Author: admin
ಮೂಡುಬಿದಿರೆ: ಒಮಾನ್‌ನಲ್ಲಿ ಸಂಭವಿಸಿದ ವಾಹನ ಅಪಘಾತದಲ್ಲಿ ಮೂಡುಬಿದಿರೆ ಸಮೀಪದ ಸಾಣೂರು ಗ್ರಾಮದ ಯುವಕನೋರ್ವ ಮೃತಪಟ್ಟಿರುವ ಘಟನೆ ನಡೆದಿದೆ. ಮೃತರನ್ನು ಸಾಣೂರು ಮೂಲಗುತ್ತು ನಿವಾಸಿ ರಾಜವರ್ಮ ಜೈನ್ (33) ಎಂದು ಗುರುತಿಸಲಾಗಿದೆ. ರಾಜವರ್ಮ ಜೈನ್ ಅವರು ಒಮಾನ್‌ನ ಖಾಸಗಿ ಸಂಸ್ಥೆಯೊಂದರಲ್ಲಿ ಉದ್ಯೋಗದಲ್ಲಿದ್ದರು. ಕಂಪನಿಯ ವಾಹನವನ್ನು ಸಹೋದ್ಯೋಗಿಯೊಬ್ಬರು ರಿವರ್ಸ್ ತೆಗೆದುಕೊಳ್ಳುತ್ತಿದ್ದರು. ಈ ವೇಳೆ ರಾಜವರ್ಮ ಅವರು ಆಕಸ್ಮಿಕವಾಗಿ ವಾಹನದ ಚಕ್ರದಡಿ ಸಿಲುಕಿದ್ದು, ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಮೃತರು ಪತ್ನಿ, ಪುತ್ರಿ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.
ಉಪ್ಪಿನಂಗಡಿ : ನಿಂತಿದ್ದ ಟಿಪ್ಪರ್ ಲಾರಿಯ ಹಿಂಬದಿಗೆ ಕಾರೊಂದು ಢಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ 4 ವರ್ಷದ ಮಗು ಸೇರಿದಂತೆ ಒಂದೇ ಕುಟುಂಬದ ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಪೆರ್ನೆ ಸಮೀಪದ ಮೈರಕಟ್ಟೆ ಎಂಬಲ್ಲಿ ಜುಲೈ 28ರಂದು ಸಂಭವಿಸಿದೆ. ಮೂಲತಃ ಫರಂಗಿಪೇಟೆ ನಿವಾಸಿಗಳಾದ ಕಾರು ಚಾಲಕ ಮೊಹಮ್ಮದ್ ಫಾರೂಕ್ (31), ಪ್ರಯಾಣಿಕರಾದ ಫಾತಿಮತ್ ತಸ್ಪಿಯಾ (25), ಜುಲೈಕಾ (52), ಮಹಮ್ಮದ್ ಅಫ್ವಾನ್ (15) ಹಾಗೂ 4 ವರ್ಷದ ಪುಟ್ಟ ಮಗು ಮಹಮ್ಮದ್ ಇಲ್ಹಾನ್ ಗಾಯಗೊಂಡ ಪ್ರಯಾಣಿಕರು. ಫರಂಗಿಪೇಟೆ ಕಡೆಯಿಂದ ಉಪ್ಪಿನಂಗಡಿ ಕಡೆಗೆ ಸಂಚರಿಸುತ್ತಿದ್ದ ವೇಳೆ ಪೆರ್ನೆಯ ಮೈರಕಟ್ಟೆ ಬಳಿ ಹೆದ್ದಾರಿ ಬದಿಯಲ್ಲಿ ನಿಲ್ಲಿಸಲಾಗಿದ್ದ ಟಿಪ್ಪರ್ ಲಾರಿಗೆ ಕಾರು ಹಿಂಬದಿಯಿಂದ ಬಂದು ಭೀಕರವಾಗಿ ಢಿಕ್ಕಿಯಾಗಿದೆ. ಅಪಘಾತದ ರಭಸಕ್ಕೆ ಕಾರಿನ ಮುಂಭಾಗ ಜಖಂಗೊಂಡಿದ್ದು, ಒಳಗಿದ್ದ ಪ್ರಯಾಣಿಕರಿಗೆ ಗಾಯಗಳಾಗಿವೆ. ಘಟನೆಗೆ ಸಂಬಂಧಿಸಿದಂತೆ ಪುತ್ತೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಕೋಝಿಕೋಡ್ : ಕೇರಳದ ಕೋಝಿಕೋಡ್ ಗ್ರಾಮೀಣ ಪೊಲೀಸರ ವಿಶೇಷ ತನಿಖಾ ತಂಡ (SIT) ನಡೆಸುತ್ತಿರುವ ಎಂಡಿಎಂಎ (MDMA) ಮಾದಕ ದ್ರವ್ಯ ಜಾಲದ ತನಿಖೆಯಲ್ಲಿ ಮತ್ತೊಂದು ಶಾಕಿಂಗ್ ವಿಷಯ ಬೆಳಕಿಗೆ ಬಂದಿದ್ದು, ಪೆರಂಬ್ರಾ ಬಿಆರ್‌ಸಿಯ ಮೂರನೇ ವಿಶೇಷ ಶಿಕ್ಷಕಿ ವಿ.ಪಿ. ನೀಶ್ಮಾ (30) ಮಂಗಳವಾರ ಬಂಧನಕ್ಕೊಳಗಾಗಿದ್ದಾರೆ. ಆಟಿಸಂ ಕೇಂದ್ರದ ವಿಶೇಷ ಶಿಕ್ಷಕಿ ಅವಲಾ ಕುಟ್ಟೋತ್ ಮೂಲದ ವಿ.ಪಿ. ನೀಶ್ಮಾ ಬಂಧನದೊಂದಿಗೆ ಪ್ರಕರಣದಲ್ಲಿ ಸಿಕ್ಕಿಬಿದ್ದ ಶಿಕ್ಷಕಿಯರ ಸಂಖ್ಯೆ 3ಕ್ಕೆ ಏರಿಕೆಯಾಗಿದೆ. ಈ ಹಿಂದೆ ದೈಹಿಕ ಶಿಕ್ಷಣ ಶಿಕ್ಷಕಿ ಕೀರ್ತನಾ ಹಾಗೂ ಕಾವ್ಯಾ ಎಂಬವರನ್ನು ಬಂಧಿಸಿ ಸೇವೆಯಿಂದ ವಜಾಗೊಳಿಸಲಾಗಿತ್ತು. ಈ ಮೂವರೂ ಶಿಕ್ಷಕಿಯರು ನಿರಂತರವಾಗಿ ಮಾದಕ ದ್ರವ್ಯ (MDMA) ಸೇವನೆ ಮಾಡುತ್ತಿದ್ದುದಲ್ಲದೆ, ಇನ್‌ಸ್ಟಾಗ್ರಾಮ್ ಖಾತೆಗಳ ಮೂಲಕ ಗ್ರಾಹಕರನ್ನು ಸೆಳೆದು ಹೈಟೆಕ್ ದಂಧೆ ನಡೆಸುತ್ತಿದ್ದರು ಎಂದು ವಟಕರ ಇನ್ಸ್‌ಪೆಕ್ಟರ್ ಎ.ವಿ. ದಿನೇಶ್ ದೃಢಪಡಿಸಿದ್ದಾರೆ. ಮಾದಕ ದ್ರವ್ಯದ ಜಾಲದ ಕೊಂಡಿ ಗಲ್ಫ್ ದೇಶದ ಸಂಖ್ಯೆಗೆ ಲಿಂಕ್ ಆಗಿದ್ದು, ಗಲ್ಫ್ ಸಂಖ್ಯೆಯ ಮೂಲಕ ವಾಟ್ಸಾಪ್/ಸಂದೇಶ ಕಳುಹಿಸಿ ಬುಕಿಂಗ್ ಮಾಡಲಾಗುತ್ತಿತ್ತು. ಹಣ…
ನವದೆಹಲಿ: ಮುಖ್ಯಮಂತ್ರಿಗಳು ದೆಹಲಿಗೆ ಬಂದು ನೀಟ್ ಹಗರಣದ ವಿರುದ್ಧ ಪ್ರತಿಭಟನೆ ಮಾಡುತ್ತಾರೆ. ಆದರೆ ಕೆಪಿಎಸ್‌ಸಿ ಹಗರಣದಲ್ಲಿ ಸಾವಿರಾರು ವಿದ್ಯಾರ್ಥಿಗಳು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಹೋರಾಟ ಮಾಡುತ್ತಿದ್ದಾರೆ. ಅವರ ನೋವು ಮುಖ್ಯಮಂತ್ರಿಗಳಿಗೆ ಕಾಣುತ್ತಿಲ್ಲವೇ ಎಂದು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಪ್ರಶ್ನಿಸಿದ್ದಾರೆ. ಲೋಕಸಭೆಯಲ್ಲಿ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕಟ್ಟುನಿಟ್ಟಿನ ತಡೆ ಕಾಯ್ದೆಗೆ ತಿದ್ದುಪಡಿ ತರುವ ಮಸೂದೆಯ ಮೇಲಿನ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡುವ ವೇಳೆ ಮುಖ್ಯಮಂತ್ರಿಗಳಿಗೆ ಪ್ರಶ್ನಿಸಿದ ಅವರು, “10 ದಿನಗಳ ಹಿಂದೆ ಕೆಪಿಎಸ್‌ಸಿ ಅಧ್ಯಕ್ಷರನ್ನು ಅಮಾನತು ಮಾಡಲಾಗಿದೆ. ತಮ್ಮ ಮಕ್ಕಳಿಗೆ ನಕಲಿ ದಾಖಲೆಗಳನ್ನು ಮಾಡಿಸಿರುವ ಆರೋಪದ ಹಿನ್ನೆಲೆ ಈ ಕ್ರಮ ಕೈಗೊಳ್ಳಲಾಗಿದೆ. ಇತ್ತೀಚೆಗೆ ವೆಟರ್ನರಿ ಕಾಲೇಜಿನಲ್ಲಿ ಒಂದೊಂದು ಸೀಟಿಗೆ ೮೦ ಲಕ್ಷ ರೂ. ವಸೂಲಿ ಮಾಡಿದ ಹಗರಣವೂ ನಡೆದಿದೆ. ಅನ್ಯಾಯಕ್ಕೊಳಗಾದ ಪ್ರತಿಯೊಬ್ಬ ವಿದ್ಯಾರ್ಥಿಯ ಪರವಾಗಿ ನಾನು ಮಾತನಾಡುತ್ತಿದ್ದೇನೆ. ಈ ಎಲ್ಲ ವಿಚಾರಗಳ ಬಗ್ಗೆ ಸಿಎಂ ಉತ್ತರ ನೀಡಬೇಕು” ಎಂದು ಕೇಳಿದ್ದಾರೆ. “ದೇಶದ ಯುವಕರು ರಾಜಕೀಯ ಆರೋಪ-ಪ್ರತ್ಯಾರೋಪಗಳನ್ನು ನೋಡುತ್ತಿಲ್ಲ. ಅವರಿಗೆ ನ್ಯಾಯಯುತ ಪರೀಕ್ಷಾ ವ್ಯವಸ್ಥೆ…
ಮಂಗಳೂರು: ಯುವಜನರಲ್ಲಿ ಮಾದಕ ವಸ್ತುಗಳ ಬಳಕೆಯನ್ನು ತಡೆಗಟ್ಟುವ ಉದ್ದೇಶದಿಂದ ಮಂಗಳೂರು ನಗರ ಪೊಲೀಸರು ಕಾಲೇಜು ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ದಿಢೀರ್ ಡ್ರಗ್ ಪರೀಕ್ಷೆ ನಡೆಸಿದರು. ನಗರದ ಕೊಟೆಕಾರ್ ಬೀರಿ ಹಾಗೂ ಕೊಣಾಜೆ ಬಂಟ್ಸ್ ಭವನ ಸಮೀಪ ಈ ವಿಶೇಷ ಕಾರ್ಯಾಚರಣೆ ನಡೆಯಿತು. ದಕ್ಷಿಣ ಹಾಗೂ ಕೇಂದ್ರ ಉಪವಿಭಾಗಗಳ ಸಹಾಯಕ ಪೊಲೀಸ್ ಆಯುಕ್ತರ (ACP) ನೇತೃತ್ವದಲ್ಲಿ, ಕಾನೂನು ಮತ್ತು ಸುವ್ಯವಸ್ಥೆಯ ಉಪ ಪೊಲೀಸ್ ಆಯುಕ್ತರ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆಸಲಾಯಿತು. ಸಂಜೆ 4.30ರಿಂದ 6.00 ಗಂಟೆಯವರೆಗೆ ನಡೆದ ಕಾರ್ಯಾಚರಣೆಯಲ್ಲಿ ಖಾಸಗಿ ಹಾಗೂ ಕಾಲೇಜು ಬಸ್‌ಗಳನ್ನು ತಡೆದು, ವಿದ್ಯಾರ್ಥಿಗಳಿಗೆ ಮಲ್ಟಿ-ಡ್ರಗ್ ಟೆಸ್ಟಿಂಗ್ ಕಿಟ್ ಬಳಸಿ ಪರೀಕ್ಷೆ ನಡೆಸಲಾಯಿತು. ಕೊಟೆಕಾರ್ ಬೀರಿ ಪ್ರದೇಶದಲ್ಲಿ ಎಸ್‌ಡಿಎಂ ಕಾಲೇಜು, ನಿಟ್ಟೆ ಕೆ.ಎಸ್. ಹೆಗ್ಡೆ, ಸೇಂಟ್ ಅಲೋಶಿಯಸ್, ಪಿ.ಎ. ಕಾಲೇಜು, ಬಿಯರೀಸ್ ಇನ್‌ಸ್ಟಿಟ್ಯೂಟ್, ಟಿಪ್ಪು ಸುಲ್ತಾನ್ ಕಾಲೇಜು ಹಾಗೂ ಕೆನರಾ ಕಾಲೇಜು ಸೇರಿದಂತೆ ವಿವಿಧ ಶಿಕ್ಷಣ ಸಂಸ್ಥೆಗಳ 72 ವಿದ್ಯಾರ್ಥಿಗಳನ್ನು ಪರೀಕ್ಷಿಸಲಾಯಿತು. ಇವರಲ್ಲಿ 71 ವಿದ್ಯಾರ್ಥಿಗಳ ವರದಿ ನೆಗೆಟಿವ್ ಬಂದಿದ್ದು, ಒಬ್ಬ ವಿದ್ಯಾರ್ಥಿ…
ಬೆಂಗಳೂರು: ಐಷಾರಾಮಿ ಕಾರುಗಳಿಗೆ ನಕಲಿ ದಾಖಲೆಗಳನ್ನು ಸೃಷ್ಟಿಸಿ ಸರಣಿ ವಂಚನೆ ಎಸಗುತ್ತಿದ್ದ ಭಾರಿ ಜಾಲವನ್ನು ಆಡುಗೋಡಿ ಠಾಣೆ ಪೊಲೀಸರು ಭೇದಿಸಿದ್ದಾರೆ. ಕಾರ್ಯಾಚರಣೆ ನಡೆಸಿದ ಪೊಲೀಸರು ನಾಲ್ವರು ಖತರ್ನಾಕ್ ಆರೋಪಿಗಳನ್ನು ಬಂಧಿಸಿದ್ದು, ಅವರಿಂದ 1.74 ಕೋಟಿ ರೂಪಾಯಿ ಮೌಲ್ಯದ 7 ಐಷಾರಾಮಿ ಕಾರುಗಳನ್ನು ವಶಪಡಿಸಿಕೊಂಡಿದ್ದಾರೆ. ಪ್ರಭಾಕರ್, ಪ್ರಶಾಂತ್, ವೇಣುಗೌಡ ಹಾಗೂ ಭಾಗೇಶ್ ಬಂಧಿತ ಆರೋಪಿಗಳು. ಇವರಿಂದ 2 ಫಾರ್ಚೂನರ್, 1 ವೋಲ್ವೋ, 1 ಇನ್ನೋವಾ, ಫೋರ್ಡ್ ಹಾಗೂ ಸ್ವಿಫ್ಟ್ ಸೇರಿದಂತೆ ಒಟ್ಟು 7 ಕಾರುಗಳನ್ನು ಜಪ್ತಿ ಮಾಡಲಾಗಿದೆ. ವಂಚನೆಯ ಜಾಲ ಹೇಗಿತ್ತು? ಬಂಧಿತ ಆರೋಪಿಗಳು ಕಾರು ಬ್ರೋಕರ್ ಕೆಲಸದ ನೆಪದಲ್ಲಿ ವಂಚನೆಗೆ ಇಳಿಯುತ್ತಿದ್ದರು. 40 ರಿಂದ 50 ಲಕ್ಷ ರೂಪಾಯಿ ಮೌಲ್ಯದ ಕಾರುಗಳನ್ನು ಅಡವಿಟ್ಟು 4-5 ಲಕ್ಷ ರೂಪಾಯಿ ಸಾಲ ಪಡೆಯುವ ಆಟೋಮೊಬೈಲ್ ಮಾಲೀಕರನ್ನು ಈ ಜಾಲ ಟಾರ್ಗೆಟ್ ಮಾಡುತ್ತಿತ್ತು. ಮಾಲೀಕರು ಕಾರು ಅಡಮಾನವಿಟ್ಟ ತಕ್ಷಣ, ಆ ಕಾರುಗಳಿಗೆ ನಕಲಿ ದಾಖಲೆಗಳನ್ನು ಸೃಷ್ಟಿಸುತ್ತಿದ್ದರು ಅಥವಾ ಒರಿಜಿನಲ್ ಆರ್‌ಸಿ (RC) ಕಾರ್ಡ್ ಟ್ಯಾಂಪರ್ ಮಾಡಿ…
ಬೆಂಗಳೂರು: ಕರ್ನಾಟಕ ಮತ್ತು ತಮಿಳುನಾಡಿನ ನಡುವೆ ಕಾವೇರಿ ಜಲ ವಿವಾದ ಮತ್ತೆ ಸಂಘರ್ಷದ ರೂಪ ಪಡೆದಿದೆ. ರಾಜ್ಯದಲ್ಲಿ ತೀವ್ರ ಬರ ಸ್ಥಿತಿಯ ನಡುವೆಯೂ ತಮಿಳುನಾಡಿಗೆ ಮುಂದಿನ 15 ದಿನ 3,500 ಕ್ಯೂಸೆಕ್ ನೀರು ಹರಿಸಲು ಕಾವೇರಿ ನೀರು ನಿಯಂತ್ರಣ ಸಮಿತಿ ಕರ್ನಾಟಕಕ್ಕೆ ಸೂಚಿಸಿದೆ. ಮತ್ತೊಂದೆಡೆ ಮೇಕೆದಾಟು ಯೋಜನೆ ವಿರೋಧಿಸಿ ತಮಿಳುನಾಡು ಸಿಎಂ ವಿಜಯ್ ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದಿದ್ದಾರೆ. ಈ ಎಲ್ಲ ಬೆಳವಣಿಗೆಗಳ ನಡುವೆಯೂ ಮೊದಲೇ ತೀರ್ಮಾನಿಸಿದ್ದಂತೆ ಆಗಸ್ಟ್ 3ರ ಸಂಧಾನ ಸಭೆಗೆ ಕರ್ನಾಟಕ ಸಿದ್ಧತೆ ನಡೆಸಿದೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆಯಲಿರುವ ಸಭೆಯಲ್ಲಿ ಎರಡು ರಾಜ್ಯಗಳ ಮುಖ್ಯಮಂತ್ರಿಗಳು ಭಾಗಿಯಾಗಲಿದ್ದು, ಮೇಕೆದಾಟುವಿನಲ್ಲಿ ಕಾವೇರಿ ನದಿಗೆ ಅಣೆಕಟ್ಟು ನಿರ್ಮಿಸುವ ಪ್ರಸ್ತಾವನೆ ಸೇರಿ ಮತ್ತಿತರ ನದಿ ನೀರು ಹಂಚಿಕೆ ವಿಷಯಗಳ ಕುರಿತು ದ್ವಿಪಕ್ಷೀಯ ಮಾತುಕತೆ ನಡೆಯಲಿದೆ. ತಮಿಳುನಾಡು ಸಿಎಂಜೊತೆ ಕೆಲ ಸಚಿವರುಗಳು ಸಹ ಸಭೆಯಲ್ಲಿ ಭಾಗಿಯಾಗುವ ಸಾಧ್ಯತೆ ಇದೆ. ಮಧ್ಯಾಹ್ನ 12 ಗಂಟೆಗೆ ಸಭೆ ನಡೆಯಲಿದೆ ಎನ್ನಲಾಗಿರುವ ಕಾರಣಕ್ಕೆ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಲಾಗುತ್ತಿದೆ.…
ಗ್ಲಾಸ್ಗೋ: 2026ರ ಕಾಮನ್‌ವೆಲ್ತ್ ಗೇಮ್ಸ್ ಕ್ರೀಡಾಕೂಟದಲ್ಲಿ ಚಿನ್ನ ಗೆಲ್ಲುವ ಮೂಲಕ ಭಾರತದ ಪ್ಯಾರಾ ಅಥ್ಲಿಟ್ ಶರ್ಮಿಳಾ ಧಂಕರ್ ಹೊಸ ಇತಿಹಾಸ ಸೃಷ್ಟಿಸಿದ್ದಾರೆ. ಗ್ಲ್ಯಾಸ್ಗೋದಲ್ಲಿ ಮಂಗಳವಾರ ನಡೆದ ಮಹಿಳೆಯರ ಶಾಟ್‌ಪುಟ್ ಎಫ್57 ವಿಭಾಗದಲ್ಲಿ ಶರ್ಮಿಳಾ ಉತ್ತಮ ಪ್ರದರ್ಶನ ನೀಡಿದ್ದಾರೆ. ಫೈನಲ್ ಪಂದ್ಯದಲ್ಲಿ ಶರ್ಮಿಳಾ ಅವರು 9.81 ಮೀಟರ್ ದೂರಕ್ಕೆ ಗುಂಡು ಎಸೆಯುವ ಮೂಲಕ ಚಿನ್ನದ ಪದಕವನ್ನ ತಮ್ಮದಾಗಿಸಿಕೊಂಡಿದ್ದಾರೆ. ಈ ಮೂಲಕ ಭಾರತದ ಪರ ಕಾಮನ್‌ವೆಲ್ತ್ ಇತಿಹಾಸದಲ್ಲೇ ಚಿನ್ನದ ಪದಕ ಗೆದ್ದ ಮೊದಲ ಪ್ಯಾರಾ ಅಥ್ಲಿಟ್ ಎಂಬ ಹೆಗ್ಗಳಿಕೆಗೆ ಶರ್ಮಿಳಾ ಅವರು ಪಾತ್ರರಾಗಿದ್ದಾರೆ. ಇನ್ನು ಇದೇ ಸ್ಪರ್ಧೆಯಲ್ಲಿ ಕನ್ನಡತಿ ಕೆ. ಶಿಲ್ಪಾ ಅವರು 7.26 ಮೀಟರ್ ದೂರಕ್ಕೆ ಗುಂಡು ಎಸೆಯುವ ಮೂಲಕ ಕಂಚಿನ ಪದಕಕ್ಕೆ ಕೊರಳೊಡ್ಡಿದ್ದಾರೆ. ಈ ಗೆಲುವಿನೊಂದಿಗೆ ಭಾರತಕ್ಕೆ 2 ಚಿನ್ನ, 5 ಬೆಳ್ಳಿ ಮತ್ತು 3 ಕಂಚಿನ ಪದಕ ಬಂದಿದ್ದು, ಒಟ್ಟು ಪದಕಗಳ ಸಂಖ್ಯೆ 10ಕ್ಕೆ ಏರಿಕೆಯಾಗಿದೆ.
ಬೆಂಗಳೂರು: ಎಸ್‌ಐಆರ್ ಅವಧಿ ವಿಸ್ತರಣೆ ಚುನಾವಣಾ ಆಯೋಗಕ್ಕೆ ಬಿಟ್ಟ ವಿಚಾರ ಎಂದು ಕರ್ನಾಟಕ ಹೈಕೋರ್ಟ್ ಹೇಳಿದೆ. ಎಸ್‌ಐಆರ್ ಅವಧಿ ವಿಸ್ತರಿಸುವಂತೆ ದೇವನೂರು ಮಹದೇವ್ ಮತ್ತು ರಾಮಚಂದ್ರಗುಹಾ ಅವರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಮುಖ್ಯಪೀಠ, ಅವಧಿ ವಿಸ್ತರಣೆ ಮಾಡುವ ಅಧಿಕಾರ ಚುನಾವಣಾ ಆಯೋಗಕ್ಕೆ ಇದೆ. ಅವಧಿ ವಿಸ್ತರಿಸುವುದು ಚುನಾವಣಾ ಆಯೋಗಕ್ಕೆ ಬಿಟ್ಟ ವಿಚಾರ ಎಂದು ತಿಳಿಸಿದೆ. ಆಯೋಗದಲ್ಲಿ ತಜ್ಞರ ತಂಡ ಕೆಲಸ ಮಾಡುತ್ತಿದೆ. ಪರಿಹಾರ ಕ್ರಮಗಳನ್ನೂ ಆಯೋಗವೇ ಕೈಗೊಳ್ಳಬೇಕು. ಅಗತ್ಯವಿದ್ದರೆ ಅವರು ಅದನ್ನು ಮಾಡಲಿದ್ದಾರೆ. ಆಯೋಗ ನಿಮ್ಮ ಕೋರಿಕೆಗೆ ನಿರಾಕರಿಸಿದರೆ ನೀವು ಕೋರ್ಟ್‌ಗೆ ಅರ್ಜಿ ಸಲ್ಲಿಸಬಹುದು. ಈ ಬಗ್ಗೆ ಚುನಾವಣಾ ಆಯೋಗಕ್ಕೆ ಅರ್ಜಿ ಸಲ್ಲಿಸುವಂತೆ ಪೀಠ ಸೂಚಿಸಿದೆ.
ಒಟ್ಟಾವೋ: ಕೆನಡಾದ ಟೊರೊಂಟೊದಲ್ಲಿ 26 ವರ್ಷದ ಭಾರತೀಯ ಮೂಲದ ಯುವತಿಯನ್ನು ಹತ್ಯೆ ಮಾಡಿರುವ ಘಟನೆ ನಡೆದಿದೆ. ನವನೀತ್ ಕೌರ್ ಹತ್ಯೆಯಾದ ಯುವತಿ. ಹಂಬರ್‌ವುಡ್ ಬೌಲೆವಾರ್ಡ್ ಮತ್ತು ರೆಕ್ಸ್‌ಡೇಲ್ ಬೌಲೆವಾರ್ಡ್ ಬಳಿ ಗುಂಡಿನ ದಾಳಿಗೆ ಒಳಗಾಗಿ ಯುವತಿ ಮೃತಪಟ್ಟಿದ್ದಾಳೆ. ಕೌರ್ ಹತ್ಯೆಗೆ ಸಂಬಂಧಿಸಿದಂತೆ ಟೊರೊಂಟೊ ಪೊಲೀಸರು ಬ್ರಾಂಪ್ಟನ್‌ನ 37 ವರ್ಷದ ವ್ಯಕ್ತಿಯನ್ನು ಬಂಧಿಸಿದ್ದಾರೆ. ಶರಣಜಿತ್ ಸಿಂಗ್ ಎಂದು ಗುರುತಿಸಲಾದ ಶಂಕಿತನ ವಿರುದ್ಧ ಕೊಲೆ ಆರೋಪ ಹೊರಿಸಲಾಗಿದೆ. ಯುವತಿ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬ ಆಕೆಯನ್ನು ಹಿಂಬಾಲಿಸಿದ್ದ. ಈ ವೇಳೆ ಆತ ಯುವತಿಯನ್ನು ಮಾತನಾಡಿಸಿದ್ದಾನೆ. ಇಬ್ಬರ ನಡುವೆ ಒಂದಷ್ಟು ಹೊತ್ತು ಮಾತುಕತೆ ನಡೆಯಿತು. ಈ ವೇಳೆ ಯುವತಿಗೆ ಆರೋಪಿ ಶೂಟ್ ಮಾಡಿ ಪರಾರಿಯಾದ ಎಂದು ಪ್ರತ್ಯಕ್ಷದರ್ಶಿಯೊಬ್ಬರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮಾರಕ ಗುಂಡಿನ ದಾಳಿಗೆ ಸಂಬಂಧಿಸಿದಂತೆ ಶಂಕಿತನನ್ನು ಪತ್ತೆಹಚ್ಚಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣ ಸಂಬಂಧ ಮಾಹಿತಿ ಇರುವ ಯಾರಾದರೂ ಪೊಲೀಸರನ್ನು ಅಥವಾ ಕ್ರೈಮ್ ಸ್ಟಾಪರ್ಸ್ ಅನ್ನು ಸಂಪರ್ಕಿಸುವಂತೆ ಪೊಲೀಸರು ಒತ್ತಾಯಿಸಿದ್ದಾರೆ.



