Author: admin

ಉಡುಪಿ  : ಕುಂದಾಪುರ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಈಶ್ವರಿ (18) ಎಂಬ ಯುವತಿಯು ಮಂಗಳೂರಿನ ಕೂಳೂರಿನಲ್ಲಿ ಕೆಲಸ ಮಾಡಿಕೊಂಡಿದ್ದು, ಈ ವಿಷಯ ತಿಳಿದ ಆಕೆಯ ಪೋಷಕರು ಕೂಳೂರಿನಿಂದ ಕುಕ್ಕಿಕಟ್ಟೆಗೆ ಕರೆದುಕೊಂಡು ಬಂದಿರುತ್ತಾರೆ. ಯುವತಿಯು ಹೆಚ್ಚಾಗಿ ಮೊಬೈಲ್ ಫೋನ್ ಬಳಕೆಮಾಡುತ್ತಿದ್ದರಿಂದ ಊರಿನಲ್ಲಿ ಬಿಟ್ಟರೆ ಸರಿಯಾಗಬಹುದೆಂದು ತಿಳಿದು ಪೋಷಕರು ಆಕೆಯೊಂದಿಗೆ ಆಗಸ್ಟ್ 25 ರಂದು ಕುಕ್ಕಿಕಟ್ಟೆಯಿಂದ ಹೊರಟು ಕುಂದಾಪುರ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣಕ್ಕೆ ರಾತ್ರಿ 10.30 ರ ಸುಮಾರಿಗೆ ಬಂದಿದ್ದು, ಯುವತಿಯು ವಾಶ್ ರೂಂ ಗೆ ಹೋಗಿ ಬರುವುದಾಗಿ ಹೇಳಿ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. ಯುವತಿಯು 4 ಅಡಿ 5 ಇಂಚು ಎತ್ತರ ಇದ್ದು, ಕನ್ನಡ, ತುಳು, ಹಿಂದಿ, ಇಂಗ್ಲೀಷ್ ಹಾಗೂ ತಮಿಳು ಭಾಷೆ ಮಾತನಾಡುತ್ತಾರೆ. ಯುವತಿಯ ಬಗ್ಗೆ ಮಾಹಿತಿ ದೊರೆತಲ್ಲಿ ಕುಂದಾಪುರ ಪೊಲೀಸ್ ಠಾಣೆ ದೂ.ಸಂಖ್ಯೆ: 08254-230338, ಕುಂದಾಪುರ ವಿಭಾಗ ಡಿ.ವೈ.ಎಸ್.ಪಿ ಮೊ.ನಂ: 9480805422, ಕುಂದಾಪುರ ಠಾಣೆಯ ಪಿ.ಐ ಮೊ.ನಂ: 9480805455, ಪಿ.ಎಸ್.ಐ ಮೊ.ನಂ: 8277988957 ಹಾಗೂ 8277988959 ಅನ್ನು…

Read More

ಮಂಗಳೂರು: ರಾಷ್ಟ್ರೀಯ ಹೆದ್ದಾರಿ-66ರ ವಿಸ್ತರಣೆಯ ಹಿನ್ನೆಲೆಯಲ್ಲಿ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಪ್ರವೇಶ ದ್ವಾರವನ್ನು ಸುರಕ್ಷಿತವಾಗಿ ಸ್ಥಳಾಂತರಿಸುವ ಕಾಮಗಾರಿ ನಡೆಯುತ್ತಿದ್ದು, ಈ ವಿಶಿಷ್ಟ ಎಂಜಿನಿಯರಿಂಗ್ ಕಾರ್ಯವನ್ನು ಎ.ಜೆ. ಇನ್‌ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿ (AJIET)ಯ ಸಿವಿಲ್ ಎಂಜಿನಿಯರಿಂಗ್ ವಿಭಾಗದ ಅಂತಿಮ ವರ್ಷದ ವಿದ್ಯಾರ್ಥಿಗಳು ತಾಂತ್ರಿಕವಾಗಿ ವೀಕ್ಷಿಸಿದರು. ಸಿವಿಲ್ ಎಂಜಿನಿಯರಿಂಗ್ ವಿಭಾಗದ ಸುಮಾರು 15 ಮಂದಿ ಅಂತಿಮ ವರ್ಷದ ವಿದ್ಯಾರ್ಥಿಗಳು ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿದ್ದು, ಅವರೊಂದಿಗೆ ಅಸೋಸಿಯೇಟ್ ಪ್ರೊಫೆಸರ್ ವಿನೋದ್ ಟಿ. ಡಿಸೋಜಾ ಹಾಗೂ ಅಸಿಸ್ಟೆಂಟ್ ಪ್ರೊಫೆಸರ್ ದೀಕ್ಷಾ ಆನಂದ್ ಉಪಸ್ಥಿತರಿದ್ದರು. ಯೋಜನೆಯ ತಾಂತ್ರಿಕ ಮಾರ್ಗದರ್ಶನ ನೀಡುತ್ತಿರುವ ಎಂಜಿನಿಯರ್ ಮುಲ್ಕಿ ಜೀವನ್ ಕೆ. ಶೆಟ್ಟಿ ಅವರು ವಿದ್ಯಾರ್ಥಿಗಳಿಗೆ ದ್ವಾರವನ್ನು ಸ್ಥಳಾಂತರಿಸುವ ಅಗತ್ಯತೆ, ಅದರ ಐತಿಹಾಸಿಕ ಹಾಗೂ ತಾಂತ್ರಿಕ ಮಹತ್ವ ಮತ್ತು ಕಾಮಗಾರಿಯಲ್ಲಿ ಅನುಸರಿಸಲಾಗುತ್ತಿರುವ ವಿವಿಧ ಹಂತಗಳ ಕುರಿತು ಮಾಹಿತಿ ನೀಡಿದರು. ಬಪ್ಪನಾಡು ದೇವಸ್ಥಾನದ ಪ್ರವೇಶ ದ್ವಾರಕ್ಕೆ ಯಾವುದೇ ಹಾನಿಯಾಗದಂತೆ ಹಾಗೂ ಅದರ ರಚನಾತ್ಮಕ ಸಮಗ್ರತೆಯನ್ನು ಕಾಪಾಡಿಕೊಂಡು ಸ್ಥಳಾಂತರಿಸುವುದು ಕಾಮಗಾರಿಯ ಪ್ರಮುಖ…

Read More

ಮೂಡುಬಿದಿರೆ: ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ ಆರು ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ ವಾರೆಂಟ್ ಜಾರಿಯಾಗಿದ್ದ ಆರೋಪಿಯನ್ನು ಮೂಡುಬಿದಿರೆ ಪೊಲೀಸರು ಬಂಧಿಸಿದ್ದಾರೆ. ಅಬೂಬಕರ್ ಅಲಿಯಾಸ್ ಅಬ್ದುಲ್ ಖಾದರ್ ಅಲಿಯಾಸ್ ಇತ್ತೆ ಬರ್ಪೆ ಅಬೂಬಕರ್ ಬಂಧಿತ ಆರೋಪಿ. ಮೂಡುಬಿದಿರೆ ಪೊಲೀಸ್ ಠಾಣೆಯ ವಾರೆಂಟ್ ಜಾರಿ ಕರ್ತವ್ಯದ ಹೆಡ್ ಕಾನ್‌ಸ್ಟೆಬಲ್ ರವೀಂದ್ರ, ಪೊಲೀಸ್ ಕಾನ್‌ಸ್ಟೆಬಲ್ ಲಿಂಗೇಶ್ ಹಾಗೂ ಕೋರ್ಟ್ ಪೊಲೀಸ್ ಕಾನ್‌ಸ್ಟೆಬಲ್ ರಮೇಶ್ ಅವರು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ನಂತರ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಸೆಪ್ಟೆಂಬರ್ 15ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ. ಆರೋಪಿಯ ವಿರುದ್ಧ ಕಾರ್ಕಳ ಗ್ರಾಮಾಂತರ, ಶಿರ್ವ, ಮುಲ್ಕಿ, ಬಸವನಹಳ್ಳಿ ಹಾಗೂ ಉಪ್ಪಿನಂಗಡಿ ಪೊಲೀಸ್ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿವೆ.

Read More

ನೆಲಮಂಗಲ: ನೆಲಮಂಗಲ ತಾಲೂಕಿನ ದಾಬಸ್‌ಪೇಟೆಯಲ್ಲಿ ಇತ್ತೀಚೆಗೆ ನಡೆದಿದ್ದ ಭೀಕರ ಜ್ಯುವೆಲರಿ ದರೋಡೆ  ಯತ್ನ ಹಾಗೂ ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ರಾಜಸ್ಥಾನ ಮತ್ತು ಉತ್ತರ ಪ್ರದೇಶದ ಶೂಟರ್‌ಗಳ ಕ್ರೈಂ ನೆಟ್‌ವರ್ಕ್ ನಂಟು ಬೆಳಕಿಗೆ ಬಂದಿದೆ. ಪ್ರಕರಣದ ತನಿಖೆ ಚುರುಕುಗೊಳಿಸಿದ್ದ ನೆಲಮಂಗಲ ಪೊಲೀಸರು ಆರೋಪಿಗಳ ಸುಳಿವು ಬೆನ್ನತ್ತಿ ಹೊರರಾಜ್ಯಗಳಲ್ಲಿ ತಲಾಶ್ ನಡೆಸುತ್ತಿದ್ದಾರೆ. ಏನಿದು ದರೋಡೆ ಪ್ರಕರಣ? ಕಳೆದ ಆಗಸ್ಟ್ 6ರಂದು ದಾಬಸ್‌ಪೇಟೆಯಲ್ಲಿದ್ದ ‘ಪ್ರೇಮ್ ಶಿವ ಜ್ಯುವೆಲರಿ’ ಅಂಗಡಿಗೆ ನುಗ್ಗಿದ್ದ ಸಶಸ್ತ್ರ ದರೋಡೆಕೋರರ ಗುಂಪು, ಜ್ಯುವೆಲರಿ ಮಾಲೀಕ ಕುನ್ನಾರಾಮ್ ಅವರ ಮೇಲೆ ಪಿಸ್ತೂಲ್‌ನಿಂದ ಗುಂಡು ಹಾರಿಸಿ ದರೋಡೆಗೆ ಯತ್ನಿಸಿತ್ತು. ಆದರೆ ಮಾಲೀಕ ಪ್ರತಿರೋಧ ಒಡ್ಡಿದ್ದರಿಂದ ಹೆದರಿದ ಆರೋಪಿಗಳು ತಕ್ಷಣವೇ ಸ್ಥಳದಿಂದ ಪರಾರಿಯಾಗಿದ್ದರು. ಈ ಘಟನೆ ಸ್ಥಳೀಯವಾಗಿ ತೀವ್ರ ಸಂಚಲನ ಸೃಷ್ಟಿಸಿತ್ತು. ಪ್ರಕರಣ ದಾಖಲಿಸಿಕೊಂಡ ನೆಲಮಂಗಲ ಪೊಲೀಸರು ವಿಶೇಷ ಪಡೆ ರಚಿಸಿ ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದರು. ತನಿಖೆ ವೇಳೆ ಈ ಪ್ರಕರಣದ ಪ್ರಮುಖ ಆರೋಪಿ ರಾಹುಲ್ ಎಂಬಾತನ ಕ್ರಿಮಿನಲ್ ಹಿನ್ನೆಲೆ ಬಯಲಾಗಿದೆ. ದಾಬಸ್‌ಪೇಟೆಯಲ್ಲಿ…

Read More

ಬುಲಂದ್‌ಶಹರ್ ಜಿಲ್ಲೆಯ ಜಿನಾಮಾಯಿ ಗ್ರಾಮದಲ್ಲಿ ರಾತ್ರಿ ವೇಳೆ ವಿವಾಹಿತ ಮಹಿಳೆಯನ್ನು ಭೇಟಿಯಾಗಲು ಬಂದ 28 ವರ್ಷದ ಯುವಕ ಪುಷ್ಪೇಂದ್ರ ಎಂಬಾತನನ್ನು ಮಹಿಳೆಯ ಪತಿ ಮತ್ತು ಆಕೆಯ ಚಿಕ್ಕಪ್ಪ ಸೇರಿ ದೊಣ್ಣೆಗಳಿಂದ ಹೊಡೆದು ಹತ್ಯೆ ಮಾಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಮೂವರ ವಿರುದ್ಧ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಬುಲಂದ್‌ಶಹರ್‌ನ ಜಿನಾಮಾಯಿ ಗ್ರಾಮದಲ್ಲಿ ಸೋಮವಾರ ರಾತ್ರಿ ಈ ರಕ್ತಸಿಕ್ತ ಘಟನೆ ನಡೆದಿದೆ.ಮೂಲಗಳ ಪ್ರಕಾರ, ಪುಷ್ಪೇಂದ್ರ ಎಂಬ ಯುವಕ ರಾತ್ರಿಯ ವೇಳೆ ಗ್ರಾಮದ ವಿವಾಹಿತ ಮಹಿಳೆಯ ಮನೆಗೆ ತೆರಳಿದ್ದಾಗ ಆಕೆಯ ಪತಿ ಮತ್ತು ಚಿಕ್ಕಪ್ಪ ಆತನನ್ನು ತಡೆದು ಹಿಗ್ಗಾಮುಗ್ಗಾ ಹಲ್ಲೆ ನಡೆಸಿದ್ದಾರೆ.ತೀವ್ರ ಗಾಯಗೊಂಡ ಪುಷ್ಪೇಂದ್ರ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಮಂಗಳವಾರ ಬೆಳಿಗ್ಗೆ ಘಟನೆಯ ಕುರಿತು ಮಾಹಿತಿ ತಿಳಿದ ತಕ್ಷಣವೇ ಅನೂಪ್‌ಶಹರ್ ಸರ್ಕಲ್ ಆಫೀಸರ್ ಹಾಗೂ ಛತಾರಿ ಪೊಲೀಸ್ ಠಾಣೆಯ ಸಿಬ್ಬಂದಿ ಮತ್ತು ಫೋರೆನ್ಸಿಕ್ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿದ್ದಾರೆ. ಈ ಸಂಬಂಧ ಗ್ರಾಮೀಣ ಎಸ್ಪಿ ಅಂತರಿಕ್ಷ್ ಜೈನ್ ಮಾತನಾಡಿ, ‘ಆರೋಪಿಗಳ…

Read More

ಝಡ್ ಶ್ರೇಣಿಯ ಭದ್ರತೆ ಹೊಂದಿರುವ ಕೇಂದ್ರ ಸಚಿವ ಹಾಗೂ ಲೋಕ ಜನಶಕ್ತಿ ಪಾರ್ಟಿ (ರಾಮ್ ವಿಲಾಸ್) ಅಧ್ಯಕ್ಷ ಚಿರಾಗ್ ಪಾಸ್ವಾನ್ ಅವರಿಗೆ ಇಂದು (ಸೆಪ್ಟೆಂಬರ್ 1) ಅಂಚೆ ಮೂಲಕ ಬಂದ ಅನಾಮಧೇಯ ಪತ್ರವೊಂದರಲ್ಲಿ ‘ತೀವ್ರಗಾಮಿ ಉಗ್ರರು ಶೀಘ್ರದಲ್ಲೇ ನಿಮ್ಮನ್ನು ಕೊಲೆ ಮಾಡುತ್ತಾರೆ’ ಎಂದು ಜೀವ ಬೆದರಿಕೆ ಹಾಕಲಾಗಿದೆ. ಈ ಬೆದರಿಕೆ ಪತ್ರ ಬಂದ ತಕ್ಷಣ ಅದನ್ನು ಗಂಭೀರವಾಗಿ ಪರಿಗಣಿಸಿರುವ ಚಿರಾಗ್ ಪಾಸ್ವಾನ್ ಅವರ ಕಚೇರಿ ಕೇಂದ್ರ ಗೃಹ ಕಾರ್ಯದರ್ಶಿಯವರಿಗೆ ಪತ್ರ ಬರೆದಿದೆ. ಈ ಬೆದರಿಕೆ ಪತ್ರದ ಮೂಲ ಮತ್ತು ಸತ್ಯಾಸತ್ಯತೆಯನ್ನು ತುರ್ತಾಗಿ ತನಿಖೆ ಮಾಡುವಂತೆ ಹಾಗೂ ಸಚಿವರ ಭದ್ರತಾ ವ್ಯವಸ್ಥೆಯನ್ನು ಮರುಪರಿಶೀಲಿಸುವಂತೆ ಕೋರಿದೆ. ಕೇಂದ್ರ ಗೃಹ ಕಾರ್ಯದರ್ಶಿಯವರಿಗೆ ಬರೆದಿರುವ ಪತ್ರದಲ್ಲಿ ಚಿರಾಗ್ ಪಾಸ್ವಾನ್ ಅವರ ಹೆಚ್ಚುವರಿ ವೈಯಕ್ತಿಕ ಕಾರ್ಯದರ್ಶಿ ಆಲೋಕ್ ಕುಮಾರ್, “ಕೇಂದ್ರ ಗೃಹ ಸಚಿವಾಲಯದಿಂದ ಝಡ್ ಶ್ರೇಣಿಯ ಭದ್ರತೆ ಪಡೆಯುತ್ತಿರುವ ಕೇಂದ್ರ ಆಹಾರ ಸಂಸ್ಕರಣಾ ಉದ್ಯಮಗಳ ಸಚಿವರ ವೈಯಕ್ತಿಕ ಭದ್ರತೆಗೆ ಸಂಬಂಧಿಸಿದ ಗಂಭೀರ ವಿಚಾರವನ್ನು ನಿಮ್ಮ ತುರ್ತು ಗಮನಕ್ಕೆ ತರಲು…

Read More

ಬೆಂಗಳೂರು: ಸ್ಯಾಂಡಲ್‌ವುಡ್ ನಟ ‘ದುನಿಯಾ’ ವಿಜಯ್ ಅವರ ಪುತ್ರ ಸಾಮ್ರಾಟ್ ವಿರುದ್ಧ ಹಲ್ಲೆ ಹಾಗೂ ಅಪಹರಣ ಆರೋಪ ಕೇಳಿಬಂದಿದೆ. ಕಾರು ಓವರ್‌ಟೇಕ್ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ತನ್ನ ಸಹಪಾಠಿಯನ್ನೇ ಕಾರಿನಲ್ಲಿ ಎಳೆದೊಯ್ದು ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಲಾಗಿದೆ. ಘಟನೆಯಲ್ಲಿ ಗಾಯಗೊಂಡ ಮನೀಶ್ ಗೌಡ ಎಂಬ ಯುವಕ ಪ್ರಸ್ತುತ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಕೆಂಗೇರಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ನಿನ್ನೆ ಸಂಜೆ ನಟ ವಿಜಯ್ ಪುತ್ರ ಸಾಮ್ರಾಟ್ ಹಾಗೂ ಆತನ ಸ್ನೇಹಿತರು ಜಿಪ್ಸಿ  ಕಾರಿನಲ್ಲಿ ತೆರಳುತ್ತಿದ್ದರು. ಈ ವೇಳೆ ರಾಜರಾಜೇಶ್ವರಿನಗರದಲ್ಲಿ ಮನೀಶ್ ಗೌಡ ಮತ್ತು ಆತನ ಸ್ನೇಹಿತರು ತಮ್ಮ ಐ20 ಕಾರಿನಲ್ಲಿ ಸಾಮ್ರಾಟ್ ಚಲಾಯಿಸುತ್ತಿದ್ದ ಕಾರನ್ನು ಓವರ್‌ಟೇಕ್ ಮಾಡಿದ್ದರು. ಈ ವಿಚಾರಕ್ಕೆ ಇಬ್ಬರ ನಡುವೆ ಸಣ್ಣ ಗಲಾಟೆಯಾಗಿತ್ತು. ನಿನ್ನೆಯ ಗಲಾಟೆಯ ಹಿನ್ನೆಲೆಯಲ್ಲಿ, ಇಂದು ಮಧ್ಯಾಹ್ನ ಮೈಸೂರು ರಸ್ತೆಯ ಆರ್‌ವಿ ಯೂನಿವರ್ಸಿಟಿ ಹೊರಭಾಗದಲ್ಲಿದ್ದ ಮನೀಶ್ ಗೌಡನನ್ನು ಸಾಮ್ರಾಟ್ ಹಾಗೂ ಆತನ ಕಡೆಯವರು ಬಲವಂತವಾಗಿ ಕಾರಿನಲ್ಲಿ ಎಳೆದೊಯ್ದು ತೀವ್ರವಾಗಿ ಹಲ್ಲೆ ನಡೆಸಿದ್ದಾರೆ ಎಂದು…

Read More

ಮಂಗಳೂರು : ಕೇರಳ ಲಾಟರಿ ಚೀಟಿಯಲ್ಲಿ 8 ಲಕ್ಷ ರೂಪಾಯಿ ಬಹುಮಾನ ಬಂದಿದೆ ಎಂದು ನಂಬಿಸಿ ಸೈಬರ್ ವಂಚಕರು ವ್ಯಕ್ತಿಯೊಬ್ಬರಿಂದ ಹಂತ ಹಂತವಾಗಿ ಒಟ್ಟು 3.81 ಲಕ್ಷಕ್ಕೂ ಅಧಿಕ ಹಣ ವರ್ಗಾಯಿಸಿಕೊಂಡು ಮೋಸ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಸಂತ್ರಸ್ತ 42 ವರ್ಷದ ವ್ಯಕ್ತಿ ನೀಡಿದ ದೂರಿನನ್ವಯ ಸೈಬರ್ ಕ್ರೈಮ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆಗಸ್ಟ್ 14ರಂದು ಅಪರಿಚಿತ ವ್ಯಕ್ತಿಯೊಬ್ಬ ಸಂತ್ರಸ್ತರ ಮೊಬೈಲ್‌ಗೆ (9572768071) ಕರೆ ಮಾಡಿ, “ನಿಮ್ಮ ಹೆಸರಿಗೆ ಕೇರಳ ಲಾಟರಿಯಲ್ಲಿ 8,00,000 ರೂಪಾಯಿ ಹಣ ಬಂದಿದೆ,” ಎಂದು ನಂಬಿಸಿದ್ದಾನೆ. ಆ ಬಹುಮಾನದ ಹಣವನ್ನು ಪಡೆಯಬೇಕಾದರೆ ಆದಾಯ ತೆರಿಗೆ ಹಾಗೂ ಪ್ರಕ್ರಿಯೆ ವೆಚ್ಚ (Tax & Processing fees) ಪಾವತಿಸಬೇಕೆಂದು ತಿಳಿಸಿದ್ದಾನೆ. ಅಪರಿಚಿತರ ಮಾತುಗಳನ್ನು ನಿಜವೆಂದು ನಂಬಿದ ಸಂತ್ರಸ್ತರು, ಆಗಸ್ಟ್ 15 ರಿಂದ ಆಗಸ್ಟ್ 26ರ ವರೆಗೆ ವಿವಿಧ ಹಂತಗಳಲ್ಲಿ ವಂಚಕರು ಕಳುಹಿಸಿದ ವಾಟ್ಸಾಪ್ ಕ್ಯೂಆರ್ ಕೋಡ್, ಗೂಗಲ್ ಪೇ ಹಾಗೂ ಫೋನ್ ಪೇ ಸ್ಕ್ಯಾನರ್‌ಗಳಿಗೆ ಒಟ್ಟು 3,81,300 ರೂಪಾಯಿ…

Read More

ಪುತ್ತೂರು: ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಹಾಗೂ ಕಾಂಗ್ರೆಸ್ ಕಾರ್ಯಕರ್ತ ಹಕೀಂ ಕೂರ್ನಡ್ಕ ನಡುವಿನ ಜಟಾಪಟಿ ಮತ್ತಷ್ಟು ತೀವ್ರಗೊಂಡಿದ್ದು, ಶಾಸಕರು ರೌಡಿಗಳನ್ನು ಬಿಟ್ಟು ತಮ್ಮ ಕೊಲೆಗೆ ಯತ್ನಿಸಿದ್ದಾರೆ ಎಂದು ಹಕೀಂ ಗಂಭೀರ ಆರೋಪ ಮಾಡಿದ್ದಾರೆ. ಪುತ್ತೂರು ಪ್ರೆಸ್ ಕ್ಲಬ್‌ನಲ್ಲಿ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಾಸಕ ಅಶೋಕ್ ರೈ ಅವರ ನಡೆ ಹಾಗೂ ಪಕ್ಷವಿರೋಧಿ ಚಟುವಟಿಕೆಗಳ ವಿರುದ್ಧ ಸರಣಿ ಆರೋಪಗಳ ಸುರಿಮಳೆಗರೆದರು. ಪುತ್ತೂರು ಶಾಸಕರು ಜಲೀಲ್ ಕರೋಪಾಡಿ ಕೊಲೆ ಆರೋಪಿ, ಬೆಳ್ಳಾರೆಯ ಮಸೂದ್ ಕೊಲೆ ಆರೋಪಿಗಳನ್ನು ಇಟ್ಟುಕೊಂಡು ತಿರುಗಾಡುತ್ತಿದ್ದಾರೆ. ಇಂಥವರನ್ನು ಇಟ್ಟುಕೊಂಡು ಕಾಂಗ್ರೇಸ್ ಪಕ್ಷ ಸಂಘಟಿಸಲು ಸಾಧ್ಯವಿದೆಯೇ. ಇದನ್ನು ನಾನು ಪ್ರಶ್ನಿಸಿದಕ್ಕೆ ನನ್ನ ವಿರುದ್ಧ ಶಾಸಕರು ತಮ್ಮ ಗೂಂಡಾಗಳನ್ನು ಬಿಟ್ಟು ಬೆದರಿಸುವ ಪ್ರಯತ್ನ ಮಾಡಿದರು. ಆದರೆ ಇಂತಹ ಬೆದರಿಕೆಗಳಿಗೆ ಬಗ್ಗುವ ವ್ಯಕ್ತಿ ನಾನಲ್ಲ ಎಂದ ಅವರು ನನ್ನನ್ನು ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಶ್ಯಕ್ಷ ಕೃಷ್ಣಪ್ರಸಾದ್ ಆಳ್ವ ಕಾಂಗ್ರೆಸ್ ಕಾರ್ಯಕರ್ತನೇ ಅಲ್ಲ ಎಂದಿದ್ದಾರೆ. ನಾನು ಕಳೆದ ಬಾರಿ ನಡೆದ ಚುನಾವಣೆಯಲ್ಲಿ ಅಶೋಕ್…

Read More

ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಗಮ ನಿಯಮಿತ (ಕೆಆರ್‌ಐಡಿಎಲ್) ಸಂಸ್ಥೆಯ ಇಂಜಿನಿಯರ್‌ಗಳು ಉಸ್ತುವಾರಿ ಸಚಿವರ ಹೆಸರಿನಲ್ಲಿ ಕಮಿಷನ್ ಪಡೆಯುತ್ತಿದ್ದಾರೆ ಎಂಬ ಪುತ್ತೂರು ಶಾಸಕ ಅಶೋಕ್ ರೈ ಅವರ ಆರೋಪವನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವ ಈಶ್ವರ ಬಿ. ಖಂಡ್ರೆ ಗಂಭೀರವಾಗಿ ಪರಿಗಣಿಸಿದ್ದು, ಈ ಬಗ್ಗೆ ತನಿಖೆ ನಡೆಸುವಂತೆ ಸೂಚಿಸಿದ್ದಾರೆ. ಉಸ್ತುವಾರಿ ಸಚಿವರು ಅಥವಾ ಇಲಾಖೆಯ ಸಚಿವರ ಹೆಸರಿನಲ್ಲಿ ಇಲಾಖೆಯ ಸಿಬ್ಬಂದಿ ಅಥವಾ ಅಧಿಕಾರಿಗಳು ಹಣ ವಸೂಲಿ ಮಾಡಿರುವುದು ಸಾಬೀತಾದರೆ ನಿರ್ದಾಕ್ಷಿಣ್ಯವಾಗಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಎಚ್ಚರಿಕೆ ನೀಡಿದ್ದಾರೆ. ಮಂಗಳೂರು ಕೆಆರ್‌ಐಡಿಎಲ್‌ನ ಕಾರ್ಯನಿರ್ವಾಹಕ ಇಂಜಿನಿಯರ್ ಮತ್ತು ಕಿರಿಯ ಇಂಜಿನಿಯರ್ ವಿರುದ್ಧದ ಭ್ರಷ್ಟಾಚಾರ ಆರೋಪಗಳಲ್ಲಿ ಸತ್ಯಾಂಶವಿದೆಯೇ ಎಂಬುದನ್ನು ಪರಿಶೀಲಿಸಲು ಸೂಪರಿಂಟೆಂಡೆಂಟ್ ಇಂಜಿನಿಯರ್ ದರ್ಜೆಯ ಅಧಿಕಾರಿಯ ನೇತೃತ್ವದಲ್ಲಿ ತ್ರಿಸದಸ್ಯ ತನಿಖಾ ತಂಡ ರಚಿಸಲಾಗಿದೆ. ಆರೋಪ ಸತ್ಯವೆಂದು ಕಂಡುಬಂದರೆ ಶಿಸ್ತು ಕ್ರಮಕ್ಕೆ ಶಿಫಾರಸು ಸೇರಿದಂತೆ ಏಳು ದಿನಗಳೊಳಗೆ ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ. ಇದೇ ವೇಳೆ, ಕೆಆರ್‌ಐಡಿಎಲ್ ವ್ಯವಸ್ಥಾಪಕ ನಿರ್ದೇಶಕರು ಕಮಿಷನ್…

Read More