Author: admin

ಮಂಗಳೂರು: ಬಂಧಿಸಿ ಠಾಣೆಗೆ ಕರೆತರುತ್ತಿದ್ದ ವೇಳೆ ಐವರು ಪೊಲೀಸರ ಕಣ್ಣಿಗೆ ಮಣ್ಣೆರಚಿ, ಹ್ಯಾಂಡ್‌ಕಫ್ (ಕೋಳ) ಸಮೇತ ಖತರ್ನಾಕ್ ಸರಗಳ್ಳನೊಬ್ಬ ಸಿನಿಮೀಯ ರೀತಿಯಲ್ಲಿ ತಪ್ಪಿಸಿಕೊಂಡಿರುವ ಘಟನೆ ಮಂಗಳೂರಿನ ರೋಜಾರಿಯೋ ಚರ್ಚ್ ರಸ್ತೆಯಲ್ಲಿ ನಡೆದಿದೆ. ಬಾಗಲಕೋಟೆ ಮೂಲದ ಅಲ್ತಾಫ್ ಹುಸೇನ್ ಪರಾರಿಯಾದ ನಟೋರಿಯಸ್ ಆರೋಪಿ. ಈತನ ಬಂಧನಕ್ಕಾಗಿ ಪೊಲೀಸರು ಇದೀಗ ತೀವ್ರ ಶೋಧ ಕಾರ್ಯ ಆರಂಭಿಸಿದ್ದಾರೆ. ಮಂಗಳೂರಿನ ಜಪ್ಪಿನಮೊಗರು ಬಳಿ ಇತ್ತೀಚೆಗೆ ನಡೆದಿದ್ದ ಸರಗಳ್ಳತನ ಪ್ರಕರಣದ ಬೆನ್ನುಹತ್ತಿದ್ದ ಮಂಗಳೂರಿನ ಪಾಂಡೇಶ್ವರ ಠಾಣೆಯ ಪೊಲೀಸರಿಗೆ ಅಂತರರಾಜ್ಯ ಕಳ್ಳರ ಗ್ಯಾಂಗ್‌ನ ಪಕ್ಕಾ ಮಾಹಿತಿ ಲಭ್ಯವಾಗಿತ್ತು. ಬಾಗಲಕೋಟೆಯ ಅಲ್ತಾಫ್ ಹುಸೇನ್, ಉತ್ತರ ಪ್ರದೇಶ ಮೂಲದ ಮಹಮ್ಮದ್ ಸಿದ್ದಿಕ್ ಹಾಗೂ ರವಿ ಬೌರ ಎಂಬಿಬ್ಬರು ಸಹಚರರೊಂದಿಗೆ ಸೇರಿಕೊಂಡು ವಾಹನ ಕಳ್ಳತನ, ಸರಗಳ್ಳತನ ಹಾಗೂ ದರೋಡೆ ಎಸಗುತ್ತಿದ್ದ ಗ್ಯಾಂಗ್ ಕಟ್ಟಿಕೊಂಡಿದ್ದ. ಕೃತ್ಯ ಎಸಗಿದ ತಕ್ಷಣ ಈ ಗ್ಯಾಂಗ್ ನಗರ ಬಿಟ್ಟು ಪರಾರಿಯಾಗುತ್ತಿತ್ತು. ಹೈದರಾಬಾದ್, ಬಾಗಲಕೋಟೆ, ಗದಗ್ ಸೇರಿದಂತೆ ಹಲವು ನಗರಗಳಲ್ಲಿ ಈ ಗ್ಯಾಂಗ್ ವಿರುದ್ಧ ಗಂಭೀರ ಪ್ರಕರಣಗಳು ದಾಖಲಾಗಿವೆ. ಖತರ್ನಾಕ್ ಗ್ಯಾಂಗ್…

Read More

ಕಾರ್ಕಳ/ಹೆಬ್ರಿ: ಕಾರ್ಕಳ ಸಮೀಪದ ರಸ್ತೆ ಬದಿಯಲ್ಲಿ ಚಿರತೆ ಕಾಣಿಸಿಕೊಂಡಿದ್ದಿದ್ದು, ಜೊತೆಗೆ ಹೆಬ್ರಿಯಲ್ಲಿ ಹಾಡುಹಗಲೇ ಕರು ಮೇಲೆ ಚಿರತೆ ದಾಳಿ ನಡೆಸಿದ್ದು, ಸ್ಥಳೀಯರಲ್ಲಿ ಆತಂಕವನ್ನು ಮೂಡಿಸಿದೆ. ಈ ಕೂಡಲೇ ಅರಣ್ಯ ಇಲಾಖೆಯವರು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ. ಕಾರ್ಕಳದಲ್ಲಿ ಚಿರತೆ ಪ್ರತ್ಯಕ್ಷ: ಜೂನ್ 24 ರಂದು ರಾತ್ರಿ ಸುಮಾರು 8 ಗಂಟೆ ಸುಮಾರಿಗೆ ಕಾರ್ಕಳದ ಸಾಣೂರು ಗ್ರಾಮದ ಪಿಲಿಕಲ್ಲು ಸಮೀಪದ ರಸ್ತೆ ಬದಿಯಲ್ಲಿ ಚಿರತೆ ಕಾಣಿಸಿಕೊಂಡಿದೆ. ಕಾರ್ಕಳ ಪಟ್ಟಣದಿಂದ ಮನೆಗೆ ಮರಳುತ್ತಿದ್ದ ಸ್ಥಳೀಯ ನಿವಾಸಿಯೊಬ್ಬರು ರಸ್ತೆಯನ್ನು ದಾಟುತ್ತಿದ್ದ ಚಿರತೆಯನ್ನು ನೋಡಿ, ಅದನ್ನು ತಮ್ಮ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಹಿಡಿದಿದ್ದಾರೆ.ಈ ಸ್ಥಳದ ಸಮೀಪದಲ್ಲಿಯೇ ಶಿಕ್ಷಣ ಸಂಸ್ಥೆಯೊಂದು ಇರುವುದರಿಂದ ಮತ್ತು ಪ್ರತಿನಿತ್ಯ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಓಡಾಡುವುದರಿಂದ ಜನರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ. ಸಂಬಂಧಪಟ್ಟ ಅರಣ್ಯ ಇಲಾಖೆಯ ಅಧಿಕಾರಿಗಳು ಈ ಪ್ರದೇಶದಲ್ಲಿ ಪರಿಶೀಲನೆ ನಡೆಸಿ, ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ. ಹಾಡುಹಗಲೇ ಹೆಬ್ರಿಯಲ್ಲಿ ಕರು ಮೇಲೆ ಚಿರತೆ ದಾಳಿ: ಶುಕ್ರವಾರ ಹೆಬ್ರಿಯ ಸೀತಾನದಿ ನೇಚರ್…

Read More

ಸುಳ್ಯ: ಕಳೆದುಹೋಗಿದ್ದ ಆರು ಪವನ್‌ ಬ್ರೆಸ್‌ಲೆಟ್‌ನ್ನು ಅದರ ನಿಜವಾದ ಮಾಲೀಕರಿಗೆ ಹಿಂದಿರುಗಿಸಿದ ಕೇರಳದ ಮಹಿಳೆಯ ಪ್ರಾಮಾಣಿಕತೆಗೆ 1 ಲಕ್ಷ ರೂ. ನಗದು ಬಹುಮಾನ ನೀಡಲಾಗಿದೆ. ಜೂನ್ 21 ರಂದು ಜಾಲ್ಸೂರು ಬಳಿಯ ಅಡ್ಕರ್ ಮದುವೆ ಮಂಟಪದಲ್ಲಿ ನಡೆದ ಮದುವೆ ಸಮಾರಂಭದಲ್ಲಿ ಭಾಗವಹಿಸಿ ಕಾರಿಗೆ ಹತ್ತುತ್ತಿದ್ದಾಗ ಅಡ್ತಲೆ ನಿವಾಸಿ ಭೋಜಪ್ಪ ಅಜಲ ಅವರು ಆಕಸ್ಮಿಕವಾಗಿ ಬಳೆ ಕೆಳಗೆ ಜಾರಿ ಬಿದ್ದಿದೆ. ಸಾಕಷ್ಟು ಹುಡುಕಾಡಿದರೂ ಪತ್ತೆಯಾಗಲಿಲ್ಲ ಮತ್ತು ನಂತರ ಕಾಣೆಯಾದ ಬ್ರೆಸ್‌ಲೆಟ್‌ ಬಗ್ಗೆ ಮಾಹಿತಿಯನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡರು. ಕೇರಳದ ಚಟ್ಟಂಜಾಲು ಮೂಲದ ಮಹಿಳೆಗೆ ಬ್ರೆಸ್‌ಲೆಟ್‌ ಸಿಕ್ಕಿದೆ. ಅವರು ಕೂಡ ಅದೇ ಮದುವೆಗೆ ಹಾಜರಾಗಿದ್ದರು. ಕಳೆದುಹೋದ ಆಭರಣದ ಕುರಿತು ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳನ್ನು ಗಮನಿಸಿದ ನಂತರ, ಅವರು ತಕ್ಷಣ ಭೋಜಪ್ಪ ಅವರನ್ನು ಸಂಪರ್ಕಿಸಿ ಬ್ರೆಸ್‌ಲೆಟ್‌ನ್ನು ಅವರಿಗೆ ಹಿಂತಿರುಗಿಸಿದ್ದಾರೆ. ಆ ಮಹಿಳೆಯ ಪ್ರಾಮಾಣಿಕತೆಯನ್ನು ಮೆಚ್ಚಿದ ಭೋಜಪ್ಪ, ಆಕೆಗೆ 1 ಲಕ್ಷ ರೂಪಾಯಿ ನಗದು ಬಹುಮಾನ ನೀಡಿ ಗೌರವಿಸಿದರು ಮತ್ತು ಕೃತಜ್ಞತೆಯ ಸಂಕೇತವಾಗಿ ಚಿನ್ನದ ಉಂಗುರವನ್ನು ನೀಡಿದ್ದಾರೆ.

Read More

ಮಂಗಳೂರು: ರಾಜ್ಯದ ಎಲ್ಲ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರು ಮತ್ತು ಮಕ್ಕಳ ಅನುಕೂಲಕ್ಕಾಗಿ ಶನಿವಾರದ ದಿನಕ್ಕೆ ಮಾತ್ರ ಅನ್ವಯಿಸುವಂತೆ ಶಾಲಾ ಸಮಯದ ಬದಲಾವಣೆ ಮಾಡಲಾಗಿದೆ. ಬೆಳಗ್ಗೆ 8.30ರಿಂದ ಶಾಲೆ ಆರಂಭಿಸಿ ಮಧ್ಯಾಹ್ನ 12. 30ರವರೆಗೆ ತರಗತಿ ನಡೆಸಲು ಶಿಕ್ಷಣ ಇಲಾಖೆ ಏಕರೂಪದ ಸಮಯ ನಿಗದಿಪಡಿಸಿದೆ. ಇದು ಜೂ.27ರ ಶನಿವಾರದಿಂದಲೇ ಜಾರಿಯಾಗುತ್ತದೆ ಎಂದು ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ. ಪ್ರಸ್ತುತ ರಾಜ್ಯಾದ್ಯಂತ ಪ್ರಾದೇಶಿಕವಾರು ಬೇರೆ ಬೇರೆ ಶಾಲಾ ಸಮಯವನ್ನು ಪಾಲಿಸಲಾಗುತ್ತಿದೆ. ಕೆಲವೆಡೆ ಬೆಳಗ್ಗೆ 7.30ರಿಂದ 11.30, ಇನ್ನು ಕೆಲವೆಡೆ ಬೆಳಗ್ಗೆ 8ರಿಂದ 12 ಗಂಟೆ ಹೀಗೆ ಬೇರೆ ಬೇರೆ ಸಮಯ ಪಾಲನೆ ಆಗುತ್ತಿದೆ. ಇದರ ಬದಲು ವಿದ್ಯಾರ್ಥಿ ಹಾಗೂ ಶಿಕ್ಷಕ ಸ್ನೇಹಿಯಾಗಿ ರಾಜ್ಯಾದ್ಯಂತ ಒಂದೇ ಸಮಯ ನಿಗದಿಪಡಿಸಿ ಅದನ್ನು ಅನುಸರಿಸಲು ಸೂಚಿಸಲಾಗಿದೆ. ರಾಜ್ಯ ಸರ್ಕಾರ ದೇಶದಲ್ಲಿಯೇ ಮೊದಲ ಬಾರಿಗೆ ಸರ್ಕಾರಿ ನೌಕರರಿಗೆ ಕರ್ತವ್ಯ ಮೊಬೈಲ್‌ ಅಪ್ಲಿಕೇಷನ್ ಮೂಲಕ ಎಐ ಆಧಾರಿತ ಡಿಜಿಟಲ್‌ ಹಾಜರಾತಿ ಜಾರಿಗೊಳಿಸಿದೆ. ಈವರೆಗೆ ಶಿಕ್ಷಕರ ಹಾಜರಾತಿ ಪುಸ್ತಕದಲ್ಲಿ ಅವರ ಹಾಜರಿ ದಾಖಲಾಗುತ್ತಿತ್ತು. ಶನಿವಾರ…

Read More

ಮಂಗಳೂರು: ನಗರದಲ್ಲಿ ಡ್ರಗ್ ಸರಬರಾಜು ಮಾಡುತ್ತಿದ್ದ ಆರೋಪಿ  ಓರ್ವನನ್ನು ಸಿಸಿಬಿ ಪೊಲೀಸರು ಕಾರ್ಯಚರಣೆ ನಡೆಸಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.  ಆರೋಪಿಯು , ಸುರತ್ಕಲ್ ನಿವಾಸಿಯಾಗಿದ್ದು, ಹಾಲಿ ವಾಸ , ಕುಳಾಯಿಗುಡ್ಡೆ ಅಣ್ಣಪ್ಪ ಸ್ವಾಮಿ ಅಲಿಯಾಸ್‌ ಮನು( 26 ) ಎಂದು ಗುರುತಿಸಲಾಗಿದೆ. ನಿಷೇಧಿತ ಮಾದಕವಸ್ತು ಎಂಡಿಎಂಎ ಖರೀದಿಸಿ ಮಂಗಳೂರು ನಗರಕ್ಕೆ ತಂದು ಕುಳಾಯಿ ಗುಡ್ಡೆ ಪರಿಸರದಲ್ಲಿರುವ ಮನೆಯಿಂದ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿರುವ ಬಗ್ಗೆ ಮಾಹಿತಿ ಪಡೆದು ಜೂನ್‌ 25 ರಂದು ಸಿಸಿಬಿ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದಾರೆ. ಬಳಿಕ   ಬಂಧಿತ ಆರೋಪಿಯಿಂದ ಸುಮಾರು 1,50,000 ಮೌಲ್ಯದ 15 ಗ್ರಾಂ ಎಂಡಿಎಂಎ ಹಾಗೂ ಮೊಬೈಲ್ ಫೋನ್, ಜಿಪ್ ಲಾಕ್ ಕವರ್, ಡಿಜಿಟಲ್ ತೂಕಮಾಪನವನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ- 2,10,500 ರೂ ಅಂದಾಜಿಸಲಾಗಿದೆ. ಈ ಕುರಿತು ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ ಅಣ್ಣಪ್ಪ ಸ್ವಾಮಿ ವಿರುದ್ಧ ಈ ಹಿಂದೆ ಪಣಂಬೂರು, ಬಜಪೆ ಠಾಣೆಗಳಲ್ಲಿ ಎನ್.ಡಿ.ಪಿ. ಎಸ್ ಪ್ರಕರಣ, ಸುರತ್ಕಲ್ ಪೊಲೀಸ್ ಠಾಣೆಯಲ್ಲಿ…

Read More

ಬೆಳ್ತಂಗಡಿ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಸುಲ್ಕೇರಿ ಗ್ರಾಮದಲ್ಲಿ ಶುಕ್ರವಾರ ಮುಂಜಾನೆ ಸಂಭವಿಸಿದೆ. ಅಪಘಾತದಲ್ಲಿ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದ್ದು, ಅದೃಷ್ಟವಶಾತ್ ಅದರಲ್ಲಿದ್ದ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಸುಲ್ಕೇರಿ ಗ್ರಾಮದ ಹೆದ್ದಾರಿಯಲ್ಲಿ ವೇಗವಾಗಿ ಸಂಚರಿಸುತ್ತಿದ್ದ ಮಾರುತಿ ಸುಜುಕಿ ಕಾರು, ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಅತ್ಯಂತ ವೇಗವಾಗಿ ಢಿಕ್ಕಿ ಹೊಡೆದಿದೆ. ಢಿಕ್ಕಿಯ ಭೀಕರತೆಗೆ ಕಾಂಕ್ರೀಟ್‌ನ ವಿದ್ಯುತ್ ಕಂಬವು ತಳಭಾಗದಿಂದಲೇ ಮುರಿದು ಕಾರಿನ ಮುಂಭಾಗದ ಮೇಲೆಯೇ ಬಿದ್ದಿದೆ. ಪರಿಣಾಮವಾಗಿ ಕಾರಿನ ಬಾನೆಟ್, ಬಂಪರ್ ಹಾಗೂ ಇಂಜಿನ್ ಭಾಗವು ಸಂಪೂರ್ಣ ನಜ್ಜುಗುಜ್ಜಾಗಿದೆ. ಕಾರಿನ ಮುಂಭಾಗದ ಸ್ಥಿತಿಯನ್ನು ನೋಡಿದರೆ ಒಳಗಿದ್ದವರು ಬದುಕುಳಿದಿದ್ದೇ ದೊಡ್ಡ ಪವಾಡ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಅಪಘಾತದ ತೀವ್ರತೆಗೆ ವಿದ್ಯುತ್ ಕಂಬ ಮುರಿದುಬಿದ್ದಿದ್ದರಿಂದ ಹೈ-ವೋಲ್ಟೇಜ್ ವಿದ್ಯುತ್ ತಂತಿಗಳು ತುಂಡಾಗಿ ರಸ್ತೆಯ ಮೇಲೆ ಬಿದ್ದಿದ್ದವು. ಇದರಿಂದಾಗಿ ಇಡೀ ಭಾಗದಲ್ಲಿ ತಕ್ಷಣವೇ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಮೆಸ್ಕಾಂ (MESCOM) ಸಿಬ್ಬಂದಿ ಕಾರಿನ ಮೇಲೆ…

Read More

ನವದೆಹಲಿ: ಮಧ್ಯಪ್ರದೇಶದ ಅಶೋಕನಗರದಲ್ಲಿ ನಿಲ್ಲಿಸಿದ್ದ ಕಾರಿನೊಳಗೆ ಗುಂಡೇಟು ಹಾಗೂ ಸುಟ್ಟ ಗಾಯಗಳೊಂದಿಗೆ ದಂಪತಿಯ ಮೃತದೇಹಗಳು ಪತ್ತೆಯಾಗಿದ್ದು, ಪ್ರಕರಣವನ್ನು ಕೊಲೆ ಹಾಗೂ ಆತ್ಮಹತ್ಯೆ ಎರಡೂ ಆಯಾಮಗಳಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಮೃತರನ್ನು ರಿತಿಕ್ ಸೋನಿ ಮತ್ತು ಮುಸ್ಕಾನ್ ಎಂದು ಗುರುತಿಸಲಾಗಿದೆ. ರಿತಿಕ್ ಕಾರಿನ ಚಾಲಕನ ಆಸನದಲ್ಲಿ ಕುಳಿತ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ತಲೆಗೆ ಗುಂಡೇಟಿನ ಗಾಯ ಮತ್ತು ಮುಖದ ಮೇಲೆ ಸುಟ್ಟ ಗುರುತುಗಳಿದ್ದವು. ಮುಸ್ಕಾನ್ ಪಕ್ಕದ ಆಸನದಲ್ಲಿ ಕುತ್ತಿಗೆ ಸೀಳಿದ ಸ್ಥಿತಿಯಲ್ಲಿ ಮೃತಪಟ್ಟಿರುವುದು ಕಂಡುಬಂದಿದೆ. ಇಬ್ಬರೂ ಅಶೋಕನಗರದ ನಿವಾಸಿಗಳಾಗಿದ್ದಾರೆ. ಪೊಲೀಸರ ಮಾಹಿತಿ ಪ್ರಕಾರ, ಮುಸ್ಕಾನ್ ಬುಧವಾರ ಮಧ್ಯಾಹ್ನ ಜಿಮ್‌ಗೆ ತೆರಳುವುದಾಗಿ ಮನೆಯಿಂದ ಹೊರಟಿದ್ದಳು. ಆದರೆ ರಾತ್ರಿ ಮನೆಗೆ ವಾಪಸ್ ಬಾರದೆ ಇದ್ದ ಹಿನ್ನೆಲೆಯಲ್ಲಿ ಕುಟುಂಬಸ್ಥರು ಹಲವು ಬಾರಿ ಸಂಪರ್ಕಿಸಲು ಪ್ರಯತ್ನಿಸಿದ್ದರು. ಸಂಪರ್ಕ ಸಾಧ್ಯವಾಗದ ಕಾರಣ ಕೊಟ್ವಾಲಿ ಪೊಲೀಸ್ ಠಾಣೆಯಲ್ಲಿ ಕಾಣೆಯಾದ ಬಗ್ಗೆ ದೂರು ದಾಖಲಿಸಿದ್ದರು. ಇತ್ತ, ರಿತಿಕ್ ಕುಟುಂಬದವರು ಸುಮಾರು 15 ದಿನಗಳ ಹಿಂದೆ ಇಂದೋರ್‌ನಿಂದ ಅಶೋಕನಗರಕ್ಕೆ ಮರಳಿದ್ದಾನೆ ಎಂದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.…

Read More

ಮಂಗಳೂರು: ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಭಾರತೀಯ ಮೋಟಾರು ವಾಹನ ಕಾಯ್ದೆಯ ಉಲ್ಲಂಘನೆ ಪ್ರಕರಣಗಳು ಗಣನೀಯವಾಗಿ ಹೆಚ್ಚಾಗಿದ್ದು, ಈ ಹಿನ್ನೆಲೆಯಲ್ಲಿ ಸಂಚಾರ ಪೊಲೀಸರು ನಗರಾದ್ಯಂತ ಕಠಿಣ ಕ್ರಮಗಳನ್ನು ಕೈಗೊಂಡಿದ್ದಾರೆ. ವಿಶೇಷ ಅಭಿಯಾನದ ಭಾಗವಾಗಿ, 2026ರ ಜನವರಿಯಿಂದ ಮೇ ಅವಧಿಯಲ್ಲಿ ಒಟ್ಟು 21,039 ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳನ್ನು ದಾಖಲಿಸಲಾಗಿದ್ದು, ನಿಯಮ ಉಲ್ಲಂಘಿಸಿದವರಿಂದ 96,19,500 ರೂಪಾಯಿ ದಂಡವನ್ನು ಸಂಗ್ರಹಿಸಲಾಗಿದೆ. ಸಂಚಾರ ನಿಯಮಗಳ ಉಲ್ಲಂಘನೆಯು ರಸ್ತೆ ಅಪಘಾತಗಳಿಗೆ ಪ್ರಮುಖ ಕಾರಣವಾಗಿದ್ದು, ಇದರಿಂದಾಗಿ ಅನೇಕ ಸಾವು-ನೋವುಗಳು ಸಂಭವಿಸುತ್ತಿವೆ. ಈ ಭಾಗದಲ್ಲಿ ಎನ್‌ಎಚ್-66, ಎನ್‌ಎಚ್-75, ಎನ್‌ಎಚ್-169 ಮತ್ತು ಎನ್‌ಎಚ್-73 ನಂತಹ ಪ್ರಮುಖ ರಾಷ್ಟ್ರೀಯ ಹೆದ್ದಾರಿಗಳು ಹಾದುಹೋಗುತ್ತಿದ್ದು, ಅಜಾಗರೂಕ ಚಾಲನೆ, ಅತೀ ವೇಗ ಮತ್ತು ಸಂಚಾರ ಸಂಚಾರ ನಿಯಮಗಳ ಉಲ್ಲಂಘನೆಯು ರಸ್ತೆ ಅಪಘಾತಗಳಿಗೆ ಪ್ರಮುಖ ಕಾರಣಗಳಾಗಿವೆ ಎಂದು ಸಂಚಾರ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳ ಪೈಕಿ, ವಿವಿಧ ಸಂಚಾರ ಅಪರಾಧಗಳ ಅಡಿಯಲ್ಲಿ 6,853 ಪ್ರಕರಣಗಳನ್ನು ದಾಖಲಿಸಿ, 29,28,200 ರೂಪಾಯಿ ದಂಡ ವಿಧಿಸಲಾಗಿದೆ. ಇದರಲ್ಲಿ…

Read More

ಮಂಗಳೂರು: ರಾಷ್ಟ್ರೀಯ ಹೆದ್ದಾರಿ 169ಎ ರ ತೀರ್ಥಹಳ್ಳಿ–ಮಲ್ಪೆ ರಸ್ತೆಯ ಆಗುಂಬೆ ಘಾಟಿಯಲ್ಲಿ ಭಾರಿ ಮಳೆಯಿಂದಾಗಿ ಮತ್ತು ಭಾರಿ ವಾಹನಗಳ ಸಂಚಾರದಿಂದ ಅಲ್ಲಲ್ಲಿ ರಸ್ತೆ ಬದಿಯಲ್ಲಿ ಭೂಕುಸಿತ ಆಗುವ ಸಂಭವವಿರುವ ಹಿನ್ನೆಲೆ, ಸಾರ್ವಜನಿಕ ಹಿತದೃಷ್ಟಿಯಿಂದ ಕೇಂದ್ರ ಮೋಟಾರು ವಾಹನ ಕಾಯ್ದೆಯಡಿ ರಾಷ್ಟ್ರೀಯ ಹೆದ್ದಾರಿ 169ಎ ಆಗುಂಬೆ ಘಾಟಿಯ ಮೂಲಕ ಸೆಪ್ಟೆಂಬರ್ 30ರವರೆಗೆ ಲಘು ವಾಹನ ಸಂಚಾರಕ್ಕೆ ಮಾತ್ರ ಅನುವು ಮಾಡಿ, ಭಾರಿ ವಾಹನಗಳ ಸಂಚಾರವನ್ನು ನಿರ್ಬಂಧಿಸಿ ಜಿಲ್ಲಾ ದಂಡಾಧಿಕಾರಿಯೂ ಆದ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಆದೇಶಿಸಿದ್ದಾರೆ. ತೀರ್ಥಹಳ್ಳಿಯಿಂದ ಉಡುಪಿ ಕಡೆಗೆ ಸಂಚರಿಸುವ ಭಾರಿ ವಾಹನಗಳು ತೀರ್ಥಹಳ್ಳಿ–ನಗರ–ಕುಂದಾಪುರ ಹಾಗೂ ಉಡುಪಿ ಮಾರ್ಗವಾಗಿ ಸಂಚರಿಸಬೇಕು. ಚಿಕ್ಕಮಗಳೂರಿನಿಂದ ಉಡುಪಿ ಕಡೆಗೆ ಬರುವ ಭಾರಿ ವಾಹನಗಳು ಬಾಳೆಹೊನ್ನೂರು–ಮಾಗುಂಡಿ–ಕಳಸ–ಕುದುರೆಮುಖ–ಎಸ್.ಕೆ. ಬಾರ್ಡರ್ ಮಾರ್ಗವಾಗಿ ಸಂಚರಿಸಬೇಕು. ನರಸಿಂಹರಾಜಪುರದಿಂದ ಉಡುಪಿ ಕಡೆಗೆ ಬರುವ ವಾಹನಗಳು ಕೊಪ್ಪ–ಜಯಪುರ–ಬಾಳೆಹೊಳೆ–ಕಳಸ–ಕುದುರೆಮುಖ–ಎಸ್.ಕೆ. ಬಾರ್ಡರ್ ಮಾರ್ಗವಾಗಿ ಸಂಚರಿಸುವಂತೆ ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Read More

ಮಂಗಳೂರು: ನಗರದಲ್ಲಿ ನಿಷೇಧಿತ ಮಾದಕ ದ್ರವ್ಯವಾದ ಎಂಡಿಎಂಎ ಮಾರಾಟಕ್ಕೆ ಯತ್ನಿಸಿದ ಆರೋಪದ ಮೇಲೆ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಒಟ್ಟು ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳ ವಿರುದ್ಧ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಬಂಧಿತರನ್ನು ಬೆಂಗಳೂರಿನ ಹಲಸೂರು ಲಿಡೋ ಮಾಲ್ ನಿವಾಸಿ ಮೊಹಮ್ಮದ್ ನದೀಮ್ (27), ಉಳ್ಳಾಲದ ಸೋಮೇಶ್ವರ ಉಚ್ಚಿಲ ನಿವಾಸಿ ಉಮರುಲ್ ಫಾರೂಕ್ (30), ಕೆ.ಸಿ.ರೋಡ್ ಕಿನ್ಯಾ ನಿವಾಸಿ ಇಮ್ತಿಯಾಜ್ ಇಸ್ಮಾಯಿಲ್ ಕಿನ್ಯಾ (41) ಮತ್ತು ಕುಂಪಲ ಸುರಕ್ಷಾ ನಗರದ ನಿವಾಸಿ ಧನುಷ್ (29) ಎಂದು ಗುರುತಿಸಲಾಗಿದೆ. ಬೆಂದೂರಿನ ಲಾಡ್ಜ್ ಒಂದರಲ್ಲಿ ಸಾರ್ವಜನಿಕರಿಗೆ ಮಾರಾಟ ಮಾಡಲು ಎಂಡಿಎಂಎ ದಾಸ್ತಾನು ಮಾಡಲಾಗಿದೆ ಎಂಬ ಖಚಿತ ಮಾಹಿತಿ ಮೇರೆಗೆ ಮಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿ ಮೊಹಮ್ಮದ್ ನದೀಮ್, ಉಮರುಲ್ ಫಾರೂಕ್ ಮತ್ತು ಇಮ್ತಿಯಾಜ್ ಇಸ್ಮಾಯಿಲ್ ಕಿನ್ಯಾ ಅವರನ್ನು ಬಂಧಿಸಿದ್ದಾರೆ. ಪೊಲೀಸರು ಆರೋಪಿಗಳಿಂದ 35.53 ಗ್ರಾಂ ಎಂಡಿಎಂಎ ಮತ್ತು 7,030 ರೂಪಾಯಿ ನಗದನ್ನು ವಶಪಡಿಸಿಕೊಂಡಿದ್ದಾರೆ. ಬಳಿಕ ಆರೋಪಿಗಳನ್ನು ಕದ್ರಿ ಪೊಲೀಸರಿಗೆ ಒಪ್ಪಿಸಲಾಗಿದ್ದು, ಎನ್‌ಡಿಪಿಎಸ್ ಕಾಯ್ದೆಯಡಿ…

Read More