Author: admin
ಮನೆಯ ಬೀಗ ಮುರಿದು 1.42 ಕೋಟಿ ರೂಪಾಯಿ ಮೌಲ್ಯದ ವಸ್ತುಗಳನ್ನು ಕಳ್ಳತನ ಮಾಡಿದ್ದಾರೆ. ಪಿಡಿಒ ದಂಪತಿಯ ಮನೆಗೆ ನುಗ್ಗಿ ನಗ, ನಾಣ್ಯವನ್ನು ಕದ್ದು ಕಳ್ಳರು ಪರಾರಿಯಾಗಿದ್ದಾರೆ. ಶಿವಮೊಗ್ಗದ ವಿದ್ಯಾನಗರದ 4-A ಕ್ರಾಸ್ ನಲ್ಲಿ ಈ ಒಂದು ಕಳ್ಳತನ ನಡೆದಿದೆ. ಮನೆಯ ಬೀಗ ಮುರಿದು ಮನೆಯಲ್ಲಿದ್ದ ಚಿನ್ನ, ಬೆಳ್ಳಿ ನಗದು ಹಣ ಕದ್ದು ಕಳ್ಳರು ಪರಾರಿ ಆಗಿದ್ದಾರೆ ಮನೆಯಲ್ಲಿದ್ದ 943 ಗ್ರಾಂ ಚಿನ್ನಾಭರಣ, 500 ಗ್ರಾಮ ಬೆಳ್ಳಿ 1.5 ಲಕ್ಷ ಮೌಲ್ಯದ 15 ವಾಚ್ 86,000 ನಗದು ಹಣ ಕಳ್ಳತನ ಮಾಡಿದ್ದಾರೆ. ಕಳ್ಳರು ಪರಾರಿ ಆಗುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಶಿವಮೊಗ್ಗದ ಕೋಟೆ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
ಚಿಕ್ಕಬಳ್ಳಾಪುರ: ಅನುಮಾನಾಸ್ಪದವಾಗಿ ಮೃತಪಟ್ಟ ಯುವಕನ ಮರಣೋತ್ತರ ಪರೀಕ್ಷೆ ನಡೆಸಿದ ವೈದ್ಯರೇ ಬೆಚ್ಚಿಬಿದ್ದ ಘಟನೆಯೊಂದು ಚಿಕ್ಕಬಳ್ಳಾಪುರ ತಾಲೂಕಿನ ಗುಡಿಬಂಡೆ ಪಟ್ಟಣದಲ್ಲಿ ನಡೆದಿದೆ. ಮೃತನ ಹೊಟ್ಟೆಯನ್ನು ಪರಿಶೀಲಿಸಿದಾಗ ಲೈಟರ್, ಬ್ಯಾಟರಿ ಸೆಲ್, ಬೀಗದ ಕೀಗಳು ಸೇರಿದಂತೆ ಹಲವು ಅಪಾಯಕಾರಿ ಲೋಹದ ವಸ್ತುಗಳು ಪತ್ತೆಯಾಗಿವೆ. ಸದ್ಯ ಈ ಘಟನೆ ಅಚ್ಚರಿಗೂ ಕಾರಣವಾಗಿದ್ದು, ಯುವಕನ ಸಾವಿನ ಸುತ್ತ ಹತ್ತಾರು ಅನುಮಾನಗಳು ಹುಟ್ಟಿಕೊಂಡಿವೆ. ನಡೆದಿದ್ದೇನು? ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ಪಟ್ಟಣದ ಬಾಪೂಜಿನಗರದಲ್ಲಿ 28 ವರ್ಷದ ಮಹೇಶ್ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಮೂಲತಃ ಚಿಕ್ಕಬಳ್ಳಾಪುರ ತಾಲೂಕಿನ ನಲ್ಲಕದಿರೇನಹಳ್ಳಿ ಗ್ರಾಮದ ನಿವಾಸಿಯಾಗಿರುವ ಮಹೇಶ್, ಕಳೆದ ಕೆಲವು ದಿನಗಳಿಂದ ಅಕ್ಕನ ಮನೆಯಲ್ಲಿ ವಾಸವಾಗಿದ್ದ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಅಂದರೆ ನಿನ್ನೆ ಮಹೇಶ್ ನೇಣು ಬಿಗಿದುಕೊಂಡಿದ್ದಾನೆ ಎನ್ನಲಾಗಿದೆ. ಆದರೆ ಮೃತದೇಹ ನೆಲದ ಮೇಲೆ ಪತ್ತೆಯಾಗಿರುವುದು ಪೊಲೀಸರ ಅನುಮಾನಕ್ಕೆ ಕಾರಣವಾಗಿದೆ. ಹೀಗಾಗಿ ಯುವಕನ ಸಾವು ಆತ್ಮಹತ್ಯೆಯೋ ಅಥವಾ ಬೇರೆ ಏನಾದರೂ ನಡೆದಿದೆಯೋ ಎನ್ನುವ ಕುರಿತು ಮರಣೋತ್ತರ ಪರೀಕ್ಷೆಗೆ ಗುಡಿಬಂಡೆ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಹೊಟ್ಟೆಯಲ್ಲಿತ್ತು ವಸ್ತುಗಳ…
ಧಾರವಾಡ: ಸೋಲ್ಲಾಪುರದಿಂದ ಧಾರವಾಡಕ್ಕೆ ಬಂದಿದ್ದ ರೈಲಿನಲ್ಲಿ ಅರೆಬೆತ್ತಲೆ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾಗಿದೆ. ಕಳೆದ ರಾತ್ರಿ ಮಹಾರಾಷ್ಟ್ರದ ಸೊಲ್ಲಾಪೂರದಿಂದ ಹೊರಟಿದ್ದ ರೈಲು ಬೆಳಗ್ಗೆ ಧಾರವಾಡ ತಲುಪಿತ್ತು. ಈ ರೈಲಿನಲ್ಲಿ ರಾತ್ರಿ ಸಮಯದಲ್ಲಿ ಮಹಿಳೆಯ ಅತ್ಯಾಚಾರ ಮಾಡಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಬೆಳಗ್ಗೆ ರೈಲ್ವೆ ಸಿಬ್ಬಂದಿ ಬೋಗಿ ಸ್ವಚ್ಛ ಮಾಡಲು ಬಂದಾಗ ಶವ ಸಿಬ್ಬಂದಿ ಕಣ್ಣಿಗೆ ಬಿದ್ದಿದೆ. ಬಳಿಕ ಸಿಬ್ಬಂದಿ ರೇಲ್ವೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮೃತ ಮಹಿಳೆ ಯಾರು ಎಂದು ಗೊತ್ತಾಗಿಲ್ಲ. ಸದ್ಯ ಸ್ಥಳಕ್ಕೆ ಭೇಟಿ ನೀಡಿದ ರೇಲ್ವೆ ಪೊಲೀಸರು ಮತ್ತು ಧಾರವಾಡ ವಿದ್ಯಾಗಿರಿ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ. ಕಳೆದ ರಾತ್ರಿಯೇ ರೈಲು ಬರುವಾಗಲೇ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ರೈಲಿನ ಕೊನೆಯಲ್ಲಿ ಇರುವ ಮಹಿಳಾ ಬೋಗಿಯಲ್ಲಿ ಈ ಶವ ಪತ್ತೆಯಾಗಿದೆ. ಸದ್ಯ ಪೊಲೀಸರು ಈ ಬಗ್ಗೆ ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
ಆಮ್ ಆದ್ಮಿ ಪಕ್ಷದ (AAP) ನಾಯಕರೊಬ್ಬರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ.ಗುರುಪ್ರೀತ್ ಸಿಂಗ್ ಗೋಪಿ ಹತೆಯಾದ ಆಪ್ ನಾಯಕ. ಗುರುಪ್ರೀತ್ ಮತ್ತು ಹರ್‌ಪ್ರೀತ್ ಎಂಬ ವ್ಯಕ್ತಿ ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದಾಗ, ಕಾರಿನಲ್ಲಿ ಬಂದ ಶಸ್ತ್ರಸಜ್ಜಿತ ದುಷ್ಕರ್ಮಿಗಳು ಅವರನ್ನು ಬೆನ್ನಟ್ಟಿದ್ದಾರೆ. ಬಳಿಕ ಬೈಕ್‌ಗೆ ಗುರಿಯಾಗಿಸಿ ಗುಂಡಿನ ದಾಳಿ ನಡೆಸಿದ್ದಾರೆ. ಘಟನೆಯಲ್ಲಿ ಗುರುಪ್ರೀತ್ ಗಂಭೀರವಾಗಿ ಗಾಯಗೊಂಡು ಮೃತಪಟ್ಟಿದ್ದಾರೆ ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಭೂಪಿಂದರ್ ಸಿಂಗ್ ಸಿಧು ತಿಳಿಸಿದ್ದಾರೆ. ಪಂಜಾಬ್‌ನ ಫಿರೋಜ್‌ಪುರ ಜಿಲ್ಲೆಯ ಮಮ್ದೋಟ್ ಪಟ್ಟಣದಲ್ಲಿ ಗುರುಪ್ರೀತ್ ಹಾಗೂ ಹರ್‌ಪ್ರೀತ್ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ಅವರ ಕೆಲ ಸ್ನೇಹಿತರು ಮತ್ತೊಂದು ಕಾರಿನಲ್ಲಿ ಹಿಂಬಾಲಿಸುತ್ತಿದ್ದರು. ದುಷ್ಕರ್ಮಿಗಳು ಆ ಕಾರಿನ ಮೇಲೂ ಗುಂಡಿನ ದಾಳಿ ನಡೆಸಿದ್ದಾರೆ. ಈ ದಾಳಿಯ ಹಿಂದೆ ಹಳೆಯ ವಿವಾದವೊಂದು ಇರುವ ಸಾಧ್ಯತೆ ಇದೆ ಎಂದು ಪೊಲೀಸರು ಶಂಕಿಸಿದ್ದಾರೆ. ಚುನಾವಣೆಗೆ ಸಂಬಂಧಿಸಿದ ವಿವಾದ ಪ್ರಮುಖ ಕಾರಣವಾಗಿರಬಹುದು ಎಂಬ ಕೋನದಲ್ಲಿ ತನಿಖೆ ನಡೆಯುತ್ತಿದೆ. ಘಟನೆ ನಡೆದಿದ್ದು ಹೇಗೆ? ಗುರುಪ್ರೀತ್ ಮತ್ತು ಹರ್‌ಪ್ರೀತ್ ಬೈಕ್‌ನಲ್ಲಿ ತೆರಳುತ್ತಿದ್ದಾಗ,…
ಮಂಗಳೂರು: ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ (ಮುಡಾ) ನೂತನ ಅಧ್ಯಕ್ಷರನ್ನು ನೇಮಕ ಮಾಡಿ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ. ಸದಾಶಿವ ಉಲ್ಲಾಳ್ ಅವರ ಬದಲಿಗೆ ಮಂಗಳೂರಿನ ಕೊಟ್ಟಾರ ನಿವಾಸಿ ಸಂತೋಷ್ ಕುಮಾರ್ ಶೆಟ್ಟಿ ಅವರನ್ನು ಮುಡಾ ಅಧ್ಯಕ್ಷರನ್ನಾಗಿ ನಾಮನಿರ್ದೇಶನ ಮಾಡಲಾಗಿದೆ. ಕರ್ನಾಟಕ ನಗರಾಭಿವೃದ್ಧಿ ಪ್ರಾಧಿಕಾರಗಳ ಕಾಯ್ದೆ, 1987ರ ಕಲಂ 3ರ ಉಪ ಕಲಂ 3(ಎ) ಹಾಗೂ 3(4)ರ ಅಡಿಯಲ್ಲಿ ಸರ್ಕಾರಕ್ಕೆ ಪ್ರದತ್ತವಾಗಿರುವ ಅಧಿಕಾರವನ್ನು ಚಲಾಯಿಸಿ ಈ ನೇಮಕಾತಿ ಮಾಡಲಾಗಿದೆ. ಆಗಸ್ಟ್ 29, 2026ರಿಂದಲೇ ನೇಮಕಾತಿ ಜಾರಿಗೆ ಬರಲಿದ್ದು, ಸರ್ಕಾರದ ಮುಂದಿನ ಆದೇಶದವರೆಗೆ ಸಂತೋಷ್ ಕುಮಾರ್ ಶೆಟ್ಟಿ ಅವರು ಮುಡಾ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಲಿದ್ದಾರೆ. ಈ ಕುರಿತು ಕರ್ನಾಟಕ ಸರ್ಕಾರದ ನಗರಾಭಿವೃದ್ಧಿ ಇಲಾಖೆಯ ಅಧೀನ ಕಾರ್ಯದರ್ಶಿ ಲತಾ ಕೆ. ಅವರು ಅಧಿಸೂಚನೆ ಹೊರಡಿಸಿದ್ದಾರೆ. ನೂತನ ಅಧ್ಯಕ್ಷರ ನೇಮಕದೊಂದಿಗೆ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಆಡಳಿತದಲ್ಲಿ ಮಹತ್ವದ ಬದಲಾವಣೆಯಾಗಿದ್ದು, ಮುಂದಿನ ದಿನಗಳಲ್ಲಿ ನಗರದ ಅಭಿವೃದ್ಧಿ ಯೋಜನೆಗಳು ಹಾಗೂ ಪ್ರಾಧಿಕಾರದ ವಿವಿಧ ಕಾರ್ಯಚಟುವಟಿಕೆಗಳ ಮೇಲೆ ನೂತನ ಅಧ್ಯಕ್ಷರ ನೇತೃತ್ವದ ಪರಿಣಾಮ…
ಮಂಗಳೂರು: ಕುಂಬಾರ ಸಮಾಜದ ಸರ್ವತೋಮುಖ ಅಭಿವೃದ್ಧಿಗೆ ರಾಜ್ಯ ಕಾಂಗ್ರೆಸ್ ಸರ್ಕಾರ ಬದ್ಧವಾಗಿದ್ದು, ಸಮಾಜದ ಅಭಿವೃದ್ಧಿಗಾಗಿ ದೊರೆಯುವ ವಿವಿಧ ಯೋಜನೆಗಳು, ಸೌಲಭ್ಯಗಳನ್ನು ಪರಿಣಾಮಕಾರಿಯಾಗಿ ತಲುಪಿಸುವ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಲಾಗುವುದು ಎಂದು ರಾಜ್ಯ ಕುಂಬಾರ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಾ. ಶ್ರೀನಿವಾಸ್ ವೇಲು ಹೇಳಿದ್ದಾರೆ. ಶನಿವಾರ ನಗರದ ಮಲ್ಲಿಕಟ್ಟೆಯ ಜಿಲ್ಲಾ ಕಾಂಗ್ರೆಸ್ ಭವನಕ್ಕೆ ಭೇಟಿ ಕುಂಬಾರ ಸಮಾಜದ ಕಾಂಗ್ರೆಸ್ ಕಾರ್ಯಕರ್ತರ ಅಹವಾಲು ಸ್ವೀಕರಿಸಿ ಬಳಿಕ ಅವರು ಮಾತನಾಡುತ್ತಿದ್ದರು. ಕುಂಬಾರ ಸಮಾಜದ ಸಮಸ್ಯೆ ಮತ್ತು ಬೇಡಿಕೆಗಳನ್ನು ಹಂತ ಹಂತವಾಗಿ ಪರಿಹರಿಸುವ ನಿಟ್ಟಿನಲ್ಲಿ ಸರ್ಕಾರದ ಗಮನಕ್ಕೆ ತಂದು ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಸಮಾಜದ ನಿಷ್ಠಾವಂತ ಕಾರ್ಯಕರ್ತರಿಗೆ ಪಕ್ಷದಲ್ಲಿ ಸೂಕ್ತ ಅವಕಾಶಗಳು ದೊರೆಯಲಿದೆ. ಸಮಾಜದ ಅಭಿವೃದ್ಧಿ ಮತ್ತು ಪಕ್ಷದ ಸಂಘಟನೆ ಬಲಪಡಿಸುವ ನಿಟ್ಟಿನಲ್ಲಿ ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಬೇಕು ಎಂದು ಕರೆ ನೀಡಿದರು. ಈ ಸಂದರ್ಭ ದ.ಕ.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್ ಸ್ವಾಗತಿಸಿ ಪ್ರಾಸ್ತಾವಿಕ ಮಾತನಾಡಿದರು. ಸದಾಶಿವ ಬಂಗೇರ ಬಂಟ್ವಾಳ, ಸುಧಾಕರ್ ಕುಲಾಲ್, ಮಹೇಶ್ ಕೋಡಿಕಲ್, ಶ್ಈನಿವಾಸ್ ಬೊಂದೇಲ್, ಸದಾನಂದ,…
ಮಂಗಳೂರು: ರಾಜ್ಯದಲ್ಲಿ ಪ್ರಮುಖ ಐಪಿಎಸ್ ಅಧಿಕಾರಿಗಳ ವರ್ಗಾವಣೆಯಾಗಿದ್ದು ಪಶ್ಚಿಮ ವಲಯ ಐಜಿಪಿಯಾಗಿದ್ದ ಅಮಿತ್ ಸಿಂಗ್ ಕೆಎಸ್‌ಆರ್‌ಪಿ ಪಡೆಯ ಐಜಿಪಿಯಾಗಿ ವರ್ಗಾವಣೆ ಆಗಿದ್ದಾರೆ. ಅವರ ಜಾಗಕ್ಕೆ 2010ರ ಬ್ಯಾಚ್ ಐಪಿಎಸ್ ಅಧಿಕಾರಿ ಆರ್.ಚೇತನ್ ಅವರನ್ನು ನೇಮಕ ಮಾಡಲಾಗಿದೆ. ಇದೇ ವೇಳೆ, ಮಂಗಳೂರು ಕಮಿಷನರೇಟ್ ಕಾನೂನು ಸುವ್ಯವಸ್ಥೆ ವಿಭಾಗದ ಡಿಸಿಪಿಯಾಗಿದ್ದ ಮಿಥುನ್ ಎಚ್.ಎನ್ ಅವರನ್ನು ವರ್ಗಾವಣೆ ಮಾಡಲಾಗಿದ್ದು, ಅವರನ್ನು ಗದಗ ಜಿಲ್ಲೆಯ ಎಸ್ಪಿಯಾಗಿ ನೇಮಕ ಮಾಡಲಾಗಿದೆ. ಅಮಿತ್ ಸಿಂಗ್ ಅವರು 2024ರ ಜನವರಿ 1ರಂದು ಮಂಗಳೂರಿನ ಪಶ್ಚಿಮ ವಲಯ ಐಜಿಪಿಯಾಗಿ ಅಧಿಕಾರ ವಹಿಸಿಕೊಂಡಿದ್ದರು. ಬೆಳಗಾವಿ ಕಮಿಷನರ್ ಆಗಿದ್ದ ಭೂಷಣರಾವ್ ಬೋರಸೆ ಅವರನ್ನೂ ವರ್ಗಾವಣೆ ಮಾಡಲಾಗಿದ್ದು, ಹುಬ್ಬಳ್ಳಿ–ಧಾರವಾಡ ಕಮಿಷನರ್ ಆಗಿ ನೇಮಿಸಲಾಗಿದೆ. ಹುಬ್ಬಳ್ಳಿ ಕಮಿಷನರ್ ಆಗಿದ್ದ ಶಶಿಕುಮಾರ್ ಅವರನ್ನು ಹುದ್ದೆಯಿಂದ ತೆರವು ಮಾಡಲಾಗಿದ್ದು, ಅವರಿಗೆ ಹೊಸ ಹುದ್ದೆ ನೀಡಲಾಗಿಲ್ಲ.
ಕಠ್ಮಂಡು: ನೇಪಾಳದ ಪ್ರವಾಹದಲ್ಲಿ ಕೊಚ್ಚಿಬಂದ ಬ್ಯಾಂಕ್ ಲಾಕರ್ ಒಡೆದು 57 ಲಕ್ಷ ರೂ. ಲೂಟಿ ಮಾಡಿದ್ದ ಸ್ಥಳೀಯರಾದ 29 ಜನರನ್ನು ಪೊಲೀಸರು ಬಂಧಿಸಿರುವ ವಿಚಿತ್ರವಾದ ಘಟನೆಯೊಂದು ನಡೆದಿದೆ. ನೇಪಾಳದಲ್ಲಿ ಭೀಕರ ಪ್ರವಾಹ ವಿನಾಶ ಸೃಷ್ಟಿಸುತ್ತಿರುವ ಬೆನ್ನಲ್ಲೇ, ತ್ರಿಶೂಲಿ ನದಿಯಲ್ಲಿ ಕೊಚ್ಚಿಬಂದ ಬ್ಯಾಂಕ್ ಲಾಕರ್ ಒಂದನ್ನು ಒಡೆದು ಅದರಲ್ಲಿದ್ದ ಹಣವನ್ನು ದೋಚಿದ ಘಟನೆ ನಡೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಈಗ 29 ಜನರನ್ನು ಬಂಧಿಸಿದ್ದು, 57 ಲಕ್ಷಕ್ಕೂ ಹೆಚ್ಚು ರೂಪಾಯಿಗಳನ್ನು (ಭಾರತೀಯ ಮೊತ್ತ) ವಶಪಡಿಸಿಕೊಂಡಿದ್ದಾರೆ. ಪ್ರವಾಹ ಪೀಡಿತ ರಸುವಾ ಪ್ರದೇಶದಿಂದ ನದಿಯ ಹರಿವಿನಲ್ಲಿ ಕೊಚ್ಚಿಬಂದಿದ್ದ ಬ್ಯಾಂಕ್ ಲಾಕರ್, ಧಾದಿಂಗ್ ಜಿಲ್ಲೆಯ ಬೆಲ್ಖುಖೋಲಾದಲ್ಲಿ ಪತ್ತೆಯಾಗಿತ್ತು. ಭದ್ರತಾ ಸಿಬ್ಬಂದಿ ಸ್ಥಳಕ್ಕೆ ತಲುಪುವ ಮುನ್ನವೇ ಸ್ಥಳೀಯ ನಿವಾಸಿಗಳು ಅದನ್ನು ಬಲವಂತವಾಗಿ ಒಡೆದು ನಗದನ್ನು ದೋಚಿದ್ದರು. ನೇಪಾಳ ಪೊಲೀಸ್ ಮತ್ತು ಆರ್ಮ್ಡ್ ಪೊಲೀಸ್ ಫೋರ್ಸ್ ಜಂಟಿ ಕಾರ್ಯಾಚರಣೆ ನಡೆಸಿ 29 ಶಂಕಿತರನ್ನು ವಶಕ್ಕೆ ಪಡೆದಿದೆ. ಲಾಕರ್ ಲೂಟಿಯ ಸುಳಿವು: ನದಿಯ ದಂಡೆಗೆ ಕೊಚ್ಚಿಬಂದಿದ್ದ ಬ್ಯಾಂಕ್ ಲಾಕರ್ ಅನ್ನು…
ಚಿಕ್ಕಮಗಳೂರು: ನಗರದ ಖಾಸಗಿ MES ಇಂಟರ್‌ನ್ಯಾಷನಲ್ ಪಬ್ಲಿಕ್ ಸ್ಕೂಲ್‌ನಲ್ಲಿ ಈದ್ ಮಿಲಾದ್ ಆಚರಣೆ ನಡೆಸದಂತೆ ಆಕ್ರೋಶ ವ್ಯಕ್ತಪಡಿಸಿದ್ದ ಹಿಂದೂ ಸಂಘಟನೆಯ ಕಾರ್ಯಕರ್ತರ ವಿರುದ್ಧ ಪ್ರಿನ್ಸಿಪಾಲ್ ನೀಡಿದ್ದ ದೂರಿನ ಮೇರೆಗೆ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಚಿಕ್ಕಮಗಳೂರಿನ ಎಂಇಎಸ್ ಇಂಟರ್‌ನ್ಯಾಷನಲ್ ಪಬ್ಲಿಕ್ ಸ್ಕೂಲ್‌ನಲ್ಲಿ ಆಡಳಿತ ಮಂಡಳಿ ಈದ್ ಮಿಲಾದ್ ಆಚರಣೆಗೆ ಮುಂದಾಗಿತ್ತು ಎಂಬ ಆರೋಪ ಕೇಳಿಬಂದಿದೆ. ಅಲ್ಲದೆ, ಕಾರ್ಯಕ್ರಮದ ಅಂಗವಾಗಿ ವಿದ್ಯಾರ್ಥಿಗಳಿಗೆ ನಿರ್ದಿಷ್ಟ ಡ್ರೆಸ್ ಕೋಡ್ ಪಾಲಿಸುವಂತೆ ಆಡಳಿತ ಮಂಡಳಿ ಮೆಸೇಜ್ ಕಳುಹಿಸಿದ್ದಾರೆ. ಶಾಲೆಯಲ್ಲಿ ಈದ್ ಮಿಲಾದ್ ಆಚರಣೆ ಮಾಡುವುದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ ಹಿಂದೂ ಸಂಘಟನೆಗಳ ಮುಖಂಡರು ಹಾಗೂ ಕಾರ್ಯಕರ್ತರು ನೇರವಾಗಿ ಶಾಲೆಗೆ ತೆರಳಿ ಆಡಳಿತ ಮಂಡಳಿ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಸದ್ಯ ಶಾಲೆ ಪ್ರಿನ್ಸಿಪಾಲ್ ನೀಡಿದ ದೂರಿನನ್ವಯ ಹಿಂದೂ ಸಂಘಟನೆಯ ಮುಖಂಡರು ಮತ್ತು ಕಾರ್ಯಕರ್ತರಾದ ಕೋಟೆ ಪ್ರಸಾದ್, ಬೆಣ್ಣೆ ಕೃಷ್ಣ, ಶಿವಣ್ಣ, ದಿಲೀಪ್ ಶೆಟ್ಟಿ, ಸುನಿಲ್, ರಾಜೇಗೌಡ ಸೇರಿದಂತೆ ಹಲವರ ವಿರುದ್ಧ ಪೊಲೀಸರು ಬಿಎನ್‌ಎಸ್ (BNS) ಸೆಕ್ಷನ್…
ಸರ್ಕಾರದ ‘ಸುಭದ್ರಾ ಯೋಜನೆ’ಯಿಂದ ಬಂದ ಹಣದ ವಿಚಾರವಾಗಿ ಪತಿ-ಪತ್ನಿ ನಡುವೆ ನಡೆದ ಜಗಳ ವಿಕೋಪಕ್ಕೆ ತಿರುಗಿ, ಪತಿಯೇ ಪತ್ನಿಯನ್ನು ಕೊಲೆ ಮಾಡಿರುವ ಆರೋಪ ಕೇಳಿಬಂದಿದೆ. ಬಳಿಕ ಪ್ರಕರಣವನ್ನು ಮುಚ್ಚಿಹಾಕಲು ಪತ್ನಿಯ ಮೃತದೇಹವನ್ನು ಮನೆಯ ಹಿಂಭಾಗದಲ್ಲಿದ್ದ ಸೆಪ್ಟಿಕ್ ಟ್ಯಾಂಕ್‌ನಲ್ಲಿ ಹೂತುಹಾಕಿದ್ದಾನೆ ಎನ್ನಲಾಗಿದೆ. ಒಡಿಶಾದ ಢೆಂಕನಾಲ್ ಪೊಲೀಸ್ ಠಾಣಾ ವ್ಯಾಪ್ತಿಯ ಇಂದಿಪುರ ಗ್ರಾಮದ ಜುವಾಂಗ್ ಸಾಹಿ ಪ್ರದೇಶದಲ್ಲಿ ಘಟನೆ ನಡೆದಿದ್ದು, ಆರೋಪಿ ಗಿರೀಶ್ ಪ್ರಧಾನ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಪೊಲೀಸರ ಪ್ರಾಥಮಿಕ ತನಿಖೆ ಪ್ರಕಾರ, ಶುಕ್ರವಾರ ರಾತ್ರಿ ಹಣದ ವಿಚಾರವಾಗಿ ವಾಗ್ವಾದ ನಡೆದಿದ್ದು, ಮದ್ಯದ ಅಮಲಿನಲ್ಲಿದ್ದ ಆರೋಪಿ ಮರದ ದೊಣ್ಣೆ ಹಾಗೂ ಕಬ್ಬಿಣದ ರಾಡ್‌ನಿಂದ ಪತ್ನಿಯ ಮೇಲೆ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ. ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆ ಬಳಿಕ ಮೃತಪಟ್ಟಿದ್ದು, ಮೃತದೇಹವನ್ನು ಮನೆಯ ಹಿಂಭಾಗದ ಸೆಪ್ಟಿಕ್ ಟ್ಯಾಂಕ್‌ನಲ್ಲಿ ಹೂತುಹಾಕಿ ಕೃತ್ಯ ಮುಚ್ಚಿಹಾಕಲು ಯತ್ನಿಸಿದ್ದಾನೆ ಎಂದು ಪೊಲೀಸರು ಶಂಕಿಸಿದ್ದಾರೆ. ಮಾಹಿತಿ ತಿಳಿದು ಸ್ಥಳಕ್ಕೆ ಧಾವಿಸಿದ ಪೊಲೀಸರು ಹಾಗೂ ವೈಜ್ಞಾನಿಕ ತನಿಖಾ ತಂಡ ಪರಿಶೀಲನೆ ನಡೆಸಿ, ಸೆಪ್ಟಿಕ್ ಟ್ಯಾಂಕ್‌ನಿಂದ ಮೃತದೇಹವನ್ನು…



