Author: admin

ಬಾಗಲಕೋಟೆ: ಜಿಲ್ಲೆಯ ಡಿಸಿಸಿ ಬ್ಯಾಂಕ್​​ನಲ್ಲಿ  ಈ ಹಿಂದೆ 12 ಕೋಟಿರೂ ಬೃಹತ್ ಹಗರಣವೊಂದು ನಡೆದಿತ್ತು. ಇದೀಗ ಮತ್ತೊಂದು ಗೋಲಮಾಲ್ ಬೆಳಕಿಗೆ ಬಂದಿದೆ. ಬ್ಯಾಂಕ್​​ ಮ್ಯಾನೇಜರ್​ ಬರೋಬ್ಬರಿ 65 ಲಕ್ಷ ರೂ ಎಗರಿಸಿ ಪರಾರಿ ಆಗಿರುವ ಘಟನೆ ಬಾಗಲಕೋಟೆ  ಜಿಲ್ಲೆಯ ಮುಧೋಳ ತಾಲೂಕಿನ ಲೋಕಾಪುರದಲ್ಲಿ ನಡೆದಿದೆ. ಬ್ಯಾಂಕ್ ಮ್ಯಾನೇಜರ್ ಗುರುರಾಜ್ ಶಿವರಾಜ್​ ವಿರುದ್ಧ ಲೋಕಾಪುರ ಪೋಲಿಸ್​ ಠಾಣೆಯಲ್ಲಿ ಎಫ್​ಐಆರ್​​ ದಾಖಲಾಗಿದೆ. ನಡೆದಿದ್ದೇನು? ಲೋಕಾಪುರ ಪಟ್ಟಣದಲ್ಲಿರುವ ಡಿಸಿಸಿ ಬ್ಯಾಂಕ್​​​ನಲ್ಲಿ ಕಳೆದ 12 ವರ್ಷಗಳಿಂದ ಬ್ರ್ಯಾಂಚ್ ಮ್ಯಾನೇಜರ್​​ ಆಗಿ ಗುರುರಾಜ್ ಶಿವರಾಜ​​ ಕೆಲಸ ಮಾಡುತ್ತಿದ್ದರು. ಮಾರ್ಚ್ 31 ರಂದು ಬ್ಯಾಂಕ್‌ಗೆ ಸೇರಿದ ಎಸ್‌ಬಿಐ ಖಾತೆಯಿಂದ ನೇರವಾಗಿ ತಮ್ಮ ಐಡಿಎಫ್‌ಸಿ ವೈಯಕ್ತಿಕ ಖಾತೆಗೆ 65 ಲಕ್ಷ ರೂ ವರ್ಗಾಯಿಸಿಕೊಂಡು ದುರ್ಬಳಕೆ ಮಾಡಿಕೊಂಡಿದ್ದಾರೆ. ಮೊಬೈಲ್ ಸ್ವಿಚ್ ಆಫ್ ಮಾಡಿ ತಲೆಮರೆಸಿಕೊಂಡ ಗುರುರಾಜ್ ಮ್ಯಾನೇಜರ್ ಗುರುರಾಜ್ ದೀರ್ಘ ರಜೆಯ ಮೇಲೆ ತೆರಳಿದ್ದಾಗ, ಆ ಹುದ್ದೆಗೆ ಮತ್ತೊಬ್ಬ ಮ್ಯಾನೇಜರ್​ ಅನ್ನು ನೇಮಕ ಮಾಡಲಾಗಿದ್ದು, ಆಗ ವಂಚನೆ ಬೆಳಕಿಗೆ ಬಂದಿದೆ. ಇನ್ನು ಇತ್ತ…

Read More

ನವದೆಹಲಿ: ಲೋಕಸಭೆಯಲ್ಲಿ ಪರೀಕ್ಷಾ ಅಕ್ರಮ ತಡೆ ಮಸೂದೆ ಅಂಗೀಕಾರವಾಗಿದೆ. ಧ್ವನಿ ಮತದ ಮೂಲಕ ಮಸೂದೆಯನ್ನು ಅಂಗೀಕರಿಸಲಾಗಿದೆ. ವಿಪಕ್ಷಗಳ ಗದ್ದಲ ನಡುವೆಯೇ ಮಸೂದೆ ಅಂಗೀಕರಿಸಲಾಗಿದೆ. ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಮಸೂದೆಯ ಅಂಗೀಕಾರದ ಬಗ್ಗೆ ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ. ಈ ಮಸೂದೆಯು ರಾಜ್ಯಸಭೆಯಲ್ಲಿ ಚರ್ಚೆಗೆ ಬಂದು ಅಲ್ಲಿ ಅಂಗೀಕೃತವಾದ ನಂತರ ರಾಷ್ಟ್ರಪತಿಗಳ ಅಂಕಿತ ಪಡೆದು ಕಾನೂನಿನ ರೂಪ ಪಡೆದುಕೊಳ್ಳಲಿದೆ. ಹೊಸ ಕಾನೂನಿನ ಅನ್ವಯ ಪ್ರಶ್ನೆಪತ್ರಿಕೆ ಸೋರಿಕೆ ಜಾಲದಲ್ಲಿ ಭಾಗಿಯಾಗುವವರ ವಿರುದ್ಧ ಅತ್ಯಂತ ಕಠಿಣ ಶಿಕ್ಷೆಯನ್ನೂ ಪ್ರಸ್ತಾಪಿಸಲಾಗಿದೆ. ತಪ್ಪಿತಸ್ಥರೆಂದು ಸಾಬೀತಾದವರಿಗೆ ಗರಿಷ್ಠ 10 ವರ್ಷಗಳವರೆಗೆ ಜೈಲು ಶಿಕ್ಷೆ, ಜೊತೆಗೆ 10 ಕೋಟಿ ರೂ. ವರೆಗೆ ದಂಡ ವಿಧಿಸುವ ಅವಕಾಶ ಕಲ್ಪಿಸಲಾಗುತ್ತಿದೆ. ಇದು ಸಂಘಟಿತ ಪರೀಕ್ಷಾ ಅಕ್ರಮಗಳ ವಿರುದ್ಧದ ಅತ್ಯಂತ ಕಠಿಣ ಕಾನೂನುಗಳಲ್ಲಿ ಒಂದಾಗಲಿದೆ ಎಂದು ಹೇಳಲಾಗಿದೆ.

Read More

ಮಂಗಳೂರು: ಮಂಗಳೂರಿನ ಖ್ಯಾತ ಮಹೇಶ್ ಮೋಟರ್ಸ್ ಬಸ್ ಸಂಸ್ಥೆಯ ಮಾಲಕರಾದ ಮಹೇಶ್ ಶೇಖ(46) ಅವರು ಇಂದು ನಿಧನರಾಗಿದ್ದಾರೆ. ಅವರ ಅಗಲಿಕೆಯಿಂದ ಸಾರಿಗೆ ಕ್ಷೇತ್ರದಲ್ಲಿ ಹಾಗೂ ಅಪಾರ ಸ್ನೇಹಿತರು, ಹಿತೈಷಿಗಳ ವಲಯದಲ್ಲಿ ತೀವ್ರ ಶೋಕದ ವಾತಾವರಣ ನಿರ್ಮಾಣವಾಗಿದೆ. ಮಹೇಶ್ ಶೇಖರ್ ಅವರು ಹಲವು ವರ್ಷಗಳಿಂದ ಮಹೇಶ್ ಮೋಟರ್ಸ್ ಮೂಲಕ ಕರಾವಳಿ ಭಾಗದ ಸಾರ್ವಜನಿಕರಿಗೆ ಸಾರಿಗೆ ಸೇವೆ ಒದಗಿಸುತ್ತಿದ್ದು, ಸಾರಿಗೆ ಕ್ಷೇತ್ರದಲ್ಲಿ ತಮ್ಮದೇ ಆದ ಗುರುತನ್ನು ಮೂಡಿಸಿದ್ದರು. ಇದೀಗ ಅವರ ನಿಧನವು ಕುಟುಂಬಕ್ಕೆ ಅಪಾರ ದುಃಖವನ್ನುಂಟು ಮಾಡಿದೆ. ಈಗಾಗಲೇ ಸುಮಾರು ಎರಡು ವರ್ಷಗಳ ಹಿಂದೆ ಸಹೋದರ ಪ್ರಕಾಶ್ ಶೇಖ ರವರ  ಅಕಾಲಿಕ ಅಗಲಿಕೆಯ ನೋವನ್ನು ಅನುಭವಿಸಿದ್ದ ಹಿನ್ನೆಲೆ, ಮಹೇಶ್ ಶೇಖರ್ ಅವರ ನಿಧನ ಕುಟುಂಬದವರಿಗೆ ಮತ್ತೊಂದು ದೊಡ್ಡ ಆಘಾತವಾಗಿದೆ.

Read More

ಮಂಗಳೂರು: ವೃದ್ಧರೊಬ್ಬರಿಗೆ ಅಪರಿಚಿತ ಕಾರೊಂದು ಢಿಕ್ಕಿ ಹೊಡೆದು ಪರಾರಿಯಾದ ಘಟನೆ ಮಂಗಳವಾರ ರಾತ್ರಿ ರಾ.ಹೆ. 66ರ ಅಂಬಿಕಾರೋಡ್ ಎಂಬಲ್ಲಿ ನಡೆದಿದ್ದು, ಈ ಘಟನೆಯಿಂದ ಗಂಭೀರ ಗಾಯಗೊಂಡ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಬುಧವಾರ ಮುಂಜಾನೆ ಮೃತಪಟ್ಟಿದ್ದಾರೆ. ಅಂಬಿಕಾರೋಡ್ ಬಳಿಯ ಸತ್ಯನಾರಾಯಣ ಕಂಪೌಂಡ್ ನಿವಾಸಿ ದಾಮೋದರ ಪೂಜಾರಿ (72) ಮೃತಪಟ್ಟವರು. ಅಂಬಿಕಾರೋಡ್ ಗಟ್ಟಿ ಸಮಾಜ ಭವನದ ಬಳಿಯಲ್ಲಿರುವ ಕೊರಗಜ್ಜನ ಕಟ್ಟೆಯ ಚಾಕರಿ (ಸೇವೆ) ಕಾರ್ಯ ಮಾಡುತ್ತಿದ್ದ ದಾಮೋದರ ಅವರು, ಮಂಗಳವಾರ ರಾತ್ರಿ 7 ಗಂಟೆಗೆ ಕೊರಗಜ್ಜನ ಸಾನಿಧ್ಯದಲ್ಲಿ ದೀಪ ಬೆಳಗಿಸಿ ಮನೆಗೆ ಹಿಂತಿರುಗುತ್ತಿದ್ದರು. ಅವರು ಹೆದ್ದಾರಿ ದಾಟುತ್ತಿದ್ದ ವೇಳೆ ತಲಪಾಡಿಯಿಂದ ತೊಕ್ಕೊಟ್ಟು ಕಡೆಗೆ ಬರುತ್ತಿದ್ದ ಕಾರು ಢಿಕ್ಕಿ ಹೊಡೆದು ಪರಾರಿಯಾಗಿದೆ. ಇದರಿಂದ ಅವರ ಎರಡು ಕಾಲುಗಳು ಮುರಿತಕ್ಕೊಳಗಾಗಿದ್ದವು. ಕೂಡಲೇ ಸ್ಥಳೀಯರು ದಾಮೋದರ ಅವರನ್ನು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಮುಂಜಾನೆ ಮೃತಪಟ್ಟಿದ್ದಾರೆ. ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು,…

Read More

ನವದೆಹಲಿ: ಸಿಜೆಪಿ ವಿದ್ಯಾರ್ಥಿ ಪ್ರತಿಭಟನೆ ಹಾಗೂ ‘ಸಂಸದ್ ಚಲೋ’ ಮೆರವಣಿಗೆಯ ಬಳಿಕ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ ಆಕ್ಷೇಪಾರ್ಹ ಪೋಸ್ಟ್‌ಗಳು, ನಿಂದನೀಯ ಕಾಮೆಂಟ್‌ಗಳು ಮತ್ತು ಡೀಪ್‌ಫೇಕ್ ವಿಡಿಯೊಗಳ ವಿರುದ್ಧ ದೆಹಲಿ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ. ಜುಲೈ 20ರಂದು ಜಂತರ್ ಮಂತರ್ ಸೇರಿದಂತೆ ವಿವಿಧೆಡೆ ನಡೆದ ಪ್ರತಿಭಟನೆ ವೇಳೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಭದ್ರತಾ ಪಡೆಗಳನ್ನು ಗುರಿಯಾಗಿಸಿಕೊಂಡು ಅವಹೇಳನಕಾರಿ ಪೋಸ್ಟ್‌ಗಳನ್ನು ಹಂಚಿಕೊಂಡ ಆರೋಪದ ಹಿನ್ನೆಲೆಯಲ್ಲಿ ಹಲವು ಸಾಮಾಜಿಕ ಜಾಲತಾಣ ಖಾತೆಗಳಿಗೆ ದೆಹಲಿ ಪೊಲೀಸರು ನೋಟಿಸ್ ಜಾರಿಗೊಳಿಸಿದ್ದಾರೆ. ಕೆಲವು ಪ್ರಮುಖ ಸುದ್ದಿ ಪೋರ್ಟಲ್‌ಗಳ ಸಾಮಾಜಿಕ ಜಾಲತಾಣ ಖಾತೆಗಳ ಮಾಹಿತಿ ಹಾಗೂ ನಿಂದನೀಯ ಪೋಸ್ಟ್‌ಗಳನ್ನು ಪ್ರಕಟಿಸಿದ ಬಳಕೆದಾರರ ವಿವರಗಳನ್ನು ಒದಗಿಸುವಂತೆ ‘ಎಕ್ಸ್’ ವೇದಿಕೆಗೆ ಸೂಚಿಸಲಾಗಿದೆ. ದೆಹಲಿ ಪೊಲೀಸ್ ಸೈಬರ್ ಕ್ರೈಮ್ ವಿಭಾಗವು ಪ್ರಧಾನಿ ವಿರುದ್ಧದ ಆಕ್ಷೇಪಾರ್ಹ ಕಾಮೆಂಟ್‌ಗಳು, ವಿಡಿಯೊಗಳು ಹಾಗೂ ಸಾರ್ವಜನಿಕ ಶಾಂತಿಗೆ ಧಕ್ಕೆ ಉಂಟುಮಾಡುವ ಪೋಸ್ಟ್‌ಗಳನ್ನು ತಕ್ಷಣವೇ ತೆಗೆದುಹಾಕುವಂತೆ ವಿವಿಧ ಸಾಮಾಜಿಕ ಮಾಧ್ಯಮ ಸಂಸ್ಥೆಗಳಿಗೆ ನಿರ್ದೇಶನ ನೀಡಿದೆ. ಜೊತೆಗೆ, ಸಾಮಾಜಿಕ ಮಾಧ್ಯಮ ಮೇಲ್ವಿಚಾರಣಾ…

Read More

ಮಂಗಳೂರು: ಬಂಟ್ವಾಳದ ವೃದ್ಧೆಯೋರ್ವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ಮಂಗಳೂರು 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಜು. 28ರಂದು ಆದೇಶ ಹೊರಡಿಸಿರುತ್ತದೆ. ಬಂಟ್ವಾಳ ಅಮ್ಟಾಡಿ ನಿವಾಸಿ ಕು.ಏಲ್ಮಾ ಪ್ರೆಶ್ಚಿತ್ ಬರೆಟ್ರೋ (23), ಬಂಟ್ವಾಳ ನರಿಕೊಂಬು ನಿವಾಸಿ ಸತೀಶ ನಾಯಕ್ (28) ಹಾಗೂ ಚರಣ್ ಕುಮಾರ್ (31) ಜೀವಾವಧಿ ಶಿಕ್ಷೆಗೊಳಗಾದ ಆರೋಪಿಗಳು. ಬಂಟ್ವಾಳ ಅಮ್ಮುಂಜೆ ನಿವಾಸಿಯಾದ ವೃದ್ಧೆ ಬೆನಡಿಕ್ಟ್ ಕಾರ್ಲೋ (73) ಎಂಬುವವರನ್ನ ಆರೋಪಿ ಕು.ಏಲ್ಮಾ ಪ್ರೆಶ್ಚಿತ್ ಬರೆಟ್ರೋ ನೋಡಿಕೊಳ್ಳುತ್ತಿದ್ದಳು. ವೃದ್ಧೆಯ ಬಳಿಯಿದ್ದ ಚಿನ್ನಾಭರಣಗಳನ್ನು ಸುಲಿಗೆ ಮಾಡುವ ಉದ್ದೇಶದಿಂದ, ತನ್ನ ಸ್ನೇಹಿತ ಸತೀಶ ನಾಯಕ್ ಎಂಬಾತನ ಸಹಾಯದಿಂದ ವೃದ್ದೆ ಸೇವಿಸುವ ಆಹಾರದಲ್ಲಿ ವಿಷ ಬೆರೆಸಿ ಕೊಲ್ಲಲು ಯತ್ನಿಸಿದ್ದಾಳೆ. ಆದರೆ ಸಫಲರಾಗದಿದ್ದಾಗ ಮತ್ತೋರ್ವ ಆರೋಪಿ ಚರಣ್ ಕುಮಾರ್ ಎಂಬಾತನ ಸಹಾಯದಿಂದ 2021ರ ಜನವರಿ 25ರಂದು ರಾತ್ರಿ ವೃದ್ಧೆಯ ಉಸಿರುಗಟ್ಟಿಸಿ ಕೊಲೆ ಮಾಡಲಾಗಿರುತ್ತದೆ. ವೃದ್ಧೆಯ ಕೊಲೆ ಮಾಡಿದ ಬಳಿಕ ಆರೋಪಿಗಳು ಆಕೆಯ ಬಳಿಯಿದ್ದ ಒಟ್ಟು 61.070ಗ್ರಾಂ ತೂಕದ (ಅಂದಿನ…

Read More

ಬೆಂಗಳೂರು: ರಾಜ್ಯದಲ್ಲಿ ಉದ್ಯೋಗದ ಕೊರತೆಯಿಂದ ಯುವಕರ ಸಂಕಷ್ಟ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಇದೀಗ ಶಿಕ್ಷಕ ಅಭ್ಯರ್ಥಿಗಳು ಸರ್ಕಾರದ ಮುಂದೆ ವಿಭಿನ್ನ ರೀತಿಯ ಮನವಿಯೊಂದನ್ನು ಸಲ್ಲಿಸಿದ್ದಾರೆ. “ಉದ್ಯೋಗ ಸಿಗುತ್ತಿಲ್ಲ, ಕೆಲಸ ಇಲ್ಲದ ಕಾರಣ ಮದುವೆಯೂ ಆಗುತ್ತಿಲ್ಲ. ಹೀಗಾಗಿ ಕನ್ಯಾ ಭಾಗ್ಯವನ್ನಾದರೂ ನೀಡಿ” ಎಂದು ಸರ್ಕಾರದ ಗಮನ ಸೆಳೆಯುವ ಮೂಲಕ ತಮ್ಮ ಅಳಲು ಹೊರಹಾಕಿದ್ದಾರೆ.ಡಿ.ಎಡ್. (D.Ed.) ಪೂರ್ಣಗೊಳಿಸಿರುವ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಭ್ಯರ್ಥಿಗಳು, ಶಿಕ್ಷಕರ ನೇಮಕಾತಿಯಲ್ಲಿ ಸರ್ಕಾರ ವಿಳಂಬ ಮಾಡುತ್ತಿರುವುದನ್ನು ಖಂಡಿಸಿ ಪ್ರತಿಭಟನೆ ನಡೆಸಿದರು. ರಾಜ್ಯದಲ್ಲಿ ಸುಮಾರು 32 ಸಾವಿರ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ಹುದ್ದೆಗಳು ಖಾಲಿ ಇದ್ದರೂ, ಶಿಕ್ಷಣ ಇಲಾಖೆ ಕೇವಲ 800 ಹುದ್ದೆಗಳ ನೇಮಕಾತಿಗೆ ಮಾತ್ರ ಅಧಿಸೂಚನೆ ಹೊರಡಿಸಿರುವುದಾಗಿ ಅಭ್ಯರ್ಥಿಗಳು ಆರೋಪಿಸಿದ್ದಾರೆ. ವಿಶೇಷವಾಗಿ ಕಲ್ಯಾಣ ಕರ್ನಾಟಕ ಭಾಗದಲ್ಲಿ 800 ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಆರಂಭಿಸಿರುವುದರಿಂದ, ಉಳಿದ ಅಭ್ಯರ್ಥಿಗಳ ಭವಿಷ್ಯ ಏನಾಗಲಿದೆ ಎಂದು ಅವರು ಪ್ರಶ್ನಿಸಿದ್ದಾರೆ. ಹಲವು ವರ್ಷಗಳಿಂದ ನೇಮಕಾತಿಗಾಗಿ ಕಾಯುತ್ತಿರುವ ತಮ್ಮ ವಯಸ್ಸು ಮೀರಿಬರುತ್ತಿದ್ದು, ಉದ್ಯೋಗವಿಲ್ಲದ ಕಾರಣ ಮದುವೆಯೂ…

Read More

ಕಾಸರಗೋಡು: ಜಿಲ್ಲೆಯಲ್ಲಿ ಎಚ್1ಎನ್‌1 ವೈರಸ್ ಸೋಂಕಿನ ಆತಂಕ ಹೆಚ್ಚಾಗಿದ್ದು, ತೀವ್ರ ಜ್ವರದಿಂದ ಬಳಲುತ್ತಿದ್ದ ಗೃಹಿಣಿಯೊಬ್ಬರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಮೃತರನ್ನು ಕಾಸರಗೋಡು ಜಿಲ್ಲೆಯ ಅಜನೂರು ಮಾಣಿಕೊಟ್ಟೆಯ ನಿವಾಸಿ ಯಶೋದಾ ಎಂದು ಗುರುತಿಸಲಾಗಿದೆ. ಕೆಲವು ದಿನಗಳ ಹಿಂದೆ ಅವರಿಗೆ ತೀವ್ರ ಜ್ವರ ಹಾಗೂ ಕೆಮ್ಮಿನ ಲಕ್ಷಣಗಳು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕಾಸರಗೋಡಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಆರೋಗ್ಯ ಸ್ಥಿತಿ ಹದಗೆಟ್ಟ ಕಾರಣ, ಎಚ್1ಎನ್‌1 ಸೋಂಕಿನ ಶಂಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಮಂಗಳೂರಿನ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ (ICU) ಚಿಕಿತ್ಸೆ ನೀಡಲಾಗುತ್ತಿದ್ದರೂ, ಚಿಕಿತ್ಸೆ ಫಲಕಾರಿಯಾಗದೆ ಯಶೋದಾ ಮೃತಪಟ್ಟಿದ್ದಾರೆ. ಈ ನಡುವೆ, ಯಶೋದಾ ಅವರ ಪ್ರಾಥಮಿಕ ಸಂಪರ್ಕದಲ್ಲಿದ್ದ ಕುಟುಂಬ ಸದಸ್ಯರು ಸೇರಿದಂತೆ ಒಟ್ಟು ಏಳು ಮಂದಿಯಲ್ಲಿ ಜ್ವರ ಹಾಗೂ ಕೆಮ್ಮಿನ ಲಕ್ಷಣಗಳು ಕಂಡುಬಂದಿವೆ. ಆರೋಗ್ಯ ಇಲಾಖೆ ತಕ್ಷಣವೇ ಅವರ ಗಂಟಲ ದ್ರವದ ಮಾದರಿಗಳನ್ನು ಸಂಗ್ರಹಿಸಿ, ಸೋಂಕು ದೃಢಪಡಿಸಲು ಪ್ರಯೋಗಾಲಯಕ್ಕೆ ಕಳುಹಿಸಿದೆ. ಘಟನೆಯ…

Read More

ಬೆಂಗಳೂರು: ಖಾಸಗಿ ಕಾಲೇಜಿಗೆ ನುಗ್ಗಿದ ತಂದೆಯೊಬ್ಬರು ತಮ್ಮ ಮಗಳಿಗೆ ಚಾಕುವಿನಿಂದ ಹಲ್ಲೆ ನಡೆಸಿರುವ ಘಟನೆ ನಗರದ ರಾಜಾನುಕುಂಟೆಯಲ್ಲಿ ನಡೆದಿದೆ. ಖಾಸಗಿ ಕಾಲೇಜಿನಲ್ಲಿ ಅಸಿಸ್ಟೆಂಟ್ ಪ್ರೊಫೆಸರ್ ಆಗಿ ಕೆಲಸ ಮಾಡುತ್ತಿದ್ದ ಲಕ್ಷ್ಮಿ ದುರ್ಗ ಚಾಕು ಇರಿತಕ್ಕೊಳಗಾದ ಯುವತಿ. ಆಕೆಯ ತಂದೆ ನಾಗೇಂದ್ರ ಚಾಕು ಇರಿದ ಆರೋಪಿಯಾಗಿದ್ದಾನೆ. ಜು.25ರ ಮಧ್ಯಾಹ್ನ 3:00 ಗಂಟೆ ವೇಳೆಗೆ ಕಾಲೇಜಿನ ಪ್ರಾಂಶುಪಾಲರ ಕೊಠಡಿಯಲ್ಲೇ ಕೃತ್ಯ ನಡೆದಿದೆ. ಆರೋಪಿ ಕಾಲೇಜಿಗೆ ಬಂದು ಮಗಳನ್ನು ನೋಡಬೇಕು ಎಂದಿದ್ದ. ಬಳಿಕ ಕ್ಯಾಬಿನ್‌ಗೆ ನುಗ್ಗಿ ಮಗಳ ಹೊಟ್ಟೆ, ಎದೆ ಕುತ್ತಿಗೆಗೆ ಇರಿದು ಪರಾರಿಯಾಗಿದ್ದಾನೆ. ಈ ಸಂಬಂಧ ರಾಜಾನುಕುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು: ಗಂಗಮ್ಮನ ಗುಡಿ ಸರ್ಕಲ್ ಬಳಿ ಮಹಿಳೆ ಜೊತೆ ಅಸಭ್ಯವಾಗಿ ವರ್ತಿಸಿದ್ದಾರೆ ಎಂದು ಆರೋಪಿಸಿ ಹೆಡ್‌ ಕಾನ್ಸ್‌ಟೇಬಲ್‌ಗೆ ಹಿಗ್ಗಾಮುಗ್ಗ ಥಳಿಸಿದ ಘಟನೆ ನಡೆದಿದೆ. ಸಂಜಯ್ ನಗರ ಠಾಣೆಯ ಹೆಡ್‌ ಕಾನ್ಸ್‌ಟೇಬಲ್‌ ಮಂಜುನಾಥ್ ಅವರ ಮೇಲೆ ಹಲ್ಲೆ ನಡೆದಿದೆ. ಜಾಲಹಳ್ಳಿಗೆ ತೆರಳಲು ಅವರು ಬಸ್‌ ಹತ್ತಿದ್ದರು. ಬಸ್‌ನಲ್ಲಿ ಮಹಿಳೆಯೊಬ್ಬರ ಜೊತೆ ಅಸಭ್ಯವಾಗಿ ವರ್ತಿಸಿದ್ದಾರೆ ಎಂದು ಮಾತಿಗೆ ಮಾತು ಬೆಳೆದು ದೊಡ್ಡ ಗಲಾಟೆಯಾಗಿದೆ. ಮಹಿಳೆ ಸಂಬಂಧಿಕರಿಗೆ ಕರೆ ಮಾಡಿ, ಗಂಗಮ್ಮನ ಗುಡಿ ಸರ್ಕಲ್ ಬಳಿಗೆ ಕರೆಸಿಕೊಂಡಿದ್ದಳು. ಬಸ್‌ ಅಲ್ಲಿಗೆ ಬರುತ್ತಿದ್ದಂತೆ ಯುವಕರ ಗುಂಪು ಹಲ್ಲೆ ನಡೆಸಿದೆ. ನಾನು ಪೊಲೀಸ್ ಪೊಲೀಸ್ ಎಂದರೂ ಬಿಡದೆ ಬಟ್ಟೆ ಹರಿದು ಹಲ್ಲೆ ಮಾಡಿದ್ದಾರೆ. ಹಲ್ಲೆಯಿಂದ ಮುಖ ಹಾಗೂ ಮೈಮೇಲೆ ಗಾಯಗಳಾಗಿದ್ದು, ಅವರಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮಹಿಳೆ ಹಾಗೂ ಪೊಲೀಸ್‌ ಪೇದೆಯಿ ಇಬ್ಬರೂ ದೂರು – ಪ್ರತಿದೂರು ದಾಖಲಿಸಿದ್ದಾರೆ.

Read More