Author: admin

ಕಣ್ಣೂರು: ಚಲಿಸುತ್ತಿದ್ದ ಖಾಸಗಿ ಬಸ್ ಹತ್ತಲು ಪ್ರಯತ್ನಿಸುವಾಗ ಸಮತೋಲನ ಕಳೆದುಕೊಂಡು ಕೆಳಗೆ ಬೀಳುವ ಹಂತದಲ್ಲಿದ್ದ ವೃದ್ಧ ಪ್ರಯಾಣಿಕನೊಬ್ಬನನ್ನು ಬಸ್ ಸಿಬ್ಬಂದಿ (ಕ್ಲೀನರ್) ಸಮಯಪ್ರಜ್ಞೆಯಿಂದ ರಕ್ಷಿಸಿರುವ ಘಟನೆ ಕಣ್ಣೂರಿನಲ್ಲಿ ನಡೆದಿದೆ. ಕಣ್ಣೂರಿನಿಂದ ಕುಟ್ಟಿಯತ್ತೂರಿಗೆ ಪ್ರಯಾಣಿಸುತ್ತಿದ್ದ ‘ಪಾರ್ವತಿ’ ಹೆಸರಿನ ಖಾಸಗಿ ಬಸ್‌ನಲ್ಲಿ ಈ ಘಟನೆ ಸಂಭವಿಸಿದೆ. ಬೆಳಿಗ್ಗೆ ಸುಮಾರು 8.45ರ ವೇಳೆಗೆ ‘ಪಾಠಮ್ ಮೈಲಿ’ ಎಂಬಲ್ಲಿ ಬಸ್ ಚಲಿಸುತ್ತಿದ್ದಾಗ ವೃದ್ಧ ಪ್ರಯಾಣಿಕರೊಬ್ಬರು ಬಸ್ ಹತ್ತಲು ಯತ್ನಿಸಿದ್ದಾರೆ. ಈ ವೇಳೆ ದಿಢೀರನೆ ಸಮತೋಲನ ಕಳೆದುಕೊಂಡ ಅವರು ಬಸ್‌ನಿಂದ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಳ್ಳುವ ಅಪಾಯದಲ್ಲಿ ದ್ದರು. ಇದನ್ನು ತಕ್ಷಣವೇ ಗಮನಿಸಿದ ಬಸ್ ಸಿಬ್ಬಂದಿ ಅತುಲ್, ಅಪಾಯದಲ್ಲಿದ್ದ ವೃದ್ಧನನ್ನು ಚುರುಕಿನಿಂದ ಹಿಡಿದು ಒಳಗಡೆ ಎಳೆದುಕೊಂಡಿದ್ದಾರೆ. ಈ ಮೂಲಕ ದೊಡ್ಡ ಅಪಘಾತವೊಂದು ತಪ್ಪಿದಂತಾಗಿದೆ. ಬಸ್‌ನಲ್ಲಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಈ ಇಡೀ ರೋಚಕ ದೃಶ್ಯಾವಳಿಗಳು ಸೆರೆಯಾಗಿವೆ. ಅತುಲ್ ಸಮಯಪ್ರಜ್ಞೆಯಿಂದ ವೃದ್ಧನನ್ನು ರಕ್ಷಿಸುವ ವೇಳೆ ಮತ್ತೊಬ್ಬ ಪ್ರಯಾಣಿಕನೂ ನೆರವಿಗೆ ಧಾವಿಸುವುದು ಸಿಸಿಟಿವಿ ವಿಡಿಯೋದಲ್ಲಿ ಕಂಡುಬಂದಿದೆ. ಸಾಮಾಜಿಕ ಜಾಲತಾಣಗಳಲ್ಲಿ ಈ ವಿಡಿಯೋ ಪ್ರಸಾರವಾಗುತ್ತಿದ್ದಂತೆ…

Read More

ಬೆಂಗಳೂರು: ರಾಜ್ಯದಲ್ಲಿ ಆಹಾರ ಇಲಾಖೆ ಅಧಿಕಾರಿಗಳ ದಾಳಿಗಳು ಮುಂದುವರಿದಿದ್ದು, ಬೆಂಗಳೂರಿನ 34 ಸರ್ಕಾರಿ ಮತ್ತು ಖಾಸಗಿ ವೈದ್ಯಕೀಯ ಕಾಲೇಜುಗಳ ಹಾಸ್ಟೆಲ್ ಕ್ಯಾಂಟೀನ್‌ಗಳ ಮೇಲೆ ಆಹಾರ ಸುರಕ್ಷತಾ ಇಲಾಖೆಯು ಅನಿರೀಕ್ಷಿತ ದಾಳಿ ನಡೆಸಿದೆ. ಈ ದಾಳಿಗಳ ಮುಖ್ಯ ಉದ್ದೇಶವು ವಿದ್ಯಾರ್ಥಿಗಳಿಗೆ ನೀಡಲಾಗುವ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯವನ್ನು ಪರಿಶೀಲಿಸುವುದಾಗಿತ್ತು. ದಾಳಿಯ ವೇಳೆ, ಹಲವು ಕ್ಯಾಂಟೀನ್‌ಗಳಲ್ಲಿ ಆಹಾರ ಸುರಕ್ಷತಾ ನಿಯಮಗಳ ಉಲ್ಲಂಘನೆ ಕಂಡುಬಂದಿದೆ. ಅವಧಿ ಮೀರಿದ ರವೆ ಮತ್ತು ಹಾಲಿನಂತಹ ಪದಾರ್ಥಗಳನ್ನು ಜಪ್ತಿ ಮಾಡಲಾಗಿದೆ. ಕೆಲವು ಸ್ಥಳಗಳಲ್ಲಿ ಕೊಳೆತ ತರಕಾರಿಗಳು, ಕಲುಷಿತ ಮಾಂಸ ಮತ್ತು ಜಿರಳೆಗಳ ಉಪದ್ರವದಂತಹ ಅನೈರ್ಮಲ್ಯದ ಪರಿಸ್ಥಿತಿಗಳು ಕಂಡುಬಂದಿವೆ ಎಂದು ವರದಿಯಾಗಿದೆ. ಒಟ್ಟು ಐದು ಕ್ಯಾಂಟೀನ್‌ಗಳಿಗೆ ನಿಯಮಗಳ ಉಲ್ಲಂಘನೆಗಾಗಿ ನೋಟಿಸ್‌ಗಳನ್ನು ಜಾರಿ ಮಾಡಲಾಗಿದೆ. ನಿಯಮಗಳನ್ನು ಉಲ್ಲಂಘಿಸಿದವರ ವಿರುದ್ಧ ಕೋರ್ಟ್‌ನಲ್ಲಿ ವಿಚಾರಣೆಗೆ ಹಾಜರು ಪಡಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. FSSAI (ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ) ನಿಯಮಾವಳಿಗಳ ಪ್ರಕಾರ ಆಹಾರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಈ ದಾಳಿಗಳು ಅಗತ್ಯವಾಗಿವೆ.…

Read More

ಬೆಳ್ತಂಗಡಿ: ದರೋಡೆ ಪ್ರಕರಣವೊಂದರಲ್ಲಿ ಆರೋಪಿಯಾಗಿ, ಕಳೆದ 13 ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರಂಟು ಆರೋಪಿಯನ್ನು ವೇಣೂರು ಪೊಲೀಸರು ಬಂಧಿಸಿದ್ದಾರೆ.ವೇಣೂರು ಪೊಲೀಸ್ ಠಾಣೆಯ ಅಕ್ರ.ನಂ. 16/2012ರಲ್ಲಿ ಕಲಂ 395 ಐಪಿಸಿ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ಆರೋಪಿ ಶ್ರೀನಿವಾಸ್ ಕೆ. @ ಶಿನಪ್ಪ @ ಶೀನ (43) ಕಳೆದ ಸುಮಾರು 13 ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಗೈರುಹಾಜರಾಗಿ ತಲೆಮರೆಸಿಕೊಂಡಿದ್ದ ಎನ್ನಲಾಗಿದೆ. ಖಚಿತ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿದ ವೇಣೂರು ಠಾಣೆಯ ಎಎಸ್‌ಐ ಬೆನ್ನಿಚನ್, ಹೆಡ್ ಕಾನ್‌ಸ್ಟೆಬಲ್ ಕೃಷ್ಣ, ಸಿಪಿಸಿ ಬಸವರಾಜ್ ಎಸ್.ಪಿ. ಹಾಗೂ ಸಿಪಿಸಿ ಮೋಹನ್ ಕುಮಾರ್ ಅವರ ತಂಡವು ವಿಜಯನಗರ ಜಿಲ್ಲೆಯ ಹರಪನಳ್ಳಿ ಕೊರಚರಟ್ಟಿ ಎಂಬಲ್ಲಿ ಆರೋಪಿಯನ್ನು ಬಂಧಿಸಿದೆ.ನಂತರ ಆರೋಪಿಯನ್ನು ಮಾನ್ಯ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನಕ್ಕೆ ಆದೇಶಿಸಿದೆ.

Read More

ಮಂಗಳೂರು: ಸಿಗರೇಟ್ ಸೇರಿದಂತೆ ಯಾವುದೇ ತಂಬಾಕು ಉತ್ಪನ್ನಗಳನ್ನು 21 ವರ್ಷ ಪ್ರಾಯದೊಳಗಿನ ವ್ಯಕ್ತಿಗಳಿಗೆ ಮಾರಾಟ ಮಾಡುವಂತಿಲ್ಲ ಎಂದು ಅಪರ ಜಿಲ್ಲಾಧಿಕಾರಿ ರಾಜು ಕೆ. ತಿಳಿಸಿದ್ದಾರೆ.ದ.ಕ.ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಶುಕ್ರವಾರ ನಡೆದ ದ.ಕ. ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸಿಗರೇಟ್ ಮತ್ತಿತರ ತಂಬಾಕು ಉತ್ಪನ್ನಗಳ ಕಾಯ್ದೆ 2024ಕ್ಕೆ ತಂದಿರುವ ತಿದ್ದುಪಡಿಯ ಅನ್ವಯ 21 ವರ್ಷ ಪ್ರಾಯದೊಳಗಿನವರಿಗೆ ಸಿಗರೇಟ್ ಅಥವಾ ತಂಬಾಕು ಉತ್ಪನ್ನಗಳನ್ನು ಮಾರುವುದನ್ನು ನಿಷೇಧಿಸಲಾಗಿದೆ. ಅದಲ್ಲದೆ ಸಿಗರೇಟ್ ಚಿಲ್ಲರೆಯಾಗಿ ಮಾರುವುದನ್ನೂ ಹಾಗೂ ಶಾಲಾ-ಕಾಲೇಜುಗಳ 100 ಮೀ. ಅಂತರದಲ್ಲಿ ಅವುಗಳ ಮಾರಾಟವನ್ನು ನಿಷೇಧಿಸಲಾಗಿದೆ. ಅಂಗಡಿಗಳಲ್ಲಿ ಅವುಗಳನ್ನು ಮಾರಾಟ ಮಾಡುವವರಿಗೂ 21 ವರ್ಷವಾಗಿರಬೇಕು ಎಂದು ರಾಜು ಹೇಳಿದರು. ಈ ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲು ಎಲ್ಲಾ ನಗರ ಸ್ಥಳೀಯ ಸಂಸ್ಥೆ ಗ್ರಾಪಂಗಳು ಅಂಗಡಿ, ಹೊಟೇಲ್, ಕೆಫೆಗಳಲ್ಲಿ ನಿರಂತರ ತಪಾಸಣೆ ನಡೆಸಬೇಕು. ಅಪ್ರಾಪ್ತರಿಗೆ ಸಿಗರೇಟ್ ಮಾರಾಟ ಕಂಡು ಬಂದರೆ, ಅವುಗಳ ಲೈಸನ್ಸ್ ರದ್ದು ಮಾಡಬೇಕು. ಜಿಲ್ಲಾ ತಂಬಾಕು…

Read More

ಚಾಮರಾಜನಗರ: ಕಾವೇರಿ ವನ್ಯಧಾಮದಲ್ಲಿ ನಡೆದ ಎನ್‌ಕೌಂಟರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮ್ಯಾಜಿಸ್ಟ್ರೇಟ್ ತನಿಖಾ ವರದಿ ಸಲ್ಲಿಕೆಯಾದ ಬಳಿಕ ಇದೀಗ ಸಿಐಡಿ  ತಂಡ ಎಂಟ್ರಿ ನೀಡಿದೆ. ಎನ್‌ಕೌಂಟರ್ ತನಿಖೆಯನ್ನು ಸರ್ಕಾರವು ಸಿಐಡಿಗೆ ವಹಿಸಿದ್ದು, ತನಿಖೆಗಾಗಿ ನಾಲ್ಕು ತಂಡಗಳನ್ನು ರಚಿಸಲಾಗಿದೆ. ಇಬ್ಬರು ಡಿವೈಎಸ್ಪಿಗಳು ಹಾಗೂ ಇಬ್ಬರು ಇನ್ಸ್‌ಪೆಕ್ಟರ್‌ಗಳ ನೇತೃತ್ವದಲ್ಲಿ ಈ ನಾಲ್ಕು ತಂಡಗಳನ್ನು ರಚಿಸಲಾಗಿದ್ದು, ಈಗಾಗಲೇ ಸಿಐಡಿ ತಂಡವು ಸ್ಥಳದಲ್ಲಿ ಬೀಡುಬಿಟ್ಟಿದೆ. ಎನ್‌ಕೌಂಟರ್ ಹಾಗೂ ಹನೂರು, ರಾಮಾಪುರ, ಕೊಳ್ಳೇಗಾಲ ಗ್ರಾಮಾಂತರ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ ಒಟ್ಟು ನಾಲ್ಕು ಪ್ರಕರಣಗಳ ತನಿಖೆಯನ್ನು ಸಿಐಡಿ ನಡೆಸಲಿದೆ. ಈ ಕುರಿತು ಸ್ಥಳೀಯ ಪೊಲೀಸರು ಈಗಾಗಲೇ ಸಿಐಡಿಗೆ ಕೇಸ್ ಫೈಲ್ ಹಸ್ತಾಂತರಿಸಿದ್ದಾರೆ. ಡಿವೈಎಸ್ಪಿ ಸತೀಶ್ ಚಿಟಗುಬ್ಬಿ, ಡಿವೈಎಸ್ಪಿ ಡಿ.ಎಸ್. ರಾಜೇಂದ್ರ, ಪೊಲೀಸ್ ಇನ್ಸ್‌ಪೆಕ್ಟರ್‌ ಕೆ.ಪಿ. ಗೋಪಾಲ್ ಹಾಗೂ ಪೊಲೀಸ್ ಇನ್ಸ್‌ಪೆಕ್ಟರ್‌ ಹೆಚ್.ಎನ್. ಹೊನ್ನಪ್ಪ ಅವರ ನೇತೃತ್ವದಲ್ಲಿ ಸಿಐಡಿಯ ನಾಲ್ಕು ತಂಡಗಳು ತನಿಖೆ ಕೈಗೊಳ್ಳಲಿವೆ.

Read More

ಹುಬ್ಬಳ್ಳಿ,: ಹುಬ್ಬಳ್ಳಿಯಲ್ಲಿ ಹಾಡಹಗಲೇ ನಡುರಸ್ತೆಯಲ್ಲಿ ದುಷ್ಕರ್ಮಿಗಳು ವ್ಯಕ್ತಿಯೊಬ್ಬರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಶುಕ್ರವಾರ ನಡೆದಿದೆ. ಹುಬ್ಬಳಿಯ ವಿದ್ಯಾನಗರದ ಬನಶಂಕರಿ ಬಡಾವಣೆಯಲ್ಲಿ ಈ ಭೀಕರ ಕೊಲೆ ನಡೆದಿದ್ದು, ಸಿದ್ದೇಶ್ವರ ಪಾರ್ಕ್ ಬಳಿ ಸ್ಕೂಟಿಯಲ್ಲಿ ತೆರಳುತ್ತಿದ್ದ ವ್ಯಕ್ತಿಯ ಮೇಲೆ ಮೂವರು ದುಷ್ಕರ್ಮಿಗಳು ಏಕಾಏಕಿ ದಾಳಿ ನಡೆಸಿದ್ದಾರೆ. ಬಳಿಕ ಜನರ ಎದುರೇ ಮಾರಕಾಸ್ತ್ರದಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ಹತ್ಯೆಯಾದ ವ್ಯಕ್ತಿಯನ್ನು ದಾದಾಪೀರ್ ಎಂದು ಗುರುತಿಸಲಾಗಿದ್ದು, ಸ್ಥಳಕ್ಕೆ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್‌ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಹಳೆಯ ದ್ವೇಷಕ್ಕೆ ಈ ಭಯಾನಕ ಕೃತ್ಯ ನಡೆದಿರುವ ಬಗ್ಗೆ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದು, ಹತ್ಯೆ ಬಗ್ಗೆ ಮಾಹಿತಿ ಕಲೆ ಹಾಕಲಾಗುತ್ತಿದೆ. ಕೊಲೆಗೆ ಇನ್ನೂ ನಿಖರ ಕಾರಣ ತಿಳಿದು ಬಂದಿಲ್ಲ ಎಂದು ಹೇಳಿದ್ದಾರೆ. ಈ ಬಗ್ಗೆ ಯಾರಾದರೂ ಪ್ರಕರಣ ದಾಖಲಿಸಿದರೆ ದಾಖಲು ಮಾಡಿಕೊಳ್ಳಲಾಗುವುದು. ಇಲ್ಲದೇ ಹೋದಲ್ಲಿ ಸುಮೋಟೋ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುವುದು ಎಂದು ಶಶಿಕುಮಾರ್ ಅವರು ತಿಳಿಸಿದ್ದಾರೆ.

Read More

ಮಂಗಳೂರು: ವರಮಹಾಲಕ್ಷ್ಮೀ ವ್ರತದ ಅಂಗವಾಗಿ ಮಂಗಳೂರಿನ ವಿವಿಧ ದೇವಸ್ಥಾನ ಹಾಗೂ ಕ್ಷೇತ್ರಗಳಲ್ಲಿ ವಿಶೇಷ ಪೂಜಾ ಕಾರ್ಯಕ್ರಮಗಳು ಭಕ್ತಿಭಾವದಿಂದ ನೆರವೇರಿದವು. ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ದೇವಿಗೆ ವಿಶೇಷ ಪೂಜೆ, ಕುಂಕುಮಾರ್ಚನೆ ಹಾಗೂ ಭಜನಾ ಕಾರ್ಯಕ್ರಮಗಳನ್ನು ನಡೆಸಿದರು. ಶ್ರೀ ಮಂಗಳಾದೇವಿ ಕ್ಷೇತ್ರ, ಕೊಡಿಯಾಲ್‌ಬೈಲ್ ಶ್ರೀ ಭಗವತಿ ಕ್ಷೇತ್ರ  , ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ, ಶ್ರೀ ಕಾಳಿಕಾಂಬಾ ವಿನಾಯಕ ದೇವಸ್ಥಾನ, ಉರ್ವ ಶ್ರೀ ಮಾರಿಯಮ್ಮ ಕ್ಷೇತ್ರ ಸೇರಿದಂತೆ ವಿವಿಧ ಧಾರ್ಮಿಕ ಕೇಂದ್ರಗಳಲ್ಲಿ ವರಮಹಾಲಕ್ಷ್ಮೀ ವ್ರತದ ಅಂಗವಾಗಿ ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಕೊಡಿಯಾಲ್‌ಬೈಲ್ ಶ್ರೀ ಭಗವತಿ ಕ್ಷೇತ್ರದಲ್ಲಿ ಮಹಿಳೆಯರು ಸಾಮೂಹಿಕವಾಗಿ ಪೂಜೆ ಹಾಗೂ ಭಜನಾ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಶ್ರೀ ಮಂಗಳಾದೇವಿ ಕ್ಷೇತ್ರದಲ್ಲಿಯೂ ವರಮಹಾಲಕ್ಷ್ಮೀ ಪೂಜೆ ನೆರವೇರಿತು. ಉರ್ವ ಶ್ರೀ ಮಾರಿಯಮ್ಮ ಕ್ಷೇತ್ರದಲ್ಲಿ ಕುಂಕುಮಾರ್ಚನೆ ಸೇರಿದಂತೆ ಧಾರ್ಮಿಕ ವಿಧಿವಿಧಾನಗಳನ್ನು ನಡೆಸಲಾಯಿತು. ಮಹಿಳೆಯರು ಸಾಂಪ್ರದಾಯಿಕ ಉಡುಗೆಯಲ್ಲಿ ಭಾಗವಹಿಸಿ, ಕುಟುಂಬದ ಸುಖ, ಸಮೃದ್ಧಿ ಹಾಗೂ ಆರೋಗ್ಯಕ್ಕಾಗಿ ಪ್ರಾರ್ಥಿಸಿದರು. ವಿವಿಧ ದೇವಸ್ಥಾನಗಳಲ್ಲಿ ನಡೆದ ಕಾರ್ಯಕ್ರಮಗಳು ಭಕ್ತಿಭಾವದ ವಾತಾವರಣಕ್ಕೆ ಸಾಕ್ಷಿಯಾದವು.

Read More

ಮಂಗಳೂರು: ಬ್ರಹ್ಮಶ್ರೀ ನಾರಾಯಣ ಗುರುಗಳ 172ನೇ ಜನ್ಮದಿನಾಚರಣೆಯನ್ನು ಕೊಡಿಯಾಲ್‌ಬೈಲ್ ಶ್ರೀ ಭಗವತಿ ಕ್ಷೇತ್ರದ ವತಿಯಿಂದ ಆಗಸ್ಟ್ 28ರಂದು ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು. ಜನ್ಮದಿನಾಚರಣೆಯ ಅಂಗವಾಗಿ ಕ್ಷೇತ್ರದಲ್ಲಿ  ಪೂಜಾ ಕಾರ್ಯಕ್ರಮಗಳು ನಡೆದಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡು ಬ್ರಹ್ಮಶ್ರೀ ನಾರಾಯಣ ಗುರುಗಳಿಗೆ ವಿಶೇಷ  ಪೂಜೆ ಸಲ್ಲಿಸಿದರು. ಕಾರ್ಯಕ್ರಮದ ಅಂಗವಾಗಿ ಪಾಂಡೇಶ್ವರದ ಶ್ರೀ ಅಶೋಕ್ ಮತ್ತು ಶ್ರೀಮತಿ ಸಂಧ್ಯಾ ಅಶೋಕ್ ಅವರ ನೇತೃತ್ವದ ‘ದೇವಿ ಭಕ್ತವೃಂದ’ ಬೊಂದೆಲ್ತಂಡದಿಂದ ಭಜನಾ ಸಂಕೀರ್ತನೆ ನಡೆಯಿತು. ಭಕ್ತರು ಭಜನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಭಕ್ತಿಭಾವ ಮೆರೆದರು. ಇದೇ ಸಂದರ್ಭದಲ್ಲಿ ದಿ. ಜೆ. ಜಗನ್ನಾಥ್ ಹಾಗೂ ದಿ. ಅಂಬಾಕ್ಷಿ ಜಗನ್ನಾಥ್ ಅವರ ಸ್ಮರಣಾರ್ಥವಾಗಿ ಜಪ್ಪು ಮಹಾಕಾಳಿ ಪಡ್ಪುವಿನ ಶ್ರೀ ರಾಜಗೋಪಾಲ್ ಮತ್ತು ಕುಟುಂಬದವರಿಂದ ಅನ್ನದಾನ ನೆರವೇರಿಸಲಾಯಿತು. ಭಕ್ತರು ಅನ್ನದಾನದಲ್ಲಿ ಪಾಲ್ಗೊಂಡರು ಅಲ್ಲದೆ, ದಿ. ಕೃಷ್ಣಪ್ಪ ಅವರ ಸ್ಮರಣಾರ್ಥವಾಗಿ ಪಾಂಡೇಶ್ವರದ ಶ್ರೀ ಅಶೋಕ್ ಹಾಗೂ ಕುಟುಂಬದವರಿಂದ ಸಿಹಿತಿಂಡಿ ವಿತರಣೆ ನಡೆಯಿತು. ನಾರಾಯಣ ಗುರುಗಳ ಆದರ್ಶಗಳು ಹಾಗೂ ಸಂದೇಶಗಳನ್ನು ಸ್ಮರಿಸುತ್ತಾ ನಡೆದ…

Read More

ಮರಳು ಸಾಗಣೆ ಲಾರಿ ಚಾಲಕನಿಂದ ಲಂಚ ಪಡೆದ ಆರೋಪದ ಹಿನ್ನೆಲೆಯಲ್ಲಿ ಮೂವರು ಹೆಡ್ ಕಾನ್ಸ್ಟೇಬಲ್ ಹಾಗೂ ಓರ್ವ ಹೋಂಗಾರ್ಡನ್ನು ಲೋಕಾಯುಕ್ತ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಧಾರವಾಡ ಲೋಕಾಯುಕ್ತ ಎಸ್ಪಿ ಸಿದ್ದಲಿಂಗಪ್ಪ ನೇತ್ರತ್ವದಲ್ಲಿ ದಾಳಿ ನಡೆದಿದ್ದು ಕೊಪ್ಪಳದ ಲಾರಿ ಚಾಲಕನ ಹನುಮಂತನಿಂದ ಲಂಚ ಪಡೆದಿರುವ ಆರೋಪ ಕೇಳಿ ಬಂದಿದೆ. 30 ಸಾವಿರ ಲಂಚ ಪಡೆದಿರುವ ಆರೋಪ ಕೇಳಿ ಬಂದಿದ್ದು ಹನುಮಂತ ಲೋಕಾಯುಕ್ತ ಪೊಲೀಸ್ ರಿಗೆ ಈ ಕುರಿತು ದೂರು ನೀಡಿದ್ದ. ಹುಬ್ಬಳ್ಳಿ-ಧಾರವಾಡ ಅವಳಿ ನಗರದಲ್ಲಿ ಲಾರಿ ಬಿಡಲು ಲಂಚ ಸ್ವೀಕರಿಸಿದ ಹಿನ್ನೆಲೆ, ಧಾರವಾಡ ನಗರ ಠಾಣೆಯ ಹೆಡ್ ಕಾನ್ಸ್ಟೇಬಲ್ ಹಸನ್ ಸಾಬ್ ನದಾಫ್, ಧಾರವಾಡ ಸಂಚಾರಿ ಠಾಣೆಯ ಹೆಡ್ ಕಾನ್ಸ್ಟೇಬಲ್ ಇಮಾಮ್ ಅತ್ತಾರ್, ಹುಬ್ಬಳ್ಳಿ ಗ್ರಾಮಾಂತರ ಠಾಣೆ ಕಾನ್ಸ್ಟೇಬಲ್ ಗಿರೀಶ್ ಮನ್ಸುರ್ ಗೃಹರಕ್ಷಕ ಇಕ್ಬಾಲ್ ನನ್ನು ಲೋಕಾಯುಕ್ತ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಮೂವರು ಹೆಡ್ ಕಾನ್ಸ್ಟೇಬಲ್ ಹಾಗೂ ಹೋಂ ಗಾರ್ಡ್ ಮೊಬೈಲ್ ವಶಕ್ಕೆ ಪಡೆದಿದ್ದಾರೆ.

Read More

ಶ್ರೀ ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾರ ನಡೆದಿದ್ದು ಈ ಕುರಿತು ಸಹಕಾರಿ ನಿಬಂಧಕರಿಗೆ ದೂರು ನೀಡಲಾಗಿದೆ. ಪೊಲೀಸ್ ಕಮಿಷನರ್ ಅವರಿಗೂ ದೂರು ನೀಡಲಾಗಿದೆ. ಲೆಕ್ಕಪತ್ರ ಕೇಳಿದರೆ ಕೈಕಾಲು ಕಡಿಯುವ ಬೆದರಿಕೆ ಹಾಕಿದ್ದಾರೆ ಎಂದು ಕಾರ್ಯಕಾರಿ ಸಮಿತಿ ಸದಸ್ಯ ಪವನ್ ರಾಜ್ ಪತ್ರಿಕಾಗೋಷ್ಟಿಯಲ್ಲಿ ಆರೋಪಿಸಿದರು.ಕಳೆದ ಎರಡು ವರ್ಷಗಳಿಂದ ಶ್ರೀ ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದ ಕಾರ್ಯಕಾರಿ ಸಮಿತಿ ಸದಸ್ಯನಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಹಿಂದಿನ ಮಹಾಸಭೆಯಲ್ಲಿ ಕ್ಷೇತ್ರದ ಆಡಳಿತ ಮೊಕ್ತೇಸರರಾಗಿ ಸುರೇಶ್ ಭಟ್ನಗರ ಹಾಗೂ ಸಂಘದ ಅಧ್ಯಕ್ಷರಾಗಿ ಉಮೇಶ್ ಬೆಂಜನಪದವು ಅವರು ಸರ್ವಾನುಮತದಿಂದ ಆಯ್ಕೆಯಾಗಿದ್ದರು. ಆದರೆ ಅಧಿಕಾರ ಹಸ್ತಾಂತರಗೊಂಡ 15 ದಿನಗಳಲ್ಲೇ ಉಮೇಶ್ ಬೆಂಜನಪದವು ವೈಯಕ್ತಿಕ ಕಾರಣ ನೀಡಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು. ಅದಾದ ಬಳಿಕ ಹೊಸ ಮಹಾಸಭೆಯನ್ನು ಕರೆಯದೆ, ಹಲವು ಆಕ್ಷೇಪಗಳ ನಡುವೆಯೇ ಮಾಸಿಕ ಸಭೆಯಲ್ಲಿ ಚಿದಾನಂದ ಗುರಿಕಾರ ಅವರನ್ನು ಅಧ್ಯಕ್ಷರನ್ನಾಗಿ ನೇಮಿಸಲಾಗಿತ್ತು. ಇಲ್ಲಿಂದ ಮುಂದಿನ ಆಡಳಿತ ಕ್ರಮಗಳ ಕುರಿತು ಕಾರ್ಯಕಾರಿ ಸಮಿತಿಯೊಳಗೆ ಹಲವು…

Read More