Author: admin
ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿದ್ದ ಕೈದಿಯೊಂದಿಗೆ ಸರಸ-ಸಲ್ಲಾಪ ನಡೆಸಿರುವ ವಿಡಿಯೋ ವೈರಲ್ ಆಗಿ ವಿವಾದಕ್ಕೆ ಕಾರಣವಾಗಿದ್ದ ಕರ್ನಾಟಕ ಕೈಗಾರಿಕಾ ಭದ್ರತಾ ಪಡೆಯ ಮಹಿಳಾ ಪಿಎಸ್‌ಐ ಜಯಶ್ರೀ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ. ಇಲಾಖಾ ವಿಚಾರಣೆಯ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದ್ದು, ಆಂತರಿಕ ಭದ್ರತಾ ವಿಭಾಗದ ಐಜಿಪಿ ಕೆ. ತ್ಯಾಗರಾಜನ್ ಅಮಾನತು ಆದೇಶ ಹೊರಡಿಸಿದ್ದಾರೆ. ತುಮಕೂರಿನ ಕುಣಿಗಲ್ ಮೂಲದ ಹಾಗೂ ಬೆಳಗಾವಿ ಜೈಲಿನಲ್ಲಿ ವಿಚಾರಣಾಧೀನ ಕೈದಿಯಾಗಿದ್ದ ಸಾಯಿಕುಮಾರ್ ಅಲಿಯಾಸ್ ಸುರೇಶ್ ಜೊತೆ ಪಿಎಸ್‌ಐ ಜಯಶ್ರೀ ಅವರು ವಿಡಿಯೋ ಕಾಲ್ ಹಾಗೂ ಅಕ್ರಮ ಸಂಪರ್ಕ ಹೊಂದಿದ್ದರು ಎಂಬ ಆರೋಪ ಕೇಳಿಬಂದಿತ್ತು. ಜೈಲಿನಲ್ಲಿದ್ದ ಕೈದಿಗೆ ಮೊಬೈಲ್ ಒದಗಿಸಿ, ಆತನೊಂದಿಗೆ ವಿಡಿಯೋ ಕಾಲ್‌ನಲ್ಲಿ ಅಶ್ಲೀಲವಾಗಿ ವರ್ತಿಸಿರುವುದಾಗಿ ಹೇಳಲಾದ ವಿಡಿಯೋಗಳು ಮತ್ತು ಆಡಿಯೋ ಕ್ಲಿಪ್‌ಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು. ಇದಲ್ಲದೆ, ಕೈದಿಯ ಬ್ಯಾಂಕ್ ಖಾತೆ ಹಾಗೂ ಆತನ ತಾಯಿಯ ಮೂಲಕ ಹಂತ ಹಂತವಾಗಿ ಹಣ ವರ್ಗಾವಣೆ ಮಾಡಿಸಿಕೊಂಡಿರುವ ಆರೋಪವೂ ಕೇಳಿಬಂದಿದೆ. ಕೈದಿಗೆ ಸೇರಿದ ಸ್ಕೂಟರ್ ಮತ್ತು ಸ್ವಿಫ್ಟ್ ಕಾರನ್ನು ಜಯಶ್ರೀ…
ಬೆಂಗಳೂರು: ನಕಲಿ ಫೇಸ್‌ಬುಕ್ ಖಾತೆ ಸೃಷ್ಟಿಸಿ ಐಪಿಎಸ್ ಅಧಿಕಾರಿಯ ಹೆಸರಿನಲ್ಲಿ ಜನರಿಂದ ಹಣ ವಸೂಲಿ ಮಾಡುತ್ತಿದ್ದ ಆರೋಪದಡಿ ರಾಜಸ್ಥಾನದ 17 ವರ್ಷದ ಬಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ಎಲೆಕ್ಟ್ರಾನಿಕ್ ಸಿಟಿ ವಿಭಾಗದ ಡಿಸಿಪಿ ಐಪಿಎಸ್ ಅಧಿಕಾರಿ ನಾರಾಯಣ ಎಂ. ಅವರ ಹೆಸರಿನಲ್ಲಿ ಆರೋಪಿ ನಕಲಿ ಖಾತೆ ಸೃಷ್ಟಿಸಿದ್ದ ಎನ್ನಲಾಗಿದೆ. ಬಂಧಿತನನ್ನು ರಾಜಸ್ಥಾನದ ಕೊಟಕುರ್ದ್ ಗ್ರಾಮದ ನಿವಾಸಿ ಎಂದು ಗುರುತಿಸಲಾಗಿದೆ. ವಂಚನೆ ನಡೆಸುತ್ತಿದ್ದಿದ್ದು ಹೇಗೆ? ನಾರಾಯಣ್ ಅವರ ಭಾವಚಿತ್ರ ಬಳಸಿ ನಕಲಿ ಫೇಸ್‌ಬುಕ್ ಖಾತೆ ಸೃಷ್ಟಿಸಿದ್ದ ಆರೋಪಿ ಅವರ ಪರಿಚಿತರು ಮತ್ತು ಸಾರ್ವಜನಿಕರಿಂದ ಹಣ ವಸೂಲಿಗಿಳಿದಿದ್ದ. ನಕಲಿ ಖಾತೆ ಮೂಲಕ ಕಡಿಮೆ ಬೆಲೆಗೆ ಪೀಠೋಪಕರಣ ಮಾರಾಟ ಆಮಿಷ ಒಡ್ಡುತ್ತಿದ್ದ ಈತ, ತನ್ನ ಸ್ನೇಹಿತ ಸಿಆರ್‌ಪಿಎಫ್ ಕಮಾಂಡೆಂಟ್ ಆಗಿದ್ದಾನೆ. ಅವನ ಬಳಿ ಪೀಠೋಪಕರಣಗಳು ಮತ್ತು ಗೃಹ ಬಳಕೆಯ ವಸ್ತುಗಳು ಇವೆ. ಅವುಗಳನ್ನು ಕಡಿಮೆ ಬೆಲೆ ಖರೀದಿಸಬಹುದು ಎಂದು ನಂಬಿಸಿ ಹಣ ಪಡೆದು ಸಾರ್ವಜನಿಕರಿಗೆ ವಂಚಿಸುತ್ತಿದ್ದ. ಈ ಸಂಬಂಧ ಜುಲೈನಲ್ಲಿ ಸಂತ್ರಸ್ತರೊಬ್ಬರು ನೀಡಿದ ದೂರಿನ ಬಳಿಕ ವಂಚನೆ…
ಬೆಂಗಳೂರು: ಭ್ರಷ್ಟರನ್ನು ನೇಮಿಸಿ ಒಳ್ಳೆಯ ಆಡಳಿತ ನೀಡಲು ಸಾಧ್ಯಾನಾ ಎಂದು ಮಾಜಿ ಕೆಪಿಎಸ್‌ಸಿ ಅಧ್ಯಕ್ಷ್ಯ ಸಾಹುಕಾರ್ ಶಿವಶಂಕರಪ್ಪಗೆ ಹೈಕೋರ್ಟ್ ಛೀಮಾರಿ ಹಾಕಿದೆ. ಕೆಪಿಎಸ್‌ಸಿ ನೇಮಕಾತಿ ಹಗರಣ ಪ್ರಕರಣ ಸಂಬಂಧ ಸಾಹುಕಾರ್ ಶಿವಶಂಕರಪ್ಪ ಅವರು ನಿರೀಕ್ಷಣಾ ಜಾಮೀನು ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ನ್ಯಾಯಮೂರ್ತಿ ವಿಶ್ವಜೀತ್ ಶೆಟ್ಟಿ ಪೀಠ ವಿಚಾರಣೆ ನಡೆಸಿತು. ಈ ವೇಳೆ ಸಾಹುಕಾರ್ ಶಿವಶಂಕರಪ್ಪ ಪರವಾಗಿ ವಾದಿಸಿದ ಹಿರಿಯ ವಕೀಲ ಅರುಣ್ ಶ್ಯಾಮ್, ಪ್ರಕರಣದಲ್ಲಿ ನಮ್ಮ ಕಕ್ಷಿದಾರರ ಪಾತ್ರ ಏನು ಇಲ್ಲ. ಎಲ್ವನ್ನೂ ಪರೀಕ್ಷೆ ಕಂಟ್ರೋಲರ್ ಅವರು ಮಾಡಿದ್ದಾರೆ. ಇವರು ಕೆಪಿಎಸ್‌ಸಿ ಅಧ್ಯಕ್ಷರು ಮಾತ್ರ ಆಗಿದ್ದರು. ಪ್ರಶ್ನೆ ಪತ್ರಿಕೆ ಸೋರಿಕೆಗೂ ಇವರಿಗೂ ಯಾವುದೇ ಸಂಬಂಧ ಇಲ್ಲ. ಒಮ್ಮೆ ಸಿಐಡಿ ವಿಚಾರಣೆಗೆ ಹಾಜರಾಗಿದ್ದಾರೆ ಎಂದರು. ಇದಕ್ಕೆ ಹೈಕೋರ್ಟ್, ನಿಮ್ಮ ಪಾತ್ರ ಇಲ್ಲದೇ ಕೆಪಿಎಸ್‌ಸಿ ಪ್ರಶ್ನೆ ಪತ್ರಿಕೆ ಸೋರಿಕೆ ಹೇಗೆ ಆಯ್ತು? ನಿಮ್ಮ ಪಾಲು ಇದ್ದೆ ಅದಕ್ಕೆ ಇಷ್ಟೆಲ್ಲಾ ಆಗಿದೆ. ಉನ್ನತ ಹುದ್ದೆಯಲ್ಲಿ ಇದ್ದು ಇಂತಹ ಕೃತ್ಯ ಮಾಡಿದ್ದೀರಿ. ಭ್ರಷ್ಟಾಚಾರದಿಂದ…
ಉಡುಪಿ:ಪಡಿತರ ಅಕ್ಕಿ ಚೀಲಗಳನ್ನು ಮನೆಯ ಅಂಗಳದಲ್ಲಿ ಇಟ್ಟಿರುವುದಾಗಿ ಆರೋಪಿಸಿ ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಟ ಠಾಣೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಪ್ರಕರಣದಲ್ಲಿ ದೂರುದಾರರಿಗೆ ಬೆದರಿಕೆ ಒಡ್ಡಿ ಸುಲಿಗೆಗೆ ಬೆದರಿಕೆ ಹಾಕಿದ ಆರೋಪಿಗಳಾದ ಕೋಟತಟ್ಟು ಗ್ರಾಮದ ನಾಗೇಂದ್ರ ಪುತ್ರನ್ (37), ಪಾರಂಪಳ್ಳಿ ಗ್ರಾಮದ ಪಡುಕೆರೆಯ ನಿವಾಸಿ ಪಿ.ಸುಮಂತ್ ಕುಂದರ್ (40) ಅವರನ್ನು ಸೆ.2ರಂದು ಮೈಸೂರು ಅರಮನೆ ಎದುರಿನ ವಸ್ತು ಪ್ರದರ್ಶನ ಮೈದಾನದ ಬಳಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಇದೇ ಪ್ರಕರಣದ ಮತ್ತೋರ್ವ ಆರೋಪಿ ಮೂಡುಹಡು ಗ್ರಾಮದ ಸಚಿನ್ ಶ್ರೀಯಾನ್ (32)ನನ್ನು ಸೆ.1ರಂದು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.ಪ್ರಕರಣದ ತನಿಖೆ ಮುಂದುವರಿದಿದೆ. ಆ.31ರಂದು ಈ ಘಟನೆ ನಡೆದಿದ್ದು, ಈ ಕುರಿತು ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.ಪ್ರಕರಣದ ಆರೋಪಿಗಳ ಪತ್ತೆಗಾಗಿ ಉಡುಪಿ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಬೆಳ್ಳಿಯಪ್ಪ ಕೆ.ಯು. ಹಾಗೂ ಬ್ರಹ್ಮಾವರ ವೃತ್ತ ನಿರೀಕ್ಷಕ ಗೋಪಿಕೃಷ್ಣ ಅವರ ಮಾರ್ಗದರ್ಶನದಲ್ಲಿ ಕೋಟ ಪೊಲೀಸ್ ಠಾಣೆಯ ಪಿಎಸ್‌ಐ ಪ್ರವೀಣ್ ಕುಮಾರ್…
ಮಂಗಳೂರು:ಮೂಡುಬಿದಿರೆಯ ಖಾಸಗಿ ಕಾಲೇಜೊಂದರ ವಿದ್ಯಾರ್ಥಿಗಳ ಮೇಲೆ ಅನೈತಿಕ ಪೊಲೀಸ್ ಗಿರಿ ನಡೆಸಿದ ಆರೋಪದಲ್ಲಿ ಓರ್ವ ಕಾಂಗ್ರೆಸ್ ಮುಖಂಡ ಸೇರಿ ಮೂವರ ಮೇಲೆ ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾಂಗ್ರೆಸ್ ಸಾಮಾಜಿಕ ಜಾಲತಾಣ ನಿರ್ವಹಿಸುವ ಮತ್ತು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ ಆಪ್ತ ರಿತಿಲ್ ಪೂಜಾರಿ, ಸಂಘ ಪರಿವಾರದ ಕಾರ್ಯಕರ್ತರಾದ ಪ್ರೇಮ್ ಭಂಡಾರಿ, ಬಜರಂಗದಳ ಮಾಜಿ ಸಂಚಾಲಕ ಸಂಜಯ್ ಹೆಗ್ಡೆ ಎಂಬವರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಮೂಡುಬಿದಿರೆಯ ಖಾಸಗಿ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ಹಾಗೂ ಇಬ್ಬರು ವಿದ್ಯಾರ್ಥಿಗಳು ಮೂಡುಬಿದಿರೆ ಬಸ್ ನಿಲ್ದಾಣದ ಬಳಿಯ ಕೆಫೆಯೊಂದಕ್ಕೆ ಉಪಾಹಾರ ಸೇವಿಸಲು ತೆರಳಿದ್ದರು. ಈ ವೇಳೆ ಆರೋಪಿಗಳು ಕೆಫೆಗೆ ಅಕ್ರಮವಾಗಿ ನುಗ್ಗಿ ವಿದ್ಯಾರ್ಥಿಗಳ ಹೆಸರು ಕೇಳಿ ಅವಾಚ್ಯವಾಗಿ ನಿಂದಿಸಿ, ಬೆದರಿಕೆ ಹಾಕಿದ್ದಾರೆ ಎಂದು ದೂರಲಾಗಿದೆ. ಆರೋಪಿಗಳ ಬೆದರಿಕೆಯಿಂದ ಹೆದರಿದ ವಿದ್ಯಾರ್ಥಿಗಳು ದೂರು ನೀಡಲು ನಿರಾಕರಿಸಿದ್ದರು. ಆದರೆ ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಮೂಡುಬಿದಿರೆ ಪೊಲೀಸ್ ಠಾಣೆಯ ಪಿಎಸ್ಸೈ ಪ್ರತಿಭಾ…
ಬೆಂಗಳೂರು: ನಗರದ ಕೆಂಚನಪುರ ಗ್ರಾಮದ ಬಾಡಿಗೆ ಮನೆಯೊಂದರಲ್ಲಿ ಅಕ್ರಮವಾಗಿ ಹುಕ್ಕಾ ಬಾರ್ ನಡೆಸುತ್ತಿದ್ದ ಜಾಲವನ್ನು ಕುಂಬಳಗೂಡು ಠಾಣೆ ಪೊಲೀಸರು ಭೇದಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಖಾಸಗಿ ಕಂಪನಿಯ ಹಿರಿಯ ವಿಶ್ಲೇಷಕ ಹಾಗೂ ಆತನ ಸಹಚರನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಮೂಲತಃ ಬಸವೇಶ್ವರನಗರದ ಮೀನಾಕ್ಷಿನಗರ ನಿವಾಸಿ ಅಜಿತ್ ಬಿ. ನಾಯಕ್ (28) ಮತ್ತು ಹಾಸನದ ವರುಣ್ ಕೆ.ಆರ್. (25) ಎಂದು ಗುರುತಿಸಲಾಗಿದೆ. ಅಜಿತ್ ಸಿವಿಲ್ ಇಂಜಿನಿಯರಿಂಗ್ ಹಾಗೂ ಅರ್ಥಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದು, ದೊಮ್ಲೂರು ಮೂಲದ ಖಾಸಗಿ ಸಂಸ್ಥೆಯಲ್ಲಿ ಹಿರಿಯ ವಿಶ್ಲೇಷಕನಾಗಿ ಕಾರ್ಯನಿರ್ವಹಿಸುತ್ತಿದ್ದ. ವರುಣ್ ಬಿಬಿಎ ಪದವೀಧರನಾಗಿದ್ದು, ಈ ಅಕ್ರಮ ಹುಕ್ಕಾ ಬಾರ್‌ನಲ್ಲಿ ಸಪ್ಲೈಯರ್ ಆಗಿ ಕೆಲಸ ಮಾಡುತ್ತಿದ್ದ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ. ರೆಸಾರ್ಟ್‌ಗೆ ಹೋಗುವ ಬದಲು ಸ್ವಂತ ಬಾರ್ ಆರಂಭ! ಪೊಲೀಸರ ತನಿಖೆಯ ವೇಳೆ ಆರೋಪಿಗಳು ನೀಡಿದ ಮಾಹಿತಿ ಬೆಚ್ಚಿಬೀಳಿಸುವಂತಿದೆ. ಅಜಿತ್ ಮತ್ತು ಆತನ ಸ್ನೇಹಿತರು ಹುಕ್ಕಾ ಸೇದಲು ನಿಯಮಿತವಾಗಿ ರಾಮನಗರಕ್ಕೆ ತೆರಳುತ್ತಿದ್ದರು. ಪ್ರತಿ ಬಾರಿಯೂ ತಲಾ 500…
ಸುಳ್ಯ: ಕಡೆಪಾಲ ಬಳಿ ನಿಗೂಢವಾಗಿ ಹತ್ಯೆಯಾಗಿದ್ದ ಫಾತಿಮಾ ನಿಶಾನ ಹತ್ಯೆ ಆರೋಪಿಗಳಿಗೆ ಪುತ್ತೂರು ಐದನೇ ಹೆಚ್ಚುವರಿ ಸತ್ರ ನ್ಯಾಯಾಲಯ ಶರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಜು.18 ರಂದು ರಾತ್ರಿ ಮಾವ ಅಲವಿ, ಅತ್ತೆ ಆಯಿಷಾ ಹಾಗೂ ನಾದಿನಿ ಫಸೀಲಾ ಹಿಂಸೆ ನೀಡಿ ಕೊಂದಿರುವ ಆರೋಪದ ಹಿನ್ನೆಲೆಯಲ್ಲಿ ಸುಳ್ಯ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದರು. ಬಳಿಕ ಸುಳ್ಯ ಹಿರಿಯ ನ್ಯಾಯಾಧೀಶರು ಮತ್ತು ಜೆಎಂಎಫ್ ಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದಾಗ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿತ್ತು. ಆಯಿಷಾ ಮತ್ತು ಫಸೀಲಾ ಪರವಾಗಿ ಪುತ್ತೂರು ಐದನೇ ಹೆಚ್ಚುವರಿ ಸತ್ರ ನ್ಯಾಯಾಲಯದಲ್ಲಿ ಜಾಮೀನಿಗಾಗಿ ಅರ್ಜಿ ಸಲ್ಲಿಸಲಾಗಿತ್ತು. ಈ ಅರ್ಜಿಯನ್ನು ನ್ಯಾಯಾಲಯ ಪುರಸ್ಕರಿಸಿದ್ದು, ಆರೋಪಿಗಳ ಪರವಾಗಿ ಸುಳ್ಯದ ಹಿರಿಯ ನ್ಯಾಯವಾದಿ ಎಂ.ವೆಂಕಪ್ಪ ಗೌಡ, ಚಂಪಾ ವಿ. ಗೌಡ, ರಾಜೇಶ್ ಬಿ.ಜಿ, ಶ್ಯಾಮ್ ಪ್ರಸಾದ್ ಎನ್. ಕೆ ಹಾಗೂ ವಿಮಲೇಶ್ ಆರ್. ಗೌಡ ವಾದಿಸಿದ್ದರು ಎಂದು ತಿಳಿದುಬಂದಿದೆ.
ಚಿತ್ರದುರ್ಗದ ರೇಣುಕಾಸ್ವಾಮಿ ಕೊ*ಲೆ ಪ್ರಕರಣದ ತನಿಖೆ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ಪ್ರಕರಣದಲ್ಲಿ ನಟ ದರ್ಶನ್ ಅವರೊಂದಿಗೆ ಬಂಧಿತರಾಗಿರುವ ಎ-5 ಜಗದೀಶ್ ಮತ್ತು ಎ-6 ಅನುಕುಮಾರ್ ಅವರು ನಟ ದರ್ಶನ್ ಪಡೆಯಿಂದ ದೂರ ಸರಿಯುವ ಸ್ಪಷ್ಟ ಮುನ್ಸೂಚನೆ ನೀಡಿದ್ದಾರೆ. ತಮ್ಮನ್ನು ಚಿತ್ರದುರ್ಗದ ಜಿಲ್ಲಾ ಜೈಲಿಗೆ ವರ್ಗಾಯಿಸುವಂತೆ ಕೋರಿ ಇಬ್ಬರೂ ಆರೋಪಿಗಳು ನ್ಯಾಯಾಲಯದ ಮೊರೆ ಹೋಗಿದ್ದಾರೆ. ಜೈಲು ಅಧಿಕಾರಿಗಳ ಮೌನ, ಕೋರ್ಟ್ ಮೆಟ್ಟಿಲೇರಿದ ಆರೋಪಿಗಳು ಚಿತ್ರದುರ್ಗ ಮೂಲದವರಾದ ಆರೋಪಿ ಜಗದೀಶ್ (A-6) ಹಾಗೂ ಅನುಕುಮಾರ್ (A-7), ತಮ್ಮನ್ನು ಸ್ವಂತ ಜಿಲ್ಲೆಯಾದ ಚಿತ್ರದುರ್ಗದ ಕಾರಾಗೃಹಕ್ಕೆ ವರ್ಗಾಯಿಸುವಂತೆ ಈ ಹಿಂದೆಯೂ ಜೈಲು ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದರು. ಆದರೆ, ಆರೋಪಿಗಳು ಸಲ್ಲಿಸಿದ್ದ ಅರ್ಜಿಗೆ ಜೈಲು ಆಡಳಿತ ಮಂಡಳಿಯಿಂದ ಯಾವುದೇ ಪ್ರತಿಕ್ರಿಯೆ ಅಥವಾ ಕ್ರಮ ತೆಗೆದುಕೊಂಡಿರಲಿಲ್ಲ. ಇದರಿಂದಾಗಿ, ತಮ್ಮ ವರ್ಗಾವಣೆ ಅರ್ಜಿಯನ್ನು ಪುರಸ್ಕರಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಜೈಲು ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಆರೋಪಿಗಳು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. 59ನೇ ಸಿಸಿಎಚ್ ನ್ಯಾಯಾಲಯದ ಮಹತ್ವದ ಆದೇಶ ಅರ್ಜಿಯ ವಿಚಾರಣೆ ನಡೆಸಿದ…
ಕಾರವಾರ: ಕದಂಬ ನೌಕಾನೆಲೆಯಲ್ಲಿ ಸೇಲರ್ ಆಗಿ ಕರ್ತವ್ಯ ನಿರ್ವಹಿಸುತಿದ್ದ ವ್ಯಕ್ತಿಯೊಬ್ಬರು ಇದ್ದಕ್ಕಿದ್ದಂತೆ ಕಾಣೆಯಾಗಿದ್ದಾರೆ. ಇದು ಸಾಕಷ್ಟು ಅನುಮಾನಕ್ಕೆ ಕಾರಣವಾಗಿದೆ. ಆಂದ್ರಪ್ರದೇಶದ ಅನಂತಪುರದ ಕುಂಟಿಮಡ್ಡಿ ಗ್ರಾಮದ ದಿನೇಶ್ ಕುಮಾರ್ (28) ಕಾಣೆಯಾದ ಸಿಬ್ಬಂದಿ. ಅ.27 ರಂದು ಕದಂಬ ನೌಕಾನೆಲೆಯಲ್ಲಿ ಕರ್ತವ್ಯ ನಿರ್ವಹಿಸುತಿದ್ದ ವೇಳೆ ಮಧ್ಯಾಹ್ನ 2 ಗಂಟೆ ವೇಳೆಗೆ ಅವರು ನಾಪತ್ತೆಯಾಗಿದ್ದರು. ಈ ಕುರಿತು ಕಾರವಾರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಹಿಂದಿನಿಂದಲೂ ಪಾಕಿಸ್ತಾನದ ಬೇಹುಗಾರಿಕಾ ತಂಡ ಹನಿಟ್ರ್ಯಾಪ್ ಮಾಡಿ ನೌಕಾ ಸಿಬ್ಬಂದಿ ಹಾಗೂ ಅಧಿಕಾರಿಗಳಿಂದ ಕದಂಬ ನೌಕಾನೆಲೆಯ ಮಾಹಿತಿಯನ್ನು ಪಡೆಯುತ್ತಿದ್ದರು. ಈ ಸಂಬಂಧ ಕಳೆದ ಎರಡು ವರ್ಷದಲ್ಲಿ ಇದೇ ನೌಕಾನೆಲೆಯ ನಾಲ್ಕು ಸಿಬ್ಬಂದಿಯನ್ನು ನೌಕಾದಳದ ಗುಪ್ತಚರ ಇಲಾಖೆ ಬಂಧಿಸಿತ್ತು. ಇದೀಗ ನೌಕೆಯಲ್ಲಿ ಕಾರ್ಯನಿರ್ವಹಿಸುವ ಈ ಸೇಲರ್ ಕದಂಬ ನೌಕಾ ನೆಲೆಯಿಂದ ಕಾಣೆಯಾಗಿರುವುದು ಸಾಕಷ್ಟು ಅನುಮಾನಕ್ಕೆ ಕಾರಣವಾಗಿದೆ. ನಾಪತ್ತೆಯಾದ ಸಿಬ್ಬಂದಿಗಾಗಿ ಶೋಧ ಕಾರ್ಯ ನಡೆಯುತ್ತಿದೆ.
ಸ್ಯಾಂಡಲ್‌ವುಡ್ ನಟ ‘ದುನಿಯಾ’ ವಿಜಯ್ ಹಾಗೂ ಅವರ ಪತ್ನಿ ನಾಗರತ್ನ ಅವರ ಸುದೀರ್ಘ ದಾಂಪತ್ಯ ಜೀವನಕ್ಕೆ ಕೊನೆಗೂ ಅಧಿಕೃತವಾಗಿ ತೆರೆ ಬಿದ್ದಿದೆ. ದಂಪತಿಯ ವಿಚ್ಛೇದನ ಅರ್ಜಿಯ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್ ವಿಭಾಗೀಯ ಪೀಠವು ಇಬ್ಬರಿಗೂ ವಿಚ್ಛೇದನ ಮಂಜೂರು ಮಾಡಿ ಆದೇಶ ಹೊರಡಿಸಿದೆ. ಇದರೊಂದಿಗೆ ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಇಬ್ಬರ ನಡುವಿನ ಕಾನೂನು ಸಮರಕ್ಕೆ ತೆರೆ ಬಿದ್ದಂತಾಗಿದೆ. ನ್ಯಾಯಮೂರ್ತಿ ಡಿ.ಕೆ. ಸಿಂಗ್ ಹಾಗೂ ನ್ಯಾಯಮೂರ್ತಿ ಶಾಂತಿಭೂಷಣ್ ಅವರನ್ನೊಳಗೊಂಡ ಉನ್ನತ ವಿಭಾಗೀಯ ಪೀಠವು ಈ ಪ್ರಮುಖ ತೀರ್ಪನ್ನು ನೀಡಿದೆ. ವಿಚ್ಛೇದನ ಮಂಜೂರು ಮಾಡುವ ಜೊತೆಗೆ, ಪತ್ನಿ ನಾಗರತ್ನ ಅವರಿಗೆ ₹2 ಕೋಟಿ ರೂಪಾಯಿ ಜೀವನಾಂಶ ಪಾವತಿಸುವಂತೆ ನಟ ದುನಿಯಾ ವಿಜಯ್ ಅವರಿಗೆ ಹೈಕೋರ್ಟ್ ನಿರ್ದೇಶನ ನೀಡಿದೆ. ವಿಜಯ್ ಅವರ ಸಮಾಜಿಕ ಸ್ಥಾನಮಾನ ಹಾಗೂ ಪ್ರಸ್ತುತ ಹಣಕಾಸಿನ ಸ್ಥಿತಿಗತಿಯನ್ನು ಸಮಗ್ರವಾಗಿ ಪರಿಗಣಿಸಿ ನ್ಯಾಯಪೀಠವು ಈ ಮೊತ್ತವನ್ನು ನಿಗದಿಪಡಿಸಿದೆ. ಇತ್ತೀಚೆಗಷ್ಟೇ ದುನಿಯಾ ವಿಜಯ್ ಅವರ ಪುತ್ರ ಕ್ಲಾಸ್‌ಮೇಟ್ ಮೇಲೆ ಹಲ್ಲೆ ನಡೆಸಿದ ಆರೋಪದಡಿ ಪ್ರಕರಣ…



