Author: admin
ತುಮಕೂರು: ಶಿರಾ ತಾಲೂಕಿನ ಕಳ್ಳಂಬೆಳ್ಳ ಬಳಿ ಕಾರು ಸ್ಫೋಟಿಸಿಕೊಂಡು ಪಾಗಲ್ ಪ್ರೇಮಿ ನಾಗೇಂದ್ರ ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣ ಈಗ ಭಯಾನಕ ತಿರುವು ಪಡೆದುಕೊಂಡಿದೆ. ಜೂನ್ 27ರಂದು ನಡೆದ ಈ ಘಟನೆ ಸಂಬಂಧ ಪೊಲೀಸರ ತನಿಖೆಯಲ್ಲಿ ಒಂದೊಂದಾಗಿ ಆಘಾತಕಾರಿ ಅಂಶಗಳು ಬಹಿರಂಗವಾಗುತ್ತಿವೆ. ಜಗಳದ ಬಳಿಕ ಚಾಕು ದಾಳಿ, ಬಳಿಕ ಕಾರು ಸ್ಫೋಟ ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, ನಾಗೇಂದ್ರ ಬೆಂಗಳೂರಿನಿಂದ ಯುವತಿ ರಮ್ಯಾಳನ್ನು ಕಾರಿನಲ್ಲಿ ಕರೆತಂದಿದ್ದನು. ಮಾರ್ಗಮಧ್ಯೆ ಇಬ್ಬರ ನಡುವೆ ಜಗಳ ಉಂಟಾಗಿದ್ದು, ಆ ಸಂದರ್ಭದಲ್ಲಿ ನಾಗೇಂದ್ರ ಯುವತಿಯ ಮೇಲೆ ಚಾಕುವಿನಿಂದ ದಾಳಿ ನಡೆಸಿದ್ದಾನೆ. ಗಾಯಗೊಂಡ ರಮ್ಯಾ ತಕ್ಷಣ ಕಾರಿನಿಂದ ಇಳಿದಿದ್ದು, ಚಾಲಕ ಸಹಾಯಕ್ಕೆ ಮುಂದಾಗಿದ್ದಾಗ ನಾಗೇಂದ್ರ ಕಾರಿನೊಳಗೆ ತನ್ನನ್ನು ಲಾಕ್ ಮಾಡಿಕೊಂಡು ಕಾರು ಸ್ಫೋಟಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ. ಕಾರಿನಲ್ಲಿ ಜೀವಂತ ಬಾಂಬ್ ಪತ್ತೆ; ನಿಷ್ಕ್ರಿಯಗೊಳಿಸಿದ ಪೊಲೀಸರು ಘಟನೆ ಬಳಿಕ ಸ್ಥಳ ಪರಿಶೀಲನೆ ನಡೆಸಿದ ಪೊಲೀಸರಿಗೆ ಮತ್ತೊಂದು ಜೀವಂತ ಬಾಂಬ್ ಪತ್ತೆಯಾಗಿದ್ದು, ಅದನ್ನು ಸುರಕ್ಷಿತವಾಗಿ ವಶಕ್ಕೆ ಪಡೆದು ನಿಷ್ಕ್ರಿಯಗೊಳಿಸಲಾಗಿದೆ. ನಂತರ…
ಬೆಂಗಳೂರು: ಎಲೆಕ್ಟ್ರಾನಿಕ್ಸ್ ಸಿಟಿ ಪೊಲೀಸರ ಕಾರ್ಯಾಚರಣೆಯಲ್ಲಿ ಭಾರಿ ವಾಹನ ನೋಂದಣಿ ಮತ್ತು ತೆರಿಗೆ ವಂಚನೆಗೆ ಸಂಬಂಧಿಸಿದ ದೊಡ್ಡ ಜಾಲವೊಂದು ಪತ್ತೆಯಾಗಿದ್ದು, ಒಂದೇ ನೋಂದಣಿ ಸಂಖ್ಯೆಯನ್ನು ಎರಡು ಮಿನಿಬಸ್ಗಳಿಗೆ ಬಳಸುತ್ತಿದ್ದ ಅಕ್ರಮ ಬೆಳಕಿಗೆ ಬಂದಿದೆ. ಈ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಪೊಲೀಸರು ಒಟ್ಟು 12 ಮಿನಿಬಸ್ಗಳನ್ನು ಜಪ್ತಿ ಮಾಡಿದ್ದಾರೆ. ಸರ್ಕಾರಕ್ಕೆ ಪಾವತಿಸಬೇಕಾದ ರಸ್ತೆ ತೆರಿಗೆ ಮತ್ತು ನೋಂದಣಿ ಶುಲ್ಕಗಳನ್ನು ತಪ್ಪಿಸಲು ನಕಲಿ ನಂಬರ್ ಪ್ಲೇಟ್ಗಳ ಮೂಲಕ ಈ ವಂಚನೆ ನಡೆಯುತ್ತಿದ್ದುದಾಗಿ ಪೊಲೀಸರು ತಿಳಿಸಿದ್ದಾರೆ. ಬಂಧಿತರನ್ನು ಎಲೆಕ್ಟ್ರಾನಿಕ್ಸ್ ಸಿಟಿಯ ಸುಭಾಷ್ನಗರ ನಿವಾಸಿ ಸೈಯದ್ ನಜೀರ್ (40) ಹಾಗೂ ತಮಿಳುನಾಡು ಮೂಲದ, ಆನೇಕಲ್ನಲ್ಲಿ ನೆಲೆಸಿರುವ ಸಾರಿಗೆ ಆಪರೇಟರ್ ನಾಗರಾಜ್ (52) ಎಂದು ಗುರುತಿಸಲಾಗಿದೆ. ಗಸ್ತು ವೇಳೆ ಸಿಕ್ಕ ಸುಳಿವು ಜೂನ್ 23ರಂದು ಮಣಿಪಾಲ್ ಕೌಂಟಿ ರಸ್ತೆಯಲ್ಲಿ ಗಸ್ತು ತಿರುಗುತ್ತಿದ್ದ ಹೆಡ್ ಕಾನ್ಸ್ಟೆಬಲ್ ಕೇದಾರಲಿಂಗ ತಾಂಬೆ ಮತ್ತು ಕಾನ್ಸ್ಟೆಬಲ್ ಕೇಶವಮೂರ್ತಿ ಅವರಿಗೆ ಅನುಮಾನಾಸ್ಪದ ಘಟನೆ ಗಮನಕ್ಕೆ ಬಂದಿದೆ. KA-51-B-5959 ನಂಬರ್ ಹೊಂದಿದ್ದ ಮಿನಿಬಸ್ ಒಂದು ವೇಗವಾಗಿ…
ಮಂಗಳೂರು: ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಪಿ.ಎ. ಇಂಜಿನಿಯರಿಂಗ್ ಕಾಲೇಜಿನ ಬಸ್ ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಉರುಳಿದ ಪರಿಣಾಮ, ಸ್ಕೂಟರ್ನಲ್ಲಿ ಸಂಚರಿಸುತ್ತಿದ್ದ ಇನ್ಫೋಸಿಸ್ ಉದ್ಯೋಗಿಯೊಬ್ಬರು ಮೃತಪಟ್ಟಿದ್ದು, ಬಸ್ನಲ್ಲಿದ್ದ ವಿದ್ಯಾರ್ಥಿಗಳು ಗಾಯಗೊಂಡ ಘಟನೆ ನಾಟೆಕಲ್ ಜಂಕ್ಷನ್ ಸಮೀಪ ಶನಿವಾರ ಸಂಜೆ ನಡೆದಿದೆ. ಮೃತರನ್ನು ಚಿಕ್ಕಮಗಳೂರು ಕುವೆಂಪುನಗರ ನಿವಾಸಿ, ಇನ್ಫೋಸಿಸ್ ಉದ್ಯೋಗಿಯಾಗಿದ್ದ ಪ್ರಜ್ವಲ್ ಅರ್ನಾಲ್ಡ್ (31) ಎಂದು ಗುರುತಿಸಲಾಗಿದೆ. ಪ್ರಜ್ವಲ್ ಅವರು ತಮ್ಮ ಸಹೋದ್ಯೋಗಿ ಅಕ್ಷತಾ ಅವರೊಂದಿಗೆ ಸ್ಕೂಟರ್ನಲ್ಲಿ ಕಂಬಳದ ಪದವಿನಿಂದ ಮಂಗಳೂರು ಕಡೆಗೆ ತೆರಳುತ್ತಿದ್ದರು. ಈ ವೇಳೆ ಕೊಣಾಜೆಯಿಂದ ಮಂಗಳೂರು ಕಡೆಗೆ ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಕಾಲೇಜು ಬಸ್ ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಯ ಚರಂಡಿಗೆ ಉರುಳಿದ್ದು, ಸ್ಕೂಟರ್ ಬಸ್ಸಿನ ಅಡಿಯಲ್ಲಿ ಸಿಲುಕಿಕೊಂಡಿದೆ. ಅಪಘಾತದ ತೀವ್ರತೆಯಿಂದ ಪ್ರಜ್ವಲ್ ಹಾಗೂ ಅಕ್ಷತಾ ಅವರಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯರು ತಕ್ಷಣ ರಕ್ಷಣಾ ಕಾರ್ಯಕ್ಕೆ ಮುಂದಾಗಿದ್ದಾರೆ. ಕ್ರೇನ್ ಸಹಾಯದಿಂದ ಬಸ್ಸನ್ನು ಮೇಲಕ್ಕೆತ್ತಿ ಸ್ಕೂಟರ್ನಡಿ ಸಿಲುಕಿದ್ದ ಇಬ್ಬರನ್ನು ಹೊರತೆಗೆದು ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆ ಪಡೆಯುತ್ತಿದ್ದ ವೇಳೆ ಪ್ರಜ್ವಲ್ ಅವರು…
ಮಂಗಳೂರು: ವಿದ್ಯಾರ್ಥಿಗಳಲ್ಲಿ ಸಾಹಿತ್ಯದ ಬಗ್ಗೆ ಆಸಕ್ತಿ ಹಾಗೂ ಓದುವ ಅಭಿರುಚಿ ಬೆಳೆಸುವ ಉದ್ದೇಶದಿಂದ ಮಂಗಳೂರಿನ ಮಣ್ಣಗುಡ್ಡೆ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 119ನೇ ಸಾಹಿತ್ಯ ಅಭಿರುಚಿ ಕಾರ್ಯಕ್ರಮ ನಡೆಯಿತು. ಅಮೃತ ಪ್ರಕಾಶ ಪತ್ರಿಕೆ ಮಂಗಳೂರು ಹಾಗೂ ದ.ಕ.ಜಿ.ಪ ಹಿರಿಯ ಪ್ರಾಥಮಿಕ ಶಾಲೆ ಮಣ್ಣಗುಡ್ಡೆ ಇವರ ಜಂಟಿ ಆಶ್ರಯದಲ್ಲಿ ಜೂನ್ 27ರಂದು ಶನಿವಾರ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀಮತಿ ನಳಿನಿ ಅವರು ವಹಿಸಿದ್ದರು. ಮುಖ್ಯ ಸಂಪನ್ಮೂಲ ಅತಿಥಿಯಾಗಿ ಭಾಗವಹಿಸಿದ್ದ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಪುಷ್ಪರಾಜ್ ಬಿ.ಎನ್ ಅವರು ಮಾತನಾಡಿ, ವಿದ್ಯಾರ್ಥಿಗಳು ಸಾಹಿತ್ಯದ ಬಗ್ಗೆ ಅಭಿರುಚಿ ಬೆಳೆಸಿಕೊಳ್ಳಲು ನಿರಂತರ ಓದುವ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದು ಅಗತ್ಯ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಹಿರಿಯ ಬರಹಗಾರರಾದ ಎನ್. ಸುಬ್ರಾಯ ಭಟ್ ಹಾಗೂ ಶಾಲೆಯ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಸುರೇಶ್ ಚಂದ್ರ ಶೆಟ್ಟಿ ಅವರು ಅತಿಥಿಗಳಾಗಿ ಭಾಗವಹಿಸಿ ಕಾರ್ಯಕ್ರಮಕ್ಕೆ ಮೆರುಗು ನೀಡಿದರು. ಅಮೃತ ಪ್ರಕಾಶ…
ಉಪ್ಪಿನಂಗಡಿ:16 ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಉಪ್ಪಿನಂಗಡಿ ಠಾಣಾ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಉಪ್ಪಿನಂಗಡಿ ಪೊಲೀಸ್ ಠಾಣೆಯ ಅಕ್ರ 09/2005, ಕಲಂ 457, 380 ಜೊತೆಗೆ 34 ಐಪಿಸಿ ಪ್ರಕರಣದಲ್ಲಿ ಆರೋಪಿಯಾಗಿದ್ದ ತಮಿಳುನಾಡಿನ ತಿರುಣವೇಲಿ ನಿವಾಸಿ ಮಾಡ ಸ್ವಾಮಿ ಎಂಬಾತನು ಹಲವು ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಗೈರಾಗಿದ್ದನು. ಬಳಿಕ ಆತ ತಲೆಮರೆಸಿಕೊಂಡಿದ್ದ ಹಿನ್ನೆಲೆಯಲ್ಲಿ ಪೊಲೀಸರು ಆತನ ಪತ್ತೆಗೆ ಕ್ರಮ ಕೈಗೊಂಡಿದ್ದರು. ಕಾರ್ಯಾಚರಣೆ ನಡೆಸಿದ ಉಪ್ಪಿನಂಗಡಿ ಠಾಣೆಯ ಹೆಡ್ ಕಾನ್ಸ್ಟೇಬಲ್ಗಳಾದ ಎಚ್ಸಿ 826 ಹಾಗೂ ಎಚ್ಸಿ 331 ಅವರು ಕೃಷ್ಣ ನಗರ ಎಂಬಲ್ಲಿ ಆರೋಪಿಯನ್ನು ಪತ್ತೆ ಹಚ್ಚಿ ದಸ್ತಗಿರಿ ಮಾಡಿದ್ದಾರೆ. ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆತನಿಗೆ ನ್ಯಾಯಾಂಗ ಬಂಧನ ವಿಧಿಸಿದೆ.
ಮಂಗಳೂರು:ವೃದ್ಧ ಮಹಿಳೆಯ ಕುತ್ತಿಗೆಯಿಂದ ಬಂಗಾರದ ಸರ ಕಸಿದು ಪರಾರಿಯಾಗಿದ್ದ ಪ್ರಕರಣವನ್ನು ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ಪೊಲೀಸರು ಭೇದಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ಇನ್ನೋರ್ವ ಆರೋಪಿ ಪೊಲೀಸರ ಕೈಗೆ ಸಿಗದೆ ಪರಾರಿಯಾಗಿದ್ದಾನೆ. ಜೂನ್ 14ರಂದು ಮಧ್ಯಾಹ್ನ ಸುಮಾರು 12.30ರ ವೇಳೆಗೆ ಮಂಗಳೂರು ನಗರದ ಸೂಟರ್ಪೇಟೆಗೆ ತೆರಳುತ್ತಿದ್ದ ಮಹಿಳೆಯೊಬ್ಬರು ಎಕ್ಕೂರು ಬಸ್ ನಿಲ್ದಾಣದಿಂದ ಇಳಿದು ಸೂಟರ್ಪೇಟೆ ಗ್ರಾಮ ಲೆಕ್ಕಾಧಿಕಾರಿ ಕಚೇರಿ ಸಮೀಪ ನಡೆದುಕೊಂಡು ಹೋಗುತ್ತಿದ್ದರು. ಈ ವೇಳೆ ಬೈಕ್ನಲ್ಲಿ ಬಂದ ಇಬ್ಬರು ಅಪರಿಚಿತರು ವಿಳಾಸ ಕೇಳುವ ನೆಪದಲ್ಲಿ ಮಹಿಳೆಯ ಬಳಿ ಬಂದು, ಏಕಾಏಕಿ ಆಕೆಯ ಕುತ್ತಿಗೆಯಲ್ಲಿದ್ದ ಸುಮಾರು 12 ಗ್ರಾಂ ತೂಕದ ಲಕ್ಷ್ಮಿ ಪೆಂಡೆಂಟ್ ಹೊಂದಿರುವ ಬಂಗಾರದ ಸರವನ್ನು ಕಸಿದು ಪರಾರಿಯಾಗಿದ್ದರು. ಕಳವಾದ ಬಂಗಾರದ ಸರದ ಮೌಲ್ಯ ಸುಮಾರು ₹1.50 ಲಕ್ಷ ಎಂದು ಅಂದಾಜಿಸಲಾಗಿದ್ದು, ಈ ಕುರಿತು ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆ ಕೈಗೊಂಡ ಪೊಲೀಸರು ಜೂನ್ 26ರಂದು ಮಂಗಳೂರು ನಗರದ ಪಾಂಡೇಶ್ವರದ ರೋಸಾರಿಯೋ…
ನವದೆಹಲಿ:ದೇಶದಲ್ಲಿ ಅಂಗಾಂಗ ಕಸಿ ಪ್ರಕ್ರಿಯೆಗಳಲ್ಲಿ ಪಾರದರ್ಶಕತೆ ಹೆಚ್ಚಿಸುವ ನಿಟ್ಟಿನಲ್ಲಿ ರಾಷ್ಟ್ರೀಯ ಅಂಗ ಮತ್ತು ಅಂಗಾಂಶ ಕಸಿ ಸಂಸ್ಥೆ (NOTTO) ಮಹತ್ವದ ಕ್ರಮ ಕೈಗೊಂಡಿದೆ. ಇನ್ನು ಮುಂದೆ ದೇಶದ ಎಲ್ಲಾ ನೋಂದಾಯಿತ ಅಂಗಾಂಗ ಕಸಿ ಆಸ್ಪತ್ರೆಗಳು ತಮ್ಮ ವೆಬ್ಸೈಟ್ನ ಮುಖಪುಟದಲ್ಲಿ ಕಸಿ ಚಿಕಿತ್ಸೆಗಳ ಫಲಿತಾಂಶಗಳ ದತ್ತಾಂಶಗಳನ್ನು ಕಡ್ಡಾಯವಾಗಿ ಪ್ರಕಟಿಸಬೇಕಾಗಿದೆ. ಕರ್ನಾಟಕದ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಅಂಗಾಂಗ ಕಸಿ ಪ್ರಕರಣಗಳಲ್ಲಿ ಪಾರದರ್ಶಕತೆ ತರಲು ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ ಹಾಗೂ NOTTO ನಿರ್ದೇಶಕ ಡಾ. ಅನಿಲ್ ಕುಮಾರ್ ಅವರಿಗೆ ಪತ್ರ ಬರೆದಿದ್ದರು. ಈ ಪತ್ರದ ಹಿನ್ನೆಲೆಯಲ್ಲಿ NOTTO ಎಲ್ಲಾ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳ ಸೂಕ್ತ ಪ್ರಾಧಿಕಾರಗಳಿಗೆ ಈ ಸಂಬಂಧ ಅಧಿಕೃತ ಸೂಚನೆ ನೀಡಿದೆ. ಮಂಗಳೂರಿನ ಆರೋಗ್ಯ ತಜ್ಞರಾದ ಶ್ಯಾಮ್ ಕಾಮತ್ ಹಾಗೂ ಡಾ. ಲಿಯೋನೆಲ್ ಡಿಸೋಜಾ ಅವರು ಸಲ್ಲಿಸಿದ್ದ ಸಮಗ್ರ ವರದಿಯನ್ನು ಆಧರಿಸಿ ಸಂಸದ ಚೌಟ ಅವರು ಪತ್ರ ಬರೆದಿದ್ದರು. ಅಂಗಾಂಗ ಕಸಿ…
ವಿಟ್ಲ: ವನ್ಯಜೀವಿ ಉತ್ಪನ್ನವಾದ ಅಂಬರ್ಗ್ರೀಸ್ (ತಿಮಿಂಗಿಲ ವಾಂತಿ) ಮಾರಾಟಕ್ಕಾಗಿ ಸಾಗಿಸಲಾಗುತ್ತಿದೆ ಎಂಬ ಮಾಹಿತಿ ಮೇರೆಗೆ ವಿಟ್ಲ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕರಾದ ರಾಮಕೃಷ್ಣ ಅವರು ಸಿಬ್ಬಂದಿಗಳೊಂದಿಗೆ ಕಾರ್ಯಾಚರಣೆ ನಡೆಸಿದ್ದಾರೆ. ದಿನಾಂಕ 24-06-2026 ರಂದು ರಾತ್ರಿ ಬಂಟ್ವಾಳ ತಾಲೂಕು ವಿಟ್ಲ ಕಸಬಾ ಗ್ರಾಮದ ಬೋಳಂತಿಮೊಗರು ಎಂಬಲ್ಲಿ ಸ್ಕೂಟರ್ವೊಂದನ್ನು ತಡೆದು ಪರಿಶೀಲನೆ ನಡೆಸಲಾಗಿದೆ. ಈ ವೇಳೆ ಸ್ಕೂಟರ್ನಲ್ಲಿದ್ದ ಬಂಟ್ವಾಳ ಕರೋಪಾಡಿ ನಿವಾಸಿ ಕುಮುದಾಕ್ಷ (27) ಹಾಗೂ ಬಂಟ್ವಾಳ ವಿಟ್ಲ ಕಸಬಾ ನಿವಾಸಿ ಧನು ಕುಮಾರ್ (32) ಅವರನ್ನು ವಿಚಾರಣೆ ನಡೆಸಲಾಗಿದೆ. ವಿಚಾರಣೆ ವೇಳೆ ಆರೋಪಿಗಳು ಯಾವುದೇ ಪರವಾನಿಗೆ ಇಲ್ಲದೆ ಸಾಗಿಸುತ್ತಿದ್ದ ಸುಮಾರು 5.73 ಗ್ರಾಂ ತೂಕದ ವಸ್ತುವನ್ನು ಹಾಜರುಪಡಿಸಿದ್ದು, ಅದು ಅಂಬರ್ಗ್ರೀಸ್ (ತಿಮಿಂಗಿಲ ವಾಂತಿ) ಎಂದು ತಿಳಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಮುಂದಿನ ಕಾನೂನು ಕ್ರಮಕ್ಕಾಗಿ ಅಂಬರ್ಗ್ರೀಸ್, ಆರೋಪಿಗಳ ಬಳಿಯಿದ್ದ 2 ಮೊಬೈಲ್ ಫೋನ್ಗಳು ಹಾಗೂ ದ್ವಿಚಕ್ರ ವಾಹನವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ: 140/2026, ಕಲಂ: 51 THE…
ಪುತ್ತೂರು: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿರುವ ಬಗ್ಗೆ ದಿನಾಂಕ 25.06.2026 ರಂದು ಸಂಜೆ ಪುತ್ತೂರು ಗ್ರಾಮಾಂತರ ಠಾಣಾ ಪೊಲೀಸ್ ಉಪನಿರೀಕ್ಷಕರಾದ ಸುಷ್ಮಾ ಜಿ. ಭಂಡಾರಿ ಅವರಿಗೆ ಮಾಹಿತಿ ದೊರಕಿದ್ದು, ಮಾಹಿತಿ ಆಧರಿಸಿ ಅವರು ಸಿಬ್ಬಂದಿಗಳೊಂದಿಗೆ ಪುತ್ತೂರು ಆರ್ಯಾಪು ಗ್ರಾಮದ ಮರಕ್ಕ ಎಂಬಲ್ಲಿ ಪರಿಶೀಲನೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ KA 21 5450 ನೋಂದಣಿಯ ಪಿಕ್ಅಪ್ ವಾಹನವನ್ನು ತಡೆದು ತಪಾಸಣೆ ನಡೆಸಿದಾಗ, ಒಂದು ಜಾನುವಾರನ್ನು ಹಿಂಸಾತ್ಮಕ ರೀತಿಯಲ್ಲಿ ಸಾಗಿಸುತ್ತಿರುವುದು ಕಂಡುಬಂದಿದೆ. ವಾಹನದ ಚಾಲಕ ನಾರಾಯಣ ಹಾಗೂ ಸಹಪ್ರಯಾಣಿಕ ಮೊಯ್ದುಕುಂಞ ಅವರನ್ನು ವಿಚಾರಿಸಿದಾಗ, ಜಾನುವಾರು ಸಾಗಾಟಕ್ಕೆ ಸಂಬಂಧಿಸಿದ ಯಾವುದೇ ಅನುಮತಿ ಹಾಗೂ ಅಗತ್ಯ ದಾಖಲೆಗಳು ಅವರ ಬಳಿ ಇರಲಿಲ್ಲ ಎಂದು ತಿಳಿದುಬಂದಿದೆ. ಬಳಿಕ ಪೊಲೀಸರು ಜಾನುವಾರು ಹಾಗೂ ವಾಹನವನ್ನು ವಶಪಡಿಸಿಕೊಂಡು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ. ಈ ಸಂಬಂಧ ಆರೋಪಿಗಳ ವಿರುದ್ಧ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅ.ಕ್ರ: 95-2026, ಕಲಂ: 5, 7, 12 ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ…
ವಿಟ್ಲ: ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ವಿಟ್ಲ ಠಾಣೆ ಪೊಲೀಸರು ಬಂಧಿಸಿರುವ ಘಟನೆ ವಿಟ್ಲ ಸಮೀಪದ ಮಂಗಿಲಪದವಿನಲ್ಲಿ ನಡೆದಿದೆ. ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು, ಆತನಿಂದ ಅಕ್ರಮವಾಗಿ ಮಾರಾಟ ಮಾಡಲಾಗುತ್ತಿದ್ದ ಮದ್ಯವನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತ ಆರೋಪಿಯನ್ನು ವಿಟ್ಲ ಕಸಬಾ ನಿವಾಸಿ ಲಕ್ಷ್ಮಣಗೌಡ (54) ಎಂದು ಗುರುತಿಸಲಾಗಿದೆ. ವಿಟ್ಲದ ಮಂಗಿಲಪದವು ಬಸ್ ತಂಗುದಾಣದ ಸಮೀಪ ಅಕ್ರಮವಾಗಿ ಮದ್ಯ ಮಾರಾಟ ನಡೆಯುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಮೇರೆಗೆ ವಿಟ್ಲ ಪೊಲೀಸರು ದಾಳಿ ನಡೆಸಿದರು. ದಾಳಿಯ ವೇಳೆ ವಿವಿಧ ಮಾದರಿಯ ಒಟ್ಟು 4.5 ಲೀಟರ್ ಮದ್ಯ ಹಾಗೂ ಮದ್ಯ ಮಾರಾಟದಿಂದ ಸಂಗ್ರಹಿಸಲಾಗಿದ್ದ 300 ರೂಪಾಯಿ ನಗದನ್ನುಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಆರೋಪಿಯ ವಿರುದ್ಧ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ.



