Author: admin

ಜೈಪುರ: ಬಸ್‌ವೊಂದು ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬೆಂಕಿ ಹೊತ್ತಿಕೊಂಡಿದ್ದು, ಏಳು ಮಂದಿ ಸಾವನ್ನಪ್ಪಿರುವ ಘಟನೆ ರಾಜಸ್ಥಾನದ ದೌಸಾ ಜಿಲ್ಲೆಯ ದೆಹಲಿ-ಮುಂಬೈ ಎಕ್ಸ್‌ಪ್ರೆಸ್‌ ವೇಯಲ್ಲಿ ನಡೆದಿದೆ. ಮಂಗಳವಾರ (ಜೂ.30)ರ ರಾತ್ರಿ 39ಮಂದಿ ಪ್ರಯಾಣಿರಿದ್ದ ಬಸ್‌ವೊಂದು ಹರಿದ್ವಾರದಿಂದ ಇಂದೋರ್‌ಗೆ ಹೊರಟಿತ್ತು. ಈ ವೇಳೆ ಕೊಲಾವಾ ಪೊಲೀಸ್ ಠಾಣೆ ವ್ಯಾಪ್ತಿಯ ದ್ವಾರಪುರ ಗ್ರಾಮದ ಬಳಿ ಬರುತ್ತಿದ್ದಂತೆ ಬಸ್ ಟ್ರಕ್‌ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಬಸ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಏಳು ಮಂದಿ ಸಾವನ್ನಪ್ಪಿದ್ದಾರೆ ಹಾಗೂ 15 ಜನರು ಗಾಯಗೊಂಡಿದ್ದಾರೆ. ಅಧಿಕಾರಿಗಳ ಮಾಹಿತಿ ಪ್ರಕಾರ, ಬಸ್ಸಿನಲ್ಲಿದ್ದ ಹೆಚ್ಚಿನವರು ಮಧ್ಯಪ್ರದೇಶದ ನಿವಾಸಿಗಳು ಎಂದು ತಿಳಿದುಬಂದಿದೆ. ಮಾಹಿತಿ ತಿಳಿಯುತ್ತಿದ್ದಂತೆ ಕೂಡಲೇ ಪೊಲೀಸ್ ಸಿಬ್ಬಂದಿ, ಅಗ್ನಿಶಾಮಕ ದಳ ಮತ್ತು ವೈದ್ಯಕೀಯ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿ, ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ಬಸ್‌ನಲ್ಲಿದ್ದ ಪ್ರಯಾಣಿಕರಿಗೆ ಸುಟ್ಟ ಗಾಯಗಳಾಗಿದ್ದು, ಸ್ಥಳೀಯ ಆಸ್ಮತ್ರೆಗೆ ದಾಖಲಿಸಲಾಗಿದೆ. ದೌಸಾ ಪೊಲೀಸ್ ವರಿಷ್ಠಾಧಿಕಾರಿ ಪಿಯೂಷ್ ದೀಕ್ಷಿತ್ ಅವರು ಮಾಹಿತಿ ನೀಡಿದ್ದು, ಬೆಂಕಿ ಅವಘಡದಲ್ಲಿ ಐದು ಮಂದಿ ಸಜೀವ ದಹನಗೊಂಡಿದ್ದಾರೆ. ಇನ್ನಿಬ್ಬರ ತಲೆಗೆ…

Read More

ಮಂಗಳೂರು : ಕಳೆದೆರಡು ದಿನಗಳಿಂದ ಕರಾವಳಿಯಾದ್ಯಂತ ಸುರಿಯುತ್ತಿರುವ ಭಾರಿ ಮಳೆಯ ಆರ್ಭಟಕ್ಕೆ ತಾಲೂಕಿನ ಕೆರೆಬೈಲ್ ಗುಡ್ಡೆ ಪ್ರದೇಶದಲ್ಲಿ ಬುಧವಾರ (ಜುಲೈ 01) ಭೀಕರ ಅವಘಡವೊಂದು ಸಂಭವಿಸಿದೆ. ಗುಡ್ಡದ ತುತ್ತ ತುದಿಯಲ್ಲಿದ್ದ ಖಾಸಗಿ ಗೆಸ್ಟ್ ಹೌಸ್‌ನ ಬೃಹತ್ ಆವರಣ ಗೋಡೆ (ಕಾಂಪೌಂಡ್ ವಾಲ್) ತಳಭಾಗದಲ್ಲಿದ್ದ ವಾಸದ ಮನೆಯ ಮೇಲೆ ಕುಸಿದು ಬಿದ್ದ ಪರಿಣಾಮ ಮನೆ ಸಂಪೂರ್ಣವಾಗಿ ಧ್ವಂಸಗೊಂಡಿದೆ. ಆದರೆ, ಮನೆಯಲ್ಲಿದ್ದ ಕುಟುಂಬಸ್ಥರು ವಾರದ ಹಿಂದಷ್ಟೇ ಸುರಕ್ಷಿತ ಸ್ಥಳಕ್ಕೆ ವಲಸೆ ಹೋಗಿದ್ದರಿಂದ ದೊಡ್ಡದೊಂದು ದುರಂತ ತಪ್ಪಿದೆ. ಇಲ್ಲಿನ ನಿವಾಸಿ ಕಿಶೋರ್ ಅವರಿಗೆ ಸೇರಿದ ಮನೆ ಸಂಪೂರ್ಣವಾಗಿ ಹಾನಿಗೀಡಾದ ಕಟ್ಟಡವಾಗಿದೆ. ಕೆರೆಬೈಲು ಗುಡ್ಡೆ ಪ್ರದೇಶದಲ್ಲಿ ಸುಮಾರು 40ಕ್ಕೂ ಹೆಚ್ಚು ಕುಟುಂಬಗಳು ವಾಸಿಸುತ್ತಿದ್ದು, ಗುಡ್ಡದ ತುದಿಯಲ್ಲಿ ಮಂಗಳೂರು ಮೂಲದ ಪ್ರತಿಷ್ಠಿತ ಸಂಸ್ಥೆಯೊಂದಕ್ಕೆ ಸೇರಿದ ಗೆಸ್ಟ್ ಹೌಸ್ ಇದೆ. ಇದರ ಅವೈಜ್ಞಾನಿಕ ಆವರಣ ಗೋಡೆಯೇ ಇಂದಿನ ದುರಂತಕ್ಕೆ ಕಾರಣ ಎನ್ನಲಾಗಿದೆ. ಕಿಶೋರ್ ಅವರ ಮನೆಯ ಮೇಲ್ಭಾಗದಲ್ಲಿದ್ದ ಗೆಸ್ಟ್ ಹೌಸ್‌ನ ಆವರಣ ಗೋಡೆಯಲ್ಲಿ ಕಳೆದ ವಾರವಷ್ಟೇ ದೊಡ್ಡ ಬಿರುಕು ಕಾಣಿಸಿಕೊಂಡಿತ್ತು.…

Read More

ನವದೆಹಲಿ: ವೆನೆಜುವೆಲಾ ಕರಾವಳಿಯಲ್ಲಿ ನಿಗೂಢವಾಗಿ ಮೃತಪಟ್ಟ ಭಾರತೀಯ ನಾವಿಕನೊಬ್ಬನ ಮೃತದೇಹ ಭಾರತಕ್ಕೆ ಬಂದಿಳಿದಾಗ, ಅದರಲ್ಲಿದ್ದ ಪ್ರಮುಖ ಅಂಗಾಂಗಗಳೇ ನಾಪತ್ತೆಯಾಗಿರುವ ಅತ್ಯಂತ ಆಘಾತಕಾರಿ ಮತ್ತು ಭೀಕರ ಘಟನೆ ಬೆಳಕಿಗೆ ಬಂದಿದೆ. 33 ವರ್ಷದ ರಾಕೇಶ್‌ ಚೌಹಾಣ್‌ ಹೃದಯಾಘಾತದಿಂದ ಮೇ ತಿಂಗಳಲ್ಲಿ ಸಾವನ್ನಪ್ಪಿದ್ದರು. ಭಾರತೀಯ ನಾವಿಕನ ಮೃತದೇಹವನ್ನು ದಕ್ಷಿಣ ಅಮೆರಿಕದಿಂದ ಭಾರತಕ್ಕೆ ತರಲಾಯಿತು. ಆದರೀಗ, ರಾಕೇಶ್‌ ಸಾವಿನ ಸುತ್ತ ನಿಗೂಢತೆ ತೀವ್ರಗೊಂಡಿದೆ. ರಾಕೇಶ್ ಚೌಹಾಣ್ ಅವರ ಮೆದುಳು, ಹೃದಯ ಮತ್ತು ಶ್ವಾಸಕೋಶಗಳು ಸೇರಿದಂತೆ ದೇಶದ ಹಲವಾರು ಅಂಗಗಳು ಕಾಣೆಯಾಗಿವೆ ಎಂದು ಅವರ ಕುಟುಂಬ ಆರೋಪಿಸಿದೆ. ಹೀಗಾಗಿ, ನಾವಿಕನ ಸಾವಿನ ಬಗ್ಗೆ ಸಂಪೂರ್ಣ ತನಿಖೆ ನಡೆಸಬೇಕೆಂದು ಭಾರತೀಯ ನಾವಿಕರ ಸಂಘಗಳ ಒಕ್ಕೂಟ (FSUI) ಒತ್ತಾಯಿಸಿದೆ.ಎಫ್‌ಎಸ್‌ಯುಐ ತನ್ನ ಎಕ್ಸ್‌ ಖಾತೆ, ಚೌಹಾಣ್ ಅವರ ಶವವನ್ನು ಯಾವುದೇ ಶವಪರೀಕ್ಷೆ ವರದಿ ಅಥವಾ ವೆನೆಜುವೆಲಾದ ಅಧಿಕಾರಿಗಳಿಂದ ವಿವರಗಳಿಲ್ಲದೆ ಉತ್ತರ ಪ್ರದೇಶದ ಡಿಯೋರಿಯಾದಲ್ಲಿರುವ ಅವರ ಹುಟ್ಟೂರಿಗೆ ಕಳುಹಿಸಲಾಗಿದೆ ಎಂದು ತಿಳಿಸಿದೆ. ʼಕುಟುಂಬದವರು ಮರು ಶವಪರೀಕ್ಷೆಗೆ ಒತ್ತಾಯಿಸಿದರು. ಭಾರತದಲ್ಲಿ ನಡೆಸಿದ ಅಧಿಕೃತ ಮರಣೋತ್ತರ…

Read More

ಮಂಗಳೂರು: ಭಾರೀ ಮಳೆಯಿಂದ ಮಂಗಳೂರಿನ ನಾಗುರಿ ಪ್ರದೇಶದಲ್ಲಿ ಸಂಭವಿಸಿದ ಭೀಕರ ಭೂಕುಸಿತ ದುರಂತಕ್ಕೆ ಮನೆಯ ಹಿಂಭಾಗದಲ್ಲಿದ್ದ ಕಾಂಪೌಂಡ್ ಗೋಡೆ ಕುಸಿತವೇ ಕಾರಣವಾಗಿದೆ. ಘಟನೆಗೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ಧ ಪ್ರಕರಣ ದಾಖಲಿಸಲು ಸೂಚನೆ ನೀಡಲಾಗಿದೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಮಾಹಿತಿ ನೀಡಿದ್ದಾರೆ. ನಾಗುರಿಯಲ್ಲಿ ರಾತ್ರಿ ಸುರಿದ ಭಾರೀ ಮಳೆಯಿಂದ ಮಣ್ಣು ಕುಸಿದು ಮನೆಯ ಮೇಲೆ ಬಿದ್ದ ಪರಿಣಾಮ ದುರಂತ ಸಂಭವಿಸಿತ್ತು. ಮನೆಯ ಹಿಂಭಾಗದಲ್ಲಿದ್ದ ಕಾಂಪೌಂಡ್ ಗೋಡೆ ಕುಸಿದು ಮನೆಗೆ ಬಿದ್ದಿದ್ದು, ಈ ಅವಘಡದಲ್ಲಿ ಮೂವರು ಮೃತಪಟ್ಟಿದ್ದಾರೆ. ಮೃತರನ್ನು 1) ಅನಾಮಿಕ ಚೌರಾಸಿಯ (8 ವರ್ಷ) 2) ಪರಿ (4 ವರ್ಷ) 3) ಶಾಂತ (46 ವರ್ಷ) ಎಂದು ಗುರುತಿಸಲಾಗಿದೆ. ಇನ್ನು ಮಣ್ಣಿನಡಿ ಸಿಲುಕಿದ್ದ ಮೂವರನ್ನು ರಕ್ಷಣಾ ಕಾರ್ಯಾಚರಣೆ ಮೂಲಕ ಸುರಕ್ಷಿತವಾಗಿ ಹೊರತೆಗೆಯಲಾಗಿದೆ. ಬದುಕುಳಿದವರನ್ನು 1) ಅಲ್ಕಾ (14 ವರ್ಷ) 2) ಅನುಷಾ (11 ವರ್ಷ) 3) ಬಾಲಕೃಷ್ಣ (48 ವರ್ಷ) ಎಂದು ಗುರುತಿಸಲಾಗಿದೆ. ಮೃತರು ಹಾಗೂ ರಕ್ಷಿಸಲ್ಪಟ್ಟವರು…

Read More

ಬೆಂಗಳೂರು: ಎಟಿಎಸ್ ಹುಡುಕಾಟದಲ್ಲಿದ್ದ ಶಂಕಿತ ಉಗ್ರ ಸೇರಿ ಹಲವರಿಗೆ ನಕಲಿ ದಾಖಲೆಗಳನ್ನು ಸೃಷ್ಟಿಸಿ ಪಾಸ್‌ಪೋರ್ಟ್ ನವೀಕರಣಕ್ಕೆ ನೆರವಾದ ಆರೋಪ ಎದುರಿಸುತ್ತಿರುವ ಅಂಗವಿಕಲ ಟ್ರಾವೆಲ್ ಏಜೆಂಟ್ ವಿರುದ್ಧದ ಕ್ರಿಮಿನಲ್ ಪ್ರಕರಣವನ್ನು ರದ್ದುಪಡಿಸಲು ಕರ್ನಾಟಕ ಹೈಕೋರ್ಟ್ ನಿರಾಕರಿಸಿದೆ. ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದ ಗಂಭೀರ ಪ್ರಕರಣಗಳಲ್ಲಿ ಕೇವಲ ಅಂಗವೈಕಲ್ಯ ಅಥವಾ ಆರೋಗ್ಯ ಸಮಸ್ಯೆಯನ್ನು ಆಧಾರವಾಗಿಸಿಕೊಂಡು ಆರೋಪಿಯು ಕಾನೂನಿನ ಕ್ರಮದಿಂದ ವಿನಾಯಿತಿ ಪಡೆಯಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ. ಇದೇ ವೇಳೆ, ಒಂದೇ ವಿಳಾಸವನ್ನು ಆಧರಿಸಿ ಸುಮಾರು 15 ಪಾಸ್‌ಪೋರ್ಟ್ ಅರ್ಜಿಗಳನ್ನು ಪರಿಶೀಲಿಸದೆ ಅನುಮೋದಿಸಿದ್ದ ಪೊಲೀಸ್ ಕಾನ್‌ಸ್ಟೆಬಲ್‌ನ ಕಾರ್ಯವೈಖರಿಯನ್ನೂ ನ್ಯಾಯಾಲಯ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣವನ್ನು ರದ್ದುಪಡಿಸುವಂತೆ ಕೋರಿ ಮಂಗಳೂರಿನ ಯು.ಎಂ. ಹೈದರ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಏಕಸದಸ್ಯ ಪೀಠ ವಜಾಗೊಳಿಸಿದೆ. ಆದೇಶದಲ್ಲಿ ನ್ಯಾಯಾಲಯ, ಅರ್ಜಿದಾರರ ಅಂಗವೈಕಲ್ಯ ಮತ್ತು ಆರೋಗ್ಯ ಸಮಸ್ಯೆಗಳ ಬಗ್ಗೆ ಮಾನವೀಯ ದೃಷ್ಟಿಕೋನ ಹೊಂದಬಹುದಾದರೂ, ರಾಷ್ಟ್ರದ ಹಿತಾಸಕ್ತಿಗೆ ವಿರುದ್ಧವಾಗಿರುವ ಗಂಭೀರ ಆರೋಪಗಳ ತನಿಖೆಯನ್ನು…

Read More

ಮಂಗಳೂರು: ಬೈಕಂಪಾಡಿ ಬಳಿ ಸೋಮವಾರ ಬೆಳಗಿನ ಜಾವ ನಡೆದ ಆಭರಣ ವ್ಯಾಪಾರಿಯ ದರೋಡೆ ಪ್ರಕರಣದ ತನಿಖೆ ಹೊಸ ತಿರುವು ಪಡೆದುಕೊಂಡಿದ್ದು, ಕದ್ದ ಕಾರನ್ನು ಬಂಟ್ವಾಳ ಪೊಲೀಸ್ ಠಾಣಾ ವ್ಯಾಪ್ತಿಯ ಬೆಂಜನಪದವಿನಲ್ಲಿ ಪತ್ತೆಯಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ. ಆರೋಪಿಗಳು ವಾಹನವನ್ನು ಬಿಟ್ಟು ಪರಾರಿಯಾಗಿದ್ದಾರೆ. ದರೋಡೆಕೋರರು ಕಾರಿನ ಸೀಟ್ ಕವರ್‌ಗಳನ್ನು ಹರಿದು ವಾಹನವನ್ನು ಸಂಪೂರ್ಣವಾಗಿ ಪರಿಶೀಲಿಸಿದ್ದಾರೆ ಎಂದು ಪೊಲೀಸರು ಕಂಡುಬಂದಿದೆ. ಸೀಟುಗಳ ಒಳಗೆ ಬೆಲೆಬಾಳುವ ವಸ್ತುಗಳು ಅಥವಾ ಚಿನ್ನವನ್ನು ಬಚ್ಚಿಟ್ಟಿರಬಹುದು ಎಂಬ ಶಂಕೆಯಿಂದ ಸಿಟುಗಲನ್ನು ಹರಿದು ಹಾಕಿದ್ದಾರೆ ಎಂದು ಪೋಲೀಸರು ಶಂಕಿಸಿದ್ದಾರೆ. ವ್ಯಾಪಾರಿ ಕದ್ದ ಕಾರು ಪತ್ತೆಯಾಗಿದ್ದರೂ, ದರೋಡೆಕೋರರು ಕದ್ದ ಮೊಬೈಲ್ ಫೋನ್ ಇನ್ನೂ ಪತ್ತೆಯಾಗಿಲ್ಲ. ಫೋನ್ ಸ್ವಿಚ್ ಆಫ್ ಆಗಿರುವುದರಿಂದ, ಆರೋಪಿಗಳು ಅದನ್ನು ನಾಶಪಡಿಸಿರಬಹುದು ಅಥವಾ ಎಸೆದಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಮೊಬೈಲ್ ಟವರ್ ಡಂಪ್ ಆಧರಿಸಿ ಸ್ಥಳವನ್ನು ಪತ್ತೆಹಚ್ಚುವ ಪ್ರಯತ್ನಗಳು ನಡೆಯುತ್ತಿವೆ. ದರೋಡೆಕೋರರು ಬಳಸಿದ ಮೂರು ಕಾರುಗಳು ಅಪರಾಧದ ಮೊದಲು ಮತ್ತು ನಂತರ ಒಂದೇ ಮಾರ್ಗದಲ್ಲಿ ಪ್ರಯಾಣಿಸಿರಬಹುದು…

Read More

ಉಡುಪಿ: ಗೋವಾದ ಕ್ಯಾಲಂಗುಟ್ ಬೀಚ್ ಸಮೀಪದ ಲಾಡ್ಜ್‌ವೊಂದರಲ್ಲಿ ಮಲ್ಪೆ ಮೂಲದ ಯುವಕನೊಬ್ಬ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಬೆಳಕಿಗೆ ಬಂದಿದೆ. ಮೃತ ಯುವಕನನ್ನು ಸಂದೀಪ್ ಸಾಲ್ಯಾನ್ ಎಂದು ಗುರುತಿಸಲಾಗಿದೆ. ಮಾಹಿತಿಯ ಪ್ರಕಾರ, ಸಂದೀಪ್ ಎರಡು ದಿನಗಳ ಹಿಂದೆ ಸ್ನೇಹಿತರೊಂದಿಗೆ ಗೋವಾ ಪ್ರವಾಸಕ್ಕೆ ತೆರಳಿದ್ದರು. ಜೂನ್ 30ರ ಸಂಜೆ ಅವರು ತಂಗಿದ್ದ ಲಾಡ್ಜ್‌ನಲ್ಲಿ ಅನುಮಾನಾಸ್ಪದ ಸ್ಥಿತಿಯಲ್ಲಿ ಮೃತಪಟ್ಟಿರುವುದು ಪತ್ತೆಯಾಗಿದೆ. ಪ್ರಾಥಮಿಕ ಮಾಹಿತಿಯಂತೆ, ಇದು ಹೃದಯಾಘಾತದಿಂದ ಸಂಭವಿಸಿದ ಸಾವೋ ಅಥವಾ ಬೇರೆ ಯಾವುದೇ ಕಾರಣವಿದೆಯೋ ಎಂಬುದು ಇನ್ನಷ್ಟೇ ಸ್ಪಷ್ಟವಾಗಬೇಕಿದ್ದು, ಈ ಕುರಿತು ಗೋವಾ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಘಟನೆಯ ವೇಳೆ ಸಂದೀಪ್ ಅವರೊಂದಿಗೆ ಯುವತಿಯೊಬ್ಬರು ಇದ್ದರು ಎನ್ನಲಾಗಿದ್ದು, ಅವರ ಸಾವಿನ ಬಳಿಕ ಆಕೆ ಸ್ಥಳದಿಂದ ತೆರಳಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಆದರೆ ಈ ಕುರಿತು ಅಧಿಕೃತ ಪೊಲೀಸ್ ದೃಢೀಕರಣ ಇನ್ನಷ್ಟೇ ದೊರೆಯಬೇಕಿದೆ. ಸಂದೀಪ್ ಸಾಲ್ಯಾನ್ ಅವರು ಕೆಲವು ವರ್ಷಗಳ ಹಿಂದೆ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಅವರೊಂದಿಗೆ ಕೆಲಸ ಮಾಡಿದ್ದರು. ಇತ್ತೀಚಿನ ದಿನಗಳಲ್ಲಿ ಮಲ್ಪೆ ಬೀಚ್‌ನಲ್ಲಿ…

Read More

ಮಂಗಳೂರು: ನಗರದಲ್ಲಿ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಕಂಕನಾಡಿ ಪೊಲೀಸ್ ಠಾಣೆ ವ್ಯಾಪ್ತಿಯ ನಾಗುರಿ ಪ್ರದೇಶದಲ್ಲಿ ಮನೆ ಮೇಲೆ ತಡೆಗೋಡೆ ಕುಸಿದು ಬಿದ್ದು, ಹೆಂಚಿನ ಛಾವಣಿಯ ಮನೆ ಕುಸಿದ ಪರಿಣಾಮ ಮಹಿಳೆಯೊಬ್ಬರು ಹಾಗೂ ಇಬ್ಬರು ಬಾಲಕಿಯರು ಮೃತಪಟ್ಟಿದ್ದಾರೆ. ಘಟನೆಯಲ್ಲಿ ಅನಾಮಿಕ ಚೌರಾಸಿ(8) , ಪರಿ(3) ಶಾಂತ, (46 ) ಮೃತಪಟ್ಟವರು . ರಕ್ಷಣಾ ಕಾರ್ಯದಲ್ಲಿ ಬದುಕಿ ಉಳಿದವರು ಅಲ್ಕಾ (14) ಅನುಷಾ( 11), ಬಾಲಕೃಷ್ಣ( 48) ಎಂದು ಗುರುತಿಸಲಾಗಿದೆ. ಗರೋಡಿಯ ಮಾರಿಯಲ್ ಹೌಸ್‌ನಲ್ಲಿ ಬೆಳಿಗ್ಗೆ 4.45 ರಿಂದ 5.00 ರ ನಡುವೆ ಈ ಘಟನೆ ಸಂಭವಿಸಿದ್ದು, ನಿರಂತರ ಮಳೆಯಿಂದಾಗಿ ಕಾಂಪೌಂಡ್ ಗೋಡೆ ಕುಸಿದಿದೆ. ನಾಲ್ಕು ಕುಟುಂಬಗಳು ಕಾಂಪೌಂಡ್ ಗೋಡೆಯ ಕೆಳಗೆ ಬಾಡಿಗೆ ಮನೆಗಳಲ್ಲಿ ವಾಸಿಸುತ್ತಿದ್ದರು. ಬಿಹಾರ ಮೂಲದ ಲಾಲ್‌ಬಾಬು ಅವರ ಕುಟುಂಬವೂ ಕಳೆದ ಎಂಟು ವರ್ಷಗಳಿಂದ ತಮ್ಮ ಪತ್ನಿ ಮತ್ತು ಅವರ ನಾಲ್ವರು ಹೆಣ್ಣುಮಕ್ಕಳಾದ ಅಲ್ಕಾ (14), ಅನುಷಾ (11), ಅನಾಮಿಕಾ ಚೌರಾಸಿಯಾ (8), ಮತ್ತು ಪರಿ (4) ಅವರೊಂದಿಗೆ ಆ…

Read More

ಮಂಗಳೂರು: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (Special Intensive Revision – SIR) ಅಭಿಯಾನಕ್ಕೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಂಗಳವಾರ ಅಧಿಕೃತ ಚಾಲನೆ ದೊರೆಯಿತು. ಇದರ ಅಂಗವಾಗಿ ಜಿಲ್ಲೆಯಾದ್ಯಂತ ಬೂತ್ ಮಟ್ಟದ ಅಧಿಕಾರಿಗಳು (ಬಿಎಲ್‌ಒ) ಮನೆ ಮನೆಗೆ ತೆರಳಿ ಮತದಾರರಿಗೆ ಗಣತಿ ನಮೂನೆಗಳನ್ನು ವಿತರಿಸುವ ಕಾರ್ಯ ಆರಂಭಿಸಿದರು. ಜಿಲ್ಲೆಯ 1,876 ಮತಗಟ್ಟೆಗಳಲ್ಲಿ ನಿಯೋಜಿತವಾಗಿರುವ ಬಿಎಲ್‌ಒಗಳು ಪ್ರತಿಯೊಬ್ಬ ಮತದಾರರ ಮನೆಗೆ ಭೇಟಿ ನೀಡಿ ಎನ್ಯುಮರೇಷನ್ ಫಾರ್ಮ್‌ಗಳನ್ನು ಹಸ್ತಾಂತರಿಸುತ್ತಿದ್ದಾರೆ. ಮತದಾರರ ವಿವರಗಳನ್ನು ಪರಿಷ್ಕರಿಸುವ ಉದ್ದೇಶದಿಂದ ಈ ಪ್ರಕ್ರಿಯೆ ಕೈಗೊಳ್ಳಲಾಗುತ್ತಿದ್ದು, ಮುಂದಿನ ಹಂತದಲ್ಲಿ ಭರ್ತಿ ಮಾಡಿದ ನಮೂನೆಗಳನ್ನು ಅಧಿಕಾರಿಗಳು ಸಂಗ್ರಹಿಸಲಿದ್ದಾರೆ. ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ. ಅವರು ಮಂಗಳೂರು ನಗರದ ವಿವಿಧ ಮತಗಟ್ಟೆಗಳಿಗೆ ಭೇಟಿ ನೀಡಿ ಮತದಾರರಿಗೆ ಸ್ವತಃ ಗಣತಿ ನಮೂನೆಗಳನ್ನು ವಿತರಿಸಿದರು. ಅಲ್ಲದೆ, ಎಸ್‌ಐಆರ್ ಪ್ರಕ್ರಿಯೆಯ ಪ್ರಗತಿಯನ್ನು ಪರಿಶೀಲಿಸಿ ಅಧಿಕಾರಿಗಳಿಗೆ ಅಗತ್ಯ ಸೂಚನೆಗಳನ್ನು ನೀಡಿದರು. ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ರಾಜು ಕೆ. ಉಪಸ್ಥಿತರಿದ್ದರು. ಜಿಲ್ಲೆಯ ಹಲವು ಭಾಗಗಳಲ್ಲಿ ಹಿರಿಯ ಅಧಿಕಾರಿಗಳೂ ಮನೆ ಮನೆಗೆ…

Read More

ಯಾದಗಿರಿ: ಜಿಲ್ಲೆಯ ಶಹಾಪುರ ಪಟ್ಟಣದಲ್ಲಿ ನಡೆದಿರುವ ಬಹುಕೋಟಿ ರೂಪಾಯಿ ಹಣಕಾಸು ಅಕ್ರಮ ಪ್ರಕರಣದ ನಡುವೆ ಮಹತ್ವದ ಬೆಳವಣಿಗೆಯೊಂದು ನಡೆದಿದೆ. ಮಾತೋಶ್ರೀ ಹೇಮರಡ್ಡಿ ಮಲ್ಲಮ್ಮ ಸೌಹಾರ್ದ ಸಹಕಾರಿ ಬ್ಯಾಂಕ್‌ನ ಅಧ್ಯಕ್ಷ ಬಸನಗೌಡ ವೆಂಕಟರೆಡ್ಡಿ ಮಾಲಿ ಪಾಟೀಲ (64) ಅವರು ತಮ್ಮ ನಿವಾಸದಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಘಟನೆ ಜಿಲ್ಲೆಯ ಸಹಕಾರಿ ಕ್ಷೇತ್ರದಲ್ಲಿ ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ₹10 ಕೋಟಿಗೂ ಅಧಿಕ ಹಣ ದುರ್ಬಳಕೆ ಆರೋಪ ಮಾತೋಶ್ರೀ ಹೇಮರಡ್ಡಿ ಮಲ್ಲಮ್ಮ ಸೌಹಾರ್ದ ಸಹಕಾರಿ ಬ್ಯಾಂಕ್‌ನಲ್ಲಿ ಸಾಲ ವಿತರಣೆಗೆ ಸಂಬಂಧಿಸಿದಂತೆ ಭಾರಿ ಪ್ರಮಾಣದ ಅಕ್ರಮ ನಡೆದಿರುವ ಆರೋಪ ಕೇಳಿಬಂದಿತ್ತು. ಸಾರ್ವಜನಿಕರ ಕೋಟ್ಯಂತರ ರೂಪಾಯಿ ಹಣವನ್ನು ದುರುಪಯೋಗಪಡಿಸಿಕೊಂಡಿರುವ ಕುರಿತು ಪ್ರಕರಣ ದಾಖಲಾಗಿದ್ದು, ಬ್ಯಾಂಕಿನ ಕೆಲವು ಸಿಬ್ಬಂದಿ ವಿರುದ್ಧ ಈಗಾಗಲೇ ಪೊಲೀಸ್ ದೂರು ಸಲ್ಲಿಸಲಾಗಿತ್ತು. ಬ್ಯಾಂಕ್‌ನಲ್ಲಿ ಸುಮಾರು 267 ಮಂದಿ ಠೇವಣಿದಾರರಿದ್ದು, ಒಟ್ಟಾರೆ ₹10 ಕೋಟಿಗೂ ಅಧಿಕ ಮೊತ್ತವನ್ನು ಠೇವಣಿಯಾಗಿ ಇಟ್ಟಿದ್ದರು ಎಂದು ತಿಳಿದುಬಂದಿದೆ. ಠೇವಣಿದಾರರ ಪ್ರತಿಭಟನೆ ನಡುವೆ ದುರ್ಘಟನೆ ತಮ್ಮ ಠೇವಣಿ ಹಣವನ್ನು ಹಿಂತಿರುಗಿಸುವಂತೆ…

Read More