Author: admin

ಕಾರು ಟ್ರಕ್‌ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ  23 ವರ್ಷದ ಯೂಟ್ಯೂಬರ್  ಹಾಗೂ ಆಕೆಯ ತಾಯಿ ಇಬ್ಬರೂ ಮೃತಪಟ್ಟಿರುವ ಘಟನೆ   ಅಗರ್ ಮಾಲ್ವಾ ಜಿಲ್ಲೆಯಲ್ಲಿ ನಡೆದಿದೆ. ಅಪಘಾತದಲ್ಲಿ ಯೂಟ್ಯೂಬರ್ ತಂದೆ ಸೇರಿದಂತೆ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮಧ್ಯಪ್ರದೇಶದ ಉಜ್ಜಯಿನಿ-ಗರೋತ್ ಹೆದ್ದಾರಿಯ ರಾಮಖೇಡಿ ಗ್ರಾಮದ ಬಳಿ ಮಂಗಳವಾರ ಬೆಳಗ್ಗೆ ಸುಮಾರು 6 ಗಂಟೆಗೆ ಅಪಘಾತ ಸಂಭವಿಸಿದೆ. ವೇಗವಾಗಿ ಸಾಗುತ್ತಿದ್ದ ಎರ್ಟಿಗಾ ಕಾರು ಮುಂದೆ ಹೋಗುತ್ತಿದ್ದ ಟ್ರಕ್‌ನ ಹಿಂಭಾಗಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಗುರುತಿಸಲಾಗದಷ್ಟು ಹಾನಿಯಾಗಿದೆ. ಡಿಕ್ಕಿಯ ಬಳಿಕ ಟ್ರಕ್ ಕೂಡ ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಯ ತಡೆಗೋಡೆಗೆ ಡಿಕ್ಕಿ ಹೊಡೆದು ರಸ್ತೆಯಿಂದ ಕೆಳಗೆ ಬಿದ್ದಿದೆ ಎಂದು ವರದಿಯಾಗಿದೆ. ಸ್ಥಳೀಯರು ಕೂಡಲೇ ಪೊಲೀಸರಿಗೆ ಹಾಗೂ ಆಂಬ್ಯುಲೆನ್ಸ್ಗೆ ಮಾಹಿತಿ ನೀಡಿದ್ದಾರೆ. ಕಾರಿನಲ್ಲಿದ್ದವರನ್ನು ರಕ್ಷಿಸುವ ಕಾರ್ಯಾಚರಣೆ ನಡೆಸಲಾಗಿದ್ದು, ಓರ್ವ ಮಹಿಳೆ ಕಾರಿನ ಅವಶೇಷಗಳ ನಡುವೆ ಸಿಲುಕಿಕೊಂಡಿದ್ದರಿಂದ ರಕ್ಷಣಾ ಸಿಬ್ಬಂದಿ ಆಕೆಯನ್ನು ಹೊರತೆಗೆದಿದ್ದಾರೆ. ತಾಯಿ-ಮಗಳು ಸಾವು: ಅಪಘಾತದಲ್ಲಿ ಮೃತಪಟ್ಟವರನ್ನು ಉತ್ತರ ಪ್ರದೇಶದ…

Read More

ಜನಪ್ರಿಯ ಗಾಯಕ ಮತ್ತು ಯೂಟ್ಯೂಬರ್ 35 ವರ್ಷದ ಅಂಕಿತ್ ಬಲಿಯಾನ್ ಅವರನ್ನು ಜಿಮ್‌ನ ಹೊರಗಡೆ ಬುಧವಾರ ಸಂಜೆ ನಾಲ್ವರು ದುಷ್ಕರ್ಮಿಗಳು ಭೀಕರವಾಗಿ ಗುಂಡಿಕ್ಕಿ ಕೊಲೆ ಮಾಡಿದ್ದಾರೆ. ಸಂಜೆ ಸುಮಾರು 7 ಗಂಟೆ ವೇಳೆಗೆ ಈ ಘಟನೆ ನಡೆದಿದೆ. ಜಿಮ್ ಮುಗಿಸಿ ಹೊರಬಂದ ಅಂಕಿತ್ ಬಲಿಯಾನ್ ತಮ್ಮ ಕಾರಿನ ಬಳಿಗೆ ತೆರಳುತ್ತಿದ್ದಾಗ ದಾಳಿಕೋರರು ದಿಢೀರ್ ದಾಳಿ ನಡೆಸಿ ಸುಮಾರು 20 ಸುತ್ತು ಗುಂಡು ಹಾರಿಸಿದ್ದಾರೆ. ತಲೆ ಸೇರಿದಂತೆ ದೇಹದ ವಿವಿಧ ಭಾಗಗಳಿಗೆ ಗುಂಡೇಟು ತಗುಲಿ ಅಂಕಿತ್ ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯಲ್ಲಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ಕೊಲೆಯ ಜವಾಬ್ದಾರಿಯನ್ನು ‘ಗೋಗಿ ಗ್ಯಾಂಗ್’ ಹೊತ್ತುಕೊಂಡಿದೆ. ಗಾಯಕ ಅಂಕಿತ್ ತಮ್ಮ ಶತ್ರುಗಳೊಂದಿಗೆ ಸಂಪರ್ಕದಲ್ಲಿದ್ದ ಹಾಗೂ ಗ್ಯಾಂಗ್‌ಗೆ ಸಂಬಂಧಿಸಿದ ಘಟನೆಯ ಕುರಿತು ಹಾಡನ್ನು ರಚಿಸಿದ್ದ ಎಂದು ಗ್ಯಾಂಗ್‌ನ ಸದಸ್ಯ ಭೋಲು ಶಹಪುರಿಯಾ ಇನ್‌ಸ್ಟಾಗ್ರಾಮ್ ಪೋಸ್ಟ್‌ನಲ್ಲಿ ಹೇಳಿಕೊಂಡಿದ್ದಾನೆ. ಅಷ್ಟೇ ಅಲ್ಲದೆ, ಯುಪಿ ಪೊಲೀಸರಿಗೆ ಬೆದರಿಕೆ ಹಾಕಿ ಮುಂಬರುವ ದಿನಗಳಲ್ಲಿ ಇಂತಹ ಇನ್ನಷ್ಟು ಘಟನೆಗಳು ನಡೆಯಲಿವೆ ಎಂದು ಎಚ್ಚರಿಕೆ ನೀಡಿದ್ದಾನೆ.…

Read More

ಬೆಂಗಳೂರು: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಿಐಎಸ್‌ಎಫ್ ಅಧಿಕಾರಿಗಳು ವಿದೇಶದಿಂದ ಬಂದ ಪ್ರಯಾಣಿಕನ ಬಾಯಿಯಲ್ಲಿ ಬಚ್ಚಿಟ್ಟಿದ್ದ ಸುಮಾರು 82 ಗ್ರಾಂ ತೂಕದ ಎರಡು ಚಿನ್ನದ ಕ್ಯಾಪ್ಸುಲ್‌ಗಳನ್ನು ಪತ್ತೆಹಚ್ಚಿದ್ದಾರೆ. ದುಬೈನಿಂದ ಬೆಂಗಳೂರಿಗೆ ಬಂದಿದ್ದ ಪ್ರಯಾಣಿಕನ ವರ್ತನೆ ಭದ್ರತಾ ತಪಾಸಣೆ ವೇಳೆ ಅನುಮಾನಾಸ್ಪದವಾಗಿ ಕಂಡುಬಂದ ಹಿನ್ನೆಲೆಯಲ್ಲಿ ಹೆಚ್ಚಿನ ತಪಾಸಣೆ ನಡೆಸಲಾಗಿದ್ದು, ಈ ವೇಳೆ ಆತನ ಬಾಯಿಯೊಳಗೆ ಕ್ಯಾಪ್ಸುಲ್‌ಗಳನ್ನು ಬಚ್ಚಿಟ್ಟಿರುವುದು ಪತ್ತೆಯಾಗಿದೆ. ಬಳಿಕ ಪ್ರಯಾಣಿಕನನ್ನು ವಶಕ್ಕೆ ಪಡೆದು, ವಶಪಡಿಸಿಕೊಂಡ ವಸ್ತುಗಳೊಂದಿಗೆ ಹೆಚ್ಚಿನ ಕಾನೂನು ಕ್ರಮಕ್ಕಾಗಿ ವಿಮಾನ ನಿಲ್ದಾಣ ಪೊಲೀಸರಿಗೆ ಹಸ್ತಾಂತರಿಸಲಾಗಿದೆ. ವಶಪಡಿಸಿಕೊಂಡ ಲೋಹದ ನಿಖರ ಸ್ವರೂಪ ಮತ್ತು ಮೌಲ್ಯವನ್ನು ಪರಿಶೀಲಿಸಲಾಗುತ್ತಿದೆ.

Read More

ಸ್ನೇಹ ಬೆಳೆಸಲು ನಿರಾಕರಿಸಿದ್ದಕ್ಕೆ ಜಿಮ್ ಟ್ರೇನರ್ ಮನೆಗೆ ನುಗ್ಗಿ ಮಾಡೆಲ್‌ ಅನ್ನು ಕೊಲೆ ಮಾಡಿರುವ ಘಟನೆ  ತಿಲಕ್ ನಗರದಲ್ಲಿ ನಡೆದಿದೆ. ಮಾಡೆಲ್‌ ಆಗಿದ್ದ 21 ವರ್ಷದ ಮುಸ್ಕಾನ್ ಮೃತ ಯುವತಿ. ಆರೋಪಿಯನ್ನು ಇಮ್ರಾನ್ ಎಂದು ಗುರುತಿಸಲಾಗಿದ್ದು, ಜಿಮ್ ಟ್ರೇನರ್ ಆಗಿದ್ದ. ಘನಟೆ ನಡೆದಾಗ ಮನೆಯಲ್ಲಿ ಯುವತಿ ಒಬ್ಬಂಟಿಯಾಗಿದ್ದರು ಎಂದು ತಿಳಿದುಬಂದಿದೆ. ದೆಹಲಿಯ  ಪೊಲೀಸರ ಮಾಹಿತಿ ಪ್ರಕಾರ, ಯುವತಿಗೆ ಸ್ವಲ್ಪ ಸಮಯದಿಂದ ಆರೋಪಿ ಪರಿಚಿತನಾಗಿದ್ದ. ಜಿಮ್‌ಗೆ ಹೋಗುತ್ತಿದ್ದಾಗ ಮುಸ್ಕಾನ್‌ಗೆ ಇಮ್ರಾನ್ ಪರಿಚಯವಾಗಿದ್ದ, ಅಲ್ಲದೇ ಭೇಟಿಯಾದಾಗಿನಿಂದಲೂ ಆಕೆಯೊಂದಿಗೆ ಸ್ನೇಹ ಬೆಳೆಸಲು ನಿರಂತರವಾಗಿ ಪ್ರಯತ್ನಿಸುತ್ತಿದ್ದ. ಇದೀಗ ಮನೆಯಲ್ಲಿ ಯಾರೂ ಇಲ್ಲದನ್ನು ತಿಳಿದು, ಮನೆಗೆ ನುಗ್ಗಿ ಕೊಲೆ ಮಾಡಿ, ಪರಾರಿಯಾಗಿದ್ದಾನೆ ಎಂದು ತಿಳಿಸಿದ್ದಾರೆ. ಘಟನೆಯ ಬಗ್ಗೆ ಮಾಹಿತಿ ಪಡೆದ ತಕ್ಷಣ ಪೊಲೀಸರು ಸ್ಥಳಕ್ಕೆ ಧಾವಿಸಿ, ತನಿಖೆ ಆರಂಭಿಸಿದೆ. ಆರೋಪಿಯನ್ನು ಪತ್ತೆಹಚ್ಚಲು ಮತ್ತು ಘಟನೆಯ ಬಗ್ಗೆ ತಿಳಿಯಲು ಹತ್ತಿರದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ. ಈವರೆಗೂ ಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಸದ್ಯ ತನಿಖೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.…

Read More

ಹಳೆಯಂಗಡಿ : ಪ್ರಿಯದರ್ಶಿನಿ ಸಹಕಾರಿ ಸಂಘದಲ್ಲಿ ₹20 ಲಕ್ಷ ಸಾಲ ಮಂಜೂರು ಮಾಡಿ, ಸದಸ್ಯನಿಗೆ ಕೇವಲ ₹5 ಲಕ್ಷ ನೀಡಿ ಉಳಿದ ಹಣವನ್ನು ಬೇರೆ ಖಾತೆಗಳಿಗೆ ಅಕ್ರಮವಾಗಿ ವರ್ಗಾಯಿಸಿ ವಂಚಿಸಲಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಪರಿಶಿಷ್ಟ ಜಾತಿಗೆ ಸೇರಿದ ಸಂಘದ ಸದಸ್ಯ ನಾಗೇಶ್ ಅವರು ಮದುವೆಗಾಗಿ ₹5 ಲಕ್ಷ ಸಾಲ ಪಡೆಯುವ ಉದ್ದೇಶದಿಂದ ಜಾಗದ ಮೂಲ ದಾಖಲೆಗಳನ್ನು ಸಂಘಕ್ಕೆ ನೀಡಿದ್ದರು. ಆದರೆ, ಅವರಿಂದ ಖಾಲಿ ಹಾಳೆಗಳಿಗೂ ಸಹಿ ಪಡೆದು, ಒಟ್ಟು 66 ಸೆಂಟ್ಸ್ ಜಾಗವನ್ನು ಅಡಮಾನವಿಟ್ಟು ಅವರ ಹೆಸರಿನಲ್ಲಿ ₹20 ಲಕ್ಷ ಸಾಲ ಮಂಜೂರು ಮಾಡಲಾಗಿದೆ ಎಂದು ಆರೋಪಿಸಲಾಗಿದೆ. 2023ರ ಆಗಸ್ಟ್ 7ರಂದು ಆಡಳಿತ ಮಂಡಳಿ ಸಭೆಯಲ್ಲಿ ಸುಳ್ಳು ದಾಖಲೆ ಸೃಷ್ಟಿಸಿ ಸಾಲ ಮಂಜೂರು ಮಾಡಲಾಗಿದ್ದು, ನಾಗೇಶ್ ಅವರ ಗಮನಕ್ಕೆ ಬಾರದಂತೆ ಸಾಲದ ಹಣವನ್ನು ಮೊದಲು ಶೇಖ್ ವಾಜಿರ್ ಅವರ ಕೆನರಾ ಬ್ಯಾಂಕ್ ಖಾತೆಗೆ ವರ್ಗಾಯಿಸಿ, ಬಳಿಕ ನಾಲ್ಕನೇ ಹಾಗೂ ಆರನೇ ಆರೋಪಿಗಳ ಖಾತೆಗಳಿಗೆ ಅಕ್ರಮವಾಗಿ ವರ್ಗಾಯಿಸಲಾಗಿದೆ ಎಂದು ದೂರಿನಲ್ಲಿ…

Read More

ಕೊಲ್ಲೂರು,: ಮೂತ್ರ ವಿಸರ್ಜನೆ ಮಾಡುತ್ತಿದ್ದ ಲಾರಿ ಕ್ಲಿನರ್ ಕುಸಿದು ಬಿದ್ದು ಮೃತಪಟ್ಟ ಘಟನೆ ಕೊಲ್ಲೂರು ಸಮೀಪದ ಜಡ್ಕಲ್ ಗ್ರಾಮದ ಜಂಕ್ಷನ್ ಬಳಿ ನಡೆದಿದೆ. ಮೃತರನ್ನು ದಾವಣಗೆರೆ ಜಿಲ್ಲೆಯ ಗಣೇಶ್(45) ಎಂದು ಗುರುತಿಸಲಾಗಿದೆ. ಇವರು ಕಳೆದ 4 ವರ್ಷಗಳಿಂದ ಶಿವಮೊಗ್ಗ ಜಿಲ್ಲೆಯ ಕುಂಶಿ ಗ್ರಾಮದ ಶಿವು ಕುಮಾರ ಎಂಬವರ ಲಾರಿಯಲ್ಲಿ ಕ್ಲೀನರ್ ಆಗಿ ಕೆಲಸ ಮಾಡಿಕೊಂಡಿದ್ದರು. ಮಂಗಳೂರಿನಿಂದ ಲಾರಿಯಲ್ಲಿ ಬರುತ್ತಿದ್ದಾಗ ದಾರಿ ಮಧ್ಯೆ ಮೂತ್ರ ವಿಸರ್ಜನೆಗಾಗಿ ಲಾರಿಯನ್ನು ರಸ್ತೆ ಬದಿ ನಿಲ್ಲಿಸಿದ್ದು, ಗಣೇಶ್ ಮೂತ್ರ ವಿಜರ್ಸನೆ ಮಾಡುತ್ತಿದ್ದಾಗ ಅಲ್ಲಿಯೇ ಕುಸಿದು ಬಿದ್ದು ಮೃತಪಟ್ಟರು ಎಂದು ತಿಳಿದು ಬಂದಿದೆ. ಈ ಬಗ್ಗೆ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕುಂದಾಪುರ : ಗಂಗೊಳ್ಳಿ ಬಂದರಿನಿಂದ ಮೀನುಗಾರಿಕೆಗೆ ತೆರಳಿದ್ದ ಪರ್ಸಿನ್ ಬೋಟೊಂದು ಬುಧವಾರ ಗಂಗೊಳ್ಳಿ ಅಳಿವೆ ಪ್ರದೇಶದ ಸಮುದ್ರದಲ್ಲಿ ಮುಳುಗಡೆಯಾದ ಭೀಕರ ಘಟನೆ ಸಂಭವಿಸಿದೆ. ಬೋಟಿನಲ್ಲಿದ್ದ ಎಲ್ಲಾ 27 ಮಂದಿ ಮೀನುಗಾರರನ್ನು ಸಕಾಲದಲ್ಲಿ ರಕ್ಷಿಸಲಾಗಿದ್ದು, ಬೋಟ್ ಮುಳುಗಡೆಯಿಂದಾಗಿ ಕೋಟ್ಯಂತರ ರೂಪಾಯಿ ನಷ್ಟ ಸಂಭವಿಸಿದೆ. ಭಟ್ಕಳ ಮುಂಡಳ್ಳಿ ಮೂಲದ ನಾಗರಾಜ ಮೊಗೇರ ಅವರಿಗೆ ಸೇರಿದ ‘ಶ್ರೀ ಬಾಲಾಂಜನೇಯ’ ಹೆಸರಿನ ಪರ್ಸಿನ್ ಬೋಟಿನಲ್ಲಿ 27 ಮಂದಿ ಮೀನುಗಾರರು ಬುಧವಾರ ಗಂಗೊಳ್ಳಿಯಿಂದ ಮೀನುಗಾರಿಕೆಗೆ ತೆರಳಿದ್ದರು. ಗಂಗೊಳ್ಳಿ ಬಂದರಿನಿಂದ ಅನತಿ ದೂರದಲ್ಲಿರುವ ಅಪಾಯಕಾರಿ ಅಳಿವೆ ಪ್ರದೇಶವನ್ನು ತಲುಪುತ್ತಿದ್ದಂತೆ ಭಾರಿ ಅಲೆಗಳ ಹೊಡೆತಕ್ಕೆ ಬೋಟಿನೊಳಗೆ ನೀರು ನುಗ್ಗಲಾರಂಭಿಸಿತು. ಬೋಟ್ ಮುಳುಗುವ ಅಪಾಯದ ಮುನ್ಸೂಚನೆ ಅರಿತ ಮೀನುಗಾರರು ತಕ್ಷಣವೇ ಗಂಗೊಳ್ಳಿ ಬಂದರಿನಲ್ಲಿದ್ದ ಇತರ ಬೋಟ್‌ಗಳಿಗೆ ಮಾಹಿತಿ ನೀಡಿದರು. ತಕ್ಷಣವೇ ಕಾರ್ಯಪ್ರವೃತ್ತರಾದ ಸ್ಥಳೀಯ ಮೀನುಗಾರರು ಹಾಗೂ ಗಂಗೊಳ್ಳಿ ಕರಾವಳಿ ಕಾವಲು ಪಡೆಯ ಪೊಲೀಸರು ಎರಡು ಬೋಟ್‌ಗಳಲ್ಲಿ ಸಮುದ್ರಕ್ಕೆ ಧಾವಿಸಿ, ಅಪಾಯದಲ್ಲಿದ್ದ ಎಲ್ಲಾ 27 ಮಂದಿ ಮೀನುಗಾರರನ್ನು ಸುರಕ್ಷಿತವಾಗಿ ರಕ್ಷಿಸಿ ದಡಕ್ಕೆ ಕರೆತಂದಿದ್ದಾರೆ. ಅಲೆಗಳ…

Read More

ಪುತ್ತೂರು: ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ಓಮ್ನಿ ಕಾರ್ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು  ಅಂತರ್ ರಾಜ್ಯ ಕಳ್ಳರನ್ನು ಪೊಲೀಸರು ಬಂಧಿಸಿದ್ದಾರೆ. ಕೇರಳ ಕಾಸರಗೋಡು ನಿವಾಸಿಗಳಾದ ಅಬ್ದುಲ್ ಸಾಯಿಲ್ ಜೆ (25), ಮೊಹಮ್ಮದ್ ಆಸೀಕ್ (25) ಮೊಹಮ್ಮದ್ ಸಿರಾಜ್ (28) ಹಾಗೂ ತಮಿಳುನಾಡು ಕರೂರು ನಿವಾಸಿ ಶಕ್ತಿವೇಲು ಜಿ (24) ಬಂಧಿತ ಆರೋಪಿಗಳು. ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಮಾಡ್ನೂರು ಕಾವು ಎಂಬಲ್ಲಿ ಜೂನ್ 19 ರಿಂದ ಜೂನ್ 20 ರ ಅವಧಿಯಲ್ಲಿ ನಡೆದ ಓಮ್ನಿ ಕಾರ್ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ, ಅ.ಕ್ರ: 94/2026, 303(2)ಬಿಎನ್‌ಎಸ್ ರಂತೆ ಪ್ರಕರಣ ದಾಖಲಾಗಿತ್ತು. ಪುತ್ತೂರು ಉಪವಿಭಾಗದ ಪೊಲೀಸ್ ಉಪಾಧೀಕ್ಷಕರಾದ ಪ್ರಮೋದ್ ಕುಮಾರ್ ರವರ ಹಾಗೂ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ಪ್ರಭಾರ ಪೊಲೀಸ್ ನಿರೀಕ್ಷಕರಾದ ತಿಮ್ಮಪ್ಪ ನಾಯ್ಕ್ ರವರ ಮಾರ್ಗದರ್ಶನದಲ್ಲಿ, ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯ ಪಿಎಸ್‌ಐ ಗುಣಪಾಲ ಜೆ ಮತ್ತು ಪಿಎಸ್‌ಐ ಸುಷ್ಮಾ.ಜಿ ಭಂಡಾರಿ ಅವರ ನೇತೃತ್ವದಲ್ಲಿ ತನಿಖೆ ನಡೆಸಲಾಯಿತು. ಈ…

Read More

ಸುಳ್ಯ : ರಸ್ತೆ ಬದಿ ನಿಲ್ಲಿಸಿದ್ದ ಟೆಂಪೋ ಟಿಟಿ  ವಾಹನದ ಮೇಲೆ ಲಾರಿಯೊಂದು ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಪರಿಣಾಮ ಪ್ರಯಾಣಿಕರು ಸೇರಿದಂತೆ ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ದೇವರಕೊಲ್ಲಿ ಸಮೀಪದ ಅಬ್ಬಿ ಫಾಲ್ಸ್ ಬಳಿ ಬುಧವಾರ (ಆಗಸ್ಟ್ 26) ಸಂಜೆ ಸಂಭವಿಸಿದೆ. ಗುಜರಾತ್‌ನ ಅಹಮದಾಬಾದ್ ಮೂಲದ ಪ್ರವಾಸಿಗರು ಮಡಿಕೇರಿ ಕಡೆಯಿಂದ ಮಂಗಳೂರಿನತ್ತ ಟೆಂಪೋ ಟಿಟಿಯಲ್ಲಿ ಪ್ರಯಾಣಿಸುತ್ತಿದ್ದರು. ದೇವರಕೊಲ್ಲಿ ಸಮೀಪದ ಅಬ್ಬಿ ಫಾಲ್ಸ್ ಬಳಿ ವಿಶ್ರಾಂತಿಗಾಗಿ ವಾಹನವನ್ನು ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿತ್ತು. ಇದೇ ವೇಳೆ ಅದೇ ಮಾರ್ಗವಾಗಿ ಸುಳ್ಯದ ಕಡೆಗೆ ಬರುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ನಿಂತಿದ್ದ ಟಿಟಿ ವಾಹನದ ಮೇಲೆಯೇ ಮಗುಚಿ ಬಿದ್ದಿದೆ. ಅಪಘಾತ ಸಂಭವಿಸಿದ ವೇಳೆ ಟಿಟಿ ವಾಹನದಲ್ಲಿ ಒಟ್ಟು 7 ಜನ ಪ್ರಯಾಣಿಕರಿದ್ದರು. ಘಟನೆಯಲ್ಲಿ ಟಿಟಿಯಲ್ಲಿದ್ದ ಓರ್ವ ಪ್ರಯಾಣಿಕ, ಲಾರಿ ಚಾಲಕ ಹಾಗೂ ಕ್ಲೀನರ್ ಸೇರಿದಂತೆ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅಪಘಾತದ ತೀವ್ರತೆಗೆ ವಾಹನಗಳು ಜಖಂಗೊಂಡಿದ್ದು, ತಕ್ಷಣವೇ ಸ್ಥಳೀಯರು ಹಾಗೂ ಪೊಲೀಸರು ಆಂಬುಲೆನ್ಸ್…

Read More

ಮಂಗಳೂರು: ಕ್ಷುಲ್ಲಕ ಕಾರಣಕ್ಕಾಗಿ ತನ್ನ ಸ್ವಂತ ತಂಗಿಯನ್ನೇ ಸುತ್ತಿಗೆಯಿಂದ ಹೊಡೆದು ಭೀಕರವಾಗಿ ಕೊಲೆ ಮಾಡಿದ್ದ ಆರೋಪಿಗೆ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಕಂಬಳಪದವು ನಿವಾಸಿ ಸ್ಯಾಮ್ಸನ್ ಫ್ರಾನ್ಸಿಸ್ ಕುಟಿನ್ಹಾ ಶಿಕ್ಷೆಗೆ ಗುರಿಯಾದ ಅಪರಾಧಿಯಾಗಿದ್ದಾನೆ. ನ್ಯಾಯಾಲಯವು ಐಪಿಸಿ ಕಲಂ 304 (II) ಅನ್ವಯ ಅಪರಾಧಿಗೆ 4 ವರ್ಷಗಳ ಸಜಾ ಶಿಕ್ಷೆ ಹಾಗೂ ₹10,000 ದಂಡ ಮತ್ತು ಸಾಕ್ಷ್ಯ ನಾಶಪಡಿಸಿದ ಐಪಿಸಿ ಕಲಂ 201ರ ಅನ್ವಯ 1 ವರ್ಷ ಶಿಕ್ಷೆ ಹಾಗೂ ₹1,000 ದಂಡ ವಿಧಿಸಿ ಸೋಮವಾರ ಆದೇಶ ಹೊರಡಿಸಿದೆ. 2019ರ ಆಕ್ಟೋಬರ್‌ 8 ರ ಮಧ್ಯಾಹ್ನ ಸುಮಾರು 12 ಗಂಟೆಗೆ ಕಂಬಳಪದವಿನಲ್ಲಿರುವ ತನ್ನ ಮನೆಯಲ್ಲಿ ಆರೋಪಿ ಸ್ಯಾಮ್ಸನ್, ತನ್ನ ತಂಗಿ ಫಿಯೋನಾ ಸ್ವೀಡಲ್ ಕುಟಿನ್ಹಾ ಬಳಿ ಮೊಬೈಲ್ ಫೋನ್ ಬಳಸಲು ನೀಡುವಂತೆ ಕೇಳಿದ್ದ. ಈ ವಿಚಾರವಾಗಿ ಇಬ್ಬರ ನಡುವೆ ಮಾತಿಗೆ ಮಾತು ಬೆಳೆದು ಜಗಳ ನಡೆದಿತ್ತು. ಈ…

Read More