Author: admin
ಬೆಳ್ತಂಗಡಿ: ವಾರಂಟ್ ಬಂಧನ ಪ್ರಕರಣದಲ್ಲಿ ಗಂಭೀರ ಕಾರ್ಯವಿಧಾನದ ಲೋಪಗಳ ಆರೋಪದ ಮೇಲೆ ಬೆಳ್ತಂಗಡಿ ಪೊಲೀಸ್ ಠಾಣೆಗೆ ನಿಯೋಜಿಸಲಾದ ಹೆಡ್ ಕಾನ್‌ಸ್ಟೆಬಲ್ ಹೆಚ್‌ಸಿ 404 ಮಾಲತೇಶ್ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ. ಅಧಿಕೃತ ಮೂಲಗಳ ಪ್ರಕಾರ, ಪೊಲೀಸ್ ಸಿಬ್ಬಂದಿ ವಾರಂಟ್ ಆರೋಪಿಯನ್ನು ಬಂಧಿಸಿದ್ದರು ಆದರೆ ಕಾನೂನಿನ ಪ್ರಕಾರ ಮುಂದಿನ ಕಾನೂನು ಕ್ರಮಗಳಿಗಾಗಿ ಅವರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸದೆ ಆರೋಪಿ ವಿರುದ್ದ ಜಾರಿಯಾಗಿರುವ ವಾರೆಂಟನ್ನು ರಿ-ಕಾಲ್ ಮಾಡಿಸಿಕೊಳ್ಳಲು ಸಹಕರಿಸಿರುವುದು ಕಂಡುಬಂದಿದ್ದು ಪ್ರಕರಣದ ವಿಚಾರಣೆಯ ಸಮಯದಲ್ಲಿ ಆಪಾದಿತ ಅಕ್ರಮಗಳು ಬೆಳಕಿಗೆ ಬಂದಿದ್ದು, ಇಲಾಖಾ ಕ್ರಮ ಕೈಗೊಳ್ಳಲಾಗಿದೆ. ಕರ್ತವ್ಯ ಲೋಪವನ್ನು ಸೂಚಿಸುವ ಪ್ರಾಥಮಿಕ ಸಂಶೋಧನೆಗಳ ನಂತರ, ಪೊಲೀಸ್ ಇಲಾಖೆ ಶಿಸ್ತು ಕ್ರಮವನ್ನು ಪ್ರಾರಂಭಿಸಿ, ವಿವರವಾದ ವಿಚಾರಣೆಯವರೆಗೆ ಹೆಡ್ ಕಾನ್‌ಸ್ಟೆಬಲ್ ಅನ್ನು ಅಮಾನತುಗೊಳಿಸಿದೆ.
ರಸ್ತೆಯಲ್ಲಿ ಅಪಘಾತ ಸಂಭವಿಸಿದಾಗ ಗಾಯಾಳುಗಳಿಗೆ ನೆರವಾಗುವುದು, ಚಾಲಕನ ಜೀವ ಉಳಿಸುವುದು ನಾಗರಿಕ ಸಮಾಜದ ಮೊದಲ ಕರ್ತವ್ಯ. ಆದರೆ, ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ವಿಡಿಯೋವೊಂದರಲ್ಲಿ ನಮ್ಮ ಸಮಾಜದ ನಾಗರಿಕ ಪ್ರಜ್ಞೆ ಮತ್ತು ಸಹಾನುಭೂತಿಯನ್ನು ಅಣಕಿಸುವಂತಿದೆ. ಅಪಘಾತಕ್ಕೀಡಾಗಿ ಪಲ್ಟಿಯಾದ ಟ್ರಕ್‌ನಿಂದ ಮಾವಿನ ಹಣ್ಣುಗಳನ್ನು ಕದಿಯಲು ಜನರು ಮುಗಿಬಿದ್ದಿರುವ ದೃಶ್ಯ ಆನ್‌ಲೈನ್‌ನಲ್ಲಿ ಭಾರಿ ಚರ್ಚೆ ಮತ್ತು ಆಕ್ರೋಶಕ್ಕೆ ಕಾರಣವಾಗಿದೆ. ವೈರಲ್ ವಿಡಿಯೋದಲ್ಲೇನಿದೆ? ವೈರಲ್ ಆಗಿರುವ ವಿಡಿಯೋದಲ್ಲಿ, ಹೆದ್ದಾರಿಯೊಂದರಲ್ಲಿ ಮಾವಿನ ಹಣ್ಣುಗಳನ್ನು ಸಾಗಿಸುತ್ತಿದ್ದ ದೊಡ್ಡ ಟ್ರಕ್ವೊಂದು ಪಲ್ಟಿಯಾಗಿರುವುದನ್ನು ಕಾಣಬಹುದು. ಆದಾಗ್ಯೂ, ಅಪಘಾತದ ತೀವ್ರತೆಗೆ ಟ್ರಕ್‌ನಲ್ಲಿದ್ದ ನೂರಾರು ಕೆಜಿ ತೂಕದ ಮಾವಿನ ಹಣ್ಣುಗಳು ರಸ್ತೆಯುದ್ದಕ್ಕೂ ಬಿದ್ದಿವೆ. ಈ ಸಮಯದಲ್ಲಿ ಚಾಲಕನಿಗೆ ಸಹಾಯ ಮಾಡಬೇಕಿದ್ದ ಸ್ಥಳೀಯರು ಮಾನವೀಯತೆಯನ್ನು ಮರೆತು ಮಾವಿನ ಹಣ್ಣನ್ನು ತೆಗೆದುಕೊಂಡು ಹೋಗಲು ಸಜ್ಜಾಗಿರುವುದನ್ನು ಈ ವಿಡಿಯೋದಲ್ಲಿ ತೋರಿಸಲಾಗಿದೆ. ಚೀಲ, ಸೀರೆಗಳಲ್ಲಿ ಮಾವಿನ ಹಣ್ಣುಗಳ ಲೂಟಿ ಅಪಘಾತದ ಸ್ಥಳದಲ್ಲಿದ್ದ ಜನರು ತಮಗೆ ಬೇಕಾದಷ್ಟು ಮಾವಿನ ಹಣ್ಣನ್ನು ದೊಡ್ಡ ಪ್ಲಾಸ್ಟಿಕ್ ಚೀಲಗಳು, ಗೋಣಿ ಚೀಲಗಳನ್ನು ತಂದು ಹಣ್ಣುಗಳನ್ನು…
ಕೊಲಂಬೊ: ಕೈದಿಗಳ ಎರಡು ಗುಂಪಿನ ಮಧ್ಯೆ ಗಲಾಟೆಯಾದ ಪರಿಣಾಮ 25 ಮಂದಿ ಸಾವನ್ನಪ್ಪಿದ್ದು, 100ಕ್ಕೂ ಹೆಚ್ಚು ಜನರಿಗೆ ಗಾಯಗೊಂಡಿರುವ ಘಟನೆ ಶ್ರೀಲಂಕಾದ ಕೊಲಂಬೊದ ನೆಗೊಂಬೊ ಜೈಲಿನಲ್ಲಿ ನಡೆದಿದೆ. ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿರುವ ಅಪರಾಧಿಗಳು ಮತ್ತು ವಿಚಾರಣಾಧೀನ ಕೈದಿಗಳ ನಡುವೆ ಭಾನುವಾರವೇ ಈ ಗಲಾಟೆ ಆರಂಭವಾಗಿತ್ತು. ಕೈದಿಗಳ ನಡುವಿನ ಈ ಘರ್ಷಣೆಗೆ ನಿಖರವಾದ ಕಾರಣ ಏನೆಂಬುದು ತಿಳಿದುಬಂದಿಲ್ಲ. ಸದ್ಯ ಅಧಿಕಾರಿಗಳು ಜೈಲಿನ ಆವರಣವನ್ನು ಪರಿಶೀಲಿಸುತ್ತಿದ್ದು, ಮೃತಪಟ್ಟವರು ಮತ್ತು ಗಾಯಗೊಂಡವರ ಮಾಹಿತಿಯನ್ನು ಕಲೆಹಾಕುತ್ತಿದ್ದಾರೆ. ಜೈಲಿನ ಮುಖ್ಯ ದ್ವಾರದ ಹೊರಗೆ ಭಾರಿ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ. ಗಾಯಗೊಂಡ ಕೈದಿಗಳನ್ನು ಪೊಲೀಸ್ ಬಸ್‌ಗಳ ಮೂಲಕ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ತಿಳಿದುಬಂದಿದೆ.
ಮುಂಬೈ: ಮುಂಬೈ ನಗರ ಮತ್ತು ನೆರೆಯ ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯುತ್ತಿರುವುದರಿಂದ ವಕೀಲರಿಗೆ ನ್ಯಾಯಾಲಯಗಳಿಗೆ ತಲುಪಲು ಸಾಧ್ಯವಾಗದಿದ್ದರೆ, ಆ ಪ್ರಕರಣಗಳಲ್ಲಿ ಯಾವುದೇ ಪ್ರತಿಕೂಲ ಆದೇಶಗಳನ್ನು ಹೊರಡಿಸುವುದಿಲ್ಲ ಎಂದು ಬಾಂಬೆ ಹೈಕೋರ್ಟ್ ಭರವಸೆ ನೀಡಿದೆ. ಭಾರತೀಯ ಹವಾಮಾನ ಇಲಾಖೆ ಇಂದು ಮುಂಬೈ, ಥಾಣೆ ಮತ್ತು ರಾಯಗಢ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಿದ್ದು, ಬಲವಾದ ಗಾಳಿಯೊಂದಿಗೆ ಭಾರೀ ಪ್ರಮಾಣದಿಂದ ಅತಿ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದೆ. ಅಲ್ಲದೆ ಸಾರ್ವಜನಿಕರು ಅನಗತ್ಯ ಪ್ರಯಾಣವನ್ನು ತಪ್ಪಿಸುವಂತೆ ಮನವಿ ಮಾಡಿದೆ. ಕೋರ್ಟ್ಗೆ ಬರಲಾಗದಿದ್ದರೆ ತೊಂದರೆಯಿಲ್ಲ: ತೀವ್ರ ಮಳೆಯಿಂದಾಗಿ ತಗ್ಗು ಪ್ರದೇಶಗಳು ಮತ್ತು ನಗರ ಪ್ರದೇಶಗಳು ಜಲಾವೃತಗೊಳ್ಳಬಹುದು ಮತ್ತು ಹಠಾತ್ ಪ್ರವಾಹ ಉಂಟಾಗಬಹುದು ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಹೀಗಾಗಿ, ಮಳೆಯ ಕಾರಣದಿಂದಾಗಿ ಸೋಮವಾರ ವಕೀಲರು ಗೈರುಹಾಜರಾದರೆ, ಅವರ ಗೈರುಹಾಜರಾಗಿದ್ದಾರೆ ಎಂಬ ಕಾರಣಕ್ಕೆ ಯಾವುದೇ ಪ್ರತಿಕೂಲ ಅಥವಾ ವಜಾ ಆದೇಶಗಳನ್ನು ಪಾಸ್ ಮಾಡಲಾಗುವುದಿಲ್ಲ ಎಂದು ಉಸ್ತುವಾರಿ ಮುಖ್ಯ ನ್ಯಾಯಮೂರ್ತಿ ರವೀಂದ್ರ ಗುಗೆ ಅವರು ವಕೀಲರ ಸಂಘಗಳಿಗೆ ಭರವಸೆ ನೀಡಿದ್ದಾರೆ. ಮುಖ್ಯ…
ಮಂಗಳೂರು: ನಗರದ ಬೈಕಂಪಾಡಿ ಸಮೀಪ ಚಿನ್ನದ ವ್ಯಾಪಾರಿಯ ಮೇಲೆ ಹಲ್ಲೆ ನಡೆಸಿ ಕೋಟ್ಯಂತರ ಮೌಲ್ಯದ ಚಿನ್ನಾಭರಣ ಮತ್ತು ನಗದು ದರೋಡೆ ಮಾಡಿದ ಪ್ರಕರಣದ ತನಿಖೆಯಲ್ಲಿ ಮಂಗಳೂರು ನಗರ ಪೊಲೀಸರು ಮಹತ್ವದ ಪ್ರಗತಿ ಸಾಧಿಸಿದ್ದಾರೆ. ಪ್ರಕರಣದಲ್ಲಿ ಭಾಗಿಯಾಗಿರುವ 14 ಪರಾರಿಯಾಗಿರುವ ಆರೋಪಿಗಳ ಗುರುತನ್ನು ಪತ್ತೆಹಚ್ಚಿರುವ ಪೊಲೀಸರು, ಅವರ ಛಾಯಾಚಿತ್ರಗಳನ್ನು ಸಾರ್ವಜನಿಕರಿಗೆ ಬಿಡುಗಡೆ ಮಾಡಿ ಬಂಧನಕ್ಕೆ ಸಹಕರಿಸುವಂತೆ ಮನವಿ ಮಾಡಿದ್ದಾರೆ. ಪೊಲೀಸರ ಮಾಹಿತಿ ಪ್ರಕಾರ, ಈ ದರೋಡೆ ಪ್ರಕರಣದ ಪ್ರಮುಖ ಸಂಚುಕೋರ ಪುದುಚೇರಿ ಮೂಲದ ಶಿಬಿನ್ ಗಂಗಾಧರನ್ ಎಂದು ಶಂಕಿಸಲಾಗಿದೆ. ಉಳಿದ ಆರೋಪಿಗಳು ಹೆಚ್ಚಾಗಿ ಕೇರಳದ ವಿವಿಧ ಜಿಲ್ಲೆಗಳು ಹಾಗೂ ಕೊಡಗು ಭಾಗಕ್ಕೆ ಸೇರಿದವರಾಗಿದ್ದು, ಅವರಿಗಾಗಿ ವಿಶೇಷ ತಂಡಗಳು ಕೇರಳ ಮತ್ತು ಕೊಡಗು ಜಿಲ್ಲೆಗಳಲ್ಲಿ ವ್ಯಾಪಕ ಶೋಧ ಕಾರ್ಯಾಚರಣೆ ನಡೆಸುತ್ತಿವೆ. ಬಿಡುಗಡೆಗೊಂಡಿರುವ ಆರೋಪಿಗಳ ಪಟ್ಟಿಯಲ್ಲಿ ಶ್ರೀರಾಗ್, ಅತುಲ್, ಮಿಥುನ್‌ಲಾಲ್, ಅಜೀರ್ ತರಾಯಿಲ್, ವೈಶಾಕ್, ಅಸೀರ್ ಪಯ್ಯನ್ನೂರ್, ಪ್ರಣವ್, ವಿಜಿಲ್ ಅಂಜರಕಂಡಿ, ಉಬೈದ್, ಫಿರೋಜ್, ಮೊಯ್ದು ಅಬ್ಬಾಸ್, ಜಿಯಾದ್ ಮತ್ತು ಜಮೀರ್ ಅಲಿಕಾ ಸೇರಿದ್ದಾರೆ. ಆರೋಪಿಗಳು…
ಬಂಟ್ವಾಳ: ತಾಲೂಕಿನ ಇರಾ ಗ್ರಾಮದಲ್ಲಿ ಕಾಲೇಜಿಗೆ ತೆರಳಲು ಬಸ್‌ಗಾಗಿ ಕಾಯುತ್ತಿದ್ದ ಪಿಯುಸಿ ವಿದ್ಯಾರ್ಥಿನಿಯ ಮೇಲೆ ಯುವಕನೊಬ್ಬ ಚೂರಿಯಿಂದ ದಾಳಿ ನಡೆಸಿದ ಘಟನೆ ನಡೆದಿದೆ. ಸ್ಥಳೀಯ ವ್ಯಾಪಾರಿ ಜವ್ವರ್ (28) ಎಂಬಾತ ವಿದ್ಯಾರ್ಥಿನಿಯ ಮೇಲೆ ಏಕಾಏಕಿ ಹಲ್ಲೆ ನಡೆಸಿ ಪರಾರಿಯಾಗಿದ್ದಾನೆ ಎನ್ನಲಾಗಿದೆ. ಪ್ರೀತಿ ವಿಚಾರವೇ ದಾಳಿಗೆ ಕಾರಣ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಘಟನೆಯಲ್ಲಿ ವಿದ್ಯಾರ್ಥಿನಿಯ ಕೈಗೆ ಗಾಯವಾಗಿದ್ದು, ತೀವ್ರ ರಕ್ತಸ್ರಾವಗೊಂಡ ಹಿನ್ನೆಲೆಯಲ್ಲಿ ಸ್ಥಳೀಯರು ತಕ್ಷಣ ಆಸ್ಪತ್ರೆಗೆ ದಾಖಲಿಸಿದ್ದಾರೆ. ದಾಳಿಯ ಬಳಿಕ ಬಸ್ ನಿಲ್ದಾಣದಲ್ಲಿ ರಕ್ತದ ಗುರುತುಗಳು ಕಂಡುಬಂದಿವೆ. ಗಾಯಗೊಂಡ ವಿದ್ಯಾರ್ಥಿನಿ ಹಾಗೂ ಆರೋಪಿ ಇಬ್ಬರೂ ಬಂಟ್ವಾಳದ ಮೊಂತಿಮಾರ್ ಪಡ್ಪು ನಿವಾಸಿಗಳಾಗಿದ್ದಾರೆ. ಘಟನಾ ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿ ಆರೋಪಿಯ ಪತ್ತೆಗೆ ಮುಂದಾಗಿದ್ದಾರೆ.
ಗುರುಗ್ರಾಮ: ಮದುವೆಯಾಗಿ ಕೇವಲ ಮೂರೇ ತಿಂಗಳಾಗಿದ್ದ ನವವಿವಾಹಿತೆಯನ್ನು ಪತಿ ಹಾಗೂ ಆತನ ಪ್ರೇಯಸಿ ಸೇರಿ ಭೀಕರವಾಗಿ ಕೊಲೆ ಮಾಡಿರುವ ಆಘಾತಕಾರಿ ಘಟನೆ ಹರಿಯಾಣದ ಮಾನೇಸರ್‌ನಲ್ಲಿ ನಡೆದಿದೆ. ಮೂರು ವರ್ಷಗಳ ತಮ್ಮ ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದಾಳೆ ಎಂಬ ಕಾರಣಕ್ಕೆ ಪತ್ನಿಯನ್ನೇ ಮುಗಿಸಿದ ಪತಿ ಹಾಗೂ ಆತನ ಗೆಳತಿಯನ್ನು ಪೊಲೀಸರು ಬಂಧಿಸಿದ್ದಾರೆ. ಗೆಳತಿಯ ಮನೆಗೆ ಪತ್ನಿಯನ್ನು ಕರೆಸಿ ಅಲ್ಲೇ ಇಬ್ಬರು ಸೇರಿ ಆಕೆಯನ್ನು ಹತ್ಯೆಗೈದಿದ್ದರು. ಪ್ರಕರಣ ಬೆಳಕಿಗೆ ಬಂದಿದ್ದು ಹೇಗೆ? ಕಳೆದ ಫೆಬ್ರವರಿಯಲ್ಲಿ ಮಾನೇಸರ್ ನಿವಾಸಿ ಅಂಕಿತ್ (25) ಎಂಬಾತನೊಂದಿಗೆ 22 ವರ್ಷದ ಯುವತಿಯ ಮದುವೆಯಾಗಿತ್ತು. ಆದರೆ, ಮೇ 21 ರಂದು ಆಕೆ ಇದ್ದಕ್ಕಿದ್ದಂತೆ ನಾಪತ್ತೆಯಾಗಿದ್ದಾಳೆ. ಅತ್ತೆ ಮನೆಯವರಿಂದ ಯಾವುದೇ ಸರಿಯಾದ ಪ್ರತಿಕ್ರಿಯೆ ಸಿಗದಿದ್ದಾಗ, ಗಾಬರಿಗೊಂಡ ಯುವತಿಯ ತಾಯಿ ಮೇ 22 ರಂದು ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸರು ತನಿಖೆ ನಡೆಸಿದಾಗ ಮೇ 22 ರಂದೇ ಮಾನೇಸರ್‌ನ ಬಾಡಿಗೆ ಕೋಣೆಯೊಂದರಲ್ಲಿ ಯುವತಿಯ ಶವ ಪತ್ತೆಯಾಗಿದೆ. ಆಕೆಯನ್ನು ಗುಂಡಿಕ್ಕಿ ಕೊಲೆ ಮಾಡಿರುವುದು ಮರಣೋತ್ತರ ಪರೀಕ್ಷೆಯಲ್ಲಿ ದೃಢಪಟ್ಟಿದೆ.…
ಮಂಡ್ಯ,: ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಭೂದಾಖಲೆಗಳ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ನಡೆಯುತ್ತಿದ್ದ ಹಗರಣವನ್ನು ಲೋಕಾಯುಕ್ತ ಪೊಲೀಸರು ಪತ್ತೆಹಚ್ಚಿದ್ದಾರೆ. ಕಚೇರಿಯ ರಹಸ್ಯ ಯೂಸರ್ ಐಡಿ ಮತ್ತು ಪಾಸ್‌ವರ್ಡ್‌ಗಳನ್ನು ಖಾಸಗಿ ವ್ಯಕ್ತಿಗೆ ನೀಡಿ, ಆತನ ಮೂಲಕ ಅಕ್ರಮ ಎಸಗುತ್ತಿದ್ದ 8 ಮಂದಿ ಸರ್ಕಾರಿ ಸಿಬ್ಬಂದಿ ಹಾಗೂ ಒಬ್ಬ ಖಾಸಗಿ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಈ ದಿಢೀರ್ ಬಂಧನದಿಂದಾಗಿ ಇತಿಹಾಸದಲ್ಲೇ ಮೊದಲ ಬಾರಿಗೆ ಇಡೀ ಸರ್ಕಾರಿ ಕಚೇರಿಯ ಕಾರ್ಯಕಲಾಪಗಳು ಸಂಪೂರ್ಣವಾಗಿ ಸ್ತಬ್ಧಗೊಂಡಿವೆ. ಲೋಕಾಯುಕ್ತ ದಾಳಿ ನಡೆಯುತ್ತಿದ್ದಂತೆ ಮುಖ್ಯ ಎಡಿಎಲ್‌ಆರ್ ಅಧಿಕಾರಿ ಮೊಹಮ್ಮದ್ ಹುಸೇನ್ ಅವರು ಶೌಚಾಲಯಕ್ಕೆ ಹೋಗಿ ಬರುವುದಾಗಿ ಹೇಳಿ ಕಚೇರಿಯಿಂದ ಪರಾರಿಯಾಗಿದ್ದು, ಸದ್ಯ ತಲೆಮರೆಸಿಕೊಂಡಿದ್ದಾರೆ. ಸರ್ವೆ ಮೇಲ್ವಿಚಾರಕ ಯೋಗರಾಜ್, ಭೂಮಾಪಕರಾದ ಅರವಿಂದ್, ಜಯಬೋರೇಗೌಡ, ದಯಾನಂದ್, ಮಧು, ರಮೇಶ್, ಹರೀಶ್, ನೇಹಾ ಸಾರಿಕಾ ಮಲ್ಲಿ ಸಿ. ಮತ್ತು ಖಾಸಗಿ ವ್ಯಕ್ತಿ ನಿತಿನ್ ಪ್ರೇಮಾನಂದ ಮಹಾಲೆ ಬಂಧಿತ ಆರೋಪಿಗಳಾಗಿದ್ದಾರೆ. ಶ್ರೀರಂಗಪಟ್ಟಣ ತಾಲೂಕಿನ ಮಹದೇವಪುರ ಗ್ರಾಮದಲ್ಲಿ ಅಧಿಕಾರಿಗಳು ಶಾಮೀಲಾಗಿ ಸುಮಾರು 200 ಎಕರೆ ಸರ್ಕಾರಿ ಭೂಮಿಯನ್ನು ನಕಲಿ…
ಪುತ್ತೂರು: ಕಲ್ಲಿಮಾರ್‌ನಲ್ಲಿ ವಾಸವಿದ್ದ ಜಿಮ್ ಟ್ರೈನರ್ ಸಚಿನ್ ರೈ ಅವರು ಮೃತಪಟ್ಟಿದ್ದು, ಅವರ ಸಾವಿನ ಕುರಿತು ಸಂಶಯ ವ್ಯಕ್ತಪಡಿಸಿ ತಾಯಿ ಗುಲಾಬಿ ಅವರು ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಮೂಲತಃ ಮಡಂತ್ಯಾರ್ ನಿವಾಸಿಯಾಗಿದ್ದ ಸಚಿನ್ ರೈ, ಕಳೆದ ಹಲವು ವರ್ಷಗಳಿಂದ ಜಿಮ್ ಟ್ರೈನರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಪ್ರಸ್ತುತ ಅವರು ಪುತ್ತೂರಿನ ಕಲ್ಲಿಮಾರ್‌ನಲ್ಲಿ ವಾಸವಾಗಿದ್ದರು.ಜುಲೈ 5ರಂದು ಬೆಳಿಗ್ಗೆ ಸಚಿನ್ ರೈ ಅವರು ಕುಸಿದು ಬಿದ್ದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ತಕ್ಷಣ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ವೈದ್ಯರು ಅವರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಮೃತರು ತಾಯಿ ಗುಲಾಬಿ ಹಾಗೂ ಸಹೋದರಿಯನ್ನು ಅಗಲಿದ್ದಾರೆ. ತಮ್ಮ ಮಗನ ಸಾವಿನಲ್ಲಿ ಸಂಶಯವಿದೆ ಎಂದು ಆರೋಪಿಸಿ ಗುಲಾಬಿ ಅವರು ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಮುಂಬೈ: ನಗರದ ಮನ್ಖುರ್ದ್ ಪ್ರದೇಶದಲ್ಲಿ ಭಾನುವಾರ ರಾತ್ರಿ ಸುರಿದ ಭಾರೀ ಮಳೆಗೆ ನಾಲ್ಕು ಅಂತಸ್ತಿನ ಚಾಲ್ ಕಟ್ಟಡ ಕುಸಿದು 6 ಮಂದಿ ದುರ್ಮರಣಕ್ಕೀಡಾಗಿದ್ದದಾರೆ. ಮನ್ಖುರ್ದ್ ಪ್ರದೇಶದಲ್ಲಿರೋ ಹನುಮ ಮಂದಿರದ ಹಿಂದಿರುವ ಜನತಾ ನಗರದ ಚಾಲ್ ಸಂಖ್ಯೆ 5 ರಲ್ಲಿ ರಾತ್ರಿ 8.30ರ ಸುಮಾರಿಗೆ ದುರಂತ ಸಂಭವಿಸಿದೆ. ಚಾಲ್ ಅಂದ್ರೆ ಮುಂಬೈ ನಗರದಲ್ಲಿ ಕಂಡುಬರುವ ಒಂದು ವಿಶಿಷ್ಟವಾದ ವಸತಿ ಶೈಲಿಯಾಗಿದೆ. ಅಧಿಕಾರಿಗಳ ಪ್ರಕಾರ, ನೆಲ ಮತ್ತು 3ನೇ ಅಂತಸ್ತಿನ ಕಟ್ಟಡದ ಒಂದು ಭಾಗ ಇದ್ದಕ್ಕಿದ್ದಂತೆ ಕುಸಿದು 6 ಜನ ಮೃತಪಟ್ಟಿದ್ದು, ಶವಗಳು ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡಿವೆ. ಘಟನೆ ಬಳಿಕ ರಕ್ಷಣಾ ತಂಡಗಳು ಸ್ಥಳಕ್ಕೆ ದೌಡಾಯಿಸಿದ್ದು, ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಮೃತದೇಹಗಳನ್ನು ಹೊರತೆಗೆಯುವ ಕಾರ್ಯಾಚರಣೆ ಕೈಗೊಂಡಿವೆ. ಮುಂಬೈ ಅಗ್ನಿಶಾಮಕ ದಳ (MFB), ಮುಂಬೈ ಪೊಲೀಸರು, ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (BMC) ವಾರ್ಡ್ ಕಚೇರಿ ಮತ್ತು 108 ಆಂಬ್ಯುಲೆನ್ಸ್ ಸೇವೆಯ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದಾರೆ.



