Author: admin

ಇಂದೋರ್: ಸಮೋಸಾ ಮತ್ತು ಕಚೋರಿ ಖರೀದಿಸಲು ಲೊಕೊ ಪೈಲಟ್ ಒಬ್ಬರು ರೈಲು ನಿಲ್ಲಿಸಿದ್ದಾರೆ ಎಂದು ಆರೋಪಿಸಿರುವ ವಿಡಿಯೋ ವೈರಲ್ ಆಗಿದೆ. ಈ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ನಡೆದಿದೆ. ಲಕ್ಷಾಂತರ ಜನರು ಇದನ್ನು ವೀಕ್ಷಿಸಿದ್ದು, ಇದು ರೈಲ್ವೆ ಸಿಬ್ಬಂದಿಯ ಬೇಜವಾಬ್ದಾರಿ ಎಂದು ಟೀಕಿಸಿದ್ದಾರೆ. ಆದರೆ ಈಗ ಈ ಇಡೀ ಘಟನೆಗೆ ಭಾರತೀಯ ರೈಲ್ವೆ ಇಲಾಖೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಅಸಲಿ ಸತ್ಯವನ್ನು ಜನರ ಮುಂದಿಟ್ಟಿದೆ. ವೈರಲ್ ವಿಡಿಯೋದಲ್ಲೇನಿತ್ತು? ವೈರಲ್ ಆದ ವಿಡಿಯೋದಲ್ಲಿ ‘ಇಂದೋರ್-ಮೋವ್ ಡೆಮು’ಪ್ರಯಾಣಿಕರ ರೈಲಿನ ಲೊಕೊ ಪೈಲಟ್ ಹಳಿಯ ಪಕ್ಕದ ಅಂಗಡಿಯಿಂದ ಸಮೋಸಾ ಖರೀದಿಸಲು ರೈಲನ್ನು ನಿಲ್ಲಿಸಿದ್ದರು. ಅವರು ತಿಂಡಿ ಖರೀದಿಸಿ ರೈಲು ಹತ್ತಿದ ತಕ್ಷಣವೇ ರೈಲು ಚಲಿಸಲು ಪ್ರಾರಂಭಿಸಿತು ಎಂದು ವಿಡಿಯೋ ಮಾಡಿದ ವ್ಯಕ್ತಿ ಸಾರ್ವಜನಿಕರನ್ನು ದಾರಿ ತಪ್ಪಿಸಿದ್ದ. ರೈಲ್ವೆ ಇಲಾಖೆ ನಡೆಸಿದ ‘ಸತ್ಯ ಪರಿಶೀಲನೆ’ ವಿವಾದ ದೊಡ್ಡದಾಗುತ್ತಿದ್ದಂತೆ ಎಚ್ಚೆತ್ತ ಪಶ್ಚಿಮ ರೈಲ್ವೆ ವಿಡಿಯೋವನ್ನು ಸಂಪೂರ್ಣವಾಗಿ ಪರಿಶೀಲಿಸಿ ಅಧಿಕೃತ ಎಕ್ಸ್ ಖಾತೆಯಲ್ಲಿ ಸ್ಪಷ್ಟನೆ ನೀಡಿದೆ. ಮೊದಲನೆಯದಾಗಿ, ವಿಡಿಯೋದಲ್ಲಿರುವ ರೈಲು ಯಾವುದೇ ಪ್ರಯಾಣಿಕರ…

Read More

ಮಂಗಳೂರು: ಎಸ್ಐಆರ್ ಕರ್ತವ್ಯಕ್ಕೆ ತೆರಳಿದ ದಲಿತ ಸಮುದಾಯಕ್ಕೆ ಸೇರಿದ ಬಿ.ಎಲ್.ಒ ರನ್ನು ಜಾತಿ ನಿಂದನೆ ಮಾಡಿ ಅಪಮಾನಿಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಶಿರ್ಲಾಲು ಗ್ರಾಮದಲ್ಲಿ ನಡೆದಿದೆ. ಸ್ಥಳೀಯ ಅಂಗನವಾಡಿ ಕಾರ್ಯಕರ್ತೆ ಬಿಎಲ್.ಒ. ಆಗಿ ಕೆಲಸ ಮಾಡುತ್ತಿದ್ದು, ಅದರಂತೆ ಶಿರ್ಲಾಲು ಗ್ರಾಮದ ಕಾಳಿಕಾಂಬ ನಿವಾಸಿ ಯಶೋಧ ಆಚಾರಿ ಎಂಬವರ ಮನೆಗೆ ಎಸ್​​ಐಆರ್ ಪ್ರಕ್ರಿಯೆಗೆಂದು ತೆರಳಿದ್ದರು. ಆದ್ರೆ, ಈ ವೇಳೆ ನಿಮ್ಮ ಜಾತಿಯವರು ಒಳಗೆ ಬರಬಾರದು ಎಂದು ಅಂಗಳದಲ್ಲೇ ನಿಲ್ಲಿಸಿ ಅವಮಾನಿಸಲಾಗಿದೆ ಎಂದು ಆರೋಪಿಸಲಾಗಿದೆ. ಈ ಸಂಬಂಧ ವೇಣೂರು ಪೊಲೀಸ್ ಠಾಣೆಯಲ್ಲಿ SC/ST act-2015(u/s-3(1)(r),3(2)(va) ಅಡಿಯಲ್ಲಿ ದೂರು ದಾಖಲಾಗಿದೆ. ಸ್ಥಳೀಯ ಅಂಗನವಾಡಿ ಕಾರ್ಯಕರ್ತೆ ಬಿಎಲ್.ಒ. ಆಗಿ ಕೆಲಸ ಮಾಡುತ್ತಿದ್ದು, ಜು.6 ರಂದು ಶಿರ್ಲಾಲು ಗ್ರಾಮದ ಪಲ್ಲದೋಡಿ ಕಾಳಿಕಾಂಬ ನಿವಾಸಿ ಯಶೋಧ ಆಚಾರಿ ಕೆಲಸ ಮಾಡುತ್ತಿದ್ದು, ಜು.6 ರಂದು ಶಿರ್ಲಾಲು ಗ್ರಾಮದ ಪಲ್ಲದೋಡಿ ಕಾಳಿಕಾಂಬ ನಿವಾಸಿ ಯಶೋಧ ಆಚಾರಿ ಎಂಬವರ ಮನೆಗೆ ಎ.ಎಲ್.ಒ ಮಾಧವ ಎಂಬರೊಂದಿಗೆ ತೆರಳಿದ್ದರು. ಈ ವೇಳೆ ಮನೆಯ…

Read More

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು-ಕಾರ್ಕಳ ನಡುವಿನ ರಾಷ್ಟ್ರೀಯ ಹೆದ್ದಾರಿ 169 ವಿಸ್ತರಣೆ ಕಾಮಗಾರಿ ವೇಳೆ ನಡೆದ ಅವೈಜ್ಞಾನಿಕ ನಿರ್ಮಾಣವು ಭೂಕುಸಿತಕ್ಕೆ ಕಾರಣವಾಗಿದೆ. ಮಂಗಳೂರು ಹೊರವಲಯದ ವಾಮಂಜೂರು ಸಮೀಪದ ಕೆತ್ತಿಕಲ್‌ನಲ್ಲಿ ಗುಡ್ಡವನ್ನು ಲಂಬಾಕೃತಿಯಲ್ಲಿ ಅಗೆದಿರುವುದು ಪ್ರತಿ ಮಳೆಗಾಲದಲ್ಲೂ ಭೂಕುಸಿತಕ್ಕೆ ದಾರಿ ಮಾಡಿಕೊಡುತ್ತಿದೆ. ಕೇರಳದ ವಯನಾಡ್‌ನಲ್ಲಿ ಸುರಂಗ ಮಾರ್ಗ ನಿರ್ಮಿಸುವಾಗ ದುರಂತಕ್ಕೆ ಕಾರಣವಾದ DBL ಕಂಪನಿಯೇ ಈ ಹೆದ್ದಾರಿ ಕಾಮಗಾರಿಯನ್ನು ಕೈಗೆತ್ತಿಕೊಂಡಿದೆ ಎನ್ನಲಾಗಿದೆ. ಕಂಪನಿಯ ಅವೈಜ್ಞಾನಿಕ ವಿಧಾನಗಳಿಂದಾಗಿ ಕಳೆದ ಮೂರು ವರ್ಷಗಳಿಂದ ಈ ಭಾಗದಲ್ಲಿ ಗುಡ್ಡ ಕುಸಿತ ಸಾಮಾನ್ಯವಾಗಿದೆ. ಈ ಬಾರಿ ಮಣ್ಣು ರಸ್ತೆಗೆ ಕುಸಿದು ಒಂದು ಬದಿಯ ಸಂಚಾರವನ್ನು ಬಂದ್ ಮಾಡಲಾಗಿದೆ. ಕೇವಲ ಒಂದು ಪಥದಲ್ಲಿ ದ್ವಿಮುಖ ಸಂಚಾರಕ್ಕೆ ವ್ಯವಸ್ಥೆ ಮಾಡಲಾಗಿದೆ. ಕಳೆದ ವರ್ಷ ಮಾಡಿದ ಸಾಯಿಲ್ ನೇಲಿಂಗ್ ವಿಧಾನವೂ ವಿಫಲವಾಗಿದ್ದು, ಪ್ರಸ್ತುತ ತಡೆಗೋಡೆ ನಿರ್ಮಾಣಕ್ಕೆ ಮುಂದಾಗಿದ್ದಾರೆ. ಕೆತ್ತಿಕಲ್ ಮಾತ್ರವಲ್ಲದೆ, ಹೆದ್ದಾರಿಯ ಇತರ ಭಾಗಗಳಲ್ಲೂ ಇದೇ ರೀತಿಯ ಅವೈಜ್ಞಾನಿಕ ಅಗೆತ ನಡೆಸಲಾಗಿದೆ. ಒಂದು ವೇಳೆ ದೊಡ್ಡ ಪ್ರಮಾಣದಲ್ಲಿ ಗುಡ್ಡ ಕುಸಿದರೆ, ಕೆಳಭಾಗದ…

Read More

ಜೈಪುರ : ಹೆತ್ತ ತಾಯಿಯ ಸರ್ಕಾರಿ ಉದ್ಯೋಗ ಮತ್ತು ಆಸ್ತಿಯನ್ನು ತನ್ನದಾಗಿಸಿಕೊಳ್ಳಲು 23 ವರ್ಷದ ಸ್ವಂತ ಮಗಳೊಬ್ಬಳು ತನ್ನ ಚಿಕ್ಕಪ್ಪ ಹಾಗೂ ಸೋದರ ಸಂಬಂಧಿಯೊಂದಿಗೆ ಸೇರಿ ₹7 ಲಕ್ಷಕ್ಕೆ ಗುತ್ತಿಗೆ ಕೊಲೆಗಾರರನ್ನು (ಸುಪಾರಿ ಕಿಲ್ಲರ್ಸ್) ನೇಮಿಸಿ, ತಾಯಿಯ ಮೇಲೆ 130 ಕಿ.ಮೀ ವೇಗದಲ್ಲಿ ಎಸ್‌ಯುವಿ (SUV) ಕಾರು ಹರಿಸಿ ಭೀಕರವಾಗಿ ಕೊಲೆ ಮಾಡಿಸಿರುವ ಘಟನೆ ಬೆಳಕಿಗೆ ಬಂದಿದೆ. ಅಪಘಾತ ಎಂದು ಬಿಂಬಿಸಲು ಯತ್ನಿಸಲಾಗಿದ್ದ ಈ ಹತ್ಯಾಕಾಂಡದ ಪಿತೂರಿಯನ್ನು ಪೊಲೀಸರು ಬಯಲಿಗೆಳೆದಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಮಗಳು ಆಯುಷಿ (23), ಆಕೆಯ ಚಿಕ್ಕಪ್ಪ ಮೋಹನ್ ಸ್ವರೂಪ್ (56), ಸುಪಾರಿ ಹಂತಕ ಹೇಮಂತ್ ಶರ್ಮಾ (20) ಹಾಗೂ ಆತನ ನಾಲ್ವರು ಸಹಚರರನ್ನು ಪೊಲೀಸರು ಬಂಧಿಸಿದ್ದಾರೆ. ಕೃತ್ಯಕ್ಕೆ ಬಳಸಲಾದ ಎಸ್‌ಯುವಿ ಕಾರನ್ನು ವಶಪಡಿಸಿಕೊಳ್ಳಲಾಗಿದ್ದು, ತಲೆಮರೆಸಿಕೊಂಡಿರುವ ಆಯುಷಿ ಸೋದರ ಸಂಬಂಧಿ ಬಲರಾಮ್ ಅಲಿಯಾಸ್ ರವಿಗಾಗಿ ತೀವ್ರ ಹುಡುಕಾಟ ಆರಂಭವಾಗಿದೆ. ನೀರಜ್ ಶರ್ಮಾ (45) ಕೊಲೆಯಾದ ದುರ್ದೈವಿ ತಾಯಿ. ಪೊಲೀಸರ ಮಾಹಿತಿ ಪ್ರಕಾರ, ನೀರಜ್ ಅವರ ಪತಿ ವಿಜಯ್…

Read More

ಇಸ್ಲಾಮಾಬಾದ್: ಯುನೈಟೆಡ್ ಅರಬ್ ಎಮಿರೇಟ್ಸ್​​ನಿಂದ ಪಾಕಿಸ್ತಾನಕ್ಕೆ ಹಾರುತ್ತಿದ್ದ ಸರಕು ವಿಮಾನವೊಂದು ಮಂಗಳವಾರ ರಾತ್ರಿ ಅರಬ್ಬಿ ಸಮುದ್ರದ ಮೇಲೆ ದಿಢೀರ್ ರಾಡಾರ್​ನಿಂದ ಕಣ್ಮರೆಯಾಗಿದೆ. ಐವರು ಸಿಬ್ಬಂದಿಯನ್ನು ಹೊತ್ತಿದ್ದ ಈ ‘ಕೆ2 ಏರ್‌ವೇಸ್’ ವಿಮಾನವನ್ನು ಪತ್ತೆಹಚ್ಚಲು ಇದೀಗ ಸಮುದ್ರದಲ್ಲಿ ಭಾರಿ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ಆರಂಭಿಸಲಾಗಿದೆ. ಘಟನೆ ನಡೆದಿದ್ದು ಹೇಗೆ? ಪಾಕಿಸ್ತಾನದ ವಿಮಾನ ನಿಲ್ದಾಣ ಪ್ರಾಧಿಕಾರ ನೀಡಿರುವ ಮಾಹಿತಿ ಪ್ರಕಾರ,ಶಾರ್ಜಾದಿಂದ ಕರಾಚಿಗೆ ಹೊರಟಿದ್ದ ಈ ಕಾರ್ಗೋ ವಿಮಾನದಲ್ಲಿ ಮಾರ್ಗಮಧ್ಯೆ ತಾಂತ್ರಿಕ ದೋಷ ಕಾಣಿಸಿಕೊಂಡಿತ್ತು. ವಿಮಾನದ ನ್ಯಾವಿಗೇಷನ್ ಸಿಸ್ಟಮ್‌ನಲ್ಲಿ ದೋಷ ಕಂಡುಬಂದಿದೆ ಎಂದು ಪೈಲಟ್ ಕರಾಚಿ ವಾಯು ಸಂಚಾರ ನಿಯಂತ್ರಣ ಕೇಂದ್ರಕ್ಕೆ ಮಾಹಿತಿ ನೀಡಿದ್ದರು. ತಕ್ಷಣವೇ ನಿಯಂತ್ರಣ ಕೇಂದ್ರದಿಂದ ವಿಮಾನಕ್ಕೆ ಸೂಕ್ತ ಮಾರ್ಗದರ್ಶನ ನೀಡಲಾಗಿತ್ತು.ರಾತ್ರಿ 9.18ಕ್ಕೆ ಕೊನೆಯ ಸಂಪರ್ಕ ಸಿಕ್ಕಿತ್ತು. ಆದರೆ, ಸಮಸ್ಯೆ ತಿಳಿಸಿದ ಕೇವಲ 4 ನಿಮಿಷಗಳಲ್ಲಿ, ಅಂದರೆ ರಾತ್ರಿ 9.22 ರ ಸುಮಾರಿಗೆ ವಿಮಾನವು ಇದ್ದಕ್ಕಿದ್ದಂತೆ ತನ್ನ ದಿಕ್ಕನ್ನು ಬದಲಾಯಿಸಿ ಅತಿ ವೇಗವಾಗಿ ಕೆಳಮುಖವಾಗಿ ಇಳಿಯುವುದನ್ನು ರಾಡಾರ್‌ನಲ್ಲಿ ಗಮನಿಸಲಾಯಿತು. ಇದಾದ ಕೆಲವೇ…

Read More

ಡೆಹ್ರಾಡೂನ್: ಅಯೋಧ್ಯೆಯ ರಾಮ ಮಂದಿರದ ದೇಣಿಗೆ ವಿವಾದದ ಬೆನ್ನಲ್ಲೇ, ಈಗ ದೇಶದ ಮತ್ತೊಂದು ಪವಿತ್ರ ಧಾಮವಾದ ಉತ್ತರಾಖಂಡದ ಬದರಿನಾಥ ದೇವಾಲಯದಲ್ಲೂ ಕಾಣಿಕೆ ಮತ್ತು ದೇಣಿಗೆ ಹಣ ದುರುಪಯೋಗವಾಗಿರುವ ಗಂಭೀರ ಆರೋಪ ಕೇಳಿಬಂದಿದೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರ ಆದೇಶದ ಮೇರೆಗೆ, ರಾಜ್ಯ ಸರ್ಕಾರವು ತನಿಖೆಗಾಗಿ ಮೂವರು ಸದಸ್ಯರ ಉನ್ನತ ಮಟ್ಟದ ಸಮಿತಿಯನ್ನು ರಚಿಸಿದೆ. 15 ದಿನಗಳಲ್ಲಿ ವರದಿ ಸಲ್ಲಿಕೆಗೆ ಆದೇಶ ಪ್ರವಾಸೋದ್ಯಮ ಇಲಾಖೆಯ ಕಾರ್ಯದರ್ಶಿ ಧೀರಜ್ ಸಿಂಗ್ ಗರ್ಬ್ಯಾಲ್ ಹೊರಡಿಸಿರುವ ಆದೇಶದ ಪ್ರಕಾರ, ಈ ಉನ್ನತ ಮಟ್ಟದ ಸಮಿತಿಯು ಗರ್ವಾಲ್ ಆಯುಕ್ತ (ಕಮಿಷನರ್) ಆನಂದ್ ಸ್ವರೂಪ್ ಅವರ ನೇತೃತ್ವದಲ್ಲಿ ಕಾರ್ಯನಿರ್ವಹಿಸಲಿದೆ. ರಾಷ್ಟ್ರೀಯ ಆರೋಗ್ಯ ಮಿಷನ್‌ನ ವ್ಯವಸ್ಥಾಪಕ ನಿರ್ದೇಶಕ ಸಂದೀಪ್ ತಿವಾರಿ ಮತ್ತು ಹಣಕಾಸು ನಿರ್ದೇಶಕ ಜಗತ್ ಸಿಂಗ್ ಚೌಹಾಣ್ ಇದರ ಇತರ ಸದಸ್ಯರಾಗಿದ್ದಾರೆ. ಈ ಸಮಿತಿಯು ದೇಣಿಗೆ ಅಕ್ರಮಗಳ ಬಗ್ಗೆ ಸಂಪೂರ್ಣ ತನಿಖೆ ನಡೆಸಿ, ಮುಂದಿನ 15 ದಿನಗಳ ಒಳಗಾಗಿ ತನ್ನ ವರದಿ ಹಾಗೂ…

Read More

ಜಕಾರ್ತಾ: ಪ್ರಧಾನಿ ನರೇಂದ್ರ ಮೋದಿ  ತಮ್ಮ ಇಂಡೋನೇಷ್ಯಾ ಪ್ರವಾಸದ ಅವಧಿಯಲ್ಲಿ ಜಕಾರ್ತಾದಲ್ಲಿ ಅಲ್ಲಿನ ಸಂಸತ್ತನ್ನುದ್ದೇಶಿಸಿ ಮಾತನಾಡುವಾಗ, ಇಂಡೋನೇಷ್ಯಾದಲ್ಲಿರುವ 1 ಸಾವಿರ ವರ್ಷ ಹಳೆಯದಾದ ಐತಿಹಾಸಿಕ ಪ್ರಂಬನನ್ ಶಿವ ದೇವಾಲಯದ ಜೀರ್ಣೋದ್ಧಾರ ಮತ್ತು ಸಂರಕ್ಷಣೆಗೆ ಭಾರತ ಸಂಪೂರ್ಣ ಬೆಂಬಲ ನೀಡಲಿದೆ ಎಂದು ಮಹತ್ವದ ಘೋಷಣೆ ಮಾಡಿದ್ದಾರೆ. ಭಾರತ ಮತ್ತು ಇಂಡೋನೇಷ್ಯಾದ ನಡುವಿನ ಸಂಬಂಧವು ಕೇವಲ ಇತ್ತೀಚಿನ ರಾಜತಾಂತ್ರಿಕ ಸಂಬಂಧವಲ್ಲ. ಅದು ಸಾವಿರಾರು ವರ್ಷಗಳ ಇತಿಹಾಸವನ್ನು ಹೊಂದಿದೆ. ಪ್ರಂಬನನ್ ಶಿವ ದೇವಾಲಯವು 9ನೇ ಶತಮಾನದಲ್ಲಿ (ಸುಮಾರು 1,000 ವರ್ಷಗಳ ಹಿಂದೆ) ನಿರ್ಮಾಣಗೊಂಡ ಆಗ್ನೇಯ ಏಷ್ಯಾದ ಅತಿ ದೊಡ್ಡ ಹಿಂದೂ ದೇವಾಲಯ ಸಂಕೀರ್ಣಗಳಲ್ಲಿ ಒಂದಾಗಿದೆ. ಈ ಸಾಂಸ್ಕೃತಿಕ ಪರಂಪರೆಯನ್ನು ಸಂರಕ್ಷಿಸುವುದು ಉಭಯ ದೇಶಗಳ ಹಂಚಿಕೆಯ ಇತಿಹಾಸವನ್ನು ಗೌರವಿಸಿದಂತೆ ಎಂದು ಪ್ರಧಾನಿ ಮೋದಿ ಒತ್ತಿಹೇಳಿದ್ದಾರೆ. ಪ್ರಂಬನನ್ ದೇವಾಲಯದ ಗೋಡೆಗಳ ಮೇಲೆ ರಾಮಾಯಣ ಮತ್ತು ಮಹಾಭಾರತದ ಮಹಾಕಾವ್ಯಗಳ ಸುಂದರ ಕೆತ್ತನೆಗಳಿವೆ. ಇಂಡೋನೇಷ್ಯಾ ಮುಸ್ಲಿಂ ಬಹುಸಂಖ್ಯಾತ ರಾಷ್ಟ್ರವಾಗಿದ್ದರೂ, ಅಲ್ಲಿನ ಸಂಸ್ಕೃತಿಯಲ್ಲಿ ರಾಮಾಯಣ ಮತ್ತು ಗರುಡನಿಗೆ ಅಪಾರ ಗೌರವವಿದೆ. ಕಾಂಬೋಡಿಯಾದ ಅಂಗ್ಕೋರ್…

Read More

ತೆಲಂಗಾಣ : ವಿವಾಹೇತರ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯನ್ನು ಕೊಲೆ ಮಾಡಲು ನರ್ಸ್ ಪತ್ನಿಯೊಬ್ಬಳು ತನಗಿದ್ದ ವೈದ್ಯಕೀಯ ಜ್ಞಾನವನ್ನೇ ದುರ್ಬಳಕೆ ಮಾಡಿಕೊಂಡು, ಪತಿಯ ಗ್ಲುಕೋಸ್ (IV) ಲೈನ್‌ಗೆ ಶೌಚಾಲಯ ಶುಚಿಗೊಳಿಸುವ ಆ್ಯಸಿಡ್ ದ್ರವವನ್ನು ಚುಚ್ಚಿ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಪತ್ನಿ ಸಂಧ್ಯಾ, ಆಕೆಯ ಪ್ರಿಯಕರ ಅನಿಲ್ ಮತ್ತು ಆತನ ಸ್ನೇಹಿತ ವೆಂಕಟ್ ಸಾಯಿ ಎಂಬುವವರನ್ನು ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಗಲ್ಫ್ ರಾಷ್ಟ್ರದಿಂದ ಇತ್ತೀಚೆಗಷ್ಟೇ ತಾಯ್ನಾಡಿಗೆ ಮರಳಿದ್ದ ಸಂಧ್ಯಾಳ ಪತಿ ಪ್ರಶಾಂತ್ ಕೊಲೆಯಾದ ದುರ್ದೈವಿ. ಪೊಲೀಸ್ ತನಿಖೆಯ ಪ್ರಕಾರ, ಸಂಧ್ಯಾ ಮತ್ತು ಪ್ರಶಾಂತ್ ಮಧ್ಯೆ ಅನಿಲ್ ಜೊತೆಗಿನ ಅಕ್ರಮ ಸಂಬಂಧದ ವಿಚಾರವಾಗಿ ತೀವ್ರ ಕೌಟುಂಬಿಕ ಕಲಹ ನಡೆಯುತ್ತಿತ್ತು. ಪ್ರಶಾಂತ್‌ನನ್ನು ಹಾದಿಯಿಂದ ತಪ್ಪಿಸಲು ಸಂಚು ರೂಪಿಸಿದ ಆರೋಪಿಗಳು, ಮೊದಲಿಗೆ ಪ್ರಶಾಂತ್‌ಗೆ ಅತಿಯಾಗಿ ಮದ್ಯ ಕುಡಿಸಿದ್ದಾರೆ. ಬಳಿಕ ಅನಿಲ್ ಮತ್ತು ವೆಂಕಟ್ ಸಾಯಿ ಆತನ ಮೇಲೆ ಭೀಕರ ಹಲ್ಲೆ ನಡೆಸಿ, ಮನೆಯ ಮೇಲ್ಛಾವಣಿಯಿಂದ ಕೆಳಗೆ ತಳ್ಳಿದ್ದಾರೆ.…

Read More

ವಿಟ್ಲ,: 3 ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಕಳ್ಳತನ ಪ್ರಕರಣದ ಆರೋಪಿಯೋರ್ವನನ್ನು ವಿಟ್ಲ ಠಾಣಾ ಪೊಲೀಸರು ಜು. 6ರಂದು ದಸ್ತಗಿರಿ ಮಾಡಿದ್ದಾರೆ. ಬೆಳ್ತಂಗಡಿ ನಿವಾಸಿ ರಾಜೇಶ್ (41) ದಸ್ತಗಿರಿ ಮಾಡಲಾದ ಆರೋಪಿ. ವಿಟ್ಲ ಪೊಲೀಸ್ ಠಾಣಾ ಅ.ಕ್ರ ನಂ: 204/2018  Se. 379 IPC ಐಪಿಸಿ ಪ್ರಕರಣದ ಆರೋಪಿಯಾಗಿರುವ ಈತನು ನ್ಯಾಯಾಲಯಕ್ಕೆ ವಿಚಾರಣೆ ಹಾಜರಾಗದೇ ೦೩ ವರ್ಷದಿಂದ ತಲೆಮರೆಸಿಕೊಂಡಿದ್ದ. ಆರೋಪಿಯನ್ನು ವಿಟ್ಲ ಠಾಣಾ ಸಿಬ್ಬಂದಿಗಳಾದ ASI ಜಯರಾಮ, CPC ವೆಂಕಪ್ಪ ಹಾಗೂ CPC ಶಿವಾನಂದ ಅವರು ಜು.6 ರಂದು ಮಂಗಳೂರಿನಲ್ಲಿ ದಸ್ತಗಿರಿ ಮಾಡಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿರುತ್ತದೆ.

Read More

ಅಹಮದಾಬಾದ್: ದೇಶವನ್ನೇ ನಡುಗಿಸಿದ್ದ 2008ರ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಜರಾತ್ ಹೈಕೋರ್ಟ್ ಮಂಗಳವಾರ ಅತ್ಯಂತ ಮಹತ್ವದ ತೀರ್ಪು ನೀಡಿದೆ. ಪ್ರಕರಣದ ಎಲ್ಲಾ 38 ಅಪರಾಧಿಗಳ ಮರಣದಂಡನೆ ಶಿಕ್ಷೆಯನ್ನು ಹೈಕೋರ್ಟ್ ಒಮ್ಮತದಿಂದ ಎತ್ತಿಹಿಡಿದಿದೆ. ಇದರೊಂದಿಗೆ ಪ್ರಕರಣದಲ್ಲಿದ್ದ ಇತರ 11 ಭಯೋತ್ಪಾದಕರ ಜೀವಾವಧಿ ಶಿಕ್ಷೆಯನ್ನು ಸಹ ನ್ಯಾಯಾಲಯ ಕಾಯ್ದುಕೊಂಡಿದೆ. ಇದೇ ವೇಳೆ, ಸ್ಫೋಟದಲ್ಲಿ ಮೃತರಾದ 56 ಜನರ ಕುಟುಂಬಗಳಿಗೆ ತಲಾ 10 ಲಕ್ಷ ರೂ. ಹಾಗೂ ಗಾಯಗೊಂಡ 200ಕ್ಕೂ ಹೆಚ್ಚು ಸಂತ್ರಸ್ತರಿಗೆ ತಲಾ 1 ಲಕ್ಷ ರೂ. ಪರಿಹಾರ ನೀಡುವಂತೆಯೂ ಹೈಕೋರ್ಟ್ ಆದೇಶಿಸಿದೆ. ಏನಿದು ಘಟನೆ? ಜುಲೈ 26, 2008 ರಂದು ಗುಜರಾತ್‌ನ ಅಹಮದಾಬಾದ್‌ನಾದ್ಯಂತ ಕೇವಲ 70 ನಿಮಿಷಗಳ ಅವಧಿಯಲ್ಲಿ 20 ವಿವಿಧ ಸ್ಥಳಗಳಲ್ಲಿ ಬರೋಬ್ಬರಿ 21 ಸರಣಿ ಬಾಂಬ್ ಸ್ಫೋಟಗಳು ಸಂಭವಿಸಿದ್ದವು. ಇಡೀ ನಗರವನ್ನು ಭೀತಿಯಲ್ಲಿ ಮುಳುಗಿಸಿದ್ದ ಈ ಭೀಕರ ಭಯೋತ್ಪಾದಕ ದಾಳಿಯಲ್ಲಿ 56 ಅಮಾಯಕರು ಜೀವ ಕಳೆದುಕೊಂಡಿದ್ದರು ಮತ್ತು 200 ಕ್ಕೂ ಹೆಚ್ಚು ಜನರು ತೀವ್ರವಾಗಿ ಗಾಯಗೊಂಡಿದ್ದರು. ಈ…

Read More