Author: admin

ಚಾಮರಾಜನಗರ: ಹನೂರು ಕಾಡಿನಲ್ಲಿ ಮೂವರು ಬೇಟೆಗಾರರ ಎನ್‌ಕೌಂಟರ್ ಪ್ರಕರಣದ ನಂತರ ಮರಿ ವೀರಪ್ಪನ್ ಅಲಿಯಾಸ್ ಗೋವಿಂದನ ಕರಾಳ ಮುಖ ಬಯಲಾಗುತ್ತಿದೆ. ವೀರಪ್ಪನ್‌ನ ಕಟ್ಟಾ ಅಭಿಮಾನಿಯಾಗಿರುವ ಈತ ಸಾಮಾಜಿಕ ಜಾಲತಾಣಗಳಲ್ಲಿ ತನ್ನನ್ನು ತಾನು ವೀರಪ್ಪನ್ ರೀತಿ ಬಿಂಬಿಸಿಕೊಳ್ಳುತ್ತಿದ್ದು, ಎನ್‌ಕೌಂಟರ್ ನಂತರ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ, ಗೋವಿಂದ ಕುಡಿದು ಬಂದು ಅರಣ್ಯ ಕಚೇರಿಗೆ ನುಗ್ಗುವಂತೆ ಜನರನ್ನು ಪ್ರಚೋದಿಸಿದ್ದ ವಿಡಿಯೋ ಕೂಡ ವೈರಲ್​​ ಆಗಿತ್ತು. ಈತನ ವಿರುದ್ಧ ಈಗಾಗಲೇ ಒಂಬತ್ತು ಪ್ರಕರಣಗಳಿದ್ದು, ಹುಲಿ ಬೇಟೆ, ಜಿಂಕೆ ಮಾಂಸ ಸಾಗಾಣಿಕೆ ಸೇರಿದಂತೆ ಹಲವು ಆರೋಪಗಳಿವೆ. ಇಷ್ಟಲ್ಲದೆ, ಮಹಿಳೆಯೊಬ್ಬರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಬಟ್ಟೆ ಹರಿದು ಥಳಿಸಿದ್ದಾನೆ ಎಂಬ ದೂರು ರಾಮಾಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದು, ಎಫ್‌ಐಆರ್ ಕೂಡ ಆಗಿದೆ. ಹೀಗಿದ್ದರೂ ಈತನನ್ನು ಇದುವರೆಗೂ ಬಂಧಿಸದ ಪೊಲೀಸರ ನಡೆ ಬಗ್ಗೆಯೇ ಈಗ ಅನುಮಾನಗಳು ವ್ಯಕ್ತವಾಗಿವೆ.

Read More

ಮಂಗಳೂರು: ಬಹುನಿರೀಕ್ಷಿತ ‘ಟಾಕ್ಸಿಕ್’ ಚಿತ್ರದ ಬಿಡುಗಡೆ ಹಿನ್ನೆಲೆಯಲ್ಲಿ ನಟ ಯಶ್ ಮಂಗಳೂರಿಗೆ ಆಗಮಿಸಿದ್ದಾರೆ. ಚೆನ್ನೈನಿಂದ ವಿಶೇಷ ವಿಮಾನದ ಮೂಲಕ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಯಶ್ ಅವರಿಗೆ ಅಭಿಮಾನಿಗಳು ಅದ್ದೂರಿ ಸ್ವಾಗತ ನೀಡಿದ್ದಾರೆ. ಚಿತ್ರ ಬಿಡುಗಡೆಗೂ ಮುನ್ನ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸುವ ಉದ್ದೇಶದಿಂದ ಯಶ್ ಮಂಗಳೂರಿಗೆ ಬಂದಿದ್ದಾರೆ ಎನ್ನಲಾಗಿದೆ. ನಾಳೆ ‘ಟಾಕ್ಸಿಕ್’ ಸಿನಿಮಾ ಬಿಡುಗಡೆಯಾಗಲಿರುವ ಹಿನ್ನೆಲೆಯಲ್ಲಿ, ಧರ್ಮಸ್ಥಳಕ್ಕೆ ತೆರಳಿ ದೇವರ ದರ್ಶನ ಪಡೆದು ಪೂಜೆ ಸಲ್ಲಿಸಲಿದ್ದಾರೆ. ಪ್ರತಿ ಚಿತ್ರದ ಬಿಡುಗಡೆಗೂ ಮುನ್ನ ಧರ್ಮಸ್ಥಳ ಕ್ಷೇತ್ರಕ್ಕೆ ಭೇಟಿ ನೀಡುವ ಪದ್ಧತಿಯನ್ನು ಯಶ್ ಮುಂದುವರಿಸಿಕೊಂಡು ಬರುತ್ತಿದ್ದಾರೆ. ಈ ಬಾರಿಯೂ ಅದೇ ಸಂಪ್ರದಾಯವನ್ನು ಪಾಲಿಸುತ್ತಿರುವುದು ಅಭಿಮಾನಿಗಳ ಗಮನ ಸೆಳೆದಿದೆ. ಮಂಗಳೂರು ವಿಮಾನ ನಿಲ್ದಾಣದಲ್ಲಿ ಯಶ್ ಆಗಮಿಸಿದ ಸುದ್ದಿ ತಿಳಿಯುತ್ತಿದ್ದಂತೆ ಹೆಚ್ಚಿನ ಸಂಖ್ಯೆಯಲ್ಲಿ ಅಭಿಮಾನಿಗಳು  ನಟನನ್ನು ಕಣ್ತುಂಬಿಕೊಳ್ಳಲು ಉತ್ಸಾಹ ವ್ಯಕ್ತಪಡಿಸಿದರು.

Read More

ಇರಾನ್‌ : ಅಮೆರಿಕ  ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಕುಟುಂಬಕ್ಕೆ ಇರಾನ್‌ನಿಂದ ಅಸಾಧಾರಣ ಹಾಗೂ ಕಳವಳಕಾರಿ ಜೀವ ಬೆದರಿಕೆ ಎದುರಾಗಿದೆ. ಇರಾನ್ ಸರ್ಕಾರಿ ಟೆಲಿವಿಷನ್‌ನ ಚಾನೆಲ್ 3 ರಲ್ಲಿ ಪ್ರಸಾರವಾದ ಕಾರ್ಯಕ್ರಮವೊಂದರಲ್ಲಿ ಡೊನಾಲ್ಡ್ ಟ್ರಂಪ್ ಅವರ 20 ವರ್ಷದ ಪುತ್ರ ಬ್ಯಾರನ್ ಟ್ರಂಪ್ ಅವರನ್ನು ತಲುಪುವ ಮಾರ್ಗಗಳನ್ನು ಸವಿವರವಾಗಿ ಪ್ರಸ್ತುತಪಡಿಸಲಾಗಿದ್ದು, ಅವರ ಹತ್ಯೆಗೆ ಸುಮಾರು 95 ಕೋಟಿ ರೂಪಾಯಿಗೂ ಹೆಚ್ಚು (10 ಮಿಲಿಯನ್ ಡಾಲರ್) ಬಹುಮಾನವನ್ನು ಘೋಷಿಸಲಾಗಿದೆ. ಇರಾನ್‌ನ ರೆವಲ್ಯೂಷನರಿ ಗಾರ್ಡ್ ಕ್ರಾಪ್ಸ್  ಸಂಯೋಜಿತ ಮಾಧ್ಯಮ ಸಂಸ್ಥೆಗಳು ಬಿಡುಗಡೆ ಮಾಡಿರುವ ಈ ವೀಡಿಯೊಗೆ “ಬ್ಯಾರನ್ ಟ್ರಂಪ್‌ನನ್ನು ಎಲ್ಲಿ ಕೊಲ್ಲಬೇಕು” ಎಂಬ ಶೀರ್ಷಿಕೆ ನೀಡಲಾಗಿದೆ. ಪ್ರಸಾರವಾದ ಈ ಕ್ಲಿಪ್‌ನಲ್ಲಿ ಬ್ಯಾರನ್ ಅವರ ದಿನನಿತ್ಯದ ಚಲನವಲನಗಳನ್ನು ವಿವರವಾಗಿ ವಿವರಿಸಿ ಚಿತ್ರಿಸಲಾಗಿದೆ. ಬ್ಯಾರನ್ ಅವರ ಪ್ರತಿಯೊಂದು ನಡೆಯನ್ನು ಸಂಪೂರ್ಣವಾಗಿ ಕಣ್ಣಿಟ್ಟು ನಿಗಾವಹಿಸಲಾಗುತ್ತಿದೆ ಎಂದು ವೀಡಿಯೊದಲ್ಲಿ ಪ್ರತಿಪಾದಿಸಲಾಗಿದೆ. ಅಷ್ಟೇ ಅಲ್ಲದೆ, ಅಮೆರಿಕದ ಅತ್ಯಂತ ಭದ್ರತಾ ಸಂಸ್ಥೆಯಾದ ಸಿಪಾಯಿಗಳು ಅಥವಾ ಸಿಕ್ರೆಟ್ ಸರ್ವೀಸ್ ಭದ್ರತಾ ವಲಯವನ್ನು ಭೇದಿಸಿ, ಯುವತಿಯೊಬ್ಬಳು…

Read More

ಪುತ್ತೂರು : ದರ್ಬೆಯಲ್ಲಿ ಝೆರಾಕ್ಸ್ ಅಂಗಡಿ ಮಾಲಕಿ ಮೇಲೆ ನಡೆದ ಹಲ್ಲೆ ಹಾಗೂ ಈ ಪ್ರಕರಣದಲ್ಲಿ ಪೊಲೀಸ್ ಇಲಾಖೆಯ ವೈಫಲ್ಯವನ್ನು ಖಂಡಿಸಿ ಇಂದು ಪುತ್ತೂರು ನಗರದಲ್ಲಿ ಸ್ವಯಂಪ್ರೇರಿತ ಬಂದ್‌ಗೆ ಕರೆ ನೀಡಲಾಗಿದೆ. ಹಿಂದೂ ಜಾಗರಣ ವೇದಿಕೆ ನೀಡಿದ ಈ ಸ್ವಯಂಪ್ರೇರಿತ ಬಂದ್ ಕರೆಗೆ ಬಿಜೆಪಿ, ವಿವಿಧ ಹಿಂದೂಪರ ಸಂಘಟನೆಗಳು ಹಾಗೂ ಬಿಎಂಎಸ್ ಆಟೋ ಯೂನಿಯನ್ ಬೆಂಬಲ ವ್ಯಕ್ತಪಡಿಸಿವೆ. ಪುತ್ತೂರು ನಗರದ ಹಲವು ವರ್ತಕರು ಅಂಗಡಿಗಳನ್ನು ಮುಚ್ಚಿ ಬೆಂಬಲ ಸೂಚಿಸಿದ್ದು, ಬೆರಳೆಣಿಕೆಯಷ್ಟೇ ಅಂಗಡಿಗಳು ತೆರೆದಿವೆ. ರಸ್ತೆಯಲ್ಲಿ ಆಟೋ ರಿಕ್ಷಾಗಳ ಸಂಚಾರ ಗಣನೀಯವಾಗಿ ಕಡಿಮೆಯಾಗಿದೆ. ಇತ್ತ ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ಮುಸ್ಲಿಂ ಮಾಲಕತ್ವದ ಹೆಚ್ಚಿನ ಅಂಗಡಿ-ಮುಂಗಟ್ಟುಗಳೂ ಸಹ ಬಂದ್ ಆಗಿವೆ. ಬಂದ್ ಹಾಗೂ ಈದ್ ಮಿಲಾದ್ ಒಂದೇ ದಿನ ಬಂದಿರುವುದರಿಂದ ನಗರದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮತ್ತು ಪರಿಸ್ಥಿತಿಯನ್ನು ನಿಯಂತ್ರಣದಲ್ಲಿಡಲು ಭಾರಿ ಭದ್ರತೆಯನ್ನು ಕೈಗೊಳ್ಳಲಾಗಿದೆ. ಪೊಲೀಸ್ ಅಧಿಕಾರಿಗಳು: 1 ಹೆಚ್ಚುವರಿ ಎಸ್‌ಪಿ (Addl SP), 1 ಡಿವೈಎಸ್‌ಪಿ (DySP), 8 ಪಿಎಸ್‌ಐ…

Read More

ಉಡುಪಿ : ಮದರಂಗಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಹಾಗೂ ಗುತ್ತಿಗೆದಾರ ಡೇವಿಡ್ ಡಿಸೋಜ ಅವರ ಶೂಟ್‌ಔಟ್ ಪ್ರಕರಣ ತನಿಖೆಯಲ್ಲಿ ಭಾರಿ ತಿರುವು ಪಡೆದುಕೊಂಡಿದೆ. ಅದಾನಿ ಯುಪಿಸಿಎಲ್ (UPCL) ಕಂಪೆನಿಯ ಕೋಟ್ಯಂತರ ರೂಪಾಯಿ ಮೌಲ್ಯದ ಗುತ್ತಿಗೆ ಕೈತಪ್ಪಿದ ಆಕ್ರೋಶಕ್ಕೆ ಉಚ್ಚಿಲದ ಗುತ್ತಿಗೆದಾರ ಕಿಶೋರ್ ರಾಮ ಪೂಜಾರಿ ತನ್ನ ಸಹೋದರ, ಭೂಗತ ಪಾತಕಿ ಹೇಮಂತ್ ಪೂಜಾರಿ ಮೂಲಕ ಈ ಕೃತ್ಯ ಎಸಗಿರುವುದು ತನಿಖೆಯಲ್ಲಿ ತಿಳಿದು ಬಂದಿದೆ ಎಂದು ಎಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಹರಿರಾಂ ಶಂಕರ್ ತಿಳಿಸಿದ್ದಾರೆ. ಉಚ್ಚಿಲ ನಿವಾಸಿ ಕಿಶೋರ್ ರಾಮ ಪೂಜಾರಿ ಈ ಹಿಂದೆ ಯುಪಿಸಿಎಲ್ ನಲ್ಲಿ ಗುತ್ತಿಗೆದಾರರಾಗಿ ಕೆಲಸ ಮಾಡಿಕೊಂಡಿದ್ದನು. ಆರು ತಿಂಗಳ ಹಿಂದೆ ಎರ್ಮಾಳಿನಲ್ಲಿ ಯುಪಿಸಿಎಲ್ ಕಂಪೆನಿಯ ಪೈಪ್‌ಲೈನ್ ಮತ್ತು ಕಾಂಕ್ರಿಟ್ ರಸ್ತೆ ಕಾಮಗಾರಿ ಯೋಜನೆಯ ಗುತ್ತಿಗೆಯನ್ನು ತನಗೆ ನೀಡುವಂತೆ ಕಿಶೋರ್ ಪೂಜಾರಿ ಕೇಳಿ ಕೊಂಡಿದ್ದನು. ಅದಕ್ಕೆ ಕಂಪೆನಿಯವರು ಕೂಡ ಒಪ್ಪದೆ ಡೇವಿಡ್ ಡಿಸೋಜಗೆ ನೀಡಿದ್ದರು. ಈ ಕೋಟ್ಯಂತರ ರೂ. ಮೊತ್ತದ ಯೋಜನೆ ಕೈತಪ್ಪಿ ಹೋದ…

Read More

ಮಂಗಳೂರು: ಮುಂಬರುವ ಹಬ್ಬಗಳ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯಲಿರುವ ಸಾರ್ವಜನಿಕ ಕಾರ್ಯಕ್ರಮಗಳು, ಧಾರ್ಮಿಕ ಆಚರಣೆಗಳು ಹಾಗೂ ಮೆರವಣಿಗೆಗಳಿಗೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ಹಲವು ಕಠಿಣ ಷರತ್ತುಗಳನ್ನು ವಿಧಿಸಿದ್ದಾರೆ. ಸಾರ್ವಜನಿಕ ಶಾಂತಿ, ಸುರಕ್ಷತೆ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಈ ಮಾರ್ಗಸೂಚಿಗಳನ್ನು ಪ್ರಕಟಿಸಲಾಗಿದ್ದು, ಕಾರ್ಯಕ್ರಮ ಆಯೋಜಕರು ಕಡ್ಡಾಯವಾಗಿ ಪಾಲಿಸುವಂತೆ ಸೂಚಿಸಲಾಗಿದೆ. ಪೊಲೀಸ್ ಹಾಗೂ ಸಂಬಂಧಿತ ಇಲಾಖೆಗಳ ಲಿಖಿತ ಅನುಮತಿ ಇಲ್ಲದೆ ಯಾವುದೇ ಕಾರ್ಯಕ್ರಮ ಅಥವಾ ಮೆರವಣಿಗೆ ನಡೆಸುವಂತಿಲ್ಲ. ರಾತ್ರಿ 11.30ರ ನಂತರ ಮೆರವಣಿಗೆ ನಡೆಸಲು ಅವಕಾಶ ಇರುವುದಿಲ್ಲ. ಮುಖ್ಯವಾಗಿ, ಕಾರ್ಯಕ್ರಮಗಳಲ್ಲಿ ಡಿಜೆ ಹಾಗೂ ಜೋರಾದ ಸ್ಪೀಕರ್‌ಗಳ ಬಳಕೆಯನ್ನು ಸಂಪೂರ್ಣ ನಿಷೇಧಿಸಲಾಗಿದೆ. ಧ್ವನಿವರ್ಧಕ ಬಳಸಲು ಪೂರ್ವಾನುಮತಿ ಕಡ್ಡಾಯವಾಗಿದ್ದು, ರಾತ್ರಿ 10 ಗಂಟೆಗೆ ಅವುಗಳನ್ನು ಸ್ಥಗಿತಗೊಳಿಸಬೇಕು. ವಾಣಿಜ್ಯ ಪ್ರದೇಶದಲ್ಲಿ 65 ಡೆಸಿಬಲ್, ವಾಸಸ್ಥಳದಲ್ಲಿ 55 ಡೆಸಿಬಲ್ ಹಾಗೂ ನಿಶ್ಯಬ್ದ ವಲಯದಲ್ಲಿ 50 ಡೆಸಿಬಲ್‌ಗಿಂತ ಹೆಚ್ಚಿನ ಶಬ್ದ ಉಂಟುಮಾಡುವಂತಿಲ್ಲ ಎಂದು ಪೊಲೀಸರು ಸೂಚಿಸಿದ್ದಾರೆ

Read More

ಉಡುಪಿಯ ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಮೀನು ಕಾರ್ಮಿಕನೊಬ್ಬನನ್ನು ಕೊಲೆಗೈದ ಘಟನೆ ಇಂದು ಮುಂಜಾನೆ ನಡೆದಿದೆ. ಮೃತ ಯುವಕನನ್ನು ಮೀನು ಕಾರ್ಮಿಕ ಅಭಿಷೇಕ್ ಎಂದು ಗುರುತಿಸಲಾಗಿದೆ. ಬೋಟ್‌ನಲ್ಲಿ ಕ್ಷುಲ್ಲಕ ಕಾರಣಕ್ಕೆ ಉಂಟಾದ ಗಲಾಟೆ ವಿಕೋಪಕ್ಕೆ ತಿರುಗಿ, ಸಹ ಮೀನು ಕಾರ್ಮಿಕನೊಬ್ಬ ಅಭಿಷೇಕ್‌ನನ್ನು ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿ ಚಿಕ್ಕಮಗಳೂರು ಮೂಲದ, ಮಲ್ಪೆಯಲ್ಲಿ ಮೀನು ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ ಯುವಕನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ವಿಚಾರಣೆಯ ದೃಷ್ಟಿಯಿಂದ ವಶಕ್ಕೆ ಪಡೆದಿರುವ ಯುವಕನ ಹೆಸರನ್ನು ಪೊಲೀಸರು ಬಹಿರಂಗಪಡಿಸಿಲ್ಲ. ಘಟನಾ ಸ್ಥಳಕ್ಕೆ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಹಾಗೂ ಮಲ್ಪೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊಲೆಗೆ ನಿಖರ ಕಾರಣ ಹಾಗೂ ಘಟನೆಯ ಸಂಪೂರ್ಣ ವಿವರಗಳನ್ನು ಪೊಲೀಸರು ತನಿಖೆ ನಡೆಸುತ್ತಿದ್ದು, ವಿಚಾರಣೆ ಮುಂದುವರಿದಿದೆ.

Read More

ಚಾಮರಾಜನಗರ: ಹನೂರು ಅರಣ್ಯ ಪ್ರದೇಶದಲ್ಲಿ ಅರಣ್ಯ ಸಿಬ್ಬಂದಿಯಿಂದ ನಡೆದ ಮೂವರ ಎನ್‌ಕೌಂಟರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆ ನಡೆದಿದ್ದು, ಮೃತರ ಮರಣೋತ್ತರ ಪರೀಕ್ಷೆ ಮತ್ತು ವಿಧಿವಿಜ್ಞಾನ ಪ್ರಯೋಗಾಲಯದ ವರದಿ ಲಭ್ಯವಾಗಿದೆ. ಆ ಮೂಲಕ ಗುಂಡಿನ ಚಕಮಕಿಯ ಹಿಂದಿನ ನೈಜ ಸ್ಥಿತಿಗತಿ ಸೇರಿದಂತೆ ಹಲವು ಕುತೂಹಲಕಾರಿ ಸಂಗತಿಗಳು ಬಯಲಾಗಿದೆ. ಎದೆ, ಹೊಟ್ಟೆ, ತೊಡೆ ಭಾಗಕ್ಕೆ ಗುಂಡೇಟು ಮೈಸೂರಿನ ಕೆಆರ್​ ಆಸ್ಪತ್ರೆಯಲ್ಲಿ ಮೃತ ಅಂತೋನಿಸ್ವಾಮಿ, ಪೀಟರ್ ಮತ್ತು ಕುಮಾರ್​​ ದೇಹಗಳ ಮರಣೋತ್ತರ ಪರೀಕ್ಷೆ ನಡೆಸಲಾಗಿತ್ತು. ವರದಿಯಲ್ಲಿ ಮೃತರ ದೇಹದ ಯಾವ ಭಾಗಗಳಿಗೆ ಗುಂಡುಗಳು ತಗುಲಿವೆ ಹಾಗೂ ಎಷ್ಟು ಇಂಚು ಆಳಕ್ಕೆ ನುಗ್ಗಿವೆ ಎಂಬ ಸೂಕ್ಷ್ಮ ವಿವರಗಳನ್ನು ಸ್ಪಷ್ಟವಾಗಿ ದಾಖಲಿಸಲಾಗಿದೆ. ಮೂವರ ಎದೆ, ಹೊಟ್ಟೆ ಹಾಗೂ ತೊಡೆಯ ಭಾಗಕ್ಕೆ ಗುಂಡೇಟುಗಳು ಬಿದ್ದಿರುವುದು ಪರೀಕ್ಷೆಯಲ್ಲಿ ದೃಢಪಟ್ಟಿದೆ. ಒಳ ಉಡುಪಿನಲ್ಲಿ ಗನ್ ಪೌಡರ್‌ನ ಪ್ರೈಮರ್ ಪತ್ತೆ ಇನ್ನೊಂದೆಡೆ, ಎಫ್‌ಎಸ್‌ಎಲ್ ವರದಿಯಲ್ಲಿ ಮತ್ತಷ್ಟು ಗಂಭೀರ ಅಂಶಗಳು ಹೊರಬಂದಿವೆ. ಮೃತ ಅಂತೋನಿಸ್ವಾಮಿ ಮತ್ತು ಪೀಟರ್ ಅವರ ಒಳ ಉಡುಪುಗಳಲ್ಲಿ ಗನ್ ಪೌಡರ್‌ನ…

Read More

ಚಿಕ್ಕಮಗಳೂರು: ಜಿಲ್ಲೆಯಲ್ಲಿ ತೀವ್ರ ಸಂಚಲನ ಮೂಡಿಸಿದ್ದ ಟಿಪ್ಪು ಸುಲ್ತಾನ್ ಕಟೌಟ್‌ಗೆ ಪಾಕಿಸ್ತಾನ್ ಪರ ಹಾಡು ಹಾಕಿ ಸಾಮಾಜಿಕ ಇನ್​ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಪೊಲೀಸರು ಪ್ರಮುಖ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಚಿಕ್ಕಮಗಳೂರಿನ ಟಿಪ್ಪು ನಗರದ ನಿವಾಸಿ, 23 ವರ್ಷದ ಅಫ್ರಿದ್ ಬಂಧಿತ ಪ್ರಮುಖ ಆರೋಪಿಯಾಗಿದ್ದಾನೆ. 14 ದಿನಗಳ ನ್ಯಾಯಾಂಗ ಬಂಧನ ಬಂಧಿತ ಆರೋಪಿ ಅಫ್ರಿದ್ ಖಾಸಗಿ ಕಾರು ಶೋರೂಮ್ ಒಂದರಲ್ಲಿ ಕೆಲಸ ಮಾಡುತ್ತಿದ್ದ. ಈತ ‘ಚಿಕ್ಕಮಗಳೂರು ಪವರ್ ಟಿಪ್ಪು ಬಾಯ್ಸ್’ ಎಂಬ ಇನ್‌ಸ್ಟಾಗ್ರಾಮ್ ಖಾತೆಯನ್ನು ನಿರ್ವಹಿಸುತ್ತಿದ್ದು, ಅದೇ ಖಾತೆಯ ಮೂಲಕ ವಿವಾದಾತ್ಮಕ ವಿಡಿಯೋವನ್ನು ಹಂಚಿಕೊಂಡಿದ್ದ ಎಂದು ತಿಳಿದುಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಅಫ್ರಿದ್ ಹಾಗೂ ಮತ್ತೊಬ್ಬ ಆರೋಪಿ ರೋಷನ್‌ನನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದು, ನ್ಯಾಯಾಲಯ ಇಬ್ಬರಿಗೂ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ. ಚಿಕ್ಕಮಗಳೂರು ನಗರ ಠಾಣೆ ಪೊಲೀಸರು ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡು ತನಿಖೆ ಚುರುಕುಗೊಳಿಸಿದ್ದಾರೆ. ಕೇವಲ ವಿಡಿಯೋ ಕ್ರಿಯೇಟ್ ಮಾಡಿದವರು ಮಾತ್ರವಲ್ಲದೆ, ಈ ದೇಶದ್ರೋಹಿ ವಿಡಿಯೋವನ್ನು ಶೇರ್…

Read More

ಬ್ರಹ್ಮಾವರ: ಪ್ರತಿಭಾವಂತ ಸಾಕ್ಸೋಫೋನ್ ವಾದಕಿ ಯುವತಿಯೋರ್ವಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ನಡೆದಿದೆ. ಮೃತರನ್ನು ನೀಲಾವರ ಗ್ರಾಮದ ನಮೃತಾ ದೇವಾಡಿಗ (22) ಎಂದು ಗುರುತಿಸಲಾಗಿದೆ. ಬೆಂಗಳೂರಿನಲ್ಲಿ ಉನ್ನತ ವ್ಯಾಸಂಗ ಮಾಡುತ್ತಿದ್ದ ನಮೃತ ದೇವಾಡಿಗ ವೈಯಕ್ತಿಕ ಕಾರಣಕ್ಕೆ ಮನನೊಂದು ವಿಷ ಸೇವಿಸಿದ್ದರು. ನಂತರ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲದ ಕೆ.ಎಂ.ಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು ಚಿಕಿತ್ಸೆ ಫಲಕಾರಿಯಾಗದೆ ಯುವತಿ ಸಾವನ್ನಪ್ಪಿದ್ದಾರೆ. ಈ ಬಗ್ಗೆ ಬೆಂಗಳೂರು ಮತ್ತು ಬ್ರಹ್ಮಾವರ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರ ತನಿಖೆಯ ಬಳಿಕವಷ್ಟೇ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬರಲಿದೆ.

Read More