತಾಯಿಯ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಲು ಅಂಡರ್‌ವರ್ಲ್ಡ್ ಡಾನ್ ರವಿ ಪೂಜಾರಿಗೆ ನ್ಯಾಯಾಲಯದ ಅನುಮತಿ; ಪೊಲೀಸ್ ಭದ್ರತೆಯಲ್ಲಿ ಉಡುಪಿಗೆ ಪ್ರಯಾಣ

    November 14, 2026

    ಮಂಗಳೂರು: ಕೋಟಿ ರೂಪಾಯಿ ದರೋಡೆ ಪ್ರಕರಣದಲ್ಲಿ ಖಾಕಿ ಕೈವಾಡ; ಕಾರವಾರ ಪೊಲೀಸ್ ಕಾನ್‌ಸ್ಟೇಬಲ್ ಉರ್ವ ಪೊಲೀಸರ ವಶಕ್ಕೆ

    November 14, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಮಂಗಳೂರು: ಕೋಟಿ ರೂಪಾಯಿ ದರೋಡೆ ಪ್ರಕರಣದಲ್ಲಿ ಖಾಕಿ ಕೈವಾಡ; ಕಾರವಾರ ಪೊಲೀಸ್ ಕಾನ್‌ಸ್ಟೇಬಲ್ ಉರ್ವ ಪೊಲೀಸರ ವಶಕ್ಕೆ

    November 14, 2026

    ಮಡಿಕೇರಿ: ಹಾರಂಗಿ ಹಿನ್ನೀರಿನಲ್ಲಿ ಪ್ರವಾಸಿಗರ ಬೋಟ್ ಪಲ್ಟಿ; ಇಬ್ಬರು ಮಕ್ಕಳು ಪಾರು, ದಂಪತಿ ಸಾವು

    November 14, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.