Author: admin

ಬೆಂಗಳೂರು: ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ಅವರು ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಹಾಗೂ ಕೆಪಿಸಿಸಿ ಅಧ್ಯಕ್ಷ ಬಿಕೆ ಹರಿಪ್ರಸಾದ್‌ ಅವರ ಜೊತೆ ನಡೆದ ಸುದೀರ್ಘ ಮನವೊಲಿಕೆಯ ಬಳಿಕ ಅವರು ಈ ನಿರ್ಧಾರ ಕೈಗೊಂಡಿದ್ದಾರೆ. ಆಗಸ್ಟ್ 14 ರಂದು ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡಲು ಬಸವರಾಜ ಹೊರಟ್ಟಿ ತೀರ್ಮಾನಿಸಿದ್ದರು. ಈಗ ಯಾವುದೇ ಒತ್ತಡವಿಲ್ಲದೆ, ಸಂಪೂರ್ಣ ಸ್ವಇಚ್ಛೆಯಿಂದಲೇ ತಾವು ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡಿರುವುದಾಗಿ ಹೊರಟ್ಟಿ ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದಾರೆ. ನೂತನ ಸಭಾಪತಿ ಆಯ್ಕೆಯಾಗುವವರೆಗೆ ಬಸವರಾಜ ಹೊರಟ್ಟಿ ಅವರೇ ಹಂಗಾಮಿ ಸಭಾಪತಿಯಾಗಿ ಕಾರ್ಯನಿರ್ವಹಿಸಲಿದ್ದಾರೆ. ಮೇಲ್ಮನೆಯಲ್ಲಿ ಆಡಳಿತರೂಢ ಕಾಂಗ್ರೆಸ್‌ ಬಲ ಹೆಚ್ಚಿರುವುದರಿಂದ ಸಭಾಪತಿ ಸ್ಥಾನಕ್ಕೆ ಸಲೀಂ ಅಹ್ಮದ್, ಉಪ ಸಭಾಪತಿ ಸ್ಥಾನಕ್ಕೆ ಉಮಾಶ್ರೀ ಅವರ ಹೆಸರನ್ನು ಕಾಂಗ್ರೆಸ್ ವರಿಷ್ಠರು ಈಗಾಗಲೇ ಅಂತಿಮಗೊಳಿಸಿದ್ದಾರೆ.

Read More

ಅಯೋಧ್ಯೆ: ಅಯೋಧ್ಯೆ ಯ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನಲ್ಲಿ ಬೃಹತ್ ಮಟ್ಟದ ಆರ್ಥಿಕ ಅಕ್ರಮ ಅಥವಾ ದೇಣಿಗೆ ಹಗರಣ ನಡೆದಿದೆ ಎಂಬ ಆರೋಪಗಳು ಸಂಪೂರ್ಣವಾಗಿ ಆಧಾರರಹಿತ ಎಂದು ಸರ್ಕಾರಿ ಉನ್ನತ ಮೂಲಗಳು ಸ್ಪಷ್ಟಪಡಿಸಿವೆ. ಭಕ್ತರು ನೀಡಿದ 3,300 ಕೋಟಿ ರೂ. ದೇಣಿಗೆ ಹಣದ ಪ್ರತಿಯೊಂದು ಪೈಸೆಯೂ ಸುರಕ್ಷಿತವಾಗಿದ್ದು, ಸಂಪೂರ್ಣವಾಗಿ ಲೆಕ್ಕಪರಿಶೋಧನೆಗೊಳಪಟ್ಟಿದೆ ಎಂದು ತಿಳಿಸಲಾಗಿದೆ. ಟ್ರಸ್ಟ್‌ನ ಆಡಳಿತ ವ್ಯವಸ್ಥೆಯಲ್ಲಿ ಯಾವುದೇ ಅಕ್ರಮ ನಡೆದಿಲ್ಲ, ಬದಲಿಗೆ ಹುಂಡಿಯಲ್ಲಿರುವ ನಗದು ಎಣಿಕೆ ಮಾಡುವ ಸಂದರ್ಭದಲ್ಲಿ ನಡೆದ ಪ್ರತ್ಯೇಕ ಕಳ್ಳತನ ಇದಾಗಿದೆ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ಗೆ ಸಾರ್ವಜನಿಕರಿಂದ ಹರಿದುಬಂದಿರುವ 3,300 ಕೋಟಿ ರೂ. ದೇಣಿಗೆಯನ್ನು ‘ಮೆಸರ್ಸ್ ವಿ. ಶಂಕರ್ ಅಯ್ಯರ್ ಆ್ಯಂಡ್ ಕಂಪನಿ’ ಎಂಬ ಸ್ವತಂತ್ರ ಬಾಹ್ಯ ಆಡಿಟರ್ಸ್ ಸಂಸ್ಥೆಯು ಸಂಪೂರ್ಣವಾಗಿ ತಪಾಸಣೆ ಮಾಡಿದೆ. ದೇವಾಲಯ ನಿರ್ಮಾಣಕ್ಕಾಗಿ ಸುಮಾರು1,800 ಕೋಟಿ ರೂ. ಹಾಗೂ ಭೂ ಖರೀದಿಗಾಗಿ 400 ಕೋಟಿ ರೂ. ವೆಚ್ಚ ಮಾಡಲಾಗಿದೆ. ಪ್ರತಿಯೊಂದು ವಹಿವಾಟನ್ನೂ…

Read More

ಸುಳ್ಯ:ಚೆಂಬು ಅರಣ್ಯ ವ್ಯಾಪ್ತಿಯಲ್ಲಿ ಕಾಡು ಪ್ರಾಣಿ ಯನ್ನು ಬೇಟೆಯಾಡಿ ಮಾಂಸ ಮಾಡಿದ ಆರೋಪದ ಮೇಲೆ ಕೊಡಗು ಕೊಯನಾಡು ಅರಣ್ಯ ಅಧಿಕಾರಿಗಳು ಬುಧವಾರ ಇಬ್ಬರನ್ನು ಬಂಧಿಸಿದ್ದಾರೆ. ಆರೋಪಿಗಳನ್ನು ಚೆಂಬುವಿನ ಗೌತಮ್, ಪೆರಾಜೆಯ ಶರತ್ ಮತ್ತು ಕಾಡುಪಂಜದ ಯತಿನ್ ಎಂದು ಗುರುತಿಸಲಾಗಿದೆ. ಅರಣ್ಯ ಅಧಿಕಾರಿಗಳ ಪ್ರಕಾರ, ಕೊಡಗು ಅರಣ್ಯ ವ್ಯಾಪ್ತಿಗೆ ಬರುವ ಚೆಂಬು ಕಾಡಿನ ಕಾಡುಪಂಜದಲ್ಲಿ ಆರೋಪಿಗಳು ಬಂದೂಕಿನಿಂದ ಕಾಡುಹಂದಿಯನ್ನು ಬೇಟೆಯಾಡಿ ಕೊಂದಿದ್ದಾರೆ. ನಂತರ ಅವರು ಮಾಂಸವನ್ನು ಪ್ಲಾಸ್ಟಿಕ್ ಚೀಲಗಳಲ್ಲಿ ಪ್ಯಾಕ್ ಮಾಡಿ ಕೆಎ -12 ನೋಂದಾಯಿತ ಮಾರುತಿ ಇಕೊ ಕಾರಿನಲ್ಲಿ ಕಲ್ಲುಗುಂಡಿ ಬಳಿಯ ಕೈಪಡ್ಕ್‌ಗೆ ಸಾಗಿಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಅರಣ್ಯ ಇಲಾಖೆ ಸಿಬ್ಬಂದಿ ವಾಹನವನ್ನು ತಡೆದು ಕಾಡುಹಂದಿ ಮಾಂಸ, ಅಪರಾಧಕ್ಕೆ ಬಳಸಿದ ಬಂದೂಕು ಮತ್ತು ಕಾರನ್ನು ವಶಪಡಿಸಿಕೊಂಡರು. ಗೌತಮ್ ಮತ್ತು ಶರತ್ ಅವರನ್ನು ಬಂಧಿಸಲಾಗಿದ್ದು, ಮೂರನೇ ಆರೋಪಿ ಕಾಡುಪಂಜದ ಯಾತಿನ್ ತಲೆಮರೆಸಿಕೊಂಡಿದ್ದಾನೆ. ಆತನನ್ನು ಪತ್ತೆಹಚ್ಚಲು ಮತ್ತು ಬಂಧಿಸಲು ಶೋಧ ಕಾರ್ಯ ನಡೆಸುತ್ತಿದ್ದಾರೆ. ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ (ಎಸಿಎಫ್)…

Read More

ಶಾ ಆಲಂ: ಕಾಲೇಜು ವಿದ್ಯಾರ್ಥಿನಿಯೊಬ್ಬಳು ಕಳೆದ ಕೆಲವು ತಿಂಗಳುಗಳಿಂದ ಯಾರೋ ತನ್ನನ್ನು ಹಿಂಬಾಲಿಸುತ್ತಿದ್ದಾರೆ, ತನ್ನ ಚಲನವಲನಗಳನ್ನು ಗಮನಿಸುತ್ತಿದ್ದಾರೆ ಎಂಬ ಭೀತಿಯಲ್ಲಿದ್ದಳು. ಆದರೆ, ತನ್ನ ಮನೆಯ ಹೊರಗಿನ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ ಆಕೆಗೆ ಎದುರಾದ ಸತ್ಯ ಆಘಾತಕಾರಿ ಮಾತ್ರವಲ್ಲ, ಅತ್ಯಂತ ವಿಚಿತ್ರವಾಗಿತ್ತು. ಯುವಕನೊಬ್ಬ ಅಪಾರ್ಟ್‌ಮೆಂಟ್ ಗ್ರಿಲ್ ಮೂಲಕ ಕೈಹಾಕಿ, ಆಕೆಯ ಶೂಗಳನ್ನು  ಹೊರತೆಗೆದು ವಾಸನೆ ನೋಡುತ್ತಿರುವುದು ಸಿಸಿಟಿವಿ ಕ್ಯಾಮೆರಾದಲ್ಲಿ ಸ್ಪಷ್ಟವಾಗಿ ಸೆರೆಯಾಗಿತ್ತು. ಮಲೇಷ್ಯಾದ ಶಾ ಅಲಂನಲ್ಲಿ ನಡೆದ ಈ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಮಾನಸಿಕ ವೈಪರೀತ್ಯ ಮತ್ತು ಸೈಬರ್ ಅಪರಾಧದ ಕುರಿತು ದೊಡ್ಡ ಚರ್ಚೆಯನ್ನು ಹುಟ್ಟುಹಾಕಿದೆ. ವಿಶ್ವವಿದ್ಯಾನಿಲಯದ 22 ವರ್ಷದ ವಿದ್ಯಾರ್ಥಿನಿಯೊಬ್ಬಳು ಏಪ್ರಿಲ್ ತಿಂಗಳಿನಿಂದ ತನಗೆ ಅಪರಿಚಿತ ವ್ಯಕ್ತಿಯೊಬ್ಬ ತನ್ನನ್ನು ಹಿಂಬಾಲಿಸುತ್ತಿದ್ದಾನೆ ಎಂದು ನಂಬಿದ್ದಳು. ಮನೆಯ ಹೊರಗೆ ಅಳವಡಿಸಲಾಗಿದ್ದ ಸಿಸಿಟಿವಿಯಲ್ಲಿ ಕಪ್ಪು ಟಿ-ಶರ್ಟ್ ಧರಿಸಿದ್ದ ಯುವಕನೊಬ್ಬ ಬಂದು, ಶೂಗಳನ್ನು ಹಿಡಿದು ವಾಸನೆ ನೋಡುವ ದೃಶ್ಯ ವೈರಲ್ ಆಗಿದೆ. ಆತ ಅದೇ ವಿಶ್ವವಿದ್ಯಾನಿಲಯದ 20 ರಿಂದ 25 ವರ್ಷ ವಯಸ್ಸಿನ ಸಹ-ವಿದ್ಯಾರ್ಥಿ…

Read More

ಮುಂಬೈ: ಪ್ರತಿಭಟನೆ ನಡೆಸುವ ಜೆನ್‌ ಝಿಗಳನ್ನು ದೇಶದ್ರೋಹಿಗಳು ಎಂದು ಕರೆಯಲು ಸಾಧ್ಯವಿಲ್ಲ, ಅವರು ನಮ್ಮದೇ ಮುಂದಿನ ಪೀಳಿಗೆ ಎಂದು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ. ಮುಂಬೈನಲ್ಲಿ Gen Z ಮತ್ತು Gen Alpha ಪೀಳಿಗೆಯನ್ನು ಉದ್ದೇಶಿಸಿ ಮಾತನಾಡಿದ ಅವರು, Gen Z ಯುವಕರು ಯಾವುದಾದರೂ ಪ್ರತಿಭಟನೆಯಲ್ಲಿ ತೊಡಗಿಸಿಕೊಂಡರೆ, ಅವರು ದೇಶದ್ರೋಹಿಗಳಲ್ಲ ಎಂಬುದನ್ನು ನಾನು ಸ್ಪಷ್ಟಪಡಿಸಲು ಬಯಸುತ್ತೇನೆ. ಅವರು ನಮ್ಮದೇ ಜನರು, ನಮ್ಮ ಮುಂದಿನ ಪೀಳಿಗೆ ಎಂದು ತಿಳಿಸಿದರು. ಸಂವಾದ ನಡೆಯಬೇಕಾದರೆ ಪರಸ್ಪರ ಗೌರವ ಮತ್ತು ಅಪ್ಯಾಯತೆಯ ಭಾವನೆ ಅಗತ್ಯ. ನಾವಿಬ್ಬರೂ ಪರಸ್ಪರ ಗುರುತಿಸಿ ಗೌರವಿಸಿದಾಗ ಮಾತ್ರ ಅರ್ಥಪೂರ್ಣ ಸಂವಾದ ಸಾಧ್ಯ. ಆಗ ಮಾತ್ರ ಅವರ ಕಳವಳಗಳು ನಮಗೆ ಮತ್ತು ನಮ್ಮ ದೃಷ್ಟಿಕೋನ ಅವರಿಗೆ ಅರ್ಥವಾಗುತ್ತದೆ. ಪ್ರಜಾಪ್ರಭುತ್ವದಲ್ಲಿ ನಡೆಯಬೇಕಾದದ್ದು ಇದೇ ರೀತಿ ಎಂದರು. ಇಂದಿನ ಯುವಪೀಳಿಗೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಅವರು, ಈಗಿನ ಯುವಜನತೆ ಹಾಲಿ ಪೀಳಿಗೆಗಿಂತ ಹೆಚ್ಚು ಪ್ರಾಮಾಣಿಕವಾಗಿದೆ ಎಂದು ನಾನು ಭಾವಿಸುತ್ತೇನೆ. ಈ ಪೀಳಿಗೆ ದೇಶದ ಬಗ್ಗೆ ಪ್ರಾಮಾಣಿಕತೆ,…

Read More

ಬಂಟ್ವಾಳ: ಕಾರು ಪಲ್ಟಿಯಾಗಿ ನಾಲ್ವರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಆರು ಸದಸ್ಯರು ಸಣ್ಣಪುಟ್ಟ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 75 ರ ಸೂರಿಕುಮೇರು ಬಳಿ ಗುರುವಾರ ಸಂಜೆ ನಡೆದಿದೆ. ವರದಿ ಪ್ರಕಾರ, ಕುಟುಂಬವು ಮಂಗಳೂರಿನಿಂದ ಉಪ್ಪಿನಂಗಡಿ ಕಡೆಗೆ ಪ್ರಯಾಣಿಸುತ್ತಿದ್ದಾಗ, ಸೂರಿಕುಮೇರುವಿನ ಹಿಂದೂಸ್ತಾನ್ ಪೆಟ್ರೋಲಿಯಂ ಇಂಧನ ಕೇಂದ್ರದ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದೆ. ಆರು ಪ್ರಯಾಣಿಕರಿಗೂ ಸಣ್ಣಪುಟ್ಟ ಗಾಯಗಳಾಗಿದ್ದು, ಯಾವುದೇ ಪ್ರಾಣಾಪಾಯವಿಲ್ಲದೆ ಪಾರಾಗಿದ್ದಾರೆ. ಹೆದ್ದಾರಿಯಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ ಮತ್ತು ಕಳಪೆ ರಸ್ತೆ ಪರಿಸ್ಥಿತಿಯಿಂದಾಗಿ ಅಪಘಾತ ಸಂಭವಿಸಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಅಸಮರ್ಪಕ ರಸ್ತೆ ವಿನ್ಯಾಸದಿಂದಾಗಿ ಚಾಲಕ ವಾಹನದ ನಿಯಂತ್ರಣ ಕಳೆದುಕೊಂಡಿದ್ದಾನೆ ಎಂದು ಆರೋಪಿಸಿದ್ದಾರೆ. ಹೆಚ್ಚಿನ ತನಿಖೆ ನಡೆಯುತ್ತಿದೆ.

Read More

ಉಡುಪಿ: ಮಲ್ಪೆ ಕಲ್ಮಾಡಿಯ ಯುವತಿಯೊರ್ವಳು ನೇಣಿಗೆ ಶರಣಾದ ಘಟನೆ ಬುಧವಾರ ನಡೆದಿದೆ. ಹೊಟೇಲ್‌ನ ಉದ್ಯೋಗಿ, ಮಾಡೆಲಿಂಗ್‌ನಲ್ಲಿ ಆಸಕ್ತಿ ಹೊಂದಿದ್ದ ಕೃತಿ ಬಂಗೇರ(27) ಆತ್ಮಹತ್ಯೆ ಮಾಡಿಕೊಂಡ ಯುವತಿ. ತನ್ನ ತಾಯಿ ಮತ್ತು ಸಹೋದರಿಯೊಂದಿಗೆ ಕಲ್ಮಾಡಿಯ ಮನೆಯಲ್ಲಿ ವಾಸವಾಗಿದ್ದ ಕೃತಿ ಇಂದು ಮನೆಯ ಕೊಠಡಿಯಲ್ಲಿ ಚೂಡಿದಾರದ ಶಾಲಿನಲ್ಲಿ ಕುತ್ತಿಗೆ ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈಕೆ ಕಳೆದ ಕೆಲವು ದಿನಗಳಲ್ಲಿ ಒತ್ತಡ ರೀತಿಯಲ್ಲಿ ವರ್ತಿಸುತ್ತಿದ್ದಳು ಎಂದು ಮನೆಯವರು ತಿಳಿಸಿದ್ದಾರೆ. ಸಹೋದರಿ ನೀಡಿದ ದೂರಿನಂತೆ ಮಲ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬಂಟ್ವಾಳ: ಬಂಟ್ವಾಳ ತಾಲೂಕಿನ ಎನ್. ಜಿ. ಸರ್ಕಲ್  ಬಳಿ ಗುರುವಾರ ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನಕ್ಕೆ ಟಿಪ್ಪರ್‌ ಲಾರಿ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಬೈಕ್‌ನಲ್ಲಿದ್ದ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಇವರ ಪೈಕಿ ಸಹಸವಾರ  ಮೃತಪಟ್ಟಿದ್ದಾರೆ. ಮೃತರನ್ನು ಯಶವಂತ್ ಕುಲಾಲ್ ಎಂದು ಗುರುತಿಸಲಾಗಿದ್ದು, ತೀವ್ರವಾಗಿ ಗಾಯಗೊಂಡ ಸವಾರ ದಯಾನಂದ ಎಂದು ಗುರುತಿಸಲಾಗಿದೆ. ಪೊಲೀಸರ ಪ್ರಕಾರ,  ಅಗಸ್ಟ್‌ 6 ರಂದು ಸಂಜೆ 6:30 ರ ಸುಮಾರಿಗೆ ಕಲ್ಲಡ್ಕ ಕಡೆಯಿಂದ ಲೊರೆಟ್ಟೊ ಕಡೆಗೆ ಸಾಗುತ್ತಿದ್ದ ಟಿಪ್ಪರ್‌ ಲಾರಿ ಮಂಗಳೂರು ಕಡೆಯಿಂದ ಧರ್ಮಸ್ಥಳ ಕಡೆಗೆ ಸಹ ಸವಾರನನ್ನು ಕುಳ್ಳಿರಿಸಿಕೊಂಡು ತೆರಳುತ್ತಿದ್ದ ಸ್ಕೂಟರ್ ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಅಪಘಾತದಲ್ಲಿ ಸ್ಕೂಟರಿನಲ್ಲಿ ಪ್ರಯಾಣಿಸುತ್ತಿದ್ದ ಸವಾರ ದಯಾನಂದ ಹಾಗೂ ಸಹ ಸವಾರ ಯಶ್ವಂತ್‌ ಕುಲಾಲ್‌ ಎಂಬವರುಗಳು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಮಂಗಳೂರು ಜಿಲ್ಲಾ ಸರಕಾರಿ ವೆನ್‌ ಲಾಕ್‌ ಆಸ್ಪತ್ರೆಗೆ ದಾಖಲಿಸಲಾಯಿತ್ತು. ಗಾಯಾಳುಗಳ ಪೈಕಿ ಸಹಸವಾರ ಯಶ್ವಂತ್‌ ಕುಲಾಲ್‌ ರವರು ಮೃತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದ್ದು, ದಯಾನಂದ…

Read More

ಮಂಗಳೂರು : ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಮದ್ಯದೊಂದಿಗೆ ಆಹಾರ ಪೂರೈಸುವ ಪ್ರಮುಖ ಬಾರ್ ಹಾಗೂ ರೆಸ್ಟೋರೆಂಟ್‌ಗಳ ಮೇಲೆ ಅಬಕಾರಿ ಇಲಾಖೆಯ ಅಧಿಕಾರಿಗಳ ತಂಡ ಬುಧವಾರ ರಾತ್ರಿ ದಿಢೀರ್ ದಾಳಿ ನಡೆಸಿ ಪರಿಶೀಲನೆ ನಡೆಸಿದೆ. ಐಡಿ ಕಾರ್ಡ್ ಪರಿಶೀಲನೆ – ಕಟ್ಟುನಿಟ್ಟಿನ ಸೂಚನೆ: ದಾಳಿಯ ವೇಳೆ ಬಾರ್‌ಗಳಿಗೆ ಆಗಮಿಸಿದ್ದ ಗ್ರಾಹಕರ ಗುರುತಿನ ಚೀಟಿಗಳನ್ನು  ಅಧಿಕಾರಿಗಳು ತಪಾಸಣೆಗೊಳಪಡಿಸಿದರು. ಯಾವುದೇ ಕಾರಣಕ್ಕೂ ಅಪ್ರಾಪ್ತ ವಯಸ್ಕರಿಗೆ  ಮದ್ಯ ಪೂರೈಸಬಾರದು ಎಂದು ಸನ್ನದುದಾರರಿಗೆ (Bar Licensees) ಸ್ಪಷ್ಟ ನಿರ್ದೇಶನ ನೀಡಲಾಯಿತು. ನಿಯಮ ಉಲ್ಲಂಘಿಸಿ ಅಪ್ರಾಪ್ತರಿಗೆ ಮದ್ಯ ಸರಬರಾಜು ಮಾಡುವುದು ಕಂಡುಬಂದಲ್ಲಿ ಸನ್ನದು ರದ್ದುಗೊಳಿಸುವುದು ಸೇರಿದಂತೆ ಕಾನೂನುಬದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅಬಕಾರಿ ಅಧಿಕಾರಿಗಳು ಎಚ್ಚರಿಸಿದ್ದಾರೆ. ಅಬಕಾರಿ ಉಪ ಆಯುಕ್ತೆ ಬಿಂದುಶ್ರೀ ನಿರ್ದೇಶನದಂತೆ ದಾಳಿಯಲ್ಲಿ ಮಂಗಳೂರು ಉಪವಿಭಾಗ 1 ರ ಉಪ ಅಧೀಕ್ಷಕಿ ಗಾಯತ್ರಿ ಸಿ ಹೆಚ್ ಅವರ ನೇತೃತ್ವದಲ್ಲಿ ಅಬಕಾರಿ ನಿರೀಕ್ಷಕರಾದ ಚೇತನ್ ಕುಮಾರ್, ಪ್ರತಿಭಾ, ಮಿಲ್ಲರ್ ಜಾನ್ಸನ್ ಡಿಸೋಜ, ಕಮಲ, ದತ್ತಗುರು, ಉಪನಿರೀಕ್ಷಕರಾದ ರಜಾಕ್, ಜಯಪ್ಪ…

Read More

ಪಣಜಿ: ಸುಮಾರು 13 ವರ್ಷಗಳ ಹಿಂದೆ ಗೋವಾದ ರೆಸಾರ್ಟ್‌ ಒಂದರಲ್ಲಿ ನಡೆದ ತೆಹೆಲ್ಕಾ ಥಿಂಕ್​ಫೆಸ್ಟ್ ಕಾರ್ಯಕ್ರಮದಲ್ಲಿ ಮಹಿಳಾ ಸಹೋದ್ಯೋಗಿ ಮೇಲೆ ಅತ್ಯಾಚಾರ ಎಸಗಿದ ಆರೋಪದಲ್ಲಿ ‘ತೆಹಲ್ಕಾ’ ನಿಯತಕಾಲಿಕೆಯ ಸ್ಥಾಪಕ ತರುಣ್ ತೇಜ್‌ಪಾಲ್ ಅವರನ್ನು ದೋಷಿ ಎಂದು ತೀರ್ಪು ನೀಡಿರುವ ಬಾಂಬೆ ಹೈಕೋರ್ಟ್‌ನ ಗೋವಾ ಪೀಠವು, ಅವರಿಗೆ 10 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಆದೇಶಿಸಿದೆ. 2021ರಲ್ಲಿ ವಿಚಾರಣಾ ನ್ಯಾಯಾಲಯವು ತೇಜ್‌ಪಾಲ್ ಅವರನ್ನು ಖುಲಾಸೆಗೊಳಿಸಿ ನೀಡಿದ್ದ ತೀರ್ಪನ್ನು ವಜಾಗೊಳಿಸಿದ ಹೈಕೋರ್ಟ್, 2 ವಾರಗಳ ಒಳಗೆ ಗೋವಾ ಪೊಲೀಸರ ಮುಂದೆ ಶರಣಾಗುವಂತೆ ತೇಜ್‌ಪಾಲ್‌ಗೆ ಆದೇಶ ನೀಡಿದೆ. ಈ ಪ್ರಕರಣವು 2013 ರ ನವೆಂಬರ್​ನದ್ದಾಗಿದ್ದು, ಗೋವಾದ ರೆಸಾರ್ಟ್‌ ಒಂದರಲ್ಲಿ ‘ತೆಹಲ್ಕಾ’ ಆಯೋಜಿಸಿದ್ದ ವಾರ್ಷಿಕ ‘ಥಿಂಕ್‌ಫೆಸ್ಟ್’ ಕಾರ್ಯಕ್ರಮದ ವೇಳೆ ಲಿಫ್ಟ್‌ನಲ್ಲಿ ತೇಜ್‌ಪಾಲ್ ತಮ್ಮ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಮಹಿಳಾ ಉದ್ಯೋಗಿ ಆರೋಪಿಸಿದ್ದರು. ಆದರೆ, ತರುಣ್ ತೇಜ್​ಪಾಲ್ ಇದನ್ನು ನಿರಾಕರಿಸಿದ್ದರು. ಇಂದು ಬೆಳಿಗ್ಗೆ ಹೈಕೋರ್ಟ್‌ ತಮಗೆ ಶಿಕ್ಷೆಯನ್ನು ಖಚಿತಪಡಿಸುತ್ತಿದ್ದಂತೆಯೇ ತೇಜ್‌ಪಾಲ್ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ತಮ್ಮ…

Read More