Author: admin

ನವದೆಹಲಿ: ಭಾರತದ ಮೊದಲ ಬುಲೆಟ್ ಟ್ರೈನ್ ಯೋಜನೆಯಾದ ಮುಂಬೈ-ಅಹಮದಾಬಾದ್ ಹೈ-ಸ್ಪೀಡ್ ರೈಲು ಯೋಜನೆಗೆ ಸಂಬಂಧಿಸಿದಂತೆ ಅತ್ಯಂತ ಮಹತ್ವದ ಜಂಟಿ ನಿರ್ಧಾರವೊಂದನ್ನು ಭಾರತ ಮತ್ತು ಜಪಾನ್ ಸರ್ಕಾರಗಳು ಕೈಗೊಂಡಿವೆ. ಕೇಂದ್ರ ಸರ್ಕಾರದ ಮೂಲಗಳ ಪ್ರಕಾರ, ಜಪಾನ್‌ನೊಂದಿಗಿನ ದ್ವಿಪಕ್ಷೀಯ ಮಾತುಕತೆಗಳು ಅತ್ಯಂತ ಯಶಸ್ವಿಯಾಗಿ ಮುನ್ನಡೆದಿದ್ದು, ದೇಶದ ಮೊದಲ ಬುಲೆಟ್ ರೈಲನ್ನು ನಿಗದಿತ ಸಮಯಕ್ಕಿಂತ ಮುಂಚಿತವಾಗಿ ಓಡಿಸಲು ಇತ್ತೀಚಿನ ಸಭೆಯಲ್ಲಿ ಉಭಯ ದೇಶಗಳು ಸಮ್ಮತಿಸಿವೆ. ಮೊದಲ ಹಂತದ ಕಾರಿಡಾರ್ 2027 ರಲ್ಲೇ ಮುಕ್ತಾಯ ಮುಂಬೈ-ಅಹಮದಾಬಾದ್ ನಡುವಿನ ಬುಲೆಟ್ ಟ್ರೈನ್ ಯೋಜನೆಯ ಸಿವಿಲ್ ಕಾಮಗಾರಿಗಳು (ಪಿಲ್ಲರ್ ಮತ್ತು ಟ್ರ್ಯಾಕ್ ಅಳವಡಿಕೆ) ಪ್ರಸ್ತುತ ಗುಜರಾತ್ ವಲಯದಲ್ಲಿ ಅತ್ಯಂತ ವೇಗವಾಗಿ ಪ್ರಗತಿ ಸಾಧಿಸುತ್ತಿವೆ. ಯೋಜನೆಯ ಮೊದಲ ಆದ್ಯತೆಯ ವಿಭಾಗವು 2027 ರ ವೇಳೆಗೆ ಸಂಚರಿಸಲು ಸಂಪೂರ್ಣ ಸಜ್ಜಾಗಲಿದೆ. ಜಪಾನ್‌ನ ‘E10 ಸರಣಿ’ ತಂತ್ರಜ್ಞಾನ ತಡವಾಗಲಿದೆ ಜಪಾನ್ ದೇಶವು ಭಾರತೀಯ ಹವಾಮಾನ ಮತ್ತು ಪರಿಸರಕ್ಕೆ ಹೊಂದುವಂತಹ ಅತ್ಯಾಧುನಿಕ ‘ಇ10 ಸರಣಿ’ (E10 Series) ಬುಲೆಟ್ ರೈಲುಗಳನ್ನು ಭಾರತಕ್ಕೆ ಪೂರೈಸಲು ಒಪ್ಪಿಕೊಂಡಿದೆ. ಆದರೆ,…

Read More

ಕಾರ್ಕಳ : ಶಿವತಿಕೆರೆ ಸಮೀಪ ರವಿವಾರ (ಜುಲೈ 12) ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಕಾರ್ಕಳ ತಾಲೂಕು ಕಚೇರಿಯ ಕಂದಾಯ ನಿರೀಕ್ಷಕ, ನಂದಳಿಕೆ ನಿವಾಸಿ ಶಿವಪ್ರಸಾದ್‌ ರಾವ್ ಅವರು ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಓರ್ವ ಪ್ರಾಮಾಣಿಕ ಅಧಿಕಾರಿಯ ಅಕಾಲಿಕ ಮರಣವು ಇಡೀ ತಾಲೂಕು ಕಚೇರಿ ಹಾಗೂ ಸ್ಥಳೀಯರನ್ನು ಶೋಕಸಾಗರದಲ್ಲಿ ಮುಳುಗಿಸಿದೆ. ರವಿವಾರ ಸಂಜೆ ಶಿವಪ್ರಸಾದ್ ರಾವ್ ಅವರು ಕಾರ್ಕಳದಿಂದ ತಮ್ಮ ಸ್ಕೂಟರಿನಲ್ಲಿ ನಂದಳಿಕೆಯಲ್ಲಿರುವ ತಮ್ಮ ಮನೆಗೆ ಹಿಂತಿರುಗುತ್ತಿದ್ದರು. ಶಿವತಿಕೆರೆ ಸಮೀಪದ ಪೆಟ್ರೋಲ್ ಬಂಕ್ ಬಳಿ ತಲುಪಿದಾಗ, ಸ್ಕೂಟರ್‌ನ ಇಂಡಿಕೇಟರ್ ನೀಡಿ ಯೂ-ಟರ್ನ್ (U-Turn) ಪಡೆಯಲು ಮುಂದಾಗಿದ್ದರು. ಇದೇ ವೇಳೆ ಹಿಂದಿನಿಂದ ಅತಿ ವೇಗವಾಗಿ ಹಾಗೂ ಅಜಾಗರೂಕತೆಯಿಂದ ಬಂದ ಬೈಕ್ ಒಂದು ಅವರ ಸ್ಕೂಟರ್‌ಗೆ ಬಲವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಶಿವಪ್ರಸಾದ್ ರಾವ್ ಅವರು ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಸ್ಥಳೀಯರು ತಕ್ಷಣವೇ ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದರು. ಆದರೆ, ಗಾಯಗಳ…

Read More

ಬೆಂಗಳೂರು: ಬೆಂಗಳೂರಿನ ನಮ್ಮ ಮೆಟ್ರೋ ಪ್ರಯಾಣಿಕರೇ ಎಚ್ಚರ, ಇನ್ಮುಂದೆ ಮೆಟ್ರೋ ನಿಲ್ದಾಣ ಮತ್ತು ರೈಲಿನಲ್ಲಿ ನಿಯಮ ಮೀರಿ ಹುಚ್ಚಾಟ ಆಡಿದರೆ ನಿಮ್ಮ ಜೇಬಿಗೆ ಕತ್ತರಿ ಬೀಳಲಿದೆ. ಮೆಟ್ರೋ ನಿಯಮಗಳನ್ನು ಉಲ್ಲಂಘಿಸುವವರಿಗೆ ಬಿಸಿ ಮುಟ್ಟಿಸಲು ಬಿಎಂಆರ್‌ಸಿಎಲ್ (BMRCL) ದಂಡದ ಪ್ರಮಾಣವನ್ನು ಏರಿಕೆ ಮಾಡಿದೆ. ಕೇಂದ್ರ ಸರ್ಕಾರದ ಸೂಚನೆಯ ಮೇರೆಗೆ ನಮ್ಮ ಮೆಟ್ರೋದಲ್ಲಿ ಜಾರಿಗೆ ತರಲಾಗಿರುವ ಈ ಕಠಿಣ ನಿಯಮಗಳು ಮತ್ತು ಪರಿಷ್ಕೃತ ದಂಡವನ್ನು ವಿಧಿಸಲಾಗಿದೆ. ಮೆಟ್ರೋ ರೈಲು ಹಾಗೂ ನಿಲ್ದಾಣಗಳಲ್ಲಿ ಸಾರ್ವಜನಿಕರ ಸುರಕ್ಷತೆ ಕಾಯ್ದುಕೊಳ್ಳಲು ಮತ್ತು ಪ್ರಯಾಣಿಕರಿಗೆ ಕಿರಿಕಿರಿ ಉಂಟುಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಈ ಹೊಸ ರೂಲ್ಸ್ ಜಾರಿಗೆ ತರಲಾಗಿದೆ. ಮೆಟ್ರೋ ಸುರಕ್ಷತೆಗೆ ಧಕ್ಕೆ ತರುವಂತಹ ಗಂಭೀರ ತಪ್ಪುಗಳಿಗೆ ಇನ್ಮುಂದೆ ಅತ್ಯಂತ ದುಬಾರಿ ದಂಡ ತೆರಬೇಕಾಗುತ್ತದೆ. ಮೆಟ್ರೋ ಹಳಿಗಳ ಮೇಲೆ ಅನಧಿಕೃತವಾಗಿ ಓಡಾಡುವುದು ಅಥವಾ ಟ್ರ್ಯಾಕ್ ಮೇಲೆ ಜಿಗಿಯುವುದು ಮಾಡಿದರೆ ಈ ಹಿಂದೆ ಕಡಿಮೆ ಇದ್ದ ದಂಡದ ಮೊತ್ತವನ್ನು ಇನ್ಮುಂದೆ 5,000 ರೂ.ನಿಂದ 25,000 ರೂ.ವರೆಗೆ ಏರಿಕೆ ಮಾಡಲಾಗಿದೆ. ಮೆಟ್ರೋ…

Read More

ಮಂಗಳೂರು: ಸಮುದ್ರದ ಅಲೆಗಳ ಹೊಡೆತಕ್ಕೆ ಮೀನುಗಾರಿಕಾ ದೋಣಿ ಪಲ್ಟಿಯಾದ ಪರಿಣಾಮ ದೋಣಿಯಲ್ಲಿದ್ದ 6 ಮಂದಿ ಮೀನುಗಾರರನ್ನು ರಕ್ಷಿಸಿರುವ ಘಟನೆ ಮಂಗಳೂರುಹೊರವಲಯದ ಸುರತ್ಕಲ್ ಬಳಿ ನಡೆದಿದೆ. ದೋಣಿ ಉಡುಪಿಯ ಮಲ್ಪೆ ಬಂದರಿನಿಂದ ಮೀನುಗಾರಿಕೆಗೆ ಹೊರಟಿತ್ತು. ದೋಣಿಯಲ್ಲಿ ಆಂಧ್ರಪ್ರದೇಶ ಮೂಲದ 6 ಮಂದಿ ಮೀನುಗಾರರಿದ್ದರು. ಮೀನುಗಾರಿಕೆ ವೇಳೆ ಸಮುದ್ರದ ಅಲೆಗಳ ಹೊಡೆತಕ್ಕೆ ದೋಣಿ ಪಲ್ಟಿಯಾಗಿದೆ. ದೋಣಿ ಪಲ್ಟಿಯಾದ ರಭಸಕ್ಕೆ ಮೀನುಗಾರರು ಸಮುದ್ರಕ್ಕೆ ಬಿದ್ದಿದ್ದಾರೆ. ಈ ವೇಳೆ ಸ್ಥಳೀಯ ಮೀನುಗಾರರು ಅಪಾಯದಲ್ಲಿದ್ದ ಮೀನುಗಾರರನ್ನು ರಕ್ಷಣೆ ಮಾಡಿದ್ದಾರೆ.

Read More

ಮಂಗಳೂರು: ಪ್ರಯಾಣಿಕರನ್ನು ಚಾಕು ತೋರಿಸಿ ಬೆದರಿಸಿ ದರೋಡೆ ಮಾಡಲು ಯತ್ನಿಸಿದ ಯುವಕನನ್ನು ಪ್ರಯಾಣಿಕರು ಹಿಡಿದು ಗೋವಾ ಪೊಲೀಸರಿಗೆ ಒಪ್ಪಿಸಿದ ಘಟನೆ ಮುಂಬೈ-ಮಂಗಳೂರು ಎಕ್ಸ್‌ಪ್ರೆಸ್‌ನಲ್ಲಿ ನಡೆದಿದೆ. ಮಹಾರಾಷ್ಟ್ರದ ಕರ್ಮಾಲಿ ರೈಲು ನಿಲ್ದಾಣ ಮತ್ತು ಗೋವಾದ ರೈಲು ನಿಲ್ದಾಣದ ನಡುವೆ ಈ ಘಟನೆ ನಡೆದಿದೆ. ಗುರುವಾರ, ಯುವಕ ರೈಲಿನೊಳಗೆ ಅನುಮಾನಾಸ್ಪದವಾಗಿ ಓಡಾಡುತ್ತಿರುವುದು ಕಂಡುಬಂದಿದೆ. ರೈಲ್ವೆ ಟಿಕೆಟ್ ಕಲೆಕ್ಟರ್ ಲಕ್ಷ್ಮಣ್ ಪವಾರ್ ಅವರು ಪ್ರಶ್ನಿಸಲು ಪ್ರಯತ್ನಿಸಿದಾಗ, ಶಂಕಿತ ವ್ಯಕ್ತಿ ಇದ್ದಕ್ಕಿದ್ದಂತೆ ಕೋಚ್ ಮೂಲಕ ಓಡಲು ಪ್ರಾರಂಭಿಸಿದ್ದಾನೆ. ಕುಂದಾಪುರದ ನಾಗರಾಜ್ ಪೂಜಾರಿ ಸೇರಿದಂತೆ ಮಂಗಳೂರಿಗೆ ತೆರಳುತ್ತಿದ್ದ ಪ್ರಯಾಣಿಕರು ಸಹ ಪ್ರಯಾಣಿಕರಾದ ವಾದಿರಾಜ್ ಸುರತ್ಕಲ್ ಮತ್ತು ಮಂಜುನಾಥ ಶಾಂತಿ ಸೇರಿ ಯುವಕನನ್ನು ಬೆನ್ನಟ್ಟಿ ಹಿಡಿದಿದ್ದಾರೆ. ನಂತರ ಕಳ್ಳನು ತನ್ನ ಜೇಬಿನಿಂದ ಚಾಕುವನ್ನು ಹೊರತೆಗೆದು ಪ್ರಯಾಣಿಕರಿಗೆ ಬೆದರಿಸಿದ್ದಾನೆ . ಆದರೆ, ಎಚ್ಚೆತ್ತುಕೊಂಡ ಪ್ರಯಾಣಿಕರು ಆತನ ಕೈಯಿಂದ ಚಾಕುವನ್ನು ಕಸಿದುಕೊಂಡಿದ್ದಾರೆ. ನಂತರ ರೈಲ್ವೆ ಸಿಬ್ಬಂದಿ ಆರೋಪಿಯನ್ನು ಗೋವಾ ಪೊಲೀಸರಿಗೆ ಒಪ್ಪಿಸಿದರು. ಸಿಕ್ಕಿಬಿದ್ದ ನಂತರ, ಪ್ರಯಾಣಿಕರು ಯುವಕನನ್ನು ಪ್ರಶ್ನಿಸಿದಾಗ, ಅವನು ಮುಂಬೈನ ಮುಂಬ್ರಾದವನೆಂದು…

Read More

ಬಂಟ್ವಾಳ : ಬಿ.ಸಿ. ರೋಡ್ ಬಸ್ ನಿಲ್ದಾಣದಲ್ಲಿ ಗುರುವಾರ ಸಂಜೆ ನಡೆದ ಕಕ್ಯಪದವು ನಿವಾಸಿ ಲಾವಣ್ಯ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಂತಕ ಚೇತನ್‌ನನ್ನು ಕೊನೆಗೂ ಪೊಲೀಸರು ಬಂಧಿಸಿದ್ದಾರೆ. ಆದರೆ, ಕೃತ್ಯ ಎಸಗಿದ ಬಳಿಕ ತಾನೂ ಇಲಿಪಾಷಾಣ (ವಿಷ) ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವುದಾಗಿ ಆರೋಪಿ ವಿಚಾರಣೆ ವೇಳೆ ಒಪ್ಪಿಕೊಂಡಿದ್ದು, ಸದ್ಯ ಆತನನ್ನು ಪೊಲೀಸರು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ಅರುಣ್ ಕುಮಾರ್ ಮಾಹಿತಿ ನೀಡಿದ್ದಾರೆ. ಜಿಲ್ಲಾ ಎಸ್ಪಿ ಅರುಣ್ ಕುಮಾರ್ ಅವರು ಮಾಧ್ಯಮಗಳಿಗೆ ಪ್ರಕರಣದ ಭೀಕರತೆಯನ್ನು ವಿವರಿಸುತ್ತಾ, “ಆರೋಪಿ ಚೇತನ್ ಮೃತ ಲಾವಣ್ಯಳಿಗೆ ದೂರದ ಸಂಬಂಧಿಯಾಗಿದ್ದು, ಆಕೆಯನ್ನು ಏಕಪಕ್ಷೀಯವಾಗಿ (One-sided) ಪ್ರೀತಿಸುತ್ತಿದ್ದ. ಆದರೆ ಲಾವಣ್ಯ ಈತನ ಪ್ರೀತಿಯನ್ನು ನಿರಾಕರಿಸಿದ್ದರಿಂದ ಆಕ್ರೋಶಗೊಂಡು, ಬ್ಯಾಗ್‌ನಲ್ಲಿ ತಂದಿದ್ದ ತಲ್ವಾರ್‌ನಿಂದ (ಲಾಂಗ್) ಬಸ್ ನಿಲ್ದಾಣದಲ್ಲೇ ಸಾರ್ವಜನಿಕರ ಸಮ್ಮುಖದಲ್ಲಿ ತೀವ್ರವಾಗಿ ಕಡಿದು ಹತ್ಯೆ ಮಾಡಿದ್ದಾನೆ,” ಎಂದು ತಿಳಿಸಿದ್ದಾರೆ. ಕೊಲೆ ಮಾಡಿ ಪರಾರಿಯಾಗಿದ್ದ ಚೇತನ್ ಪತ್ತೆಗಾಗಿ ಪೊಲೀಸರು ವಿಶೇಷ ತನಿಖಾ…

Read More

ವಾಷಿಂಗ್ಟನ್ : ಹಾರ್ಮುಜ್ ಜಲಸಂಧಿಯ ಮೇಲಿನ ನಿಯಂತ್ರಣಕ್ಕಾಗಿ ಅಮೆರಿಕ ಹಾಗೂ ಇರಾನ್ ನಡುವೆ ನಡೆಯುತ್ತಿರುವ ಸಂಘರ್ಷ ಸದ್ಯ ಮಹಾಯುದ್ಧದ ರೂಪ ತಾಳಿದೆ. ಸತತ ಆರನೇ ರಾತ್ರಿಯೂ ಉಭಯ ದೇಶಗಳ ನಡುವೆ ಗುಂಡಿನ ಚಕಮಕಿ ಮುಂದುವರಿದಿದ್ದು, ಅಮೆರಿಕ ಸೇನೆಯು ಇರಾನಿನ ನಾಗರಿಕ ಮೂಲಸೌಕರ್ಯಗಳಾದ ಮೂರು ಪ್ರಮುಖ ಸೇತುವೆಗಳು, ರೈಲು ನಿಲ್ದಾಣ ಹಾಗೂ ವಿಮಾನ ನಿಲ್ದಾಣಗಳ ಮೇಲೆ ಭೀಕರ ವೈಮಾನಿಕ ದಾಳಿ ನಡೆಸಿದೆ. ಹಾರ್ಮುಜ್ ಜಲಸಂಧಿಯ ಮೇಲಿನ ತನ್ನ ಬಿಗಿಹಿಡಿತವನ್ನು ಸಡಿಲಿಸುವಂತೆ ಟೆಹ್ರಾನ್ ಮೇಲೆ ಒತ್ತಡ ಹೇರಲು ಇರಾನ್‌ನ ಮೂಲಸೌಕರ್ಯಗಳನ್ನೇ ಗುರಿಯಾಗಿಸುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನೀಡಿದ್ದ ಎಚ್ಚರಿಕೆಯ ಬೆನ್ನಲ್ಲೇ ಈ ಕಠಿಣ ಮಿಲಿಟರಿ ಕ್ರಮ ಕೈಗೊಳ್ಳಲಾಗಿದೆ. ಅಮೆರಿಕದ ದಾಳಿಗೆ ಇರಾನ್‌ನ ದಕ್ಷಿಣ ಕರಾವಳಿ ನಗರಗಳು ನಲುಗಿಹೋಗಿವೆ. ಅಹ್ವಾಜ್, ಕೆಶ್ಮ್, ಬುಶೆಹರ್, ದಶ್ತಿ, ಬೋಸ್ತಾನ್, ಸಿರಿಕ್ ಹಾಗೂ ಬಂದರ್-ಎ-ಲೆಂಗೆಹ್‌ ನಗರಗಳಲ್ಲಿ ಭಾರಿ ಸ್ಫೋಟಗಳು ಸಂಭವಿಸಿದ್ದು, ವ್ಯಾಪಕ ಹಾನಿಯಾಗಿದೆ. ಬಂದರ್-ಎ-ಖಮಿರ್‌ನ ಮೂರು ಸೇತುವೆಗಳು ಸಂಪೂರ್ಣ ನೆಲಸಮವಾಗಿದ್ದು, ಬಂದರ್ ಅಬ್ಬಾಸ್ ಮತ್ತು ಹಾರ್ಮೋಜ್ಗನ್ ಪ್ರಾಂತ್ಯದಲ್ಲಿ ರಸ್ತೆ…

Read More

ಬಂಟ್ವಾಳ : ಬಿಸಿರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಯುವತಿ ಲಾವಣ್ಯ ಅವರನ್ನು ಭೀಕರವಾಗಿ ಹತ್ಯೆಗೈದು ಪರಾರಿಯಾಗಿದ್ದ ಬೆಳ್ತಂಗಡಿ ತಾಲೂಕಿನ ಓಡಿಲ್ನಾಳ ನಿವಾಸಿ ಚೇತನ್‌‌ನನ್ನು ಬಂಟ್ವಾಳ ಪೊಲೀಸರು ಬಂಧಿಸಿರುವ ಮಾಹಿತಿ ಲಭ್ಯವಾಗಿದೆ. ಆರೋಪಿಯ ಪತ್ತೆಗಾಗಿ ವಿಶೇಷ ತಂಡಗಳನ್ನು ರಚಿಸಿದ್ದ ಪೊಲೀಸರು ತ್ವರಿತ ಕಾರ್ಯಾಚರಣೆ ನಡೆಸಿ ಇಂದು ಬೆಳಗ್ಗೆ ಮಂಗಳೂರಿನ ವಾಮಾಂಜೂರಿನ ಪಚ್ಚನಾಡಿಯಲ್ಲಿ ಆರೋಪಿ ಚೇತನ್ ನನ್ನು ಬಂಟ್ವಾಳ ಪೊಲೀಸರು ಬಂಧಿಸಿದ್ದಾರೆ.

Read More

ನ್ಯಾಯಾಲಯವು ನ್ಯಾಯಾಂಗ ಬಂಧನಕ್ಕೆ ವಿಧಿಸಿದ ಬೆನ್ನಲ್ಲೇ, ಆರೋಪಿಯೊಬ್ಬನನ್ನು ಶಿವಮೊಗ್ಗದ ಕೇಂದ್ರ ಕಾರಾಗೃಹಕ್ಕೆ (Central Jail) ಕರೆದೊಯ್ಯುತ್ತಿದ್ದಾಗ ಅರಣ್ಯ ಇಲಾಖೆ ಸಿಬ್ಬಂದಿಯ ಕಣ್ಣಿಗೆ ಮಣ್ಣೆರಚಿ ಪರಾರಿಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನಲ್ಲಿ ನಡೆದಿದೆ. ಹೊಸನಗರ ತಾಲೂಕಿನ ಆಡುಗೋಡಿ ಗ್ರಾಮದ ನಿವಾಸಿಯಾದ ವೆಂಕಟೇಶ್ (36) ಎಂಬಾತನೇ ಸಿಬ್ಬಂದಿ ವಶದಿಂದ ಎಸ್ಕೇಪ್ ಆಗಿರುವ ಆರೋಪಿಯಾಗಿದ್ದಾನೆ. ಅಕ್ರಮ ನಾಟಾ ಸಾಗಾಟದ ಆರೋಪಿ ವೆಂಕಟೇಶ್ ಅರಣ್ಯ ಇಲಾಖೆಯ ಅಕ್ರಮ ನಾಟಾ (ಲಾಟು) ಸಾಗಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯಾಗಿದ್ದ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯವು ಆತನ ವಿರುದ್ಧ ವಾರಂಟ್ ಜಾರಿಗೊಳಿಸಿತ್ತು. ಕೋರ್ಟ್ ವಾರಂಟ್ ಹಿನ್ನೆಲೆಯಲ್ಲಿ ಕಾರ್ಯಾಚರಣೆ ನಡೆಸಿದ್ದ ಅರಣ್ಯ ಇಲಾಖೆಯ ಸಿಬ್ಬಂದಿ, ಆರೋಪಿ ವೆಂಕಟೇಶ್‌ನನ್ನು ಯಶಸ್ವಿಯಾಗಿ ವಶಕ್ಕೆ ಪಡೆದುಕೊಂಡಿದ್ದರು. ಕೋರ್ಟ್‌ನಿಂದ ಜೈಲಿಗೆ ಒಯ್ಯುವಾಗ ಎಸ್ಕೇಪ್! ಅರಣ್ಯ ಸಿಬ್ಬಂದಿಯು ಆರೋಪಿಯನ್ನು ಹೊಸನಗರದ ಜೆಎಂಎಫ್‌ಸಿ (JMFC) ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಪ್ರಕರಣದ ಸುದೀರ್ಘ ವಿಚಾರಣೆ ನಡೆಸಿದ ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿತು. ಕೋರ್ಟ್ ಆದೇಶದಂತೆ ಆರೋಪಿಯನ್ನು ಹೊಸನಗರದಿಂದ…

Read More

ಸುಬ್ರಹ್ಮಣ್ಯ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಮೋಕ್ಷಿತ್ ಎಂಬ ವ್ಯಕ್ತಿಯ ವಿರುದ್ಧ ಸುಬ್ರಹ್ಮಣ್ಯ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಸಂತ್ರಸ್ತೆಯ ತಾಯಿ ದೂರು ನೀಡಿದ ನಂತರ ಈ ಘಟನೆ ಬೆಳಕಿಗೆ ಬಂದಿದೆ. ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಪೊಲೀಸ್ ದೂರಿನ ಪ್ರಕಾರ, 15 ವರ್ಷದ ಸಂತ್ರಸ್ತೆ ಜುಲೈ 7 ರಂದು ಕಡಬ ಏನೆಕಲ್ಲುವಿನಲ್ಲಿರುವ ತನ್ನ ಸ್ನೇಹಿತನ ಮನೆಗೆ ಹೋಗಿದ್ದಳು. ಜುಲೈ 8 ರ ಮಧ್ಯಾಹ್ನ ಆಕೆ ಮನೆಯಲ್ಲಿದ್ದಾಗ, ಆರೋಪಿ ಮೋಕ್ಷಿತ್ ಆಕೆಯನ್ನು ಮನೆಯ ಸಮೀಪವಿರುವ ಸ್ಥಳಕ್ಕೆ ಕರೆಸಿ ಬಲವಂತವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ವರದಿಯಾಗಿದೆ. ಆರೋಪಿಸಂತ್ರಸ್ತೆಗೆ ಕೊಲೆ ಬೆದರಿಕೆಯನ್ನೂ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ. ಜುಲೈ 9 ರಂದು ಸಂತ್ರಸ್ತೆ ಮನೆಗೆ ಮರಳಿದ ಬಳಿಕ ಆಕೆಯ ತಾಯಿ ಪೊಲೀಸರಿಗೆ ಔಪಚಾರಿಕ ದೂರು ದಾಖಲಿಸಿದರು. ದೂರಿನ ಆಧಾರದ ಮೇಲೆ, ಸುಬ್ರಹ್ಮಣ್ಯ ಪೊಲೀಸರು ಅಪರಾಧ ಸಂಖ್ಯೆ 29/2026 ರ…

Read More