Author: admin
ಮಂಗಳೂರು: ಕಂಕನಾಡಿ ನಾಗುರಿ ಪ್ರದೇಶದಲ್ಲಿ ಕಂಪೌಂಡ್ ವಾಲ್ ಕುಸಿದು ಸಂಭವಿಸಿದ ದುರಂತದಲ್ಲಿ ಮೃತಪಟ್ಟ ಇಬ್ಬರು ಪುಟ್ಟ ಮಕ್ಕಳಿಗೆ ಗುರುವಾರ ನಂದಿಗುಡ್ಡೆ ರುದ್ರಭೂಮಿಯಲ್ಲಿ ಕಣ್ಣೀರಿನ ವಿದಾಯ ಹೇಳಲಾಯಿತು. ಕುಟುಂಬಸ್ಥರ ಆಕ್ರಂದನ, ಬಂಧು-ಬಳಗ ಹಾಗೂ ಸ್ಥಳೀಯರ ದುಃಖದ ನಡುವೆ ಅಂತ್ಯಕ್ರಿಯೆ ನೆರವೇರಿತು. ದುರಂತದಲ್ಲಿ ಮೃತಪಟ್ಟ 8 ವರ್ಷದ ಅನಾಮಿಕ ಚೌರಾಸಿಯ ಹಾಗೂ 4 ವರ್ಷದ ಪರಿ (ತನು) ಅವರ ಪಾರ್ಥಿವ ಶರೀರವನ್ನು ಅಂತ್ಯಸಂಸ್ಕಾರಕ್ಕೂ ಮುನ್ನ ನಾಗುರಿಯಲ್ಲಿರುವ ನಿವಾಸಕ್ಕೆ ತರಲಾಗಿತ್ತು. ಸಾರ್ವಜನಿಕರು ಮತ್ತು ಸ್ಥಳೀಯ ನಿವಾಸಿಗಳಿಗೆ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದ್ದು, ನೂರಾರು ಮಂದಿ ಆಗಮಿಸಿ ಮಕ್ಕಳಿಗೆ ಅಂತಿಮ ನಮನ ಸಲ್ಲಿಸಿದರು. ಇನ್ನೇನು ಕೆಲವೇ ದಿನಗಳ ಹಿಂದೆ ಇದೇ ಪ್ರದೇಶದಲ್ಲಿ ಆಟವಾಡುತ್ತಿದ್ದ ಪುಟ್ಟ ಕಂದಮ್ಮಗಳನ್ನು ಜೀವವಿಲ್ಲದ ಸ್ಥಿತಿಯಲ್ಲಿ ಕಂಡು ಸ್ಥಳೀಯರು ಭಾವುಕರಾದರು. ಮಕ್ಕಳನ್ನು ಕಳೆದುಕೊಂಡ ಕುಟುಂಬದವರ ರೋಧನ ಇಡೀ ವಾತಾವರಣವನ್ನು ಮೌನದಲ್ಲಿ ಮುಳುಗಿಸಿತು. ಮೃತ ಮಕ್ಕಳ ಮನೆ ಸಮೀಪದಲ್ಲೇ ಇರುವ ಕಂಕನಾಡಿ ಪೊಲೀಸ್ ಠಾಣೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಯೂ ಸ್ಥಳಕ್ಕೆ ಭೇಟಿ ನೀಡಿ ಅಂತಿಮ ದರ್ಶನ…
ಬೆಂಗಳೂರು: ನಗರದ ಪ್ರಮುಖ ರಸ್ತೆಗಳಲ್ಲಿನ ಪಾದಚಾರಿ ಸಂಚಾರವನ್ನು ಸುರಕ್ಷಿತಗೊಳಿಸುವ ಉದ್ದೇಶದಿಂದ ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಮಹತ್ವದ ನಿರ್ಧಾರ ಕೈಗೊಂಡಿದೆ. ನಗರದ ಸುಮಾರು 1,500 ಕಿಲೋಮೀಟರ್ ಉದ್ದದ ಪ್ರಮುಖ, ಉಪ-ಪ್ರಮುಖ ಹಾಗೂ ಮುಖ್ಯ ರಸ್ತೆಗಳನ್ನು ‘ನಾನ್-ವೆಂಡಿಂಗ್ ಝೋನ್’ (Non-Vending Zone) ಎಂದು ಘೋಷಿಸಲು ಯೋಜನೆ ರೂಪಿಸಲಾಗಿದೆ. ಉಳಿದ ರಸ್ತೆಗಳಲ್ಲಿ ಪಾದಚಾರಿಗಳಿಗೆ ಯಾವುದೇ ಅಡಚಣೆ ಉಂಟಾಗದಂತೆ ಬೀದಿ ವ್ಯಾಪಾರಿಗಳಿಗೆ ವ್ಯಾಪಾರ ನಡೆಸಲು ಅವಕಾಶ ನೀಡಲಾಗುತ್ತದೆ. ಈ ಕುರಿತು ಸೋಮವಾರ ನಡೆದ ವರ್ಚುವಲ್ ಸಭೆಯಲ್ಲಿ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅಧ್ಯಕ್ಷತೆ ವಹಿಸಿ ಅಧಿಕಾರಿಗಳಿಗೆ ಅಗತ್ಯ ಸೂಚನೆಗಳನ್ನು ನೀಡಿದರು. ಬುಧವಾರದಿಂದ ನಗರದ ಐದು ನಗರ ನಿಗಮಗಳ ವ್ಯಾಪ್ತಿಯಲ್ಲಿ ಆರಂಭವಾಗಲಿರುವ ‘ಸೇಫ್ ಫುಟ್‌ಪಾತ್ ಕ್ಯಾಂಪೇನ್’ ಹಿನ್ನೆಲೆಯಲ್ಲಿ, ಸುಪ್ರೀಂ ಕೋರ್ಟ್ ನಿರ್ದೇಶನಗಳು ಹಾಗೂ ಬೀದಿ ವ್ಯಾಪಾರಿಗಳ (ಜೀವನೋಪಾಯ ರಕ್ಷಣೆ ಮತ್ತು ಬೀದಿ ವ್ಯಾಪಾರ ನಿಯಂತ್ರಣ) ಕಾಯ್ದೆ-2014 ಅನ್ವಯ ಪಾದಚಾರಿ ಮಾರ್ಗಗಳ ಮೇಲಿನ ಅತಿಕ್ರಮಣ ತೆರವು ಕಾರ್ಯವನ್ನು ಕೈಗೊಳ್ಳುವಂತೆ ಸೂಚಿಸಿದರು. ಬೆಂಗಳೂರು ನಗರದಲ್ಲಿ ಸುಮಾರು 15…
ಬೆಂಗಳೂರು : ಸಿಲಿಕಾನ್ ಸಿಟಿಯ ಪ್ರತಿಷ್ಠಿತ ಐಟಿ ಕಂಪನಿಯೊಂದರ ಆವರಣದಲ್ಲಿರುವ ಮಕ್ಕಳ ಆರೈಕೆ ಕೇಂದ್ರದಲ್ಲಿ (ಡೇಕೇರ್) ಎರಡರಿಂದ ಮೂರು ವರ್ಷದ ಪುಟ್ಟ ಮಕ್ಕಳ ಮೇಲೆ ನಡೆದಿರುವ ಭೀಕರ ಮತ್ತು ಅಮಾನವೀಯ ದೌರ್ಜನ್ಯದ ಪ್ರಕರಣ ಇಡೀ ನಾಗರಿಕ ಸಮಾಜವೇ ತಲೆತಗ್ಗಿಸುವಂತೆ ಮಾಡಿದೆ. ಮಕ್ಕಳನ್ನು ಮುಂಭಾಗದಿಂದ ಲೋಡ್ ಮಾಡುವ ವಾಷಿಂಗ್ ಮೆಷಿನ್‌ನ ಡ್ರಮ್ ಒಳಗೆ ಕೂರಿಸುವುದು, ಬಾಯಿಗೆ ಟಾಯ್ಲೆಟ್ ಜೆಟ್ ಸ್ಪ್ರೇ ಮೂಲಕ ಬಲವಂತವಾಗಿ ನೀರು ಹೊಡೆಯುವುದು ಹಾಗೂ ಬಾತ್‌ರೂಮ್‌ಗಳಲ್ಲಿ ಕೂಡಿ ಹಾಕಿ ಬೀಗ ಹಾಕುವ ಕ್ರೂರ ಶಿಕ್ಷೆ ಇಲ್ಲಿ ಬೆಳಕಿಗೆ ಬಂದಿದೆ. ಬೆಂಗಳೂರಿನ ಹೆಚ್‌ಎಎಲ್ (HAL) ಕ್ಯಾಂಪಸ್‌ನಲ್ಲಿರುವ ‘ಕ್ಯಾಪ್‌ಜೆಮಿನಿ’ ಐಟಿ ಸಂಸ್ಥೆಯ ಒಳಗಿನ ಡೇಕೇರ್‌ನಲ್ಲಿ ಈ ಘಟನೆ ನಡೆದಿದ್ದು, ದೌರ್ಜನ್ಯ ಎಸಗಿದ ಐದು ಮಂದಿ ಮಹಿಳಾ ಆರೈಕೆದಾರರ (Care-takers) ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಪುಟ್ಟ ಮಕ್ಕಳು ಅತ್ತಾಗ ಅವರನ್ನು ಮೌನಗೊಳಿಸಲು ಆರೈಕೆದಾರರು ಇಂತಹ ವಿಕೃತ ಮಾರ್ಗಗಳನ್ನು ಬಳಸುತ್ತಿದ್ದರು ಎನ್ನಲಾಗಿದೆ. ಈ ಅಮಾನವೀಯ ದೌರ್ಜನ್ಯದ ಆಘಾತಕಾರಿ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್…
ಬಳ್ಳಾರಿ: ಮದುವೆಯಾಗುವುದಾಗಿ ನಂಬಿಸಿ ಅಪ್ರಾಪ್ತ ವಿದ್ಯಾರ್ಥಿನಿಯೊಂದಿಗೆ ಉಪನ್ಯಾಸಕನೇ ಅನೈತಿಕ ಸಂಬಂಧ ಬೆಳೆಸಿ, ಲೈಂಗಿಕ ದೌರ್ಜನ್ಯ ಎಸಗಿರುವ ಆಘಾತಕಾರಿ ಘಟನೆ ಬಳ್ಳಾರಿಯಲ್ಲಿ ಬೆಳಕಿಗೆ ಬಂದಿದೆ. ಬಳ್ಳಾರಿ ನಗರದ ಖಾಸಗಿ ಕಾಲೇಜಿನ ಸಸ್ಯಶಾಸ್ತ್ರ ವಿಭಾಗದ ಉಪನ್ಯಾಸಕ ರವಿಕಿರಣ್ ಎಂಬಾತನನ್ನು ಬಂಧಿಸಲಾಗಿದೆ. ವಿಚಾರಣೆ ವೇಳೆ ರವಿಕಿರಣ್ ಗೆ ಮೊದಲೇ ಮದುವೆಯಾಗಿದ್ದು ಇಬ್ಬರು ಮಕ್ಕಳಿದ್ದಾರೆ ಎಂದು ತಿಳಿದುಬಂದಿದೆ. 2025ರಲ್ಲಿ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಅಪ್ರಾಪ್ತ ವಿದ್ಯಾರ್ಥಿನಿ ಜೊತೆಗೆ ರವಿಕಿರಣ್ ಗೆ ಪರಿಚಯ ಬೆಳೆದಿತ್ತು. ಬಳಿಕ ನಿನ್ನನ್ನು ಪ್ರಾಣಕ್ಕಿಂತ ಹೆಚ್ಚಾಗಿ ಪ್ರೀತಿಸುತ್ತೇನೆ. ನಿನ್ನನ್ನೇ ಮದುವೆಯಾಗುತ್ತೇನೆ ಎಂದು ನಂಬಿಸಿ ವಿದ್ಯಾರ್ಥಿನಿ ಜೊತೆ ಹಲವು ಬಾರಿ ಲೈಂಗಿಕ ಕ್ರಿಯೆ ನಡೆಸಿದ್ದಾನೆ. ಇನ್ನು ರವಿಕಿರಣ್‌ಗೆ ಈಗಾಗಲೇ ಮದುವೆಯಾಗಿದ್ದು, ಇಬ್ಬರು ಮಕ್ಕಳಿರುವ ವಿಚಾರ ತಿಳಿದು ವಿದ್ಯಾರ್ಥಿನಿ ತೀವ್ರ ಆಘಾತಕ್ಕೊಳಗಾಗಿದ್ದಾಳೆ. ಅಲ್ಲದೆ ಪೋಷಕರು ಜೊತೆ ಬಳ್ಳಾರಿ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ವಿದ್ಯಾರ್ಥಿನಿಯ ದೂರು ಆಧರಿಸಿ ಬಳ್ಳಾರಿ ಮಹಿಳಾ ಠಾಣೆ ಪೊಲೀಸರು ರವಿಕಿರಣ್ ವಿರುದ್ಧ ಪೋಕ್ಸೋ ಕಾಯ್ದೆ ಹಾಗೂ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ವಿವಿಧ ಸೆಕ್ಷನ್‌ಗಳಡಿ…
ಬೆಂಗಳೂರು: ಗೃಹಜ್ಯೋತಿ 200 ಯೂನಿಟ್ವರೆಗೆ ಉಚಿತ ವಿದ್ಯುತ್ ನೀಡುವ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ. ಅನರ್ಹರಿಗೆ ಗ್ಯಾರಂಟಿ ಯೋಜನೆ ಲಾಭ ಸಿಗಬಾರದೆಂದು ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ಫಿಲ್ಟರ್ ಮಾಡುತ್ತಿದೆ. ಇದರ ಭಾಗವಾಗಿ ರಾಜ್ಯಾದ್ಯಂತ ಆಪರೇಷನ್ ಗೃಹಜ್ಯೋತಿ ಶುರುವಾಗಿದೆ. ಹೀಗಾಗಿ ಜುಲೈನಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ. ಕಳೆದ 3 ತಿಂಗಳ ಸರಾಸರಿ ವಿದ್ಯುತ್ ಬಳಕೆಯ ಆಧಾರದ ಮೇಲೆ ಜುಲೈ ತಿಂಗಳ ಬಿಲ್ ನೀಡಲು ಬೆಸ್ಕಾಂ ಮುಂದಾಗಿದೆ. ಈ ಕುರಿತಾಗಿ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ ಮಾಧ್ಯಮ ಪ್ರಕಟಣೆ ಹೊರಡಿಸಿದೆ. ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿಯ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆ-ಮನೆ ಪರಿಶೀಲನಾ ಕಾರ್ಯಕ್ಕೆ ಬೆಸ್ಕಾಂ ಮೀಟರ್ ರೀಡರ್‌ಗಳನ್ನು ನಿಯೋಜಿಸಲಾಗಿದೆ. ಈ ನಿಟ್ಟಿನಲ್ಲಿ ಜುಲೈ ತಿಂಗಳಲ್ಲಿ ನಿಯಮಿತ ಮೀಟರ್ ರೀಡಿಂಗ್ ಇರುವುದಿಲ್ಲ. ಇನ್ನು ಮೀಟರ್ ರೀಡಿಂಗ್ ಬದಲಾಗಿ, ಗ್ರಾಹಕರಿಗೆ ಜುಲೈ ತಿಂಗಳಲ್ಲಿ ಸರಾಸರಿ ಬಿಲ್ ನೀಡಲಾಗುತ್ತದೆ. ಅಂದರೆ ಕಳೆದ 3 ತಿಂಗಳ ನಿಮ್ಮ ಸರಾಸರಿ ವಿದ್ಯುತ್ ಬಳಕೆಯ ಆಧಾರದ ಮೇಲೆ ಜುಲೈ ತಿಂಗಳ…
ಧಾರವಾಡ: ಬಸ್ ಪ್ರಯಾಣದ ವೇಳೆ ಕಿಟಕಿಯಿಂದ ತಲೆ ಹೊರಹಾಕಿದ್ದ ಯುವಕನಿಗೆ ಹಿಂಬದಿಯಿಂದ ಬಂದ ವೇಗದೂತ ಟಿಪ್ಪರ್ ಲಾರಿಯೊಂದು ಭೀಕರವಾಗಿ ಢಿಕ್ಕಿ ಹೊಡೆದ ಪರಿಣಾಮ ಯುವಕನ ರುಂಡ ತುಂಡಾಗಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲೂಕಿನ ಶೆರೆವಾಡ ಗ್ರಾಮದ ಸಮೀಪ ನಡೆದಿದೆ. ಶಿರೂರು ಗ್ರಾಮದ ನಿವಾಸಿ ಪಕ್ಕಿರಯ್ಯ ಚನ್ನಯ್ಯ ಮುತ್ತಳ್ಳಿಮಠ (18) ಮೃತಪಟ್ಟ ದುರ್ದೈವಿ. ಈತ ಹುಬ್ಬಳ್ಳಿಯ ಕಾಲೇಜೊಂದರಲ್ಲಿ ಐಟಿಐ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಯಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಪಕ್ಕಿರಯ್ಯ ಎಂದಿನಂತೆ ಹುಬ್ಬಳ್ಳಿಯಿಂದ ಲಕ್ಷ್ಮೇಶ್ವರ ಕಡೆಗೆ ತೆರಳುತ್ತಿದ್ದ ವಾಯವ್ಯ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ. ಬಸ್‌ನ ಹಿಂಬದಿಯ ಸೀಟಿನಲ್ಲಿ ಕುಳಿತಿದ್ದ ಆತ, ಚಲಿಸುವ ಬಸ್‌ನ ಕಿಟಕಿಯಿಂದ ತನ್ನ ತಲೆಯನ್ನು ಹೊರಹಾಕಿದ್ದಾನೆ ಎನ್ನಲಾಗಿದೆ. ಇದೇ ವೇಳೆ ಅದೇ ಮಾರ್ಗದಲ್ಲಿ ಹಿಂಬದಿಯಿಂದ ಅತಿ ವೇಗವಾಗಿ ಬಂದ ಭಾರಿ ಗಾತ್ರದ ಟಿಪ್ಪರ್ ಲಾರಿಯೊಂದು, ಬಸ್‌ಗೆ ತೀರಾ ಸಮೀಪವಾಗಿ ಓವರ್‌ಟೇಕ್ ಮಾಡಲು ಮುಂದಾಗಿದೆ. ಈ ವೇಳೆ ಟಿಪ್ಪರ್‌ನ ಪಾರ್ಶ್ವ ಭಾಗವು ಕಿಟಕಿಯಿಂದ ಹೊರಗಿದ್ದ ಯುವಕನ ತಲೆಗೆ ಭೀಕರವಾಗಿ ಅಪ್ಪಳಿಸಿದೆ. ಡಿಕ್ಕಿಯ…
ಮಂಗಳೂರು: ರಾಜ್ಯದಲ್ಲಿ ಸುರಿಯುತ್ತಿರುವ ಭಾರಿ ಮಳೆಯ ನಡುವೆಯೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭೂಕುಸಿತದ ಅಪಾಯ ಮತ್ತಷ್ಟು ತೀವ್ರಗೊಂಡಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಹಾಗೂ ಜಿಲ್ಲಾಡಳಿತವು ಜಿಲ್ಲೆಯ 88 ಪ್ರದೇಶಗಳನ್ನು ಭೂಕುಸಿತ ಸಂಭವಿಸುವ ಅತಿ ಹೆಚ್ಚು ಅಪಾಯದ ವಲಯಗಳಾಗಿ (Danger Zone) ಗುರುತಿಸಿದ್ದು, ಸಾರ್ವಜನಿಕರು ಮಳೆಗಾಲದಲ್ಲಿ ಅತ್ಯಂತ ಎಚ್ಚರಿಕೆಯಿಂದ ಇರಬೇಕೆಂದು ಸೂಚಿಸಿದೆ. ಅಧಿಕೃತ ಮಾಹಿತಿಯಂತೆ, ಕಳೆದ ಐದು ವರ್ಷಗಳಲ್ಲಿ ಜಿಲ್ಲೆಯಲ್ಲಿ ಸಂಭವಿಸಿದ ಭೂಕುಸಿತ ಪ್ರಕರಣಗಳಲ್ಲಿ 17 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಪ್ರಸಕ್ತ ವರ್ಷದಲ್ಲಿಯೂ ಈಗಾಗಲೇ ಮೂರು ಮಂದಿ ಮೃತಪಟ್ಟಿರುವುದು ಆತಂಕಕ್ಕೆ ಕಾರಣವಾಗಿದೆ. ಅಪಾಯದ ಪಟ್ಟಿಯಲ್ಲಿ ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಘಾಟ್, ನೆರಿಯ, ಶಿಶಿಲ, ಮಂಗಳೂರು ಸಮೀಪದ ಕೆತ್ತಿಕಲ್, ಹಾಗೆಯೇ ಬಂಟ್ವಾಳ, ಪುತ್ತೂರು, ಸುಳ್ಯ, ಕಡಬ ಹಾಗೂ ಉಳ್ಳಾಲವ್ಯಾಪ್ತಿಯ ಹಲವು ಪ್ರದೇಶಗಳು ಸೇರಿವೆ. ಭೂಕುಸಿತದ ಅಪಾಯವನ್ನು ಅಧ್ಯಯನ ಮಾಡಲು ಐಐಟಿ ಧಾರವಾಡ ನಡೆಸಿದ ವೈಜ್ಞಾನಿಕ ಸಂಶೋಧನೆ ಹಾಗೂ ಕೃತಕ ಬುದ್ಧಿಮತ್ತೆ (AI) ಆಧಾರಿತ ವಿಶ್ಲೇಷಣೆಯ ವರದಿ ಪ್ರಕಾರ, ದಕ್ಷಿಣ ಕನ್ನಡ…
ಉಪ್ಪಿನಂಗಡಿ: ಮಠ ನಿವಾಸಿ ಆದಂ ಅವರ ಮನೆಯಲ್ಲಿ ಬುಧವಾರ ಸಂಜೆ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಲಕ್ಷಾಂತರ ರೂಪಾಯಿ ಮೌಲ್ಯದ ಗೃಹೋಪಯೋಗಿ ವಸ್ತುಗಳು ಸುಟ್ಟು ಕರಕಲಾಗಿವೆ. ಪ್ರಾಥಮಿಕ ಮಾಹಿತಿಯ ಪ್ರಕಾರ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದಲೇ ಈ ಅವಘಡ ಸಂಭವಿಸಿದೆ ಎಂದು ಶಂಕಿಸಲಾಗಿದೆ. ಬೆಂಕಿ ಅವಘಡದಲ್ಲಿ ಮನೆಯಲ್ಲಿದ್ದ ಟಿ.ವಿ., ವಿವಿಧ ವಿದ್ಯುತ್ ಉಪಕರಣಗಳು, ಕಪಾಟು, ಬಟ್ಟೆ, ಅಗತ್ಯ ದಾಖಲೆ ಪತ್ರಗಳು ಹಾಗೂ ಮನೆಯ ವಿದ್ಯುತ್ ಸಂಪರ್ಕದ ವೈರ್‌ಗಳು ಸಂಪೂರ್ಣವಾಗಿ ಸುಟ್ಟುಹೋಗಿವೆ. ಘಟನೆಯಿಂದ ಸುಮಾರು ರೂ. 3 ಲಕ್ಷಕ್ಕೂ ಅಧಿಕ ನಷ್ಟ ಉಂಟಾಗಿದೆ ಎಂದು ಅಂದಾಜಿಸಲಾಗಿದೆ. ಘಟನೆ ನಡೆದ ವೇಳೆ ಮನೆಯ ಮಾಲೀಕ ಆದಂ ಅವರು ತಮ್ಮ ಪತ್ನಿಯನ್ನು ಔಷಧಕ್ಕಾಗಿ ಉಪ್ಪಿನಂಗಡಿಗೆ ಕರೆದುಕೊಂಡು ಹೋಗಿದ್ದರು. ಅವರೊಂದಿಗೆ ಪುತ್ರಿಯೂ ತೆರಳಿದ್ದರು. ಆ ಸಮಯದಲ್ಲಿ ಶಾಲೆಯಿಂದ ಬಂದಿದ್ದ ಮೊಮ್ಮಕ್ಕಳು ಮಾತ್ರ ಮನೆಯಲ್ಲಿ ಇದ್ದರು. ಮನೆಯೊಳಗೆ ಹೊಗೆ ಮತ್ತು ಬೆಂಕಿ ಕಾಣಿಸುತ್ತಿದ್ದಂತೆ ಮಕ್ಕಳು ತಕ್ಷಣ ಪಕ್ಕದ ಮನೆಯವರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳೀಯರು ಧಾವಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು. ಆದರೆ…
ನವದೆಹಲಿ: ಮೂರು ದಿನಗಳ ಅಧಿಕೃತ ಭಾರತ ಪ್ರವಾಸಕ್ಕಾಗಿ ಜಪಾನ್ ಪ್ರಧಾನಿ ಸನಾಯೆ ತಕೈಚಿ ಅವರು ನವದೆಹಲಿಗೆ ಆಗಮಿಸಿದ್ದು, ರಾಷ್ಟ್ರಪತಿ ಭವನದಲ್ಲಿ ಅವರಿಗೆ ಸಾಂಪ್ರದಾಯಿಕ ಹಾಗೂ ಅದ್ಧೂರಿ ಸ್ವಾಗತ ಕೋರಲಾಯಿತು. ಭಾರತ ಮತ್ತು ಜಪಾನ್ ನಡುವಿನ ದೀರ್ಘಕಾಲದ ಸ್ನೇಹ ಹಾಗೂ ಕಾರ್ಯತಂತ್ರದ ಪಾಲುದಾರಿಕೆಗೆ ಈ ಭೇಟಿ ಮತ್ತಷ್ಟು ಬಲ ತುಂಬುವ ನಿರೀಕ್ಷೆ ಮೂಡಿಸಿದೆ. ಸ್ವಾಗತ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಜಪಾನ್ ಪ್ರಧಾನಿ ಸನಾಯೆ ತಕೈಚಿ ಅವರನ್ನು ಆತ್ಮೀಯವಾಗಿ ಬರಮಾಡಿಕೊಂಡರು. ಬಳಿಕ ಉಭಯ ನಾಯಕರು ತಮ್ಮ ತಮ್ಮ ದೇಶಗಳ ಕೇಂದ್ರ ಸಚಿವರು, ಹಿರಿಯ ಅಧಿಕಾರಿಗಳು ಹಾಗೂ ರಾಜತಾಂತ್ರಿಕ ನಿಯೋಗದ ಸದಸ್ಯರನ್ನು ಪರಸ್ಪರ ಪರಿಚಯಿಸಿಕೊಂಡರು. ಈ ಪ್ರವಾಸದ ಪ್ರಮುಖ ಆಕರ್ಷಣೆಯಾಗಿರುವ 16ನೇ ಭಾರತ-ಜಪಾನ್ ವಾರ್ಷಿಕ ಶೃಂಗಸಭೆಯಲ್ಲಿ ಉಭಯ ರಾಷ್ಟ್ರಗಳ ನಾಯಕರು ಭಾಗವಹಿಸಲಿದ್ದಾರೆ. ಶೃಂಗಸಭೆಯಲ್ಲಿ ರಕ್ಷಣಾ ಸಹಕಾರ, ತಂತ್ರಜ್ಞಾನ ಅಭಿವೃದ್ಧಿ, ಆರ್ಥಿಕ ಪಾಲುದಾರಿಕೆ, ಹೂಡಿಕೆ, ವ್ಯಾಪಾರ ವಿಸ್ತರಣೆ ಹಾಗೂ ಇಂಡೋ-ಪೆಸಿಫಿಕ್ ಪ್ರದೇಶದ ಭದ್ರತೆ ಸೇರಿದಂತೆ ಹಲವು ಮಹತ್ವದ ವಿಷಯಗಳ ಕುರಿತು ಸಮಗ್ರ ಚರ್ಚೆ ನಡೆಯಲಿದೆ.…
ರಾಮನಗರ: ರಾಮನಗರ ಜಿಲ್ಲೆಯ ಬೆಂಗಳೂರು ದಕ್ಷಿಣ ತಾಲೂಕಿನ ಮಾದಪಟ್ಟಣ ಗ್ರಾಮದ ಸಮೀಪದ ಕಾವೇರಿ ಕ್ರಷರ್ ಕಲ್ಲು ಕ್ವಾರಿಯಲ್ಲಿ ಸಂಭವಿಸಿದ ಭೀಕರ ದುರಂತದಲ್ಲಿ ಬಂಡೆ ಕುಸಿದು 7 ಮಂದಿ ಕೂಲಿ ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬುಧವಾರ ಮುಂಜಾನೆ ಸುಮಾರು 5 ಗಂಟೆ ಸುಮಾರಿಗೆ ಈ ಅವಘಡ ಸಂಭವಿಸಿದ್ದು, ಸುಮಾರು 40 ಅಡಿ ಎತ್ತರದಿಂದ ಬೃಹತ್ ಬಂಡೆ ಕುಸಿದ ಪರಿಣಾಮ ಭಾರೀ ಅನಾಹುತ ನಡೆದಿದೆ. ದುರಂತದ ವೇಳೆ ಕ್ವಾರಿಯಲ್ಲಿ ಸುಮಾರು 10 ರಿಂದ 15 ಮಂದಿ ಬಿಹಾರ ಮೂಲದ ಕಾರ್ಮಿಕರು ಹಾಗೂ 2 ರಿಂದ 3 ಮಂದಿ ಸ್ಥಳೀಯ ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಹಿಟಾಚಿ ಯಂತ್ರದ ಮೂಲಕ ಕಾಮಗಾರಿ ನಡೆಯುತ್ತಿದ್ದಾಗ ಏಕಾಏಕಿ ಬಂಡೆ ಕುಸಿದು ಕಾರ್ಮಿಕರ ಮೇಲೆ ಬಿದ್ದಿದೆ ಎಂದು ತಿಳಿದುಬಂದಿದೆ. ಘಟನೆಯಲ್ಲಿ 5 ಮಂದಿ ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಕೂಡಲೇ ಆರ್.ಆರ್. ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗಾಯಾಳುಗಳ ಸ್ಥಿತಿ ಗಂಭೀರವಾಗಿರುವ ಹಿನ್ನೆಲೆಯಲ್ಲಿ ಸಾವಿನ ಸಂಖ್ಯೆ ಹೆಚ್ಚಾಗುವ ಆತಂಕ ವ್ಯಕ್ತವಾಗಿದೆ. ದುರಂತದ…



