Author: admin
ಮಂಗಳೂರು: ಕಿರಿಯ ವಿದ್ಯಾರ್ಥಿಗಳ ಮೇಲೆ ‘ಡ್ರೆಸ್ ಕೋಡ್’ ಹೇರಲು ಯತ್ನಿಸಿ, ಶೂ ಧರಿಸಿದ್ದಕ್ಕಾಗಿ ಪ್ರಥಮ ವರ್ಷದ ಇಬ್ಬರು ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿ ರ‍್ಯಾಗಿಂಗ್ ಎಸಗಿದ್ದ ದ್ವಿತೀಯ ವರ್ಷದ ಐವರು ವಿದ್ಯಾರ್ಥಿಗಳನ್ನು ಮಂಗಳೂರು ನಗರ ಪೊಲೀಸರು ಬಂಧಿಸಿದ್ದಾರೆ. ನಗರದ ಗುಜ್ಜರಕೆರೆಯ ಚಹಾ ಅಂಗಡಿಯೊಂದರ ಬಳಿ ಈ ಘಟನೆ ನಡೆದಿದೆ. ಪ್ರಥಮ ವರ್ಷದ ಇಬ್ಬರು ವಿದ್ಯಾರ್ಥಿಗಳು ಶೂ ಧರಿಸಿ ಬಂದಿದ್ದರೆಂಬ ಕಾರಣಕ್ಕೆ ಅದೇ ಕಾಲೇಜಿನ ದ್ವಿತೀಯ ವರ್ಷದ ಆರು ಮಂದಿ ವಿದ್ಯಾರ್ಥಿಗಳ ಗುಂಪು ಅವರ ಮೇಲೆ ಏಕಾಏಕಿ ದಾಳಿ ನಡೆಸಿ ಹಲ್ಲೆ ನಡೆಸಿದೆ. ಬಂಧಿತರು ಹಾಗೂ ಗಾಯಾಳುಗಳಿಬ್ಬರೂ ಮೂಲತಃ ಕೇರಳ ರಾಜ್ಯದ ವಿದ್ಯಾರ್ಥಿಗಳಾಗಿದ್ದು, ಗಾಯಗೊಂಡ ಜೂನಿಯರ್ ವಿಧ್ಯಾರ್ಥಿಗಳನ್ನು ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಕುರಿತು ಮಾಹಿತಿ ನೀಡಿದ ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ, “ಹಿರಿಯ ವಿದ್ಯಾರ್ಥಿಗಳು ಕಿರಿಯ ವಿದ್ಯಾರ್ಥಿಗಳ ಮೇಲೆ ಬಲವಂತವಾಗಿ ಡ್ರೆಸ್ ಕೋಡ್ ಹೇರಲು ಯತ್ನಿಸಿರುವುದು ತನಿಖೆಯಲ್ಲಿ ದೃಢಪಟ್ಟಿದೆ. ಹಲ್ಲೆಯಲ್ಲಿ ಪಾಲ್ಗೊಂಡ ಆರು ಮಂದಿಯ ಪೈಕಿ…
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದಿನಕ್ಕೊಂದು ಹೊಸ ತಿರುವು ಸಿಗುತ್ತಿದೆ. ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಆರೋಪಿ ದರ್ಶನ್‌ಗೆ ಅತಿದೊಡ್ಡ ಸಂಕಷ್ಟ ಎದುರಾಗಿದೆ. ತನ್ನನ್ನು ಮಾಫಿ ಸಾಕ್ಷಿಯಾಗಿ ಪರಿಗಣಿಸುವಂತೆ ಎ-14 ಪ್ರದೋಷ್ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾನೆ. ನಾನು ಸತ್ಯವನ್ನೇ ಹೇಳುತ್ತೇನೆ.. ಪ್ರಕರಣದಲ್ಲಿ ಮಾಫಿ ಸಾಕ್ಷಿಯಾಗಿ ಪರಿಗಣಿಸುವಂತೆ ಆರೋಪಿ ಪ್ರದೋಷ್ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾನೆ. ಇಂದು ಮಧ್ಯಾಹ್ನ 12 ಗಂಟೆಗೆ ನ್ಯಾಯಾಧೀಶರ ಮುಂದೆ ಜೈಲಿನಿಂದಲೇ ವಿಡಿಯೋ ಕಾನ್ಫರೆನ್ಸ್ ಮೂಲಕ ಆರೋಪಿಯನ್ನು ವಿಚಾರಣೆಗೆ ಹಾಜರುಪಡಿಸಲಾಗುವುದು. ನ್ಯಾಯಾಧೀಶರ ಮುಂದೆ ಹಾಜರಾಗಿ ಪ್ರಕರಣದಲ್ಲಿ ಘಟನಾವಳಿಗಳ ಬಗ್ಗೆ ಆರೋಪಿ ಹೇಳಲಿದ್ದಾನೆ. ಈ ಹಿಂದೆ ವಿನಯ್ ಕುಲಕರ್ಣಿ ಪ್ರಕರಣದಲ್ಲಿ ಬಸವರಾಜ್ ಮುತ್ತಗಿ ಮಾಫಿ ಸಾಕ್ಷಿಯಾಗಿದ್ದ. ಹೀಗಾಗಿ, ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ ಆಗಿತ್ತು. ಈಗ ದರ್ಶನ್ ಪ್ರಕರಣದಲ್ಲಿ ಪ್ರದೋಷ್ ಮಾಫಿ ಸಾಕ್ಷಿಯಾಗಿದ್ದಾನೆ. ಸ್ಟೋನಿ ಬ್ರೂಕ್‌ನಿಂದ ಬಂದ ದರ್ಶನ್ ಜೊತೆ ಪ್ರದೋಷ್ ಶೆಡ್‌ಗೆ ಹೋಗಿದ್ದ. ಹಲ್ಲೆ ಮಾಡುವಾಗ ಸ್ಥಳದಲ್ಲಿಯೇ ಆರೋಪಿ ಇದ್ದ. ರೇಣುಕಾಸ್ವಾಮಿಯು ʼಹೊಡೆಯೋದು ಸಾಕು ನಿಲ್ಲಿಸಿ ಸತ್ತು ಹೋಗ್ತಾನೆ ಎಂದಿದ್ದʼ( ಪೊಲೀಸರ ಹೇಳಿಕೆಯಲ್ಲಿ…
ಸುಳ್ಯದ ಸೂರ್ತಿಲದಲ್ಲಿ ವಿವಾಹಿತ ಮಹಿಳೆಯೋರ್ವರನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿ ಪೀಡಿಸಿದ ಆರೋಪದಲ್ಲಿ ಆಟೋ ಚಾಲಕ ಗೋಪಾಲಕೃಷ್ಣ ಜಯನಗರ ಎಂಬವರ ಮೇಲೆ ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ತನಿಖೆ ಮತ್ತು ಸ್ಥಳ ಮಹಜರು ನಡೆಸಿದ ಬಳಿಕ ಸುಳ್ಯ ಪೊಲೀಸರು ಆರೋಪಿ ಗೋಪಾಲಕೃಷ್ಣರನ್ನು ನ್ಯಾಯಾಲಯಕ್ಕೆ ಒಪ್ಪಿಸಿದ್ದು ಸುಳ್ಯ ನ್ಯಾಯಾಲಯ ಆರೋಪಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. ಮಹಿಳೆ ಪೊಲೀಸರಿಗೆ ನೀಡಿರುವ ದೂರಿನಲ್ಲಿ ‘ನಾನು ಹಾವೇರಿ ಜಿಲ್ಲೆಯವಳಾಗಿದ್ದು, ಸುಳ್ಯದ ಸೂರ್ತಿಲ ಎಂಬಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದೇನೆ. ನಾನು ಬಾಣಂತಿಯರನ್ನು ನೋಡಿಕೊಳ್ಳುವ ಕೆಲಸ ಮಾಡುತ್ತಿದ್ದು ಕೆಲಸಕ್ಕೆ ಹೋಗುವ ಸಂದರ್ಭದಲ್ಲಿ ಗೋಪಾಲಕೃಷ್ಣರ ಪರಿಚಯವಾಗಿದೆ. ಬಳಿಕ ಆತ ನನ್ನೊಂದಿಗೆ ಸಲುಗೆಯಾಗಿ ವರ್ತಿಸುತ್ತಿದ್ದ. 2025ನೇ ಜೂನ್ ತಿಂಗಳಲ್ಲಿ ಆತನ ಮನೆಗೆ ಬರುವಂತೆ ಒತ್ತಾಯಿಸಿ ಬಳಿಕ ನನ್ನನ್ನು ಆತನ ಮನೆಗೆ ಕರೆದೊಯ್ದು ಮದ್ಯವನ್ನು ಸೇವನೆ ಮಾಡಿಸಿ ಬಲಾತ್ಕಾರವಾಗಿ ನನ್ನ ಮೇಲೆ ಅತ್ಯಾಚಾರ ಮಾಡಿದ್ದಾರೆ. ಆ ಘಟನೆಯನ್ನು ಆತ ಮೊಬೈಲ್ ನಲ್ಲಿ ವಿಡಿಯೋ ಮಾಡಿಕೊಂಡು ಬಳಿಕ ಆಗಾಗ ನನಗೆ ಫೋನ್…
ಸುರತ್ಕಲ್: ವಾಲಿಬಾಲ್ ಆಡುತ್ತಿದ್ದ ಬಾಲಕನೊಬ್ಬ ಕುಸಿದು ಬಿದ್ದು ಮೃತಪಟ್ಟ ಘಟನೆ ಸುರತ್ಕಲ್ ಸಮೀಪದ ಸೂರಿಂಜೆಯಲ್ಲಿ ಆ.5ರ ಬುಧವಾರ ಸಂಭವಿಸಿದೆ. ಮಾಧವ ಅಮೀನ್ ಅವರ ಪುತ್ರ ಲಿಖಿತ್ ಅಮೀನ್ (15) ಮೃತ ಬಾಲಕ. ಈತ ಸೂರಿಂಜೆ ಕೋಟೆ ಬೋಳ್ಳಾರು ಸರಕಾರಿ ಪ್ರೌಢಶಾಲೆಯಲ್ಲಿ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದನು. ಸ್ನೇಹಿತರೊಂದಿಗೆ ಸೂರಿಂಜೆ ಮೈದಾನದಲ್ಲಿ ಆಡುತ್ತಿದ್ದ ವೇಳೆ ಕುಸಿದು ಬಿದ್ದಾಗ ಆಸ್ಪತ್ರೆಗೆ ಕರೆದೊಯ್ದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಎನ್ನಲಾಗಿದೆ.
ಬೆಳ್ತಂಗಡಿ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಸುಮಾರು ಐದು ವರ್ಷಗಳಿಂದ ನ್ಯಾಯಾಲಯದ ವಿಚಾರಣೆಯಿಂದ ತಪ್ಪಿಸಿಕೊಂಡು ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ. ಬಂಧಿತನನ್ನು ಬೆಂಗಳೂರು ನಿವಾಸಿ ಮೂರ್ತಿ ಅಲಿಯಾಸ್ ಪಿಂಟು (37) ಎಂದು ಗುರುತಿಸಲಾಗಿದೆ. ಈತನ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯ ಅಪರಾಧ ಸಂಖ್ಯೆ 64/2017ರಲ್ಲಿ ಭಾರತೀಯ ದಂಡ ಸಂಹಿತೆಯ (ಐಪಿಸಿ) ಕಲಂ 395, 397 ಹಾಗೂ 34ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಪೊಲೀಸರ ಮಾಹಿತಿ ಪ್ರಕಾರ, ಆರೋಪಿ ಸುಮಾರು ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ಇದರಿಂದ ನ್ಯಾಯಾಲಯವು ಆತನ ವಿರುದ್ಧ ಬಂಧನ ವಾರಂಟ್ ಹೊರಡಿಸಿತ್ತು. ವಾರಂಟ್ ಆಧರಿಸಿ ಕಾರ್ಯಾಚರಣೆ ನಡೆಸಿದ ಧರ್ಮಸ್ಥಳ ಪೊಲೀಸ್ ಠಾಣೆಯ ಸಿಬ್ಬಂದಿಗಳಾದ ವೃಷಭ ಮತ್ತು ಚರಣ್ ರಾಜ್ ಅವರು ಬೆಂಗಳೂರಿನಲ್ಲಿ ಆರೋಪಿಯ ಸುಳಿವು ಪತ್ತೆಹಚ್ಚಿ ಬಂಧಿಸುವಲ್ಲಿ ಯಶಸ್ವಿಯಾದರು. ಬಂಧಿತನನ್ನು ಆಗಸ್ಟ್ 5ರಂದು ನ್ಯಾಯಾಧೀಶರ ಎದುರು ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ಕಾಸರಗೋಡು: ಉಪ್ಪಳದ ಕೊಂಡೆವೂರಿನ ನಿವಾಸಿ ಹಾಗೂ ಬಿಜೆಪಿ ಕಾರ್ಯಕರ್ತ ಸಂದೀಪ್ ಶೆಟ್ಟಿ ಅಲಿಯಾಸ್ ಅಣ್ಣು (44) ಅವರ ಮೃತದೇಹ ಮನೆ ಸಮೀಪದ ಕೆರೆಯಲ್ಲಿ ಪತ್ತೆಯಾಗಿದೆ. ಕೆಲಸಕ್ಕೆ ತೆರಳಿದ್ದ ಸಂದೀಪ್ ಶೆಟ್ಟಿ ಅವರು ನಾಪತ್ತೆಯಾಗಿದ್ದ ಹಿನ್ನೆಲೆ ನಡೆಸಿದ ಶೋಧ ಕಾರ್ಯಾಚರಣೆಯಲ್ಲಿ ಈ ಘಟನೆ ಬೆಳಕಿಗೆ ಬಂದಿದೆ. ಅವರು ಉಪ್ಪಳದ ಶಾರದಾ ನಗರದಲ್ಲಿರುವ ಸೋಡಾ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದರು. ಸೋಮವಾರ ಬೆಳಗ್ಗೆ ಎಂದಿನಂತೆ ಸೋಡಾ ಕಾರ್ಖಾನೆಗೆ ಕೆಲಸಕ್ಕೆ ತೆರಳಿದ್ದ ಸಂದೀಪ್ ಶೆಟ್ಟಿ ಮನೆಗೆ ಮರಳಿರಲಿಲ್ಲ. ಇದರಿಂದ ಆತಂಕಗೊಂಡ ಕುಟುಂಬಸ್ಥರು ಹಾಗೂ ಸ್ಥಳೀಯರು ಹುಡುಕಾಟ ಆರಂಭಿಸಿದ್ದರು. ಈ ವೇಳೆ ಮನೆಯ ತೋಟದಲ್ಲಿರುವ ಕೆರೆಯ ಸಮೀಪ ಅವರ ಅಂಗಿ ಪತ್ತೆಯಾಗಿದ್ದು, ಅವರು ಕೆರೆಗೆ ಬಿದ್ದಿರಬಹುದೆಂಬ ಅನುಮಾನ ವ್ಯಕ್ತವಾಗಿತ್ತು. ಮಾಹಿತಿ ತಿಳಿದ ಅಗ್ನಿಶಾಮಕ ಮತ್ತು ರಕ್ಷಣಾ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಕೆರೆಯಲ್ಲಿ ಶೋಧ ಕಾರ್ಯಾಚರಣೆ ನಡೆಸಿದ ವೇಳೆ ಸಂದೀಪ್ ಅವರ ಮೃತದೇಹವನ್ನು ಹೊರತೆಗೆದರು. ಕೆರೆಯಲ್ಲಿ ಅಳವಡಿಸಿದ್ದ ಮೋಟಾರ್ ಪಂಪ್‌ನ ಫುಟ್ ವಾಲ್ವ್ ದುರಸ್ತಿ ಮಾಡಲು ಪ್ರಯತ್ನಿಸುವಾಗ ಆಕಸ್ಮಿಕವಾಗಿ…
ಹರಿಯಾಣ: ಇಡೀ ದೇಶವನ್ನೇ ನಡುಗಿಸಿದ ಫರಿದಾಬಾದ್‌ನ 28 ವರ್ಷದ ಶಿಕ್ಷಕಿ ಸಂಧ್ಯಾ ಶರ್ಮಾ ಭೀಕರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆಘಾತಕಾರಿ ಸತ್ಯಗಳನ್ನು ಹೊರಹಾಕಿದ್ದಾರೆ. ಆರೋಪಿ 21 ವರ್ಷದ ಅಮಿತ್, ಸುಮಾರು ಎರಡು ತಿಂಗಳ ಮೊದಲೇ ಈ ಕೊಲೆಗೆ ಸಂಚು ರೂಪಿಸಿ, ವಿಶೇಷವಾಗಿ ಚಾಕುವನ್ನು ಖರೀದಿಸಿ ಕೃತ್ಯ ಎಸಗಿದ್ದಾನೆ ಎಂದು ವಿಚಾರಣೆ ವೇಳೆ ತಿಳಿದುಬಂದಿದೆ. ಸಿಕ್ರೋನಾ ಗ್ರಾಮದ ಶಾಲೆಯಲ್ಲಿ ಸೋಮವಾರ ಬೆಳಿಗ್ಗೆ 9:30 ರ ಸುಮಾರಿಗೆ ಬಂದ ಆರೋಪಿ ಅಮಿತ್, ತಾನು ಸಂಧ್ಯಾ ಅವರ ಪತಿಯ ಕಡೆಯವನೆಂದು ಸುಳ್ಳು ಹೇಳಿ, ಗಂಡನ ಹೆಸರು ಪ್ರಸ್ತಾಪಿಸಿ ಆಕೆಯನ್ನು ತರಗತಿಯಿಂದ ಹೊರಗೆ ಕರೆಸಿದ್ದ. ಸಂಧ್ಯಾ ಕೊಠಡಿಯಿಂದ ಹೊರಗೆ ಬಂದ ತಕ್ಷಣ ಆಕೆಯ ಕೂದಲನ್ನು ಹಿಡಿದು ಕುತ್ತಿಗೆ ಹಾಗೂ ಎದೆಗೆ ಸತತ 27ಕ್ಕೂ ಹೆಚ್ಚು ಬಾರಿ ಇರಿದು ಸ್ಥಳದಲ್ಲೇ ಭೀಕರವಾಗಿ ಹತ್ಯೆ ಮಾಡಿದ್ದ. “ಚಾಕು ಬಾಗುವಷ್ಟರ ಮಟ್ಟಿಗೆ ಆರೋಪಿ ಕೋಪದಿಂದ ದಾಳಿ ನಡೆಸಿದ್ದ” ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ತನಿಖೆಯ ವೇಳೆ ಆರೋಪಿ ಅಮಿತ್,…
ತುಮಕೂರು: ಚಲಿಸುತ್ತಿದ್ದ ಸರ್ಕಾರಿ ಬಸ್‌ನಲ್ಲಿ ಮಹಿಳಾ ಪ್ರಯಾಣಿಕರೊಬ್ಬರಿಗೆ ಏಕಾಏಕಿ ಹೃದಯಾಘಾತ ಸಂಭವಿಸಿದ ವೇಳೆ, ತಕ್ಷಣವೇ ಜಾಗರೂಕರಾದ ಕೆಎಸ್‌ಆರ್‌ಟಿಸಿ (KSRTC) ಬಸ್ ಚಾಲಕ ಹಾಗೂ ನಿರ್ವಾಹಕರು ನಿಗದಿತ ಮಾರ್ಗವನ್ನೇ ಬದಲಾಯಿಸಿ ಬಸ್ ಅನ್ನು ನೇರವಾಗಿ ಆಸ್ಪತ್ರೆಯ ಆವರಣಕ್ಕೆ ಒಯ್ದು ಮಹಿಳೆಯ ಜೀವ ಉಳಿಸಿ ಮಾನವೀಯತೆ ಮೆರೆದಿದ್ದಾರೆ. ತುಮಕೂರಿನಿಂದ ಮಧುಗಿರಿಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಮಹಿಳೆಯೊಬ್ಬರು ಪ್ರಯಾಣಿಸುತ್ತಿದ್ದರು. ಬಸ್ ತುಮಕೂರು-ಮಧುಗಿರಿ ರಸ್ತೆಯಲ್ಲಿ ಚಲಿಸುತ್ತಿದ್ದಾಗ ಮಹಿಳೆಗೆ ಏಕಾಏಕಿ ತೀವ್ರ ಎದೆನೋವು ಕಾಣಿಸಿಕೊಂಡು, ಆರೋಗ್ಯ ಸ್ಥಿತಿ ಅತ್ಯಂತ ಗಂಭೀರವಾಗಿತ್ತು. ಇದನ್ನು ಗಮನಿಸಿದ ನಿರ್ವಾಹಕರು ಹಾಗೂ ಸಹಪ್ರಯಾಣಿಕರು ತಕ್ಷಣವೇ ಚಾಲಕನಿಗೆ ಮಾಹಿತಿ ನೀಡಿದ್ದಾರೆ. ಸ್ಥಿತಿಯ ಗಂಭೀರತೆಯನ್ನು ಕ್ಷಣಾರ್ಧದಲ್ಲಿ ಗ್ರಹಿಸಿದ ಬಸ್ ಚಾಲಕ, ಸ್ವಲ್ಪವೂ ವಿಳಂಬ ಮಾಡದೆ ನಿಗದಿತ ಮಾರ್ಗವನ್ನು ಮುಂದುವರಿಸುವುದನ್ನು ಬಿಟ್ಟು, ತುಮಕೂರು–ಮಧುಗಿರಿ ರಸ್ತೆಯಲ್ಲಿದ್ದ ಸಮೀಪದ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯತ್ತ ಬಸ್ ಅನ್ನು ಚಲಾಯಿಸಿದ್ದಾರೆ. ಅಷ್ಟೇ ಅಲ್ಲದೆ, ಆಸ್ಪತ್ರೆಯ ಮುಖ್ಯ ದ್ವಾರದವರೆಗೂ ಬಸ್ ಅನ್ನು ಕೊಂಡೊಯ್ದು, ಇತರ ಪ್ರಯಾಣಿಕರ ಸಹಾಯದೊಂದಿಗೆ ಮಹಿಳೆಯನ್ನು ತಕ್ಷಣವೇ ತುರ್ತು ಚಿಕಿತ್ಸಾ ಘಟಕಕ್ಕೆ ದಾಖಲಿಸಲು…
ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುವ ಪ್ರತಿಯೊಬ್ಬರಿಗೂ ಶಿಕ್ಷಕರ ಅರ್ಹತಾ ಪರೀಕ್ಷೆ (TET) ಅರ್ಹತೆಯು ಕಡ್ಡಾಯ ಎಂದು ಕೇಂದ್ರ ಸರ್ಕಾರ ಮತ್ತೊಮ್ಮೆ ಸ್ಪಷ್ಟಪಡಿಸಿದೆ. ಈ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ಸುಪ್ರೀಂ ಕೋರ್ಟ್ ನಿಗದಿಪಡಿಸಿದ್ದ ಅಂತಿಮ ಗಡುವನ್ನು ಈಗ ವಿಸ್ತರಿಸಲಾಗಿದೆ. ಈ ಹಿಂದೆ ನೀಡಲಾಗಿದ್ದ ಆಗಸ್ಟ್ 31, 2027 ರ ಗಡುವನ್ನು ಮತ್ತೊಂದು ವರ್ಷ ವಿಸ್ತರಿಸಿ, ಆಗಸ್ಟ್ 31, 2028 ರವರೆಗೆ ಕಾಲಾವಕಾಶ ನೀಡಲಾಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಲೋಕಸಭೆಯಲ್ಲಿ ಆಯೋಜಿಸಲಾದ ಕಲಾಪದ ವೇಳೆ ಘೋಷಿಸಿದ್ದಾರೆ. ಸುಪ್ರೀಂ ಕೋರ್ಟ್ ಆದೇಶ ಮತ್ತು ಕಾಯ್ದೆಯ ನಿಯಮಗಳು: ಲೋಕಸಭೆ ಸದಸ್ಯರೊಬ್ಬರು ಕೇಳಿದ ಲಿಖಿತ ಪ್ರಶ್ನೆಗೆ ಉತ್ತರಿಸಿದ ಸಚಿವರು, ಮೇ 29, 2026 ರಂದು ಪರಿಶೀಲನಾ ಅರ್ಜಿಗಳನ್ನು ವಿಲೇವಾರಿ ಮಾಡುವ ಸಮಯದಲ್ಲಿ ಸುಪ್ರೀಂ ಕೋರ್ಟ್ ಶಿಕ್ಷಕರಿಗೆ ಈ ಒಂದು ವರ್ಷದ ಹೆಚ್ಚುವರಿ ಅವಧಿಯನ್ನು ಮಂಜೂರು ಮಾಡಿದೆ ಎಂದು ತಿಳಿಸಿದರು. ಉಚಿತ ಮತ್ತು ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆ (RTE ಕಾಯ್ದೆ), 2009 ರ ಸೆಕ್ಷನ್ 23…
ಯಾದಗಿರಿ: ಕಡೇಚೂರು-ಬಾಡಿಹಾಳ ಕೈಗಾರಿಕಾ ಪ್ರದೇಶದಲ್ಲಿರುವ ಹೈದರಾಬಾದ್ ಮೂಲದ ಖಾಸಗಿ ಕೆಮಿಕಲ್ ಕಾರ್ಖಾನೆಯಲ್ಲಿ ವಿಷಕಾರಿ ಅನಿಲ ಸೋರಿಕೆಯಾಗಿ ಮೂವರು ಕಾರ್ಮಿಕರು ಉಸಿರುಗಟ್ಟಿ ದಾರುಣವಾಗಿ ಮೃತಪಟ್ಟಿದ್ದು, ಇನ್ನಿಬ್ಬರು ತೀವ್ರವಾಗಿ ಅಸ್ವಸ್ಥಗೊಂಡ ಘಟನೆ ನಡೆದಿದೆ. ಕಾರ್ಖಾನೆಯ ಕೆಮಿಕಲ್ ಸ್ಕ್ರಬರ್‌ನಿಂದ ಇದ್ದಕ್ಕಿದ್ದಂತೆ ವಿಷಕಾರಿ ಅನಿಲ ಸೋರಿಕೆಯಾಗಿದ್ದು, ಇಡೀ ಆವರಣದಲ್ಲಿ ತೀವ್ರ ದುರ್ವಾಸನೆ ಹರಡಿದೆ. ಅನಿಲ ಸೇವನೆಯ ಪರಿಣಾಮ ಸ್ಥಳದಲ್ಲಿದ್ದ ಕಾರ್ಮಿಕರು ಉಸಿರುಗಟ್ಟಿ ಸ್ಥಳದಲ್ಲೇ ಕುಸಿದುಬಿದ್ದಿದ್ದಾರೆ. ಮೃತ ಕಾರ್ಮಿಕರು ಮಧ್ಯಪ್ರದೇಶ ಹಾಗೂ ಆಂಧ್ರಪ್ರದೇಶ ಮೂಲದವರು ಎಂದು ಗುರುತಿಸಲಾಗಿದೆ. ಅಸ್ವಸ್ಥಗೊಂಡಿರುವ ಇನ್ನಿಬ್ಬರು ಕಾರ್ಮಿಕರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ರಾಯಚೂರಿನ ‘ರಿಮ್ಸ್’ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನೆ ನಡೆದ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಗೆ ಯಾದಗಿರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ಪೃಥ್ವಿಕ್ ಶಂಕರ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಕಾರ್ಖಾನೆಯ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದ್ದು, ಅನಿಲ ಸೋರಿಕೆಗೆ ನಿಖರ ಕಾರಣ ತಿಳಿಯಲು ಪೊಲೀಸರು ಹಾಗೂ ಕಾರ್ಖಾನೆ ಇಲಾಖೆ ಅಧಿಕಾರಿಗಳು ತನಿಖೆ…



