Author: admin

ಕಚಾರ್: ಅಸ್ಸಾಂನ ಕಚಾರ್ ಜಿಲ್ಲೆಯಲ್ಲಿ ಮೆಟಲ್ ಸಂಸ್ಕರಣಾ ಕಾರ್ಖಾನೆಯೊಂದರಲ್ಲಿ ಸಂಭವಿಸಿದ ಭೀಕರ ಸ್ಫೋಟದಲ್ಲಿ ನಾಲ್ವರು ಕಾರ್ಮಿಕರು ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಕಾರ್ಖಾನೆಯ ಮಾಲೀಕ ಸೇರಿದಂತೆ ಐವರನ್ನು ಪೊಲೀಸರು ಬಂಧಿಸಿದ್ದು, ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿದ್ದಾರೆ. ಕಾರ್ಖಾನೆಯಲ್ಲಿ ಉತ್ಪಾದನಾ ಕಾರ್ಯ ನಡೆಯುತ್ತಿದ್ದ ವೇಳೆ ಏಕಾಏಕಿ ಸ್ಫೋಟ ಸಂಭವಿಸಿದೆ. ಸ್ಫೋಟದ ತೀವ್ರತೆಗೆ ಕರಗಿದ ಬಿಸಿ ಲೋಹ ಸುತ್ತಮುತ್ತ ಚಿಮ್ಮಿ ಹತ್ತಿರದಲ್ಲಿದ್ದ ಕಾರ್ಮಿಕರ ಮೇಲೆ ಬಿದ್ದ ಪರಿಣಾಮ ನಾಲ್ವರು ಕಾರ್ಮಿಕರು ಸಾವನ್ನಪ್ಪಿದ್ದಾರೆ. ಗಾಯಗೊಂಡಿರುವ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರಲ್ಲಿ ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಘಟನೆಯ ಬಳಿಕ ತಲೆಮರೆಸಿಕೊಂಡಿದ್ದ ಕಾರ್ಖಾನೆಯ ಮಾಲೀಕನನ್ನು ಗುವಾಹಟಿಯಲ್ಲಿ ಬಂಧಿಸಲಾಗಿದ್ದು, ನಿರ್ದೇಶಕ ಮಂಡಳಿಯ ನಾಲ್ವರು ಸದಸ್ಯರನ್ನು ಕಚಾರ್‌ನಲ್ಲಿ ವಶಕ್ಕೆ ಪಡೆಯಲಾಗಿದೆ. ಬಂಧಿತ ಐವರ ವಿರುದ್ಧ ಭಾರತೀಯ ನ್ಯಾಯ ಸಂಹಿತೆ ಅಡಿಯಲ್ಲಿ ನಿರ್ಲಕ್ಷ್ಯ ಹಾಗೂ ಸುರಕ್ಷತಾ ನಿಯಮ ಉಲ್ಲಂಘನೆ ಸೇರಿದಂತೆ ವಿವಿಧ ಆರೋಪಗಳಡಿ ಪ್ರಕರಣ ದಾಖಲಿಸಲಾಗಿದೆ. ಘಟನೆಯ ಬಳಿಕ ಕಾರ್ಖಾನೆಯ ಎದುರು ಸ್ಥಳೀಯ ನಿವಾಸಿಗಳು ಹಾಗೂ ಕಾರ್ಮಿಕರು…

Read More

ಮಂಗಳೂರು: ನಗರದ ಹಂಪನಕಟ್ಟೆಯಲ್ಲಿ ಶೂ ಅಂಗಡಿಯೊಂದಕ್ಕೆ ಬೆಂಕಿ ತಗುಲಿ ಅಂಗಡಿ ಸಂಪೂರ್ಣ ಭಸ್ಮಗೊಂಡ ಘಟನೆ ಮಂಗಳವಾರ ಬೆಳಗ್ಗೆ ನಡೆದಿದೆ. ಬೆಂಕಿಯ ಕೆನ್ನಾಲಿಗೆ ಪಕ್ಕದ ಎರಡು ಅಂಗಡಿಗಳಿಗೂ ವ್ಯಾಪಿಸಿದ್ದು, ಯುರೋಪ್ ಹೆಸರಿನ ಶೂ ಅಂಗಡಿ ಸಂಪೂರ್ಣ ಸುಟ್ಟು ಹೋಗಿದೆ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿದ್ದು, ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಮೇಲ್ನೋಟಕ್ಕೆ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಈ ಅವಘಡ ಸಂಭವಿಸಿದೆ ಎನ್ನಲಾಗಿದ್ದು, ಘಟನೆಯಿಂದ ಅಪಾರ ಪ್ರಮಾಣದ ನಷ್ಟ ಉಂಟಾಗಿದೆ.

Read More

ರಾಜ್ಯಾದ್ಯಂತ ನಡೆಯುತ್ತಿರುವ ಅಕ್ರಮ ಮರಳು ಗಣಿಗಾರಿಕೆ, ಸಂಗ್ರಹಣೆ ಹಾಗೂ ಸಾಗಾಣಿಕೆಯನ್ನು ಸಂಪೂರ್ಣವಾಗಿ ಮಟ್ಟಹಾಕಲು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ಪೊಲೀಸ್ ಇಲಾಖೆಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದ್ದಾರೆ. ಸಚಿವರ ಸೂಚನೆಯ ಬೆನ್ನಲ್ಲೇ ರಾಜ್ಯ ಪೊಲೀಸ್ ಮಹಾನಿರ್ದೇಶಕರು (ಡಿಜಿ ಮತ್ತು ಐಜಿಪಿ) ರಾಜ್ಯದ ಎಲ್ಲಾ ಪೊಲೀಸ್ ಆಯುಕ್ತರು, ಪೊಲೀಸ್ ಮಹಾನಿರೀಕ್ಷಕರು, ಉಪ ಮಹಾನಿರೀಕ್ಷಕರು ಹಾಗೂ ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ಸಮಗ್ರ ಸುತ್ತೋಲೆಯನ್ನು ಹೊರಡಿಸಿದ್ದಾರೆ. ಅಕ್ರಮ ಮರಳು ಗಣಿಗಾರಿಕೆಯು ನೈಸರ್ಗಿಕ ಪರಿಸರವನ್ನು ನಾಶಪಡಿಸುವುದಲ್ಲದೆ, ಕಾನೂನು ಸುವ್ಯವಸ್ಥೆ ಮತ್ತು ಸರ್ಕಾರದ ಖಜಾನೆಗೆ ಧಕ್ಕೆ ತರುತ್ತಿದೆ. ಹೀಗಾಗಿ ಇಂತಹ ಅಕ್ರಮಗಳ ವಿರುದ್ಧ ‘ಶೂನ್ಯ ಸಹಿಷ್ಣುತೆ (Zero Tolerance)’ ನೀತಿಯನ್ನು ಅನುಸರಿಸಲಾಗುತ್ತಿದ್ದು, ರಾಜ್ಯಾದ್ಯಂತ ಈ ಕಟ್ಟುನಿಟ್ಟಿನ ನಿಯಮಗಳನ್ನು ತಕ್ಷಣದಿಂದಲೇ ಜಾರಿಗೊಳಿಸಲು ಸೂಚಿಸಲಾಗಿದೆ. ಪ್ರಿಯಾಂಕ್ ಖರ್ಗೆ ಹೇಳಿದ್ದೇನು? “ಅಕ್ರಮ ಮರಳು ಗಣಿಗಾರಿಕೆ ಮತ್ತು ಸಾಗಾಣಿಕೆ ರಾಜ್ಯದ ನೈಸರ್ಗಿಕ ಸಂಪತ್ತಿನ ಲೂಟಿ ಮಾತ್ರವಲ್ಲ, ಇದು ಕಾನೂನು ಸುವ್ಯವಸ್ಥೆ ಹಾಗೂ ಸಾರ್ವಜನಿಕ ಹಿತಾಸಕ್ತಿಗೆ ಸವಾಲು ಎಸೆಯುವ ಗಂಭೀರ ಅಪರಾಧವಾಗಿದೆ. ಸರ್ಕಾರ ಯಾವುದೇ ಅಕ್ರಮ…

Read More

ಟೆಹ್ರಾನ್: ಉತ್ತರ ಇರಾಕ್‌ನ ಎರ್ಬಿಲ್ ನಗರ ಹಾಗೂ ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಡ್ರೋನ್ ದಾಳಿಗಳ ಸರಣಿ ವರದಿಯಾಗಿದ್ದು, ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನತೆ ಹೆಚ್ಚಿದೆ. ಎರ್ಬಿಲ್ ಸಮೀಪದ ಖಲೀಫಾ, ಸೊರಾನ್ ಹಾಗೂ ಖೋರ್ ಮೋರ್ ಅನಿಲ ಕ್ಷೇತ್ರವನ್ನು ಗುರಿಯಾಗಿಸಿ ಹಲವು ಡ್ರೋನ್‌ಗಳು ಹಾರಾಟ ನಡೆಸಿವೆ ಎಂದು ಅಂತರರಾಷ್ಟ್ರೀಯ ಹಾಗೂ ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ದಾಳಿಯ ನಂತರ ಹಲವು ಪ್ರದೇಶಗಳಲ್ಲಿ ಸ್ಫೋಟಗಳು ಸಂಭವಿಸಿದ್ದು, ಬೆಂಕಿ ಕಾಣಿಸಿಕೊಂಡಿರುವ ಮಾಹಿತಿಯೂ ಲಭ್ಯವಾಗಿದೆ. ಕೆಲವು ಡ್ರೋನ್‌ಗಳನ್ನು ಇರಾಕ್‌ನ ವಾಯು ರಕ್ಷಣಾ ವ್ಯವಸ್ಥೆ ಹೊಡೆದುರುಳಿಸಿದೆ ಎಂದು ವರದಿಯಾಗಿದ್ದು, ಎರಡು ಡ್ರೋನ್‌ಗಳು ನೆಲಕ್ಕುರುಳಿರುವುದನ್ನು ಸ್ಥಳೀಯ ಪೊಲೀಸರು ದೃಢಪಡಿಸಿದ್ದಾರೆ. ಘಟನೆಯ ಬಳಿಕ ಎರ್ಬಿಲ್ ಹಾಗೂ ಸುತ್ತಮುತ್ತ ಭದ್ರತೆಯನ್ನು ಮತ್ತಷ್ಟು ಬಿಗಿಗೊಳಿಸಲಾಗಿದೆ. ಸ್ಥಳೀಯ ಮಾಧ್ಯಮಗಳನ್ನು ಉಲ್ಲೇಖಿಸಿ, ಅಮೆರಿಕದ ರಾಯಭಾರಿ ಕಛೇರಿ ಸಮೀಪ ಸೇರಿ ಕನಿಷ್ಠ ಏಳು ಸ್ಫೋಟಗಳು ಸಂಭವಿಸಿವೆ ಎಂದು ವರದಿಯಾಗಿದೆ. ಈ ಬೆಳವಣಿಗೆಯ ಬೆನ್ನಲ್ಲೇ ಅಮೆರಿಕವು ಎರ್ಬಿಲ್ ಪ್ರದೇಶದಲ್ಲಿ ಹೆಚ್ಚುವರಿ ಯುದ್ಧವಿಮಾನಗಳು ಮತ್ತು ಡ್ರೋನ್‌ಗಳನ್ನು ನಿಯೋಜಿಸಿರುವುದಾಗಿ ವರದಿಗಳು ತಿಳಿಸಿವೆ. ಇನ್ನೊಂದೆಡೆ, ಅಲ್-ಅನ್ಬರ್…

Read More

ಬಾಗಲಕೋಟೆ: ಜಿಲ್ಲೆಯ ಬೀಳಗಿ ತಾಲೂಕಿನ ಗಲಗಲಿ ಗ್ರಾಮದಲ್ಲಿ ಪತ್ನಿಯನ್ನು ಹತ್ಯೆಗೈದು, ಆಕೆ ಪ್ರಾಣಕ್ಕಾಗಿ ಹೋರಾಡುತ್ತಿದ್ದ ದೃಶ್ಯವನ್ನು ಅತ್ತೆ-ಮಾವನಿಗೆ ವಿಡಿಯೋ ಕಾಲ್‌ ಮೂಲಕ ತೋರಿಸಿದ ಅಮಾನವೀಯ ಘಟನೆ ಬೆಳಕಿಗೆ ಬಂದಿದೆ. ಪ್ರಕರಣ ಸಂಬಂಧ ಪತಿ ಪ್ರವೀಣ್ ಜಿಗಳೂರು ಅವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಮೃತ ಮಹಿಳೆಯನ್ನು ಭಾಗ್ಯಶ್ರೀ ಜಿಗಳೂರು (23) ಎಂದು ಗುರುತಿಸಲಾಗಿದೆ. ಪ್ರಾಥಮಿಕ ತನಿಖೆಯ ಪ್ರಕಾರ, ಪತ್ನಿಯ ಮೇಲೆ ಅನೈತಿಕ ಸಂಬಂಧ ಹೊಂದಿರುವ ಶಂಕೆಯಿಂದ ಪತಿ ಪ್ರವೀಣ್ ಜಿಗಳೂರು ಆಕೆಯೊಂದಿಗೆ ಜಗಳವಾಡಿ, ಬಳಿಕ ಕಟ್ಟಿಗೆಯಿಂದ ಹಲ್ಲೆ ನಡೆಸಿ ನೇಣು ಬಿಗಿದು ಹತ್ಯೆಗೈದಿರುವ ಆರೋಪ ಕೇಳಿಬಂದಿದೆ. ಇದಾದ ಬಳಿಕ, ಪತ್ನಿ ಪ್ರಾಣಕ್ಕಾಗಿ ಒದ್ದಾಡುತ್ತಿದ್ದ ದೃಶ್ಯವನ್ನು ಆಕೆಯ ತಂದೆ-ತಾಯಿಗೆ ವಿಡಿಯೋ ಕಾಲ್‌ ಮೂಲಕ ತೋರಿಸಿದ್ದಲ್ಲದೆ, ಆ ಘಟನೆಯನ್ನು ತನ್ನ ಮೊಬೈಲ್‌ನಲ್ಲಿ ವಿಡಿಯೊ ರೂಪದಲ್ಲೂ ಚಿತ್ರೀಕರಿಸಿದ್ದಾನೆ ಎನ್ನಲಾಗಿದೆ. ಈ ಘಟನೆ ಸ್ಥಳೀಯರಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ. ತನಿಖೆ ವೇಳೆ, ಮೃತಳು ಎರಡು ತಿಂಗಳ ಹಿಂದೆ ದಾಂಪತ್ಯ ಕಲಹದ ಹಿನ್ನೆಲೆಯಲ್ಲಿ ತವರು ಮನೆ ಮಹಾಲಿಂಗಪುರಕ್ಕೆ ತೆರಳಿದ್ದಳು…

Read More

ಕಾರ್ಕಳ : ಬರೋಬ್ಬರಿ 36 ವರ್ಷಗಳಿಂದ ಪೊಲೀಸರ ಕಣ್ಣು ತಪ್ಪಿಸಿ ತಲೆಮರೆಸಿಕೊಂಡಿದ್ದ ಹಳೆಯ ಪ್ರಕರಣದ ವಾರಂಟ್ ಆರೋಪಿಯೊಬ್ಬನನ್ನು ಕಾರ್ಕಳ ನಗರ ಠಾಣೆಯ ಪೊಲೀಸರು ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಕಾರ್ಕಳ ಕಸಬಾ ಗ್ರಾಮದ ರಾಮಸಮುದ್ರ ನಿವಾಸಿ ಪೀಟರ್ ಆಗಸ್ಟಿನ್ ಮಾರ್ಟೀಸ್ (60) ಬಂಧಿತ ಆರೋಪಿ. ಈತನ ವಿರುದ್ಧ 1989ರಲ್ಲಿ ಕಾರ್ಕಳ ಠಾಣೆಯಲ್ಲಿ ಅಪರಾಧ ಕ್ರಮಾಂಕ 92/1989 ರಂತೆ ಐಪಿಸಿ ಕಲಂ 143, 147, 148, 447, 448, 323, 326 ಜೊತೆಗೆ 149 ರಡಿಯಲ್ಲಿ ಗಲಭೆ, ಅಕ್ರಮ ಪ್ರವೇಶ ಹಾಗೂ ಮಾರಕ ಆಯುಧಗಳಿಂದ ಹಲ್ಲೆ ನಡೆಸಿದ ಗಂಭೀರ ಪ್ರಕರಣ ದಾಖಲಾಗಿತ್ತು. ಪ್ರಕರಣ ದಾಖಲಾದಂದಿನಿಂದ ಈತ ನ್ಯಾಯಾಲಯಕ್ಕೆ ಹಾಜರಾಗದೆ ಕಳೆದ 36 ವರ್ಷಗಳಿಂದ ತಲೆಮರೆಸಿಕೊಂಡಿದ್ದ. ಈತನ ವಿರುದ್ಧ ಕಾರ್ಕಳದ ಪಿಸಿಜೆ ಮತ್ತು ಜೆಎಂಎಫ್‌ಸಿ ನ್ಯಾಯಾಲಯದಲ್ಲಿ LPC 14/2004 ವಾರಂಟ್ ಜಾರಿಯಲ್ಲಿತ್ತು. ಕಾರ್ಕಳ ಉಪ ವಿಭಾಗದ ಪೊಲೀಸ್ ಉಪಾಧೀಕ್ಷಕರ ಮಾರ್ಗದರ್ಶನದಲ್ಲಿ, ಕಾರ್ಕಳ ವೃತ್ತ ನಿರೀಕ್ಷಕರು ಹಾಗೂ ಉಡುಪಿ ಮಹಿಳಾ ಠಾಣೆ ಪೊಲೀಸ್…

Read More

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಗಂಡೇರ್‌ಬಾಲ್ ಜಿಲ್ಲೆಯ ಕಂಗನ್ ಪ್ರದೇಶದ ಹರಿಗನ್ವಾನ್ ಬಳಿ ಭೀಕರ ರಸ್ತೆ ಅಪಘಾತ  ಸಂಭವಿಸಿದ್ದು, ಪವಿತ್ರ ಅಮರನಾಥ ಯಾತ್ರೆ ಮುಗಿಸಿ ಹಿಂತಿರುಗುತ್ತಿದ್ದ ಬಸ್ ನಿಯಂತ್ರಣ ತಪ್ಪಿ ಮನೆಗೆ ಉರುಳಿದ ಪರಿಣಾಮ 39 ಯಾತ್ರಿಕರು ಗಾಯಗೊಂಡಿದ್ದಾರೆ.ಪವಿತ್ರ ಅಮರನಾಥ ಗುಹಾ ದೇವಾಲಯದಲ್ಲಿ ಬಾಬಾ ಬರ್ಫಾನಿ ದರ್ಶನ ಪಡೆದು ಹಿಂತಿರುಗುತ್ತಿದ್ದ ಯಾತ್ರಿಕರಿದ್ದ ಬಸ್, ಹರಿಗನ್ವಾನ್ ಬಳಿಯ ತೀಕ್ಷ್ಣವಾದ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದಲ್ಲಿದ್ದ ಖಾಲಿ ಮನೆಗೆ ಡಿಕ್ಕಿ ಹೊಡೆದಿದೆ. ಅದೃಷ್ಟವಶಾತ್ ಬಸ್ ಹತ್ತಿರದಲ್ಲೇ ಹರಿಯುತ್ತಿದ್ದ ಸಿಂಧ್ ನದಿಗೆ ಬೀಳುವುದರಿಂದ ಕೂದಲೆಳೆಯ ಅಂತರದಲ್ಲಿ ತಪ್ಪಿದ್ದು, ಭಾರಿ ಪ್ರಾಣಾಪಾಯ ಹಾಗೂ ದೊಡ್ಡ ದುರಂತವೊಂದು ತಪ್ಪಿದಂತಾಗಿದೆ. ಅಪಘಾತದ ಸಮಯದಲ್ಲಿ ಮನೆಯೊಳಗೆ ಯಾರೂ ಇಲ್ಲದ ಕಾರಣ ಹೆಚ್ಚಿನ ಅನಾಹುತ ಸಂಭವಿಸಿಲ್ಲ. ಘಟನೆ ತಿಳಿದ ತಕ್ಷಣವೇ ಸ್ಥಳೀಯ ನಿವಾಸಿಗಳು, ಜಮ್ಮು-ಕಾಶ್ಮೀರ ಪೊಲೀಸರು, ಐಟಿಬಿಪಿ , ಸಿಆರ್‌ಪಿಎಫ್ ಹಾಗೂ ಭಾರತೀಯ ಸೇನೆಯ ಪಡೆಗಳು ಜಂಟಿ ರಕ್ಷಣಾ ಕಾರ್ಯಾಚರಣೆ ನಡೆಸಿದರು. ಗಾಯಾಳುಗಳನ್ನು ತಕ್ಷಣವೇ ಹತ್ತಿರದ ಆಸ್ಪತ್ರೆಗಳು ಹಾಗೂ ‘ಸ್ಕಿಮ್ಸ್’…

Read More

ಮಂಗಳೂರು: ಬೈಕಂಪಾಡಿಯಲ್ಲಿರುವ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ (ಎಪಿಎಂಸಿ) ಕಚೇರಿಯಲ್ಲಿ ಗ್ರೂಪ್ ‘ಡಿ’ ಗುತ್ತಿಗೆ ನೌಕರರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಮಹಿಳಾ ಸಿಬ್ಬಂದಿಗೆ ಲೈಂಗಿಕ ಹಾಗೂ ಮಾನಸಿಕ ಕಿರುಕುಳ ನೀಡಿದ ಆರೋಪದ ಮೇಲೆ ಎಪಿಎಂಸಿ ಕಾರ್ಯದರ್ಶಿ ಸಿ.ಹೆಚ್. ಮೋಹನ್ ಅವರನ್ನು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಸದಸ್ಯೆ ಪ್ರತಿಭಾ ಕುಳಾಯಿ ನೇತೃತ್ವದ ಮಹಿಳಾ ತಂಡ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಕಳೆದ ಎರಡೂವರೆ ವರ್ಷಗಳಿಂದ ₹15,000 ವೇತನಕ್ಕೆ ದುಡಿಯುತ್ತಿರುವ ಇಬ್ಬರು ಮಕ್ಕಳ ತಾಯಿಯಾಗಿರುವ ಸಂತ್ರಸ್ತೆಗೆ, ತನ್ನ ಲೈಂಗಿಕ ಬೇಡಿಕೆಗೆ ಒಪ್ಪಿದರೆ ವೇತನವನ್ನು ₹25,000ಕ್ಕೆ ಏರಿಸುವುದಾಗಿ ಮೋಹನ್ ಆಮಿಷ ಒಡ್ಡಿದ್ದರು ಎನ್ನಲಾಗಿದೆ. ಇದಕ್ಕೆ ಒಪ್ಪದಿದ್ದಾಗ ಆಕೆಯನ್ನು ಕಚೇರಿ ಕೆಲಸದಿಂದ ತೆಗೆದು ಶೌಚಾಲಯ ಶುಚಿಗೊಳಿಸುವ ಕೆಲಸಕ್ಕೆ ಹಾಕಲಾಗಿತ್ತು. ಕಳೆದ ಶನಿವಾರ ಕರೆ ಮಾಡಿದ್ದ ಅಧಿಕಾರಿಯು, ತನ್ನ ಬೇಡಿಕೆಗೆ ಸಮ್ಮತಿ ಇದ್ದರೆ ಸೋಮವಾರ ಹಸಿರು ಬಣ್ಣದ ಸೀರೆ ಉಟ್ಟು ಬರಬೇಕೆಂದು ಷರತ್ತು ವಿಧಿಸಿದ್ದ ಎಂದು ಆರೋಪಿಸಲಾಗಿದೆ. ಈ ವಿಚಾರ ತಿಳಿಯುತ್ತಿದ್ದಂತೆ ಪ್ರತಿಭಾ ಕುಳಾಯಿ ನೇತೃತ್ವದಲ್ಲಿ ಹಲವು ಮಹಿಳೆಯರು ಹಸಿರು…

Read More

ಮುಲ್ಕಿ: ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಚೌಡೇನಹಳ್ಳಿ ಸಮೀಪ ಸೋಮವಾರ ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮುಲ್ಕಿ ಮೂಲದ ಜನತಾದಳ (ಜಾತ್ಯತೀತ) ಪಕ್ಷದ ಮಹಿಳಾ ಘಟಕದ ಅಧ್ಯಕ್ಷೆ ಶಶಿಪ್ರಭಾ (47) ಅವರು ಮೃತಪಟ್ಟಿರುವ ದುರ್ಘಟನೆ ನಡೆದಿದೆ. ಕಾರಿನಲ್ಲಿದ್ದ ಮೂವರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಮೃತ ಶಶಿಪ್ರಭಾ ಅವರು ಮುಲ್ಕಿಯ ಕಾರ್ನಾಡ್ ಕೆ.ಎಸ್. ರಾವ್ ನಗರ, ಕೊರಂಟಬೆಟ್ಟು ನಿವಾಸಿಯಾಗಿದ್ದು, ಮುಲ್ಕಿ ನಗರ ಪಂಚಾಯತ್‌ನ ಮಾಜಿ ಅಧ್ಯಕ್ಷ ದಿವಂಗತ ಶಶಿಕಾಂತ್ ಶೆಟ್ಟಿ ಅವರ ಸಹೋದರಿಯಾಗಿದ್ದರು. ಅವರು ಜನತಾದಳ (ಜಾತ್ಯತೀತ) ಪಕ್ಷದ ಮುಲ್ಕಿ ತಾಲೂಕು ಮಹಿಳಾ ಘಟಕದ ಅಧ್ಯಕ್ಷೆಯಾಗಿ ಕಾರ್ಯನಿರ್ವಹಿಸುತ್ತಿದ್ದುದಲ್ಲದೆ, ಹಲವು ಸಾಮಾಜಿಕ, ಧಾರ್ಮಿಕ ಹಾಗೂ ಸೇವಾ ಸಂಘ-ಸಂಸ್ಥೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಜನಮೆಚ್ಚುಗೆ ಗಳಿಸಿದ್ದರು. ಅಪಘಾತದಲ್ಲಿ ಗಾಯಗೊಂಡಿರುವ ಕಾರ್ಕಳ ನಿವಾಸಿ ದಿನೇಶ್ (34), ಮಂಡ್ಯ ನಿವಾಸಿ ಸುಜನ್ (20) ಹಾಗೂ ಕಾರು ಚಾಲಕ ಅಖಿಲ್ (20) ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ಆರೋಗ್ಯ ಸ್ಥಿರವಾಗಿದೆ ಎಂದು…

Read More

ಬಂಟ್ವಾಳ : ಬಿ.ಸಿ.ರೋಡು ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಜು.16ರಂದು ನಡೆದ ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಚೇತನ್‌ನ್ನು ಬಂಟ್ವಾಳ ನಗರ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಕಕ್ಯಪದವು ನಿವಾಸಿ ಲಾವಣ್ಯ ಎಂಬ ಯುವತಿಯನ್ನು ಬೆಳ್ತಂಗಡಿ ಓಡಿಲ್ನಾಳ ನಿವಾಸಿ ಚೇತನ್ ಮಾರಕಾಸ್ತ್ರದಿಂದ ಹಲ್ಲೆ ನಡೆಸಿ ಹತ್ಯೆಗೈದಿರುವ ಬಗ್ಗೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಘಟನೆ ನಡೆದ ಬಳಿಕ ಆತ ಕಾರಿನಲ್ಲಿ ಸ್ಥಳದಿಂದ ಪರಾರಿಯಾಗಿದ್ದನು. ಘಟನೆಯ ಮರುದಿನ ಮಂಗಳೂರಿನಲ್ಲಿ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಆದರೆ ಆತ ಇಲಿಪಾಷಾಣ ಸೇವಿಸಿದ್ದಾನೆ ಎಂಬ ಅನುಮಾನದ ಹಿನ್ನೆಲೆಯಲ್ಲಿ ಬಂಟ್ವಾಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿತ್ತು. ವೈದ್ಯರ ಸಲಹೆಯಂತೆ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ವೆನ್ಲಾಕ್ ಆಸ್ಪತ್ರೆಯಲ್ಲಿ ಆರಂಭದಲ್ಲಿ ತೀವ್ರ ನಿಗಾ ಘಟಕದಲ್ಲಿ (ಐಸಿಯು) ಚಿಕಿತ್ಸೆ ನೀಡಲಾಗಿದ್ದು, ಆರೋಗ್ಯದಲ್ಲಿ ಸುಧಾರಣೆ ಕಂಡುಬಂದ ಬಳಿಕ ಸಾಮಾನ್ಯ ವಾರ್ಡ್‌ಗೆ ಸ್ಥಳಾಂತರಿಸಲಾಗಿತ್ತು. ಪ್ರಸ್ತುತ ಆರೋಪಿ ಬಂಟ್ವಾಳ ನಗರ ಪೊಲೀಸರ ವಶದಲ್ಲಿದ್ದು, ಇಂದು…

Read More