Close Menu
    What's Hot

    ಉಪ್ಪಿನಂಗಡಿ: ಆಟೊಗೆ ಹಿಂಬದಿಯಿಂದ ಕಾರು ಡಿಕ್ಕಿ; ಗಂಭೀರ ಗಾಯಗೊಂಡಿದ್ದ ಚಾಲಕ ಸಾವು

    November 14, 2026

    ಮಂಗಳೂರು: ಪಣಂಬೂರು ಬೀಚ್ ಸಮೀಪದ ರೆಸ್ಟೋರೆಂಟ್ ಮೇಲೆ ಪೊಲೀಸರ ದಾಳಿ; ಇಬ್ಬರು ಬಾಂಗ್ಲಾದೇಶ ಪ್ರಜೆಗಳು ವಶಕ್ಕೆ

    November 14, 2026

    ಉಡುಪಿ: ತಾಯಿಯ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಲು ಅಂಡರ್‌ವರ್ಲ್ಡ್ ಡಾನ್ ರವಿ ಪೂಜಾರಿಗೆ ನ್ಯಾಯಾಲಯದ ಅನುಮತಿ; ಪೊಲೀಸ್ ಭದ್ರತೆಯಲ್ಲಿ ಉಡುಪಿಗೆ ಪ್ರಯಾಣ

    November 14, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಅಪರಾಧ»ಸ್ಟಿಂಗ್ ಆಪರೇಷನ್ ಪ್ರಕರಣದ ಬೆನ್ನಲ್ಲೇ ಕಾಂಗ್ರೆಸ್ ನಿಂದ‌ ಕೃಪಾ ಆಳ್ವಾಗೆ ಶಾಕ್; 6 ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟನೆ
    ಅಪರಾಧ

    ಸ್ಟಿಂಗ್ ಆಪರೇಷನ್ ಪ್ರಕರಣದ ಬೆನ್ನಲ್ಲೇ ಕಾಂಗ್ರೆಸ್ ನಿಂದ‌ ಕೃಪಾ ಆಳ್ವಾಗೆ ಶಾಕ್; 6 ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟನೆ

    adminBy adminOctober 31, 2026No Comments2 Mins Read

    ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿರುವ ಸ್ಟಿಂಗ್ ಆಪರೇಷನ್ ಪ್ರಕರಣದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯಗೆ ಕ್ಲೀನ್ ಚಿಟ್ ನೀಡಲಾಗಿದ್ದು, ಇದೊಂದು ಕಟ್ಟು ಕಥೆ ಎಂದು ಸಿಸಿಬಿ ಮಾಧ್ಯಮ ಪ್ರಕಟಣೆ ಮೂಲಕ ಅಧಿಕೃತವಾಗಿ ತಿಳಿಸಿದೆ. ಇದರ ಬೆನ್ನಲ್ಲೇ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗಳು ನಡೆಯುತ್ತಿವೆ. ಸ್ಟಿಂಗ್ ತಂಡ ಬ್ಲ್ಯಾಕ್​​​​ ಮೇಲ್ ಏನಾದ್ರೂ ಮಾಡಿದ್ಯಾ ಎನ್ನುವ ಅನುಮಾನುಗಳು ವ್ಯಕ್ತವಾಗಿದ್ದು, ಇದರಿಂದ ದೂರುದಾರ ಸಿದ್ದರಾಮಯ್ಯನವರ ಹೇಳಿಕೆ ಪಡೆಯಲು ಪೊಲೀಸ್ ಅಧಿಕಾರಿಗಳು ಚರ್ಚೆ ನಡೆಸಿದ್ದಾರೆ. ಈ ಎಲ್ಲಾ ಬೆಳವಣಿಗೆಗಳ ನಡುವೆ ಕೃಪಾ ಆಳ್ವಾರನ್ನ ಕಾಂಗ್ರೆಸ್​​​ನಿಂದ ಉಚ್ಚಾಟನೆ ಮಾಡಲಾಗಿದೆ. ಸ್ಟಿಂಗ್ ಪ್ರಕರಣದಲ್ಲಿ ಹೆಸರು ಕೇಳಿ ಬಂದಿದ್ದರಿಂದ 6 ವರ್ಷಗಳ ಕಾಲ ಕೃಪಾ ಆಳ್ವಾ ಅವರನ್ನ ಉಚ್ಚಾಟಿಸಲಾಗಿದೆ.

    ಈ ಸ್ಟಿಂಗ್ ಆಪರೇಷನ್ ಹಿಂದೆ ಸ್ವಪಕ್ಷದವರ ಕೈವಾಡವಿದೆ ಎಂದು ಸ್ವತಃ ದೂರುದಾರ ಸಿದ್ದರಾಮಯ್ಯನವರ ಪುತ್ರ ಸಚಿವ ಯತೀಂದ್ರ ಅವರೇ ಬಹಿರಂಗವಾಗಿ ಹೇಳಿಕೆ ನೀಡಿದ್ದರು. ಅಲ್ಲದೇ ಸ್ವತಃ ಸಿದ್ದರಾಮಯ್ಯನವರೇ ಕೃಪಾ ಆಳ್ವಾ ಅವರ ಹೆಸರನ್ನು ಹೇಳಿದ್ದರು. ಇದರ ಬೆನ್ನಲ್ಲೇ ಕೆಪಿಸಿಸಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಸಿದ್ದರಾಮಯ್ಯನವರನ್ನು ಭೇಟಿ ಮಾಡಿ ಪ್ರಕರಣ ಸಂಬಂಧ ಮಹತ್ವದ ಚರ್ಚೆ ಮಾಡಿದ್ದರು. ಇದಾದ ಬೆನ್ನಲ್ಲೇ ಇದೀಗ ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ್ ಸೂಚನೆ ಮೇರೆಗೆ ಕೃಪಾ ಆಳ್ವಾರನ್ನು ಅಮಾನತು ಮಾಡಲಾಗಿದೆ.

    ಉಚ್ಛಾಟನೆ ಆದೇಶದಲ್ಲೇನಿದೆ?

    ಸ್ಟಿಂಗ್ ಪ್ರಕರಣದಲ್ಲಿ ತಮ್ಮ ಹೆಸರು ಕೇಳಿ ಬಂದ ಕಾರಣ ಪ್ರಕರಣದಲ್ಲಿ ನಿಮ್ಮ ನಡವಳಿಕೆ ಪಕ್ಷ ವಿರೋಧಿ ಚಟುವಟಿಕೆಯಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್ ಮುಖಂಡರನ್ನು ಗುರಿಯಾಗಿಸಿ ಸ್ಟಿಂಗ್ ಆಪರೇಷನ್ ನಡೆಸಲಾಗಿದೆ ಎಂಬ ಪ್ರಕರಣದಿಂದ ಕಾಂಗ್ರೆಸ್ ಪಕ್ಷಕ್ಕೆ ಮುಜುಗರವಾಗಿದೆ. ಈ ಘಟನೆಯಲ್ಲಿ ತಾವು ಭಾಗಿಯಾಗಿದ್ದಾರೆಂಬ ಆರೋಪವಿದೆ. ಈ ಹಿನ್ನೆಲೆ ಕಾರಣ ಕೇಳಿ ಕೆಪಿಸಿಸಿಯಿಂದ ನೋಟೀಸ್ ನೀಡಲಾಗಿತ್ತು. ಆದ್ರೆ,ತಾವು ಇದುವರೆಗೂ ನೋಟಿಸ್​ಗೆ ಉತ್ತರಿಸಿಲ್ಲ. ಹೀಗಾಗಿ ತಮ್ಮನ್ನು ಆರು ವರ್ಷಗಳ ಕಾಲ ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ ಎಂದು ಆದೇಶ ಉಲ್ಲೇಖಿಸಲಾಗಿದೆ.

    ವಿಚಾರಣೆಗೆ ಹಾಜರಾದ ಬಳಿಕ ವಿದೇಶಕ್ಕೆ ಪರಾರಿ?

    ದೂರುದಾರ ಸಿದ್ದರಾಮಯ್ಯನವರು ಕೃಪಾ ಆಳ್ವಾ ಹೆಸರು ಬಹಿರಂಗವಾಗಿ ಹೇಳಿದ್ದು, ಇದರ ಬೆನ್ನಲ್ಲೇ ಕೃಪಾ ಆಳ್ವಾ ಅಕ್ಟೋಬರ್ 24ರಂದು ಬೆಂಗಳೂರಿನ ಕೇಂದ್ರ ಸೈಬರ್ ಅಪರಾಧ ವಿಭಾಗದ ಪೊಲೀಸರ ಎದುರು ಅವರು ವಿಚಾರಣೆ ಹಾಜರಾಗಿದ್ದರು. ಆದ್ರೆ, ಇದೀಗ ಅವರು ವಿದೇಶಕ್ಕೆ ಹಾರಿದ್ದಾರೆ ಎಂದು ತಿಳಿದುಬಂದಿದ್ದು, ಹಲವು ಅನುಮಾನಗಳಿಗೆ ಎಡೆಮಾಡಿಟ್ಟಿದೆ.

    ಮೊದಲ ವಿಕೆಟ್ ಪತನ

    ಇನ್ನು ಈ ಸ್ಟಿಂಗ್ ಆಪರೇಷನ್​​ ಹಿಂದೆ ಸ್ವಪಕ್ಷದವರ ಕೈವಾಡವಿದೆ ಎಂದು ಯತೀಂದ್ರ ಸಿದ್ದರಾಮಯ್ಯ ಬಹಿರಂಗವಾಗಿಯೇ ಹೇಳಿದ್ದರು. ಇದು ಕಾಂಗ್ರೆಸ್​​​ನಲ್ಲಿ ಬಾರೀ ಸಂಚಲನ ಕಾರಣವಾಗಿತ್ತು. ಈ ಬಗ್ಗೆ ಸ್ವತಃ ಕೆಪಿಸಿಸಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಪ್ರತಿಕ್ರಿಯಿಸಿ, ಯಾರೆಂದು ತನಿಖೆಯಲ್ಲಿ ಗೊತ್ತಾದರೆ ಅವರ ವಿರುದ್ಧ ಕ್ರಮಕೈಗೊಳ್ಳವುದಾಗಿ ಹೇಳಿದ್ದರು. ಇದರ ಬೆನ್ನಲ್ಲೇ ಇದೀಗ ಕೃಪಾ ಆಳ್ವಾ ರೂಪದಲ್ಲಿ ಒಂದು ವಿಕೆಟ್ ಪತನವಾದಂತಾಗಿದೆ.

    ಯಾರಿದು ಕೃಪಾ ಆಳ್ವಾ?

    ಕೃಪಾ ಆಳ್ವಾ ಅವರು ಕರ್ನಾಟಕ ಕಾಂಗ್ರೆಸ್‌ನ ಪ್ರಮುಖ ಮಹಿಳಾ ಮುಖಂಡರಾಗಿದ್ದು, ದಶಕಕ್ಕೂ ಹೆಚ್ಚು ಕಾಲದಿಂದ ಪಕ್ಷದಲ್ಲಿ ಗುರುತಿಸಿಕೊಂಡಿದ್ದಾರೆ. ಮೂಲತಃ ಕರಾವಳಿ ಭಾಗದವರಾದ ಇವರು, 1992ರಲ್ಲಿ ಹತ್ಯೆಗೀಡಾದ ಮಂಗಳೂರಿನ ಪ್ರಭಾವಿ ಸಮಾಜ ಸೇವಕ ಹಾಗೂ ನಾಯಕ ಅಮರ್ ಆಳ್ವಾ ಅವರ ಪತ್ನಿ. ಪತಿಯ ನಿಧನದ ಬಳಿಕ ಕಾಂಗ್ರೆಸ್ ಪಕ್ಷ ಸೇರುವ ಮೂಲಕ ರಾಜಕೀಯ ಪ್ರವೇಶ ಮಾಡಿದ್ದು, ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿಯಾಗಿ ನಂತರ ಕೆಪಿಸಿಸಿಯ ಪ್ರಧಾನ ಕಾರ್ಯದರ್ಶಿ, ವಕ್ತಾರೆ ಹಾಗೂ ರಾಜ್ಯ ಪ್ರಚಾರ ಸಮಿತಿಯ ಸಂಯೋಜಕರಾಗಿದ್ದರು. ಇನ್ನು 2015ರಲ್ಲಿ ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷೆಯಾಗಿದ್ದರು.




    #crime #karnataka
    Previous Articleಕೇರಳ: ಲಾಟರಿ ಬಹುಮಾನ ಪಡೆಯಲು ಶುಲ್ಕದ ನೆಪ; ಮಂಗಳೂರಿನ ವ್ಯಕ್ತಿಗೆ ಸೈಬರ್ ವಂಚನೆ
    Next Article ನಕಲಿ ಇ-ಚಲನ್ ಸಂದೇಶಗಳಿಗೆ ಮರುಳಾಗಬೇಡಿ; ಮಂಗಳೂರು ಪೊಲೀಸರಿಂದ ಸಾರ್ವಜನಿಕರಿಗೆ ಎಚ್ಚರಿಕೆ

    Related Posts

    ಮಂಗಳೂರು: ಪಣಂಬೂರು ಬೀಚ್ ಸಮೀಪದ ರೆಸ್ಟೋರೆಂಟ್ ಮೇಲೆ ಪೊಲೀಸರ ದಾಳಿ; ಇಬ್ಬರು ಬಾಂಗ್ಲಾದೇಶ ಪ್ರಜೆಗಳು ವಶಕ್ಕೆ

    November 14, 2026

    ಉಡುಪಿ: ತಾಯಿಯ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಲು ಅಂಡರ್‌ವರ್ಲ್ಡ್ ಡಾನ್ ರವಿ ಪೂಜಾರಿಗೆ ನ್ಯಾಯಾಲಯದ ಅನುಮತಿ; ಪೊಲೀಸ್ ಭದ್ರತೆಯಲ್ಲಿ ಉಡುಪಿಗೆ ಪ್ರಯಾಣ

    November 14, 2026

    ಮಂಗಳೂರು: ಕೋಟಿ ರೂಪಾಯಿ ದರೋಡೆ ಪ್ರಕರಣದಲ್ಲಿ ಖಾಕಿ ಕೈವಾಡ; ಕಾರವಾರ ಪೊಲೀಸ್ ಕಾನ್‌ಸ್ಟೇಬಲ್ ಉರ್ವ ಪೊಲೀಸರ ವಶಕ್ಕೆ

    November 14, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಉಪ್ಪಿನಂಗಡಿ: ಆಟೊಗೆ ಹಿಂಬದಿಯಿಂದ ಕಾರು ಡಿಕ್ಕಿ; ಗಂಭೀರ ಗಾಯಗೊಂಡಿದ್ದ ಚಾಲಕ ಸಾವು

    November 14, 2026

    ಮಂಗಳೂರು: ಪಣಂಬೂರು ಬೀಚ್ ಸಮೀಪದ ರೆಸ್ಟೋರೆಂಟ್ ಮೇಲೆ ಪೊಲೀಸರ ದಾಳಿ; ಇಬ್ಬರು ಬಾಂಗ್ಲಾದೇಶ ಪ್ರಜೆಗಳು ವಶಕ್ಕೆ

    November 14, 2026

    ಉಡುಪಿ: ತಾಯಿಯ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಲು ಅಂಡರ್‌ವರ್ಲ್ಡ್ ಡಾನ್ ರವಿ ಪೂಜಾರಿಗೆ ನ್ಯಾಯಾಲಯದ ಅನುಮತಿ; ಪೊಲೀಸ್ ಭದ್ರತೆಯಲ್ಲಿ ಉಡುಪಿಗೆ ಪ್ರಯಾಣ

    November 14, 2026

    ಮಂಗಳೂರು: ಕೋಟಿ ರೂಪಾಯಿ ದರೋಡೆ ಪ್ರಕರಣದಲ್ಲಿ ಖಾಕಿ ಕೈವಾಡ; ಕಾರವಾರ ಪೊಲೀಸ್ ಕಾನ್‌ಸ್ಟೇಬಲ್ ಉರ್ವ ಪೊಲೀಸರ ವಶಕ್ಕೆ

    November 14, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಮಂಗಳೂರು: ಕೋಟಿ ರೂಪಾಯಿ ದರೋಡೆ ಪ್ರಕರಣದಲ್ಲಿ ಖಾಕಿ ಕೈವಾಡ; ಕಾರವಾರ ಪೊಲೀಸ್ ಕಾನ್‌ಸ್ಟೇಬಲ್ ಉರ್ವ ಪೊಲೀಸರ ವಶಕ್ಕೆ

    November 14, 2026

    ಮಡಿಕೇರಿ: ಹಾರಂಗಿ ಹಿನ್ನೀರಿನಲ್ಲಿ ಪ್ರವಾಸಿಗರ ಬೋಟ್ ಪಲ್ಟಿ; ಇಬ್ಬರು ಮಕ್ಕಳು ಪಾರು, ದಂಪತಿ ಸಾವು

    November 14, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.