Author: admin

ಬೆಳ್ತಂಗಡಿ : ಪ್ರತಿಭಟನಾ ಸಭೆಯಲ್ಲಿ ಧಾರ್ಮಿಕ ಭಾವನೆಗೆ ಧಕ್ಕೆಯಾಗುವಂತೆ ಪ್ರಚೋದನಾಕಾರಿ ಭಾಷಣ ಮಾಡಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ, ಆರೋಪಿ ಮಹಮ್ಮದ್ ರಿಯಾಜ್ ಫರಂಗಿಪೇಟೆ ಎಂಬಾತನಿಗೆ ಮಾನ್ಯ ನ್ಯಾಯಾಲಯವು 6 ತಿಂಗಳ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ ತೀರ್ಪು ನೀಡಿದೆ. ದಿನಾಂಕ 23-07-2015 ರಂದು ಬೆಳ್ತಂಗಡಿ ತಾಲೂಕು ಕಚೇರಿ ಬಳಿ ‘ಪಾಪುಲರ್ ಫ್ರಂಟ್ ಆಫ್ ಇಂಡಿಯಾ’ (PFI) ಬೆಳ್ತಂಗಡಿ ವಲಯ ಸಂಘಟನೆಯ ವತಿಯಿಂದ ಪ್ರತಿಭಟನಾ ಸಭೆ ಹಮ್ಮಿಕೊಳ್ಳಲಾಗಿತ್ತು. ಈ ಸಭೆಯಲ್ಲಿ ಪಾಲ್ಗೊಂಡಿದ್ದ ಮಹಮ್ಮದ್ ರಿಯಾಜ್ ಫರಂಗಿಪೇಟೆ ಎಂಬಾತ ಸಾರ್ವಜನಿಕವಾಗಿ ಧಾರ್ಮಿಕ ಭಾವನೆಗೆ ಧಕ್ಕೆಯುಂಟುಮಾಡುವ ರೀತಿಯಲ್ಲಿ ಉದ್ರೇಕಕಾರಿ ಹಾಗೂ ಪ್ರಚೋದನಾಕಾರಿ ಭಾಷಣ ಮಾಡಿದ್ದ ಎನ್ನಲಾಗಿದೆ. ಈ ಸಂಬಂಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 315/2015 ರಂತೆ, ಭಾರತೀಯ ದಂಡ ಸಂಹಿತೆ (IPC) ಕಲಂ 153(A) ಮತ್ತು 295(A) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಅಂದಿನ ಬೆಳ್ತಂಗಡಿ ಠಾಣಾ ಪೊಲೀಸ್ ಉಪನಿರೀಕ್ಷಕರು ಹಾಗೂ ತನಿಖಾಧಿಕಾರಿಯಾಗಿದ್ದ ರವಿ ಬಿ.ಎಸ್. ಅವರು ಪ್ರಕರಣದ ಕಂಪ್ಲೀಟ್ ತನಿಖೆ ನಡೆಸಿ,…

Read More

ಪುತ್ತೂರು : ಉಪ್ಪಿನಂಗಡಿ ಗ್ರಾಮದ ಮಠ ಎಂಬಲ್ಲಿಯ ರಾಷ್ಟ್ರೀಯ ಹೆದ್ದಾರಿ 75 ಯಲ್ಲಿ ಆ.3 ರಂದು ಸಕಲೇಶಪುರದಿಂದ ಅಕ್ರಮವಾಗಿ ಕಾಡು ಜಾತಿಯ ವಿವಿಧ ಮರದ ದಿಮ್ಮಿಗಳನ್ನು KA-13-AA-6340 ನಂಬರಿನ ಅಶೋಕ್ ಲೇಲ್ಯಾಂಡ್ ವಾಹನದಲ್ಲಿ ಮಂಗಳೂರಿಗೆ ಸಾಗಾಟ ಮಾಡುತ್ತಿರುವುದನ್ನು ಉಪ್ಪಿನಂಗಡಿ ವಲಯ ಅರಣ್ಯಾಧಿಕಾರಿಗಳ ತಂಡ ಪತ್ತೆ ಹಚ್ಚಿ ಕಾರ್ಯಾಚರಣೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ವಶಪಡಿಸಿಕೊಂಡ ವಾಹನ ಮತ್ತು ಮರದ ಮೌಲ್ಯ ಅಂದಾಜು 10 ಲಕ್ಷ ರೂಪಾಯಿ ಅಗಿರುತ್ತದೆ. ಮಂಡ್ಯ ಜಿಲ್ಲೆಯ ಹೊಳೆನರಸೀಪುರ ನಿವಾಸಿ ರೋಹಿತ್.ಎಸ್(20) ಎಂಬಾತನ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ. ಉಪ್ಪಿನಂಗಡಿ ವಲಯ ಅರಣ್ಯಾಧಿಕಾರಿ ಹೆಚ್.ಪಿ.ರಾಘವೇಂದ್ರ ,ಉಪ ವಲಯ ಅರಣ್ಯಾಧಿಕಾರಿ ವಿನಯ್ ಕುಮಾರ್ , ಗಸ್ತು ಅರಣ್ಯ ಪಾಲಕ ವಿನಯಚಂದ್ರ , ದೀಕ್ಷಾ.ಕೆ ಹಾಗೂ ವಾಹನ ಚಾಲಕ ಕಿಶೋರ್ ಕುಮಾರ್.ಕೆ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

Read More

ಮಂಗಳೂರು: ಕಾರು, ಖಾಸಗಿ ಬಸ್ ಮತ್ತು ಲಾರಿಯ ನಡುವೆ ಸರಣಿ ಅಪಘಾತ ಸಂಭವಿಸಿ ಮೂರು ವಾಹನಗಳು ಜಖಂಗೊಂಡ ಘಟನೆ ಮಂಗಳೂರಿನ ಯೆಯ್ಯಾಡಿ ರಸ್ತೆಯಲ್ಲಿ ಮಂಗಳವಾರ ಸಂಭವಿಸಿದೆ. ಕಾರಿನ ಚಾಲಕ ಎಡ ತಿರುವು ತೆಗೆದುಕೊಳ್ಳಲು ಪ್ರಯತ್ನಿಸಿದಾಗ ಈ ಅಪಘಾತ ಸಂಭವಿಸಿದೆ. ಕಾರಿನ ಹಿಂದೆ ಚಲಿಸುತ್ತಿದ್ದ ಬಸ್ ಸಕಾಲಕ್ಕೆ ನಿಲ್ಲಿಸಲು ಸಾಧ್ಯವಾಗದೇ ವಾಹನಕ್ಕೆ ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ. ಸ್ವಲ್ಪ ಸಮಯದ ನಂತರ, ಹಿಂದಿನಿಂದ ಬಂದ ಲಾರಿ ಬಸ್ಸಿನ ಹಿಂಭಾಗಕ್ಕೆ ಡಿಕ್ಕಿ ಹೊಡೆದ ಪರಿಣಾಮವಾಗಿ ಸರಣಿ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಕಾರು, ಬಸ್ ಮತ್ತು ಲಾರಿಗೆ ಸ್ವಲ್ಪ ಹಾನಿಯಾಗಿದೆ. ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರು ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದಾರೆ . ಅಪಘಾತದಲ್ಲಿ ಕೂಡ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಈ ಘಟನೆಯಿಂದ ಸ್ಥಳದಲ್ಲಿ ಸ್ವಲ್ಪ ಸಮಯವರೆಗೆ ಸಂಚಾರ ವ್ಯತ್ಯಯ ಉಂಟಾಗಿದೆ.

Read More

ಮಣಿಪಾಲ: ಹೆರ್ಗ ಗ್ರಾಮದ ಈಶ್ವರನಗರದಲ್ಲಿರುವ ಜನನಿ ಬಾರ್‌ & ರೆಸ್ಟೋರೆಂಟ್‌ ಸಮೀಪ ಯುವಕನ ಮೇಲೆ ಹಲ್ಲೆ ನಡೆಸಿ ಗಂಭೀರ ಗಾಯಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ. ಆ.2ರಂದು ರಾತ್ರಿ ಸುಮಾರು 11.50ರ ವೇಳೆಗೆ ಯಶ್‌ರಾಜ್‌ ಅವರು ತಮ್ಮ ಸಹೋದರ ಪವನ್‌ ಕುಮಾರ್‌ ಹಾಗೂ ಸ್ನೇಹಿತ ಶ್ರೇಯಸ್‌ ಅವರೊಂದಿಗೆ ರಸ್ತೆಯಲ್ಲಿ ತೆರಳುತ್ತಿದ್ದ ವೇಳೆ, ಆರೋಪಿಗಳಾದ ಅಕ್ಷಯ್‌ ಎ. (21), ಪುನೀತ್‌ ಎಸ್‌. (21), ಶಮಂತ್‌ ಕೆ.ಆರ್‌. (21) ಹಾಗೂ ಯಶವಂತ್‌ ಬಿ.ಜೆ. (21) ಎರಡು ಕಾರುಗಳಲ್ಲಿ ಬಂದು ಪವನ್‌ ಕುಮಾರ್‌ ಅವರನ್ನು ತಡೆದಿದ್ದಾರೆ. ಬಳಿಕ ವಿನಾಕಾರಣ ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೈ ಹಾಗೂ ಕಾಲಿನಿಂದ ಹಲ್ಲೆ ನಡೆಸಿದ್ದಾರೆ. ಅಲ್ಲದೆ ಮೆಟಲ್‌ ಪಂಚ್‌ನಿಂದ ಮುಖಕ್ಕೆ ಗುದ್ದಿದ ಪರಿಣಾಮ ಪವನ್‌ ಕುಮಾರ್‌ ಅವರ ಮೂಗಿಗೆ ಗಂಭೀರ ಗಾಯವಾಗಿದೆ ಎನ್ನಲಾಗಿದೆ. ಹಲ್ಲೆ ತಡೆಯಲು ಬಂದ ಯಶ್‌ರಾಜ್‌ ಹಾಗೂ ಶ್ರೇಯಸ್‌ ಅವರ ಮೇಲೂ ಹಲ್ಲೆ ನಡೆಸಿ, ಬಟ್ಟೆ ಹರಿದು ಜೀವ ಬೆದರಿಕೆ ಹಾಕಿ ಆರೋಪಿಗಳು…

Read More

ಮಂಗಳೂರು: ಜಿಲ್ಲೆಯಾದ್ಯಂತ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯ ಹಿನ್ನೆಲೆಯಲ್ಲಿ ಕೈಕಂಬ-ಬಿ.ಸಿ.ರೋಡ್ ಹೆದ್ದಾರಿಯ ಕಾಜಿಲ ಸಮೀಪ ಮಂಗಳವಾರ ಭೂಕುಸಿತ ಸಂಭವಿಸಿದೆ. ಭೂಕುಸಿತದಿಂದ ಮಣ್ಣು ಮತ್ತು ಅವಶೇಷಗಳು ರಸ್ತೆಯ ಬದಿಗೆ ಜಾರಿಬಿದ್ದ ಪರಿಣಾಮ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿದ್ದು, ಸಂಚಾರ ನಿಧಾನಗತಿಯಲ್ಲಿ ಸಾಗುತ್ತಿದೆ. ಈ ಮಾರ್ಗದಲ್ಲಿ ಸಂಚರಿಸುವ ವಾಹನ ಸವಾರರು ಎಚ್ಚರಿಕೆಯಿಂದ ವಾಹನ ಚಲಾಯಿಸುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ. ನಿರಂತರ ಮಳೆಯ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಸಂಬಂಧಪಟ್ಟ ಅಧಿಕಾರಿಗಳು ಭೂಕುಸಿತದ ಮಣ್ಣು ತೆರವುಗೊಳಿಸುವ ಕಾರ್ಯ ಕೈಗೊಂಡಿದ್ದಾರೆ. ಮತ್ತಷ್ಟು ಭೂಕುಸಿತ ಸಂಭವಿಸದಂತೆ ನಿಗಾ ವಹಿಸಿದ್ದಾರೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಅಥವಾ ದೊಡ್ಡ ಪ್ರಮಾಣದ ಆಸ್ತಿ ಹಾನಿ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.

Read More

ಚೆನ್ನೈ: ಖ್ಯಾತ ನಟಿ ತ್ರಿಶಾ ಕುರಿತು ವಿವಾದಾತ್ಮಕ ಹಾಗೂ ಆಕ್ಷೇಪಾರ್ಹ ಹೇಳಿಕೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು ತಮಿಳುನಾಡು ಪೊಲೀಸರು ಮಂಗಳವಾರ ಚೆನ್ನೈನ ನೀಲಾಂಕರೈನಲ್ಲಿರುವ ಅವರ ನಿವಾಸದಿಂದ ವಶಕ್ಕೆ ಪಡೆದುಕೊಂಡಿದ್ದಾರೆ. ಕಾವೇರಿ ವಿಚಾರವಾಗಿ ತಂಜಾವೂರಿನಲ್ಲಿ ನಡೆದ ರೈತರ ಪ್ರತಿಭಟನಾ ಸಭೆಯಲ್ಲಿ ಉದಯನಿಧಿ ಅವರು ಮಾತನಾಡುತ್ತಿದ್ದರು. ಈ ವೇಳೆ ಜನಸಮೂಹದಲ್ಲಿದ್ದ ವ್ಯಕ್ತಿಯೊಬ್ಬರು ನಟಿಯ ಹೆಸರನ್ನು ಪ್ರಸ್ತಾಪಿಸಿದಾಗ, ಅದಕ್ಕೆ ಪ್ರತಿಕ್ರಿಯಿಸಿದ ಉದಯನಿಧಿ ದ್ವಂದ್ವಾರ್ಥದಲ್ಲಿ ಹೇಳಿಕೆ ನೀಡಿದ್ದರು ಎನ್ನಲಾದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿತ್ತು. ಈ ಕುರಿತು ತಮಿಳಗ ವೆಟ್ರಿ ಕಳಗಂ (TVK) ಮಹಿಳಾ ಘಟಕ ನೀಡಿದ ದೂರಿನ ಆಧಾರದ ಮೇಲೆ ಉದಯನಿಧಿ ವಿರುದ್ಧ ವಿವಿಧ ಠಾಣೆಗಳಲ್ಲಿ 6 ಎಫ್‌ಐಆರ್‌ಗಳು ದಾಖಲಾಗಿವೆ. ಪೊಲೀಸ್ ವಶಕ್ಕೆ ಒಳಗಾಗುವ ಮುನ್ನ ಮಾಧ್ಯಮಗಳೊಂದಿಗೆ ಮಾತನಾಡಿದ ಉದಯನಿಧಿ, “ಇದು ಸರ್ಕಾರದ ಕಾಮಿಡಿ. ರೈತರ ಗಂಭೀರ ಪ್ರಶ್ನೆಗಳಿಗೆ ಉತ್ತರ ನೀಡಲಾಗದೆ ಸರ್ಕಾರ ಗಮನ ಬೇರೆಡೆ ಸೆಳೆಯಲು ಯತ್ನಿಸುತ್ತಿದೆ,” ಎಂದು ವೀರೋಧ ವ್ಯಕ್ತಪಡಿಸಿದ್ದಾರೆ. ಈ ನಡುವೆ…

Read More

ಕುಂದಾಪುರ: ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಇಡೀ ದಿನಸಿ ಅಂಗಡಿ ಸುಟ್ಟು ಭಸ್ಮವಾದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆಯ ಶ್ರೀ ಬ್ರಹ್ಮಸ್ಥಾನ ಸಮೀಪದ ಗುರು ಬ್ರಹ್ಮ ಜನರಲ್ ಸ್ಟೋರ್ ನಲ್ಲಿ ಮಂಗಳವಾರ ಮುಂಜಾನೆ ಸಂಭವಿಸಿದೆ. ಮಂಗಳವಾರ ಮುಂಜಾನೆ ಸುಮಾರು 1.30 ಗಂಟೆ ವೇಳೆಗೆ ಈ ಘಟನೆ ನಡೆದಿದೆ. ಅಂಗಡಿ ಮಾಲೀಕ ಸಂತೋಷ್ ಅವರು ಎಂದಿನಂತೆ ಅಂಗಡಿ ಮುಚ್ಚಿ ಮನೆಗೆ ತೆರಳಿದ ಬಳಿಕ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಕೆಲವೇ ನಿಮಿಷಗಳಲ್ಲಿ ಇಡೀ ಅಂಗಡಿಗೆ ವ್ಯಾಪಿಸಿದೆ. ಅಗ್ನಿ ಅವಘಡದಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ದಿನಸಿ ಸಾಮಗ್ರಿಗಳು, ಫ್ರಿಜ್‌ಗಳು, ಪೀಠೋಪಕರಣಗಳು ಸೇರಿದಂತೆ ಅಂಗಡಿಯಲ್ಲಿದ್ದ ಬಹುತೇಕ ಎಲ್ಲಾ ವಸ್ತುಗಳು ಸುಟ್ಟು ಕರಕಲಾಗಿವೆ. ಈ ಅಗ್ನಿ ಅವಘಡದಿಂದ 40 ಲಕ್ಷಕ್ಕೂ ಅಧಿಕ ನಷ್ಟ ಸಂಭವಿಸಿರುವುದಾಗಿ ಅಂದಾಜಿಸಲಾಗಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಅಂಗಡಿಯಲ್ಲಿದ್ದ ಮೂರುಕ್ಕೂ ಹೆಚ್ಚು ಫ್ರಿಜ್‌ಗಳಲ್ಲಿ ಒಂದರಲ್ಲಿ ಸಂಭವಿಸಿದ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಕುಂದಾಪುರ ಅಗ್ನಿಶಾಮಕ ಮತ್ತು ತುರ್ತು…

Read More

ಬೆಂಗಳೂರು : ಸಚಿವ ಸಂಪುಟ ವಿಸ್ತರಣೆಯಲ್ಲಿ ಅವಕಾಶ ಸಿಗದೆ ಅಸಮಾಧಾನಗೊಂಡಿರುವ ಪಕ್ಷದ ಶಾಸಕರು ತಾಳ್ಮೆಯಿಂದ ಇರಬೇಕು ಹಾಗೂ ಎಲ್ಲರಿಗಿಂತ ಪಕ್ಷದ ಹಿತವೇ ಮುಖ್ಯ ಎಂದು ಮುಖ್ಯಮಂತ್ರಿ ಅವರು ಮನವಿ ಮಾಡಿದ್ದಾರೆ. ಇದರೊಂದಿಗೆ, ಯಾರಾದರೂ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದರೆ ಅದನ್ನು ಕೆಲವೇ ನಿಮಿಷಗಳಲ್ಲಿ ಅಂಗೀಕರಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ನಾಳೆಯಿಂದ ಎಲ್ಲ ಸಚಿವರೂ ಕಡ್ಡಾಯವಾಗಿ ಜಿಲ್ಲಾ ಪ್ರವಾಸ ಕೈಗೊಳ್ಳಬೇಕು. ಜಿಲ್ಲೆಗಳಲ್ಲಿ ಸರ್ಕಾರಿ ಕಚೇರಿಗಳು ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ಸಮಯ ವ್ಯರ್ಥ ಮಾಡದೆ ಪ್ರತಿಯೊಬ್ಬರೂ ಜನರ ಕೆಲಸ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಬೇಕು,” ಎಂದು ನೂತನ ಹಾಗೂ ಹಾಲಿ ಸಚಿವರಿಗೆ ಸ್ಪಷ್ಟ ನಿರ್ದೇಶನ ನೀಡಿದರು. ರಾಜೀನಾಮೆ ನೀಡುವ ಕುರಿತು ನಡೆಯುತ್ತಿರುವ ಚರ್ಚೆಗಳಿಗೆ ಪ್ರತಿಕ್ರಿಯಿಸಿದ ಸಿಎಂ, “ರಾಜೀನಾಮೆ ಕೊಡುವವರನ್ನು ತಡೆಯಲು ಸಾಧ್ಯವಿಲ್ಲ. ತಮ್ಮ ಹಾಗೂ ಪಕ್ಷದ ಭವಿಷ್ಯ ಬಯಸುವವರು ಸಮಾಧಾನದಿಂದ ಇರುತ್ತಾರೆ. ಹಿಂದೆ ಎನ್. ಧರಂ ಸಿಂಗ್ ಹಾಗೂ ಸಿದ್ದರಾಮಯ್ಯ ಅವರ ಸಚಿವ…

Read More

ಮುಂಬೈ : ಸರ್ಕಾರಿ ಮತ್ತು ಅರೆ ಸರ್ಕಾರಿ ಸಂಸ್ಥೆಗಳ ಕ್ಯಾಂಟೀನ್‌ಗಳಲ್ಲಿ ಆಹಾರ ನೈರ್ಮಲ್ಯ ತಪಾಸಣೆ ನಡೆಸಲಾಗುತ್ತಿದೆಯೇ ಎಂದು ಬಾಂಬೆ ಹೈಕೋರ್ಟ್ ಪ್ರಶ್ನಿಸಿದ ಮರುದಿನವೇ, ಮಹಾರಾಷ್ಟ್ರ ಆಹಾರ ಮತ್ತು ಔಷಧ ಆಡಳಿತ (ಎಫ್‌ಡಿಎ) ತಂಡವು ಹೈಕೋರ್ಟ್ ಆವರಣದಲ್ಲಿರುವ ಕ್ಯಾಂಟೀನ್‌ಗಳ ಮೇಲೆಯೇ ರೇಡ್ ನಡೆಸಿದೆ. ಎಫ್‌ಎಸ್‌ಎಸ್‌ಎಐ (FSSAI) ಪರವಾನಗಿ ಇಲ್ಲದೆ ಕಾರ್ಯನಿರ್ವಹಿಸುತ್ತಿದ್ದ ಒಂದು ಕ್ಯಾಂಟೀನ್‌ಗೆ ‘ಬಿಸಿನೆಸ್ ಕ್ಲೋಸ್’ ಆದೇಶ ನೀಡಲಾಗಿದ್ದರೆ, ಉಳಿದ ಎರಡಕ್ಕೆ ಸುಧಾರಣಾ ನೋಟಿಸ್ ಜಾರಿಗೊಳಿಸಲಾಗಿದೆ. ಹಂಗಾಮಿ ಮುಖ್ಯ ನ್ಯಾಯಮೂರ್ತಿ ರವೀಂದ್ರ ಘುಗೆ ಹಾಗೂ ನ್ಯಾಯಮೂರ್ತಿ ಗೌತಮ್ ಅಂಕಡ್ ಅವರಿದ್ದ ಪೀಠವು ಎಫ್‌ಡಿಎ ನಡೆಯುತ್ತಿರುವ ನೈರ್ಮಲ್ಯ ಅಭಿಯಾನದ ಕುರಿತು ವಿಚಾರಣೆ ನಡೆಸುವ ವೇಳೆ, “ಸರ್ಕಾರಿ ಇಲಾಖೆಗಳು ಹಾಗೂ ಶಾಸನಬದ್ಧ ಸಂಸ್ಥೆಗಳು ನಡೆಸುವ ಕ್ಯಾಂಟೀನ್‌ಗಳನ್ನು ಪರಿಶೀಲಿಸುತ್ತಿದ್ದೀರಾ?” ಎಂದು ಪ್ರಶ್ನಿಸಿತ್ತು. ಇದರ ಬೆನ್ನಲ್ಲೇ ಜಾಗೃತಗೊಂಡ ಎಫ್‌ಡಿಎ ತಂಡ, ಹೈಕೋರ್ಟ್‌ನ 3 ಕ್ಯಾಂಟೀನ್‌ಗಳಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ತಪಾಸಣೆ ವೇಳೆ 3ನೇ ಮಹಡಿಯಲ್ಲಿರುವ ಬಾಂಬೆ ಬಾರ್ ಅಸೋಸಿಯೇಷನ್ ​​(BBA) ಕ್ಯಾಂಟೀನ್ ಕಡ್ಡಾಯ ಎಫ್‌ಎಸ್‌ಎಸ್‌ಎಐ ಪರವಾನಗಿ…

Read More

ಬೆಳ್ತಂಗಡಿ: ಸಾರ್ವಜನಿಕ ಸ್ಥಳದಲ್ಲಿ ನಿಷೇಧಿತ ಮಾದಕ ವಸ್ತುವಿನ ಅಮಲಿನಲ್ಲಿದ್ದ ಆರೋಪದ ಮೇರೆಗೆ ಓರ್ವನ ವಿರುದ್ಧ ಮಾದಕ ದ್ರವ್ಯ ಮತ್ತು ಮನೋವೈಜ್ಞಾನಿಕ ಪದಾರ್ಥಗಳ ನಿಯಂತ್ರಣ ಕಾಯ್ದೆ (NDPS Act) ಅಡಿಯಲ್ಲಿ ಬೆಳ್ತಂಗಡಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಆರೋಪಿಯನ್ನು ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಶಕ್ತಿನಗರ ನಿವಾಸಿ ಶ್ರೀರಾಜ್ ಶೆಟ್ಟಿ (36) ಎಂದು ಗುರುತಿಸಲಾಗಿದೆ.ಪೊಲೀಸರ ಮಾಹಿತಿ ಪ್ರಕಾರ, ಆಗಸ್ಟ್ 2ರ ಸಂಜೆ ಬೆಳ್ತಂಗಡಿ ಪೊಲೀಸ್ ಉಪನಿರೀಕ್ಷಕ ಆನಂದ್ ಎಂ. ಅವರು ಸಿಬ್ಬಂದಿಯೊಂದಿಗೆ ಕುವೆಟ್ಟು ಗ್ರಾಮದ ಪೊಟ್ಟುಕೆರೆ ಪ್ರದೇಶದಲ್ಲಿ ನಿಯಮಿತ ಗಸ್ತು ನಡೆಸುತ್ತಿದ್ದರು. ಈ ವೇಳೆ ಸಾರ್ವಜನಿಕ ಸ್ಥಳದಲ್ಲಿ ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದ ಹಾಗೂ ಮಾದಕ ವಸ್ತುವಿನ ಅಮಲಿನಲ್ಲಿರುವಂತೆ ಕಂಡುಬಂದ ವ್ಯಕ್ತಿಯನ್ನು ಪೊಲೀಸರು ತಡೆದು ವಿಚಾರಣೆ ನಡೆಸಿದರು.ವಿಚಾರಣೆ ವೇಳೆ ಆತ ಸಮರ್ಪಕ ಉತ್ತರ ನೀಡದೆ ಅಮಲಿನ ಸ್ಥಿತಿಯಲ್ಲೇ ಮಾತನಾಡುತ್ತಿದ್ದ ಎನ್ನಲಾಗಿದೆ. ಬಳಿಕ ಹೆಚ್ಚಿನ ವಿಚಾರಣೆ ನಡೆಸಿದಾಗ, ನಿಷೇಧಿತ ಮಾದಕ ವಸ್ತುವನ್ನು ಸೇವಿಸಿರುವುದಾಗಿ ಆತ ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.ನಂತರ ಆರೋಪಿಯನ್ನು ವೈದ್ಯಕೀಯ ಪರೀಕ್ಷೆಗಾಗಿ ಬೆಳ್ತಂಗಡಿ ತಾಲೂಕು ಸರ್ಕಾರಿ ಆಸ್ಪತ್ರೆಗೆ…

Read More