Author: admin
ಬೆಂಗಳೂರು:ರಾಜ್ಯ ಸರ್ಕಾರವು ಸ್ಟೋನ್ ಕ್ರಷರ್ ಮಾಲೀಕರಿಗೆ ಸುಮಾರು ₹4,850 ಕೋಟಿ ರಾಯಲ್ಟಿ ಮತ್ತು ದಂಡ ಪಾವತಿಸುವಂತೆ ನೋಟಿಸ್ ನೀಡಿರುವುದನ್ನು ಖಂಡಿಸಿ ರಾಜ್ಯಾದ್ಯಂತ ಕ್ರಷರ್ ಮಾಲೀಕರು ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಿದ್ದಾರೆ. ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಕ್ರಮದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಉದ್ಯಮಿಗಳು, ಸರ್ಕಾರ ತನ್ನ ಆದೇಶವನ್ನು ಹಿಂಪಡೆಯುವವರೆಗೆ ಹೋರಾಟ ಮುಂದುವರಿಯಲಿದೆ ಎಂದು ಘೋಷಿಸಿದ್ದಾರೆ. ಮುಷ್ಕರದ ಪರಿಣಾಮವಾಗಿ ಜಲ್ಲಿಕಲ್ಲು ಹಾಗೂ ಎಂ-ಸ್ಯಾಂಡ್ ಉತ್ಪಾದನೆ ಮತ್ತು ಸರಬರಾಜು ಸ್ಥಗಿತಗೊಂಡಿದ್ದು, ನಿರ್ಮಾಣ ಕ್ಷೇತ್ರದ ಮೇಲೆ ಅದರ ಪರಿಣಾಮ ಗೋಚರಿಸಲು ಆರಂಭವಾಗಿದೆ. ಬೆಂಗಳೂರು, ರಾಮನಗರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿನ ನೂರಾರು ಕ್ರಷರ್‌ಗಳು ಇಂದಿನಿಂದಲೇ ಕಾರ್ಯಾಚರಣೆ ನಿಲ್ಲಿಸಿವೆ. ಸರ್ಕಾರವು ಅವೈಜ್ಞಾನಿಕ ಹಾಗೂ ನಿಯಮಬಾಹಿರವಾಗಿ ಭಾರೀ ಪ್ರಮಾಣದ ದಂಡ ವಿಧಿಸಿದೆ ಎಂದು ಆರೋಪಿಸಿರುವ ಕ್ರಷರ್ ಮಾಲೀಕರು, ಈ ನಿರ್ಧಾರದಿಂದ ಮೆಟ್ರೋ ಸೇರಿದಂತೆ ಹಲವು ಪ್ರಮುಖ ಮೂಲಸೌಕರ್ಯ ಯೋಜನೆಗಳಿಗೂ ತೀವ್ರ ಹಿನ್ನಡೆಯಾಗುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಿದ್ದಾರೆ. ತುಮಕೂರು, ಮಂಡ್ಯ, ಮೈಸೂರು ಸೇರಿದಂತೆ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿಯೂ ಮುಷ್ಕರದ…
ಶಿವಮೊಗ್ಗ: ಗಾಂಜಾ ಮಾರಾಟ ವಿರೋಧಿಸಿದ್ದಕ್ಕೆ ಅಜ್ಜಿಯನ್ನೇ ಹತ್ಯೆ ಮಾಡಿದ್ದ ಮೊಮ್ಮಗನ ಕಾಲಿಗೆ ಶಿವಮೊಗ್ಗ ಪೊಲೀಸರು ಗುಂಡೇಟು ನೀಡಿದ್ದಾರೆ. ಕೊಲೆ ಆರೋಪಿ ಕಿಶೋರ್ (28) ಕಾಲಿಗೆ ಶಿವಮೊಗ್ಗ ನಗರ ಹೊರವಲಯ ವಾಜಪೇಯಿ ಲೇಔಟ್‌ನಲ್ಲಿ ಪೊಲೀಸರು ಗುಂಡೇಟು ನೀಡಿದ್ದಾರೆ. ಆರೋಪಿ ಬಂಧನಕ್ಕೆ ತೆರಳಿದ್ದ ವೇಳೆ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದ. ತಕ್ಷಣವೇ ದೊಡ್ಡಪೇಟೆ ಇನ್‌ಸ್ಪೆಕ್ಟರ್ ಗಾಳಿಯಲ್ಲಿ ಫೈರ್ ಮಾಡಿ ಆರೋಪಿಗೆ ಎಚ್ಚರಿಕೆ ನೀಡಿದ್ದರು. ಮಾತು ಕೇಳದ ಹಿನ್ನೆಲೆಯಲ್ಲಿ ಕಿಶೋರ್ ಕಾಲಿಗೆ ಫೈರ್ ಮಾಡಿ ಬಂಧಿಸಿದ್ದಾರೆ. ಗಾಯಾಳು ಕಿಶೋರ್‌ನನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಶಿಫ್ಟ್ ಮಾಡಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಪೊಲೀಸ್ ಸಿಬ್ಬಂದಿ ಗಣೇಶ್ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಶಿವಮೊಗ್ಗದ ತುಂಗಾನಗರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ನಿನ್ನೆ ಸಂಜೆ ಗಾಂಜಾ ಗಲಾಟೆ ಭಾಗವಾಗಿ ಅಜ್ಜಿಯನ್ನ ಆರೋಪಿ ಕಿಶೋರ್ ಕೊಲೆ ಮಾಡಿದ್ದ. ಸುಶೀಲಮ್ಮ ತಲೆ ಮೇಲೆ ಕಲ್ಲು ಎತ್ತಿ ಹಾಕಿ, ಸಾಯಿಸಿದ್ದ. ಈತನ ಮೇಲೆ ಗಾಂಜಾ ಪೆಡ್ಲರ್ ಹಾಗೂ ಗಾಂಜಾ ಸೇವನೆ ಕೇಸ್ ಇತ್ತು.
ಮಂಗಳೂರು: ಗಂಜಿಮಠ ಮತ್ತು ಎಡಪದವು ಸೇತುವೆ ಸಂಪರ್ಕ ರಸ್ತೆಯಲ್ಲಿ ಕಳಪೆ ಕಾಮಗಾರಿ ಹಿನ್ನೆಲೆ ರಸ್ತೆ ಕುಸಿದಿದ್ದು, ಗುರುವಾರ ಮುಂಜಾನೆ ಲಾರಿಯೊಂದು ಭೂಕುಸಿತದ ಭಾಗದಲ್ಲಿ ಸಿಲುಕಿಕೊಂಡ ಘಟನೆ ನಡೆದಿದೆ. ಹೈವೇ ಸೇತುವೆ ಸಮೀಪ ನಡೆದ ಈ ಘಟನೆಯಿಂದ ಕೆಲಕಾಲ ವಾಹನ ಸಂಚಾರಕ್ಕೆ ಅಡಚಣೆ ಉಂಟಾಯಿತು. ರಸ್ತೆ ಕಾಮಗಾರಿಯ ಗುಣಮಟ್ಟದ ಬಗ್ಗೆ ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ್ದು, ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ಸ್ಥಳ ಪರಿಶೀಲನೆ ನಡೆಸಿ ಶಾಶ್ವತ ಪರಿಹಾರ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.ಲಾರಿಯನ್ನು ಹೊರತೆಗೆಯುವ ಕಾರ್ಯ ನಡೆಸಲಾಗಿದ್ದು, ರಸ್ತೆ ಸುರಕ್ಷತೆ ಕುರಿತು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ.
ಮಂಗಳೂರು: ಕಳ್ಳತನ ಪ್ರಕರಣವೊಂದರಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ಕಳೆದ ಒಂಬತ್ತು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ. ಆಂಧ್ರಪ್ರದೇಶದ ಚಿತ್ತೂರು ನಿವಾಸಿ ಶ್ರೀನಿವಾಸುಲು ವಿ. ಬಂಧಿತ ಆರೋಪಿ. ಈತ ಧರ್ಮಸ್ಥಳ ಪೊಲೀಸ್ ಠಾಣೆಯ ಕ್ರೈಂ ನಂ. 169/2016 (ಭಾರತೀಯ ದಂಡ ಸಂಹಿತೆಯ ಸೆಕ್ಷನ್ 379 ಮತ್ತು 201ರ ಅಡಿಯಲ್ಲಿ) ಪ್ರಕರಣಕ್ಕೆ ಸಂಬಂಧಿಸಿದಂತೆ ಬೇಕಾಗಿದ್ದ ಆರೋಪಿಯಾಗಿದ್ದನು. ಧರ್ಮಸ್ಥಳ ಪೊಲೀಸ್ ಠಾಣೆಯ ಸಿಬ್ಬಂದಿಗಳಾದ ವೃಷಭ್ ಮತ್ತು ಚರಣ್ ರಾಜ್ ಅವರು ಜೂನ್ 30 ರಂದು ಆಂಧ್ರಪ್ರದೇಶದ ಚಿತ್ತೂರಿನಲ್ಲಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯನ್ನು ಜುಲೈ 1 ರಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರಂತರ ಭಾರೀ ಮಳೆಯ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಈ ಕಾರಣದಿಂದ ಜಿಲ್ಲಾಧಿಕಾರಿಗಳು ಜುಲೈ 2ರಂದು ಅಂಗನವಾಡಿ ಕೇಂದ್ರಗಳಿಂದ ಹಿಡಿದು ಪದವಿಪೂರ್ವ ಕಾಲೇಜುಗಳವರೆಗೆ ಎಲ್ಲ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಿದ್ದಾರೆ. ಇದರ ನಡುವೆಯೇ ಕೆಲವು ಖಾಸಗಿ ಶಾಲೆ ಹಾಗೂ ಕಾಲೇಜುಗಳು ಜು.2ರಂದು ಎಂದಿನಂತೆ ತರಗತಿಗಳನ್ನು ನಡೆಸಲಿವೆ ಎಂಬ ಮಾಹಿತಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಈ ಬೆಳವಣಿಗೆಗೆ ಪ್ರತಿಕ್ರಿಯಿಸಿರುವ ಜಿಲ್ಲಾಧಿಕಾರಿಗಳು, ಜಿಲ್ಲಾಡಳಿತದ ರಜೆ ಆದೇಶವನ್ನು ಎಲ್ಲ ಶಿಕ್ಷಣ ಸಂಸ್ಥೆಗಳು ಕಡ್ಡಾಯವಾಗಿ ಪಾಲಿಸಬೇಕು ಎಂದು ಸ್ಪಷ್ಟಪಡಿಸಿದ್ದಾರೆ. ಸರ್ಕಾರದ ನಿರ್ದೇಶನವನ್ನು ಉಲ್ಲಂಘಿಸಿ ಯಾವುದೇ ಶಾಲೆ ಅಥವಾ ಕಾಲೇಜು ತರಗತಿಗಳನ್ನು ನಡೆಸಿದರೆ ಸಂಬಂಧಿತ ಸಂಸ್ಥೆಗಳ ವಿರುದ್ಧ ಕಾನೂನುಬದ್ಧ ಹಾಗೂ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ. ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ರಜೆ ಘೋಷಿಸಲಾಗಿರುವುದರಿಂದ ಶಿಕ್ಷಣ ಸಂಸ್ಥೆಗಳು ಜಿಲ್ಲಾಡಳಿತದ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚಿಸಲಾಗಿದೆ.
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆ ಸಮೀಪ ಅನುಮಾನಾಸ್ಪದ ರೀತಿಯಲ್ಲಿ 27 ವರ್ಷದ ಯುವಕನ ಮೃತದೇಹ ಪತ್ತೆಯಾಗಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ. ತಾಲೂಕಿನ ಕುವೆಟ್ಟು ಗ್ರಾಮದ ಶಕ್ತಿನಗರ ಸಮೀಪ ಇರುವ ಯನೋಪೊಯೋ ಖಾಸಗಿ ವಿದ್ಯುತ್ ಸಬ್‌ಸ್ಟೇಷನ್ ಜಾಗದಲ್ಲಿ ಮೃತದೇಹ ಪತ್ತೆಯಾಗಿದೆ. ಮೃತನನ್ನು ತಣ್ಣೀರುಪಂತ ಗ್ರಾಮದ ಕಲ್ಲೇರಿ ಜನತಾ ಕಾಲೋನಿ ನಿವಾಸಿ ಶರೀಫ್ ಕೆ. ಅವರ ಪುತ್ರ ಮುಸ್ತಾಕ್ (27) ಎಂದು ಗುರುತಿಸಲಾಗಿದೆ. ಮುಸ್ತಾಕ್ ಲಾರಿ ಚಾಲಕರಾಗಿ ಕೆಲಸ ಮಾಡುತ್ತಿದ್ದರು. ಮಗನನ್ನು ಕೊಲೆ ಮಾಡಲಾಗಿದೆ ಎಂದು ಮೃತನ ತಂದೆ ಶರೀಫ್ ಶಂಕೆ ವ್ಯಕ್ತಪಡಿಸಿದ್ದು, ಪ್ರಕರಣದ ಕುರಿತು ಸಮಗ್ರ ಹಾಗೂ ಕೂಲಂಕುಶ ತನಿಖೆ ನಡೆಸುವಂತೆ ಪೊಲೀಸರನ್ನು ಆಗ್ರಹಿಸಿದ್ದಾರೆ. ಘಟನಾ ಸ್ಥಳಕ್ಕೆ ಬೆಳ್ತಂಗಡಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಸಾವಿನ ನಿಖರ ಕಾರಣವನ್ನು ಪತ್ತೆಹಚ್ಚಲು ವಿವಿಧ ಆಯಾಮಗಳಲ್ಲಿ ತನಿಖೆ ಆರಂಭಿಸಿದ್ದಾರೆ. ಪ್ರಾಥಮಿಕ ತನಿಖೆ ಪೂರ್ಣಗೊಂಡ ಬಳಿಕವೇ ಸಾವಿನ ಹಿಂದಿನ ನಿಖರ…
ಮಂಗಳೂರು: ಡೆಹ್ರಾಡೂನ್‌ನಲ್ಲಿ ಭಾರತೀಯ ಐಸ್ ಸ್ಕೇಟಿಂಗ್ ಅಸೋಸಿಯೇಶನ್ ಆಯೋಜಿಸಿದ್ದ 21ನೇ ರಾಷ್ಟ್ರೀಯ ಐಸ್ ಸ್ಕೇಟಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಮಂಗಳೂರಿನ ಪ್ರತಿಭಾವಂತ ಕ್ರೀಡಾಪಟು ಡ್ಯಾಶಿಯಲ್ ಕೋನ್ಸೆಸ್ಸೊ ಗಮನಾರ್ಹ ಸಾಧನೆ ಮಾಡಿದ್ದಾರೆ. ಹಿರಿಯರ ವಿಭಾಗದಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿದ ಅವರು ಒಟ್ಟು ನಾಲ್ಕು ಪದಕಗಳನ್ನು ಗೆದ್ದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಚಾಂಪಿಯನ್‌ಶಿಪ್‌ನ ಮಿಕ್ಸ್ಡ್ ರಿಲೇ ಸ್ಪರ್ಧೆಯಲ್ಲಿ ಡ್ಯಾಶಿಯಲ್ ಚಿನ್ನದ ಪದಕವನ್ನು ತಮ್ಮದಾಗಿಸಿಕೊಂಡರೆ, 500 ಮೀಟರ್, 1000 ಮೀಟರ್ ಹಾಗೂ 1500 ಮೀಟರ್ ವಿಭಾಗಗಳಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ಮೂರು ಬೆಳ್ಳಿ ಪದಕಗಳನ್ನು ಗಳಿಸಿದ್ದಾರೆ. ಅವರ ಸಾಧನೆಗೆ ಕ್ರೀಡಾ ವಲಯದಿಂದ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ. ಪ್ರಸ್ತುತ ಡ್ಯಾಶಿಯಲ್ ಮಂಗಳೂರಿನ ಎಸ್‌ಡಿಎಂ ಸಂಸ್ಥೆಯಲ್ಲಿ ಪದವಿ ಶಿಕ್ಷಣ ಪಡೆಯುತ್ತಿದ್ದಾರೆ. ಮಂಗಳೂರಿನ ದೇರೆಬೈಲ್ ನಿವಾಸಿಗಳಾದ ಫ್ರಾನ್ಸಿಸ್ ಮತ್ತು ಡೋರಿಸ್ ಕೋನ್ಸೆಸ್ಸೊ ಅವರ ಪುತ್ರಿಯಾಗಿರುವ ಅವರು ರಾಷ್ಟ್ರೀಯ ಮಟ್ಟದಲ್ಲಿ ಮಿಂಚುವ ಮೂಲಕ ನಗರದ ಹೆಮ್ಮೆಯಾಗಿದ್ದಾರೆ.
ಶಿಲ್ಲಾಂಗ್: ವ್ಯಾಪಕ ಚರ್ಚೆಗೆ ಕಾರಣವಾಗಿದ್ದ 2025ರ ‘ಹನಿಮೂನ್ ಕೊಲೆ’ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಸೋನಂ ರಘುವಂಶಿಗೆ ನೀಡಲಾಗಿದ್ದ ಜಾಮೀನನ್ನು ರದ್ದುಗೊಳಿಸಲು ಮೇಘಾಲಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯನ್ನು ಮೇಘಾಲಯ ಹೈಕೋರ್ಟ್ ತಿರಸ್ಕರಿಸಿದೆ. ನ್ಯಾಯಮೂರ್ತಿ ಡಬ್ಲ್ಯೂ. ಡಿಯೆಂಗ್ಡೋಹ್ ಅವರ ಏಕಸದಸ್ಯ ಪೀಠ, ಕೆಳ ನ್ಯಾಯಾಲಯದ ಆದೇಶದಲ್ಲಿ ಮಧ್ಯಪ್ರವೇಶಿಸುವ ಅಗತ್ಯವಿಲ್ಲ ಎಂದು ಅಭಿಪ್ರಾಯಪಟ್ಟಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡೂ ಪಕ್ಷಗಳ ವಾದಗಳನ್ನು ಸುಮಾರು ಹತ್ತು ದಿನಗಳ ಕಾಲ ಆಲಿಸಿದ ಹೈಕೋರ್ಟ್, ಜೂನ್ 10ರಂದು ತೀರ್ಪನ್ನು ಕಾಯ್ದಿರಿಸಿತ್ತು. ಬಳಿಕ ಪ್ರಕಟಿಸಿದ ತೀರ್ಪಿನಲ್ಲಿ ಸರ್ಕಾರದ ಮನವಿಯನ್ನು ವಜಾಗೊಳಿಸಿ, ಸೋನಂಗೆ ನೀಡಿದ್ದ ಷರತ್ತುಬದ್ಧ ಜಾಮೀನನ್ನು ಮುಂದುವರಿಸಲು ಅವಕಾಶ ನೀಡಿದೆ. ಇದಕ್ಕೂ ಮೊದಲು, ಶಿಲ್ಲಾಂಗ್‌ನ ಹೆಚ್ಚುವರಿ ಉಪ ಕಮಿಷನರ್ (ನ್ಯಾಯಾಂಗ) ದಶಲೀನ್ ಆರ್. ಖರ್ಬಟಾಂಗ್ ಅವರು ಸೋನಂ ಬಂಧನದ ವೇಳೆ ಕಾನೂನು ಪ್ರಕ್ರಿಯೆಯಲ್ಲಿ ದೋಷಗಳು ನಡೆದಿವೆ ಎಂದು ಅಭಿಪ್ರಾಯಪಟ್ಟಿದ್ದರು. ಬಂಧನದ ಸಂದರ್ಭದಲ್ಲಿ ಪೊಲೀಸರು ಆರೋಪಕ್ಕೆ ಸಂಬಂಧಿಸಿದ ಸರಿಯಾದ ಕಾನೂನು ಸೆಕ್ಷನ್ ಅನ್ನು ಉಲ್ಲೇಖಿಸದೇ, ಕೊಲೆಗೆ ಸಂಬಂಧಿಸಿದ ಬಿಎನ್ಎಸ್ ಸೆಕ್ಷನ್ 103(1) ಬದಲಿಗೆ…
ಮಂಗಳೂರು : ಕರಾವಳಿಯಲ್ಲಿ ಮಳೆ ಅಬ್ಬರ ಮುಂದುವರೆದಿದ್ದು, ಕರಾವಳಿಯಲ್ಲಿ ಭಾರೀ ಮಳೆಯಾಗುವ ಹಿನ್ನಲೆ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಈ ಹಿನ್ನಲೆ ಗುರುವಾರ ಜುಲೈ 2 ದ.ಕ ಜಿಲ್ಲೆಯ ಶಾಲಾ – ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ದರ್ಶನ್ ಆದೇಶಿಸಿದ್ದಾರೆ. ಇದರೊಂದಿಗೆ ಈ ಬಾರಿಯ ಮುಂಗಾರು ಮಳೆ ಮೊದಲ ರಜೆ ಮಕ್ಕಳಿಗೆ ಸಿಕ್ಕಿದೆ. ದ.ಕ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ ಮತ್ತು ಪ್ರೌಢಶಾಲೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜಿಗೆ (ಪಿಯು) ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಭಾರಿ ಮಳೆಯ ಮುನ್ಸೂಚನೆ (ರೆಡ್ – ಅಲರ್ಟ್) ಹಿನ್ನೆಲೆಯಲ್ಲಿ ದಿನಾಂಕ: 02.07.2026 ರಂದು ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ (12ನೇ ತರಗತಿಯವರೆಗೆ) ಮುಂಜಾಗ್ರತಾ ಕ್ರಮವಾಗಿ ರಜೆ ಘೋಷಣೆ ಮಾಡಲಾಗಿದೆ. ಸಾರ್ವಜನಿಕರು ಹಾಗೂ ಪ್ರವಾಸಿಗರು ನದಿ, ಹೊಳೆ, ಕೆರೆ ಮತ್ತು ಸಮುದ್ರ ತೀರಗಳಿಗೆ ತೆರಳದಂತೆ ಸೂಚಿಸಲಾಗಿದೆ. ತಗ್ಗು…
ಅಹಮದಾಬಾದ್: ಕೇವಲ ವಿವಾಹ ನೋಂದಣಿ ಮಾಡಿಸಿಕೊಂಡರೆ ಮಾತ್ರ ಹಿಂದೂ ವಿವಾಹ ಕಾನೂನುಬದ್ಧವಾಗುವುದಿಲ್ಲ. ಸಪ್ತಪದಿ ಸೇರಿದಂತೆ ಹಿಂದೂ ಸಂಪ್ರದಾಯದ ಅಗತ್ಯ ವಿಧಿ-ವಿಧಾನಗಳು ನೆರವೇರಿದಾಗ ಮಾತ್ರ ವಿವಾಹ ಮಾನ್ಯವಾಗುತ್ತದೆ ಎಂದು ಗುಜರಾತ್ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಜೂನ್ 23ರಂದು ನೀಡಿದ ತೀರ್ಪಿನಲ್ಲಿ ನ್ಯಾಯಮೂರ್ತಿಗಳಾದ ಇಲೇಶ್ ವೋರಾ ಮತ್ತು ಆರ್.ಟಿ. ವಚ್ಛಾನಿ ಅವರ ವಿಭಾಗೀಯ ಪೀಠ, ಹಿಂದೂ ವಿವಾಹವು ಕೇವಲ ಔಪಚಾರಿಕ ಕಾರ್ಯಕ್ರಮವಲ್ಲ, ಅದು ಧಾರ್ಮಿಕ ಸಂಸ್ಕಾರ ಮತ್ತು ಪವಿತ್ರ ಬಂಧವಾಗಿದೆ ಎಂದು ಅಭಿಪ್ರಾಯಪಟ್ಟಿತ್ತು. ಬ್ರಿಟನ್‌ನಲ್ಲಿ ನೆಲೆಸಿರುವ ಕೌಶಲ್ ಸೋನಾರ್ ಅವರು, ಅಹಮದಾಬಾದ್‌ನ ಮಹಿಳೆಯೊಬ್ಬರೊಂದಿಗೆ ತನ್ನ ವಿವಾಹ ನಡೆದಿದೆ ಎಂಬುದನ್ನು ಅಮಾನ್ಯ ಎಂದು ಘೋಷಿಸುವಂತೆ ನ್ಯಾಯಾಲಯದ ಮೆಟ್ಟಿಲೇರಿದ್ದರು. ತನ್ನ ಪೋಷಕರಿಗೆ ವಿವಾಹ ಪ್ರಮಾಣಪತ್ರ ತೋರಿಸಿ ಮಹಿಳೆ ತಾನು ಕಾನೂನುಬದ್ಧ ಪತ್ನಿ ಎಂದು ಹೇಳಿದಾಗ ಮಾತ್ರ ಈ ವಿಷಯ ತಿಳಿದಿದೆ. ಅಲ್ಲದೆ, ತಮ್ಮ ಒಪ್ಪಿಗೆಯಿಲ್ಲದೆ ವಿವಾಹ ದಾಖಲೆಗಳಲ್ಲಿ ಸಹಿ ಪಡೆಯಲಾಗಿದೆ. ಯಾವುದೇ ಹಿಂದೂ ಸಂಪ್ರದಾಯದ ವಿಧಿ-ವಿಧಾನಗಳು ನಡೆದಿಲ್ಲ ಹಾಗೂ ಪತಿ-ಪತ್ನಿಯಾಗಿ ಎಂದಿಗೂ ಒಟ್ಟಿಗೆ ವಾಸಿಸಿಲ್ಲ ಎಂದು…



