Author: admin

ಮಂಗಳೂರು: ‘ಟಾಕ್ಸಿಕ್’ ಚಿತ್ರದ ಬಿಡುಗಡೆ ಹಿನ್ನೆಲೆಯಲ್ಲಿ ಮಂಗಳೂರಿಗೆ ಆಗಮಿಸಿರುವ ನಟ ಯಶ್, ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಮಂಜುನಾಥ ಸ್ವಾಮಿ ದರ್ಶನ ಪಡೆದ ಬಳಿಕ ಉಜಿರೆಯ ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ದೇವಸ್ಥಾನಕ್ಕೆ ಆಗಮಿಸಿದ ಯಶ್ ಅವರನ್ನು ದೇವಳದ ವತಿಯಿಂದ ಅದ್ದೂರಿಯಾಗಿ ಸ್ವಾಗತಿಸಲಾಯಿತು. ಬಳಿಕ ಶ್ರೀ ಸದಾಶಿವರುದ್ರ ದೇವರ ದರ್ಶನ ಪಡೆದು ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಇದೇ ವೇಳೆ ದೇವಸ್ಥಾನದ ನಾಗಬನಕ್ಕೂ ಭೇಟಿ ನೀಡಿದ ಯಶ್, ಅಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಬಳಿಕ ಕ್ಷೇತ್ರದ ಮಣ್ಣಿನ ಹರಕೆ ಬನಕ್ಕೂ ತೆರಳಿ ಪ್ರಾರ್ಥನೆ ಸಲ್ಲಿಸಿರುವುದು ಗಮನ ಸೆಳೆದಿದೆ. ಇಷ್ಟಾರ್ಥ ಈಡೇರಿದ ಬಳಿಕ ಮಣ್ಣಿನ ಮೂರ್ತಿಗಳನ್ನು ಹರಕೆಯಾಗಿ ಸಮರ್ಪಿಸುವ ವಿಶೇಷ ಆಚರಣೆ ಈ ದೇವಸ್ಥಾನದಲ್ಲಿದೆ. ಈ ಹಿನ್ನೆಲೆಯಲ್ಲಿ ಯಶ್ ಅವರು ಮಣ್ಣಿನ ಹರಕೆ ಬನಕ್ಕೆ ಭೇಟಿ ನೀಡಿರುವುದು ಭಕ್ತರು ಹಾಗೂ ಅಭಿಮಾನಿಗಳ ಗಮನ ಸೆಳೆದಿದೆ.

Read More

ಉಡುಪಿ: ನಗರದ ವೆಂಕಟರಮಣ ದೇವಾಲಯದ ಕೆರೆಯಲ್ಲಿ ಮುಳುಗಿ ವಿದ್ಯಾರ್ಥಿಯೊಬ್ಬ ಮೃತಪಟ್ಟ ಘಟನೆ ಮಂಗಳವಾರ ನಡೆದಿದೆ. ಬೆಳ್ಳಂಪಳ್ಳಿಯ ಕುಕ್ಕೆಹಳ್ಳಿ ನಿವಾಸಿ ಕೃಷ್ಣ ನಾಯಕ್ ಅವರ ಪುತ್ರ,  9ನೇ ತರಗತಿ ವಿದ್ಯಾರ್ಥಿ ಆದಿತ್ಯ(14) ಮೃತ ವಿದ್ಯಾರ್ಥಿ. ಇಂದು ವೆಂಕಟರಮಣ ದೇವಸ್ಥಾನದಲ್ಲಿ ಧಾರ್ಮಿಕ ಕಾರ್ಯಕ್ರಮ ನಡೆಯುತ್ತಿದ್ದು, ಈ ವೇಳೆ ಕೆರೆಯಲ್ಲಿ ಸ್ನಾನಕ್ಕೆ ಇಳಿದ ವೇಳೆ ವಿದ್ಯಾರ್ಥಿ ನೀರುಪಾಲಾಗಿದ್ದಾನೆ. ಘಟನೆ ತಿಳಿಯುತ್ತಿದ್ದಂತೆ ಸ್ಥಳೀಯರು ಹಾಗೂ ರಕ್ಷಣಾ ತಂಡದವರು ಸ್ಥಳಕ್ಕೆ ಧಾವಿಸಿ ಶೋಧ ಕಾರ್ಯಾಚರಣೆ ಆರಂಭಿಸಿದ್ದರು. ನೀರುಪಾಲಾದ ವಿದ್ಯಾರ್ಥಿಯ ಪತ್ತೆಗಾಗಿ ಖ್ಯಾತ ಈಜುಪಟು ಈಶ್ವರ್ ಮಲ್ಪೆ ನೇತೃತ್ವದ ತಂಡ ಕೆರೆಯಲ್ಲಿ ಶೋಧ ಕಾರ್ಯಾಚರಣೆ ನಡೆಸಿ, ವಿದ್ಯಾರ್ಥಿಯನ್ನು ಕೆರೆಯಿಂದ ಮೇಲಕ್ಕೆತ್ತಿದೆ. ಬಳಿಕ ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ, ಉಡುಪಿ ನಗರ ಠಾಣಾ ಪೊಲೀಸರು ಪರಿಶೀಲನೆ ನಡೆಸಿದ್ದಾರೆ

Read More

 ಪಾರ್ಶ್ವವಾಯುವಿನಿಂದಾಗಿ ನಡೆಯಲು ಸಾಧ್ಯವಾಗದೆ ಸುಮಾರು 10 ದಿನಗಳಿಂದ ಪುತ್ರರ ಆರೈಕೆಯಲ್ಲಿದ್ದ 80 ವರ್ಷದ ವೃದ್ಧೆಯೊಬ್ಬರು, ಆರೋಗ್ಯ ಹದಗೆಟ್ಟ ಹಿನ್ನೆಲೆಯಲ್ಲಿ ಮೃತಪಟ್ಟರೆ ಯಾವ ಮಗನ ಮನೆಗೆ ಅಪಶಕುನವಾಗಬಹುದು ಎಂಬ ಮೂಢನಂಬಿಕೆಗೆ ಬಲಿಯಾದ ಘಟನೆ ಮೃತರನ್ನು ನೂನೆ ವೆಂಕಟಮ್ಮ (80) ಎಂದು ಗುರುತಿಸಲಾಗಿದೆ. ಅವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಪುತ್ರರನ್ನು ಪೊಲೀಸರು ಬಂಧಿಸಿದ್ದಾರೆ. ವೆಂಕಟಮ್ಮ ಅವರಿಗೆ ಹಲವು ದಿನಗಳಿಂದ ಅನಾರೋಗ್ಯವಿದ್ದು, ಪಾರ್ಶ್ವವಾಯುವಿನ ನಂತರ ನಡೆಯಲು ಸಾಧ್ಯವಾಗುತ್ತಿರಲಿಲ್ಲ. ನಾಲ್ವರು ಪುತ್ರರು ಸರದಿಯಲ್ಲಿ ಅವರಿಗೆ ಆಹಾರ ಹಾಗೂ ಆರೈಕೆ ಮಾಡುತ್ತಿದ್ದರು. ಪೊಲೀಸರ ಪ್ರಕಾರ, ಏಪ್ರಿಲ್ 5ರಂದು ವೆಂಕಟಮ್ಮ ಅವರ ಆರೋಗ್ಯ ಸ್ಥಿತಿ ಹದಗೆಟ್ಟಿರುವ ಕುರಿತು ಕುಟುಂಬಸ್ಥರು ಚರ್ಚಿಸಿದ್ದರು. ಈ ವೇಳೆ ಅವರು ಒಬ್ಬ ಪುತ್ರನ ಮನೆಯಲ್ಲಿ ಮೃತಪಟ್ಟರೆ, ಆ ಮನೆಗೆ ಅಪಶಕುನವಾಗುತ್ತದೆ ಎಂಬ ಮೂಢನಂಬಿಕೆಯ ಮಾತು ಕೇಳಿಬಂದಿತ್ತು ಎನ್ನಲಾಗಿದೆ. ಈ ನಂಬಿಕೆಯಿಂದ ಪ್ರಭಾವಿತರಾದ ಹಿರಿಯ ಪುತ್ರ ನೂನೆ ಸಮ್ಮಯ್ಯ ಹಾಗೂ ಕಿರಿಯ ಪುತ್ರ ನೂನೆ ಶ್ರೀನಿವಾಸ್ ಏಪ್ರಿಲ್ 6ರಂದು ಮನೆಯಲ್ಲಿದ್ದ ಇತರರು ಹೊರಗಿದ್ದ ವೇಳೆ ತಾಯಿಯನ್ನು…

Read More

ಕುಟುಂಬದ ಮಾನಕ್ಕೆ ಧಕ್ಕೆ ತಂದಿದ್ದಾಳೆ ಎಂಬ ಆರೋಪದ ಹಿನ್ನೆಲೆಯಲ್ಲಿ, ತಂದೆಯ ಸೂಚನೆಯ ಮೇರೆಗೆ ಟೆಕ್ಕಿ ಪ್ರಿಯಕರನೇ ಯುವತಿಯನ್ನು ಕತ್ತು ಹಿಸುಕಿ ಕೊಂದಿರುವ ಘಟನೆ ಬೆಳಕಿಗೆ ಬಂದಿದೆ. ಮೃತ ಯುವತಿಯನ್ನು  ಗೋದಾವರಿಖನಿಯ ನಿವಾಸಿ 33 ವರ್ಷದ ಅಂಕತಿ ಮಾನಸಾ ಎಂದು ಗುರುತಿಸಲಾಗಿದೆ. ಆಗಸ್ಟ್ 20ರಂದು ನಿರ್ಜನ ಪ್ರದೇಶದಲ್ಲಿ ನಿಲ್ಲಿಸಲಾಗಿದ್ದ ಕಾರಿನಿಂದ ದುರ್ವಾಸನೆ ಬರುತ್ತಿರುವುದನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಪೊಲೀಸರು ಕಾರಿನ ಡಿಕ್ಕಿ ತೆರೆದಾಗ ಕೊಳೆತ ಸ್ಥಿತಿಯಲ್ಲಿದ್ದ ಮಹಿಳೆಯ ಮೃತದೇಹ ಪತ್ತೆಯಾಗಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ವಾರಂಗಲ್‌ನ ಮಹಾತ್ಮ ಗಾಂಧಿ ಮೆಮೋರಿಯಲ್ಆಸ್ಪತ್ರೆಗೆ ಕಳುಹಿಸಲಾಗಿದೆ. ಪ್ರಾಥಮಿಕ ತನಿಖೆಯ ಪ್ರಕಾರ, ಮಾನಸಾ ತನ್ನ ಬಾಲ್ಯದ ಸ್ನೇಹಿತನಾದ ವಿನೋದ್ ಜೊತೆ ಸಂಬಂಧ ಹೊಂದಿದ್ದಳು. ಆಕೆಗೆ ಈ ಹಿಂದೆ ಎರಡು ಮದುವೆಗಳಾಗಿದ್ದು, ಎರಡೂ ವಿಚ್ಛೇದನದಲ್ಲಿ ಅಂತ್ಯಗೊಂಡಿದ್ದವು. ಆಗಸ್ಟ್ 17ರಂದು ಮಾನಸಾ ಕರೀಂನಗರದಲ್ಲಿರುವ ವಿನೋದ್‌ನ ಬಾಡಿಗೆ ಕೊಠಡಿಗೆ ತೆರಳಿದ್ದಳು. ಅಲ್ಲಿ ವಿನೋದ್‌ನನ್ನು ಮದುವೆಯಾಗುವಂತೆ ಕೇಳಿಕೊಂಡಿದ್ದಾಳೆ ಎನ್ನಲಾಗಿದ್ದು, ಈ ವಿಚಾರವಾಗಿ ಇಬ್ಬರ ನಡುವೆ ವಾಗ್ವಾದ ನಡೆದಿದೆ. ಬಳಿಕ ವಿನೋದ್ ಮಾನಸಾಳ…

Read More

ಪುತ್ತೂರು: ವಾಹನದ ಚಾಲನೆಗೆ ಅಡ್ಡಿಯಾಗುವಂತೆ ಗ್ಲಾಸ್ ಗಳಿಗೆ ಸ್ಟಿಕ್ಕರ್ ಅಳವಡಿಸಿ, ವಾಹನದ ನೋಂದಣಿ ಸಂಖ್ಯೆ ಮರೆಮಾಚುವಂತೆ ಸ್ಟಿಕ್ಕರ್ ಅಳವಡಿಸುವ ಮೂಲಕ ಸಂಚಾರ ನಿಯಮಗಳನ್ನು ಉಲ್ಲಂಘಿಸಿ ಸಂಚರಿಸುತ್ತಿದ್ದ ವಾಹನಗಳಿಗೆ ಪುತ್ತೂರು ಸಂಚಾರ ಠಾಣಾ ಪೊಲೀಸರು ದಂಡ ವಿಧಿಸಿದ್ದಾರೆ. ಈ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಸಾರ್ವಜನಿಕರಿಗೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದೆ. ಸಾರ್ವಜನಿಕರು ಯಾವುದೇ ಉತ್ಸವ, ಹಬ್ಬ ಹರಿದಿನಗಳು ಹಾಗೂ ಯಾವುದೇ ಕಾರ್ಯಕ್ರಮದ ನೆಪದಲ್ಲಿ ಸಂಚಾರ ನಿಯಮಗಳನ್ನು ಉಲ್ಲಂಘಿಸಿದಲ್ಲಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Read More

ಪುತ್ತೂರು,: ಸಾಮಾಜಿಕ ಜಾಲತಾಣದಲ್ಲಿ ಸಾರ್ವಜನಿಕ ಶಾಂತಿ‌ ಸುವ್ಯವಸ್ಥೆ ಕದಡುವಂತಹ ಹಾಗೂ ಪ್ರಚೋದನಕಾರಿ ಸುಳ್ಳು ಸುದ್ದಿಯನ್ನು ಪ್ರಸಾರ ಮಾಡಿದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬರ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಾಮಾಜಿಕ ಜಾಲತಾಣ ವಾಟ್ಸಾಪ್ ನಲ್ಲಿ ಮಂಜುನಾಥ್ ಎಂಬ ಹೆಸರಿನ ಖಾತೆಯನ್ನು ಹೊಂದಿರುವ ವ್ಯಕ್ತಿಯು, ವಾಟ್ಸಾಪ್ ಮೂಲಕ ರಾಜಕೀಯ ಪಕ್ಷವೊಂದರ ಹೆಸರಿನಲ್ಲಿ, ಆ.26 ರಂದು ಪುತ್ತೂರು ಬಂದ್ ನಡೆಸಲು ಸವಾಲು ಹಾಕುವಂತಹ ಪ್ರಚೋದನಕಾರಿ ಹಾಗೂ ಸಾರ್ವಜನಿಕ ಶಾಂತಿ‌ ಸುವ್ಯವಸ್ಥೆ ಕದಡುವಂತಹ ಸುಳ್ಳು ಸುದ್ದಿಯನ್ನು ಪ್ರಸಾರ ಮಾಡಿರುವುದು ಕಂಡುಬಂದಿರುತ್ತದೆ. ಈ ಹಿನ್ನೆಲೆಯಲ್ಲಿ ವಾಟ್ಸಾಪ್ ಖಾತೆಯನ್ನು ಹೊಂದಿರುವ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಈ ಬಗ್ಗೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅಕ್ರ:103/2026, ಕಲಂ: 353(2) ಭಾರತೀಯ ನ್ಯಾಯ ಸಂಹಿತೆ (BNS), 2023 ರಂತೆ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Read More

ವಿಟ್ಲ : ವಿಟ್ಲದ ಕೋಟಿಕೆರೆ ಎಂಬಲ್ಲಿ ಈಜಲು ತೆರಳಿದ್ದ ಯುವಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟ ಕರುಣಾಜನಕ ಘಟನೆ ಬೆಳಗಿನ ಜಾವ ನಡೆದಿದೆ. ಮೃತರನ್ನು ವಿಟ್ಲ ಕಸಬಾ ಗಾಳಿಹಿತ್ಲು ನಿವಾಸಿ ವೀರಪ್ಪ ಗೌಡ ಅವರ ಪುತ್ರ, ಎಸ್‌ಸಿಡಿಸಿಸಿ ಬ್ಯಾಂಕ್ (SCDCC Bank) ಉದ್ಯೋಗಿ ಲಿತಿನ್ (32) ಎಂದು ಗುರುತಿಸಲಾಗಿದೆ. ಬೆಳಗಿನ ಜಾವ ಈಜಲು ಕೆರೆಗೆ ಇಳಿದಿದ್ದ ಲಿತಿನ್ ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿದ್ದಾರೆ. ಇದನ್ನು ಗಮನಿಸಿದ ಸ್ಥಳೀಯರು ತಕ್ಷಣವೇ ಕೆರೆಗೆ ಇಳಿದು ಅವರನ್ನು ಮೇಲಕ್ಕೆತ್ತಿ ರಕ್ಷಿಸಲು ಯತ್ನಿಸಿದ್ದಾರೆ. ಆದರೆ ಅಷ್ಟರಲ್ಲಾಗಲೇ ಲಿತಿನ್ ಮೃತಪಟ್ಟಿದ್ದರು ಎಂದು ತಿಳಿದುಬಂದಿದೆ. ಮೃತ ಲಿತಿನ್ ಅವರು ತಂದೆ, ತಾಯಿ, ಪತ್ನಿ ಹಾಗೂ ಪುಟ್ಟ ಮಗುವನ್ನು ಅಗಲಿದ್ದಾರೆ. ಯುವ ಬ್ಯಾಂಕ್ ಉದ್ಯೋಗಿಯ ಅಕಾಲಿಕ ಮರಣಕ್ಕೆ ಸ್ಥಳೀಯರು ಹಾಗೂ ಬ್ಯಾಂಕ್ ಸಿಬ್ಬಂದಿಗಳು ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ.

Read More

ಹಿಜಾಬ್ (ಶಿರವಸ್ತ್ರ) ಧರಿಸುವುದು ಇಸ್ಲಾಂ ಧರ್ಮದ ಅತ್ಯಗತ್ಯ ಅಥವಾ ಕಡ್ಡಾಯ ಧಾರ್ಮಿಕ ಆಚರಣೆ ಎಂಬುದನ್ನು ಸಾಬೀತುಪಡಿಸಲು ಸೂಕ್ತ ಆಧಾರಗಳಿಲ್ಲ ಎಂದು ಅಲಹಾಬಾದ್ ಹೈಕೋರ್ಟ್ ಹೇಳಿದೆ. ಶಾಲೆಯ ನಿಗದಿತ ಸಮವಸ್ತ್ರದೊಂದಿಗೆ ಹಿಜಾಬ್ ಧರಿಸಲು ಅನುಮತಿ ಕೋರಿ ಮುಸ್ಲಿಂ ಬಾಲಕಿಯೊಬ್ಬರು ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ನ್ಯಾಯಮೂರ್ತಿ ಜೆ.ಜೆ. ಮುನಿರ್ ಹಾಗೂ ನ್ಯಾಯಮೂರ್ತಿ ಇಂದ್ರಜೀತ್ ಶುಕ್ಲಾ ಅವರನ್ನೊಳಗೊಂಡ ಪೀಠವು ಈ ಆದೇಶವನ್ನು ಹೊರಡಿಸಿದೆ. ಪ್ರಯಾಗ್‌ರಾಜ್‌ನ ಟಾಗೋರ್ ಪಬ್ಲಿಕ್ ಶಾಲೆಯ ವಿದ್ಯಾರ್ಥಿನಿ ಸುಕೈನಾ ರಿಜ್ವಿ ಎಂಬುವರು 11 ನೇ ತರಗತಿ ಪ್ರವೇಶಾತಿ ವೇಳೆ ಶಾಲಾ ಸಮವಸ್ತ್ರದ ಜೊತೆಗೆ ಶಿರೋವಸ್ತ್ರ ಧರಿಸಲು ಅನುಮತಿ ನೀಡಬೇಕೆಂದು ತಾಯಿಯ ಮೂಲಕ ಹೈಕೋರ್ಟ್ ಮೆಟ್ಟಿಲೇರಿದ್ದರು. 6 ರಿಂದ 10 ನೇ ತರಗತಿಯವರೆಗೆ ತಮಗೆ ಹಿಜಾಬ್ ಧರಿಸಲು ಶಾಲೆಯಲ್ಲಿ ಅವಕಾಶ ನೀಡಲಾಗಿತ್ತು ಎಂದು ಅರ್ಜಿದಾರರು ಪ್ರತಿಪಾದಿಸಿದ್ದರು. ಸಮವಸ್ತ್ರ ಮತ್ತು ಶಾಲಾ ಶಿಸ್ತು: ಶಾಲೆಯು ನಿಗದಿಪಡಿಸಿದ ಸಮವಸ್ತ್ರ ನೀತಿಯು ನ್ಯಾಯಸಮ್ಮತ, ತಾರತಮ್ಯರಹಿತ ಹಾಗೂ ಶೈಕ್ಷಣಿಕ ಶಿಸ್ತು ಮತ್ತು ಸಮಾನತೆಯನ್ನು ಕಾಯ್ದುಕೊಳ್ಳುವ ಉದ್ದೇಶ ಹೊಂದಿದ್ದಾಗ, ಅದರಲ್ಲೇ…

Read More

ಮಂಗಳೂರು: ಗೋವಾದಿಂದ ಅಕ್ರಮವಾಗಿ ಮದ್ಯವನ್ನು ಸಾಗಿಸಿ ಮಂಗಳೂರಿನ ಮೂಲಕ ಕೇರಳಕ್ಕೆ ಕಳ್ಳಸಾಗಣೆ ಮಾಡುತ್ತಿದ್ದ ಜಾಲವನ್ನು ಅಬಕಾರಿ ಪೊಲೀಸರು ಭೇದಿಸಿದ್ದು, ಇಬ್ಬರನ್ನು ಬಂಧಿಸಿದ್ದಾರೆ. ಬಂಧಿತರನ್ನು ಕಾರಿನ ಮಾಲೀಕ ಹಾಗೂ ಚಾಲಕ ಬಸವರಾಜು ಬೋವಿ ಮತ್ತು ನಾಗವೇಣಿ ನಾಯಕ್ ಎಂದು ಗುರುತಿಸಲಾಗಿದೆ. ಮಾನ್ಯ ಪರವಾನಗಿ ಇಲ್ಲದೆ ಗೋವಾದಿಂದ ಅಕ್ರಮವಾಗಿ ಮದ್ಯ ಸಾಗಿಸಲಾಗುತ್ತಿದೆ ಎಂಬ ಖಚಿತ ಮಾಹಿತಿಯ ಆಧಾರದ ಮೇಲೆ ವಿಶೇಷ ಅಬಕಾರಿ ತಂಡ ಕಾರ್ಯಾಚರಣೆ ನಡೆಸಿ ಕಾರನ್ನು ತಡೆದು ಪರಿಶೀಲಿಸಿತು. ಈ ವೇಳೆ ಕಾರಿನಿಂದ 438 ಲೀಟರ್ ಗೋವಾ ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ. ಮದ್ಯ ಸಾಗಣೆಗೆ ಬಳಸಿದ್ದ ಕಾರನ್ನೂ ಪೊಲೀಸರು ಸ್ವಾಧೀನ ಪಡಿಸಿಕೊಂಡಿದ್ದಾರೆ. ಮಂಗಳೂರು ವಿಭಾಗದ ಅಬಕಾರಿ ಜಂಟಿ ಆಯುಕ್ತ ಬಾಲಕೃಷ್ಣ ಸಿ.ಎಚ್. ಅವರ ಮಾರ್ಗದರ್ಶನದಲ್ಲಿ ಹಾಗೂ ದಕ್ಷಿಣ ಕನ್ನಡ ಅಬಕಾರಿ ಉಪ ಆಯುಕ್ತೆ ಬಿಂದುಶ್ರೀ ಅವರ ನಿರ್ದೇಶನದ ಮೇರೆಗೆ ಈ ಕಾರ್ಯಾಚರಣೆ ನಡೆದಿದೆ. ವಿಶೇಷ ತಂಡದಲ್ಲಿ ಮಂಗಳೂರು ಉಪವಿಭಾಗದ ಅಬಕಾರಿ ಉಪ ಅಧೀಕ್ಷಕಿ ಗಾಯತ್ರಿ ಸಿ.ಎಚ್., ಬಂಟ್ವಾಳ ಉಪವಿಭಾಗದ ಉಪ ಅಧೀಕ್ಷಕ ಸಂತೋಷ್ ಮೋಡಗಿ,…

Read More

ಬೆಂಗಳೂರು: ಸರಗಳ್ಳತನ ಮಾಡುವಾಗ ಸಾರ್ವಜನಿಕರಿಗೆ ಸಿಕ್ಕಿಬಿದ್ದು, ಹಿಗ್ಗಾಮುಗ್ಗಾ ಗೂಸ ತಿಂದಿದ್ದ ರೌಡಿಶೀಟರ್‌ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಘಟನೆ ನೆಲಮಂಗಲದಲ್ಲಿ ನಡೆದಿದೆ. ತಾಲೂಕಿನ ದೊಡ್ಡೇರಿ ಗ್ರಾಮದ ಕೆರೆಯಲ್ಲಿ ಆತನ ಶವ ಪತ್ತೆಯಾಗಿದೆ. ಬ್ಯಾಟರಿ ಜಯಂತ್ ಸಾವನ್ನಪ್ಪಿದ ರೌಡಿಶೀಟರ್‌. ನೆಲಮಂಗಲದ ಕುಲುವನಹಳ್ಳಿ ಗೇಟ್ ಬಳಿ ಬ್ಯಾಟರಿ ಜಯಂತ್ ಹಾಗೂ ಯತೀಶ್ ಸೇರಿ ವೃದ್ಧೆಯೊಬ್ಬಳ ಮಾಂಗಲ್ಯ ಸರ ಕಳ್ಳತನಕ್ಕೆ ಯತ್ನಿಸಿದ್ದರು. ಈ ವೇಳೆ ಸಿಕ್ಕಿಬಿದ್ದು, ಸಾರ್ವಜನಿಕರ ಬಳಿ ಪೆಟ್ಟು ತಿಂದು ಪ್ರಜ್ಞೆ ತಪ್ಪಿದ್ದರು. ಇಬ್ಬರನ್ನೂ 108 ಆಂಬುಲೆನ್ಸ್‌ನಲ್ಲಿ ಆಸ್ಪತ್ರೆಗೆ ಸಾಗಿಸಲಾಗಿತ್ತು. ಈ ವೇಳೆ ಆಂಬುಲೆನ್ಸ್‌ನಿಂದ ಇಬ್ಬರೂ ಪರಾರಿಯಾಗಿದ್ದರು. ಈಗ ಜಯಂತ್‌ ಶವ ದೊಡ್ಡೇರಿ ಗ್ರಾಮದ ಕೆರೆಯಲ್ಲಿ ಪತ್ತೆಯಾಗಿದೆ. ಮರಣೋತ್ತರ ಪರೀಕ್ಷೆಗೆ ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಮತ್ತೋರ್ವ ಆರೋಪಿ ಯತೀಶ್‌ಗಾಗಿ ಪೊಲೀಸರು ಹುಡುಕಾಡುತ್ತಿದ್ದಾರೆ. ಇನ್ನೂ ಜಯಂತ್‌ ವಿರುದ್ಧ 22 ಪ್ರಕರಣಗಳಿದ್ದವು ಎಂದು ತಿಳಿದುಬಂದಿದೆ.

Read More