Author: admin
ಬಂಟ್ವಾಳ : ಸದಾ ಗಿಜಿಗುಡುವ ಬಿ.ಸಿ. ರೋಡ್ನ ಕೆಎಸ್ಆರ್ಟಿಸಿ (KSRTC) ಹೊಸ ಬಸ್ ನಿಲ್ದಾಣದ ಬಳಿ ಗುರುವಾರ ಸಂಜೆ ಬಸ್ಗಾಗಿ ಕಾಯುತ್ತಿದ್ದ ಯುವತಿಯೊಬ್ಬಳಿಗೆ ಅಪರಿಚಿತ ವ್ಯಕ್ತಿಯೊಬ್ಬ ಹರಿತವಾದ ಆಯುಧದಿಂದ ಗಂಭೀರವಾಗಿ ಹಲ್ಲೆ ನಡೆಸಿ ಪರಾರಿಯಾಗಿರುವ ಅತ್ಯಂತ ಆಘಾತಕಾರಿ ಘಟನೆ ಸಂಭವಿಸಿದೆ. ದಾಳಿಗೊಳಗಾದ ಕಕ್ಯಪದವು ನಿವಾಸಿ ಲಾವಣ್ಯ ಎಂದು ಗುರುತಿಸಲಾಗಿದೆ. ಕಲ್ಲಡ್ಕದ ಖಾಸಗಿ ನರ್ಸಿಂಗ್ ಹೋಮ್ನಲ್ಲಿ ಕೆಲಸ ಮಾಡುತ್ತಿದ್ದ ಲಾವಣ್ಯ ದಾಳಿಯಿಂದ ತೀವ್ರವಾಗಿ ರಕ್ತಸ್ರಾವಗೊಂಡು ಗಂಭೀರ ಸ್ಥಿತಿಯಲ್ಲಿದ್ದ ಯುವತಿಯನ್ನು ತಕ್ಷಣ ವೇ ಸ್ಥಳೀಯರ ನೆರವಿನೊಂದಿಗೆ ಬಂಟ್ವಾಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ಚಿಕಿತ್ಸೆ ನೀಡಲಾಗುತ್ತಿದೆ. ಇಂದು ಸಂಜೆ ವೇಳೆಗೆ ಬಿ.ಸಿ. ರೋಡ್ನ ಸಾರಿಗೆ ಸಂಸ್ಥೆಯ ಹೊಸ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರ ದಟ್ಟಣೆ ಹೆಚ್ಚಾಗಿದ್ದ ಸಂದರ್ಭದಲ್ಲೇ ಈ ಘಟನೆ ನಡೆದಿದೆ. ಯುವತಿ ಬಸ್ಗಾಗಿ ಕಾಯುತ್ತಾ ನಿಂತಿದ್ದ ವೇಳೆ ಏಕಾಏಕಿ ನುಗ್ಗಿದ ಅಪರಿಚಿತ ವ್ಯಕ್ತಿ, ಹರಿತವಾದ ಮಾರಕಾಸ್ತ್ರದಿಂದ ಆಕೆಯ ಮೇಲೆ ಎರಗಿ ಮನಬಂದಂತೆ ಹಲ್ಲೆ ನಡೆಸಿದ್ದಾನೆ. ಯುವತಿ ರಕ್ತದ ಮಡುವಿನಲ್ಲಿ ರಸ್ತೆಗೆ ಬೀಳುತ್ತಿದ್ದಂತೆ ಆರೋಪಿ ಸ್ಥಳದಿಂದ…
ಮೈಸೂರು: ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಎರಡು ದಿನಗಳ ಕಾಲ ಕಂಬಳ ಪ್ರದರ್ಶನ ಆಯೋಜಿಸಲು ರಾಜ್ಯ ಸರ್ಕಾರ ಕೈಗೊಂಡಿರುವ ನಿರ್ಧಾರಕ್ಕೆ ವಿರೋಧ ವ್ಯಕ್ತವಾಗುತ್ತಿದ್ದರೂ, ಸಿದ್ಧತೆಗಳು ಮಾತ್ರ ವೇಗ ಪಡೆದುಕೊಂಡಿವೆ. ಮೈಸೂರಿನ ಹೊರವಲಯದ ಸಾತಗಳ್ಳಿ ಸಮೀಪದ ಸುಮಾರು 20 ಎಕರೆ ಪ್ರದೇಶದಲ್ಲಿ ಕಂಬಳ ಆಯೋಜನೆಗೆ ಅಗತ್ಯ ಕಾಮಗಾರಿಗಳು ಭರದಿಂದ ನಡೆಯುತ್ತಿದ್ದು, ಪರಿಸರ ಹಾಗೂ ಸಾಂಸ್ಕೃತಿಕ ವಿಚಾರಗಳನ್ನು ಮುಂದಿಟ್ಟುಕೊಂಡು ಹಲವು ಸಂಘಟನೆಗಳು ತೀವ್ರ ಆಕ್ಷೇಪ ವ್ಯಕ್ತಪಡಿಸಿವೆ. ಕಂಬಳಕ್ಕಾಗಿ ಗುರುತಿಸಲಾದ ಪ್ರದೇಶವು ದಟ್ಟ ಹಸಿರಿನಿಂದ ಕೂಡಿದ್ದು, ವಿವಿಧ ಜಾತಿಯ 150ಕ್ಕೂ ಹೆಚ್ಚು ಬೃಹತ್ ಮರಗಳು ಇಲ್ಲಿ ಬೆಳೆದಿವೆ. ಕಂಬಳ ಕರೆಯನ್ನು ನಿರ್ಮಿಸಲು ಈ ಮರಗಳನ್ನು ತೆರವುಗೊಳಿಸುವ ಪ್ರಕ್ರಿಯೆ ಆರಂಭವಾಗಿದೆ ಎನ್ನಲಾಗಿದ್ದು, ಇದರಿಂದ ಪರಿಸರ ಹಾನಿಯಾಗಲಿದೆ ಎಂದು ಪರಿಸರ ಹೋರಾಟಗಾರರು ಆರೋಪಿಸಿದ್ದಾರೆ. ಇದೇ ಪ್ರದೇಶದಲ್ಲಿ ಸುಮಾರು ಆರು ಎಕರೆ ವಿಸ್ತೀರ್ಣ ಹೊಂದಿರುವ ದೊಡ್ಡ ಕೆರೆಯೂ ಇದ್ದು, ಮಳೆಗಾಲದಲ್ಲಿ ನೀರಿನಿಂದ ತುಂಬಿ ಅಪರೂಪದ ಪಕ್ಷಿಗಳ ಆಶ್ರಯ ತಾಣವಾಗಿರುವ ಈ ಕೆರೆಯ ಭಾಗವನ್ನು ಮಣ್ಣು ಹಾಕಿ ಸಮತಟ್ಟುಗೊಳಿಸಲಾಗುತ್ತಿದೆ ಎಂಬ ಆರೋಪವೂ…
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಸಮೀಪದ ಕಾಣಿಯೂರು ಬಳಿಯ ಅಡಿಂಜೆ ಗ್ರಾಮದಲ್ಲಿ ಕಾರ್ಯಾಚರಣೆ ನಡೆಸಿದ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು, ಬೃಹತ್ ನಕಲಿ ನೋಟು ತಯಾರಿಕಾ ಜಾಲವನ್ನು ಭೇದಿಸಿ ಏಳು ಮಂದಿಯನ್ನು ಬಂಧಿಸಿದ್ದಾರೆ. ಬಂಧಿತರಿಂದ ₹500 ಮುಖಬೆಲೆಯ ನಕಲಿ ನೋಟುಗಳನ್ನು ತಯಾರಿಸಲು ಬಳಸಲಾಗುತ್ತಿದ್ದ ಪ್ರಿಂಟರ್, ಸ್ಕ್ಯಾನರ್, ವಿಶೇಷ ಮುದ್ರಣ ಸಾಮಗ್ರಿಗಳು, ನಕಲಿ ಆರ್ಬಿಐ (RBI) ಸೆಕ್ಯೂರಿಟಿ ಥ್ರೆಡ್ಗಳು, ಸೀಲ್ಗಳು ಹಾಗೂ ನೋಟು ಮುದ್ರಣಕ್ಕೆ ಬಳಸುವ ವಿಶೇಷ ಕಾಗದದ ಬಂಡಲ್ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಬಂಧಿತರನ್ನು ಪುತ್ತೂರು ನಿವಾಸಿಗಳಾದ ಇಬ್ರಾಹಿಂ ಮತ್ತು ಸಲ್ಮಾನ್, ಬೆಳ್ತಂಗಡಿ ನಿವಾಸಿಗಳಾದ ಸಿರಾಜುದ್ದೀನ್ ಹಾಗೂ ಇರ್ಷಾದ್, ಹಳಿಯಾಳ ಮೂಲದ ಸಂದೀಪ್, ಕೇರಳದ ಕಾಸರಗೋಡು ನಿವಾಸಿಗಳಾದ ಶರೀಫ್ ಮತ್ತು ಮೊಹಮ್ಮದ್ ನವಾಸ್ ಎಂದು ಗುರುತಿಸಲಾಗಿದೆ. ಪೊಲೀಸರ ಮಾಹಿತಿ ಪ್ರಕಾರ, ಈ ಜಾಲದ ಪ್ರಮುಖ ಸೂತ್ರಧಾರ ಸಿರಾಜುದ್ದೀನ್ ಎನ್ನಲಾಗಿದ್ದು, ಕಾಣಿಯೂರು ಸಮೀಪದ ಅಡಿಂಜೆ ನಿವಾಸಿ ಇದ್ರಿಸ್ ಅವರ ನೂತನ ಕಟ್ಟಡದಲ್ಲಿರುವ ಮೂರು ಮನೆಗಳನ್ನು ಬಾಡಿಗೆಗೆ ಪಡೆದು ಅಲ್ಲಿ ನಕಲಿ ನೋಟು ತಯಾರಿಕಾ…
ಮಂಗಳೂರು : ಡ್ರಗ್ಸ್ ಮುಕ್ತ ಮಂಗಳೂರು ಅಭಿಯಾನಕ್ಕೆ ಕರಾವಳಿ ಪೊಲೀಸರು ಭಾರಿ ಯಶಸ್ಸು ತಂದಿದ್ದಾರೆ. ನೆರೆಯ ಕೇರಳ ರಾಜ್ಯ, ಸಿಲಿಕಾನ್ ಸಿಟಿ ಬೆಂಗಳೂರು ಹಾಗೂ ಮಂಗಳೂರಿಗೆ ಬೃಹತ್ ಪ್ರಮಾಣದಲ್ಲಿ ಎಂಡಿಎಂಎ ಮಾದಕ ದ್ರವ್ಯ ಪೂರೈಕೆಗೆ ಸಿದ್ಧತೆ ನಡೆಸಿದ್ದ ಅಂತರರಾಜ್ಯ ಜಾಲವನ್ನು ಮಂಗಳೂರು ಸಿಸಿಬಿ ಪೊಲೀಸರು ಭೇದಿಸಿದ್ದಾರೆ. ಬಾಗಲಕೋಟೆ ಜಿಲ್ಲೆಯ ಹುನಗುಂದದ ಲಾಡ್ಜ್ ಒಂದರ ಮೇಲೆ ಮಿಂಚಿನ ದಾಳಿ ನಡೆಸಿ ಬರೋಬ್ಬರಿ 5.196 ಕೆಜಿ ತೂಕದ ಎಂಡಿಎಂಎ ವಶಪಡಿಸಿಕೊಂಡಿದ್ದು, ಬೆಳ್ತಂಗಡಿ ಮೂಲದ ಇಬ್ಬರು ಕುಖ್ಯಾತ ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ಬೆಳ್ತಂಗಡಿ ತಾಲೂಕಿನ ಇಂದಬೆಟ್ಟು ನಿವಾಸಿ ಮುಹಮ್ಮದ್ ಅಲ್ಫಾಝ್ (28) ಹಾಗೂ ಉಜಿರೆಯ ಹಳೆಪೇಟೆ ಲಾಯಿಲಾ ವಿವೇಕಾನಂದ ನಗರದ ಮುಹಮ್ಮದ್ ಮುಸ್ತಫಾ (28) ಎಂದು ಗುರುತಿಸಲಾಗಿದೆ. ವಶಪಡಿಸಿಕೊಳ್ಳಲಾದ ಮಾದಕ ವಸ್ತುವಿನ ಅಂತರರಾಷ್ಟ್ರೀಯ ಮಾರುಕಟ್ಟೆ ಮೌಲ್ಯ ಸುಮಾರು 5.20 ಕೋಟಿ ರೂಪಾಯಿಗಳಾಗಿದೆ ಎಂದು ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಕಳೆದ 15 ದಿನಗಳ ಹಿಂದೆ ಮಂಗಳೂರಿನಲ್ಲಿ 15 ಗ್ರಾಂ…
ಬೆಳ್ತಂಗಡಿ:ಕುವೆಟ್ಟುವಿನ ಶಕ್ತಿನಗರದಲ್ಲಿರುವ ಕೈಗಾರಿಕಾ ಆವರಣದಲ್ಲಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ವ್ಯಕ್ತಿ ಓರ್ವನನ್ನು ಬಂಧಿಸಿದ್ದಾರೆ. ಎಸ್.ಎಲ್.ವಿ ಇ ಪವರ್ ಪ್ರೈವೇಟ್ ಲಿಮಿಟೆಡ್ ರಿಸೀವಿಂಗ್ ಸ್ಟೇಷನ್ನಲ್ಲಿ ಜು. 1 ರಂದು ನಡೆದ ಕಳ್ಳತನ ಪ್ರಕರಣ ಸಂಬಂಧ ಸಾವನ್ನಪ್ಪಿದ ಮುಸ್ತಾಕ್ ಜೊತೆಯಲ್ಲಿದ್ದ ಮತ್ತೊಬ್ಬ ಆರೋಪಿಯನ್ನು ಬಂಧಿಸುವಲ್ಲಿ ಬೆಳ್ತಂಗಡಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬೆಳ್ತಂಗಡಿ ತಾಲೂಕಿನ ಕಾಶಿಪಟ್ಣ ಗ್ರಾಮದ ನಿವಾಸಿ ಇಬ್ರಾಹಿಂ ಲತೀಫ್ (36) ಎಂಬಾತನನ್ನು ತನಿಖೆ ನಡೆಸಿ ಬೆಳ್ತಂಗಡಿ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಆನಂದ್. ಎಂ. ನೇತೃತ್ವದ ತಂಡ ಕಾಶಿಪಟ್ಣದಲ್ಲಿ ಜು. 14 ರಂದು ಸಂಜೆ ಬಂಧಿಸಿ ವಿಚಾರಣೆ ನಡೆಸಿ, ಜು. 15 ರಂದು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ. ಆರೋಪಿಯಿಂದ 550 ಕೆಜಿ ಕದ್ದ ಅಲ್ಯೂಮಿನಿಯಂ ತಂತಿಯನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಮುಸ್ತಾಕ್ ಸಾವಿನ ನಂತರ ಜುಲೈ 1 ರಂದು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತಾ (ಬಿಎನ್ಎಸ್) ಸೆಕ್ಷನ್ 194(3)(iv) ಅಡಿಯಲ್ಲಿ ಅಸ್ವಾಭಾವಿಕ ಮರಣ ವರದಿ…
ರಾಯಚೂರು/ಸಿಂಧನೂರು : ಸಿಂಧನೂರು ತಾಲೂಕಿನ ಕೆ.ಹಂಚಿನಾಳ ಕ್ಯಾಂಪ್ನಲ್ಲಿ ಬುಧವಾರ ಮುಂಜಾನೆ ಕೋಳಿ ಅಂಗಡಿಯೊಂದರ ಬಳಿ ಜಮಾಯಿಸಿದ್ದ ಬೀದಿನಾಯಿಗಳ ಹಿಂಡು, ಮನೆ ಮುಂದೆ ಆಟವಾಡುತ್ತಿದ್ದ 18 ತಿಂಗಳ ಹಸುಗೂಸಿನ ಮೇಲೆ ಏಕಾಏಕಿ ದಾಳಿ ನಡೆಸಿ ಕಚ್ಚಿ ಕೊಂದಿರುವ ಹೃದಯವಿದ್ರಾವಕ ಘಟನೆ ವರದಿಯಾಗಿದೆ. ಅಬ್ದುಲ್ ರಜಾಕ್ ಮತ್ತು ನದಾಫ್ ದಂಪತಿಯ ಪುತ್ರಿ ಆನಂ (18 ತಿಂಗಳು) ಬೀದಿನಾಯಿಗಳ ಅಟ್ಟಹಾಸಕ್ಕೆ ಬಲಿಯಾದ ದುರ್ದೈವಿ. ಬುಧವಾರ ಮುಂಜಾನೆ ಮನೆಯಲ್ಲಿ ಮಲಗಿದ್ದ ಮಗು ಆನಂ, ನಿದ್ದೆಯಿಂದ ಎಚ್ಚರಗೊಂಡು ಪೋಷಕರಿಗೆ ತಿಳಿಯದಂತೆ ಸದ್ದಿಲ್ಲದೆ ಮನೆಯಿಂದ ಹೊರಗೆ ರಸ್ತೆಗೆ ಬಂದಿದೆ. ಈ ವೇಳೆ ರಸ್ತೆಯ ಪಕ್ಕದಲ್ಲಿದ್ದ ಕೋಳಿ ಅಂಗಡಿಯ ಬಳಿ ತ್ಯಾಜ್ಯಕ್ಕಾಗಿ ಜಮಾಯಿಸಿದ್ದ ಬೀದಿನಾಯಿಗಳ ಹಿಂಡು ಪುಟ್ಟ ಕಂದಮ್ಮನ ಮೇಲೆ ಏಕಾಏಕಿ ಮುಗಿಬಿದ್ದಿದೆ. ನಾಯಿಗಳು ಮಗುವನ್ನು ಮನಬಂದಂತೆ ಕಚ್ಚಿ ರಸ್ತೆಯುದ್ದಕ್ಕೂ ಎಳೆದಾಡಿವೆ. ಕಂದಮ್ಮನ ಚೀರಾಟ ಕೇಳಿ ಪೋಷಕರು ಹಾಗೂ ಸ್ಥಳೀಯರು ಓಡಿ ಬರುವಷ್ಟರಲ್ಲಿ ಮಗುವಿನ ದೇಹ ರಕ್ತಸಿಕ್ತವಾಗಿತ್ತು. ಗಂಭೀರವಾಗಿ ಗಾಯಗೊಂಡಿದ್ದ ಮಗುವನ್ನು ತಕ್ಷಣವೇ ಸಿಂಧನೂರು ತಾಲೂಕು ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಪರಿಸ್ಥಿತಿ…
ಬೆಂಗಳೂರು : ಅಣ್ಣನ ಪ್ರೇಮ ಪ್ರಸ್ತಾಪವನ್ನು ತಳ್ಳಿಹಾಕಿದ ಕಾರಣಕ್ಕೆ ಆತನ ಸಹೋದರನೇ ಯುವತಿಯೊಬ್ಬಳಿಗೆ ಸಾರ್ವಜನಿಕ ರಸ್ತೆಯಲ್ಲೇ ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆ ಮಾಡಿರುವ ಭೀಕರ ಘಟನೆ ಇಲ್ಲಿನ ಕೋಡಿಹಳ್ಳಿಯ ಹೆಚ್ಎಎಲ್ ರಸ್ತೆಯಲ್ಲಿ ಸಂಭವಿಸಿದೆ. ದಾಳಿಯಿಂದ ತೀವ್ರವಾಗಿ ಗಾಯಗೊಂಡು ಆಸ್ಪತ್ರೆ ಸೇರಿದ್ದ ಕಾನೂನು ವಿದ್ಯಾರ್ಥಿನಿ ಅಮೃತಾ (21) ಚಿಕಿತ್ಸೆ ಫಲಿಸದೇ ಬುಧವಾರ (ಜುಲೈ 15) ಸಂಜೆ ಸಾವನ್ನಪ್ಪಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ಸೂರ್ಯ ಹಾಗೂ ಆತನ ಅಣ್ಣ ಧನುಷ್ನನ್ನು ಜೀವನ್ಭೀಮಾನಗರ ಪೊಲೀಸರು ಬಂಧಿಸಿದ್ದಾರೆ. ಪೊಲೀಸ್ ಮೂಲಗಳ ಪ್ರಕಾರ, ಓಂ ಶಕ್ತಿ ಮಾಲೆ ಹಾಕುವ ಧಾರ್ಮಿಕ ಕಾರ್ಯಕ್ರಮದ ವೇಳೆ ಮೃತ ಅಮೃತಾ ಹಾಗೂ ಧನುಷ್ ಕುಟುಂಬಗಳ ನಡುವೆ ಪರಿಚಯವಾಗಿತ್ತು. ಇದು ಇಬ್ಬರ ನಡುವೆ ಆತ್ಮೀಯ ಪ್ರೀತಿಯಾಗಿ ಬದಲಾಗಿತ್ತು. ಆದರೆ, ಧನುಷ್ ತನಗೆ ಈಗಾಗಲೇ ಮದುವೆಯಾಗಿ ವಿಚ್ಛೇದನ ಪಡೆದಿರುವ ಮತ್ತು ತನಗೊಂದು ಮಗು ಇರುವ ಸತ್ಯವನ್ನು ಅಮೃತಾಳಿಂದ ಮುಚ್ಚಿಟ್ಟಿದ್ದನು. ಇತ್ತೀಚೆಗೆ ಈ ವಂಚನೆಯ ವಿಚಾರ ಅಮೃತಾಳಿಗೆ ತಿಳಿಯುತ್ತಿದ್ದಂತೆಯೇ ಆಕೆ ಆತನಿಂದ ಸಂಪೂರ್ಣವಾಗಿ ದೂರವಾಗಿದ್ದಳು ಹಾಗೂ ಮದುವೆ…
ನವದೆಹಲಿ: ಭಾರತದ ಮಹತ್ವಾಕಾಂಕ್ಷೆಯ ಗಗನಯಾನ ಮಾನವಸಹಿತ ಬಾಹ್ಯಾಕಾಶ ಯೋಜನೆ ಸೇರಿದಂತೆ ಹಲವು ಬಾಹ್ಯಾಕಾಶ ಕಾರ್ಯಕ್ರಮಗಳ ನಡುವೆಯೇ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಪ್ರತಿಭಾ ಪಲಾಯನದ ಸವಾಲನ್ನು ಎದುರಿಸುತ್ತಿದೆ. ಕಳೆದ ಕೆಲವು ತಿಂಗಳುಗಳಲ್ಲಿ 100ಕ್ಕೂ ಹೆಚ್ಚು ಹಿರಿಯ ವಿಜ್ಞಾನಿಗಳು ರಾಜೀನಾಮೆ ನೀಡಿರುವ ಹಿನ್ನೆಲೆಯಲ್ಲಿ, ಕೇಂದ್ರ ಸರ್ಕಾರ ರಾಜೀನಾಮೆ ಹಾಗೂ ಸ್ವಯಂಪ್ರೇರಿತ ನಿವೃತ್ತಿ ಪ್ರಕ್ರಿಯೆಯನ್ನು ಮತ್ತಷ್ಟು ಕಠಿಣಗೊಳಿಸಿದೆ. ಕೇಂದ್ರ ಬಾಹ್ಯಾಕಾಶ ಇಲಾಖೆ ಜುಲೈ 14ರಂದು ಹೊರಡಿಸಿರುವ ಹೊಸ ಆಂತರಿಕ ಮಾರ್ಗಸೂಚಿಗಳ ಪ್ರಕಾರ, ಪ್ರಮುಖ ವೈಜ್ಞಾನಿಕ ಮತ್ತು ತಾಂತ್ರಿಕ ಸಿಬ್ಬಂದಿಯ ರಾಜೀನಾಮೆ ಅರ್ಜಿಗಳನ್ನು ಇನ್ನು ಮುಂದೆ ಸ್ಥಳೀಯ ಮಟ್ಟದಲ್ಲಿ ಅಂಗೀಕರಿಸಲು ಅವಕಾಶ ಇರುವುದಿಲ್ಲ. ಇದುವರೆಗೆ ಇಸ್ರೋದ ವಿವಿಧ ಕೇಂದ್ರಗಳ ನಿರ್ದೇಶಕರು ತಮ್ಮ ವ್ಯಾಪ್ತಿಯ ವಿಜ್ಞಾನಿಗಳ ರಾಜೀನಾಮೆ ಅಥವಾ ವಿಆರ್ಎಸ್ ಅರ್ಜಿಗಳನ್ನು ಪರಿಶೀಲಿಸಿ ಅನುಮೋದಿಸುವ ಅಧಿಕಾರ ಹೊಂದಿದ್ದರು. ಹೊಸ ನಿಯಮದಂತೆ ಈ ಅಧಿಕಾರವನ್ನು ಹಿಂಪಡೆಯಲಾಗಿದ್ದು, ಇಂತಹ ಅರ್ಜಿಗಳನ್ನು ನೇರವಾಗಿ ದೆಹಲಿಯಲ್ಲಿರುವ ಬಾಹ್ಯಾಕಾಶ ಇಲಾಖೆಯ ಉನ್ನತ ಮಟ್ಟದ ಸಮಿತಿ ಪರಿಶೀಲಿಸಿ ಅಂತಿಮ ನಿರ್ಧಾರ ಕೈಗೊಳ್ಳಲಿದೆ. ವಿಶೇಷವಾಗಿ ಗಗನಯಾನದಂತಹ…
ವಾಷಿಂಗ್ಟನ್: ಮಧ್ಯಪ್ರಾಚ್ಯದಲ್ಲಿ ಜಾಗತಿಕ ಯುದ್ಧದ ಕಾರ್ಮೋಡ ಮತ್ತಷ್ಟು ದಟ್ಟವಾಗಿದೆ. ಅಮೆರಿಕದ ಮಿಲಿಟರಿ ಪಡೆಗಳು ಇರಾನ್ನ ರಾಜಧಾನಿ ಟೆಹ್ರಾನ್ ಸೇರಿದಂತೆ ಇರಾನ್ ನ ಉತ್ತರ ಭಾಗದ ಪ್ರಮುಖ ಸೇನಾ ನೆಲೆಗಳ ಮೇಲೆ ಭೀಕರ ವೈಮಾನಿಕ ದಾಳಿ ನಡೆಸಿವೆ. ಇದರ ಬೆನ್ನಲ್ಲೇ ಅಮೆರಿಕದ ನೌಕಾ ದಿಗ್ಬಂಧನವನ್ನು ಮೀರಿ ಚಲಿಸಲು ಯತ್ನಿಸಿದ ವಾಣಿಜ್ಯ ತೈಲ ಟ್ಯಾಂಕರ್ ಹಡಗೊಂದರ ಮೇಲೆ ಅಮೆರಿಕ ಪಡೆಗಳು ಕ್ಷಿಪಣಿ ದಾಳಿ ನಡೆಸಿ, ಅದನ್ನು ಸಮುದ್ರದಲ್ಲೇ ಚಲಿಸಲಾಗದಂತೆ ನಿಷ್ಕ್ರಿಯಗೊಳಿಸಿವೆ. ಇರಾನ್ ವಿರುದ್ಧದ ಯುದ್ಧವನ್ನು ಅಂತ್ಯಗೊಳಿಸಲು ಮಾಡಿಕೊಂಡಿದ್ದ ಮಧ್ಯಂತರ ಒಪ್ಪಂದ ಈಗಾಗಲೇ ಸಂಪೂರ್ಣವಾಗಿ ವಿಫಲವಾಗಿದ್ದು, ಎರಡೂ ರಾಷ್ಟ್ರಗಳು ಮತ್ತೆ ತೀವ್ರ ದಾಳಿ-ಪ್ರತಿದಾಳಿಯಲ್ಲಿ ತೊಡಗಿವೆ ಎಂದು ರಕ್ಷಣಾ ಮೂಲಗಳು ತಿಳಿಸಿವೆ. ಅಮೆರಿಕದ ಸೆಂಟ್ರಲ್ ಕಮಾಂಡ್ ಪಡೆಗಳು ಇರಾನ್ನ ಬ್ಯಾಲಿಸ್ಟಿಕ್ ಕ್ಷಿಪಣಿ ಉತ್ಪಾದನೆ ಮತ್ತು ಬಾಹ್ಯಾಕಾಶ ಕಾರ್ಯಕ್ರಮದ ಪ್ರಮುಖ ಕೇಂದ್ರವಾಗಿರುವ ‘ಸೆಮ್ನಾನ್’ ಪ್ರಾಂತ್ಯವನ್ನು ಗುರಿಯಾಗಿಸಿಕೊಂಡು ಭಾರಿ ಬಾಂಬ್ ದಾಳಿ ನಡೆಸಿವೆ. ಬಂದರ್ ಅಬ್ಬಾಸ್ ಮತ್ತು ಖೇಶ್ಮ್ ದ್ವೀಪಗಳಲ್ಲಿರುವ ಇರಾನ್ನ ಡ್ರೋನ್ ಉಡಾವಣಾ ಕೇಂದ್ರಗಳು ಮತ್ತು ರೇಡಾರ್ ವ್ಯವಸ್ಥೆಗಳನ್ನು…
ಧಾರವಾಡ: ಜಿಲ್ಲೆಯ ಕರ್ನಾಟಕ ವಿಶ್ವವಿದ್ಯಾಲಯ ರಸ್ತೆಯ ರನ್ಕಾಸ್ಟೆಲ್ಲೋ ಅಪಾರ್ಟ್ಮೆಂಟ್ನಲ್ಲಿ ಚಿರಾಯು ಆಸ್ಪತ್ರೆಯ ವೈದ್ಯ ಕಿರಣ್ ಹೊನ್ನಣ್ಣನವರ್ ಅವರನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ನಡೆದಿದೆ. ಅವರ 8 ವರ್ಷದ ಮಗನ ಮೇಲೂ ಹಲ್ಲೆ ನಡೆಸಲಾಗಿದ್ದು, ಆತನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಚಿರಾಯು ಆಸ್ಪತ್ರೆಯ ವೈದ್ಯರಾಗಿದ್ದ ಡಾ. ಕಿರಣ್ ಹೊನ್ನಣ್ಣವರ್ (45) ಹತ್ಯೆಯಾದ ದುರ್ದೈವಿ. ಇವರ ಪತ್ನಿ ಪ್ರಿಯಾಂಕಾ ಕೂಡ ವೈದ್ಯೆಯಾಗಿ ಕೆಲಸ ಮಾಡುತ್ತಿದ್ದರು. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪ್ರಿಯಾಂಕಾ ತನ್ನ ಪತಿಯನ್ನು ಚಾಕುವಿನಿಂದ ಇರಿದು ಭೀಕರವಾಗಿ ಹತ್ಯೆ ಮಾಡಿದ್ದಾಳೆ ಎನ್ನಲಾಗಿದೆ. ಪತಿಯನ್ನು ಒಂದು ಕೋಣೆಯಲ್ಲಿ ಕೊಂದ ಬಳಿಕ ಈಕೆಯ ಕ್ರೌರ್ಯ ಅಲ್ಲಿಗೆ ನಿಲ್ಲಲಿಲ್ಲ. ಮತ್ತೊಂದು ಕೋಣೆಯಲ್ಲಿದ್ದ ಎಂಟು ವರ್ಷದ ಮಗ ನೇಹಿತ್ ಮೇಲೂ ಚಾಕುವಿನಿಂದ ಮನಬಂದಂತೆ ಇರಿದಿದ್ದಾಳೆ. ರಕ್ತದ ಮಡುವಿನಲ್ಲಿ ಉಸಿರಾಡಲು ಒದ್ದಾಡುತ್ತಿದ್ದ ಮಗುವಿನ ಪಕ್ಕದಲ್ಲೇ ಕುಳಿತು ಈಕೆ ಅತ್ಯಂತ ನಿರ್ಲಜ್ಜವಾಗಿ ತನ್ನ ಮೊಬೈಲ್ ಫೋನ್ ನೋಡುತ್ತಾ ಕುಳಿತಿದ್ದಳು ಎಂದು ತಿಳಿದುಬಂದಿದೆ. ಇನ್ನು ಅಪಾರ್ಟ್ಮೆಂಟ್ನಲ್ಲಿದ್ದ ನೆರೆಹೊರೆ ಹಾಗೂ…



