Author: admin

ದೆಹಲಿ: ಹೈದರಾಬಾದ್‌ನ ಇನ್‌ಆರ್ಬಿಟ್ ಮಾಲ್ ಬಳಿ ಸಂಭವಿಸಿದ ಭೀಕರ ಆಸ್ಟನ್ ಮಾರ್ಟಿನ್ ಐಷಾರಾಮಿ ಕಾರು ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶದ ವೈಎಸ್‌ಆರ್‌ಸಿಪಿ ರಾಜ್ಯಸಭಾ ಸಂಸದ ಲಿಂಗಮನೇನಿ ರಮೇಶ್ ಅವರ 21 ವರ್ಷದ ಮಗ ಲಿಂಗಮನೇನಿ ಸಂಜುಷ್‌ನ ಆರಂಭಿಕ ಮದ್ಯ ಮತ್ತು ಡ್ರಗ್ಸ್ ತಪಾಸಣೆ ವರದಿಗಳು ನೆಗೆಟಿವ್ ಬಂದಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಆಗಸ್ಟ್ 16 ರಂದು ಸಂಜುಷ್ ಚಲಾಯಿಸುತ್ತಿದ್ದ ಅತೀ ವೇಗದ ಐಷಾರಾಮಿ ಕಾರು 26 ವರ್ಷದ ಸೇಲ್ಸ್ ಎಕ್ಸಿಕ್ಯೂಟಿವ್ ಭಾರತಿ ಮುಖಿ ಎಂಬುವರಿಗೆ ಡಿಕ್ಕಿ ಹೊಡೆದಿತ್ತು. ಗಂಭೀರವಾಗಿ ಗಾಯಗೊಂಡಿದ್ದ ಭಾರತಿಯವರನ್ನು ಅಪೋಲೋ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಅವರು ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದರು. ಸಂಜುಷ್ ಕಾರನ್ನು ಅತ್ಯಂತ ವೇಗವಾಗಿ ಹಾಗೂ ನಿರ್ಲಕ್ಷ್ಯದಿಂದ ಚಲಾಯಿಸುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಕಾರನ್ನು ವಶಪಡಿಸಿಕೊಳ್ಳಲಾಗಿದ್ದು, ಮೋಟಾರು ವಾಹನ ಪರೀಕ್ಷಕರ (MVI) ತನಿಖಾ ವರದಿ ನಿರೀಕ್ಷಿಸಲಾಗುತ್ತಿದೆ. ಪ್ರಾಥಮಿಕ ಮದ್ಯ ತಪಾಸಣೆಯಲ್ಲಿ ನೆಗೆಟಿವ್ ಬಂದಿದ್ದರೂ, ಪೂರ್ಣ ಪ್ರಮಾಣದ ತನಿಖೆಗಾಗಿ ರಕ್ತದ ಮಾದರಿಯನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ (FSL) ಕಳುಹಿಸಲಾಗಿದೆ. ನಿರ್ಲಕ್ಷ್ಯದ ಚಾಲನೆಯಿಂದ…

Read More

ಬೆಂಗಳೂರು: ಕರ್ನಾಟಕದ ಐಎಎಸ್‌ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಿಗೂಢವಾಗಿ ನಾಪತ್ತೆಯಾಗಿರುವ ಪ್ರಕರಣ ಇದೀಗ ಕುತೂಹಲ ಮೂಡಿಸಿದೆ. ಬೆಂಗಳೂರಿನ  ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತೆರಳಿದ್ದ ಅವರು ಗುರುವಾರ ಬೆಳಗ್ಗೆ ಮೊಬೈಲ್‌ ಸ್ವಿಚ್‌ ಆಫ್‌ ಮಾಡಿಕೊಂಡಿದ್ದು, ಬಳಿಕ ಅವರ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಜ್ಞಾನೇಂದ್ರ ಕುಮಾರ್ ದೆಹಲಿಗೆ ತೆರಳಲು ವಿಮಾನದ ಟಿಕೆಟ್‌ ಬುಕ್ ಮಾಡಿದ್ದರು ಎನ್ನಲಾಗಿದೆ. ದೆಹಲಿಗೆ ತೆರಳುವುದಾಗಿ ತಿಳಿಸಿ ವಿಮಾನ ನಿಲ್ದಾಣಕ್ಕೆ ಹೋಗಿದ್ದರೂ, ಅಲ್ಲಿಂದ ಅವರು ವಿಮಾನ ಏರಿರುವ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ. ವಿಮಾನ ನಿಲ್ದಾಣದವರೆಗೆ ಅವರ ಚಲನವಲನವನ್ನು ಪೊಲೀಸರು ಟ್ರ್ಯಾಕ್‌ ಮಾಡಿದ್ದು, ಬಳಿಕ ಮೊಬೈಲ್‌ ಸಂಪರ್ಕ ಕಡಿತಗೊಂಡಿದೆ ಎಂದು ತಿಳಿದುಬಂದಿದೆ. ಅವರ ಮೊಬೈಲ್‌ ಫೋನ್‌ ಸ್ವಿಚ್‌ ಆಫ್‌ ಆಗಿರುವ ಹಿನ್ನೆಲೆಯಲ್ಲಿ ದೆಹಲಿ ಕಡೆಗೆ ತೆರಳಿರುವ ಸಾಧ್ಯತೆಯನ್ನೂ ಪೊಲೀಸರು ಪರಿಶೀಲಿಸುತ್ತಿದ್ದಾರೆ. ಆದರೆ, ಅವರ ಕುಟುಂಬದವರ ಸಂಪರ್ಕಕ್ಕೂ ಅಧಿಕಾರಿ ಸಿಗದಿರುವುದು ಪ್ರಕರಣದ ಗಂಭೀರತೆಯನ್ನು ಹೆಚ್ಚಿಸಿದೆ. ಜ್ಞಾನೇಂದ್ರ ಕುಮಾರ್ ಅವರಿಗೆ ಈ ಹಿಂದೆ ಆರೋಗ್ಯ ಸಮಸ್ಯೆ ಇತ್ತು ಎಂಬ ಮಾಹಿತಿಯೂ ಲಭ್ಯವಾಗಿದೆ. ಸದ್ಯ…

Read More

ಬೆಂಗಳೂರು: ರಾಜ್ಯದ ಪೊಲೀಸ್ ಠಾಣೆಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳು ದಿನದ 24 ಗಂಟೆಯೂ ಸುಸ್ಥಿತಿಯಲ್ಲಿರಬೇಕು ಮತ್ತು ಒಂದು ನಿಮಿಷವೂ ಆಫ್ ಆಗಬಾರದು ಎಂದು ಕರ್ನಾಟಕ ಹೈಕೋರ್ಟ್ ಖಡಕ್ ಆದೇಶ ನೀಡಿದೆ. ವೈಟ್‌ಫೀಲ್ಡ್ ಪೊಲೀಸ್ ಠಾಣೆಯ ಕಿರುಕುಳ ಆರೋಪ ಪ್ರಕರಣದಲ್ಲಿ ಕಳೆದ 11 ತಿಂಗಳಿನಿಂದ ಸಿಸಿಟಿವಿ ಕೆಲಸ ಮಾಡುತ್ತಿಲ್ಲ ಎಂದಿದ್ದ ಪೊಲೀಸರ ಬೇಜವಾಬ್ದಾರಿ ಹೇಳಿಕೆಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ನ್ಯಾಯಾಲಯ, ಇದು ಇಲಾಖೆಯ ವಿಶ್ವಾಸಾರ್ಹತೆಯನ್ನು ಕುಗ್ಗಿಸುತ್ತದೆ ಎಂದಿದೆ. ಅಲ್ಲದೆ, ಸುಪ್ರೀಂ ಕೋರ್ಟ್ ಮಾರ್ಗದರ್ಶನದಂತೆ ಠಾಣೆಗಳ ಸಿಸಿಟಿವಿಯನ್ನು ಕಡ್ಡಾಯವಾಗಿ ಲೈವ್ ಟ್ರ್ಯಾಕ್ ಮಾಡಲು ನಿರ್ದೇಶಿಸಿದೆ. ವೈಟ್‌ಫೀಲ್ಡ್ ಪೊಲೀಸರ ವಿರುದ್ಧದ ದೂರು ಮತ್ತು ತನಿಖೆ ವೈಟ್‌ಫೀಲ್ಡ್ ಪೊಲೀಸ್ ಠಾಣೆ ಸಿಬ್ಬಂದಿಯಿಂದ ತಮಗೆ ಕಿರುಕುಳವಾಗಿದೆ ಎಂದು ಆರೋಪಿಸಿ ಶೈಲಜಾ ಎಂಬ ಮಹಿಳೆ ನ್ಯಾಯಾಲಯದ ಬಾಗಿಲು ತಟ್ಟಿದ್ದರು. ಈ ಪ್ರಕರಣದ ತನಿಖೆ ವೇಳೆ, ಕಳೆದ 11 ತಿಂಗಳಿನಿಂದ ಠಾಣೆಯಲ್ಲಿ ಯುಪಿಎಸ್ (UPS) ಸಮಸ್ಯೆ ಇದ್ದು, ಸಿಸಿಟಿವಿ ಕಾರ್ಯನಿರ್ವಹಿಸುತ್ತಿಲ್ಲ ಎಂದು ಪೊಲೀಸರು ಸಮಜಾಯಿಷಿ ನೀಡಿದ್ದರು. ಇದನ್ನು ತೀವ್ರವಾಗಿ ಖಂಡಿಸಿದ ಹೈಕೋರ್ಟ್, “ಪೊಲೀಸರ…

Read More

ಉಡುಪಿ: ಜಾಗ ಖರೀದಿಸುವ ಉದ್ದೇಶದಿಂದ ಉಡುಪಿಗೆ ಬಂದಿದ್ದ ಕೇರಳ ಮೂಲದ ಶ್ರುತಿ ವಿ. (37) ಎಂಬವರಿಗೆ ಸೈಬರ್ ವಂಚಕರು ಬ್ಯಾಂಕ್ ಅಧಿಕಾರಿ ಎಂದು ನಂಬಿಸಿ ₹4 ಲಕ್ಷ ವಂಚಿಸಿರುವ ಘಟನೆ ನಡೆದಿದೆ. ಶ್ರುತಿ ಅವರು ಕಟಪಾಡಿಯ ರಮಾನಂದ ಶೆಟ್ಟಿ ಅವರಿಗೆ ಮೂರು ಚೆಕ್‌ಗಳನ್ನು ನೀಡಿದ್ದರು. ಈ ಚೆಕ್‌ಗಳನ್ನು ಪಾಸ್ ಮಾಡುವ ಕುರಿತು ಮಾಹಿತಿ ಪಡೆಯಲು ದಿನಾಂಕ 19-08-2026ರಂದು ಗೂಗಲ್ ಮೂಲಕ ಬ್ಯಾಂಕ್‌ನ ನಂಬರ್ ಹುಡುಕಿ, 08409615973ಕ್ಕೆ ಕರೆ ಮಾಡಿದ್ದಾರೆ. ಕರೆ ಸ್ವೀಕರಿಸಿದ ವ್ಯಕ್ತಿ ತಾನು ಬ್ಯಾಂಕ್ ಅಧಿಕಾರಿ ಎಂದು ನಂಬಿಸಿ, ಲಿಂಕ್‌ವೊಂದನ್ನು ಕಳುಹಿಸಿ ಅದನ್ನು ಓಪನ್ ಮಾಡುವಂತೆ ತಿಳಿಸಿದ್ದಾನೆ. ನಂತರ YONO APP ಮೂಲಕ ‘Proceed’ ಮಾಡುವಂತೆ ಸೂಚಿಸಿದ ಹಿನ್ನೆಲೆಯಲ್ಲಿ ಶ್ರುತಿ ಅವರು ₹4 ಲಕ್ಷದ ವಹಿವಾಟು ನಡೆಸಿದ್ದಾರೆ. ಬಳಿಕ ಅವರ ಬ್ಯಾಂಕ್ ಖಾತೆಯಿಂದ ₹4 ಲಕ್ಷ ಹಣ ವರ್ಗಾವಣೆಯಾಗಿರುವುದು ಗಮನಕ್ಕೆ ಬಂದಿದೆ. ತಕ್ಷಣ ಎಸ್‌ಬಿಐ ಬ್ಯಾಂಕ್‌ಗೆ ತೆರಳಿ ವಿಚಾರಿಸಿದಾಗ ಇದು ಆನ್‌ಲೈನ್ ವಂಚನೆ ಎಂದು ತಿಳಿದುಬಂದಿದೆ. ಸೈಬರ್ ವಂಚಕರು ಹಣ…

Read More

ನವದೆಹಲಿ: ಸಕ್ಕರೆ ಬೆಲೆ ಏರಿಕೆಗೂ ಎಥೆನಾಲ್ ಬಳಕೆಗೂ ಸಂಬಂಧ ಇಲ್ಲ. ದೇಶೀಯ ಉತ್ಪಾದನೆಯಲ್ಲಿನ ಇಳಿಕೆ, ಹಬ್ಬದ ಋತುವಿನಲ್ಲಿ ಹೆಚ್ಚಿದ ಬೇಡಿಕೆ ಹಾಗೂ ಜಾಗತಿಕ ಪೂರೈಕೆಯಲ್ಲಿನ ಬಿಗಿ ಕ್ರಮ ಮತ್ತು ಸಂಗ್ರಹಣೆಯೇ ಇದಕ್ಕೆ ಕಾರಣ ಎಂದು ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದೆ. ದೇಶೀಯ ಮಾರುಕಟ್ಟೆಯಲ್ಲಿನ ಸಕ್ಕರೆ ಬೆಲೆ ಏರಿಕೆ ಎಥೆನಾಲ್ ಬಳಕೆಗೆ ಸಂಬಂಧಿಸಿದೆ ಎಂಬ ಆರೋಪಗಳಿಗೆ ಪ್ರತಿಕ್ರಿಯೆ ನೀಡಿದ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ನಾಗರಿಕ ಸರಬರಾಜು ಸಚಿವಾಲಯ, ‘ಲಭ್ಯತೆಯನ್ನು ಸುಧಾರಿಸಲು ಮತ್ತು ಬೆಲೆ ಏರಿಕೆ ನಿಯಂತ್ರಿಸಲು ಸರ್ಕಾರ ಹಲವಾರು ಕ್ರಮಗಳನ್ನ ತೆಗೆದುಕೊಂಡಿದೆ. ಇದರಲ್ಲಿ ವ್ಯಾಪಾರಿಗಳ ಮೇಲೆ ಸ್ಟಾಕ್ ಮಿತಿಗಳನ್ನು ವಿಧಿಸುವುದು ಮತ್ತು ಕಚ್ಚಾ ಸಕ್ಕರೆಯ ಸುಂಕ-ಮುಕ್ತ ಆಮದನ್ನ ಅನುಮೋದಿಸುವುದು ಸೇರಿವೆ. ಆದ್ರೆ ಎಥೆನಾಲ್ ಉತ್ಪಾದನೆಗೆ ಸಕ್ಕರೆಯನ್ನು ಬೇರೆಡೆಗೆ ತಿರುಗಿಸಲಾಗುತ್ತಿದೆ ಎಂದು ಹೇಳುತ್ತಿರುವುದು ತಪ್ಪು’ ಎಂದು ತಿಳಿಸಿದೆ. ಇತ್ತೀಚಿನ ವರ್ಷಗಳಲ್ಲಿ ಎಥೆನಾಲ್ ಉತ್ಪಾದನೆಗೆ ತಿರುಗಿಸಲಾದ ಸಕ್ಕರೆಯ ಪ್ರಮಾಣವು ವಾಸ್ತವವಾಗಿ ಕಡಿಮೆಯಾಗಿದೆ. ಸರ್ಕಾರ ಹೇಳುವಂತೆ, ಎಥೆನಾಲ್ ಉತ್ಪಾದನೆಗೆ ಬಳಸುವ ಸಕ್ಕರೆಯ ಪ್ರಮಾಣವು 2022-23 ರಲ್ಲಿ…

Read More

ಚಿಕ್ಕಬಳ್ಳಾಪುರ: ದೇವನಹಳ್ಳಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ಬಂದಿದ್ದ ಇಬ್ಬರು ಪ್ರಯಾಣಿಕರ ಬಳಿ ಒಟ್ಟು 260 ಗ್ರಾಂ ಚಿನ್ನದ ಪುಡಿ ಪತ್ತೆಯಾಗಿದ್ದು, CISF ಸಿಬ್ಬಂದಿ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ. ಕೆಐಎ ಟರ್ಮಿನಲ್-1ರಲ್ಲಿ CISF ಸಿಬ್ಬಂದಿ ಪ್ರಯಾಣಿಕರನ್ನು ತಪಾಸಣೆ ನಡೆಸುತ್ತಿದ್ದ ವೇಳೆ ಚಿನ್ನದ ಪುಡಿ ಪತ್ತೆಯಾಗಿದೆ. ಲಕ್ಷ್ಮಣ ಹಾಗೂ ರಾಘವೇಂದ್ರ ಎಂಬ ಇಬ್ಬರು ಪ್ರಯಾಣಿಕರು ಪ್ಯಾಂಟ್‌ನ ಸೊಂಟದ ಭಾಗದಲ್ಲಿ ವಿಶೇಷವಾಗಿ ಹೊಲಿಗೆ ಹಾಕಿ, ಎರಡು ಪ್ಯಾಕೆಟ್‌ಗಳಲ್ಲಿ ಚಿನ್ನದ ಪುಡಿಯನ್ನು ಸಾಗಿಸುತ್ತಿದ್ದರು ಎನ್ನಲಾಗಿದೆ. ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ಬಂದಿದ್ದ ಇಬ್ಬರು, ಬಳಿಕ ಬೆಂಗಳೂರಿನಿಂದ ಅಹಮದಾಬಾದ್‌ಗೆ ತೆರಳಲು ಸಿದ್ಧರಾಗಿದ್ದರು. ತಪಾಸಣೆ ವೇಳೆ ಅನುಮಾನಗೊಂಡ CISF ಸಿಬ್ಬಂದಿ ಪರಿಶೀಲನೆ ನಡೆಸಿದಾಗ ಚಿನ್ನದ ಪುಡಿ ಪತ್ತೆಯಾಗಿದೆ. ಒಟ್ಟು 260 ಗ್ರಾಂ ಚಿನ್ನದ ಪುಡಿಯನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಚಿನ್ನದ ಪುಡಿ ಹಾಗೂ ಇಬ್ಬರು ಪ್ರಯಾಣಿಕರನ್ನು ಮುಂದಿನ ಕಾನೂನು ಕ್ರಮಕ್ಕಾಗಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪೊಲೀಸರಿಗೆ ಹಸ್ತಾಂತರಿಸಲಾಗಿದೆ. ವಿಮಾನ ನಿಲ್ದಾಣದಲ್ಲಿ ಚಿನ್ನದ ಕಳ್ಳಸಾಗಣೆ ತಡೆಗೆ CISF ಸಿಬ್ಬಂದಿ ಕಟ್ಟುನಿಟ್ಟಿನ…

Read More

ಉಡುಪಿ: ನ್ಯಾಯಾಲಯಕ್ಕೆ ಹಾಜರಾಗದೆ ಸುಮಾರು 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಮಹಿಳೆಯೊಬ್ಬರನ್ನು ಉಡುಪಿ ನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಮಹಿಳೆಯನ್ನು ದಾವಣಗೆರೆಯ ಬೇಗೂರು ರಸ್ತೆಯ ನಿವಾಸಿ ವಾಣೀಶ್ರೀ ಅಲಿಯಾಸ್ ರೇಣುಕಾ ಎಂದು ಗುರುತಿಸಲಾಗಿದೆ. 2009ರಲ್ಲಿ ದಾಖಲಾಗಿದ್ದ ಪ್ರಕರಣವೊಂದರಲ್ಲಿ ಆಕೆ ಆರೋಪಿಯಾಗಿದ್ದಳು. ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದೆ ಸುಮಾರು 17 ವರ್ಷಗಳಿಂದ ತಲೆಮರೆಸಿಕೊಂಡಿದ್ದಳು. ಪೊಲೀಸರು ಶುಕ್ರವಾರ ಆಕೆಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಬಳಿಕ ಆಕೆಯನ್ನು ಮಂಗಳೂರು ಜಿಲ್ಲಾ ಕಾರಾಗೃಹಕ್ಕೆ ಕಳುಹಿಸಲಾಗಿದೆ.

Read More

ಪುತ್ತೂರು : ದಾಖಲೆಪತ್ರ ಲ್ಯಾಮಿನೇಷನ್ ಮಾಡುವಾಗ ತಾಂತ್ರಿಕ ದೋಷದಿಂದ ಸುಟ್ಟುಹೋದ ವಿಚಾರಕ್ಕೆ ಸಂಬಂಧಿಸಿದಂತೆ ಗ್ರಾಹಕರು ಹಾಗೂ ಅಂಗಡಿ ಮಾಲೀಕರ ನಡುವೆ ವಾಗ್ವಾದ ನಡೆದು ಪರಸ್ಪರ ಹಲ್ಲೆ ನಡೆಸಿಕೊಂಡ ಘಟನೆ ಪುತ್ತೂರಿನ ದರ್ಭೆಯಲ್ಲಿ ಆಗಸ್ಟ್ 21ರ ಮಧ್ಯಾಹ್ನ ಸಂಭವಿಸಿದೆ. ಸುಳ್ಯ ಮಂಡೆಕೋಲು ನಿವಾಸಿಗಳಾದ ಮುಬಾಶಿರ, ಫಾತೀಮಾ ಹಾಗೂ ಮುಬಾಶಿರ್ ಎಂಬುವವರು ಪುತ್ತೂರಿನ ದರ್ಭೆಯಲ್ಲಿರುವ ಅಂಜನಾ ಪೈ ಎಂಬುವರಿಗೆ ಸೇರಿದ “Dream destination digital seva Kendra” ಅಂಗಡಿಗೆ ತೆರಳಿ ಕೆಲವು ದಾಖಲಾತಿಗಳನ್ನು ಜೆರಾಕ್ಸ್ ಹಾಗೂ ಲ್ಯಾಮಿನೇಷನ್ ಮಾಡಲು ನೀಡಿದ್ದರು. ಈ ವೇಳೆ ಒಂದು ದಾಖಲೆಪತ್ರ ತಾಂತ್ರಿಕ ದೋಷದಿಂದ ಸುಟ್ಟುಹೋಗಿದೆ. ಈ ವಿಚಾರವಾಗಿ ಗ್ರಾಹಕರು ಹಾಗೂ ಅಂಗಡಿಯ ಅಂಜನಾ ಪೈ ಮತ್ತು ಅವರ ಮಗ ಸುದರ್ಶನ್ ಪೈ ನಡುವೆ ತೀವ್ರ ವಾಗ್ವಾದ ನಡೆದು, ಪರಸ್ಪರ ಹಲ್ಲೆ ನಡೆಸಿದ್ದಾರೆ. ಘಟನಾ ಸ್ಥಳದಲ್ಲಿ ಸಾರ್ವಜನಿಕರ ಗುಂಪು ಸೇರಿದಾಗ, ಸ್ಥಳಕ್ಕೆ ಧಾವಿಸಿದ ಪುತ್ತೂರು ನಗರ ಠಾಣೆ ಪೊಲೀಸರು ಪರಿಸ್ಥಿತಿ ತಿಳಿಗೊಳಿಸಿ ಎರಡೂ ಕಡೆಯವರಿಗೆ ಠಾಣೆಗೆ ತೆರಳಿ ದೂರು ನೀಡುವಂತೆ…

Read More

ಉಡುಪಿ: ಉಡುಪಿ ಪತ್ರಕರ್ತ ಶ್ರೀಕಾಂತ್ ಹೆಮ್ಮಾಡಿ ಮೇಲೆ ಹಲ್ಲೆ ನಡೆಸಿರುವ ಕುಂದಾಪುರ ತಾಲೂಕು ಸಾರ್ವಜನಿಕ ಆಸ್ಪತ್ರೆಯ ಶಸ್ತ್ರಚಿಕಿತ್ಸಕರಾಗಿದ್ದ ಡಾ.ಮಹೇಂದ್ರ ಕುಮಾರ್ ಶೆಟ್ಟಿಯನ್ನು ಸೇವೆಯಿಂದ ಅಮಾನತುಗೊಳಿಸಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತ ಗುರುದತ್ತ ಹೆಗಡೆ ಆದೇಶ ಹೊರಡಿಸಿದ್ದಾರೆ. ಶ್ರೀಕಾಂತ್ ಹೆಮ್ಮಾಡಿ ಮೇಲೆ ಡಾ.ಮಹೇಂದ್ರ ಕುಮಾರ್ ಶೆಟ್ಟಿ ಏಕಾಏಕಿ ಹಲ್ಲೆ ನಡೆಸುವ ಮೂಲಕ ಸರಕಾರದ ಅಧಿಕಾರಿಗೆ ತರವಲ್ಲದ ರೀತಿಯಲ್ಲಿ ವರ್ತಿಸಿರುವುದರಿಂದ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿದ ಆಯುಕ್ತ ಗುರುದತ್ತ ಹೆಗಡೆ, ಮಹೇಂದ್ರ ಕುಮಾರ್ ವಿರುದ್ಧದ ಕರ್ತವ್ಯ ಲೋಪ ಮತ್ತು ಬೇಜವಾಬ್ದಾರಿತನ ಆರೋಪಗಳ ಕುರಿತು ಇಲಾಖಾ ವಿಚಾರಣೆಯನ್ನು ಬಾಕಿ ಇರಿಸಿ ತಕ್ಷಣದಿಂದ ಜಾರಿಗೆ ಬರುವಂತೆ ಸರಕಾರಿ ಸೇವೆಯಿಂದ ಅಮಾನತುಗೊಳಿಸಿ ಆದೇಶಿಸಿದ್ದಾರೆ.

Read More

ಕಾಪು ತಾಲೂಕು ಮುದರಂಗಡಿಯ ಸೇಂಟ್ ಕ್ಷೇವಿಯರ್ ಚರ್ಚ್‌ ಕಾಂಪ್ಲೆಕ್ಸ್‌ನಲ್ಲಿ ನಡೆದ ಪ್ರಿನ್ಸ್ ಎಂಟರ್ಪ್ರೈಸಸ್ ಮಾಲೀಕ ಡೇವಿಡ್ ಡಿಸೋಜಾ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮತ್ತೋರ್ವ ಆರೋಪಿಯನ್ನು ಬಂಧಿಸಿದ್ದಾರೆ. ಬೈಂದೂರಿನ ಯಡ್ತರೆ ನಿವಾಸಿ ಲೋಕೇಶ್ ತೇಜ ಕೊಠಾರಿ (42) ಬಂಧಿತ ಆರೋಪಿ. ಆಗಸ್ಟ್ 21ರಂದು ವಿಶೇಷ ಕರ್ತವ್ಯದಲ್ಲಿದ್ದ ಕಾರ್ಕಳ–ಪಡುಬಿದ್ರೆ ಪೊಲೀಸರು ಬೈಂದೂರು ತಾಲೂಕಿನ ಯಡ್ತರೆ ಗ್ರಾಮದಲ್ಲಿ ಆರೋಪಿಯನ್ನು ವಶಕ್ಕೆ ಪಡೆದು, ಪ್ರಕರಣದ ತನಿಖಾಧಿಕಾರಿಗಳ ಮುಂದೆ ಹಾಜರುಪಡಿಸಿದ್ದಾರೆ. ಪೊಲೀಸರ ಪ್ರಕಾರ, ಲೋಕೇಶ್ ತೇಜ ಕೊಠಾರಿ ಈ ಹಿಂದೆ ಬಾಂಬೆಯಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ಪ್ರಕರಣದ ಮತ್ತೋರ್ವ ಆರೋಪಿ ಕಿಶೋರ್ ರಾಮ ಪೂಜಾರಿ ಅವರ ಪರಿಚಯವಾಗಿದ್ದು, ಇಬ್ಬರೂ ಸ್ನೇಹಿತರಾಗಿದ್ದರು. ಕೊಲೆ ಕೃತ್ಯಕ್ಕೆ ಸಂಬಂಧಿಸಿದಂತೆ ನೇರವಾಗಿ ಭಾಗಿಯಾಗಿದ್ದ ಅನ್ಮೋಲ್ ರಸ್ತೋಗಿ ಹಾಗೂ ರಾಜು ಅವರಿಗೆ ಮೋಟಾರ್ ಸೈಕಲ್‌ಗಳನ್ನು ಒದಗಿಸುವ ಮೂಲಕ ಇತರ ಆರೋಪಿಗಳೊಂದಿಗೆ ಸೇರಿ ಅಪರಾಧಿಕ ಒಳಸಂಚಿನಲ್ಲಿ ಭಾಗಿಯಾಗಿದ್ದಾನೆ ಎಂದು ತನಿಖೆಯಲ್ಲಿ ತಿಳಿದುಬಂದಿದೆ. ಆತನಿಂದ ಕೃತ್ಯಕ್ಕೆ ಬಳಸಲಾಗಿದೆ ಎನ್ನಲಾದ ಮೊಬೈಲ್ ಫೋನ್‌ಗಳನ್ನು ಹಾಗೂ ಮೋಟಾರ್ ಸೈಕಲ್‌ನ…

Read More