Author: admin

ಹೈದರಾಬಾದ್: ಹೈದರಾಬಾದ್‌ನಿಂದ ಲಂಡನ್‌ನ ಹೀಥ್ರೂ ವಿಮಾನ ನಿಲ್ದಾಣಕ್ಕೆ ಪ್ರಯಾಣಿಸುತ್ತಿದ್ದ ಬ್ರಿಟಿಷ್ ಏರ್‌ವೇಸ್  ವಿಮಾನದ ಮೂವರು ಪೈಲಟ್‌ಗಳು ಅಸ್ವಸ್ಥಗೊಂಡ ಭೀಕರ ಘಟನೆಯೊಂದು  ನಡೆದಿದೆ. ಹೈದರಾಬಾದ್‌ನಲ್ಲಿ ರಾತ್ರಿ ತಂಗಿದ್ದ ವೇಳೆ ಸೇವಿಸಿದ ಆಹಾರದಿಂದಾಗಿ ಪೈಲಟ್‌ಗಳಿಗೆ ಫುಡ್ ಪಾಯ್ಸನ್ ಆಗಿತ್ತು ಎನ್ನಲಾಗಿದೆ, ಈ ಕುರಿತು ಬ್ರಿಟಿಷ್ ಏರ್‌ವೇಸ್ ಸಂಸ್ಥೆ ತನಿಖೆಗೆ ಆದೇಶಿಸಿದೆ. ವರದಿಗಳ ಪ್ರಕಾರ, ವಿಮಾನವು ಆಕಾಶದಲ್ಲಿ ಸುಮಾರು 30,000 ಅಡಿ ಎತ್ತರದಲ್ಲಿ ಹಾರಾಟ ನಡೆಸುತ್ತಿದ್ದಾಗ, ಮುಖ್ಯ ಪೈಲಟ್‌ಗಳಲ್ಲಿ ಒಬ್ಬರು ತೀವ್ರ ಹೊಟ್ಟೆನೋವು ಹಾಗೂ ಅನಾರೋಗ್ಯದಿಂದ ಕರ್ತವ್ಯ ನಿರ್ವಹಿಸಲು ಸಾಧ್ಯವಾಗದೆ ಅಸಹಾಯಕರಾಗಿದ್ದರು. ವಿಮಾನವು ಲಂಡನ್‌ಗೆ ತಲುಪಿ ಸುರಕ್ಷಿತವಾಗಿ ಲ್ಯಾಂಡ್ ಆದ ತಕ್ಷಣವೇ ಆ ಪೈಲಟ್‌ಗೆ ಆಮ್ಲಜನಕ ನೀಡಿ, ತುರ್ತು ವೈದ್ಯಕೀಯ ಚಿಕಿತ್ಸೆಗೆ ಒಳಪಡಿಸಲಾಯಿತು. ಉಳಿದ ಇಬ್ಬರು ಪೈಲಟ್‌ಗಳಿಗೂ ಅಲ್ಪಪ್ರಮಾಣದ ಅನಾರೋಗ್ಯ ಉಂಟಾಗಿದ್ದರೂ, ಸಮಯಪ್ರಜ್ಞೆಯಿಂದ ವಿಮಾನವನ್ನು ನಿಯಂತ್ರಿಸಿ ಸುರಕ್ಷಿತವಾಗಿ ಇಳಿಸುವಲ್ಲಿ ಯಶಸ್ವಿಯಾದರು. ಯಾವುದೇ ಹಂತದಲ್ಲೂ ಪ್ರಯಾಣಿಕರ ಸುರಕ್ಷತೆಗೆ ಧಕ್ಕೆಯಾಗಿಲ್ಲ ಎಂದು ವಿಮಾನಯಾನ ಸಂಸ್ಥೆ ಸ್ಪಷ್ಟಪಡಿಸಿದೆ. ವರದಿಗಳ ಪ್ರಕಾರ, ವಿಮಾನವು ಆಕಾಶದಲ್ಲಿ ಸುಮಾರು 30,000 ಅಡಿ ಎತ್ತರದಲ್ಲಿ ಹಾರಾಟ…

Read More

ಮಂಗಳೂರು: ನೀಟ್ ಹೋರಾಟವನ್ನು ಧಾರ್ಮಿಕವಾಗಿ ಥಳುಕು ಹಾಕಿ, ಅವಹೇಳನಕಾರಿ ಬರಹ ಪ್ರಸಾರ ಮಾಡಿದ ಹಿನ್ನೆಲೆಯಲ್ಲಿ ವಿಟ್ಲ ಠಾಣೆಯಲ್ಲಿ ಓರ್ವನ ವಿರುದ್ಧ ಪ್ರಕರಣ ದಾಖಲಿಸಿ, ಬಂಧಿಸಿದ್ದಾರೆ. ಪ್ರಕರಣದ ವಿವರ ಬಂಟ್ವಾಳ ತಾಲೂಕಿನ ಕೇಪು ಗ್ರಾಮದ ಭರತ್ (36) ಎಂಬಾತ KFC KHANDIGA ಎಂಬ ವಾಟ್ಸಾಪ್ ಗ್ರೂಪ್‌ನಲ್ಲಿ ನೀಟ್ ಹೋರಾಟಕ್ಕೆ ಸಂಬಂಧಿಸಿದಂತೆ  ಸಮುದಾಯಗಳ ನಡುವೆ ವೈಮನಸ್ಸು ಮೂಡುವಂತೆ ಹಾಗೂ ಸಾರ್ವಜನಿಕರಿಗೆ ಸಾರ್ವಜನಿಕ ನೆಮ್ಮದಿಗೆ ಭಂಗವುಟಾಗುವಂತಹ ಬರಹಗಳ ಸ್ಕ್ರೀನ್ ಶಾಟ್ ಹಂಚಿಕೊಂಡಿದ್ದಾನೆ.  ಜೊತೆಗೆ ಇದೇ ಬರಹಗಳನ್ನು ತನ್ನ ವಾಟ್ಸಾಪ್ ಸ್ಟೇಟಸ್ ಹಾಕಿಕೊಂಡಿದ್ದಾನೆ. ಈ ಹಿನ್ನೆಲೆ ವಿಟ್ಲ ಪೊಲೀಸ್‌ ಠಾಣೆಗೆ ದೂರು ನೀಡಿದ್ದರು. ಈ ಬಗ್ಗೆ ಪ್ರಕರಣ ದಾಖಲಿಸಿದ ಪೊಲೀಸರು ಅ.ಕ್ರ: 160/2026 ಕಲಂ: 197(1)(a), 197(1)(c), 353(2) BNS 2023 ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗಿ, ಆರೋಪಿತ ಭರತ್ ಎಂಬಾತನನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

Read More

ಮಂಗಳೂರು: ಆಹಾರ ಭದ್ರತೆ ಮತ್ತು ಸಾರ್ವಜನಿಕ ಆರೋಗ್ಯ ರಕ್ಷಣೆಯ ನಿಟ್ಟಿನಲ್ಲಿ, ಮಂಗಳೂರು ಮಹಾನಗರ ಪಾಲಿಕೆಯ ಆರೋಗ್ಯ ಅಧಿಕಾರಿಗಳ ತಂಡವು ಬಿಜೈನ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಬಳಿಯಿರುವ ಬೀದಿ ಬದಿ ಆಹಾರ ಮಳಿಗೆಗಳ ಮೇಲೆ ದಾಳಿ ನಡೆಸಿದೆ. ಈ ತಪಾಸಣೆ ವೇಳೆ, ನಿಯಮ ಬಾಹಿರವಾಗಿ ಬಳಸಲಾಗುತ್ತಿದ್ದ ಆರೋಗ್ಯಕ್ಕೆ ಹಾನಿಕರವಾದ ಅಜಿನೊಮೊಟೊ (Ajinomoto) ಪದಾರ್ಥವನ್ನು ಅಧಿಕಾರಿಗಳು ಪತ್ತೆ ಹಚ್ಚಿ, ಜಪ್ತಿ ಮಾಡಿದ್ದಾರೆ. ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಆಹಾರ ನೈರ್ಮಲ್ಯ ಮತ್ತು ಸುರಕ್ಷತಾ ನಿಯಮಗಳನ್ನು ಪ್ರತಿಯೊಬ್ಬರೂ ಕಡ್ಡಾಯವಾಗಿ ಪಾಲಿಸಬೇಕು. ನಿಯಮ ಉಲ್ಲಂಘಿಸುವವರ ವಿರುದ್ಧ ಕಾನೂನು ಪ್ರಕಾರ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು  ಎಚ್ಚರಿಸಲಾಗಿದೆ.

Read More

ಬೆಂಗಳೂರು: ಎಸ್‌ಐಆರ್ ಕರ್ತವ್ಯದಲ್ಲಿದ್ದ ಕುರುಬರಹಳ್ಳಿ ಸರ್ಕಾರಿ ಶಾಲೆಯ ಶಿಕ್ಷಕಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಶಮಂತ ಕುಮಾರಿ (44) ಮೃತ ಶಿಕ್ಷಕಿ. ಇತ್ತೀಚೆಗೆ ಬಿಎಲ್ಒ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದರು. ಇದರ ಬೆನ್ನಲ್ಲೇ ಶುಗರ್, ಬಿಪಿ ಹೆಚ್ಚಾಗಿ ತೀವ್ರ ಜ್ವರ ಬಂದು ಆಸ್ಪತ್ರೆಗೆ ದಾಖಲಾಗಿದ್ದರು. ಗುರುವಾರ (ಜು.23) ರಾತ್ರಿ ಹೃದಯಾಘಾತವಾಗಿ ನಿಧನರಾಗಿದ್ದಾರೆ. ಮೇಲಾಧಿಕಾರಿಗಳು ಎಸ್‌ಐಆರ್ ಪ್ರಕ್ರಿಯೆ ಬೇಗ ಬೇಗ ಮುಗಿಸುವಂತೆ ಒತ್ತಡ ಹಾಕುತ್ತಿದ್ದರು. ಈ ಕೆಲಸದಿಂದ ಬಿಡುಗಡೆ ಮಾಡಬಹುದಾ ಎಂದು ಕೇಳಿಕೊಂಡಿದ್ದರು. ಮೇಲಾಧಿಕಾರಿಗಳ ಒತ್ತಡದಿಂದ ಹೃದಯಘಾತವಾಗಿ ಸಾವನ್ನಪ್ಪಿದ್ದಾರೆ ಎಂದು ಶಿಕ್ಷಕಿಯ ಕುಟುಂಬಸ್ಥರು ಆರೋಪಿಸಿದ್ದಾರೆ.

Read More

ಪುತ್ತೂರು: ಜುಲೈ 23 ರಂದು ಸೇಡಿಯಾಪು ಬಳಿಯ ಕಾಪು ಬಳಿಸರಕು ಸಾಗಣೆ ವಾಹನವೊಂದು ಪಲ್ಟಿಯಾಗಿ 11 ವರ್ಷದ ಬಾಲಕ ಗಾಯಗೊಂಡಿದ್ದಾನೆ. ಕೊಯಿಲಾದ ಸನ್ಯಾಸಿಗುಡ್ಡೆ ನಿವಾಸಿ ಅಬ್ದುಲ್ ಮಜೀದ್ ಅವರು ಉಪ್ಪಿನಂಗಡಿಯಿಂದ ಪುತ್ತೂರು ಕಡೆಗೆ ಟಾಟಾ ಏಸ್ ಕಾರನ್ನು ಚಲಾಯಿಸಿಕೊಂಡು ಹೋಗುತ್ತಿದ್ದಾಗ ಅಪಘಾತ ಸಂಭವಿಸಿದೆ. ವಾಹನದ ಚಕ್ರಗಳು ರಸ್ತೆಯಂಚಿಗೆ ಇಳಿದು ಮಗುಚಿ ಬಿತ್ತು ಎಂದು ವರದಿಯಾಗಿದೆ. ವಾಹನದಲ್ಲಿ ಪ್ರಯಾಣಿಸುತ್ತಿದ್ದ ಅಬ್ದುಲ್ ಮಜೀದ್ ಅವರ ಪುತ್ರ ಮೊಹಮ್ಮದ್ ಅಮೀನ್ (11) ಅಪಘಾತದಲ್ಲಿ ಗಾಯಗೊಂಡಿದ್ದಾರೆ. ಸ್ಥಳೀಯರ ಪ್ರಕಾರ, ಸ್ಥಳದಲ್ಲಿ ಕಾಂಕ್ರೀಟ್ ರಸ್ತೆ ಕಾಮಗಾರಿಗಳು ಇತ್ತೀಚೆಗೆ ಪೂರ್ಣಗೊಂಡಿವೆ, , ರಸ್ತೆಯಂಚಿಗೆ ಮಣ್ಣು ಹಾಕದ್ದರಿಂದ ಅದು ಆಳವಿದೆ. ಅಲ್ಲದೇ, ಡಿವೈಡರ್ ಕಾಮಗಾರಿಯೂ ಇಲ್ಲಿ ನಡೆಯದಿರುವುದರಿಂದ ವಾಹನ ಸವಾರರು ಸ್ವಲ್ಪ ಎಚ್ಚರ ತಪ್ಪಿದರೂ ಅಪಘಾತಗಳಾಗುವ ಸಾಧ್ಯತೆ ಇದೆ. ಪುತ್ತೂರು ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಸುಳ್ಯ: ಮೇ ತಿಂಗಳಿನಿಂದ ಕಾಣೆಯಾಗಿದ್ದ ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಸುಳ್ಯ ಪೊಲೀಸರು 18 ವರ್ಷದ ಯುವಕನನ್ನು ಪೋಕ್ಸೊ) ಕಾಯ್ದೆಯಡಿ ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಕಡಬ ನಿವಾಸಿ ಧನುಷ್ (18) ಎಂದು ಗುರುತಿಸಲಾಗಿದೆ. ಪೊಲೀಸರ ಪ್ರಕಾರ, ಸುಳ್ಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವಾಸಿಸುವ ಅಪ್ರಾಪ್ತ ಬಾಲಕಿ ಮೇ 7 ರಂದು ಕೆಲಸಕ್ಕಾಗಿ ಮಂಗಳೂರಿಗೆ ಹೋಗುವುದಾಗಿ ಹೇಳಿ ಮನೆಯಿಂದ ಹೊರಟಿದ್ದಳು. ಆದರೆ ಆಕೆ ಮನೆಗೆ ಹಿಂತಿರುಗದೇ ಇದ್ದಾಗ ಆಕೆಯ ಕುಟುಂಬವು ನಾಪತ್ತೆ ಪ್ರಕರಣ ದಾಖಲಿಸಿದೆ. ದೂರಿನ ಆಧಾರದ ಮೇಲೆ, ಮೇ 11 ರಂದು ಸುಳ್ಯ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) 2023 ರ ಸೆಕ್ಷನ್ 137(2) ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ತನಿಖೆಯ ಸಮಯದಲ್ಲಿ, ಜುಲೈ 22 ರ ಬುಧವಾರದಂದು ಕಾಣೆಯಾದ ಹುಡುಗಿಯನ್ನು ಪೊಲೀಸರು ಯಶಸ್ವಿಯಾಗಿ ಪತ್ತೆಹಚ್ಚಿದರು. ಪೊಲೀಸರಿಗೆ ನೀಡಿದ ಹೇಳಿಕೆಯಲ್ಲಿ, ಆರೋಪಿ ಧನುಷ್ ತನ್ನನ್ನು ಪುಸಲಾಯಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಅಪ್ರಾಪ್ತ…

Read More

ಬೆಳ್ತಂಗಡಿ: ಶಿಬಾಜೆಯಲ್ಲಿರುವ ಮನೆಯೊಂದಕ್ಕೆ ಬಂದು, ಛಾವಣಿಯ ಹೆಂಚುಗಳಿಗೆ ಕಲ್ಲು ಎಸೆದು, ನಿವಾಸಿಗಳನ್ನು ನಿಂದಿಸಿ, ಜೀವ ಬೆದರಿಕೆ ಹಾಕಿ, ಹಣ ದೋಚಿದ್ದಾರೆ ಎಂಬ ಆರೋಪದ ಮೇಲೆ ಧರ್ಮಸ್ಥಳ ಪೊಲೀಸರು ಇಬ್ಬರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಬೆಳ್ತಂಗಡಿಯ ಶಿಬಾಜೆ ನಿವಾಸಿ ಎಲಿಯಮ್ಮ ಥಾಮಸ್ (60) ದೂರು ನೀಡಿದ್ದವರು. ಆಕೆಯ ದೂರಿನ ಪ್ರಕಾರ, ಜುಲೈ 10 ರ ರಾತ್ರಿ ಈ ಘಟನೆ ನಡೆದಿದ್ದು, ಆಕೆ ತನ್ನ ಕುಟುಂಬ ಸದಸ್ಯರೊಂದಿಗೆ ತನ್ನ ನಿವಾಸದಲ್ಲಿದ್ದಾಗ. ಮನೋಜ್ ಎನ್.ಕೆ ಮತ್ತು ರಾಜು ಎಂದು ಗುರುತಿಸಲಾದ ಆರೋಪಿಗಳು ಮನೆಯ ಬಳಿ ಬಂದು, ಛಾವಣಿಯ ಹಂಚುಗಳ ಮೇಲೆ ಕಲ್ಲು ತೂರಾಟ ನಡೆಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ದೂರುದಾರರ ಮಗನಿಗೆ ಭೀಕರ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ. ಮನೆಯ ವರಾಂಡಾದಲ್ಲಿ ಇರಿಸಲಾಗಿದ್ದ 2,900 ರೂ. ನಗದನ್ನು ಮನೋಜ್ ತೆಗೆದುಕೊಂಡು ಹೋಗಿದ್ದಾನೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ದೂರಿನ ಆಧಾರದ ಮೇಲೆ, ಧರ್ಮಸ್ಥಳ ಪೊಲೀಸ್ ಠಾಣೆಯು ಅಪರಾಧ ಸಂಖ್ಯೆ 50/2026 ರಲ್ಲಿ ಭಾರತೀಯ…

Read More

ಮಂಗಳೂರು : ಮತದಾರರ ಪಟ್ಟಿ/ದಾಖಲಾತಿ ಪರಿಶೀಲನೆಯ (SIR) ‘ಮಿಸ್‌ಮ್ಯಾಚ್’ ನೆಪ ಒಡ್ಡಿ, ನಕಲಿ APK ಆ್ಯಪ್ ಡೌನ್‌ಲೋಡ್ ಮಾಡಿಸುವ ಮೂಲಕ 71 ವರ್ಷದ ಹಿರಿಯ ನಾಗರಿಕರೊಬ್ಬರ ಬ್ಯಾಂಕ್ ಖಾತೆಯಿಂದ ಬರೋಬ್ಬರಿ ₹6,82,082 (ಆರು ಲಕ್ಷದ ಎಂಬತ್ತೆರಡು ಸಾವಿರದ ಎಂಭತ್ತೆರಡು ರೂಪಾಯಿ) ಹಣವನ್ನು ಸೈಬರ್ ಕಳ್ಳರು ಎಗರಿಸಿರುವ ಆಘಾತಕಾರಿ ಘಟನೆ ವರದಿಯಾಗಿದೆ. ಜುಲೈ 17 ರಂದು ಸಂತ್ರಸ್ತ 71 ವರ್ಷದ ವೃದ್ಧರ ಮೊಬೈಲ್‌ಗೆ “ನಿಮ್ಮ SIR ಪರಿಶೀಲನೆಯು ಮಿಸ್‌ಮ್ಯಾಚ್ ಆಗಿದೆ, ತಕ್ಷಣ 8638932992 ಸಂಖ್ಯೆಯನ್ನು ಸಂಪರ್ಕಿಸಿ” ಎಂದು ಮೆಸೇಜ್ ಬಂದಿತ್ತು. ಇದನ್ನು ನಂಬಿ ಇವರು ಜುಲೈ 18 ರಂದು ಸದ್ರಿ ಸಂಖ್ಯೆಗೆ ವಾಟ್ಸ್‌ಆ್ಯಪ್ ಮೆಸೇಜ್ ಮಾಡಿದ್ದು, 48 ಗಂಟೆಗಳಲ್ಲಿ ಸಂಪರ್ಕಿಸುವುದಾಗಿ ಸೈಬರ್ ವಂಚಕರಿಂದ ಮರುಪರಿಶೀಲನಾ ಸಂದೇಶ ಬಂದಿತ್ತು. ಜುಲೈ 20 ರಂದು ಸಂಜೆ +91 9101633409 ಸಂಖ್ಯೆಯಿಂದ ವಾಟ್ಸ್‌ಆ್ಯಪ್ ಕರೆ ಮಾಡಿದ ಅಪರಿಚಿತ ವ್ಯಕ್ತಿಯು ಮತದಾರರ ಪರಿಶೀಲನೆ ಲಿಂಕ್ ([https://online-voters-verification-web.app/verify](https://online-voters-verification-web.app/verify)) ಕಳುಹಿಸಿ, SIR ಅಪ್ಡೇಟ್ ಮಾಡಲು ದಾಖಲೆಗಳ ವಿವರ ಪಡೆದಿದ್ದನು. ಪರಿಶೀಲನೆಯ ₹5…

Read More

ಚಿಕ್ಕಬಳ್ಳಾಪುರ:ಹೆಣ್ಣು ಮಗು ಹುಟ್ಟಿತೆಂಬ ಒಂದೇ ಕಾರಣಕ್ಕೆ ಸ್ವಂತ ತಂದೆಯೇ ತನ್ನ 13 ದಿನದ ಕಂದಮ್ಮನನ್ನು ನೀರಿನ ಸಂಪ್‌ಗೆ ಎಸೆದು ಕ್ರೂರವಾಗಿ ಹತ್ಯೆ ಮಾಡಿರುವ ಅಮಾನವೀಯ ಘಟನೆ ಚಿಕ್ಕಬಳ್ಳಾಪುರ ನಗರದ ಶಾಂತಿನಗರದಲ್ಲಿ ನಡೆದಿದೆ. ಹುಡುಕಾಡುವ ನಾಟಕವಾಡಿದ್ದ ಆರೋಪಿ ಸ್ಥಳೀಯ ನಿವಾಸಿಗಳಾದ ಇಮ್ರಾನ್ ಹಾಗೂ ಮುಸ್ಕಾನ್ ದಂಪತಿಗೆ ಕೇವಲ 13 ದಿನಗಳ ಹಿಂದೆಯಷ್ಟೇ ಹೆಣ್ಣು ಮಗು ಜನಿಸಿತ್ತು. ಆದರೆ ಹೆಣ್ಣು ಮಗು ಹುಟ್ಟಿದ್ದಕ್ಕೆ ಅಸಮಾಧಾನಗೊಂಡಿದ್ದ ತಂದೆ ಇಮ್ರಾನ್, ಬುಧವಾರ (ಜುಲೈ 22) ತಡರಾತ್ರಿ ಕುಟುಂಬಸ್ಥರೆಲ್ಲರೂ ನಿದ್ರಿಸುತ್ತಿದ್ದ ವೇಳೆ ರಾಕ್ಷಸ ಕೃತ್ಯ ಎಸಗಿದ್ದಾನೆ. ಮಲಗಿದ್ದ ಮಗುವನ್ನು ಗುಟ್ಟಾಗಿ ಎತ್ತಿಕೊಂಡು ಹೋಗಿ ಮನೆಯಲ್ಲಿದ್ದ ನೀರಿನ ಸಂಪ್‌ಗೆ ಎಸೆದಿದ್ದಾನೆ. ಬೆಳಕಿಗೆ ಬಂದ ಕೃತ್ಯ ತಡರಾತ್ರಿ ಎಚ್ಚರಗೊಂಡ ತಾಯಿ ಮುಸ್ಕಾನ್ ಮಗು ಕಾಣದೇ ಗಾಬರಿಯಿಂದ ಪತಿಯಲ್ಲಿ ವಿಚಾರಿಸಿದಾಗ, ತನಗೆ ಏನೂ ತಿಳಿದಿಲ್ಲವೆಂದು ಇಮ್ರಾನ್ ನಟಿಸಿದ್ದಾನೆ. ಅಲ್ಲದೆ, ಮಗು ಎಲ್ಲೋ ಕಾಣೆಯಾಗಿದೆ ಎಂದು ಕುಟುಂಬದವರೊಂದಿಗೆ ಸೇರಿ ಹುಡುಕುವ ನಾಟಕವಾಡಿದ್ದಾನೆ. ಆದರೆ ಅನುಮಾನಗೊಂಡು ಪರಿಶೀಲಿಸಿದಾಗ ಮಗು ನೀರಿನ ಸಂಪ್‌ನಲ್ಲಿ ಹೆಣವಾಗಿ ಪತ್ತೆಯಾಗಿದೆ. ಸ್ವಂತ…

Read More

ಬೆಂಗಳೂರು: ಕಾವೇರಿ ನೀರು ಹಂಚಿಕೆ ಸಮಸ್ಯೆ ಮತ್ತು ಮೇಕೆದಾಟು ಯೋಜನೆ ವಿಚಾರ ಸಂಬಂಧ ಸದಾ ಒಂದಿಲ್ಲೊಂದು ಕ್ಯಾತೆ ತೆಗೆಯುತ್ತಿರುವ ನೆರೆ ರಾಜ್ಯ ತಮಿಳುನಾಡಿನೊಂದಿಗೆ ಸಂಧಾನಕ್ಕೆ ಕರ್ನಾಟಕ ಮುಂದಾಗಿದೆ. ಈ ವಿಚಾರವಾಗಿ ಆಗಸ್ಟ್ 3ರಂದು ಮಾತುಕತೆಗೆ ಬರುವಂತೆ ತಮಿಳುನಾಡು ಸಿಎಂ ವಿಜಯ್​ಗೆ ಕರ್ನಾಟಕ ಆಹ್ವಾನ ನೀಡಿದೆ. ಕರ್ನಾಟಕ ಮತ್ತು ತಮಿಳುನಾಡು ನಡುವೆ ಪತ್ರ ವ್ಯವಹಾರ ನಡೆದಿದ್ದರೂ ಮಾತುಕತೆಗೆ ಬರುವ ವಿಚಾರವಾಗಿ ವಿಜಯ್​​ರಿಂದ ಈವರೆಗೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎನ್ನಲಾಗಿದೆ. ಹೀಗಾಗಿ ತಮಿಳುನಾಡಿನ ಮುಂದಿನ ನಿರ್ಧಾರ ಏನಿರಬಹುದು ಎಂಬ ಕುತೂಹಲ ಹೆಚ್ಚಿದೆ. ಒಂದೊಮ್ಮೆ ಕರ್ನಾಟಕದ ಆಹ್ವಾನ ಒಪ್ಪಿ ವಿಜಯ್​​ ಬಂದಿದ್ದೇ ಆದಲ್ಲಿ ಸಂಕಷ್ಟ ಪರಿಹಾರ ಸೂತ್ರದ ಬಗ್ಗೆ ಉಭಯ ರಾಜ್ಯಗಳ ಮುಖ್ಯಮಂತ್ರಿಗಳು ಮಹತ್ವದ ಚರ್ಚೆ ನಡೆಸಲಿದ್ದಾರೆ. ನೀರು ಬಿಡದಿರಲು ಆದೇಶಿಸಿದ್ದ CWMA ಕರ್ನಾಟಕದಲ್ಲಿ ಬರ ಪರಿಸ್ಥಿತಿ ಉಂಟಾಗಿರುವ ಹಿನ್ನೆಲೆ ತಮಿಳುನಾಡಿಗೆ ನೀರು ಬಿಡದಿರಲು CWMA ನಿನ್ನೆಯಷ್ಟೇ ಆದೇಶಿಸಿತ್ತು. ಜುಲೈ 26ರ ಬಳಿಕ ಕರ್ನಾಟಕದಲ್ಲಿ ಮಳೆಯಾಗುವ ಸಾಧ್ಯತೆಯಿದೆ . ಈ ಹಿನ್ನೆಲೆ ಒಂದು ವಾರದ ಬಳಿಕ…

Read More