Author: admin
ಮಣಿಪಾಲ: ಪಾದಚಾರಿಯನ್ನು ರಕ್ಷಿಸಲು ಹೋಗಿ ಚಾಲಕನ ನಿಯಂತ್ರಣ ತಪ್ಪಿದ ಈಚರ್ ಲಾರಿಯೊಂದು ರಸ್ತೆ ಬದಿಯ ಟ್ರಾನ್ಸ್‌ಫಾರ್ಮರ್ ಹಾಗೂ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು, ಬಳಿಕ ಮನೆಯೊಂದರ ಅಂಗಳಕ್ಕೆ ನುಗ್ಗಿದ ಘಟನೆ ಪೆರಂಪಳ್ಳಿಯ ಮೀನು ಮಾರುಕಟ್ಟೆ ಸಮೀಪ ಜುಲೈ 25 ರ ರಾತ್ರಿ ಸಂಭವಿಸಿದೆ. ಕಾರ್ಕಳ ಮೂಲದ ಉಮೇಶ್ ಎಂಬುವವರು ಲಾರಿಯನ್ನು ಮಣಿಪಾಲದಿಂದ ಪೆರಂಪಳ್ಳಿ ಕಡೆಗೆ ಚಲಾಯಿಸಿಕೊಂಡು ಹೋಗುತ್ತಿದ್ದಾಗ, ಅಪರಿಚಿತ ವ್ಯಕ್ತಿಯೊಬ್ಬರು ಏಕಾಏಕಿ ರಸ್ತೆ ದಾಟಿದ್ದಾರೆ. ಅವರಿಗೆ ಢಿಕ್ಕಿ ಹೊಡೆಯುವುದನ್ನು ತಪ್ಪಿಸಲು ಚಾಲಕ ತಕ್ಷಣವೇ ಲಾರಿಯನ್ನು ಎಡಕ್ಕೆ ತಿರುಗಿಸಿದ್ದಾರೆ. ಈ ವೇಳೆ ನಿಯಂತ್ರಣ ತಪ್ಪಿದ ಲಾರಿ ರಸ್ತೆ ಬದಿಯ ವಿದ್ಯುತ್ ಕಂಬ ಹಾಗೂ ಟ್ರಾನ್ಸ್‌ಫಾರ್ಮರ್‌ಗೆ ಸೈಡ್ ಹೊಡೆದು, ಸ್ಥಳೀಯ ನಿವಾಸಿ ರವಿ ಪೂಜಾರಿ ಎಂಬವರ ಮನೆಯ ಅಂಗಳಕ್ಕೆ ನುಗ್ಗಿದೆ. ಅಪಘಾತದ ರಭಸಕ್ಕೆ ರವಿ ಅವರ ಮನೆಯಂಗಳದ ಸಿಮೆಂಟ್ ಶೀಟ್‌ಗೆ ಹಾನಿಯಾಗಿದ್ದು, ಲಾರಿಯ ಮುಂಭಾಗ ಸಂಪೂರ್ಣವಾಗಿ ಹಾನಿಗೊಳಗಾಗಿದೆ. ಅದೃಷ್ಟವಶಾತ್ ಅಪಘಾತ ಸಂಭವಿಸಿದ ಸಮಯದಲ್ಲಿ ರಸ್ತೆ ಬದಿಯಲ್ಲಾಗಲಿ ಅಥವಾ ಮನೆಯ ಅಂಗಳದಲ್ಲಾಗಲಿ ಯಾರೂ ಇಲ್ಲದಿದ್ದರಿಂದ ಭಾರಿ…
ವಾಷಿಂಗ್ಟನ್: ಆಹಾರ ಉತ್ಸವದ ವೇಳೆ ನಡೆದ ಗುಂಡಿನ ದಾಳಿಯಲ್ಲಿ ಇಬ್ಬರು ಸಾವನ್ನಪ್ಪಿದ್ದು, ಐವರು ಗಾಯಗೊಂಡಿರುವ ಘಟನೆ ಅಮೆರಿಕದ ಸಿಯಾಟಲ್‌ನಲ್ಲಿ ನಡೆದಿದೆ. ಸಿಯಾಟಲ್ ಸೆಂಟರ್‌ನಲ್ಲಿ ಬೈಟ್ ಆಫ್ ಸಿಯಾಟಲ್ ಉತ್ಸವ ನಡೆಯುತ್ತಿದೆ. ಸಂಜೆ 6 ಗಂಟೆ ಸುಮಾರಿಗೆ ಸ್ಥಳದಲ್ಲಿ ಗುಂಡಿನ ಚಕಮಕಿ ನಡೆದಿದೆ. ದಾಳಿಗೆ ಬಲಿಯಾದವರ ಮೃತದೇಹಗಳನ್ನು ಹಾರ್ಬರ್‌ವ್ಯೂ ವೈದ್ಯಕೀಯ ಕೇಂದ್ರಕ್ಕೆ ಸಾಗಿಸಲಾಗಿದೆ. ಪೊಲೀಸರು ಘಟನೆ ಬಗ್ಗೆ ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ. ದಾಳಿ ಘಟನೆಯ ವೀಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಸ್ಥಳದಲ್ಲಿ ಗುಂಡಿನ ಶಬ್ದ ಕೇಳಿದ ತಕ್ಷಣ ಜನರು ದಿಕ್ಕಾಪಾಲಾಗಿ ಓಡಿದ್ದಾರೆ. ಸ್ಥಳದಲ್ಲಿ ಕನಿಷ್ಠ 7ರಿಂದ 8 ಗುಂಡಿನ ಶಬ್ದ ಕೇಳಿಬಂದಿದೆ. ಇನ್ನು ಸಾಮೂಹಿಕ ಗುಂಡಿನ ದಾಳಿಗೆ ಸಂಬಂಧಿಸಿದಂತೆ ಆರೋಪಿಗಳ ಬಂಧನದ ಬಗ್ಗೆ ಪೊಲೀಸರಿಂದ ಮಾಹಿತಿ ಲಭ್ಯವಾಗಿಲ್ಲ.
ಬಂಟ್ವಾಳ: ಇಡ್ಕಿದು ಗ್ರಾಮದಲ್ಲಿ ತಡರಾತ್ರಿ ಮನೆಗೆ ನುಗ್ಗಿದ ಕಳ್ಳರು ವೃದ್ಧನ ಮೇಲೆ ಹಲ್ಲೆ ನಡೆಸಿ ಅವರ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಕಸಿದುಕೊಂಡಿದ್ದು, ಸಮೀಪದ ಮತ್ತೊಂದು ಮನೆಯಿಂದ ದ್ವಿಚಕ್ರ ವಾಹನವನ್ನು ಕಳವು ಮಾಡಿದ್ದಾರೆ. ಗ್ರಾಮದಲ್ಲಿನ ನಡೆದ ಸರಣಿ ಕಳ್ಳತನ ಘಟನೆಯು ಗ್ರಾಮಸ್ಥರಲ್ಲಿ ಆತಂಕ ಮೂಡಿಸಿವೆ. ಇಡ್ಕಿದು ಗ್ರಾಮದ ನಿವಾಸಿ ಹಾಗೂ ನಿವೃತ್ತ ವೈದ್ಯರಾದ ಕೆ. ಸೂರ್ಯನಾರಾಯಣ (79) ಅವರು ಮನೆಯಲ್ಲಿ ಮಲಗಿದ್ದ ವೇಳೆ, ತಡರಾತ್ರಿ ಅಪರಿಚಿತರು ಮನೆಯೊಳಗೆ ನುಗ್ಗಿದ್ದಾರೆ ಎನ್ನಲಾಗಿದೆ.ಶಬ್ದ ಕೇಳಿ ಎಚ್ಚರಗೊಂಡ ಸೂರ್ಯನಾರಾಯಣ ಅವರು ಮನೆಯೊಳಗೆ ಇಬ್ಬರು ಕಳ್ಳರು ಮನೆಗೆ ಪ್ರವೇಶಿಸಿರುವುದನ್ನು ಗಮನಿಸಿದ್ದಾರೆ. ಆರೋಪಿಗಳು ಅವರ ಹೊಟ್ಟೆಗೆ ಬಲವಾಗಿ ಹೊಡೆದು, ಅವರ ಕುತ್ತಿಗೆಯಲ್ಲಿದ್ದ ಸುಮಾರು 20 ಗ್ರಾಂ ತೂಕದ, ಅಂದಾಜು 2.60 ರೂ. ಲಕ್ಷ ಮೌಲ್ಯದ ಚಿನ್ನದ ಸರವನ್ನು ಕಸಿದುಕೊಂಡು ಮನೆಯ ಹಿಂಬಾಗಿಲಿನ ಮೂಲಕ ಪರಾರಿಯಾಗಿದ್ದಾರೆ.ಮನೆಯ ದುರಸ್ತಿ ಕಾಮಗಾರಿ ನಡೆಯುತ್ತಿದ್ದ ಹಿನ್ನೆಲೆಯಲ್ಲಿ ಗೋಡೆಯಲ್ಲಿ ಬಿಟ್ಟಿದ್ದ ತೆರೆಯ ಮೂಲಕ ಕಳ್ಳರು ಮನೆಯೊಳಗೆ ಪ್ರವೇಶಿಸಿದ್ದಿರಬಹುದು ಎಂದು ಶಂಕಿಸಲಾಗಿದೆ. ಈ ವೇಳೆ ಮನೆಯ ಮೇಲಂತಸ್ತಿನಲ್ಲಿ ಮಲಗಿದ್ದ ಸೂರ್ಯನಾರಾಯಣ…
ಮಂಗಳೂರು : ಮಂಗಳೂರು ಅಂತರ್‌ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರೊಬ್ಬರು ಕಳೆದುಕೊಂಡಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ವಿದೇಶಿ ನಗದು, ಐಫೋನ್, ಪಾಸ್‌ಪೋರ್ಟ್ ಹಾಗೂ ಚಿನ್ನದ ಉಂಗುರವನ್ನು ವಿಮಾನ ನಿಲ್ದಾಣದ ಭದ್ರತಾ ಸಿಬ್ಬಂದಿ ಹಾಗೂ ಕೇಂದ್ರ ಕೈಗಾರಿಕಾ ಭದ್ರತಾ ಪಡೆ (CISF) ಸಮಯಪ್ರಜ್ಞೆಯಿಂದ ಮಾಲೀಕರಿಗೆ ಸುರಕ್ಷಿತವಾಗಿ ತಲುಪಿಸಿದೆ. ಜುಲೈ 26 ರಂದು ಬೆಳಿಗ್ಗೆ ಸುಮಾರು 6:15 ರ ಸುಮಾರಿಗೆ ವಿಮಾನ ನಿಲ್ದಾಣದ ಕೆಳ ಅಂತಸ್ತಿನ ಪಾರ್ಕಿಂಗ್ ಪ್ರದೇಶದಲ್ಲಿದ್ದ ಲಗೇಜ್ ಟ್ರಾಲಿಯೊಂದರ ಮೇಲೆ ಕಪ್ಪು ಬಣ್ಣದ ಸಣ್ಣ ಪರ್ಸ್ ಅನ್ನು ಸೆಕ್ಯುರಿಟಿ ಸಿಬ್ಬಂದಿ ವಿಠಲ್ ಹೊಸಮನಿ ಗಮನಿಸಿದ್ದಾರೆ. ತಕ್ಷಣವೇ ಅವರು ಸಿಐಎಸ್‌ಎಫ್ ಪಡೆಯ ಕ್ಯೂಆರ್‌ಟಿ ತಂಡಕ್ಕೆ ಮಾಹಿತಿ ನೀಡಿದ್ದಾರೆ. ತಕ್ಷಣ ಸ್ಥಳಕ್ಕೆ ಆಗಮಿಸಿದ ಬಾಂಬ್ ಪತ್ತೆ ಮತ್ತು ವಿಲೇವಾರಿ ದಳ (BDDS) ಹಾಗೂ ಶ್ವಾನ ದಳ ತಪಾಸಣೆ ನಡೆಸಿ, ಅಪಾಯಕಾರಿ ವಸ್ತುಗಳಿಲ್ಲ ಎಂದು ಖಚಿತಪಡಿಸಿಕೊಂಡವು. ಪರ್ಸ್ ತೆರೆದು ಪರಿಶೀಲಿಸಿದಾಗ ಅದರಲ್ಲಿ ನಿಶಾಲ್ ಶಹೀಕ್ ಹೆಸರಿನ ಪಾಸ್‌ಪೋರ್ಟ್, ಐಫೋನ್, ಒಂದು ಚಿನ್ನದ ಉಂಗುರ, 10,000 ಅಮೆರಿಕನ್ ಡಾಲರ್…
ಮಂಗಳೂರು: ಐತಿಹಾಸಿಕ ಪ್ರಸಿದ್ಧಿಯ ಕದ್ರಿ ಶ್ರೀ ಮಂಜುನಾಥ ದೇವಸ್ಥಾನದಲ್ಲಿ ಜುಲೈ 29ರಂದು ಗುರುಪೂರ್ಣಿಮೆಯ ಪುಣ್ಯ ದಿನದ ಅಂಗವಾಗಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಗುರುಪೂರ್ಣಿಮೆಯ ಪ್ರಯುಕ್ತ ಬೆಳಗ್ಗೆಯಿಂದಲೇ ವಿಶೇಷ ಪೂಜಾ ಕೈಂಕರ್ಯಗಳು ಹಾಗೂ ರುದ್ರಪಾರಾಯಣ ನಡೆಯಲಿದೆ. ಮಧ್ಯಾಹ್ನ 11.30 ಗಂಟೆಗೆ ಶ್ರೀ ಮತ್ಸೇಂದ್ರನಾಥ, ಶ್ರೀ ಗೋರಕ್ಷನಾಥ ಹಾಗೂ ಶ್ರೀ ಚೌರಂಗಿನಾಥ ಗುರುಗಳಿಗೆ ವಿಶೇಷ ಗುರುಪೂಜೆ ನೆರವೇರಲಿದ್ದು, ಇದೇ ಶುಭ ಸಂದರ್ಭದಲ್ಲಿ ಶ್ರೀ ಮಂಜುನಾಥ ದೇವರಿಗೆ ಏಕಾದಶ ರುದ್ರಾಭಿಷೇಕ ಸಂಪನ್ನಗೊಳ್ಳಲಿದೆ. ಗುರುಪೂರ್ಣಿಮೆಯ ಈ ಪವಿತ್ರ ಪರ್ವದಂದು ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ವಿಶೇಷ ಪೂಜಾ ಕಾರ್ಯಕ್ರಮಗಳಲ್ಲಿ ಭಾಗವಹಿಸಿ, ಶ್ರೀ ಮಂಜುನಾಥ ದೇವರ ದಿವ್ಯ ದರ್ಶನ ಹಾಗೂ ಮಹಾಪ್ರಸಾದವನ್ನು ಸ್ವೀಕರಿಸಿ ಪುಣ್ಯಫಲ ಪಡೆಯುವಂತೆ ಕದ್ರಿ ಶ್ರೀ ಮಂಜುನಾಥ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.
ಕಠ್ಮಂಡು: ನೇಪಾಳದಲ್ಲಿ ಭಾರತೀಯ 200 ಮತ್ತು 500 ರೂ. ಮುಖಬೆಲೆಯ ಕರೆನ್ಸಿ ನೋಟುಗಳನ್ನು ಅನುಮತಿಸಲಾಗಿದೆ. 2016 ರ ಭಾರತದ ನೋಟು ರದ್ದತಿಯ ನಂತರ ಸುಮಾರು ದಶಕದಿಂದ 100 ರೂ.ವರೆಗಿನ ನೋಟುಗಳಿಗೆ ಮಾತ್ರ ಅನುಮತಿ ನೀಡಲಾಗುತ್ತಿತ್ತು. ಈಗ ಆ ನಿಯಮವನ್ನು ಕೊನೆಗಾಣಿಸಲಾಗಿದೆ. ನೇಪಾಳವು ಭಾರತೀಯ ಮತ್ತು ನೇಪಾಳಿ ಪ್ರಜೆಗಳಿಗೆ 200 ಮತ್ತು 500 ರೂ. ಮುಖಬೆಲೆಯ ಭಾರತೀಯ ಕರೆನ್ಸಿ ನೋಟುಗಳನ್ನು ದೇಶಕ್ಕೆ ತರಲು ಅಥವಾ ಹೊರಗೆ ತೆಗೆದುಕೊಂಡು ಹೋಗಲು ಅವಕಾಶ ನೀಡಿದೆ. ನೇಪಾಳ ರಾಷ್ಟ್ರ ಬ್ಯಾಂಕ್ (NRB) ಗುರುವಾರ ಹೊರಡಿಸಿದ ನೋಟಿಸ್‌ನಲ್ಲಿ, ಭಾರತೀಯ ಮತ್ತು ನೇಪಾಳದ ಪ್ರಜೆಗಳು 200 ಮತ್ತು 500 ರೂ. ಮುಖಬೆಲೆಯ ಭಾರತೀಯ ಕರೆನ್ಸಿ ನೋಟುಗಳನ್ನು ಪ್ರತಿ ವ್ಯಕ್ತಿಗೆ 25,000 ರೂ. ಮಿತಿಯವರೆಗೆ ಹೊಂದಬಹುದು ಎಂದು ಹೇಳಿದೆ. ನೇಪಾಳದ ಪ್ರಜೆಗಳು ಭಾರತವನ್ನು ಹೊರತುಪಡಿಸಿ ಬೇರೆ ಯಾವುದೇ ದೇಶದಿಂದ ನೇಪಾಳಕ್ಕೆ ಭಾರತೀಯ ಕರೆನ್ಸಿಯನ್ನು ತರುವಂತಿಲ್ಲ. ಅದೇ ರೀತಿ, ಅವರು ನೇಪಾಳದಿಂದ ಭಾರತವನ್ನು ಹೊರತುಪಡಿಸಿ ಮೂರನೇ ದೇಶಕ್ಕೆ ಭಾರತೀಯ ಕರೆನ್ಸಿಯನ್ನು ಸಾಗಿಸುವಂತಿಲ್ಲ ಎಂದು…
ಬೆಳ್ತಂಗಡಿ : ಬಾಗಲಕೋಟೆಯಲ್ಲಿ ಇತ್ತೀಚೆಗೆ ಪತ್ತೆಯಾದ ಐದೂವರೆ ಕೋಟಿ ರೂಪಾಯಿ ಮೌಲ್ಯದ ಮಾದಕ ಎಂಡಿಎಂಎ ವಶಪಡಿಸಿಕೊಂಡ ಪ್ರಕರಣದಲ್ಲಿ ಈಗಾಗಲೇ ಮೂವರನ್ನು ಬಂಧಿಸಿ ಒಟ್ಟು ನಾಲ್ಕು ಜನರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮತ್ತೋರ್ವ ಬೆಳ್ತಂಗಡಿಯ ಸಮಾಜಸೇವಕನ ಹೆಸರಲ್ಲಿ ಡ್ರಗ್ಸ್ ಪೆಡ್ಡಿಂಗ್ ದಂಧೆ ನಡೆಸುತ್ತಿದ್ದ ಆಂಬ್ಯುಲೆನ್ಸ್ ಚಾಲಕ ಜಲೀಲ್ @ ಬಾಬಾ(42) ಎಂಬಾತ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡು ಪರಾರಿಯಾಗಿದ್ದು ಬಂಧನಕ್ಕಾಗಿ ಸಿಸಿಬಿ ಪೊಲೀಸರು ಬಲೆ ಬೀಸಿದ್ದಾರೆ. ಪ್ರಕರಣದ ವಿವರ :ಮಂಗಳೂರು ನಗರ ಸಿಸಿಬಿ ಪೊಲೀಸರು ಕುಳಾಯಿಗುಡ್ಡೆ ವಾಟರ್ ಟ್ಯಾಂಕ್ ಸಮೀಪದ ಮನೆಗೆ ಜೂ.25 ರಂದು ನಡೆಸಿದ ದಾಳಿಯಲ್ಲಿ ಅಣ್ಣಪ್ಪ ಸ್ವಾಮಿ ಅಲಿಯಾಸ್ ಮನು 200 1.50 ಲಕ್ಷ 15.17 ಗ್ರಾಂ ವಶಪಡಿಸಿಕೊಂಡಿದ್ದರು. ಈ ಪ್ರಕರಣದ ತನಿಖೆ ವೇಳೆ ಮಾದಕ ವಸ್ತು ಪೂರೈಕೆ ಜಾಲದ ಬಗ್ಗೆ ಮಾಹಿತಿ ಪಡೆದ ಪೊಲೀಸರು ದೆಹಲಿಯಿಂದ ಎಂಡಿಎಂಎ ಖರೀದಿಸಿಕೊಂಡು ಬೆಂಗಳೂರಿಗೆ ಸಾಗಿಸುತ್ತಿದ್ದ ಜಾಲದ ಬಗ್ಗೆ ಸುಳಿವು ಪಡೆದರು. ಜುಲೈ 15 ರಂದು ಬಾಗಲಕೋಟೆ ಜಿಲ್ಲೆಯ ಹುನಗುಂದ ಸಮೀಪದ…
ಬಂಟ್ವಾಳ: ಬರಿಮಾರ್ ಎಂಬಲ್ಲಿ ಶಾಲಾ ವಾಹನದ ಮೇಲೆ ಮರ ಬಿದ್ದು ವಿದ್ಯಾರ್ಥಿ ಮೃತಪಟ್ಟು, ಹಲವು ಮಕ್ಕಳು ಗಾಯಗೊಂಡ ಘಟನೆಗೆ ಸಂಬಂಧಿಸಿದಂತೆ ಕಲ್ಲಡ್ಕದ ‘ಶ್ರೀರಾಮ ವಿದ್ಯಾಕೇಂದ್ರ’ದ ಆಡಳಿತ ಮಂಡಳಿ ಮುಖ್ಯಸ್ಥರು ಹಾಗೂ ಇತರರ ವಿರುದ್ಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದಿನಾಂಕ 22 ಜುಲೈ 2026 ರಂದು ಸಂಭವಿಸಿದ ಈ ಭೀಕರ ದುರಂತಕ್ಕೆ ಸಂಬಂಧಿಸಿದಂತೆ ಆರಂಭದಲ್ಲಿ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಯು.ಡಿ.ಆರ್ (UDR) ಸಂಖ್ಯೆ 35/2026 ಕಲಂ 194 ಬಿಎನ್‌ಎಸ್ (BNS) ಪ್ರಕಾರ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೆತ್ತಿಕೊಳ್ಳಲಾಗಿತ್ತು. ಪ್ರಕರಣದ ತನಿಖೆಯನ್ನು ಮುಂದುವರಿಸಿದ ಪೊಲೀಸರು, ಪ್ರಾದೇಶಿಕ ಸಾರಿಗೆ ಅಧಿಕಾರಿಗಳಿಂದ (RTO) ಸದರಿ ಶಾಲಾ ವಾಹನದ ದಾಖಲೆ ಪತ್ರಗಳ ಮಾನ್ಯತೆಯ ಕುರಿತು ಅಧಿಕೃತ ವರದಿ ಪಡೆದಿದ್ದಾರೆ. ಈ ವೇಳೆ, ಘಟನೆ ಸಂಭವಿಸಿದ ಸಮಯದಲ್ಲಿ ವಾಹನದ ವಿಮಾ ಪತ್ರ (Insurance) ಹಾಗೂ ಅರ್ಹತಾ ಪತ್ರ (Fitness Certificate – FC) ಎರಡೂ ಚಾಲ್ತಿಯಲ್ಲಿರಲಿಲ್ಲ ಎಂಬ ಆಘಾತಕಾರಿ ಸತ್ಯ ಬೆಳಕಿಗೆ ಬಂದಿದೆ. ಅಷ್ಟೇ ಅಲ್ಲದೆ,…
ಕೆನಡಾ: ಭಾರತೀಯ ಮೂಲದ ಮಹಿಳೆಯನ್ನು ಆಕೆಯ ಲಿವ್ ಇನ್ ಪ್ರಿಯಕರ ಹತ್ಯೆ ಮಾಡಿದ್ದು, ಆತನನ್ನು ಪೊಲೀಸರು ಬಂಧಿಸಿರುವ ಘಟನೆ ಕೆನಡಾದ ಎಡ್ಮಂಟನ್‌ನಲ್ಲಿ ನಡೆದಿದೆ. ಪಂಜಾಬ್‌ನ ಲುಧಿಯಾನ ಜಿಲ್ಲೆಯ ಸಮ್ರಾಲಾ ಮೂಲದ ದಮನ್‌ಪ್ರೀತ್ ಕೌರ್ (23) ಕೊಲೆಯಾದ ಮಹಿಳೆ. ಆಕೆಯ ಪ್ರಿಯಕರ ರಿತೀಶ್ ಕುಮಾರ್ (22) ಬಂಧಿತ ಆರೋಪಿ. ಜುಲೈ 9 ರಂದು ರಿತೀಶ್ ಆಕೆಯ ಕತ್ತು ಹಿಸುಕಿ, ಮಾರಣಾಂತಿಕ ಹಲ್ಲೆ ಮಾಡಿದ್ದ. ಆಕೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದಿದ್ದನ್ನು ಕಂಡ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಬಳಿಕ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದಾದ ಮೂರು ದಿನಗಳ ಬಳಿಕ ಚಿಕಿತ್ಸೆ ಫಲಿಸದೇ ಆಕೆ ಮೃತಪಟ್ಟಿದ್ದಳು. ತನಿಖೆ ನಡೆಸಿದ ಪೊಲೀಸರು ಜುಲೈ 14 ರಂದು ಆಕೆಯನ್ನು ಕೊಲೆ ಮಾಡಲಾಗಿದೆ ಎಂದು ಘೋಷಿಸಿದ್ದರು. ಜು.22 ರಂದು ಆರೋಪಿಯನ್ನು ಬಂಧಿಸಿದ ಪೊಲೀಸರು ಜುಲೈ 23 ರಂದು ಮಹಿಳೆಯನ್ನು ಕತ್ತು ಹಿಸುಕಿಕೊಲೆ ಮಾಡಲಾಗಿದೆ ಎಂದು ತಿಳಿಸಿದ್ದರು. ತನಿಖೆ ಕಾರಣದಿಂದಾಗಿ ಈ ವಿಚಾರವನ್ನು ಪೊಲೀಸರು ಅಲ್ಲಿಯ ತನಕ ತಡೆಹಿಡಿದಿದ್ದರು. ಆರ್ಥಿಕ ಸಂಕಷ್ಟದಿಂದಾಗಿ ಕೊಲೆಯಾದ…
ಮಹಾರಾಷ್ಟ್ರ:ಇತ್ತೀಚೆಗೆ ನಡೆದ ಟಿಇಟಿ (ಶಿಕ್ಷಕರ ಅರ್ಹತಾ ಪರೀಕ್ಷೆ) ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಅದರ ಮಾಸ್ಟರ್‌ಮೈಂಡ್ ವಿಜಯೇಂದ್ರ ಗುಪ್ತಾನನ್ನು ಬಂಧಿಸಲಾಗಿದೆ. ಥಾಣೆ ಪೊಲೀಸರು ಬಿಹಾರದಲ್ಲಿ ಕಾರ್ಯಾಚರಣೆ ನಡೆಸಿ, ಪ್ರಕರಣದ ಪ್ರಮುಖ ಆರೋಪಿ ಗುಪ್ತಾನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಬಂಧನವು ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ದೊಡ್ಡ ಹೊಡೆತ ನೀಡಿದಂತಾಗಿದೆ. ರಾಜ್ಯದಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳನ್ನು ಇನ್ನು ಮುಂದೆ ಅತ್ಯಂತ ಗಂಭೀರವಾಗಿ ಪರಿಗಣಿಸಲಾಗುವುದು ಎಂದು ತಿಳಿಸಲಾಗಿದ್ದು, ಇಂತಹ ಪ್ರಕರಣಗಳನ್ನು ನಿಭಾಯಿಸಲು ಹೊಸ ಮಸೂದೆಯೊಂದನ್ನು ಜಾರಿಗೆ ತರಲು ಮಹಾರಾಷ್ಟ್ರ ಸರ್ಕಾರ ಮುಂದಾಗಿದೆ. ಈ ಹಿಂದೆ ಮಹಾರಾಷ್ಟ್ರದಲ್ಲಿ ಟಿಇಟಿ ಪ್ರಶ್ನೆಪತ್ರಿಕೆ ಸೋರಿಕೆಯಾಗಿತ್ತು. ಈ ಪ್ರಕರಣದ ತನಿಖೆ ಕೈಗೊಂಡಿದ್ದ ಥಾಣೆ ಪೊಲೀಸರು, ಬಿಹಾರದಲ್ಲಿ ಅಡಗಿಕೊಂಡಿದ್ದ ಮಾಸ್ಟರ್‌ಮೈಂಡ್ ವಿಜಯೇಂದ್ರ ಗುಪ್ತಾನನ್ನು ಪತ್ತೆ ಹಚ್ಚಿ ಬಂಧಿಸಿದ್ದಾರೆ.



