Author: admin
ಎನ್‌ಸಿಪಿ (ಶರದ್‌ಚಂದ್ರ ಪವಾರ್ ಬಣ) ಶಾಸಕ ರೋಹಿತ್ ಪವಾರ್ ಅವರ ಆಪ್ತ ಸಹಾಯಕ (PA) ಅಜಿತ್ ದಶಾವತಾರೆ ಅವರ 12 ವರ್ಷದ ಅಪ್ರಾಪ್ತ ಮಗಳು ಶವವಾಗಿ ಪತ್ತೆಯಾಗಿದ್ದಾಳೆ. ಘಟನೆಯಿಂದ ಇಡೀ ಪ್ರದೇಶದಲ್ಲಿ ಆತಂಕ ಮತ್ತು ಆಘಾತದ ವಾತಾವರಣ ನಿರ್ಮಾಣವಾಗಿದ್ದು, ಪೊಲೀಸರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಎಲ್ಲಾ ಆಯಾಮಗಳಿಂದ ತನಿಖೆ ಆರಂಭಿಸಿದ್ದಾರೆ. ತಾಯಿಯೊಂದಿಗೆ ಮುನಿಸು: ಶನಿವಾರ ಮನೆಯಲ್ಲಿ ಸಣ್ಣ ವಿಚಾರಕ್ಕೆ ತಾಯಿಯೊಂದಿಗೆ ವಾಗ್ವಾದ ನಡೆಸಿದ್ದ ಬಾಲಕಿ, ಕೋಪಗೊಂಡು ಮನೆಯಿಂದ ಹೊರಟು ಹೋಗಿದ್ದಳು. ಬಾಲಕಿ ಸಂಜೆಯಾದರೂ ಮನೆಗೆ ವಾಪಸ್ ಬಾರದಿದ್ದಾಗ ಕುಟುಂಬಸ್ಥರು ಸುತ್ತಮುತ್ತ ಹುಡುಕಾಟ ನಡೆಸಿ, ನಂತರ ಸ್ಥಳೀಯ ಪೊಲೀಸ್ ಠಾಣೆಗೆ ತೆರಳಿ ನಾಪತ್ತೆ ದೂರು ದಾಖಲಿಸಿದ್ದರು. ಭಾನುವಾರ ಬೆಳಗ್ಗೆ ಬಾರಾಮತಿ ತೆಹ್ಸಿಲ್‌ನ ರುಯಿ ಗ್ರಾಮದ ಸಾಯಿನಗರ ಪ್ರದೇಶದಲ್ಲಿರುವ ಆಕೆಯ ಮನೆಯ ಸಮೀಪದಲ್ಲೇ ಬಾಲಕಿಯ ಶವ ಪತ್ತೆಯಾಗಿದೆ. ಸ್ಥಳಕ್ಕೆ ಧಾವಿಸಿದ ಪೊಲೀಸರು ಪಂಚನಾಮೆ ನಡೆಸಿ, ಸಾವಿನ ನಿಖರ ಕಾರಣ ತಿಳಿಯಲು ಶವವನ್ನು ಬಾರಾಮತಿ ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.…
ನಟಿ ರೈಮಾ ಇಸ್ಲಾಂ ಶೀಮು ಅವರ ಕೊಲೆ ಪ್ರಕರಣ ಹಲವು ತಿರುವುಗಳನ್ನು ಪಡೆದುಕೊಂಡಿತ್ತು. 2022ರ ಜನವರಿ 16ರಂದು ಬೆಳಗ್ಗೆ ಶೂಟಿಂಗ್‌ಗೆ ತೆರಳುವುದಾಗಿ ಮನೆಯಿಂದ ಹೊರಟಿದ್ದ ನಟಿ ನಾಪತ್ತೆಯಾಗಿದ್ದರು. ಸುಮಾರು 24 ಗಂಟೆಗಳ ಬಳಿಕ ಬಾಂಗ್ಲಾದೇಶದ ಢಾಕಾ ಹೊರವಲಯದ ಹಜ್ರತ್‌ಪುರ ಸೇತುವೆ ಸಮೀಪದ ಪೊದೆಗಳಲ್ಲಿ ಚೀಲವೊಂದರೊಳಗೆ ಅವರ ಮೃತದೇಹ ಎರಡು ತುಂಡುಗಳಾಗಿ ಪತ್ತೆಯಾಗಿತ್ತು. ಇದೀಗ ಈ ರೋಚಕ ಕೊಲೆ ರಹಸ್ಯ ಬಯಲಾಗಿದ್ದು ಹಳೇ ವೈಮನಸ್ಯ ಕಾರಣ ಎಂದು ಹೇಳಲಾಗಿದೆ. ನಾಪತ್ತೆ ಪ್ರಕರಣವಾಗಿ ಆರಂಭವಾದ ತನಿಖೆ ಬಳಿಕ ಕೊಲೆ ಪ್ರಕರಣವಾಗಿ ಬದಲಾಗಿದ್ದು, ತನಿಖೆಯ ವೇಳೆ ನಟಿಯ ಪತಿ ಶಖಾವತ್ ಅಲಿ ನೋಬೆಲ್ ಸೇರಿದಂತೆ ಕೆಲವರನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ರೈಮಾ ಇಸ್ಲಾಂ ಶೀಮು ಅವರು ರಂಗಭೂಮಿಯ ಮೂಲಕ ಕಲಾ ಕ್ಷೇತ್ರಕ್ಕೆ ಪ್ರವೇಶಿಸಿದ್ದರು. ಬಳಿಕ ರಾಷ್ಟ್ರೀಯ ಪ್ರಶಸ್ತಿ ವಿಜೇತ ನಿರ್ದೇಶಕ ಕಾಜಿ ಹಯಾತ್ ಅವರ ಗಮನ ಸೆಳೆದ ಅವರು, 1998ರಲ್ಲಿ ಬಿಡುಗಡೆಯಾದ ‘ಬರ್ತಮಾನ್’ ಚಿತ್ರದ ಮೂಲಕ ಸಿನಿಮಾರಂಗಕ್ಕೆ ಕಾಲಿಟ್ಟಿದ್ದರು. ರಂಗಭೂಮಿಯಲ್ಲೂ ಸಕ್ರಿಯರಾಗಿದ್ದ ಅವರು ಸುಮಾರು 50…
ಕಾಸರಗೋಡು: ಕುಂಬಳೆಯ 64 ವರ್ಷದ ವ್ಯಾಪಾರಿಯೊಬ್ಬರನ್ನು ಹನಿಟ್ರ್ಯಾಪ್ ಜಾಲಕ್ಕೆ ಸಿಲುಕಿಸಿ, ಖಾಸಗಿ ವಿಡಿಯೋಗಳನ್ನು ವೈರಲ್ ಮಾಡುವುದಾಗಿ ಬೆದರಿಸಿ ಹಣ ವಸೂಲಿ ಮಾಡಿದ ಆರೋಪದಲ್ಲಿ ದಂಪತಿ ಸೇರಿದಂತೆ ಮೂವರನ್ನು ಕುಂಬಳೆ ಪೊಲೀಸರು ಬಂಧಿಸಿದ್ದಾರೆ. ಆ.16ರಂದು ₹5,000 ಸಾಲ ಮರಳಿಸುವುದಾಗಿ ನಂಬಿಸಿ ವ್ಯಾಪಾರಿಯನ್ನು ಮನೆಗೆ ಕರೆಸಿಕೊಂಡ ಮಹಿಳೆ, ಬಳಿಕ ಆತನನ್ನು ಕೊಠಡಿಗೆ ಕರೆದೊಯ್ದಿದ್ದಾಳೆ ಎನ್ನಲಾಗಿದೆ. ಅಲ್ಲಿ ಅಡಗಿದ್ದ ಆರೋಪಿಗಳು ಫೋಟೋ ಮತ್ತು ವಿಡಿಯೋ ಚಿತ್ರೀಕರಿಸಿ ಹಲ್ಲೆ ನಡೆಸಿದ ಬಳಿಕ, ಹಣ, ಮೊಬೈಲ್ ಹಾಗೂ ಎಟಿಎಂ ಕಾರ್ಡ್‌ಗಳನ್ನು ಕಸಿದುಕೊಂಡಿದ್ದಾರೆ. ನಂತರ ಎಟಿಎಂ ಪಿನ್ ಪಡೆದು ಖಾತೆಯಿಂದ ₹7,200 ಹಣವನ್ನೂ ಡ್ರಾ ಮಾಡಿರುವ ಆರೋಪವಿದೆ. ಮತ್ತಷ್ಟು ಹಣಕ್ಕಾಗಿ ಒತ್ತಡ ಹೇರಿದ ಹಿನ್ನೆಲೆಯಲ್ಲಿ ಮಾನಸಿಕವಾಗಿ ನೊಂದ ವ್ಯಾಪಾರಿ ಪೊಲೀಸರಿಗೆ ದೂರು ನೀಡಿದ್ದು, ರಿಜ್ವಾನ, ಆಕೆಯ ಪತಿ ಹಸನ್ ಆಸಿಫ್ ಹಾಗೂ ಸಂಬಂಧಿ ಸಿರಾಜ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಉಡುಪಿ: ಮನೆಯ ಶೆಡ್‌ನಲ್ಲಿ ನಿಲ್ಲಿಸಲಾಗಿದ್ದ ಎಲೆಕ್ಟಿಕ್ ರಿಕ್ಷಾ ಏಕಾಏಕಿ ಹೊತ್ತಿ ಉರಿದು, ಪಕ್ಕದಲ್ಲಿದ್ದ ಕಾರು ಹಾಗೂ ಸ್ಕೂಟರ್‌ಗೂ ಬೆಂಕಿ ವ್ಯಾಪಿಸಿದ ಘಟನೆ ಭಾನುವಾರ ಬೆಳಗ್ಗೆ ಪೆರಂಪಳ್ಳಿ ಸಮೀಪ ನಡೆದಿದೆ. ಸಮಯಪ್ರಜ್ಞೆ ಮೆರೆದ ಇಬ್ಬರು ಯುವಕರು ತಮ್ಮ ಜೀವದ ಹಂಗನ್ನೂ ತೊರೆದು ಬೆಂಕಿಯನ್ನು ನಿಯಂತ್ರಿಸುವ ಮೂಲಕ ಸಂಭವಿಸಬಹುದಾಗಿದ್ದ ದೊಡ್ಡ ಅನಾಹುತವನ್ನು ತಪ್ಪಿಸಿದ್ದಾರೆ. ಭಾನುವಾರ ಬೆಳಗ್ಗೆ ಸುಮಾರು 11 ಗಂಟೆಯ ವೇಳೆಗೆ ಪೆರಂಪಳ್ಳಿ ಬಳಿಯ ಮನೆಯೊಂದರ ಶೆಡ್‌ನಲ್ಲಿ ನಿಲ್ಲಿಸಲಾಗಿದ್ದ ಎಲೆಕ್ಟಿಕ್ ರಿಕ್ಷಾದಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಕ್ಷಣಾರ್ಧದಲ್ಲೇ ಬೆಂಕಿ ತೀವ್ರಗೊಂಡಿದ್ದು, ಪಕ್ಕದಲ್ಲೇ ನಿಲ್ಲಿಸಲಾಗಿದ್ದ MG ಕಾರು ಹಾಗೂ ಸ್ಕೂಟರ್‌ಗೂ ಬೆಂಕಿ ವ್ಯಾಪಿಸತೊಡಗಿದೆ. ಈ ವೇಳೆ ತೀವ್ರ ಬೆನ್ನುನೋವಿನಿಂದ ಬಳಲುತ್ತಿದ್ದ ಮನೆಯ ಯಜಮಾನರು ಪರಿಸ್ಥಿತಿಯನ್ನು ಕಂಡು ಆತಂಕಗೊಂಡು ಸಹಾಯಕ್ಕಾಗಿ ಬೊಬ್ಬಿಡಲಾರಂಭಿಸಿದ್ದಾರೆ. ಮನೆಯಲ್ಲಿದ್ದವರ ಸುರಕ್ಷತೆಯ ಜೊತೆಗೆ, ವಾಹನಗಳಿಂದ ಬೆಂಕಿ ಮತ್ತಷ್ಟು ವ್ಯಾಪಿಸುವ ಸಾಧ್ಯತೆಯೂ ಎದುರಾಗಿತ್ತು. ಅದೇ ಸಂದರ್ಭದಲ್ಲಿ ಸಮೀಪದ ತಮ್ಮ ಕಟ್ಟಡ ನಿರ್ಮಾಣ ಸೈಟ್‌ನ ಕೆಲಸ ಮುಗಿಸಿ ಹಿಂದಿರುಗುತ್ತಿದ್ದ ಇಂಜಿನಿಯರ್ ಮನೋಜ್ ಅವರು ಬೆಂಕಿ ಹೊತ್ತಿಕೊಂಡಿರುವುದನ್ನು ಗಮನಿಸಿ…
ಕಾರ್ಕಳ: ಸಾರ್ವಜನಿಕರಿಂದ ಸಲ್ಲಿಕೆಯಾಗಿರುವ ಅರ್ಜಿಗಳ ಸ್ಥಿತಿ ಹಾಗೂ ಬಾಕಿ ಉಳಿದಿರುವ ಕಡತಗಳ ವಿಲೇವಾರಿ ಕುರಿತು ಪರಿಶೀಲನೆ ನಡೆಸಲು ಲೋಕಾಯುಕ್ತ ಅಧಿಕಾರಿಗಳು ಸೋಮವಾರ ಕಾರ್ಕಳ ಪುರಸಭೆ (ಟಿಎಂಸಿ) ಕಚೇರಿಗೆ ದಿಢೀರ್ ಭೇಟಿ ನೀಡಿದರು. ಮಂಗಳೂರು ಲೋಕಾಯುಕ್ತ ಇನ್‌ಸ್ಪೆಕ್ಟರ್ ಚಂದ್ರಶೇಖರ್ ನೇತೃತ್ವದ ಎಂಟು ಮಂದಿಯ ತಂಡವು ಪುರಸಭೆ ಕಚೇರಿಯಲ್ಲಿ ಪರಿಶೀಲನೆ ನಡೆಸಿತು. ಬಾಕಿ ಇರುವ ಕಡತಗಳು, ವ್ಯಾಪಾರ ಪರವಾನಗಿ, ಖಾತೆ ತಿದ್ದುಪಡಿ, ಖಾತೆ ವರ್ಗಾವಣೆ ಹಾಗೂ ಜನನ ಮತ್ತು ಮರಣ ಪ್ರಮಾಣಪತ್ರಗಳಿಗಾಗಿ ಸಲ್ಲಿಕೆಯಾಗಿರುವ ಅರ್ಜಿಗಳ ವಿಲೇವಾರಿಗೆ ಸಂಬಂಧಿಸಿದ ವಿವಿಧ ದಾಖಲೆಗಳು ಮತ್ತು ಕಡತಗಳನ್ನು ಅಧಿಕಾರಿಗಳು ಪರಿಶೀಲಿಸಿದರು. ಅರ್ಜಿಗಳ ವಿಲೇವಾರಿ ಪ್ರಕ್ರಿಯೆ, ಅನುಸರಿಸಲಾಗುತ್ತಿರುವ ಕ್ರಮಗಳು ಹಾಗೂ ಅರ್ಜಿಗಳು ವಿಳಂಬವಾಗಲು ಕಾರಣಗಳ ಕುರಿತು ಟಿಎಂಸಿ ಸಿಬ್ಬಂದಿಯಿಂದ ಅಧಿಕಾರಿಗಳು ವಿವರವಾದ ಮಾಹಿತಿ ಪಡೆದುಕೊಂಡರು. ದಿಢೀರ್ ಪರಿಶೀಲನೆಯ ವೇಳೆ ಕಂಡುಬಂದ ಅಂಶಗಳ ಆಧಾರದ ಮೇಲೆ ಲೋಕಾಯುಕ್ತ ತಂಡವು ಸಮಗ್ರ ವರದಿಯನ್ನು ಸಿದ್ಧಪಡಿಸಿ ಸಲ್ಲಿಸುವ ಸಾಧ್ಯತೆ ಇದೆ.
ಪುತ್ತೂರು: ನಗರದಲ್ಲಿ ಇತ್ತೀಚೆಗೆ ನಡೆದ ಹಲ್ಲೆ ಪ್ರಕರಣಗಳನ್ನು ಖಂಡಿಸಿ ಹಿಂದೂ ಜಾಗರಣ ವೇದಿಕೆ ಆಗಸ್ಟ್ 25ರಂದು ಪುತ್ತೂರು ನಗರದಲ್ಲಿ ಸ್ವಯಂಪ್ರೇರಿತ ಬಂದ್‌ಗೆ ಕರೆ ನೀಡಿದೆ. ದರ್ಬೆಯಲ್ಲಿ ವರ್ತಕರೊಬ್ಬರ ಮೇಲೆ ನಡೆದ ದಾಳಿ, ಪೊಲೀಸರ ಸಮ್ಮುಖದಲ್ಲೇ ಮಹಿಳೆಯೊಬ್ಬರ ಮೇಲೆ ನಡೆದ ಹಲ್ಲೆ ಹಾಗೂ ಪೊಲೀಸ್ ಜೀಪಿನೊಳಗೆ ಮಾರಣಾಂತಿಕ ಹಲ್ಲೆ ನಡೆದ ಆರೋಪಗಳ ಹಿನ್ನೆಲೆಯಲ್ಲಿ ಈ ಕರೆ ನೀಡಿದೆ ಎಂದು ವರದಿಯಾಗಿದೆ . ಈ ಘಟನೆಗಳ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆಯ ವೈಫಲ್ಯವನ್ನು ಖಂಡಿಸಿರುವ ವೇದಿಕೆ, ನಗರದಲ್ಲಿ ವರ್ತಕರ ಹಿತರಕ್ಷಣೆ, ಸಮಾಜದಲ್ಲಿ ಶಾಂತಿ ಹಾಗೂ ಸೌಹಾರ್ದತೆ ಕಾಪಾಡುವ ಉದ್ದೇಶದಿಂದ ಪುತ್ತೂರಿನ ಎಲ್ಲ ಸಮಾಜ ಬಾಂಧವರು ಹಾಗೂ ನಾಗರಿಕರು ಆ.25ರಂದು ಸ್ವಯಂಪ್ರೇರಿತ ಬಂದ್‌ಗೆ ಸಹಕರಿಸುವಂತೆ ಹಿಂದೂ ಜಾಗರಣ ವೇದಿಕೆ ಮನವಿ ಮಾಡಿದೆ ಎಂದು ವರದಿಯಾಗಿದೆ.
ಮಂಗಳೂರು: ನದಿಗೆ ಬಿದ್ದ ಫುಟ್‌ಬಾಲ್ ಹೆಕ್ಕಿ ಕೊಡಲು ಹೋಗಿ ಈಜು ಬಲ್ಲ 25 ವರ್ಷದ ಯುವಕನೊಬ್ಬ ನೀರಿನಲ್ಲಿ ಮುಳುಗಿ ಭಾನುವಾರ ಸಂಜೆ ದಾರುಣವಾಗಿ ಸಾವಿಗೀಡಾದ ಘಟನೆ ನಗರದ ಕಸಬಾ ಬೆಂಗ್ರೆಯ ಫೆರಿ ಪಾಯಿಂಟ್ ಬಳಿ ನಡೆದಿದೆ. ಕಸಬಾ ಬೆಂಗ್ರೆ ನಿವಾಸಿಗಳಾದ ಮುಹಮ್ಮದ್ ಸಾಲಿ ಹಾಗೂ ಜಹರಾ ದಂಪತಿಯ ಪುತ್ರ ಮಹಮ್ಮದ್ ಸನಾವುಲ್ಲ (25) ಮೃತಪಟ್ಟ ದುರ್ದೈವಿ. ಇಂಟೀರಿಯರ್ ಡಿಸೈನಿಂಗ್ ಹಾಗೂ ವೆಲ್ಡಿಂಗ್ ವೃತ್ತಿ ಮಾಡುತ್ತಿದ್ದ ಸನಾವುಲ್ಲಾ, ತಂದೆ, ತಾಯಿ ಹಾಗೂ ಇಬ್ಬರು ಸಹೋದರಿಯರನ್ನು ಅಗಲಿದ್ದಾರೆ. ಮೃತರ ತಂದೆ ಮಂಗಳೂರು ಧಕ್ಕೆಯಲ್ಲಿ ಕೂಲಿ ಕಾರ್ಮಿಕರಾಗಿ ದುಡಿಯುತ್ತಿದ್ದಾರೆ. ಭಾನುವಾರ ಸಂಜೆ ಫೆರಿ ಪಾಯಿಂಟ್ ಬಳಿ ಮಕ್ಕಳು ಫುಟ್‌ಬಾಲ್ ಆಡುತ್ತಿದ್ದಾಗ ಚೆಂಡು ಆಕಸ್ಮಿಕವಾಗಿ ನದಿಗೆ ಬಿದ್ದಿದೆ. ಅದನ್ನು ತೆಗೆದುಕೊಡಲು ಸನಾವುಲ್ಲಾ ನದಿಗೆ ಇಳಿದಿದ್ದಾರೆ. ಸನಾವುಲ್ಲಾಗೆ ಈಜು ಬರುತ್ತಿತ್ತಾದರೂ ನದಿಯ ಸೆಳೆತ ಅಥವಾ ಆಳದ ವ್ಯತ್ಯಾಸದಿಂದಾಗಿ ಅವರಿಗೆ ಜೀವ ಉಳಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಸ್ಥಳೀಯರು ತಕ್ಷಣವೇ ಹುಡುಕಾಟ ನಡೆಸಿ ಸನಾವುಲ್ಲಾನನ್ನು ಮೇಲೆತ್ತಿ ಪ್ರಥಮ ಚಿಕಿತ್ಸೆ ನೀಡಿ ಆಸ್ಪತ್ರೆಗೆ ಕರೆದೊಯ್ದರಾದರೂ,…
ಬೆಳಗಾವಿ : ಮೊರಾರ್ಜಿ ದೇಸಾಯಿ ವಸತಿ ನಿಲಯದಲ್ಲಿ 9ನೇ ತರಗತಿ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪದ ರೀತಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಸುಟ್ಟಟ್ಟಿ ಗ್ರಾಮದಲ್ಲಿ ನಡೆದಿದೆ. ರಾಯಬಾಗ ತಾಲೂಕಿನ ನಿಡಗುಂದಿ ಗ್ರಾಮದ ಗೌತಮ ಹಣಮಂತ ಭಜಂತ್ರಿ (15) ಸಾವನ್ನಪ್ಪಿದ ದುರದೃಷ್ಟಕರ ವಿದ್ಯಾರ್ಥಿ. ಹಾಸ್ಟೆಲ್ ವಾರ್ಡನ್ ವಿರುದ್ಧ ಹಲ್ಲೆ ಆರೋಪ: ಕಳೆದ ಗುರುವಾರಷ್ಟೇ ತನ್ನ ಅಕ್ಕನ ಮದುವೆಯಲ್ಲಿ ಪಾಲ್ಗೊಂಡು ವಸತಿ ನಿಲಯಕ್ಕೆ ಹಿಂತಿರುಗಿದ್ದ ಗೌತಮ, ಸಂಜೆ 7 ಗಂಟೆ ಸುಮಾರಿಗೆ ಮೃತಪಟ್ಟಿದ್ದಾನೆ. ಹಾಸ್ಟೆಲ್ ವಾರ್ಡನ್ ಮಾಡಿದ ತೀವ್ರ ಹಲ್ಲೆಯಿಂದಾಗಿಯೇ ತಮ್ಮ ಮಗ ಮೃತಪಟ್ಟಿದ್ದಾನೆ ಎಂದು ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದಾರೆ. ಮೃತ ಗೌತಮನ ಬೆನ್ನು ಹಾಗೂ ಹಿಂಭಾಗದ ಮೇಲೆ ತೀವ್ರ ಸ್ವರೂಪದ ಬಾಸುಂಡೆ ಗಾಯಗಳು ಪತ್ತೆಯಾಗಿರುವುದು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ. ಪಾಲಕರ ಆಕ್ರಂದನ, ಪೊಲೀಸ್ ತನಿಖೆ: ವಿದ್ಯಾರ್ಥಿ ವಸತಿ ನಿಲಯದಲ್ಲಿ ನೇಣು ಬಿಗಿದುಕೊಂಡಿದ್ದಾನೆ ಎಂದು ಕುಟುಂಬಸ್ಥರಿಗೆ ತಿಳಿಸಿದ್ದ ಸಿಬ್ಬಂದಿ, ಪೋಷಕರಿಗೆ ಮುಂಚಿತವಾಗಿ ಮಾಹಿತಿ ನೀಡದೇ ಮೃತದೇಹವನ್ನು ರಾಯಬಾಗ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದ್ದರು.…
ಬೆಂಗಳೂರು: ಜನರ ಮಧ್ಯೆಯೇ ನಡು ರಸ್ತೆಯಲ್ಲಿ ವ್ಯಕ್ತಿಯೊಬ್ಬನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಮಡಿವಾಳ ಮುಖ್ಯರಸ್ತೆಯಲ್ಲಿ ನಡೆದಿದೆ.ಟ್ರಾಫಿಕ್ ಜಾಮ್‌ನಿಂದಾಗಿ ಬೈಕ್‌ನಲ್ಲಿ ತೆರಳುತ್ತಿದ್ದ ಮೆಡಿಕಲ್ ಸ್ಟೋರ್‌ನ ಮಾಲೀಕ ಸೊಹೇಲ್ ಮೇಲೆ ಎರಗಿದ ದುಷ್ಕರ್ಮಿಗಳ ಗುಂಪು ತಲವಾರ್ ಮತ್ತು ಮಾರಕಾಸ್ತ್ರಗಳಿಂದ ಮನಬಂದಂತೆ ಹೊಡೆದಿದ್ದಾರೆ. ನೂರಾರು ಸಾರ್ವಜನಿಕರ ಮಧ್ಯೆಯೇ ರಾಜಾರೋಷವಾಗಿ ದುಷ್ಕರ್ಮಿಗಳು ಸಿನಿಮೀಯ ರೀತಿಯಲ್ಲಿ ಸೊಹೇಲ್‌ನನ್ನು ಕೊಲೆ ಮಾಡಿರುವುದರಿಂದ ಸ್ಥಳೀಯರು ಬೆಚ್ಚಿ ಬಿದ್ದಿದ್ದಾರೆ. ಕೆಲವರು ಇದು ಬೆಂಗಳೂರಾ? ಎಂದು ಆತಂಕ ವ್ಯಕ್ತಪಡಿಸಿದ್ದಾರೆ. ಮಂಗಮನ ಪಾಳ್ಯದ ನಿವಾಸಿಯಾದ ಸೊಹೇಲ್ ಮೆಡಿಕಲ್ ಶಾಪ್ ಹೊಂದಿದ್ದು, ಕಳೆದ ರಾತ್ರಿ 9.30ಕ್ಕೆ ಅಂಗಡಿ ಬಂದ್ ಮಾಡಿ ಮಡಿವಾಳದಿಂದ ಕೋರಮಂಗಲದ ಕಡೆಗೆ ತಮ ಬೈಕ್‌ನಲ್ಲಿ ತೆರಳುವಾಗ ಈ ಘಟನೆ ನಡೆದಿದೆ. ಟ್ರಾಫಿಕ್ ಜಾಮ್‌ನಿಂದಾಗಿ ಬೈಕ್‌ನ್ನು ನಿಲ್ಲಿಸಿದಾಗ ಸುಮಾರು ಎರಡು ಬೈಕ್‌ನಲ್ಲಿ ಅವರನ್ನು ಹಿಂಬಾಲಿಸಿದ ಸುಮಾರು 4 ದುಷ್ಕರ್ಮಿಗಳ ತಂಡ ಏಕಾಏಕಿ ಸಾರ್ವಜನಿಕರ ಮುಂದೆಯೇ ದಾಳಿ ಮಾಡಿದ್ದಾರೆ. ಸೊಹೇಲ್ ವಿರುದ್ಧ ಯಾವುದೇ ಕ್ರಿಮಿನಲ್ ಮೊಕದ್ದಮೆ ಇಲ್ಲ. ಸಾಮಾನ್ಯ ಜೀವನ ನಡೆಸುತ್ತಿದ್ದು, ಆತನ ಸಹೋದರನ…
ಮುಂಬೈ: ಮಹಾರಾಷ್ಟ್ರದ ಅಮರಾವತಿಯ ಸರ್ಕಾರಿ ಆಸ್ಪತ್ರೆಯಲ್ಲಿ ಇಂದು ಮುಂಜಾನೆ ವೆಂಟಿಲೇಟರ್ ಸ್ಫೋಟಗೊಂಡು ಅಗ್ನಿ ಅವಘಡ ಸಂಭವಿಸಿದ್ದು, ಮೂರು ನವಜಾತ ಶಿಶುಗಳು ಸಾವನ್ನಪ್ಪಿವೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಹಲವು ಶಿಶುಗಳನ್ನು ಬೇರೆಡೆಗೆ ಸ್ಥಳಾಂತರಿಸಲಾಗಿದೆ. ಬೆಳಗಿನ ಜಾವ 3:30ರ ಸುಮಾರಿಗೆ ಆಸ್ಪತ್ರೆಯ ಮೂರನೇ ಮಹಡಿಯಲ್ಲಿ ವೆಂಟಿಲೇಟರ್ ಸ್ಫೋಟಗೊಂಡು ಬೆಂಕಿ ಕಾಣಿಸಿಕೊಂಡಿದೆ. ಘಟನೆಯ ಸಮಯದಲ್ಲಿ 39 ನವಜಾತ ಶಿಶುಗಳು ಆಸ್ಪತ್ರೆಯ ವಿಶೇಷ ನವಜಾತ ಶಿಶು ಆರೈಕೆ ಘಟಕದಲ್ಲಿ ಇದ್ದವು. ತೀವ್ರ ಸುಟ್ಟಗಾಯಗಳು ಮತ್ತು ಹೊಗೆಯಿಂದ ಉಸಿರುಗಟ್ಟಿ ಮೂರು ಶಿಶುಗಳು ಸಾವನ್ನಪ್ಪಿವೆ ಎಂದು ತಿಳಿದುಬಂದಿದೆ. ಬೆಂಕಿ ಹೊತ್ತಿಕೊಂಡ ನಂತರ ವೈದ್ಯರು, ನರ್ಸ್‌ಗಳು ಮತ್ತು ಇತರ ಆಸ್ಪತ್ರೆ ಸಿಬ್ಬಂದಿ ವಾರ್ಡ್‌ಗೆ ಧಾವಿಸಿ ಶಿಶುಗಳನ್ನು ಸ್ಥಳಾಂತರಿಸಿದರು. ಅವಘಡದಿಂದ ಸಮಸ್ಯೆಗೊಳಗಾದ ಆರು ನವಜಾತ ಶಿಶುಗಳನ್ನು ಹತ್ತಿರದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.



