Author: admin

ಕಲಬುರ್ಗಿ : ಎಂತೆಂಥಾ ಕ್ರೂರ ಮನಸ್ಥಿತಿಯ ಜನರಿದ್ದಾರೆ ನೋಡಿ. ಸ್ವಂತ ಮಗನನ್ನೇ ಈ ಪಾಪಿ ತಂದೆ ಜಲಾಶಯಕ್ಕೆ ಎಸೆದು ಕೊಂದಿದ್ದಾನೆ ಎನ್ನುವ ಆರೋಪ ಕೇಳಿ ಬಂದಿದೆ. 4 ವರ್ಷದ ಮಗನ ಜೊತೆ ಆಟವಾಡ್ತಿದ್ದ ತಂದೆ ಬಳಿಕ ಯಾರಿಗೂ ತಿಳಿಯದಂತೆ ಮಗನನ್ನ ಕರೆದೊಯ್ದು ನಾಲೆಗೆ ಎಸೆದು ಬಂದಿದ್ದಾನೆ ಎಂದು ಮಗುವಿನ ತಾಯಿ ಆರೋಪ ಮಾಡ್ತಿದ್ದಾರೆ. ಅಸಲಿಗೆ ಆಗಿದ್ದೇನು? ಕೊಂದು ಜಲಾಶಯಕ್ಕೆ ಬಿಸಾಡಿದ ನಾಲ್ಕು ವರ್ಷದ ಮಗನನ್ನ ಪಾಪಿ ತಂದೆ ಜಲಾಶಯಕ್ಕೆ ಬಿಸಾಡಿದ್ದು, ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಹಸರಗುಂಡಗಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ತನ್ನ ಸ್ವಂತ ಮಗುವನ್ನೇ ಕೊಲೆ ಮಾಡಿ ಜಲಾಶಯಕ್ಕೆ ಬಿಸಾಡಿರೋ ಶಂಕೆ ವ್ಯಕ್ತವಾಗಿದೆ. ಮಗುವನ್ನ ಜಲಾಶಯಕ್ಕೆ ಎಸೆದ ಪಾಪಿ ಗುಂಡೇಶ್​ ಮೃತ ಬಾಲಕನಾಗಿದ್ದು, ಸೋಮರಾವ್ ಹೂಗಾರ್ ಎಂಬಾತನೇ ಮಗನನ್ನು ಕೊಂದು ಜಲಾಶಯಕ್ಕೆ ಬಿಸಾಡಿದ್ದಾನೆ ಎನ್ನಲಾಗ್ತಿದೆ. ಚಿಂಚೋಳಿ ತಾಲೂಕಿನ ಮುಲ್ಲಾಮಾರಿ ಯೋಜನೆಯ ನಾಗರಾಳ ಜಲಾಶಯಕ್ಕೆ ಎಸೆದಿದ್ದಾನೆ. ಆಟವಾಡ್ತಾ ಮಗುವನ್ನೇ ಕೊಂದ ಮಗನ ಜೊತೆ ಕೆಲ ಕಾಲ ಆಟವಾಡಿದ ತಂದೆ ಬಳಿಕ…

Read More

ಬೆಂಗಳೂರು : ಸೈಬರ್ ಅಪರಾಧ ಪ್ರಕರಣವೊಂದರ ತನಿಖೆಗಾಗಿ ಮಧ್ಯಪ್ರದೇಶಕ್ಕೆ ತೆರಳಿದ್ದ ಬೆಂಗಳೂರು ಮೂಲದ ಪೊಲೀಸ್ ಇನ್ಸ್‌ಪೆಕ್ಟರ್‌ ಬಸ್ ಅಪಘಾತದಲ್ಲಿ ಭೀಕರವಾಗಿ ಮೃತಪಟ್ಟ ದುಃಖದ ಘಟನೆ ಸಂಭವಿಸಿದೆ. ಬೆಂಗಳೂರು ಆಗ್ನೇಯ ವಿಭಾಗದ ಸೆನ್ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಕೆ.ಬಿ.ರವಿ (2007 ಬ್ಯಾಚ್ ಅಧಿಕಾರಿ) ಅವರೇ ಈ ದುರಂತದಲ್ಲಿ ಪ್ರಾಣ ಕಳೆದುಕೊಂಡವರು. ಸೈಬರ್ ಎಪಿಕೆ ಫೈಲ್ ಫ್ರಾಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆಗಾಗಿ ಒಟ್ಟು ಒಂಬತ್ತು ಜನರಿದ್ದ ಪೊಲೀಸರ ತಂಡ ಮಧ್ಯಪ್ರದೇಶಕ್ಕೆ ತೆರಳಿತ್ತು. ಈ ಪೈಕಿ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದ ನಂತರ ಆರು ಸಿಬ್ಬಂದಿ ಬೆಂಗಳೂರಿಗೆ ವಾಪಸಾಗಿದ್ದರು. ಆದರೆ, ಇನ್ನುಳಿದ ಆರೋಪಿಗಳ ಪತ್ತೆಗಾಗಿ ಇನ್ಸ್‌ಪೆಕ್ಟರ್ ರವಿ ಸೇರಿದಂತೆ ಮೂವರು ಸಿಬ್ಬಂದಿ ಮಧ್ಯಪ್ರದೇಶದಲ್ಲೇ ಉಳಿದುಕೊಂಡಿದ್ದರು. ಭೋಪಾಲ್‌ನಿಂದ ಇಂದೋರ್‌ಗೆ ಸ್ಲೀಪರ್ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ಬಸ್ ಫ್ಲೈ ಓವರ್‌ನಿಂದ ಕೆಳಗೆ ಬಿದ್ದು ಈ ಭೀಕರ ಅಪಘಾತ ಸಂಭವಿಸಿದೆ. ಇನ್ಸ್‌ಪೆಕ್ಟರ್ ರವಿ ಸ್ಥಳದಲ್ಲೇ ಕೊನೆಯುಸಿರೆಳೆದರೆ, ಅವರ ಜೊತೆಗಿದ್ದ ಪಿಎಸ್‌ಐ ರಮೇಶ್ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಇನ್ನಿಬ್ಬರು ಸಿಬ್ಬಂದಿಯ ಸ್ಥಿತಿ…

Read More

ಧಾರವಾಡ: ಪತ್ನಿಯನ್ನು ಕೊಂದು ಪತಿ ತಾನೂ ನೇಣಿಗೆ ಶರಣಾದ ಘಟನೆ ಧಾರವಾಡ ತಾಲೂಕಿನ ಗರಗ ಗ್ರಾಮದಲ್ಲಿ ಗುರುವಾರ ತಡರಾತ್ರಿ ನಡೆದಿದೆ. ಮೌಲಾಸಾಬ್ (28) ಎಂಬಾತನೇ ತನ್ನ ಪತ್ನಿ ಸಲ್ಮಾ (21) ಎಂಬಾಕೆಯನ್ನು ಕೊಲೆ ಮಾಡಿ ಕೊನೆಗೆ ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ತನ್ನ ಒಂದೂವರೆ ವರ್ಷದ ಮಗುವಿನ ಎದುರೇ ಮೌಲಾಸಾಬ್ ಪತ್ನಿಯನ್ನು ಕೊಲೆ ಮಾಡಿ ತಾನೂ ನೇಣಿಗೆ ಶರಣಾಗಿದ್ದಾನೆ. ಕಳೆದ ಮೂರು ವರ್ಷಗಳ ಹಿಂದಷ್ಟೇ ಇವರ ವಿವಾಹವಾಗಿತ್ತು ಗುರುವಾರ ತಡರಾತ್ರಿ ಈ ಘಟನೆ ನಡೆದಿದೆ. ತಡರಾತ್ರಿವರೆಗೂ ಮನೆಯಲ್ಲಿ ಏನೂ ಶಬ್ದ ಬಾರದೇ ಇದ್ದಿದ್ದರಿಂದ ವೃದ್ಧೆಯೊಬ್ಬರು ಹೋಗಿ ನೋಡಿದಾಗ ಈ ಘಟನೆ ಬೆಳಕಿಗೆ ಬಂದಿದೆ. ಕೊಲೆಯಾದ ಸಲ್ಮಾ ಮನೆಯವರು ಗರಗ ಗ್ರಾಮಕ್ಕೆ ಬರುತ್ತಿದ್ದಂತೆಯೇ ಎರಡೂ ಕುಟುಂಬಗಳ ಮಧ್ಯೆ ಗಲಾಟೆ ಸಂಭವಿಸಿದೆ. ಎರಡೂ ಕುಟುಂಬದವರು ಪರಸ್ಪರ ಹೊಡೆದಾಟಕ್ಕೆ ಮುಂದಾಗಿದ್ದಾರೆ. ಅತ್ತೆ, ಮಾವನ ಕಾಟ ಸಲ್ಮಾಳಿಗೆ ಇತ್ತು. ಈ ಕಾಟಕ್ಕೆ ತನ್ನ ಮಗಳನ್ನೇ ಬಲಿ ಪಡೆದುಕೊಂಡಿದ್ದಾರೆ. ಅಳಿಯನ ಕಾಟ ಏನೂ ಇರಲಿಲ್ಲ. ಕೂಲಿ ಮಾಡುತ್ತಿದ್ದ…

Read More

ಗದಗ : ಅನೈತಿಕ ಸಂಬಂಧ ಹಿನ್ನೆಲೆಯಲ್ಲಿ ಯುವಕನನ್ನು ಬರಬರವಾಗಿ ಕೊಲೆ ಮಾಡಲಾಗಿದೆ ಪುಟಗಾವ್ ಬಡ್ನಿಯಲ್ಲಿ ಈರಣ್ಣ ಅಗಸಿಬಾಗಿಲು (35) ಎಂಬ ಯುವಕನನ್ನು ಭೀಕರವಾಗಿ ಕೊಲೆ ಮಾಡಲಾಗಿದೆ. ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಪುಟ್ಟಗಾಂವ್ ಬಡ್ನಿ ಗ್ರಾಮದಲ್ಲಿ ಈ ಒಂದು ಭೀಕರ ಕೊಲೆ ನಡೆದಿದೆ. ಪುಟಗಾಂವ್ ಬಡ್ನಿ ಗ್ರಾಮದ ರೇಣುಕಾ ಎಂಬುವರ ಜೊತೆಗೆ ಅನೈತಿಕ ಸಂಬಂಧ ಹೊಂದಿದ್ದ ಎನ್ನಲಾಗಿದೆ. ಈರಣ್ಣಗೆ ಕುಟುಂಬಸ್ಥರು ಹಲವು ಬಾರಿ ಬುದ್ಧಿ ಹೇಳಿದರೂ, ಪುನಃ ರೇಣುಕಾಳಿಗೆ ಮೃತ ಈರಣ್ಣ ಸನ್ನೆ ಮಾಡಿದ್ದಾನೆ. ರೇಣುಕಾಳ ಗಂಡ ಹಾಗೂ ಕುಟುಂಬದವರು ಕೊಲೆ ಮಾಡಿದ್ದಾರೆ. ಈರಣ್ಣ ನನ್ನು ಸುರೇಶ್, ಆಂಜನೇಯ ಕಳಸಾಪುರ, ಧರ್ಮಣ್ಣ ಭೋವಿ, ಹನುಮವ್ವ, ರೇಣುಕಾ ಕಳಸಾಪುರ ಕೊಲೆ ಮಾಡಿದ್ದು ಸದ್ಯ ಪೋಲೀಸರು ನಾಲ್ವರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಲಕ್ಷ್ಮೇಶ್ವರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

Read More

ಉಡುಪಿ: ಉತ್ತರ ಪ್ರದೇಶದ ಕಾನ್ಪುರದಲ್ಲಿ ಆಗಸ್ಟ್ 27ರಂದು ಖಾಸಗಿ ತರಬೇತಿ ವಿಮಾನ ಅಪಘಾತದಲ್ಲಿ ಉಡುಪಿ ಮೂಲದ ತರಬೇತಿ ಪೈಲಟ್ ಅಭಿಷೇಕ್ ಪೂಜಾರಿ(22) ಮೃತಪಟ್ಟಿದ್ದಾರೆ. ಅಭಿಷೇಕ್ ಪೂಜಾರಿ ಅವರು ಉಡುಪಿ ಜಿಲ್ಲೆಯ ಕಣಜಾರು ಗ್ರಾಮದ ಕಾಡೆಬರ್ಕೆ ನಿವಾಸಿ ಮೂಲದವರಾಗಿದ್ದು, ಈ ಪ್ರದೇಶವು ಹಿರಿಯಡ್ಕ ಪೊಲೀಸ್ ಠಾಣಾ ವ್ಯಾಪ್ತಿಗೆ ಒಳಪಡುತ್ತದೆ. ಲಭ್ಯ ಮಾಹಿತಿಯ ಪ್ರಕಾರ, ಅವರು ಕಳೆದ ಸುಮಾರು ಎರಡೂವರೆ ವರ್ಷಗಳಿಂದ ಉತ್ತರ ಪ್ರದೇಶದ ಕಾನ್ಪುರದಲ್ಲಿ ಖಾಸಗಿ ತರಬೇತಿ ಪೈಲಟ್ ಆಗಿ ತರಬೇತಿ ಪಡೆಯುತ್ತಿದ್ದರು. ಅಭಿಷೇಕ್ ಅವರ ತಂದೆ ಪ್ರಭಾಕರ್ ಪೂಜಾರಿ ಹಾಗೂ ತಾಯಿ ಶಶಿಕಲಾ ಪೂಜಾರಿ ಅವರು ಮಹಾರಾಷ್ಟ್ರದ ಮುಂಬೈನಲ್ಲಿ ವಾಸವಾಗಿದ್ದಾರೆ. ಅಭಿಷೇಕ್ ಅವರು ತಮ್ಮ ಕುಟುಂಬದೊಂದಿಗೆ ಆಗಾಗ ಕಣಜಾರು ಗ್ರಾಮದ ಕಾಡೆಬರ್ಕೆಯಲ್ಲಿರುವ ತಮ್ಮ ತಾಯಿಯ ಸಹೋದರ ಜೀವನ್ ಕುಮಾರ್ ಅವರ ಮನೆಗೆ ಭೇಟಿ ನೀಡುತ್ತಿದ್ದರು. ಅಪಘಾತದ ಮಾಹಿತಿ ತಿಳಿದ ಕುಟುಂಬಸ್ಥರು ಕಾನ್ಪುರಕ್ಕೆ ತೆರಳಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಕಾನೂನು ಪ್ರಕ್ರಿಯೆಗಳು ಮುಂದುವರಿದಿವೆ.

Read More

50 ವರ್ಷದ ಮಹಿಳೆಯೊಬ್ಬರು ತನ್ನ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ 30 ವರ್ಷದ ತನ್ನ ಸ್ವಂತ ಮಗನನ್ನೇ ಕೊಂದು, ಮನೆಯೊಳಗೆ ಹೂತು ಹಾಕಿದ್ದಾಳೆ. ಮೂರು ತಿಂಗಳ ಬಳಿಕ ಪ್ರಕರಣ ಬೆಳಕಿಗೆ ಬಂದಿದ್ದು, ಮಹಿಳೆ ಪೊಲೀಸರ ಮುಂದೆ ಶರಣಾಗಿದ್ದಾಳೆ. ವಾರಿಚಿಯೂರಿನ ಜಿ ರಾಜಾ ಅಲಿಯಾಸ್ ಮೆಟ್ಟುಪಟ್ಟಿ ರಾಜ(30) ಕೊಲೆಯಾದವನು. ಅಯ್ಯಮ್ಮಾಳ್ ಕೊಲೆ ಮಾಡಿದ ತಾಯಿ. ಅಯ್ಯಮ್ಮಾಳ್ ಅವರ ಪತಿ ಕೆಲವು ವರ್ಷಗಳ ಹಿಂದೆ ನಿಧನರಾಗಿದ್ದರು. ಮಗ ವಿವಾಹಿತನಾಗಿದ್ದರೂ, ಪತ್ನಿಯಿಂದ ಪ್ರತ್ಯೇಕವಾಗಿ ವಾಸಿಸುತ್ತಿದ್ದ ಎನ್ನಲಾಗಿದೆ. ಚೆನ್ನೈ ತಮಿಳುನಾಡಿನ  ವಾರಿಚಿಯೂರಿನಲ್ಲಿ ಇತ್ತೀಚೆಗೆ ಮಗ ರಾಜ ನಾಪತ್ತೆಯಾಗಿದ್ದನು ಮತ್ತು ನೆರೆಹೊರೆಯವರು ಈ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದರು. ಪೊಲೀಸರು ಅಯ್ಯಮ್ಮಾಳ್ ಅವರನ್ನು ಮಗನ ಬಗ್ಗೆ ವಿಚಾರಣೆ ನಡೆಸಿದಾಗ, ಅವನು ಬೇರೆ ರಾಜ್ಯದಲ್ಲಿ ಕೆಲಸ ಮಾಡುತ್ತಿದ್ದಾನೆಂದು ತಿಳಿಸಿದ್ದಾಳೆ. ಆದಾಗ್ಯೂ, ಆಕೆಯ ಹೇಳಿಕೆಗಳು ಬದಲಾಗುತ್ತಲೇ ಇದ್ದವು. ರಾಜ ಕಳೆದ ಕೆಲವು ವರ್ಷಗಳಿಂದ ಕೆಲಸ ಮಾಡುತ್ತಿರಲಿಲ್ಲ ಮತ್ತು ಆಗಾಗ್ಗೆ ಆ ಪ್ರದೇಶದಲ್ಲಿ ಕಿರಿಕಿರಿ ಉಂಟು ಮಾಡುತ್ತಿದ್ದ ಬಗ್ಗೆ ನೆರೆಹೊರೆಯವರು ಹೇಳಿದ್ದಾರೆ. ಮತ್ತು ಅವನು ಮಾದಕ…

Read More

ಕಾರವಾರ: ಕುಡಿದ ಮತ್ತಿನಲ್ಲಿ ಪತ್ನಿಯನ್ನೇ ಕೊಂದು ಏನೂ ತಿಳಿಯದವನಂತೆ ‘ಹೃದಯಾಘಾತ’ದ ನಾಟಕವಾಡಿದ್ದ ಪತಿಯನ್ನು ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ಪೊಲೀಸರು ಬಂಧಿಸಿದ್ದಾರೆ. ಈ ಬೆಚ್ಚಿಬೀಳಿಸುವ ಘಟನೆ ಹೊನ್ನಾವರ ತಾಲೂಕಿನ ದೊಡ್ಡಗುಂಡ ಗ್ರಾಮದಲ್ಲಿ ನಡೆದಿದೆ. ನಡೆದಿದ್ದೇನು? ದೊಡ್ಡಗುಂಡ ಗ್ರಾಮದ ನಿವಾಸಿ ಗಣಪತಿ ಮಂಜುನಾಥ ನಾಯ್ಕ ಬಂಧಿತ ಆರೋಪಿ. ಈತ ತನ್ನ ಪತ್ನಿ ಮಂಗಲಾ ಗಣಪತಿ ನಾಯ್ಕ (27) ಎಂಬಾಕೆಯನ್ನು ಬರ್ಬರವಾಗಿ ಕೊಲೆ ಮಾಡಿದ್ದಾನೆ. ಘಟನೆ ನಡೆದ ದಿನ ಆರೋಪಿ ಗಣಪತಿ ಮದ್ಯ ಸೇವಿಸಿ ಮನೆಗೆ ಬಂದಿದ್ದ ಎನ್ನಲಾಗಿದೆ. ರಾತ್ರಿ ಪತ್ನಿ ಮಂಗಲಾ ಮಲಗಿದ್ದಾಗ, ಕುಡಿದ ಮತ್ತಿನಲ್ಲಿದ್ದ ಗಣಪತಿ ಆಕೆಯ ಕುತ್ತಿಗೆ ಹಿಚುಕಿ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾನೆ. ಪತ್ನಿ ಮೃತಪಟ್ಟಿದ್ದನ್ನು ಖಚಿತಪಡಿಸಿಕೊಂಡ ಆರೋಪಿ ಯಾರಿಗೂ ಸಂಶಯ ಬಾರದಿರಲಿ ಎಂದು ಹೊಸ ಕಥೆ ಕಟ್ಟಿದ್ದ. ತನ್ನ ಪತ್ನಿ ಮಂಗಲಾಗೆ ಇದ್ದಕ್ಕಿದ್ದಂತೆ ‘ಹೃದಯಾಘಾತ’ ಸಂಭವಿಸಿ ಸಾವನ್ನಪ್ಪಿದ್ದಾಳೆ ಎಂದು ಎಲ್ಲರಿಗೂ ನಂಬಿಸಿದ್ದ. ಆಕೆಯ ಸಾವು ನೈಸರ್ಗಿಕ ಎಂದು ಬಿಂಬಿಸಲು ಆತ ಸಾಕಷ್ಟು ಪ್ರಯತ್ನ ನಡೆಸಿದ್ದ. ಮಂಗಲಾಳ ಸಾವಿನ ಬಗ್ಗೆ…

Read More

ಅಲಪ್ಪುಳ : ಕೇರಳದ ಅತ್ಯಂತ ಕುಖ್ಯಾತ ಮತ್ತು ದೀರ್ಘಕಾಲದಿಂದ ತಲೆಮರೆಸಿಕೊಂಡಿರುವ ಅಪರಾಧಿ ಸುಕುಮಾರ ಕುರುಪ್ ಕಥೆಗೆ 42 ವರ್ಷಗಳ ನಂತರ ಮತ್ತೊಮ್ಮೆ ಹೊಸ ತಿರುವು ಸಿಕ್ಕಿದೆ. ತನಿಖಾ ತಂಡದಲ್ಲಿದ್ದ ನಿವೃತ್ತ ಪೊಲೀಸ್ ಅಧಿಕಾರಿ ಅಲಿ ಅಕ್ಬರ್ ನೀಡಿರುವ ಹೊಸ ಹೇಳಿಕೆಯು ಈ ನಿಗೂಢತೆಯನ್ನು ಮತ್ತೆ ಸಜೀವಗೊಳಿಸಿದೆ. ನಿವೃತ್ತ ಅಧಿಕಾರಿ ಅಲಿ ಅಕ್ಬರ್ ಅವರ ಪ್ರಕಾರ, ಸುಕುಮಾರ ಕುರುಪ್ ಇನ್ನೂ ಜೀವಂತವಾಗಿದ್ದು, ಬ್ರೂನಿಯಲ್ಲಿ ಇಂಡೋ-ಮಲೇಷಿಯನ್ ಮೂಲದ ವ್ಯಕ್ತಿಯಾಗಿ ನಕಲಿ ಗುರುತಿಸಿಕೊಳ್ಳುವ ಮೂಲಕ ನಿರ್ಮಾಣ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿದ್ದಾನೆ. ಕುರುಪ್ ನ ಛಾಯಾಚಿತ್ರವನ್ನು ಮಾಧ್ಯಮಗಳಿಗೆ ಬಿಡುಗಡೆ ಮಾಡಿದ ಅಕ್ಬರ್, ಆತ ತನ್ನ ಪತ್ನಿ, ವಿದೇಶದಲ್ಲಿರುವ ಸಂಬಂಧಿಕರು ಹಾಗೂ ಪ್ರಭಾವಿ ರಾಜಕೀಯ ಮತ್ತು ಸಮುದಾಯದ ನಾಯಕರೊಂದಿಗೆ ಸಂಪರ್ಕದಲ್ಲಿದ್ದಾನೆ ಎಂದು ಆರೋಪಿಸಿದ್ದಾರೆ. ಈ ಹೊಸ ವಿವರಣೆಯ ಕುರಿತು ಪ್ರತಿಕ್ರಿಯಿಸಿದ ಅಪರಾಧ ವಿಭಾಗದ ಮುಖ್ಯಸ್ಥ ಎಡಿಜಿಪಿ ಎಚ್. ವೆಂಕಿತೇಶ್, “ಬಹಿರಂಗವಾಗಿರುವ ಛಾಯಾಚಿತ್ರ, ಪಾಸ್‌ಪೋರ್ಟ್ ಹಾಗೂ ಮೊಬೈಲ್ ಸಂಖ್ಯೆಗಳ ಕುರಿತು ಮಾಹಿತಿ ಪಡೆಯಲು ಇಂಟರ್‌ಪೋಲ್  ಅನ್ನು ಸಂಪರ್ಕಿಸಲಾಗುವುದು. ಗೃಹ ಸಚಿವ…

Read More

ಬೆಂಗಳೂರು: ರಾಮನಗರದ ಬಿಡದಿಯ ಫಾರ್ಮ್‌ ಹೌಸ್‌ನಲ್ಲಿ ಪತ್ತೆಯಾದ ಬೃಹತ್ ನಕಲಿ ಔಷಧಿ ಜಾಲದ ಪ್ರಕರಣವು ರಾಜ್ಯದಲ್ಲಿ ತೀವ್ರ ಸಂಚಲನ ಮೂಡಿಸಿದೆ. ಈ ಜಾಲದ ಕಿಂಗ್‌ಪಿನ್ ಪ್ರಶಾಂತ್‌ನನ್ನು ಅಜರ್ ಬೈಜಾನ್​ನಿಂದ ಕರೆತರಲು ವಿಶೇಷ ತನಿಖಾ ದಳ (ಎಸ್‌ಐಟಿ) ಅಧಿಕಾರಿಗಳು ಸಕಲ ಸಿದ್ಧತೆಗಳನ್ನು ನಡೆಸುತ್ತಿದ್ದಾರೆ. ಎಸ್‌ಐಟಿ ನಡೆಸಿದ ತೀವ್ರ ತನಿಖೆಯ ಪರಿಣಾಮವಾಗಿ ಪ್ರಶಾಂತ್ ಅಜರ್ ಬೈಜಾನ್​ನಲ್ಲಿ ಇರುವುದು ಖಚಿತವಾಗಿದೆ. ಅಲ್ಲಿನ ಕಸ್ಟಮ್ಸ್ ಅಧಿಕಾರಿಗಳು ಪ್ರಶಾಂತ್‌ನನ್ನು ವಶಕ್ಕೆ ಪಡೆದುಕೊಂಡಿದ್ದು, ಆತನ ಪಾಸ್‌ಪೋರ್ಟ್ ಅನ್ನು ಸಹ ಜಪ್ತಿ ಮಾಡಿದ್ದಾರೆ. ಈ ಕುರಿತು ಎಸ್‌ಐಟಿ, ಇಂಟರ್‌ಪೋಲ್ ಮೂಲಕ ಮಾಹಿತಿ ಪಡೆದಿದೆ. ಆರೋಪಿ ಪ್ರಶಾಂತ್ ವಿರುದ್ಧ ರೆಡ್ ಕಾರ್ನರ್ ನೋಟಿಸ್ ಹೊರಡಿಸುವ ಮೂಲಕ ಬಂಧನ ವಾರಂಟ್‌ಗೆ ಸಿದ್ಧತೆಗಳು ನಡೆಯುತ್ತಿವೆ. ಪ್ರಶಾಂತ್ ತನ್ನ ಕುಟುಂಬಸ್ಥರು ಮತ್ತು ಪತ್ನಿಯೊಂದಿಗೆ ಸಂಪರ್ಕದಲ್ಲಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಪ್ರಕರಣದಲ್ಲಿ ಈಗಾಗಲೇ ಹಲವು ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದ್ದು, ಇಡೀ ಜಾಲದ ಮೂಲವನ್ನು ಪತ್ತೆಹಚ್ಚಲು ಎಸ್‌ಐಟಿ ಶ್ರಮಿಸುತ್ತಿದೆ. ಪ್ರಶಾಂತ್‌ನನ್ನು ಭಾರತಕ್ಕೆ ಹಸ್ತಾಂತರಿಸುವ ಪ್ರಕ್ರಿಯೆ ಚುರುಕುಗೊಂಡಿದ್ದು,…

Read More

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಹಿನ್ನೆಲೆಯಲ್ಲಿ ದಸರಾ ಗಜಪಡೆಗಳ ಅರಮನೆ ಪ್ರವೇಶಕ್ಕೆ ಇಂದು ಸಾಂಪ್ರದಾಯಿಕ ಚಾಲನೆ ದೊರೆಯಿತು. ಅರಣ್ಯ ಭವನದಲ್ಲಿ ಬೆಳಗ್ಗೆ 9 ಆನೆಗಳಿಗೆ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಗಜಪಡೆಗಳು ಮೈಸೂರು ಅರಮನೆಯತ್ತ ಪ್ರಯಾಣ ಬೆಳೆಸಿದವು. ಶುಭ ಲಗ್ನದಲ್ಲಿ ಗಜಪಡೆಗಳನ್ನು ಅಂಬಾವಿಲಾಸ ಅರಮನೆಗೆ ಬರಮಾಡಿಕೊಳ್ಳುವ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲಾಡಳಿತ ವತಿಯಿಂದ ಸಾಂಪ್ರದಾಯಿಕ ಸ್ವಾಗತ ಕಾರ್ಯಕ್ರಮ ಆಯೋಜಿಸಲಾಗಿತ್ತು. ಅರಮನೆ ದ್ವಾರದ ಬಳಿ ಆನೆಗಳಿಗೆ ಸಂಪ್ರದಾಯಬದ್ಧವಾಗಿ ಸ್ವಾಗತ ಕೋರಲಾಯಿತು. ಕಾರ್ಯಕ್ರಮದಲ್ಲಿ ಅರಣ್ಯ ಸಚಿವ ರಾಮಲಿಂಗಾರೆಡ್ಡಿ, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಸೇರಿದಂತೆ ಹಲವು ಗಣ್ಯರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು. ದಸರಾ ಜಂಬೂಸವಾರಿಗೆ ಸಜ್ಜಾಗುತ್ತಿರುವ ಗಜಪಡೆಯ ಆಗಮನದ ಹಿನ್ನೆಲೆಯಲ್ಲಿ ಅರಮನೆ ಆವರಣದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿತ್ತು. ಅರಮನೆ ಪ್ರವೇಶದ ವೇಳೆ ಗಾಬರಿಗೊಂಡ ಶ್ರೀರಾಮ ಇದೇ ವೇಳೆ ಗಜಪಡೆಯಲ್ಲಿದ್ದ ಶ್ರೀರಾಮ ಆನೆ ಅರಮನೆ ಪ್ರವೇಶಿಸುವ ಸಂದರ್ಭದಲ್ಲಿ ಏಕಾಏಕಿ ಗಾಬರಿಗೊಂಡ ಘಟನೆ ನಡೆದಿದೆ. ಅರಮನೆ ಮುಂಭಾಗದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರಿದ್ದರಿಂದ ಶ್ರೀರಾಮ…

Read More