Author: admin

ಕುಂದಾಪುರ: ಹೆದ್ದಾರಿಯಲ್ಲಿ ನಿಂತಿದ್ದಾಗ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ 67 ವರ್ಷದ ಪಾದಚಾರಿಯೊಬ್ಬರು ಸಾವನ್ನಪ್ಪಿದ್ದ ಘಟನೆ ಸೋಮವಾರ ರಾತ್ರಿ ಕೋಟದಲ್ಲಿ ಹೆದ್ದಾರಿಯಲ್ಲಿ ನಡೆದಿದೆ. ಮೃತರನ್ನು ಗಿಳಿಯಾರು ನಿವಾಸಿ ಮಂಜು ಪೂಜಾರಿ (67) ಎಂದು ಗುರುತಿಸಲಾಗಿದೆ. ಕೋಟದ ಗೊಬ್ಬರಬೆಟ್ಟು ಬೊಬ್ಬರ್ಯಕಟ್ಟೆ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಅಪಘಾತ ಸಂಭವಿಸಿದೆ. ಮೂಲಗಳ ಪ್ರಕಾರ, ಗಿಳಿಯಾರು ದಾಟಲು ಮಂಜು ರಸ್ತೆಬದಿಯಲ್ಲಿ ಕಾಯುತ್ತಿದ್ದಾಗ, ಉಡುಪಿಯಿಂದ ಕುಂದಾಪುರ ಕಡೆಗೆ ಹೋಗುತ್ತಿದ್ದ ಕಾರು ಅಜಾಗರೂಕತೆಯಿಂದ ಮತ್ತು ಅತಿ ವೇಗದಲ್ಲಿ ಚಾಲನೆ ಮಾಡಿಕೊಂಡು ಬಂದು ಅವರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ಪರಿಣಾಮ ಮಂಜು ರಸ್ತೆಗೆ ಉರುಳಿಬಿದ್ದಿದ್ದು, ತಲೆ ಮತ್ತು ಕಾಲುಗಳಿಗೆ ತೀವ್ರ ಗಾಯಗಳಾಗಿವೆ. ಜೀವನ್ ಮಿತ್ರ ನಾಗರಾಜ್ ಪುತ್ರನ್, ಸ್ಥಳೀಯ ನಿವಾಸಿಗಳೊಂದಿಗೆ ತಕ್ಷಣ ಅವರನ್ನು ಟೋಲ್ ಆಂಬ್ಯುಲೆನ್ಸ್‌ನಲ್ಲಿ ಬ್ರಹ್ಮಾವರ ಸರ್ಕಾರಿ ಆಸ್ಪತ್ರೆಗೆ ಸಾಗಿಸಿದರು. ಆದರೆ, ಅವರನ್ನು ಪರೀಕ್ಷಿಸಿದ ವೈದ್ಯರು ಅವರು ಮೃತಪಟ್ಟಿದ್ದಾರೆ ಎಂದು ಘೋಷಿಸಿದರು. ಕ್ಯಾಂಟೀನ್‌ನಲ್ಲಿ ಕೆಲಸ ಮಾಡುತ್ತಿದ್ದ ಮಂಜು ಪೂಜಾರಿ ಅವರು ಪತ್ನಿ, ಒಬ್ಬ ಮಗ ಮತ್ತು…

Read More

2006ರಲ್ಲಿ ಕೊಲ್ಲೂರಿನಲ್ಲಿ ನಡೆದ ಶಾಂತಾ ಎಂಬ ಮಹಿಳೆಯ ಕೊಲೆ ಪ್ರಕರಣದಲ್ಲಿ ಕುಖ್ಯಾತ ಸರಣಿ ಹಂತಕ ಸೈನೈಡ್ ಮೋಹನ್ ಅಲಿಯಾಸ್ ಮೋಹನ್ ಕುಮಾರ್‌ನನ್ನು ಖುಲಾಸೆಗೊಳಿಸಿದ್ದ ವಿಚಾರಣಾ ನ್ಯಾಯಾಲಯದ ತೀರ್ಪನ್ನು ಕರ್ನಾಟಕ ಹೈಕೋರ್ಟ್ ಎತ್ತಿಹಿಡಿದಿದೆ. ಖುಲಾಸೆ ತೀರ್ಪನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯನ್ನು ನ್ಯಾಯಮೂರ್ತಿಗಳಾದ ಎಚ್.ಪಿ. ಸಂದೇಶ್ ಮತ್ತು ಬಿ. ಪ್ರಮೋದ್ ಅವರಿದ್ದ ವಿಭಾಗೀಯ ಪೀಠ ವಜಾಗೊಳಿಸಿದೆ. ಆರೋಪಿಯ ವಿರುದ್ಧದ ಸಾಂದರ್ಭಿಕ ಸಾಕ್ಷ್ಯಗಳ ಕೊಂಡಿಯನ್ನು ಸಮರ್ಪಕವಾಗಿ ಜೋಡಿಸುವಲ್ಲಿ ಪ್ರಾಸಿಕ್ಯೂಷನ್ ವಿಫಲವಾಗಿದೆ ಎಂದು ನ್ಯಾಯಪೀಠ ಹೇಳಿದೆ. ಸಾಂದರ್ಭಿಕ ಸಾಕ್ಷ್ಯಗಳ ಆಧಾರದಲ್ಲಿ ನಿಂತಿರುವ ಪ್ರಕರಣದಲ್ಲಿ ಆರೋಪಿಯ ವಿರುದ್ಧದ ಎಲ್ಲ ಕೊಂಡಿಗಳೂ ಸ್ಪಷ್ಟವಾಗಿ ಸಾಬೀತಾಗಬೇಕು. ಯಾವುದೇ ಅನುಮಾನ ಉಳಿದಿದ್ದರೆ ಅದರ ಲಾಭವನ್ನು ಆರೋಪಿಗೆ ನೀಡಬೇಕು ಎಂದು ಹೈಕೋರ್ಟ್ ತಿಳಿಸಿದೆ. ಪ್ರಾಸಿಕ್ಯೂಷನ್ ಆರೋಪದ ಪ್ರಕಾರ, ಮೋಹನ್ ಶಾಂತಾಳಿಗೆ ‘ರಾಜೇಶ್’ ಎಂಬ ನಕಲಿ ಹೆಸರಿನಲ್ಲಿ ಪರಿಚಯಿಸಿಕೊಂಡು, ಮದುವೆಯಾಗುವುದಾಗಿ ನಂಬಿಸಿ 2006ರ ನವೆಂಬರ್ 9ರಂದು ಆಕೆಯನ್ನು ಕೊಲ್ಲೂರಿಗೆ ಕರೆದೊಯ್ದಿದ್ದ. ಬಳಿಕ ಆಕೆಗೆ ಸೈನೈಡ್ ನೀಡಿದ್ದರಿಂದ ಶಾಂತಾ ಮೃತಪಟ್ಟರು ಎಂಬ ಆರೋಪ ಕೇಳಿಬಂದಿತ್ತು.…

Read More

ಉಡುಪಿ: ಅನೋಜ್ ಎನ್ನುವಾತ ನಾಲ್ಕು ರಾಜ್ಯಗಳಿಗೆ ಬೇಕಾಗಿದ್ದ ಮೋಸ್ಟ್ ವಾಂಟೆಡ್ ನಟೋರಿಯಸ್ ಕ್ರಿಮಿನಲ್. ಪ್ರಕರಣ ಒಂದರಲ್ಲಿ ಮಹಾರಾಷ್ಟ್ರ ಜೈಲಿನಲ್ಲಿದ್ದ ಅನೋಜ್ 2017ರಲ್ಲಿ ಬಿಡುಗಡೆಯಾಗಿದ್ದ. ಅದರ ಬಳಿಕ ದರೋಡೆ ಸೇರಿ ಬೇರೆ ಬೇರೆ ಪ್ರಕರಣಗಳಲ್ಲಿ ನಾಲ್ಕು ರಾಜ್ಯಗಳಿಗೆ ಈ ಮೋಸ್ಟ ವಾಂಟೆಡ್ ಕ್ರಿಮಿನಲ್ ಪೊಲೀಸರಿಗೆ ಬೇಕಾಗಿದ್ದ. ಆದರೆ ಈ ಮನೋಜ್ ಮಾತ್ರ ಪೊಲೀಸರ ಕೈಗೆ ಸಿಗುತ್ತಿರಲಿಲ್ಲ. ಇದೇ ಅಗಸ್ಟ್ 7ರಂದು ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಮದರಂಗಡಿಯಲ್ಲಿ ಉದ್ಯಮಿ ಪ್ರಕರಣದಲ್ಲಿ ಅನೋಜ್ ಇದ್ದಾನೆ ಎಂಬ ಮಾಹಿತಿ ಸಿಕ್ಕಿದೆ. ಕೂಡಲೇ ಉಡುಪಿ ಪೊಲೀಸರು ಕಾರ್ಯಚರಣೆ ನಡೆಸಿ ಅನೋಜ್ ನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

Read More

ಬೆಂಗಳೂರು: ‘ರಾಕಿಂಗ್ ಸ್ಟಾರ್’ ಯಶ್ ನಾಲ್ಕು ವರ್ಷಗಳ ಬಳಿಕ ಮತ್ತೆ ತೆರೆ ಮೇಲೆ ಕಾಣಿಸಿಕೊಂಡಿದ್ದಾರೆ. ಬ್ಲಾಕ್‌ಬಸ್ಟರ್ ‘KGF’ ಸರಣಿಯ ಬಳಿಕ ಬಿಡುಗಡೆಯಾದ ಅವರ ಮೊದಲ ಸಿನಿಮಾ ‘ಟಾಕ್ಸಿಕ್’. ಈ ಚಿತ್ರದಲ್ಲಿ ಯಶ್ ಮತ್ತೊಮ್ಮೆ ಗ್ಯಾಂಗ್‌ಸ್ಟರ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಆದರೆ ಭಾರೀ ನಿರೀಕ್ಷೆಯೊಂದಿಗೆ ತೆರೆಕಂಡಿರುವ ‘ಟಾಕ್ಸಿಕ್’ಗೆ ಆರಂಭಿಕವಾಗಿ ಸಿಗುತ್ತಿರುವ ಪ್ರತಿಕ್ರಿಯೆ ಇದೀಗ ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ. BookMyShowನಲ್ಲಿ ಚಿತ್ರದ ರೇಟಿಂಗ್ 5.6/10ರಷ್ಟಿದ್ದು, ಪ್ರೇಕ್ಷಕರ ಪ್ರತಿಕ್ರಿಯೆ ಮಿಶ್ರವಾಗಿದೆ. ಯಶ್ ಅವರ ಅಭಿನಯ ಮತ್ತು ಸ್ಟೈಲಿಶ್ ಪ್ರೆಸೆನ್ಸ್‌ಗೆ ಮೆಚ್ಚುಗೆ ವ್ಯಕ್ತವಾಗುತ್ತಿದ್ದರೂ, ಕಥೆ, ಸ್ಕ್ರೀನ್‌ಪ್ಲೇ, ಎಡಿಟಿಂಗ್ ಹಾಗೂ ಚಿತ್ರದ ದೈರ್ಘ್ಯದ ಬಗ್ಗೆ ಕೆಲ ಪ್ರೇಕ್ಷಕರು ಹಾಗೂ ವಿಮರ್ಶಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸಿನಿಮಾದ ಕಥೆ ಮತ್ತು ನಿರೂಪಣೆಯ ಬಗ್ಗೆ ಟೀಕೆಗಳು ಕೇಳಿಬರುತ್ತಿರುವುದು ಗಮನ ಸೆಳೆಯುತ್ತಿದೆ. ಕೆಲ ಆರಂಭಿಕ ಪ್ರತಿಕ್ರಿಯೆಗಳಲ್ಲಿ ಸಿನಿಮಾ ‘KGF’ ಪ್ರಭಾವದಿಂದ ಹೊರಬರಲು ಸಾಧ್ಯವಾಗಿಲ್ಲ ಎಂಬ ಅಭಿಪ್ರಾಯವೂ ವ್ಯಕ್ತವಾಗಿದೆ. ಇದರಿಂದ ಮತ್ತೊಂದು ಪ್ರಶ್ನೆ ಎದುರಾಗುತ್ತಿದೆ — ಯಶ್ ನಟನೆಯ ಜೊತೆಗೆ ನಿರ್ದೇಶನ ಮತ್ತು ಸಿನಿಮಾದ ಇತರ ವಿಭಾಗಗಳಲ್ಲಿ…

Read More

ಬೆಂಗಳೂರು: ನೇಮಕಾತಿಯಲ್ಲಿ ಹಗರಣ ಪ್ರಕರಣ ಸಂಬಂಧ ಕೆಪಿಎಸ್‌ಸಿ (KPSC) ಮೇಲೆ ಅಧಿಕಾರಿಗಳು ದಾಳಿ ಮಾಡಿದ ವೇಳೆ ಶಾಕಿಂಗ್ ವಿಚಾರವೊಂದು ಬಯಲಾಗಿದೆ. ಕೆಪಿಎಸ್‌ಸಿ ಕೇಂದ್ರ ಕಚೇರಿಯಲ್ಲಿಯೇ ಅತಿ ದೊಡ್ಡ ಅಕ್ರಮ ನಡೆದಿದ್ದು, ಒಎಂಆರ್ ಶೀಟ್‌ಗಳನ್ನು ಸ್ಕ್ಯಾನ್ ಮಾಡಿರುವ ಹಾರ್ಡ್ ಡಿಸ್ಕ್ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿದೆ. ಪರೀಕ್ಷೆ ಪ್ರಾರಂಭ ಆಗುವಾಗ ಸ್ಟ್ರಾಂಗ್ ರೂಂ ತೆರೆಯಬೇಕು. ಪ್ರಶ್ನೆ ಪತ್ರಿಕೆ ಒಎಂಆರ್ ಇಡುವಾಗ 24*7 ಸಿಸಿಟಿವಿ ಕಣ್ಗಾವಲು ಇಡಬೇಕು. ಕೆಪಿಎಸ್‌ಸಿ ಸ್ಟ್ರಾಂಗ್ ರೂಂ ಅಲ್ಲಿ ಸಿಸಿ ಟಿವಿ ಇದೆ, ಆದರೆ ಡೇಟಾ ಡಿಲೀಟ್ ಆಗಿದೆ. ಸ್ಟ್ರಾಂಗ್ ರೂಂನ ಸಿಸಿಟಿವಿ ಡೇಟಾ ಸಂಗ್ರಹ ಮಾಡಿ ಇಡಬೇಕು. ಪರೀಕ್ಷೆ ಮುಗಿದ ವರ್ಷದ ತನಕ ಡೇಟಾ ಇಟ್ಟಿರಬೇಕು. ಯಾವುದೇ ಆರೋಪ ಕೇಳಿಬರದೆ ಇದ್ದರೆ ಡೇಟಾ ಡಿಲೀಟ್ ಮಾಡಬಹುದು. ಆದರೆ 6 ತಿಂಗಳಲ್ಲಿ ಕೂಡ ಡೇಟಾ ಸಂಗ್ರಹ ಮಾಡಿ ಇಟ್ಟಿಲ್ಲ. ಇದೀಗ ಕೆಪಿಎಸ್‌ಸಿಯಲ್ಲಿ ಮತ್ತೊಂದು ಅಕ್ರಮ ಬಯಲಾಗಿದ್ದು, ಒಎಂಆರ್ ಶೀಟ್‌ಗಳ ಸ್ಕ್ಯಾನ್ ಮಾಡಿರುವ ಹಾರ್ಡ್ ಡಿಸ್ಕ್ ನಾಪತ್ತೆಯಾಗಿದೆ. ಪರೀಕ್ಷೆ ಮುಗಿದ ಮೇಲೆ ಎಲ್ಲಾ…

Read More

ಪುತ್ತೂರು : ಕೆಎಸ್ ಆರ್ ಟಿಸಿ ಬಸ್ ಬ್ರೇಕ್ ಫೇಲ್ ಆದ ಕಾರಣ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿರುವ ಮನೆಯ ಕಂಪೌಂಡ್ ಗೆ ಡಿಕ್ಕಿ ಹೊಡೆದ ಘಟನೆ ಪುತ್ತೂರಿನ ದರ್ಬೆಯಲ್ಲಿ ಬುಧವಾರ ಬೆಳಿಗ್ಗೆ ಸಂಭವಿಸಿದೆ. ಪುತ್ತೂರಿನಿಂದ ಕುಂಬ್ರದತ್ತ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಬೆಳಿಗ್ಗೆ ಸುಮಾರು 8 ಗಂಟೆಯ ವೇಳೆಗೆ ದರ್ಬೆ ವೃತ್ತವನ್ನು ದಾಟಿ ಸೇಂಟ್ ಫಿಲೋಮಿನಾ ಕಾಲೇಜು ಸಮೀಪ ತಲುಪುತ್ತಿದ್ದಂತೆ ದಿಢೀರ್ ಬ್ರೇಕ್ ವೈಫಲ್ಯಗೊಂಡಿದೆ. ಪರಿಣಾಮ ನಿಯಂತ್ರಣ ತಪ್ಪಿದ ಬಸ್, ರಸ್ತೆ ಬದಿಯಿಂದ ಸುಮಾರು 50 ಅಡಿ ದೂರ ಸಾಗಿ ಸಮೀಪದ ಮನೆಯೊಂದರ ಕಾಂಪೌಂಡ್‌ಗೆ ಡಿಕ್ಕಿ ಹೊಡೆದು ನಿಂತಿದೆ. ಅಪಘಾತದ ಸಮಯದಲ್ಲಿ ಬಸ್ಸಿನಲ್ಲಿ ಹೆಚ್ಚಿನ ಸಂಖ್ಯೆಯ ಪ್ರಯಾಣಿಕರು ಇರಲಿಲ್ಲ ಹಾಗೂ ಯಾವುದೇ ಪ್ರಯಾಣಿಕರಿಗೆ ಗಾಯಗಳಾಗಿಲ್ಲ ಎಂದು ತಿಳಿದುಬಂದಿದೆ. ಘಟನೆಯ ನಂತರ ರಸ್ತೆಗೆ ಅಡ್ಡಲಾಗಿ ನಿಂತಿದ್ದ ಬಸ್ಸನ್ನು ಕ್ರೇನ್ ಸಹಾಯದಿಂದ ತೆರವುಗೊಳಿಸಲಾಯಿತು.

Read More

ಆಂಧ್ರಪ್ರದೇಶದ ಗೋದಾವರಿ ನದಿಗೆ ಹಾರಿ ಎಂಜಿನಿಯರ್ ಕುಟುಂಬವೊಂದು ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣದಲ್ಲಿ ಈಗ ಸ್ಫೋಟಕ ಸತ್ಯವೊಂದು ಹೊರಬಂದಿದೆ. ಮೃತ ಎಂಜಿನಿಯರ್ ಬರೆದಿಟ್ಟಿರುವ ಡೆತ್ ನೋಟ್ ಇಡೀ ಪ್ರಕರಣಕ್ಕೆ ಹೊಸ ಆಯಾಮ ನೀಡಿದ್ದು ರೈಫಲ್ ಶೂಟಿಂಗ್ ಕೋಚ್ ನೀಡುತ್ತಿದ್ದ ಮತಾಂತರ ಕಿರುಕುಳವೇ ಇಡೀ ಕುಟುಂಬದ ಸಾವಿಗೆ ಕಾರಣ ಎನ್ನುವ ಅಂಶ ಬಯಲಾಗಿದೆ. ಕಳೆದ ಆಗಸ್ಟ್ 16 ಮತ್ತು 17 ರ ಮಧ್ಯರಾತ್ರಿ ಪಂಚಾಯತ್ ರಾಜ್ ಇಲಾಖೆಯ ಸಹಾಯಕ ಎಂಜಿನಿಯರ್ ತಿಲ್ಲಪುಡಿ ನೂಕರಾಜು ಅವರು ತಮ್ಮ ಪತ್ನಿ ಮೀನಾ ಮತ್ತು ಮಗಳು ಸೌಜನ್ಯ ಅವರೊಂದಿಗೆ ರಾಜಮಹೇಂದ್ರವರಂ ಸೇತುವೆಯಿಂದ ಗೋದಾವರಿ ನದಿಗೆ ಹಾರಿ ಪ್ರಾಣ ಬಿಟ್ಟಿದ್ದರು. ಈ ದುರಂತದಲ್ಲಿ ಹತ್ತು ವರ್ಷದ ಮೊಮ್ಮಗ ಮಾತ್ರ ಮೀನುಗಾರರ ಸಮಯಪ್ರಜ್ಞೆಯಿಂದ ಪ್ರಾಣಾಪಾಯದಿಂದ ಪಾರಾಗಿದ್ದು ಉಳಿದ ಮೂವರು ಸಾವನ್ನಪ್ಪಿದ್ದಾರೆ. ಡೆತ್ ನೋಟ್ ನಲ್ಲಿ ಅಡಗಿದೆ ಸಾವಿನ ರಹಸ್ಯ ಈ ಕುಟುಂಬದ ಸಾವಿನ ಬಗ್ಗೆ ತನಿಖೆ ನಡೆಸಿದ ಪೊಲೀಸರಿಗೆ ನೂಕರಾಜು ಬರೆದಿದ್ದ ಡೆತ್ ನೋಟ್ ಸಿಕ್ಕಿದ್ದು ಅದರಲ್ಲಿ ಶೇಖ್ ಸಾದಿಕ್ ಖಾನ್…

Read More

ಬೆಂಗಳೂರು: ಆನ್‌ಲೈನ್‌ನಲ್ಲಿ ಮಾರಾಟ ಮಾಡುವ ತರಕಾರಿಗಳು ತಾಜಾ ಕಾಣಬೇಕು ಅಂತ ಕೆಮಿಕಲ್‌ ಸ್ಪ್ರೇ ಮಾಡುವ ಬಗ್ಗೆ ದೂರುಗಳು ಕೇಳಿಬಂದಿದೆ. ಮುಂದಿನ ದಿನಗಳಲ್ಲಿ ಇದರ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಯು.ಟಿ ಖಾದರ್‌ ಹೇಳಿದರು. ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿದ ಅವರು, ಆನ್‌ಲೈನ್‌ನಲ್ಲಿ ಮಾರಾಟ ಮಾಡುವ ತರಕಾರಿಗಳಿಗೆ ಕೆಮಿಕಲ್‌ ಸ್ಪ್ರೇ ವಿಚಾರದಲ್ಲಿ ದೂರು ಬಂದಿರುವ ಬಗ್ಗೆ ಪ್ರತಿಕ್ರಿಯಿಸಿದರು. ತರಕಾರಿ ತಾಜಾ ಕಾಣಬೇಕು ಅಂತ ಸ್ಪ್ರೇ ಮಾಡುವ ಬಗ್ಗೆ ದೂರು ಬಂದಿದೆ, ಪರಿಶೀಲನೆ ಮಾಡ್ತಿದ್ದೇವೆ, ಮುಂದಿನ ದಿನಗಳಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ಇತ್ತೀಚೆಗೆ ಹೋಟೆಲ್‌ಗಳ ಮೇಲೆ ಅಧಿಕಾರಿಗಳ ದಾಳಿಯ ಕುರಿತು ಮಾತನಾಡಿ, ಮುಂದಿನ ವಾರ ಅಥವಾ 15 ದಿನದಲ್ಲಿ ಹೋಟೆಲ್ ಅಸೋಸಿಯೇಷನ್, ರೆಸ್ಟೋರೆಂಟ್ ಅಸೋಸಿಯೇಷನ್ ಹಾಗೂ ಇಂದಿರಾ ಕ್ಯಾಂಟಿನ್ ಗುತ್ತಿಗೆದಾರರ ಜೊತೆ ಸಭೆ ಮಾಡಲಿದ್ದೇವೆ. ಹೋಟೆಲ್‌ಗಳ ಪರಿಶೀಲನೆ ವೇಳೆ ಅನೇಕ ಲೋಪದೋಷ ಕಂಡುಬಂದಿದೆ. ಕ್ಲಬ್‌ನವರು ಹೋಟೆಲ್ ನವರು ಯಾವ ರೀತಿ ಆಹಾರ ತಯಾರಿಕೆ ಸುರಕ್ಷತೆ ಹಾಗೂ ಟ್ರೈನಿಂಗ್ ನೀಡುವ ಬಗ್ಗೆ ಯೋಜನೆ ರೂಪಿಸಿದ್ದೇವೆ.…

Read More

ಕಡಬ: ಮಹಿಳೆಯ ಮೇಲೆ ಆ್ಯಸಿಡ್ ದಾಳಿ ನಡೆಸಿದ ಗಂಭೀರ ಪ್ರಕರಣದಲ್ಲಿ ಅಪರಾಧಿಗೆ 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹3.05 ಲಕ್ಷ ದಂಡ ವಿಧಿಸಿ ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮಹತ್ವದ ತೀರ್ಪು ನೀಡಿದೆ. ಕಡಬ ಕೊಡಿಂಬಾಳ ನಿವಾಸಿ ಜಯಾನಂದ ಕೆ. (60) ಶಿಕ್ಷೆಗೆ ಗುರಿಯಾದ ಅಪರಾಧಿಯಾಗಿದ್ದಾನೆ. ಈ ಸಂಬಂಧ 2020ರಲ್ಲಿ ಕಡಬ ಪೊಲೀಸ್ ಠಾಣೆಯಲ್ಲಿ (ಅ.ಕ್ರ. 06/2020) ಭಾರತೀಯ ದಂಡ ಸಂಹಿತೆಯ (IPC) ವಿವಿಧ ಗಂಭೀರ ಕಲಂಗಳ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದ್ದ ಆಗಿನ ಪುತ್ತೂರು ಮಹಿಳಾ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಕುಸುಮಧರ ಅವರು ಆರೋಪಿಯ ವಿರುದ್ಧ ಸೂಕ್ತ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ (ಚಾರ್ಜ್‌ಶೀಟ್) ಸಲ್ಲಿಸಿದ್ದರು. ಪ್ರಕರಣದ ಸುದೀರ್ಘ ವಿಚಾರಣೆ ನಡೆಸಿದ ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಸದಾನಂದ ನಾಗಪ್ಪ ನಾಯ್ಕ್ ಅವರು, ಸಾಕ್ಷ್ಯಾಧಾರಗಳ ಆಧಾರದ ಮೇಲೆ ಅಪರಾಧ ಸಾಬೀತಾಗಿದೆ ಎಂದು ತೀರ್ಮಾನಿಸಿ ಈ ಕೆಳಗಿನಂತೆ…

Read More

ಕಡಬ: ಹಣದ ಆಮಿಷವೊಡ್ಡಿ ಸಾರ್ವಜನಿಕರನ್ನು ಸೇರಿಸಿ ನಿಷೇಧಿತ ಸ್ಕೀಮ್‌ ಬಗ್ಗೆ ಸಭೆ ನಡೆಸುತ್ತಿದ್ದ ಸ್ಥಳಕ್ಕೆ ದಾಳಿ ನಡೆಸಿದ ಕಡಬ ಪೊಲೀಸರು, ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ. ಕಡಬ ಠಾಣಾ ವ್ಯಾಪ್ತಿಯ ಅಂಬೇಡ್ಕರ್ ಭವನ ಎಂಬಲ್ಲಿ, ಹಾವೇರಿ ಮೂಲದ ಕಿಂಗ್ಸ್ ಬಜಾರ್ ಎಂಬ ಸಂಸ್ಥೆಯ ಹೆಸರಿನಲ್ಲಿ ಸಾರ್ವಜನಿಕರಿಗೆ ಶೀಘ್ರವಾಗಿ ಹಣಗಳಿಸಬಹುದಾಗಿ, ಹೆಚ್ಚಿನ ಬೆಲೆಯ ವಸ್ತುಗಳನ್ನು ಕಡಿಮೆ ದರದಲ್ಲಿ ಪಡೆಯಬಹುದು ಹಾಗೂ ಜನರನ್ನು ಯೋಜನೆಗೆ ಸೇರಿಸಿದಲ್ಲಿ ಕಮಿಷನ್ ಹಣ ಸಂಪಾದಿಸಬಹುದಾಗಿ ಭರವಸೆ ನೀಡಿ, ಅಕ್ರಮವಾಗಿ ನಿಷೇಧಿತ ಹಣಪರಿಚಲನೆ ಯೋಜನೆ ನಡೆಸಿ ಹಣವನ್ನು ಸ್ವೀಕರಿಸುವ ಯೋಜನೆ ನಡೆಸುತ್ತಿರುವುದು ಮಾಹಿತಿ ತಿಳಿದು ಬಂದಿದೆ. ಈ ಹಿನ್ನೆಲೆಯಲ್ಲಿ ಕಿಂಗ್ಸ್ ಬಜಾರ್ ಸಂಸ್ಥೆ, ಸಂಸ್ಥೆಯ ಮಾಲಿಕರು ಮತ್ತು ಯೋಜನೆಯನ್ನು‌ ಸ್ಥಳೀಯವಾಗಿ ನಡೆಸುತ್ತಿದ್ದ ಬೆಳ್ತಂಗಡಿ ಕೊಕ್ಕಡ ನಿವಾಸಿಗಳಾದ ಸುಬ್ರಹ್ಮಣ್ಯ ಶಗ್ರಿತ್ತಾಯ (50) ಗುರುಮೂರ್ತಿ (54), ಕಡಬ ಬಿಳಿನೆಲೆ ನಿವಾಸಿಗಳಾದ ಸುರೇಶ್ ಆರ್ ಎಸ್ (55), ಕಿರಣ ಕುಮಾರ್ (21) ಶ್ರೀನಾಥ್ (48), ಕಡಬ ಕೌಕ್ರಾಡಿ ನಿವಾಸಿ ಬಾಲಕೃಷ್ಣ ಪಿ ಹೆಚ್ (42), ಪುತ್ತೂರು…

Read More