Author: admin
ಮಂಗಳೂರು: ಪಶ್ಚಿಮ ವಲಯದ ನೂತನ ಪೊಲೀಸ್ ಉಪ ಮಹಾನಿರೀಕ್ಷಕರಾಗಿ ಡಿ.ಐ.ಜಿ.ಪಿ ಚೇತನ್ ಆರ್, ಐ.ಪಿ.ಎಸ್ ಅವರು ಸೋಮವಾರ ಅಧಿಕಾರ ವಹಿಸಿಕೊಂಡರು. ನಿರ್ಗಮನ ಐಜಿಪಿ ಅಮಿತ್ ಸಿಂಗ್ ಅವರು ಪೊಲೀಸ್ ದಂಡವನ್ನು ನೀಡುವ ಮೂಲಕ ಚೇತನ್ ಆರ್ ಅವರಿಗೆ ಅಧಿಕಾರವನ್ನು ಹಸ್ತಾಂತರಿಸಿದರು. 2010ರ ಐಪಿಎಸ್ ಬ್ಯಾಚ್ನ ಕರ್ನಾಟಕ ಕೇಡರ್ ಅಧಿಕಾರಿ ಆರ್.ಚೇತನ್ ಅವರು ಈ ಹಿಂದೆ ಕರಾವಳಿ ಕಾವಲು ಪಡೆ ಎಸ್ಪಿಯಾಗಿ ಕರ್ತವ್ಯ ನಿರ್ವಹಿಸಿದ್ದರು. ನಿರ್ಗಮನ ಐಜಿಪಿ ಅಮಿತ್ ಸಿಂಗ್ ಅವರಿಗೆ ಕರ್ನಾಟಕ ಸ್ಟೇಟ್ ರಿಸರ್ವ್ ಪೊಲೀಸ್ ಇದರ ಐಜಿಪಿ ಆಗಿ ವರ್ಗಾವಣೆಯಾಗಿದೆ.
ರಾಜ್ಯದಲ್ಲಿ ಆಹಾರ ಸುರಕ್ಷತೆ ಹಾಗೂ ನೈರ್ಮಲ್ಯ ಮಾನದಂಡಗಳ ಕಟ್ಟುನಿಟ್ಟಿನ ಪಾಲನೆಗಾಗಿ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯು ಪ್ರಮುಖ ನಗರಗಳ ಸಿಹಿ ತಿಂಡಿ ತಯಾರಿಕಾ ಘಟಕಗಳ ಮೇಲೆ ಬೃಹತ್ ಜಂಟಿ ಕಾರ್ಯಾಚರಣೆ ನಡೆಸಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ಯು.ಟಿ. ಖಾದರ್ ಅವರ ನಿರ್ದೇಶನದಂತೆ, ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ 2006 ಹಾಗೂ 2011ರ ನಿಯಮಾವಳಿಗಳ ಅನ್ವಯ ಈ ವಿಶೇಷ ತಪಾಸಣೆ ಕೈಗೊಳ್ಳಲಾಗಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA), ಮೈಸೂರು, ದಕ್ಷಿಣ ಕನ್ನಡ, ಬೆಳಗಾವಿ, ಕಲಬುರಗಿ ಹಾಗೂ ಹುಬ್ಬಳ್ಳಿ-ಧಾರವಾಡ ವ್ಯಾಪ್ತಿಯ ಒಟ್ಟು 17 ಪ್ರಮುಖ ಸಿಹಿ ತಿಂಡಿ ತಯಾರಿಕಾ ಘಟಕಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಲಾಗಿದೆ.
ದೊಡ್ಡಬಳ್ಳಾಪುರ: ಹಳಿ ದಾಟುತ್ತಿದ್ದ ವೇಳೆ ಎಕ್ಸ್ಪ್ರೆಸ್ ರೈಲಿಗೆ ಸಿಲುಕಿ ಮಹಿಳೆ ಹಾಗೂ ಇಬ್ಬರು ಮೊಮ್ಮಕ್ಕಳು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ ಸೋಮವಾರ ಮುಂಜಾನೆ ಸಂಭವಿಸಿದೆ. ಮೃತರನ್ನು ಇರ್ಫಾನಾ (52) ಹಾಗೂ ಮೊಮ್ಮಕ್ಕಳಾದ ರುಕಿಯಾ (13) ಮತ್ತು ರಾಕಿಯಾ (08) ಎಂದು ಗುರುತಿಸಲಾಗಿದೆ. ಲಭ್ಯ ಮಾಹಿತಿ ಪ್ರಕಾರ, ಮೃತರು ಮುತ್ತೂರು ಕಡೆಯಿಂದ ದೊಡ್ಡಬಳ್ಳಾಪುರ ರೈಲ್ವೆ ನಿಲ್ದಾಣಕ್ಕೆ ಬರುತ್ತಿದ್ದ ವೇಳೆ ಘಟನೆ ಜರುಗಿದೆ. ದೊಡ್ಡಬಳ್ಳಾಪುರದ ಮುತ್ತೂರು ನಿವಾಸಿ ಇರ್ಫಾನಾ ಎಂಬುವವರ ಮನೆಗೆ ಆಂಧ್ರಪ್ರದೇಶದ ಹಿಂದೂಪುರದಿಂದ ಮೊಮ್ಮಕ್ಕಳಾದ ರುಕಿಯಾ ಮತ್ತು ರಾಕಿಯಾ ಕಳೆದ ಶನಿವಾರ ರಜೆ ಕಳೆಯಲೆಂದು ಖುಷಿಯಿಂದ ಬಂದಿದ್ದರು. ಸೋಮವಾರ ಬೆಳಿಗ್ಗೆ ಶಾಲೆಯಿದ್ದ ಕಾರಣ, ಮಕ್ಕಳನ್ನು ಸರಿಯಾದ ಸಮಯಕ್ಕೆ ಕಳುಹಿಸುವಂತೆ ಪೋಷಕರು ತಿಳಿಸಿದ್ದರು. ಹೀಗಾಗಿ ಅಜ್ಜಿ ಇರ್ಫಾನಾ, ಬೆಳಿಗ್ಗೆ 6 ಗಂಟೆಯ ಹಿಂದೂಪುರ ಪ್ಯಾಸೆಂಜರ್ ರೈಲಿನಲ್ಲಿ ಮಕ್ಕಳನ್ನು ಕಳುಹಿಸಲು ಬೆಳಿಗ್ಗೆಯೇ ಇಬ್ಬರನ್ನೂ ಎಬ್ಬಿಸಿ ನಿಲ್ದಾಣಕ್ಕೆ ಕರೆದುಕೊಂಡು ಬಂದಿದ್ದರು. ಕೈ ಹಿಡಿದು ಹಳಿ ದಾಟುವಾಗ ರೈಲು ಡಿಕ್ಕಿ ಪ್ಯಾಸೆಂಜರ್ ರೈಲು…
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಟೋ ರಿಕ್ಷಾ ಪ್ರಯಾಣ ದರವನ್ನು ಪರಿಷ್ಕರಿಸಲಾಗಿದ್ದು, ಮೊದಲ 1.5 ಕಿ.ಮೀ ಪ್ರಯಾಣಕ್ಕೆ ಕನಿಷ್ಟ 40 ರೂ. ದರ ನಿಗದಿಪಡಿಸಲಾಗಿದೆ. ಈ ದರದಲ್ಲಿ ಗರಿಷ್ಟ ಮೂವರು ಪ್ರಯಾಣಿಕರು ಪ್ರಯಾಣಿಸಬಹುದುದಾಗಿದೆ. ಪರಿಷ್ಕೃತ ದರದ ಪ್ರಕಾರ , ಮೊದಲ 1.5 ಕಿ.ಮೀ ಬಳಿಕ ಪ್ರತಿ ಕಿ.ಮೀಗೆ 20 ರೂ ದರ ಪಾವತಿಸಬೇಕು. ಈ ದರವೂ ಗರಿಷ್ಟ ಮೂವರು ಪ್ರಯಾಣಿಕರಿಗೆ ಅನ್ವಯಿಸುತ್ತದೆ. ಆಟೋದಲ್ಲಿ ಮೊದಲ 10 ನಿಮಿಷ ಕಾಯುವಿಕೆ ಉಚಿತವಾಗಿರುತ್ತದೆ. ಬಳಿಕ ಪ್ರತಿ ೧೫ ನಿಮಿಷ ಅಥವಾ ಅದರ ಭಾಗಕ್ಕೆ 5 ರೂ. ಶುಲ್ಕ ವಿಧಿಸಬಹುದಾಗಿದೆ. ರಾತ್ರಿ 10 ಗಂಟೆಯಿಂದ ಬೆಳಗಿನ ಜಾವ ೫ ಗಂಟೆಯವರೆಗೆ ಮಾತ್ರ ಸಾಮಾನ್ಯ ದರದ 1.5 ಪಟ್ಟು ದರವನ್ನು ಪ್ರಯಾಣಿಕರಿಂದ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಪರಿಷ್ಕೃತ ದರಗಳು ಆಟೋ ಪ್ರಯಾಣಿಕರು ಮತ್ತು ಚಾಕಲರಿಗೆ ಅನ್ವಯವಾಗಲಿದ್ದು, ನಿಗದಿತ ದರಕ್ಕಿಂತ ಹೆಚ್ಚಿನ ಮೊತ್ತವನ್ನು ವಸೂಲಿ ಮಾಡುವಂತಿಲ್ಲ.
ರಾಮನಗರ: ಇತ್ತೀಚೆಗೆ ಬೆಂಗಳೂರು ಮತ್ತು ಕರಾವಳಿಯಲ್ಲಿ ಖೋಟಾ ನೋಟು ದಂಧೆ ಜಾಲವನ್ನು ಪೊಲೀಸರು ಪತ್ತೆ ಮಾಡಿದ್ದರು. ಇದೀಗ ರಾಮನಗರದಲ್ಲಿ ಕೂಡ ಖೋಟಾ ನೋಟು ಜಾಲವೊಂದು ಪತ್ತೆ ಆಗಿದೆ. ಸಾರ್ವಜನಿಕರ ಕಣ್ಣುತಪ್ಪಿಸಿ ನಿರ್ಮಾಣ ಹಂತದ ಮನೆಯೊಂದರಲ್ಲೇ ಅಕ್ರಮವಾಗಿ ಖೋಟಾ ನೋಟುಗಳನ್ನು ತಯಾರಿಸಿ ಮಾರಾಟ ಮಾಡುತ್ತಿದ್ದ ಅಂತರಜಿಲ್ಲಾ ಖದೀಮರ ಜಾಲವನ್ನು ಐಜೂರು ಪೊಲೀಸರು ಬಯಲಿಗೆಳೆದಿದ್ದು, ಐವರನ್ನು ವಶಕ್ಕೆ ಪಡೆದಿದ್ದಾರೆ. ಶಾಂತಿಲಾಲ್ ಲೇಔಟ್‌ನ ನಿರ್ಮಾಣ ಹಂತದ ಮನೆಯಲ್ಲಿ ದಂಧೆ ರಾಮನಗರದ ಶಾಂತಿಲಾಲ್ ಲೇಔಟ್‌ನಲ್ಲಿರುವ ಸಂತೋಷ್ ಎಂಬುವವರಿಗೆ ಸೇರಿದ ನಿರ್ಮಾಣ ಹಂತದ ಕಟ್ಟಡದಲ್ಲಿ ಈ ಅಕ್ರಮ ದಂಧೆ ನಡೆಯುತ್ತಿತ್ತು. ಯಾರಿಗೂ ಸಂಶಯ ಬಾರದಂತೆ ಆ ಕಟ್ಟಡವನ್ನು ಅಡ್ಡೆ ಮಾಡಿಕೊಂಡಿದ್ದ ಗ್ಯಾಂಗ್, ನೋಟು ಮುದ್ರಣ ಮಾಡುತ್ತಿದ್ದರು. ಖಚಿತ ಮಾಹಿತಿ ಬೆನ್ನತ್ತಿದ ಐಜೂರು ಪೊಲೀಸರು ದಿಢೀರ್ ದಾಳಿ ನಡೆಸಿ ಜಾಲವನ್ನು ಭೇದಿಸಿದ್ದಾರೆ. ವಿಶೇಷ ಪೇಪರ್ ಮತ್ತು ಕೆಮಿಕಲ್ ಬಳಕೆ ಹೊರಗಿನಿಂದ ವಿಶೇಷ ಕಾಗದದ ಶೀಟ್‌ಗಳನ್ನು ತರಿಸಿ, ಅವುಗಳಿಗೆ ನಿರ್ದಿಷ್ಟ ಕೆಮಿಕಲ್ ಲೇಪಿಸಿ ಅಸಲಿ ನೋಟಿನಂತೆ ಕಾಣುವ 200 ಹಾಗೂ 500 ರೂ…
ಬೆಳಗಾವಿ: ಭಾನುವಾರದ ರಜೆಯ ಮಜಾ ಕಳೆಯಲು ಕೂತಿದ್ದ ಕಾರ್ಮಿಕರ ಮದ್ಯದ ಪಾರ್ಟಿಯೊಂದು ರಕ್ತಸಿಕ್ತವಾಗಿ ಮುಕ್ತಾಯಗೊಂಡಿರುವ ದಾರುಣ ಘಟನೆ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಹುಣಶ್ಯಾಳ ಪಿಜಿ ಗ್ರಾಮದಲ್ಲಿ ನಡೆದಿದೆ. ಊಟ ಮಾಡುವಾಗ ‘ಹೆಚ್ಚು ಚಿಕನ್ ಪೀಸ್ ತಿಂದಿದ್ದೀಯಾ’ ಎಂಬ ಕ್ಷುಲ್ಲಕ ಕಾರಣಕ್ಕೆ ಆರಂಭವಾದ ವಾಗ್ವಾದ ಕೊಲೆಯಲ್ಲಿ ಅಂತ್ಯಗೊಂಡಿದೆ. ಉತ್ತರ ಪ್ರದೇಶ ಮೂಲದ ಕಾರ್ಮಿಕ ಸೀತಾರಾಮ್ ಚಂದ್ರದೇವ್ (ಕೊಲೆಯಾದ ವ್ಯಕ್ತಿ) ಹಾಗೂ ಅರುಣ್‌ಕುಮಾರ್ ಬಲಿಷ್ತಾರ್ ಚವಾಣ್ (ಆರೋಪಿ) ಘಟಪ್ರಭಾ ಸಮೀಪದ ಸ್ಟೀಲ್ ಕಾರ್ಖಾನೆಯೊಂದರಲ್ಲಿ ಕೆಲಸ ಮಾಡುತ್ತಾ ಒಂದೇ ಶೆಡ್‌ನಲ್ಲಿ ವಾಸವಾಗಿದ್ದರು. ಪಾರ್ಟಿಯಲ್ಲಿ ಶುರುವಾಯ್ತು ಚಿಕನ್ ಪೀಸ್ ಜಗಳ ಭಾನುವಾರ ರಜೆ ಇದ್ದಿದ್ದರಿಂದ ಇಬ್ಬರೂ ಸೇರಿ ಮದ್ಯದ ಪಾರ್ಟಿ ಆಯೋಜಿಸಿ, ಚಿಕನ್ ಅಡುಗೆ ಮಾಡಿಕೊಂಡಿದ್ದರು. ಊಟಕ್ಕೆ ಕುಳಿತಾಗ ಯಾರಿಗೆ ಹೆಚ್ಚು ಚಿಕನ್ ಪೀಸ್‌ಗಳು ಸಿಕ್ಕಿವೆ ಎಂಬ ವಿಷಯವಾಗಿ ಸೀತಾರಾಮ್ ಮತ್ತು ಅರುಣ್ ನಡುವೆ ಮಾತಿಗೆ ಮಾತು ಬೆಳೆದಿದೆ. ಮದ್ಯದ ನಶೆಯಲ್ಲಿದ್ದ ಅರುಣ್‌ಗೆ ಆಕ್ರೋಶ ಹೆಚ್ಚಾಗಿ, ಅಲ್ಲೇ ಇದ್ದ ಚಾಕುವಿನಿಂದ ಸೀತಾರಾಮ್ ಅವರ ಎದೆಗೆ ಬಲವಾಗಿ…
ಮಂಗಳೂರು: ನಗರದ ಪಾಂಡೇಶ್ವರದ ಶ್ರೀನಿವಾಸ ಕಾಲೇಜು ಎದುರಿನ ರೈಲ್ವೆ ಟ್ರ್ಯಾಕ್ ಸಮೀಪವಿರುವ ಮಿಜಾರ್ ಅಪಾರ್ಟ್‌ಮೆಂಟ್‌ನಲ್ಲಿ ತಡರಾತ್ರಿ ಲಿಫ್ಟ್‌ನಲ್ಲಿ ಸಿಲುಕಿಕೊಂಡಿದ್ದ ಅಸ್ಸೋಂ ಮೂಲದ 33 ವರ್ಷದ ಕೇಶವ್ ಎಂಬ ಯುವಕನನ್ನು ಪಾಂಡೇಶ್ವರ ಅಗ್ನಿಶಾಮಕ ಠಾಣೆಯ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಸುರಕ್ಷಿತವಾಗಿ ರಕ್ಷಿಸಿದ್ದಾರೆ. ಸೋಮವಾರ ನಸುಕಿನ ಜಾವ ಸುಮಾರು 2 ಗಂಟೆಯ ವೇಳೆಗೆ ಮಿಜಾರ್ ಅಪಾರ್ಟ್‌ಮೆಂಟ್‌ನ ಗ್ರೌಂಡ್ ಫ್ಲೋರ್‌ನಲ್ಲಿ ಲಿಫ್ಟ್ ತಾಂತ್ರಿಕ ದೋಷದಿಂದ ಏಕಾಏಕಿ ಸ್ಥಗಿತಗೊಂಡಿದ್ದು, ಕೇಶವ್ ಒಳಗೆ ಸಿಲುಕಿಕೊಂಡಿದ್ದರು. ಮಾಹಿತಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದರು. ಹಳೆಯ ಮಾದರಿಯ ಲಿಫ್ಟ್ ಆಗಿದ್ದರಿಂದ ಕೀ ಮೂಲಕ ಬಾಗಿಲು ತೆರೆಯಲು ಸಾಧ್ಯವಾಗಲಿಲ್ಲ. ಬಳಿಕ ಹೈಡ್ರಾಲಿಕ್ ಸ್ಪ್ರೆಡರ್ ಉಪಕರಣ ಬಳಸಿ ಲಿಫ್ಟ್‌ನ ಬಾಗಿಲು ತೆರೆದು, ಒಳಗೆ ಸಿಲುಕಿದ್ದ ಯುವಕನನ್ನು ಯಾವುದೇ ಅಪಾಯವಿಲ್ಲದೆ ಹೊರಗೆ ಕರೆತರಲಾಯಿತು. ಈ ರಕ್ಷಣಾ ಕಾರ್ಯಾಚರಣೆಯಲ್ಲಿ ಪಾಂಡೇಶ್ವರ ಅಗ್ನಿಶಾಮಕ ಠಾಣೆಯ ಸಹಾಯಕ ಠಾಣಾಧಿಕಾರಿ ಹರೀಶ್ಚಂದ್ರ, ಲೀಡಿಂಗ್ ಫೈರ್‌ಮ್ಯಾನ್ ಚಂದ್ರ, ಚಾಲಕ ಕಿರಣ್ ಹಾಗೂ ಸಿಬ್ಬಂದಿಗಳಾದ ರಮೇಶ್ ಮತ್ತು ಲಾಲ್ ಅಹಮದ್ ಭಾಗವಹಿಸಿದ್ದರು. ಠಾಣಾಧಿಕಾರಿ…
ಹಾಸನ: ಕುಡಿದ ಅಮಲಿನಲ್ಲಿ ಮಂಗಳೂರು ಮೂಲದ ‘ಸುರಕ್ಷಾ’ ಆಂಬುಲೆನ್ಸ್ ಚಾಲನೆ ಮಾಡುತ್ತಿದ್ದಾನೆ ಎಂಬ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ, ಸ್ಥಳೀಯರು ಆಂಬುಲೆನ್ಸ್ ತಡೆದು ಅದರಲ್ಲಿದ್ದ ರೋಗಿಯನ್ನು ಮತ್ತೊಂದು ಆಂಬುಲೆನ್ಸ್‌ಗೆ ಸ್ಥಳಾಂತರಿಸಿದ ಘಟನೆ ಹಾಸನ ಜಿಲ್ಲೆಯ ಬೇಲೂರು ಬಳಿ ನಡೆದಿದೆ. ಮಂಗಳೂರಿನಿಂದ ಬೆಂಗಳೂರಿಗೆ ರೋಗಿಯನ್ನು ಕರೆದೊಯ್ಯುತ್ತಿದ್ದ ವೇಳೆ ಚಾಲಕ ಮದ್ಯದ ಅಮಲಿನಲ್ಲಿ ವಾಹನ ಚಲಾಯಿಸುತ್ತಿದ್ದಾನೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಚಾಲಕನ ವರ್ತನೆ ಗಮನಿಸಿದ ಸ್ಥಳೀಯರು ಆಂಬುಲೆನ್ಸ್ ಅನ್ನು ತಡೆದು, ಅದರಲ್ಲಿದ್ದ ರೋಗಿಯನ್ನು ಬೇಲೂರಿನ ‘ಜೀವರಕ್ಷಕ’ ಆಂಬುಲೆನ್ಸ್‌ಗೆ ಸುರಕ್ಷಿತವಾಗಿ ಸ್ಥಳಾಂತರಿಸಿದ್ದಾರೆ. ಘಟನೆ ಕುರಿತು ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಬೇಲೂರು ಪೊಲೀಸರು ‘ಸುರಕ್ಷಾ’ ಆಂಬುಲೆನ್ಸ್ ಅನ್ನು ವಶಕ್ಕೆ ಪಡೆದುಕೊಂಡಿದ್ದು, ಚಾಲಕನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ ಎಂದು ತಿಳಿದುಬಂದಿದೆ. ತುರ್ತು ಪರಿಸ್ಥಿತಿಯಲ್ಲಿ ರೋಗಿಯನ್ನು ಸಾಗಿಸುವ ಜವಾಬ್ದಾರಿ ಹೊಂದಿರುವ ಚಾಲಕನೇ ಮದ್ಯದ ಅಮಲಿನಲ್ಲಿ ವಾಹನ ಚಲಾಯಿಸಿದ್ದಾನೆ ಎಂಬ ಆರೋಪಕ್ಕೆ ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (AIMIM) ಮುಖಂಡನನ್ನು ಅಪರಿಚಿತ ದುಷ್ಕರ್ಮಿಗಳು ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ಘಟನೆ ಭಾನುವಾರ ತಡರಾತ್ರಿ ನಡೆದಿದೆ. ಸುಮಾರು 5ರಿಂದ 6 ಮಂದಿ ವ್ಯಕ್ತಿಗಳ ಗುಂಪು ಮೆಹಬೂಬ್ ಅಲಿ ಮೇಲೆ ಏಕಾಏಕಿ ದಾಳಿ ನಡೆಸಿದೆ. ಚಾಕುವಿನಿಂದ ಇರಿತಕ್ಕೊಳಗಾದ ಅಲಿ ಗಂಭೀರವಾಗಿ ಗಾಯಗೊಂಡಿದ್ದರು. ತಕ್ಷಣ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಾಥಮಿಕ ತನಿಖೆಯ ಪ್ರಕಾರ, ಹೈದರಾಬಾದ್‌ನಲ್ಲಿ ಆರೋಪಿಗಳು ಗುಂಪಾಗಿ ಸ್ಥಳಕ್ಕೆ ಆಗಮಿಸಿ ಅಲಿ ಮೇಲೆ ದಾಳಿ ನಡೆಸಿ ಚಾಕುವಿನಿಂದ ಇರಿದಿದ್ದಾರೆ. ಆದರೆ ಹತ್ಯೆಯ ಹಿಂದಿನ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ. ಪ್ರಕರಣದ ತನಿಖೆಗಾಗಿ ಪೊಲೀಸರು ಮೂರು ವಿಶೇಷ ತಂಡಗಳನ್ನು ರಚಿಸಿದ್ದಾರೆ. ದಾಳಿಕೋರರನ್ನು ಪತ್ತೆಹಚ್ಚಿ ಬಂಧಿಸಲು ತಂಡಗಳು ಕಾರ್ಯಾಚರಣೆ ನಡೆಸುತ್ತಿವೆ ಘಟನೆ ನಡೆದ ಪ್ರದೇಶದಲ್ಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ. ಅಲ್ಲದೆ, ಪ್ರತ್ಯಕ್ಷದರ್ಶಿಗಳಿಂದ ಮಾಹಿತಿ ಸಂಗ್ರಹಿಸಿ ಆರೋಪಿಗಳ ಗುರುತು ಪತ್ತೆಹಚ್ಚುವ ಪ್ರಯತ್ನ…
ಅಯೋಧ್ಯೆ: ಅಯೋಧ್ಯೆಯ ಶ್ರೀರಾಮ ಮಂದಿರದ ಸಿಬ್ಬಂದಿಗೆ ಮೂಲಸೌಕರ್ಯಗಳನ್ನು ಒದಗಿಸಲು ಸಹಾಯ ಮಾಡುವ ಉದ್ದೇಶದಿಂದ ಭಕ್ತೆಯೊಬ್ಬರು ನೀಡಿದ್ದ 4 ಕೋಟಿ ರೂಪಾಯಿ ಮೌಲ್ಯದ ಬೃಹತ್ ಚೆಕ್ ಬೌನ್ಸ್ ಆಗಿರುವ ವಿಚಿತ್ರ ಘಟನೆ ಬೆಳಕಿಗೆ ಬಂದಿದೆ. ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಈ ಚೆಕ್ ಅನ್ನು ಬ್ಯಾಂಕ್‌ಗೆ ಸಲ್ಲಿಸಿದಾಗ, ಆ ಖಾತೆಯಲ್ಲಿ ಇದ್ದದ್ದು ಕೇವಲ 3 ರೂಪಾಯಿ ಮಾತ್ರ! ಲಿಖಿತ ಭರವಸೆ ಕೋರಿದ್ದ ಭಕ್ತೆ ಚೆನ್ನೈ ಮೂಲದ ಮಹಿಳಾ ಭಕ್ತಿಯೊಬ್ಬರು ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ಗೆ ಈ 4 ಕೋಟಿ ರೂ. ಚೆಕ್ ಅನ್ನು ನೀಡಿದ್ದರು. ಇದರ ಜೊತೆಗೆ ದೇವಾಲಯಕ್ಕೆ 10,000 ರೂಪಾಯಿ ನಗದನ್ನು ಪ್ರತ್ಯೇಕವಾಗಿ ದೇಣಿಗೆ ನೀಡಿದ್ದರು. ಆದರೆ, ತಮ್ಮ 4 ಕೋಟಿ ಹಣವನ್ನು ಕೇವಲ ದೇವಾಲಯದ ಸಿಬ್ಬಂದಿಯ ಸೌಲಭ್ಯಗಳಿಗಾಗಿಯೇ ಬಳಸಬೇಕು ಎಂದು ಅವರು ಟ್ರಸ್ಟ್‌ನಿಂದ ಲಿಖಿತ ಭರವಸೆಗೆ ಪಟ್ಟು ಹಿಡಿದಿದ್ದರು. ಟ್ರಸ್ಟ್ ಅಂತಹ ಯಾವುದೇ ವಿಶೇಷ ಲಿಖಿತ ಭರವಸೆ ನೀಡಲು ನಿರಾಕರಿಸಿತ್ತು. ಖಾತೆಯಲ್ಲಿ ಹಣವಿಲ್ಲದಿದ್ದರೂ ಇಷ್ಟೊಂದು ದೊಡ್ಡ ಮೊತ್ತದ…



