Author: admin

ನ್ಯೂಯಾರ್ಕ್‌: ನೇಪಾಳದಲ್ಲಿ ಸಂಭವಿಸಿದ ಭೀಕರ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವೀಸಸ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (CEO) ಲಕ್ಷ್ ಗೋಪಿಸೆಟ್ಟಿ ಅವರ ಸಂಪರ್ಕ ಕಡಿತಗೊಂಡಿದೆ. ವೈಯಕ್ತಿಕ ಪ್ರವಾಸದ ಹಿನ್ನೆಲೆಯಲ್ಲಿ ಅವರು ನೇಪಾಳಕ್ಕೆ ತೆರಳಿದ್ದರು ಎಂದು ಇನ್ಫೋಸಿಸ್ ತಿಳಿಸಿದೆ. ಪ್ರವಾಹದ ಬಳಿಕ ಗೋಪಿಸೆಟ್ಟಿ ಅವರ ಸುರಕ್ಷತೆ ಹಾಗೂ ಆರೋಗ್ಯದ ಬಗ್ಗೆ ಮಾಹಿತಿ ಪಡೆಯಲು ಸಂಬಂಧಿತ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದ್ದು, ಅವರನ್ನು ಪತ್ತೆಹಚ್ಚಲು ಪ್ರಯತ್ನಿಸಲಾಗುತ್ತಿದೆ ಎಂದು ಕಂಪನಿ ಹೇಳಿದೆ. ಕುಟುಂಬದವರೊಂದಿಗೂ ನಿರಂತರ ಸಂಪರ್ಕದಲ್ಲಿರುವುದಾಗಿ ಇನ್ಫೋಸಿಸ್ ತಿಳಿಸಿದೆ. ಲಕ್ಷ್ ಗೋಪಿಸೆಟ್ಟಿ ಅವರು ಅಮೆರಿಕ ಮತ್ತು ಕೆನಡಾದ ಸಾರ್ವಜನಿಕ ವಲಯವನ್ನು ಕೇಂದ್ರೀಕರಿಸಿರುವ ಇನ್ಫೋಸಿಸ್ ಪಬ್ಲಿಕ್ ಸರ್ವೀಸಸ್‌ನ ಅಧ್ಯಕ್ಷ ಹಾಗೂ ಸಿಇಒ ಆಗಿದ್ದಾರೆ. ಅವರಿಗೆ ಮೂರು ದಶಕಗಳಿಗೂ ಅಧಿಕ ವೃತ್ತಿಪರ ಅನುಭವವಿದ್ದು, ಈ ಹಿಂದೆ ಇನ್ಫೋಸಿಸ್‌ನಲ್ಲಿ ಗ್ಲೋಬಲ್ ವೈಸ್ ಪ್ರೆಸಿಡೆಂಟ್ ಆಗಿ ಹಾಗೂ ಅಕ್ಸೆಂಚರ್‌ನಲ್ಲಿ ಆರೋಗ್ಯ ಮತ್ತು ಸಾರ್ವಜನಿಕ ಸೇವೆಗಳ ವ್ಯವಸ್ಥಾಪಕ ನಿರ್ದೇಶಕರಾಗಿ ಕಾರ್ಯನಿರ್ವಹಿಸಿದ್ದರು

Read More

ವಾಷಿಂಗ್ಟನ್: ಕಳೆದ ಎರಡು ವರ್ಷಗಳಲ್ಲಿ ತಮ್ಮ ತಂದೆ ಹಾಗೂ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಮೇಲೆ ಮೂರು ಬಾರಿ ಹತ್ಯೆಯ ಪ್ರಯತ್ನಗಳು ನಡೆದ ನಂತರ, ಅವರ 20 ವರ್ಷದ ಪುತ್ರ ಬ್ಯಾರನ್ ಟ್ರಂಪ್ ಏಕಾಂತ ಜೀವನವನ್ನು ಆಯ್ಕೆ ಮಾಡಿಕೊಂಡಿದ್ದಾರೆ ಎಂದು ಅಮೆರಿಕದ ಮಾಧ್ಯಮಗಳು ವರದಿ ಮಾಡಿವೆ ನ್ಯೂಯಾರ್ಕ್ ವಿಶ್ವವಿದ್ಯಾಲಯದಲ್ಲಿ ತಮ್ಮ ಎರಡನೇ ವರ್ಷದ ವ್ಯಾಸಂಗವನ್ನು ಪೂರ್ಣಗೊಳಿಸುತ್ತಿರುವ ಡೊನಾಲ್ಡ್ ಟ್ರಂಪ್ ಅವರ ಕಿರಿಯ ಪುತ್ರ‌ ಬ್ಯಾರನ್‌ ಟ್ರಂಪ್‌, ಸಾರ್ವಜನಿಕವಾಗಿ ಹೆಚ್ಚು ಕಾಣಿಸಿಕೊಳ್ಳದೆ ಅಂತರ ಕಾಯ್ದುಕೊಂಡಿದ್ದಾರೆ. ಬ್ಯಾರನ್ ತಮ್ಮ ಬೇಸಿಗೆಯ ಹೆಚ್ಚಿನ ಸಮಯವನ್ನು ನ್ಯೂಜೆರ್ಸಿಯ ‘ಟ್ರಂಪ್ ನ್ಯಾಷನಲ್ ಗಾಲ್ಫ್ ಕ್ಲಬ್ ಬೆಡ್‌ಮಿನ್‌ಸ್ಟರ್’ನಲ್ಲಿ ತಮ್ಮ ತಾಯಿ ಹಾಗೂ ಪ್ರಥಮ ಮಹಿಳೆ ಮೆಲಾನಿಯಾ ಟ್ರಂಪ್ ಅವರೊಂದಿಗೆ ಕಳೆದಿದ್ದಾರೆ ಎಂದು ವರದಿಗಳು ತಿಳಿಸಿವೆ. ಬ್ಯಾರನ್‌ ಟ್ರಂಪ್‌ ಮನೆಯಿಂದ ಹೊರಗೆ ಹೋಗುವುದಿಲ್ಲ. ಅವರಿಗೆ ಸಾರ್ವಜನಿಕ ಉಪಸ್ಥಿತಿಯನ್ನು ಕಡಿಮೆ ಮಾಡುವಂತೆ ಸಿಕ್ರೇಟ್‌ ಸರ್ವೀಸ್‌ ಸಲಹೆ ಇದೆ” ಎಂದು ಡೊನಾಲ್ಡ್ ಟ್ರಂಪ್‌ ಅವರಿಗೆ ಆಪ್ತರಾದ ಮೂಲವೊಂದು, ಅಮೆರಿಕದ ಮಾಧ್ಯಮಗಳಿಗೆ ತಿಳಿಸಿದೆ. “ಬ್ಯಾರನ್…

Read More

ಬೆಂಗಳೂರು : ನಗರದಲ್ಲಿ ಪುಂಡಾಟಿಕೆ ಮತ್ತು ಅಪರಾಧ ಕೃತ್ಯಗಳಿಗೆ ಕಟಿಬದ್ಧವಾಗಿ ಕಡಿವಾಣ ಹಾಕಲು ನಗರ ಪೊಲೀಸರು ಭರ್ಜರಿ ಕಾರ್ಯಾಚರಣೆ ಆರಂಭಿಸಿದ್ದಾರೆ. ಕಳೆದ 24 ಗಂಟೆಗಳಲ್ಲಿ ನಗರದಾದ್ಯಂತ ಒಟ್ಟು 1,352 ರೌಡಿಶೀಟರ್‌ಗಳ ಮನೆಗಳ ಮೇಲೆ ಪೊಲೀಸರು ಏಕಾಏಕಿ ದಿಢೀರ್ ದಾಳಿ ನಡೆಸಿದ್ದಾರೆ. ಸಿಸಿಬಿ (CCB) ತಂಡದ ಜೊತೆಗೆ ಬೆಂಗಳೂರು ಪಶ್ಚಿಮ, ಉತ್ತರ, ಈಶಾನ್ಯ ಹಾಗೂ ನೈರುತ್ಯ ವಿಭಾಗದ ಪೊಲೀಸರು ಜಂಟಿಯಾಗಿ ಈ ಬೃಹತ್ ಜಪ್ತಿ ಮತ್ತು ಪರಿಶೀಲನಾ ಕಾರ್ಯಾಚರಣೆಯನ್ನು ಕೈಗೊಂಡಿದ್ದಾರೆ. ತಡರಾತ್ರಿ ಹಾಗೂ ಮುಂಜಾನೆ 4 ಗಂಟೆಯಿಂದಲೇ ಆರಂಭವಾದ ಈ ಮಿಂಚಿನ ದಾಳಿಯಲ್ಲಿ ಪೊಲೀಸರು ರೌಡಿಗಳ ಮನೆಗಳನ್ನು ಜಾಲಾಡಿದ್ದಾರೆ. ಸಿಸಿಬಿ ಒಂದೇ ವಿಭಾಗದಿಂದ ಸುಮಾರು 600ಕ್ಕೂ ಹೆಚ್ಚು ರೌಡಿಶೀಟರ್‌ಗಳ ನಿವಾಸಗಳ ಮೇಲೆ ದಾಳಿ ನಡೆದಿದ್ದು, ಪರಿಶೀಲನೆ ವೇಳೆ ಹಲವಾರು ಮನೆಗಳಲ್ಲಿ ಮಾರಕಾಸ್ತ್ರಗಳು (ಕಾಟಾ, ಮಚ್ಚು, ಡ್ರ್ಯಾಗರ್) ಪತ್ತೆಯಾಗಿವೆ. ಬೇಟೆಯಾಡಿದ ಮಾರಕಾಸ್ತ್ರಗಳನ್ನು ವಶಪಡಿಸಿಕೊಂಡಿರುವ ಪೊಲೀಸರು, ಹಲವು ರೌಡಿಗಳನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ  ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ…

Read More

ಲಾರಿಯೊಂದು ಮನೆ ಮೇಲೆ ಉರುಳಿ ಚಾಲಕ ಮೃತಪಟ್ಟ ಘಟನೆ ಕಾಸರಗೋಡಿನ ಮಡಿಕೈ ಕಂಞಿರಪೊಯಿಲ್ ಎಂಬಲ್ಲಿ ಶನಿವಾರ ಬೆಳಗ್ಗೆ ನಡೆದಿದೆ. ಮೃತರನ್ನು ಚಾಯ್ಯೋಂ ನಿವಾಸಿ ಸಾದಿಕ್ (40) ಎಂದು ಗುರುತಿಸಲಾಗಿದೆ. ಕೆಂಪುಕಲ್ಲು ಹೇರಿಕೊಂಡು ಬಂದಿದ್ದ ಲಾರಿ ಕಂಞಿರಪೊಯಿಲ್ ಕುಳಂಗಾಟ್‌ನಲ್ಲಿ ಕಲ್ಲು ಅನ್‌ಲೋಡ್ ಮಾಡಿದ ಬಳಿಕ ಮುಂದಕ್ಕೆ ಚಲಿಸುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಸಮೀಪದ ಪಿ. ಗೋಪಾಲನ್ ಅವರ ಮನೆಯ ಮೇಲೆ ಉರುಳಿಬಿದ್ದಿದೆ. ಅಪಘಾತದ ತೀವ್ರತೆಗೆ ಮನೆಯ ಅಡುಗೆ ಕೋಣೆ ಸಂಪೂರ್ಣವಾಗಿ ಧ್ವಂಸಗೊಂಡಿದೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ ಸಾದಿಕ್ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

Read More

ಮಂಗಳೂರು:ಬಂಟ್ವಾಳ ತಾಲೂಕಿನ ಬಾಳೆಪುಣಿಯ ಕಣಂತೂರು ಗ್ರಾಮದ ದೈವಸ್ಥಾನ ಮತ್ತು ಭಂಡಾರ ಮನೆಯಲ್ಲಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಳ ನ್ಯಾಯಾಲಯದಿಂದ ಖುಲಾಸೆಗೊಂಡ ವ್ಯಕ್ತಿಗೆ ಇದೀಗ 10 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ಜಿಲ್ಲಾ ನ್ಯಾಯಾಲಯ 1000 ರೂ.ಗಳ ದಂಡ ವಿಧಿಸಿದೆ ಆರೋಪಿಯನ್ನು ಉಳ್ಳಾಲದ ಹಳೇ ಮನೆ ಕಲ್ಲಾಪು ಕಟ್ಟೆಪುಣಿ ನಿವಾಸಿ ಅಬ್ದುಲ್ ಬಶೀರ್ ಅಲಿಯಾಸ್ ಕಲ್ಲ ಬಶೀರ್ (36) ಎಂದು ಗುರುತಿಸಲಾಗಿದೆ. ಫೆಬ್ರವರಿ 27, 2009 ರಂದು, ಬೆಳಗಿನ ಜಾವ 1.30 ರ ಸುಮಾರಿಗೆ, ಆರೋಪಿಯು ಕಣಂತೂರಿನಲ್ಲಿರುವ ಶ್ರೀ ಕ್ಷೇತ್ರ ತೋಡಕುಕ್ಕಿನಾರ್ ದೈವಸ್ಥಾನದ ಬಾಗಿಲಿನ ಬೀಗವನ್ನು ಕಬ್ಬಿಣದ ಲಿವರ್ ಬಳಸಿ ಒಡೆದು ಆವರಣಕ್ಕೆ ನುಗ್ಗಿ, ಹುಂಡಿಯಲ್ಲಿಟ್ಟಿದ್ದ ಹಣವನ್ನು ಕಳವು ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. ನಂತರ ದೈವಸ್ಥಾನದ ಪಕ್ಕದಲ್ಲಿರುವ ಭಂಡಾರ ಮನೆಯ ಬೀಗವನ್ನು ಒಡೆದು ಒಳಗೆ ಪ್ರವೇಶಿಸಿದ ಆತ, ದೇವರ ಕೋಣೆಯ ಬಾಗಿಲಿನ ಬೀಗವನ್ನು ಒಡೆದು, ರೂ. 1.20 ಲಕ್ಷ ಮೌಲ್ಯದ 100 ಗ್ರಾಂ ಚಿನ್ನ; 120 ಗ್ರಾಂ ಬೆಳ್ಳಿ ಇರುವ…

Read More

ಅಮರಾವತಿ : ಆಂಧ್ರಪ್ರದೇಶದ ಪಶ್ಚಿಮ ಗೋದಾವರಿ ಜಿಲ್ಲೆಯ ಚಿಂಚಿನಾಡ ವಸಿಷ್ಠ ಸೇತುವೆಯ ಬಳಿ ಮನಕಲಕುವ ದುರಂತವೊಂದು ಸಂಭವಿಸಿದೆ. 3 ವರ್ಷದ ಕಂದಮ್ಮನನ್ನು ದ್ವಿಚಕ್ರ ವಾಹನದ ಮೇಲೆಯೇ ಬಿಟ್ಟು ದಂಪತಿಯು ಉಕ್ಕಿ ಹರಿಯುತ್ತಿದ್ದ ಗೋದಾವರಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪಶ್ಚಿಮ ಗೋದಾವರಿ ಜಿಲ್ಲೆಯ ವೆಲ್ಪುರು ಗ್ರಾಮದ ನಿವಾಸಿಗಳಾದ ಸಾಯಿಕೃಷ್ಣ ಅಲಿಯಾಸ್ ದೊಡ್ಡ ಸಾಯಿ (29) ಮತ್ತು ಆತನ ಪತ್ನಿ ಶಿರೀಷಾ (28) ನದಿಗೆ ಧುಮುಕಿದ ದಂಪತಿ. ಪೋಲಿಸರ ಮಾಹಿತಿಯಂತೆ, ಘಟನೆ ನಡೆದ ರಾತ್ರಿ ಸುಮಾರು 10 ಗಂಟೆಯ ವೇಳೆಗೆ ದಂಪತಿಯು ಮಗುವಿನೊಂದಿಗೆ ಸ್ಕೂಟರ್‌ನಲ್ಲಿ ಸೇತುವೆ ಬಳಿ ಬಂದಿದ್ದಾರೆ. ಬಳಿಕ ಮೂರು ವರ್ಷದ ಮಗುವನ್ನು ಸ್ಕೂಟರ್ ಮೇಲೆಯೇ ಕುಳ್ಳಿರಿಸಿ, ದಂಪತಿ ನದಿಗೆ ಹಾರಿದ್ದಾರೆ. ಕತ್ತಲು ಹಾಗೂ ಚಳಿಯ ಮಧ್ಯೆ ಮಗು ಒಂಟಿಯಾಗಿ ಸ್ಕೂಟರ್‌ ಬಳಿ ನಿಂತು ‘ಅಮ್ಮ… ಅಪ್ಪ…’ ಎಂದು ಕಣ್ಣೀರು ಹಾಕುತ್ತಿದ್ದುದನ್ನು ಗಮನಿಸಿದ ದಾರಿಹೋಕರು ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಧಾವಿಸಿದ ಪೊಲೀಸರು ಮಗುವನ್ನು ರಕ್ಷಿಸಿ, ಸ್ಕೂಟರ್ ವಶಕ್ಕೆ ಪಡೆದುಕೊಂಡಿದ್ದಾರೆ.…

Read More

ತ್ರಿಶೂರ್ :  ಟ್ರಾನ್ಸ್‌ವುಮೆನ್ (ಲಿಂಗಪರಿವರ್ತಿತ ಮಹಿಳೆ) ದೀಪ್ತಿ ಕಲ್ಯಾಣಿ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಹೇಳಿಕೆ ನೀಡಿದ್ದಕ್ಕಾಗಿ ‘ಸ್ಪಾರ್ಟಾದ ಹೆಲೆನ್’ ಎಂದೇ ಪ್ರಸಿದ್ಧರಾಗಿರುವ ಯೂಟ್ಯೂಬರ್ ಧನ್ಯಾ ಹರ್ಷಿದ್ ವಿರುದ್ಧ ಮತ್ತೊಂದು ಪೊಲೀಸ್ ಪ್ರಕರಣ ದಾಖಲಾಗಿದೆ. ತ್ರಿಶೂರ್ ನಗರ ಪೊಲೀಸ್ ಆಯುಕ್ತರಿಗೆ ಸಲ್ಲಿಕೆಯಾದ ದೂರಿನ ಆಧಾರದ ಮೇಲೆ ಸೈಬರ್ ಪೊಲೀಸ್ ಠಾಣೆಯಲ್ಲಿ ಈ ಎಫ್‌ಐಆರ್ ದಾಖಲಾಗಿದೆ. ಧನ್ಯಾ ಹರ್ಷಿದ್ ಕೆಲವು ದಿನಗಳ ಹಿಂದೆ ದೀಪ್ತಿ ಕಲ್ಯಾಣಿ ಮತ್ತು ಅವರ ಸ್ನೇಹಿತೆಯನ್ನು ನಿಂದಿಸಿ, ಅವಮಾನಿಸುವ ರೀತಿಯ ವಿಡಿಯೋ ಒಂದನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದರು. ಆ ವಿಡಿಯೋದಲ್ಲಿ ದೀಪ್ತಿ ಮತ್ತು ಅವರ ಸ್ನೇಹಿತೆ ಯುವ ಪೀಳಿಗೆಯನ್ನು ದಾರಿ ತಪ್ಪಿಸುತ್ತಿದ್ದಾರೆ ಎಂದು ಧನ್ಯಾ ಕಠಿಣ ಪದಗಳಿಂದ ಆರೋಪಿಸಿದ್ದರು. ಈ ವಿಡಿಯೋ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆಯೇ ದೀಪ್ತಿ ಕಲ್ಯಾಣಿ ಅವರು ತ್ರಿಶೂರ್ ನಗರ ಪೊಲೀಸ್ ಆಯುಕ್ತರನ್ನು ಭೇಟಿ ಮಾಡಿ ದೂರು ನೀಡಿದ್ದರು. ಧನ್ಯಾ ಅವರು ತಮ್ಮ ವೈಯಕ್ತಿಕ ಜೀವನ ಹಾಗೂ ಕುಟುಂಬದ ಬಗ್ಗೆ ಅನಗತ್ಯ ಮತ್ತು ನಿಂದನೀಯ ಹೇಳಿಕೆಗಳನ್ನು ನೀಡಿದ್ದಾರೆ…

Read More

ಇಂದೋರ್: ವೇಗವಾಗಿ ಕಾರು ಚಲಾಯಿಸುತ್ತಿದ್ದುದನ್ನು ತಡೆಯಲು ಮುಂದಾದ ಭದ್ರತಾ ಸಿಬ್ಬಂದಿಯೊಂದಿಗೆ ಚಾಲಕನಿಗೆ ಮಾತಿನ ಚಕಮಕಿ ನಡೆದಿದೆ. ಬಳಿಕ ಚಾಲಕ ತನ್ನ ಎಸ್‌ಯುವಿಯಿಂದ ಭದ್ರತಾ ಸಿಬ್ಬಂದಿಗೆ ಡಿಕ್ಕಿ ಹೊಡೆದು, ಆತನನ್ನು ವಾಹನದಡಿ ಸಿಲುಕಿಸಿ ಕೊಂದಿರುವ ಆರೋಪ ಕೇಳಿಬಂದಿದೆ. ಘಟನೆಗೆ ಸಂಬಂಧಿಸಿದಂತೆ ಎಸ್‌ಯುವಿ ಚಾಲಕ ಹಾಗೂ ಆತನೊಂದಿಗೆ ಇದ್ದ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ. ಬುಧವಾರ ರಾತ್ರಿ ವಸತಿ ಸಮುಚ್ಚಯವೊಂದರಲ್ಲಿ ಈ ಘಟನೆ ನಡೆದಿದೆ. ವಾಹನವನ್ನು ವೇಗವಾಗಿ ಚಲಾಯಿಸುತ್ತಿದ್ದುದನ್ನು ಗಮನಿಸಿದ ಭದ್ರತಾ ಸಿಬ್ಬಂದಿ ಚಾಲಕನನ್ನು ಪ್ರಶ್ನಿಸಿ ನಿಧಾನವಾಗಿ ವಾಹನ ಚಲಾಯಿಸುವಂತೆ ಸೂಚಿಸಿದ್ದರು. ಈ ವೇಳೆ ಇಬ್ಬರ ನಡುವೆ ವಾಗ್ವಾದ ನಡೆದಿದೆ ಎನ್ನಲಾಗಿದೆ. ವಾಗ್ವಾದದ ಬಳಿಕ ಚಾಲಕ ಎಸ್‌ಯುವಿಯನ್ನು ಚಲಾಯಿಸಿಕೊಂಡು ಹೋಗುವಾಗ ಭದ್ರತಾ ಸಿಬ್ಬಂದಿಗೆ ಡಿಕ್ಕಿ ಹೊಡೆದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಯ ತನಿಖೆ ಮುಂದುವರಿದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ.

Read More

ಮಂಗಳೂರು: ಕಳೆದ ಎಂಟು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವ್ಯಕ್ತಿಯೊಬ್ಬನನ್ನು ಮಂಗಳೂರು ಪೂರ್ವ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಮುಕ್ಕಚೇರಿ ಸಮೀಪದ ಹಿಲರಿನಗರ ನಿವಾಸಿ ಮುವಾಝ್ (45) ಎಂದು ಗುರುತಿಸಲಾಗಿದೆ. ಪೊಲೀಸರ ಮಾಹಿತಿ ಪ್ರಕಾರ, ಆತ ಕೇರಳದ ಇರಿಕ್ಕೂರುನಲ್ಲಿ ವಾಸವಾಗಿದ್ದ. ಮುವಾಝ್ ವಿರುದ್ಧ ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆದರೆ ಆತ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ಈ ಹಿನ್ನೆಲೆಯಲ್ಲಿ ನ್ಯಾಯಾಲಯವು ಆತನ ವಿರುದ್ಧ ಎಲ್‌ಪಿಸಿ ವಾರಂಟ್ ಜಾರಿ ಮಾಡಿತ್ತು. ಇದೀಗ ಮಂಗಳೂರು ಪೂರ್ವ ಠಾಣೆ ಪೊಲೀಸರು ಮುವಾಝ್‌ನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

Read More

ಬೆಂಗಳೂರು: ನಗರದ ವೈಟ್‌ಫೀಲ್ಡ್ ಪೊಲೀಸರ ಕಾರ್ಯವೈಖರಿ ಕುರಿತು ಹೈಕೋರ್ಟ್‌ ಮತ್ತೆ ಅಸಮಾಧಾನ ವ್ಯಕ್ತಪಡಿಸಿದ್ದು, ಪ್ರಕರಣದ ವಿಚಾರಣೆಗೆ ಎಸಿಪಿ ಹಾಗೂ ಡಿಸಿಪಿ ಖುದ್ದಾಗಿ ಹಾಜರಾಗುವಂತೆ ಸೂಚಿಸಿದೆ. ಅಧಿಕಾರಿಗಳು ವಿಚಾರಣೆಗೆ ಹಾಜರಾಗದಿದ್ದಲ್ಲಿ ಪೊಲೀಸ್‌ ಕಮಿಷನರ್‌ಗೆ ಸಮನ್ಸ್‌ ಜಾರಿಗೊಳಿಸುವುದಾಗಿ ನ್ಯಾಯಾಲಯ ಎಚ್ಚರಿಕೆ ನೀಡಿದೆ. ವೈಟ್‌ಫೀಲ್ಡ್‌ನಲ್ಲಿ ಸ್ಟ್ಯಾಂಡ್‌ಅಪ್‌ ಕಾಮಿಡಿಯನ್ ಕುನಾಲ್‌ ಕಾಮ್ರಾ ಅವರ ಕಾರ್ಯಕ್ರಮ ಆಯೋಜನೆಗೊಂಡಿದ್ದ ಸಂದರ್ಭದಲ್ಲಿ, ಶೋ ರದ್ದುಗೊಳಿಸುವಂತೆ ಮೋಹನ್‌ ಗೌಡ ಎಂಬುವರು ವೈಟ್‌ಫೀಲ್ಡ್‌ ಪೊಲೀಸ್‌ ಠಾಣೆಗೆ ಮನವಿ ಸಲ್ಲಿಸಿದ್ದರು. ಮನವಿ ಸಲ್ಲಿಕೆಯ ಬಳಿಕ ಕಾರ್ಯಕ್ರಮ ರದ್ದುಗೊಂಡಿತ್ತು. ಶೋ ರದ್ದಾದ ವಿಚಾರವನ್ನು ಮೋಹನ್‌ ಗೌಡ ಅವರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡುವ ಮೂಲಕ ಸಂತಸ ವ್ಯಕ್ತಪಡಿಸಿದ್ದರು. ಆದರೆ, ಇದೇ ಪೋಸ್ಟ್‌ ಆಧರಿಸಿ ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ಆರೋಪದಡಿ ಅವರ ವಿರುದ್ಧ ಪೊಲೀಸರು ಎಫ್‌ಐಆರ್‌ ದಾಖಲಿಸಿದ್ದರು. ಈ ಎಫ್‌ಐಆರ್‌ ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿ ವಿಚಾರಣೆ ವೇಳೆ ವೈಟ್‌ಫೀಲ್ಡ್‌ ಪೊಲೀಸರ ಕ್ರಮಗಳ ಬಗ್ಗೆ ಹೈಕೋರ್ಟ್‌ ಅಸಮಾಧಾನ ವ್ಯಕ್ತಪಡಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ನಡೆಯಲಿರುವ ವಿಚಾರಣೆಗೆ ಎಸಿಪಿ…

Read More