Author: admin

ಪುಣೆ: ಕೆಲವು ತಿಂಗಳುಗಳ ಹಿಂದೆ ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದ್ದ ‘ಮೇಘಾಲಯ ಹನಿಮೂನ್ ಮರ್ಡರ್’ ಮಾದರಿಯಲ್ಲೇ ಮಹಾರಾಷ್ಟ್ರದ ಪುಣೆಯಲ್ಲಿ ಮತ್ತೊಂದು ಘೋರ ಹತ್ಯೆ ನಡೆದಿದೆ. ₹17 ಕೋಟಿ ವೆಚ್ಚದ ಅದ್ಧೂರಿ ವಿವಾಹ ನಿಶ್ಚಿತವಾಗಿದ್ದ ಕೋಟ್ಯಧಿಪತಿ ಉದ್ಯಮಿಯೊಬ್ಬರ ಮಗನನ್ನು ತನ್ನ ಪ್ರಿಯಕರನೊಂದಿಗೆ ಸೇರಿ 400 ಅಡಿ ಆಳದ ಪ್ರಪಾತಕ್ಕೆ ತಳ್ಳಿ ಕೊಲೆ ಮಾಡಲಾಗಿದ್ದು. ಈ ಪ್ರಕರಣ ಬೆಳಕಿಗೆ ಬರಲು ಕಾರಣವಾಗಿದ್ದು, ಕೊಲೆಗಾತಿಯ ಪ್ರಿಯಕರ ಧರಿಸಿದ್ದ ಹೂಡೀ ಶರ್ಟ್. ಜೂನ್ 18 ರಂದು ಲೋಹಾಗಢ ಕೋಟೆಯ ಬಳಿಯ ಕಂದಕದಲ್ಲಿ 26 ವರ್ಷದ ಯುವ ಉದ್ಯಮಿ ಕೇತನ್ ವಿಶಾಲ್ ಅಗರ್ವಾಲ್ ಶವ ಪತ್ತೆಯಾಗಿತ್ತು. ಆರಂಭದಲ್ಲಿ ಇದನ್ನು ಆಕಸ್ಮಿಕ ಸಾವು ಎಂದು ಬಿಂಬಿಸಲಾಗಿದ್ದರೂ, ಪೊಲೀಸರ ಚಾಣಾಕ್ಷ ತನಿಖೆಯಿಂದಾಗಿ ಇದು ಪೂರ್ವನಿಯೋಜಿತ ಕೊಲೆ ಎಂಬುದು ಸಾಬೀತಾಗಿದೆ. ಘಟನೆಗೆ ಸಂಬಂಧಿಸಿದಂತೆ ಮೃತನ ಭಾವಿ ಪತ್ನಿ ಸಿಯಾ ಗೋಯೆಲ್ (20) ಮತ್ತು ಆಕೆಯ ಪ್ರಿಯಕರ ಚೇತನ್ ಬಾಬುಲಾಲ್ ಚೌಧರಿ (22) ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ. ಮೃತ ಕೇತನ್ ಅಗರ್ವಾಲ್ ಪುಣೆಯ ಪ್ರಸಿದ್ಧ…

Read More

ಮಂಗಳೂರು:ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತ ಬಾಲಕಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಬೆಳಕಿಗೆ ಬಂದಿದೆ. ಪ್ರೀತಿಯ ಹೆಸರಿನಲ್ಲಿ ವಂಚನೆ ಹಾಗೂ ದೈಹಿಕ ಶೋಷಣೆಗೆ ಒಳಗಾಗಿದ್ದ ಹಿನ್ನೆಲೆಯಲ್ಲಿ ಬಾಲಕಿ ಈ ಕಠಿಣ ನಿರ್ಧಾರ ಕೈಗೊಂಡಿದ್ದಾಳೆ ಎಂಬ ಆರೋಪ ಕೇಳಿಬಂದಿದೆ. ಮಾಹಿತಿಯ ಪ್ರಕಾರ, ಏಪ್ರಿಲ್ 23ರಂದು ಸಂಜೆ ಸುಮಾರು 4 ಗಂಟೆ ವೇಳೆಗೆ ಬಾಲಕಿ ತನ್ನ ನಿವಾಸದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಘಟನೆಯ ಬಳಿಕ ಸ್ಥಳದಲ್ಲಿ ಪೋಷಕರಿಗೆ ಉದ್ದೇಶಿಸಿ ಬರೆದ ಡೆತ್ ನೋಟ್ ಪತ್ತೆಯಾಗಿದ್ದು, ಅದರಲ್ಲಿ ಯುವಕನ ವಿರುದ್ಧ ಗಂಭೀರ ಆರೋಪಗಳನ್ನು ದಾಖಲಿಸಿರುವುದಾಗಿ ತಿಳಿದುಬಂದಿದೆ. ಡೆತ್ ನೋಟ್‌ನಲ್ಲಿ, “ನಾನು ದೊಡ್ಡ ತಪ್ಪು ಮಾಡಿದ್ದೇನೆ. ಆದರೆ ಅವನು ಮಾತ್ರ ಸಂತೋಷದಿಂದ ಇದ್ದಾನೆ. ಅವನು ಹಿಂದೂ ಸಂಘಟನೆಗಳ ಜೊತೆಗಿದ್ದರೂ ನನಗೆ ಯಾವುದೇ ಸಹಾಯ ದೊರಕಲಿಲ್ಲ” ಎಂದು ಬಾಲಕಿ ಉಲ್ಲೇಖಿಸಿದ್ದಾಳೆ ಎಂದು ಮೂಲಗಳು ತಿಳಿಸಿವೆ. ಬಾಲಕಿಯ ಸಾವಿನ ನಂತರ ರಾತ್ರಿ ವೇಳೆ ಪೋಷಕರು ಸುರತ್ಕಲ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ತಮ್ಮ ಮಗಳ ಸಾವಿಗೆ ಅನೀಶ್ ಪೂಜಾರಿ…

Read More