Author: admin

ಬೆಳಗಾವಿ: ಸ್ಟೇಟಸ್ ಹಾಕಿದ್ದಕ್ಕೆ ಅನೈತಿಕ ಸಂಬಂಧದ ಶಂಕೆಯಿಂದ ವ್ಯಕ್ತಿಯೊಬ್ಬನನ್ನು ದಂಪತಿ ಸೇರಿ ಕುಡುಗೋಲಿನಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಜಿಲ್ಲೆಯ ಮೂಡಲಗಿ ತಾಲೂಕಿನ ಕಲ್ಲೋಳಿ ಪಟ್ಟಣದಲ್ಲಿ ನಡೆದಿದೆ. ಕಲ್ಲೋಳಿ ಗ್ರಾಮದ ಬನಪ್ಪ ಒಡೆಯರ್ ಮತ್ತು ಲಕ್ಷ್ಮೀ ಒಡೆಯರ್ ಇಬ್ಬರು ಸೇರಿಕೊಂಡು ಗುಜನಟ್ಟಿ ಗ್ರಾಮದ ರಮೇಶ್ ಬಂಟ್ರೋಳಿ ಎಂಬಾತನನ್ನು ಕೊಲೆ ಮಾಡಿದ್ದಾರೆ ಎಂದು ತಿಳಿದುಬಂದಿದೆ

Read More

ಉಡುಪಿ: 2013ರಲ್ಲಿ ನಿಗೂಢವಾಗಿ ಕಣ್ಮರೆಯಾಗಿದ್ದ ಭೂಗತ ಪಾತಕಿ ಹೇಮಂತ್ ಪೂಜಾರಿ ಸತ್ತಿದ್ದಾನೆ ಎಂದೇ ಎಲ್ಲರೂ ತಿಳಿದುಕೊಂಡಿದ್ದರು. ಆದರೀಗ ಆತನ ಹೆಸರು ಮತ್ತೆ ಸದ್ದು ಮಾಡಿದೆ. ಉಡುಪಿ ಜಿಲ್ಲೆಯ ಮುದರಂಗಡಿ ಉದ್ಯಮಿ ಡೇವಿಡ್ ಹತ್ಯೆ ಪ್ರಕರಣದ ಆರೋಪಿಗೆ ಮುಂಬೈ ಭೂಗತ ಜಗತ್ತಿಗಲ್ಲಿ ಸಂಚಲನ ಮೂಡಿಸಿ, ಸುದ್ದಿಯಾಗಿದ್ದ ಹೆಚ್​​ಪಿ ಅಲಿಯಾಸ್​​ ಹೇಮಂತ್ ಪೂಜಾರಿ ನಂಟಿರುವ ಶಂಕೆ ಪೊಲೀಸರ ತನಿಖೆ ವೇಳೆ ವ್ಯಕ್ತವಾಗಿದೆ. ಹೌದು, ಡೇವಿಡ್ ಹತ್ಯೆಯ ಬಳಿಕ ಶೂಟರ್ ರಾಜು ನೇರವಾಗಿ ವ್ಯಕ್ತಿಯೋರ್ವನಿಗೆ ಕರೆ ಮಾಡಿದ್ದು, ನಿನಗೆ ಸಲ್ಲಬೇಕಾದ ಹಣ ಸಲ್ಲುತ್ತದೆ ನೀನು ಸುರಕ್ಷಿತ ಜಾಗ ನೋಡಿ ಅಡಗಿಕೋ ಎಂದು ಆ ಕಡೆಯಿಂದ ಮಾತನಾಡಿರೋದು ಗೊತ್ತಾಗಿದೆ. ಶೂಟರ್ ಸಂಭಾಷಣೆ ನಡೆಸಿರೋದು ಹೇಮಂತ್ ಪೂಜಾರಿ ಬಳಿಯೇ ಎನ್ನಲಾಗಿದೆ. ಇದಕ್ಕೆ ಪೂರಕವೆಂಬಂತೆ ಡೇವಿಡ್ ಹತ್ಯೆಯ ಬಳಿಕ ಹೋಟೇಲ್ ಉದ್ಯಮಿಯ ಜೊತೆಗೂ ಹೆಚ್​​ಪಿಯೇ ಮಾತನಾಡಿದ್ದಾನೆ ಎಂದು ಹೇಳಲಾಗಿರುವ ಆಡಿಯೋ ಸಿಕ್ಕಿದ್ದು, ಅದರಲ್ಲಿ ಮೇ ಹೆಚ್​​ಪಿ ಬೋಲ್ ರಹಾ ಹೂಂ ಎಂದು ಮಾತನಾಡಿರೋದು ಗೊತ್ತಾಗಿದೆಯಂತೆ. ಯೂರು ಈ ಹೇಮಂತ್ ಪೂಜಾರಿ?…

Read More

ವಿಜಯಪುರ : ನಗರದ ಹೊರವಲಯದಲ್ಲಿರುವ ಐತಿಹಾಸಿಕ ಭೂತನಾಳ ಕೆರೆಯಲ್ಲಿ ಇಬ್ಬರು ಮಕ್ಕಳು ಹಾಗೂ ನಾಲ್ವರು ಮಹಿಳೆಯರು ಸೇರಿ ಒಂದೇ ಕುಟುಂಬದ ಆರು ಜನರ ಮೃತದೇಹಗಳು ತೇಲುವ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಜಿಲ್ಲಾದ್ಯಂತ ತೀವ್ರ ಆಘಾತ ಮೂಡಿಸಿದೆ. ಕೆರೆಯ ಅಂಚಿನಲ್ಲಿ ಶವಗಳು ತೇಲುತ್ತಿರುವುದನ್ನು ಕಂಡ ಸ್ಥಳೀಯರು ನೀಡಿದ ಮಾಹಿತಿ ಆಧರಿಸಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಘಟನಾ ಸ್ಥಳಕ್ಕೆ ನಗರ ಡಿವೈಎಸ್ಪಿ ನಾಗರಾಜ್, ಆದರ್ಶ ನಗರ ಪಿಎಸ್ಐ ಸೀತಾರಾಮ ಲಮಾಣಿ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ದೌಡಾಯಿಸಿ ಮೃತದೇಹಗಳನ್ನು ಕೆರೆಯಿಂದ ಹೊರತೆಗೆದಿದ್ದಾರೆ. ಮೃತರನ್ನು ಶೋಭಾ ಜಾಲಗೇರಿ (45) ಹಾಗೂ ಆಕೆಯ ಮಕ್ಕಳಾದ ವಿದ್ಯಾ (16), ಸುವರ್ಣ (14), ಗೌಡೇಶ್ (ಮೂಗ-10), ಸಾನಿಕಾ (7) ಮತ್ತು ವಿಕಾಸ (5) ಎಂದು ಗುರುತಿಸಲಾಗಿದೆ. ಈ ಕುಟುಂಬವು ಆಗಸ್ಟ್ 24ರಿಂದ ಕಾಣೆಯಾಗಿತ್ತು ಎನ್ನಲಾಗಿದೆ. ಪ್ರಾಥಮಿಕ ತನಿಖೆಯ ಪ್ರಕಾರ, ಶೋಭಾ ಅವರಿಗೆ ಗಂಡ ಮಲಕಾರಿ ಭೀಮರಾಯ ಜಾಲಗೇರಿ ಜೊತೆಗೆ ತೀವ್ರ ಕೌಟುಂಬಿಕ ಜಗಳವಾಗಿತ್ತು. ಗಂಡನೊಂದಿಗೆ ಜಗಳವಾಡಿದ ನಂತರ, ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ…

Read More

ಬೆಂಗಳೂರು: ಶಿವಗಂಗೆ ಬೆಟ್ಟದಲ್ಲಿ ನಾಪತ್ತೆಯಾಗಿರುವ ಟೆಕ್ಕಿ ಅದ್ವೈತ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರ ತನಿಖೆಯಲ್ಲಿ ಮಹತ್ವದ ತಿರುವು ಸಿಕ್ಕಿದೆ. ಎರಡು ವಾರ ಕಳೆದರೂ ಅದ್ವೈತ್ ಪತ್ತೆಯಾಗದ ಹಿನ್ನೆಲೆಯಲ್ಲಿ ಪೊಲೀಸರು ಇದೀಗ ಆತನ ದಿನಚರಿ, ಹವ್ಯಾಸ, ಸ್ನೇಹ-ಸಂಪರ್ಕ ಹಾಗೂ ಆಧ್ಯಾತ್ಮಿಕ ಆಸಕ್ತಿ ಸೇರಿದಂತೆ ಹಲವು ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ. ಅದ್ವೈತ್ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಇದುವರೆಗೆ ಯಾವುದೇ ಖಚಿತ ಕುರುಹು ಸಿಕ್ಕಿಲ್ಲ. ಅದೇ ರೀತಿ ಆತ ದೈಹಿಕವಾಗಿ ಬೆಟ್ಟದಿಂದ ಹೊರಹೋಗಿರುವ ಬಗ್ಗೆಯೂ ಸ್ಪಷ್ಟ ಮಾಹಿತಿ ಪೊಲೀಸರಿಗೆ ಲಭ್ಯವಾಗಿಲ್ಲ. ತನಿಖೆ ವೇಳೆ ಪೊಲೀಸರು ಅದ್ವೈತ್‌ನ ದಿನಚರಿ, ಹವ್ಯಾಸ ಮತ್ತು ವೈಯಕ್ತಿಕ ಆಸಕ್ತಿಗಳ ಕುರಿತು ಕೂಲಂಕುಷವಾಗಿ ಮಾಹಿತಿ ಸಂಗ್ರಹಿಸಿದ್ದಾರೆ. ಅವನ ದಿನನಿತ್ಯದ ಚಟುವಟಿಕೆಗಳು, ಯಾರೊಂದಿಗೆ ಸಂಪರ್ಕದಲ್ಲಿದ್ದ, ಯಾವ ಸ್ಥಳಗಳಿಗೆ ಭೇಟಿ ನೀಡುತ್ತಿದ್ದ ಮತ್ತು ಯಾವ ವಿಚಾರಗಳಲ್ಲಿ ಹೆಚ್ಚು ಆಸಕ್ತಿ ಹೊಂದಿದ್ದ ಎಂಬುದನ್ನು ಆಧರಿಸಿ ಪೊಲೀಸರು ತನಿಖೆಯ ದಿಕ್ಕನ್ನು ಬದಲಿಸಿದ್ದಾರೆ. ಅದ್ವೈತ್ ಆಗಾಗ ಕೆಲವು ಆಧ್ಯಾತ್ಮಿಕ ವಿಚಾರಗಳ ಬಗ್ಗೆ ಸಂಬಂಧಿತರೊಂದಿಗೆ ಚರ್ಚಿಸುತ್ತಿದ್ದ ಎನ್ನಲಾಗಿದೆ. ಅದರಲ್ಲೂ ಓಶೋ ವಿಚಾರಗಳಿಂದ ಮತ್ತು…

Read More

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ 2026ರ ಸಿದ್ಧತೆಗಳು ಭರದಿಂದ ಸಾಗುತ್ತಿದ್ದು, ದಸರಾ ಗಜಪಯಣಕ್ಕೆ ಕ್ಷಣಗಣನೆ ಆರಂಭವಾಗಿದೆ. ಹುಣಸೂರಿನ ವೀರನಹೊಸಳ್ಳಿಯಲ್ಲಿ ನಡೆಯಲಿರುವ ವಿಶೇಷ ಕಾರ್ಯಕ್ರಮದ ಮೂಲಕ ದಸರಾ ಗಜಪಡೆಗೆ ಅಧಿಕೃತ ಚಾಲನೆ ನೀಡಲಾಗುತ್ತದೆ. ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಗಜಪಯಣಕ್ಕೆ ಚಾಲನೆ ನೀಡಲಿದ್ದಾರೆ. ಬೆಳಗ್ಗೆ 10ರಿಂದ 10.28ರ ಶುಭ ತುಲಾ ಲಗ್ನದಲ್ಲಿ ದಸರಾ ಆನೆಗಳಿಗೆ ಪೂಜೆ ಸಲ್ಲಿಸಿ, ಫಲತಾಂಬೂಲ ನೀಡುವ ಮೂಲಕ ಗಜಪಡೆಗೆ ಚಾಲನೆ ನೀಡಲಾಗುತ್ತದೆ. ಮೊದಲ ಹಂತದಲ್ಲಿ ಒಟ್ಟು 9 ಆನೆಗಳು ಮೈಸೂರಿನತ್ತ ಪ್ರಯಾಣ ಬೆಳೆಸಲಿವೆ. ಧನಂಜಯ, ಮಹೇಂದ್ರ, ಏಕಲವ್ಯ, ಪ್ರಶಾಂತ, ಗೋಪಿ, ಶ್ರೀರಾಮ, ಸುಗ್ರೀವ, ಲಕ್ಷ್ಮೀ ಹಾಗೂ ಕಾವೇರಿ ಆನೆಗಳು ಮೊದಲ ಹಂತದ ಗಜಪಡೆಯಲ್ಲಿ ಇರಲಿವೆ. ಪೂಜೆ ನೆರವೇರಿದ ಬಳಿಕ ಆನೆಗಳು ಕಾಡಿನಿಂದ ನಾಡಿನತ್ತ ಹೆಜ್ಜೆ ಹಾಕಲಿವೆ. ಗಜಪಯಣ ಕಾರ್ಯಕ್ರಮದಲ್ಲಿ ಜನಪ್ರತಿನಿಧಿಗಳು, ಅರಣ್ಯ ಇಲಾಖೆ ಅಧಿಕಾರಿಗಳು ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ. ಅಭಿಮನ್ಯುವಿಗೆ ಬೀಳ್ಕೊಡುಗೆ ಈ ಬಾರಿಯ ಗಜಪಯಣ ಮತ್ತೊಂದು ವಿಶೇಷತೆಗೆ ಸಾಕ್ಷಿಯಾಗಲಿದೆ.…

Read More

ಮಂಗಳೂರು: ಸಾಂಬಾರ್‌ನಲ್ಲಿ ಜಿರಳೆ ಪತ್ತೆಯಾಗಿದೆ ಎಂಬ ಗ್ರಾಹಕರ ದೂರಿನ ಮೇರೆಗೆ ಜಿಲ್ಲಾ ಆಹಾರ ಸುರಕ್ಷತಾ ನಿಯೋಜಿತ ಅಧಿಕಾರಿ ಡಾ. ಪ್ರವೀಣ್ ಕುಮಾರ್ ಅವರು ಉಳ್ಳಾಲದ ತೊಕ್ಕೊಟ್ಟುನಲ್ಲಿರುವ ವೃಂದಾವನ್ ಹೋಟೆಲ್ ಮೇಲೆ ದಿಡೀರ್‌ ದಾಳಿ ನಡೆಸಿದ್ದಾರೆ. ಅಧಿಕಾರಿಯು ತಮ್ಮ ಚಾಲಕನೊಂದಿಗೆ, ಮಧ್ಯಾಹ್ನ 1:30 ಕ್ಕೆ ಹೋಟೆಲ್‌ನ ಶೆಟರ್‌ಗಳನ್ನು ತೆಗೆದು ಅಡುಗೆಮನೆಯನ್ನು ಕೂಲಂಕಷವಾಗಿ ಪರಿಶೀಲಿಸಿದರು. ಗ್ರಾಹಕರ ದೂರಿನ ಮೇರೆಗೆ ದಾಳಿ ನಡೆಸಲಾಗಿದೆ ಎಂದು ಮಾಧ್ಯಮಗಳೊಂದಿಗೆ ಮಾತನಾಡಿದ ಡಾ. ಪ್ರವೀಣ್ ಕುಮಾರ್, ತಪಾಸಣೆಯ ಸಮಯದಲ್ಲಿ, ಹೋಟೆಲ್‌ನಲ್ಲಿ ಆಹಾರ ಪದಾರ್ಥಗಳಿಗಾಗಿ ಪ್ರತ್ಯೇಕ ಶೇಖರಣಾ ಕೊಠಡಿ ಇಲ್ಲದಿರುವುದು ಮತ್ತು ಅಡುಗೆ ಮನೆಯಾದ್ಯಂತ ಪದಾರ್ಥಗಳು ಅಡ್ಡಲಾಗಿ ರಾಶಿ ಬಿದ್ದಿರುವುದು ಕಂಡುಬಂದಿದೆ. ಅಧಿಕಾರಿಗಳು ಸರಿಯಾಗಿ ಸಂಗ್ರಹಿಸದ ಎಲ್ಲಾ ಆಹಾರ ಪದಾರ್ಥಗಳನ್ನು ತೆರವುಗೊಳಿಸಿದರು ಮತ್ತು ಅಡುಗೆಮನೆಯನ್ನು ಸಂಪೂರ್ಣವಾಗಿ ತೊಳೆದು ಸ್ವಚ್ಛಗೊಳಿಸಲಾಗಿದೆಯೆ ಎಂದು ಪರಿಶೀಲಿಸಿದರು. ಹೋಟೆಲ್ ಮಾಲೀಕರಿಗೆ ಆಹಾರ ಪದಾರ್ಥಗಳನ್ನು ಪ್ರತ್ಯೇಕ ಪ್ರದೇಶಗಳಲ್ಲಿ ವ್ಯವಸ್ಥಿತವಾಗಿ ಜೋಡಿಸಿ ಸಂಗ್ರಹಿಸಲು ಕಟ್ಟುನಿಟ್ಟಿನ ನಿರ್ದೇಶನಗಳನ್ನು ನೀಡಲಾಯಿತು. ಹೋಟೆಲ್‌ನಲ್ಲಿ ಸ್ವಚ್ಚತೆಯನ್ನು ಕಾಪಾಡಿಕೊಳ್ಳುವಲ್ಲಿ ವಿಫಲವಾದ ಕಾರಣ, ಹೋಟೆಲ್ ಮಾಲೀಕರಿಗೆ ನೋಟಿಸ್ ನೀಡಲಾಗಿದೆ…

Read More

ಯಾವುದೇ ಬೀದಿಬದಿ ವ್ಯಾಪಾರಿಗಳನ್ನು ಕಾನೂನುಬಾಹಿರವಾಗಿ ಹಾಗೂ ಏಕಾಏಕಿ ತೆರವುಗೊಳಿಸುವಂತೆ ಸರ್ವೋಚ್ಚ ನ್ಯಾಯಾಲಯ ಆದೇಶಿಸಿಲ್ಲ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ. ಬೀದಿಬದಿ ವ್ಯಾಪಾರಿಗಳ ಹಿತರಕ್ಷಣಾ ಕಾಯ್ದೆಯ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಹಾಗೂ ಪುನರ್ವಸತಿ ಕಲ್ಪಿಸದೆ ನಡೆಸುವ ತೆರವು ಕಾರ್ಯಾಚರಣೆ ಸರಿಯಲ್ಲ ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ. ಮಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳು ದಾಖಲಿಸಿದ್ದ ಪ್ರಕರಣವನ್ನು ಪ್ರಶ್ನಿಸಿ ದಕ್ಷಿಣ ಕನ್ನಡ ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಸಂಘದ ಕಾರ್ಯಾಧ್ಯಕ್ಷ ಬಿ.ಕೆ. ಇಮ್ತಿಯಾಝ್ ಪರವಾಗಿ ಹಿರಿಯ ವಕೀಲ ಎಸ್. ಬಾಲನ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ವೇಳೆ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಪೀಠ ಈ ಅಭಿಪ್ರಾಯ ವ್ಯಕ್ತಪಡಿಸಿದೆ. ಪ್ರಕರಣದ ಹಿನ್ನೆಲೆ ಮಂಗಳೂರು ಟೌನ್ ಹಾಲ್ ಬಳಿಯ ಪಾದಚಾರಿ ಮಾರ್ಗದಲ್ಲಿದ್ದ ‘ಸಂಡೇ ಬಜಾರ್’ ಬೀದಿ ವ್ಯಾಪಾರಿಗಳ ಅಂಗಡಿಗಳನ್ನು ಸುಪ್ರೀಂ ಕೋರ್ಟ್ ಆದೇಶದ ನೆಪವೊಡ್ಡಿ ಮಹಾನಗರ ಪಾಲಿಕೆ ತೆರವುಗೊಳಿಸಲು ಮುಂದಾಗಿತ್ತು. ಈ ವೇಳೆ ಸಂಘದ ಕಾರ್ಯಾಧ್ಯಕ್ಷ ಬಿ.ಕೆ. ಇಮ್ತಿಯಾಝ್ ಹಾಗೂ ಇತರ ಪದಾಧಿಕಾರಿಗಳು ತೆರವು ಕಾರ್ಯಾಚರಣೆಯನ್ನು ಪ್ರಶ್ನಿಸಿ, ನಿಯಮಾನುಸಾರ…

Read More

ಮಂಗಳೂರು: ಹಣ್ಣು ತುಂಬಿದ ವಾಹನಕ್ಕೆ ಕಾರು ಡಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮೂವರು ಮತ್ತು ಮಿನಿ ಗೂಡ್ಸ್ ಟೆಂಪೋದಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಸೇರಿದಂತೆ ಐದು ಜನರು ಗಂಭೀರವಾಗಿ ಗಾಯಗೊಂಡ ಘಟನೆ ಕೊಲ್ನಾಡು ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳವಾರ ರಾತ್ರಿ ನಡೆದಿದೆ. ಗಾಯಗೊಂಡವರನ್ನು ಸಂಪತ್ ಶೆಟ್ಟಿ (69), ಮಮತಾ ಶೆಟ್ಟಿ, ಸುಮಿತ್ರಾ (28), ಟೆಂಪೋ ಚಾಲಕ ಬಶೀರ್ (42) ಮತ್ತು ಆಸಿಫ್ (23) ಎಂದು ಗುರುತಿಸಲಾಗಿದೆ. ಬೆಂಗಳೂರಿನಿಂದ ಉಡುಪಿ ಕಡೆಗೆ ಪ್ರಯಾಣಿಸುತ್ತಿದ್ದ ಕಾರು ಕೊಲ್ನಾಡು ತಲುಪುತ್ತಿದ್ದಂತೆ ಚಾಲಕನ ನಿಯಂತ್ರಣ ತಪ್ಪಿ, ಕಾರು ಸ್ಕಿಡ್ ಆಗಿ, ಮಿನಿ ಗೂಡ್ಸ್ ಟೆಂಪೋಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ ಎಂದು ವರದಿಯಾಗಿದೆ. ಡಿಕ್ಕಿಯ ತೀವ್ರತೆಗೆ ಕಾರು ರಸ್ತೆ ಬದಿಯ ಚರಂಡಿಗೆ ಉರುಳಿಬಿದ್ದಿದ್ದು, ಟೆಂಪೋದ ಮೇಲಿನ ಭಾಗ ಕಿತ್ತು ಹೆದ್ದಾರಿ ವಿಭಜಕದ ಮೇಲೆ ಬಿದ್ದಿದೆ. ಕಾರಿನೊಳಗೆ ಸಿಲುಕಿಕೊಂಡಿದ್ದ ಗಾಯಾಳುಗಳನ್ನು ಸ್ಥಳೀಯ ನಿವಾಸಿಗಳು ರಕ್ಷಿಸಿ ಆಂಬ್ಯುಲೆನ್ಸ್‌ನಲ್ಲಿ ಆಸ್ಪತ್ರೆಗೆ ಸಾಗಿಸಿದರು. ಅಪಘಾತದಿಂದಾಗಿ ಹೆದ್ದಾರಿ ಸಂಚಾರಕ್ಕೆ ಸ್ವಲ್ಪ ಸಮಯ ಅಡ್ಡಿಯುಂಟಾಯಿತು. ನಂತರ…

Read More

ವಿಟ್ಲ : ಮಿತ್ತೂರು ಸಮೀಪದ ಪರ್ಲೋಟು ಎಂಬಲ್ಲಿ ಎಲೆಕ್ಟ್ರಿಕ್ ಕಾರು ಹಾಗೂ ದ್ವಿಚಕ್ರ ವಾಹನದ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಕಲ್ಲೇಗ ಸಮೀಪದ ಮುರ ನಿವಾಸಿ, ರಝಾಕ್ ಸಾಹೇಬ್ ಅವರ ಪುತ್ರ ಹರ್ಷದ್ ಮೃತಪಟ್ಟ ದುರ್ದೈವಿ. ಇವರು ಪುತ್ತೂರಿನ ನೆಹರುನಗರದ ‘ರೆಕ್ಸಾ ಶಾಪ್’ನಲ್ಲಿ ಉದ್ಯೋಗಿಯಾಗಿದ್ದರು. ಆಗಸ್ಟ್ 25ರ ಮಂಗಳವಾರದಂದು ಪರ್ಲೋಟು ಬಳಿ ಎಲೆಕ್ಟ್ರಿಕ್ ಕಾರು ಮತ್ತು ಹರ್ಷದ್ ಚಲಾಯಿಸುತ್ತಿದ್ದ ದ್ವಿಚಕ್ರ ವಾಹನದ ನಡುವೆ ಭೀಕರ ಡಿಕ್ಕಿ ಸಂಭವಿಸಿತ್ತು. ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಹರ್ಷದ್ ಅವರನ್ನು ತಕ್ಷಣವೇ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ದುರಾದೃಷ್ಟವಶಾತ್ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ. ಘಟನೆ ಕುರಿತು ಸಂಬಂಧಪಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮೀಣ ಭಾಗಗಳಲ್ಲಿ ಕಳೆದ ಎರಡು ದಿನಗಳಿಂದ ನಿರಂತರ ಮಳೆ ಸುರಿಯುತ್ತಿದ್ದು, ಕಡಬ ತಾಲೂಕಿನ ಪ್ರಸಿದ್ಧ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲೂ ಮಳೆಯ ಅಬ್ಬರ ಹೆಚ್ಚಾಗಿದೆ.   ಭಾರೀ ಮಳೆಯಿಂದಾಗಿ ಆದಿ ಸುಬ್ರಹ್ಮಣ್ಯ ದೇವಸ್ಥಾನ ಜಲಾವೃತಗೊಂಡಿದ್ದು, ದೇವಸ್ಥಾನಕ್ಕೆ ತೆರಳುವ ಸಂಪರ್ಕ ಮಾರ್ಗಕ್ಕೂ ನೀರು ನುಗ್ಗಿದೆ. ದೇವಸ್ಥಾನದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನೀರು ಸಂಗ್ರಹವಾಗಿದ್ದು, ಪಕ್ಕದಲ್ಲಿರುವ ವಸತಿ ಗೃಹಗಳು ಹಾಗೂ ಅಂಗಡಿ-ಮುಂಗಟ್ಟುಗಳಿಗೂ ನೀರು ನುಗ್ಗಿರುವುದು ವರದಿಯಾಗಿದೆ. ಇದೇ ವೇಳೆ ರಸ್ತೆಗಳಿಗೂ ನೀರು ಹರಿದು ಬಂದಿದ್ದು, ಸಾರ್ವಜನಿಕರ ಸಂಚಾರಕ್ಕೆ ತೊಂದರೆ ಉಂಟಾಗಿದೆ. ನಿರಂತರ ಮಳೆಯ ಪರಿಣಾಮ ಕುಮಾರಧಾರ ನದಿ ಉಕ್ಕಿ ಹರಿಯುತ್ತಿದೆ.

Read More