Author: admin
ಹಳೆಯಂಗಡಿ : ರಾಷ್ಟ್ರೀಯ ಹೆದ್ದಾರಿ 66ರ ಹಳೆಯಂಗಡಿ ಬಸ್ ನಿಲ್ದಾಣದ ಬಳಿ ಎಕ್ಸ್‌ಪ್ರೆಸ್ ಖಾಸಗಿ ಬಸ್‌ಗಳ ಚಾಲಕರು ಹಾಗೂ ನಿರ್ವಾಹಕರ ನಡುವೆ ಪ್ರಯಾಣಿಕರನ್ನು ಹತ್ತಿಸಿಕೊಳ್ಳುವ ವಿಚಾರದಲ್ಲಿ ತೀವ್ರ ಪೈಪೋಟಿ ನಡೆದಿದ್ದು, ಅಪಾಯಕಾರಿ ರೀತಿಯಲ್ಲಿ ಬಸ್‌ಗಳನ್ನು ಚಲಾಯಿಸಿದ ಘಟನೆ ಮಂಗಳವಾರ ಸಂಭವಿಸಿದೆ. ಉಡುಪಿಯಿಂದ ಮಂಗಳೂರಿನತ್ತ ತೆರಳುತ್ತಿದ್ದ ಎರಡು ಖಾಸಗಿ ತಡೆರಹಿತ ಬಸ್‌ಗಳ ಸಿಬ್ಬಂದಿ ನಡುವೆ ಪ್ರಯಾಣಿಕರನ್ನು ಹತ್ತಿಸಿಕೊಳ್ಳುವ ವಿಚಾರದಲ್ಲಿ ಹೆದ್ದಾರಿಯಲ್ಲೇ ಮಾತಿನ ಚಕಮಕಿ ನಡೆದಿದೆ. ಈ ವೇಳೆ ಎರಡೂ ಬಸ್‌ಗಳನ್ನು ಚಾಲಕರು ಅತ್ಯಂತ ಅಪಾಯಕಾರಿಯಾಗಿ ಚಲಾಯಿಸಿಕೊಂಡು ಬಂದು ಪ್ರಯಾಣಿಕರನ್ನು ಹತ್ತಿಸಿಕೊಳ್ಳಲು ಮುಗಿಬಿದ್ದಿದ್ದಾರೆ. ಇದರಿಂದಾಗಿ ಕೆಲಕಾಲ ಹೆದ್ದಾರಿಯಲ್ಲಿ ಸಾರ್ವಜನಿಕರು ಹಾಗೂ ಪ್ರಯಾಣಿಕರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಹಳೆಯಂಗಡಿ ಬಸ್ ನಿಲ್ದಾಣದ ಬಳಿ ತಡೆರಹಿತ ಬಸ್‌ಗಳ ಚಾಲಕ ಹಾಗೂ ನಿರ್ವಾಹಕರ ನಡುವೆ ‘ಟೈಮಿಂಗ್ಸ್’ ವಿಚಾರಕ್ಕೆ ಸಂಬಂಧಿಸಿದಂತೆ ಆಗಾಗ್ಗೆ ಗಲಾಟೆಗಳು ನಡೆಯುತ್ತಿರುತ್ತವೆ. ಇಂತಹ ಪೈಪೋಟಿಯಿಂದಾಗಿ ಈ ಹಿಂದೆ ಸಣ್ಣಪುಟ್ಟ ಹಲ್ಲೆ ಪ್ರಕರಣಗಳೂ ವರದಿಯಾಗಿವೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಪ್ರಯಾಣಿಕರ ಸುರಕ್ಷತೆಯನ್ನು ಗಾಳಿಗೆ ತೂರಿ ಹೆದ್ದಾರಿಯಲ್ಲೇ ಬಸ್‌ಗಳ ನಡುವೆ…
ಕಾರ್ಕಳ: ಸುಮಾರು 42 ವರ್ಷಗಳಿಂದ ತಲೆಮರೆಸಿಕೊಂಡಿದ್ದಾನೆ ಎನ್ನಲಾದ ಪಳ್ಳಿ ಗ್ರಾಮದ ನಿವಾಸಿ ರವೀಂದ್ರ ಶೆಟ್ಟಿ (65) ಎಂಬಾತನನ್ನು ಕಾರ್ಕಳ ನಗರ ಪೊಲೀಸರು ಮಹಾರಾಷ್ಟ್ರದಲ್ಲಿ ಪತ್ತೆಹಚ್ಚಿ ಬಂಧಿಸಿದ್ದಾರೆ. ಕಾರ್ಕಳ ನಗರ ಪೊಲೀಸರು ನಡೆಸಿದ ನಿರಂತರ ಪತ್ತೆ ಕಾರ್ಯಾಚರಣೆಯ ಬಳಿಕ ಸೆಪ್ಟೆಂಬರ್ 1ರಂದು ಮಹಾರಾಷ್ಟ್ರದ ಮುಲುಂಡ್ ಪಶ್ಚಿಮದಲ್ಲಿ ರವೀಂದ್ರ ಶೆಟ್ಟಿಯನ್ನು ಬಂಧಿಸಲಾಯಿತು. ಬಳಿಕ ಸೆಪ್ಟೆಂಬರ್ 2ರಂದು ಆತನನ್ನು ಕಾರ್ಕಳ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು. ಪೊಲೀಸ್ ಪ್ರಕಟಣೆಯ ಪ್ರಕಾರ, ನ್ಯಾಯಾಲಯವು ರವೀಂದ್ರ ಶೆಟ್ಟಿಗೆ ಜಾಮೀನು ಮಂಜೂರು ಮಾಡಿದೆ.
ವಿಜಯಪುರ: ವಿಜಯಪುರ ಜಿಲ್ಲೆಯಲ್ಲಿ ವಿಸ್ಮಯಕಾರಿ ಘಟನೆಯೊಂದು ನಡೆದಿದೆ. ಎಂಟು ತಿಂಗಳ ಹಿಂದೆ ಅಂತ್ಯಕ್ರಿಯೆ ನೆರವೇರಿಸಿ ಸಮಾಧಿ ಮಾಡಿದ್ದ ಸ್ವಾಮೀಜಿಯವರ ದೇಹ ಕೊಳೆಯದ ಸ್ಥಿತಿಯಲ್ಲಿ ಪತ್ತೆಯಾಗಿದೆ ಎಂದು ಭಕ್ತರು ಹೇಳಿಕೊಂಡಿದ್ದಾರೆ. ಈ ಘಟನೆ ಇದೀಗ ಬಸವನಬಾಗೇವಾಡಿ ತಾಲೂಕಿನ ಮನಗೂಳಿ ಪಟ್ಟಣದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ಮನಗೂಳಿ ಪಟ್ಟಣದ ಚೌಕಿಮಠದ ಬಳಿ ಈ ಘಟನೆ ನಡೆದಿದೆ. ಶ್ರೀ ರೇವಣಸಿದ್ದೇಶ್ವರ ಗದ್ದುಗೆ ಪೂಜಾರಿಯಾಗಿದ್ದ ಮಲ್ಲಯ್ಯ ಸರೂರ ಸ್ವಾಮೀಜಿ ಅವರು 2025ರ ಡಿಸೆಂಬರ್ 31ರಂದು ನಿಧನರಾಗಿದ್ದರು. ಬಳಿಕ 2026ರ ಜನವರಿ 1ರಂದು ಚೌಕಿಮಠದ ಬಳಿ ಅವರ ಅಂತ್ಯಕ್ರಿಯೆ ನೆರವೇರಿಸಿ, ದೇಹವನ್ನು ಸಮಾಧಿ ಮಾಡಲಾಗಿತ್ತು. ಕನಸಲ್ಲಿ ಬಂದು ಮರು ಅಂತ್ಯಕ್ರಿಯೆಗೆ ಸೂಚಿಸಿದ್ದ ಸ್ವಾಮೀಜಿ! ಮಲ್ಲಯ್ಯ ಸರೂರ ಸ್ವಾಮೀಜಿ ಹಲವು ವರ್ಷಗಳಿಂದ ಶ್ರೀ ರೇವಣಸಿದ್ದೇಶ್ವರ ಗದ್ದುಗೆಗೆ ಪೂಜೆ ಸಲ್ಲಿಸುತ್ತಿದ್ದರು. ಸ್ವಾಮೀಜಿ ತಮ್ಮ ಭಕ್ತರ ಕನಸಿನಲ್ಲಿ ಬಂದು, ಶ್ರೀ ರೇವಣಸಿದ್ದೇಶ್ವರ ಗದ್ದುಗೆ ಬಳಿ ಅಂತ್ಯಕ್ರಿಯೆ ನೆರವೇರಿಸುವಂತೆ ಸೂಚನೆ ನೀಡಿದ್ದರು ಎಂದು ಭಕ್ತರು ಹೇಳಿಕೊಂಡಿದ್ದಾರೆ. 8 ತಿಂಗಳ ನಂತರ ಮೃತದೇಹ ಹೊರತೆಗೆ ಭಕ್ತರಿಗೆ…
ಚಂಡೀಗಢ: ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರನ್ನು ಡಿಲೀಟ್ ಮಾಡಲಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ರಾಘವ್ ಚಡ್ಡಾ , ಇದು ಎಎಪಿಯ ರಾಜಕೀಯ ಸೇಡು ಎಂದು ಆರೋಪಿಸಿದ್ದಾರೆ. ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (SIR) ಅಡಿಯಲ್ಲಿ ಸಿದ್ಧಪಡಿಸಲಾದ ಪಂಜಾಬ್ ಕರಡು ಮತದಾರರ ಪಟ್ಟಿಯಿಂದ ರಾಘವ್ ಚಡ್ಡಾ ಅವರ ಹೆಸರನ್ನು ಅಳಿಸಲಾಗಿದೆ. ಶಾಶ್ವತವಾಗಿ ಶಿಫ್ಟ್ ಆಗಿದ್ದಾರೆ ಎಂದು ಅವರ ಹೆಸರನ್ನು ಗುರುತಿಸಲಾಗಿದೆ. 2022 ರಲ್ಲಿ ಪಂಜಾಬ್‌ನಿಂದ ಎಎಪಿ ರಾಜ್ಯಸಭಾ ಸಂಸದರಾಗಿ ಆಯ್ಕೆಯಾಗಿದ್ದ ಅವರು ಇತ್ತೀಚೆಗೆ ಬಿಜೆಪಿಗೆ ಸೇರಿದ್ದರು. ಇದರಿಂದ ಎಎಪಿ ರಾಜಕೀಯ ಸೇಡಿಗೆ ಹೆಸರು ಡಿಲೀಟ್ ಮಾಡಿಸಿದೆ ಎಂದು ಆರೋಪಿಸಲಾಗಿದೆ. ಆಗಸ್ಟ್ 13 ರಂದು ಪ್ರಕಟವಾದ ASDD (ಅನುಪಸ್ಥಿತಿ, ಶಿಫ್ಟ್, ಡಿಸೀಸ್ಡ್ ಮತ್ತು ಡೂಪ್ಲಿಕೇಟ್) ಪಟ್ಟಿಯಲ್ಲಿ ಚಡ್ಡಾ ಅವರ ಹೆಸರು ಪ್ರಕಟವಾಗಿದೆ. ಪಂಜಾಬ್‌ನಲ್ಲಿ ಸುಮಾರು 9.7% ಜನರು, ಅಂದರೆ 20.66 ಲಕ್ಷ ಮತದಾರರ ಹೆಸರನ್ನು ಡಿಲೀಟ್ ಮಾಡಲಾಗಿದೆ. ಈ ಬೆಳವಣಿಗೆಗೆ ಪ್ರತಿಕ್ರಿಯಿಸಿದ ಚಡ್ಡಾ, ತಮ್ಮ…
ಕೋಝಿಕ್ಕೋಡ್ : ಕ್ಯಾಲಿಕಟ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 8 ತಿಂಗಳ ಮಗುವಿನ ಡೈಪರ್‌ನಲ್ಲಿ ಬಚ್ಚಿಟ್ಟು ಸುಮಾರು ₹50 ಲಕ್ಷ ಮೌಲ್ಯದ ಚಿನ್ನವನ್ನು ಕಳ್ಳಸಾಗಣೆ ಮಾಡಲು ಯತ್ನಿಸಿದ ಘಟನೆ ಇದೀಗ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳನ್ನು ತೀವ್ರ ಆತಂಕಕ್ಕೀಡುಮಾಡಿದೆ. ಕೇರಳದಲ್ಲಿ ತಪಾಸಣೆಯಿಂದ ಬಚಾವ್ ಆಗಲು ಚಿಕ್ಕ ಮಗುವನ್ನೇ ‘ವಾಹಕ’ವಾಗಿ ಬಳಸಿಕೊಂಡ ಮೊದಲ ಪ್ರಕರಣ ಇದಾಗಿದೆ ಎಂದು ಕಸ್ಟಮ್ಸ್ ಅಧಿಕಾರಿಗಳು ತಿಳಿಸಿದ್ದಾರೆ. ಈ ಘಟನೆ ಬೆನ್ನಲ್ಲೇ ತಮ್ಮ ಸ್ಕ್ರೀನಿಂಗ್ ನಿಯಮಗಳನ್ನು ಮರುಪರಿಶೀಲಿಸಲು ಕಸ್ಟಮ್ಸ್ ಇಲಾಖೆ ನಿರ್ಧರಿಸಿದ್ದು, ಇನ್ಮುಂದೆ ವಿದೇಶಗಳಿಂದ ಬರುವ ಶಿಶುಗಳು ಸೇರಿದಂತೆ ಚಿಕ್ಕ ಮಕ್ಕಳ ಮೇಲೆಯೂ ತೀವ್ರ ನಿಗಾ ವಹಿಸಲು ಮುಂದಾಗಿದೆ. ಕ್ಯಾಲಿಕಟ್ ವಿಮಾನ ನಿಲ್ದಾಣದಲ್ಲಿ ಮಂಗಳವಾರ ಮಧ್ಯರಾತ್ರಿ ಪೊನ್ನಾನಿ ಮೂಲದ ವ್ಯಕ್ತಿಯೊಬ್ಬರಿಂದ ₹1 ಕೋಟಿ ಮೌಲ್ಯದ 1 ಕೆಜಿ ಚಿನ್ನವನ್ನು ವಶಪಡಿಸಿಕೊಳ್ಳಲಾಗಿತ್ತು. ಈ ಪೈಕಿ ಅರ್ಧ ಕೆಜಿ ಚಿನ್ನವನ್ನು ವ್ಯಕ್ತಿ ತನ್ನ ದೇಹದಲ್ಲಿ ಬಚ್ಚಿಟ್ಟಿದ್ದರೆ, ಇನ್ನುಳಿದರ್ಧ ಕೆಜಿ ಚಿನ್ನವನ್ನು ತನ್ನ 8 ತಿಂಗಳ ಮಗುವಿನ ಡೈಪರ್‌ನಲ್ಲಿ ಅಡಗಿಸಿಟ್ಟಿದ್ದ. ವಿಚಾರಣೆ ವೇಳೆ ಈತನ…
ದಾವಣಗೆರೆ: ಇಲ್ಲಿನ ಕಾಲೇಜೊಂದರ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿನಿಯೊಬ್ಬಳ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಹೂವಿನ ಹಡಗಲಿ ತಾಲೂಕಿನ ಕುರುವತ್ತಿ ಗ್ರಾಮದ ರಂಜಿತಾ (17) ಅನುಮಾನಾಸ್ಪದವಾಗಿ ಸಾವನ್ನಪ್ಪಿದ ವಿದ್ಯಾರ್ಥಿನಿ. ಈಕೆ ದಾವಣಗೆರೆಯ ಟೀಮ್ ಅಕಾಡೆಮಿಯಲ್ಲಿ ದ್ವಿತೀಯ ಪಿಯುಸಿ ಓದುತ್ತಿದ್ದಳು. ಕಳೆದ ಒಂದುವರೆ ವರ್ಷದಿಂದ ಇಲ್ಲೇ ವಿದ್ಯಾಭ್ಯಾಸ ಮಾಡುತ್ತಿದ್ದಳು ಎಂದು ತಿಳಿದುಬಂದಿದೆ. ಸೆ.2ರ ರಾತ್ರಿ ಹಾಸ್ಟೆಲ್‌ನ ಕಿಟಕಿಗೆ ನೇಣು ಬಿಗಿದ ಸ್ಥಿತಿಯಲ್ಲಿ ಬಾಲಕಿಯ ಶವ ಪತ್ತೆಯಾಗಿದೆ. ಪೋಷಕರು ಅಕಾಡೆಮಿ ವಿರುದ್ಧ ಹೊಡೆದು ಕೊಲೆ ಮಾಡಿ ನೇಣು ಹಾಕಿದ್ದಾರೆ ಎಂದು ಆರೋಪಿಸಿದ್ದಾರೆ. ಈ ಸಂಬಂಧ ಟೀಮ್ ಅಕಾಡೆಮಿ ವಿರುದ್ಧ ವಿದ್ಯಾ ನಗರ ಪೊಲೀಸ್ ಠಾಣೆಗೆ ಪೋಷಕರು ದೂರು ನೀಡಿದ್ದಾರೆ. ಪೋಷಕರು ನೀಡಿದ ದೂರಿನ ಅನ್ವಯ ಪ್ರಕರಣ ದಾಖಲಾಗಿದೆ.
ಉಪ್ಪಿನಂಗಡಿ: ಪೆರ್ನೆ ಸಮೀಪ ಮಹಿಳೆಯೊಬ್ಬರು ಮನೆಯೊಳಗೆ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿರುವ ಘಟನೆ ಆತಂಕಕ್ಕೆ ಕಾರಣವಾಗಿದೆ.ಮಹಿಳೆಯ ಮೃತದೇಹ ಮನೆಯೊಳಗೆ ನೇಣು ಬಿಗಿದು ಅರ್ದ ಕಾಲು ನೆಲದ ಮೇಲೆ ಬಿದ್ದ ಸ್ಥಿತಿಯಲ್ಲಿ ಪತ್ತೆಯಾಗಿದ್ದು ಸಾವಿನ ಸುತ್ತ ಹಲವು ಅನುಮಾನಗಳು ಮೂಡಿವೆ.ಇದು ಆತ್ಮಹತ್ಯೆಯೇ ಅಥವಾ ಕೊಲೆಯೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.ಮೃತ ಮಹಿಳೆಯನ್ನು ಸೇವಾ ಯೋಜನೆಯಲ್ಲಿ ಕೆಲಸ ಮಾಡುತ್ತಿದ್ದ ಕಾವ್ಯ ಎಂದು ಗುರುತಿಸಲಾಗಿದೆ. ಹೆಚ್ಚಿನ ಮಾಹಿತಿ ತಿಳಿದು ಬಂದಿಲ್ಲ. ಮೃತರಿಗೆ ಇಬ್ಬರು ಮಕ್ಕಳಿದ್ದು ಇತ್ತೀಚೆಗೆ ಹೆಣ್ಣು ಮಗಳ ಮದುವೆ ನೆರವೇರಿಸಿದ್ದರು. ಇನ್ನೋರ್ವ ಗಂಡು ಮಗ ಮತ್ತು ಕುಟುಂಬಸ್ಥರನ್ನು ಅಗಲಿದ್ದಾರೆ. ಘಟನಾ ಸ್ಥಳಕ್ಕೆ ಉಪ್ಪಿನಂಗಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸಾವಿನ ನಿಖರ ಕಾರಣ ತಿಳಿಯಲು ತನಿಖೆ ಕೈಗೊಂಡಿದ್ದಾರೆ. ಮರಣೋತ್ತರ ಪರೀಕ್ಷೆಯ ವರದಿ ಹಾಗೂ ಪೊಲೀಸ್ ತನಿಖೆಯ ಬಳಿಕವಷ್ಟೇ ಸಾವಿನ ನಿಖರ ಕಾರಣ ತಿಳಿದುಬರುವ ಸಾಧ್ಯತೆ ಇದೆ.
ಶಿವಮೊಗ್ಗ: ನ್ಯಾಯಾಲಯ ಮೂರು ಬಾರಿ ಜಾಮೀನು ರಹಿತ ವಾರಂಟ್ ಹೊರಡಿಸಿದ್ದರೂ ವಿಚಾರಣೆಗೆ ಹಾಜರಾಗದೆ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ಭದ್ರಾವತಿ ಮೂಲದ ಆರೋಪಿ, ರೌಡಿಶೀಟರ್ ದಿಲೀಪ್ ಅಲಿಯಾಸ್ ಕರಿಯಾನನ್ನು ಬುಧವಾರ ಸಂಜೆ ಪೊಲೀಸರು ಬಂಧಿಸಿದ್ದಾರೆ. ಪೊಲೀಸರಿಂದ ತಪ್ಪಿಸಿಕೊಳ್ಳಲು ಅನನ್ಯ ಶಾಲೆ ಹಿಂಭಾಗದ ಕೆರೆಯ ನೀರಿನಲ್ಲಿ ಅಡಗಿ ಕುಳಿತಿದ್ದ ಆರೋಪಿಯನ್ನು ಭದ್ರಾವತಿ ನ್ಯೂ ಟೌನ್ ಠಾಣೆಯ ಪಿಎಸ್‌ಐ ರಮೇಶ್ ಹಾಗೂ ಸಿಬ್ಬಂದಿ ಪ್ರಸನ್ನ ಅವರು ನೀರಿಗೆ ಧುಮುಕಿ ಬಂಧಿಸಿದ್ದಾರೆ. ಆರೋಪಿಯನ್ನು ಪತ್ತೆಹಚ್ಚಿ ಬಂಧಿಸುವಲ್ಲಿ ಸಿಎಚ್‌ಸಿ ಗಂಗಾಧರ ಹಾಗೂ ಹಾಲಪ್ಪ ಅವರು ಪ್ರಮುಖ ಪಾತ್ರ ವಹಿಸಿದ್ದಾರೆ. ಸಾಹಸಮಯ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ ನ್ಯೂ ಟೌನ್ ಠಾಣೆಯ ಪೊಲೀಸ್ ತಂಡದ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ. ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ 260903-42-558801410
ಮಂಗಳೂರು: ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಅನಧಿಕೃತ ಬೀದಿಬದಿ ವ್ಯಾಪಾರ ತೆರವುಗೊಳಿಸಲು ಮನಪಾ ಆಯುಕ್ತರು ಸೂಚನೆ ನೀಡಿದ್ದಾರೆ. ಪಾಲಿಕೆ ವ್ಯಾಪ್ತಿಯ ನಗರದ ಸಾರ್ವಜನಿಕ ಸ್ಥಳಗಳಲ್ಲಿ ವಾಹನ ದಟ್ಟಣೆ ಹೆಚ್ಚುತ್ತಿದ್ದು, ಪಾದಚಾರಿ ರಸ್ತೆಗಳಲ್ಲಿ ಮತ್ತು ಇನ್ನಿತರೆ ಪ್ರದೇಶದಲ್ಲಿ ಅನಧಿಕೃತವಾಗಿ ಬೀದಿಬದಿ ವ್ಯಾಪಾರ ಮಾಡುತ್ತಿರುವುದರಿಂದ ಸಾರ್ವಜನಿಕರ ಹಿತರಕ್ಷಣೆಗೆ ಹಾಗೂ ಸುಗಮ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿರುವ ಬಗ್ಗೆ ಸಾರ್ವಜನಿಕರಿಂದ ಮತ್ತು ಸಂಘಟನೆಗಳಿಂದ ದೂರುಗಳು ಬರುತ್ತಿದೆ ಪಾಲಿಕೆಯಿಂದ ಈಗಾಗಲೇ ಬೀದಿಬದಿ ವ್ಯಾಪಾರದ ಗುರುತಿನ ಚೀಟಿ ಮತ್ತು ವ್ಯಾಪಾರ ಪ್ರಮಾಣ ಪತ್ರ ಪಡೆದುಕೊಂಡಿರುವ ಬೀದಿಬದಿ ವ್ಯಾಪಾರಿಗಳನ್ನು ಹೊರತು ಪಡಿಸಿ ಇತರರು ಅನಧಿಕೃತವಾಗಿ ಬೀದಿಬದಿ ವ್ಯಾಪಾರ ಮಾಡುತ್ತಿದ್ದಲ್ಲಿ ವ್ಯಾಪಾರವನ್ನು ಸ್ವಯಂ ಆಗಿ ತೆರವುಗೊಳಿಸಬೇಕು. ಇಲ್ಲದಿದ್ದಲ್ಲಿ ಬೀದಿಬದಿ ವ್ಯಾಪಾರಿಗಳ ಕಾಯ್ದೆ ಪ್ರಕಾರ ಅನಧಿಕೃತ ಬೀದಿಬದಿ ವ್ಯಾಪಾರಿಗಳನ್ನು ತೆರವುಗೊಳಿಸಲು ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಮೈಸೂರು: ನಗರದಲ್ಲಿ ಚಿನ್ನತಂಬಿ ಚಿನ್ನ ವಂಚನೆ ಪ್ರಕರಣ ಮಾಸುವ ಮುನ್ನವೆ ಮತ್ತೊಂದು ಗೋಲ್ಡ್ ಸ್ಕ್ಯಾಮ್ ನಡೆದಿದೆ. ಚಿನ್ನದ ಅಂಗಡಿ ಮಾಲೀಕ ಜನರಿಗೆ ಚಿನ್ನ ಕೊಡುವುದಾಗಿ ಮಾಸಿಕ ಕಂತು ಕಟ್ಟಿಸಿಕೊಂಡು ಉಂಡೆನಾಮ ಹಾಕಿರುವ ಪ್ರಕರಣ ಬೆಳಕಿಗೆ ಬಂದಿದೆ. 80 ಕ್ಕೂ ಹೆಚ್ಚು ಜನ ಚಿನ್ನದ ಆಸೆಗೆ ಮಾಸಿಕ ಕಂತು ಕಟ್ಟಿ ಈಗ ಹಣ ಕಳೆದುಕೊಂಡಿದ್ದಾರೆ. ಮೋಹನ್ ಜ್ಯುವೆಲರಿ ಹೆಸರಿನ ಚಿನ್ನದಂಗಡಿಯಲ್ಲಿ ಈ ವಂಚನೆ ನಡೆದಿದೆ. ಮೈಸೂರು ನಗರದ ವಿವೇಕಾನಂದ ವೃತ್ತದಲ್ಲಿನ ಮೋಹನ್ ಜ್ಯುವೆಲರಿ ಮಾಲೀಕ ಮೋಹನ್ ಲಾಲ್ ಕಳೆದ 2 ಆವೃತ್ತಿಯಲ್ಲಿ ಜನರಿಂದ ಹಣ ಕಟ್ಟಿಸಿಕೊಂಡು ಚಿನ್ನ ನೀಡಿ ನಂಬಿಕೆ ಸಂಪಾದನೆ ಮಾಡಿದ್ದ. ಈ ಬಾರಿ ಚಿನ್ನದಾಸೆಗೆ ಹೆಚ್ಚಿನ ಜನ ಮತ್ತಷ್ಟು ಹಣ ಹೂಡಿಕೆ ಮಾಡಿದ್ದರು. ಕಳೆದ ಒಂದು ವಾರದಿಂದ ಮೋಹನ್ ಲಾಲ್, ಜ್ಯುವೆಲರಿ ಶಾಪ್ ಬಂದ್ ಆಗಿದ್ದು, ಮನೆಯೂ ಖಾಲಿ ಮಾಡಿಕೊಂಡು ರಾತ್ರೋರಾತ್ರಿ ಊರು ಬಿಟ್ಟಿದ್ದಾನೆ. ಈತನಿಂದ ವಂಚನೆಗೆ ಒಳಗಾದ ಜನರು ಕುವೆಂಪುನಗರ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಸದ್ಯ ಜ್ಯುವೆಲರಿ ಮಾಲೀಕ…



