Author: admin

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕಿನ ವೇಣೂರು ಗ್ರಾಮದಲ್ಲಿ 14 ವರ್ಷದ ಅಪ್ರಾಪ್ತ ಶಾಲಾ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರ ಎಸಗಿದ ಆರೋಪದ ಮೇಲೆ ಆಟೋ ರಿಕ್ಷಾ ಚಾಲಕ ಜಮಾಲುದ್ದೀನ್ ಎಂಬಾತನನ್ನು ವೇಣೂರು ಪೊಲೀಸರು ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೊಳಪಡಿಸಿದ್ದಾರೆ. ವೇಣೂರು ನಿವಾಸಿಯಾಗಿರುವ ಆರೋಪಿ ಜಮಾಲುದ್ದೀನ್ ತನ್ನ ಆಟೋ ರಿಕ್ಷಾದಲ್ಲಿ 14 ವರ್ಷದ ಬಾಲಕಿಯನ್ನು ಕಳೆದ ಕೆಲವು ತಿಂಗಳುಗಳಿಂದ ಶಾಲೆಗೆ ಕರೆದೊಯ್ಯುತ್ತಿದ್ದನು. ಈ ವೇಳೆ ಆಕೆಯೊಂದಿಗೆ ಅನುಚಿತವಾಗಿ ವರ್ತಿಸುತ್ತಿದ್ದ ಆರೋಪಿಯನ್ನು ಬಾಲಕಿ ಪ್ರತಿರೋಧಿಸಿದಾಗ, ಜೀವಬೆದರಿಕೆ ಒಡ್ಡುತ್ತಿದ್ದನು. ಇದರಿಂದ ಭೀತಿಗೆೊಳಗಾಗಿದ್ದ ಬಾಲಕಿ ಈ ವಿಷಯವನ್ನು ಯಾರಿಗೂ ತಿಳಿಸಿರಲಿಲ್ಲ. ಆಗಸ್ಟ್ 13, 2026ರಂದು ಸಂಜೆ ಬಾಲಕಿ ಮನೆಯಲ್ಲಿ ಒಬ್ಬಳೇ ಇದ್ದಾಗ ಮನೆಗೆ ಅಕ್ರಮವಾಗಿ ನುಗ್ಗಿದ ಆರೋಪಿ ಜಮಾಲುದ್ದೀನ್, ಬೆದರಿಕೆಯೊಡ್ಡಿ ಅತ್ಯಾಚಾರ ಎಸಗಿದ್ದಾನೆ. ಈ ಕುರಿತು ಸಂತ್ರಸ್ತ ಬಾಲಕಿ ಆಗಸ್ಟ್ 15, 2026ರಂದು ನೀಡಿದ ದೂರಿನ ಮೇರೆಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಯ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (BNS 2023)…

Read More

ಛತ್ರಪತಿ ಸಂಭಾಜಿನಗರ: : ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಆತ್ಮಹತ್ಯೆಗೆ ಯತ್ನಿಸುತ್ತಿದ್ದ ಮಗನನ್ನು ಕೊನೆ ಕ್ಷಣದಲ್ಲಿ ರಕ್ಷಿಸಲು ಹೋಗಿ ತಂದೆ-ತಾಯಿ ಇಬ್ಬರೂ ಆಳವಾದ ಕ್ವಾರಿಗೆ ಬಿದ್ದು, ಒಂದೇ ಕುಟುಂಬದ ಮೂವರು ದಾರುಣವಾಗಿ ಮೃತಪಟ್ಟ ಹೃದಯವಿದ್ರಾವಕ ಘಟನೆ ಧುಲೆ-ಸೋಲಾಪುರ ರಾಷ್ಟ್ರೀಯ ಹೆದ್ದಾರಿಯ  ಪರ್ವತ ಪ್ರದೇಶದಲ್ಲಿ ನಡೆದಿದೆ. ಇಂದು (ಆಗಸ್ಟ್ 21) ಮಧ್ಯಾಹ್ನ 1 ಗಂಟೆ ಸುಮಾರಿಗೆ ಈ ದುರಂತ ಸಂಭವಿಸಿದೆ. ಮೃತರನ್ನು ಮುರಳೀಧರ್ ದಾಮೋಧರ್ ಚಂದಗುಡೆ (48), ಅವರ ಪತ್ನಿ ಸಂಗೀತಾ ಮುರಳೀಧರ್ ಚಂದಗುಡೆ (42) ಹಾಗೂ ಮಗ ಕುನಾಲ್ ಮುರಳೀಧರ್ ಚಂದಗುಡೆ (19) ಎಂದು ಗುರುತಿಸಲಾಗಿದೆ. ಈ ಕುಟುಂಬ ಮೂಲತಃ ಜಲ್ನಾ ಜಿಲ್ಲೆಯ ಅಂಬಾದ್ ತಾಲೂಕಿನ ಕರ್ಜತ್ ಪಿಪಲ್ಗಾಂವ್‌ನವರಾಗಿದ್ದು, ಪ್ರಸ್ತುತ ಛತ್ರಪತಿ ಸಂಭಾಜಿನಗರದ ಝಲ್ತಾ ಫಾಟಾ ಸಮೀಪ ವಾಸವಾಗಿದ್ದರು. ಕೌಟುಂಬಿಕ ವಿವಾದದಿಂದ ಮುನಿಸಿಕೊಂಡಿದ್ದ 19 ವರ್ಷದ ಯುವಕ ಕುನಾಲ್ ಬೆಳಿಗ್ಗೆ 10 ಗಂಟೆಯಿಂದ  ಪರ್ವತದ ಅತ್ಯಂತ ಅಪಾಯಕಾರಿ ಅಂಚಿನಲ್ಲಿ ನಿಂತಿದ್ದ. ಮಾಹಿತಿ ತಿಳಿದ ತಕ್ಷಣ ಪೊಲೀಸರು, ಅಗ್ನಿಶಾಮಕ ದಳ ಮತ್ತು ಸ್ಥಳೀಯರು ಧಾವಿಸಿ…

Read More

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ರೈಲ್ವೇ ಪ್ರಯಾಣಿಕರ ದಶಕಗಳ ಬಾಕಿ ಬೇಡಿಕೆಯೊಂದು ಕೊನೆಗೂ ಈಡೇರುವ ಹಂತಕ್ಕೆ ತಲುಪಿದೆ. ಪ್ರಸ್ತುತ ದಕ್ಷಿಣ ರೈಲ್ವೆ ವಲಯದ ಪಾಲಕ್ಕಾಡ್ ವಿಭಾಗದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಮಂಗಳೂರು ರೈಲ್ವೆ ಪ್ರದೇಶವನ್ನು ನೈಋತ್ಯ ರೈಲ್ವೆ ವಲಯದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲು ಭಾರತೀಯ ರೈಲ್ವೆ ಇಲಾಖೆ ನಿರ್ಧರಿಸಿದೆ. ಈ ಕುರಿತು ಮಂಗಳೂರು ಸಂಸದ ಕ್ಯಾ. ಬ್ರಿಜೇಶ್‌ ಚೌಟ ಮಾಹಿತಿ ನೀಡಿದ್ದಾರೆ. ಹೊಸ ನಿರ್ಧಾರದಂತೆ ಉಳ್ಳಾಲವರೆಗಿನ ಮಂಗಳೂರು ರೈಲ್ವೆ ವ್ಯಾಪ್ತಿಯು ದಕ್ಷಿಣ ರೈಲ್ವೆಯಿಂದ ನೈಋತ್ಯ ರೈಲ್ವೆಯ ಮೈಸೂರು ವಿಭಾಗಕ್ಕೆ ವರ್ಗಾವಣೆಯಾಗಲಿದೆ. ಇದರಿಂದಾಗಿ ದಕ್ಷಿಣ ರೈಲ್ವೆ ಮತ್ತು ನೈಋತ್ಯ ರೈಲ್ವೆ ವಲಯಗಳ ನಡುವಿನ ಇಂಟರ್ಚೇಂಜ್ ಪಾಯಿಂಟ್ ಇನ್ನುಮುಂದೆ ಪಡೀಲ್ ಬದಲಿಗೆ ಉಳ್ಳಾಲಕ್ಕೆ ಸ್ಥಳಾಂತರಗೊಳ್ಳಲಿದೆ ತೋಕೂರು ನಿಲ್ದಾಣವು ಕೊಂಕಣ ರೈಲ್ವೆಯ ಭಾಗವಾಗಿಯೇ ಮುಂದುವರಿಯಲಿದ್ದು, ಕೊಂಕಣ ಹಾಗೂ ನೈಋತ್ಯ ರೈಲ್ವೆ ನಡುವಿನ ಮುಖ್ಯ ವಿನಿಮಯ ಕೇಂದ್ರವಾಗಿ ಕಾರ್ಯನಿರ್ವಹಿಸಲಿದೆ. ಈ ಸಂಬಂಧ ಶೀಘ್ರದಲ್ಲೇ ರೈಲ್ವೆ ಸಚಿವಾಲಯದಿಂದ ಅಧಿಕೃತ ಅಧಿಸೂಚನೆ  ಹೊರಬೀಳಲಿದೆ. ಈ ಐತಿಹಾಸಿಕ ನಿರ್ಧಾರದ ಬಗ್ಗೆ ಹರ್ಷ…

Read More

ಸುಳ್ಯ: ತಾಲೂಕಿನ ಐವರ್ನಾಡು ಗ್ರಾಮದಲ್ಲಿ ಕಾಡಾನೆ ಓಡಿಸುವ ಕಾರ್ಯಾಚರಣೆಯ ವೇಳೆ ಅರಣ್ಯ ಇಲಾಖೆ ಸಿಬ್ಬಂದಿ ಹಾರಿಸಿದ ಗುಂಡು ಇಬ್ಬರಿಗೆ ತಗುಲಿದೆ. ಓರ್ವನಿಗೆ ಗಾಯವಾಗಿದ್ದು, ಮತ್ತೊಬ್ಬ ಅದೃಷ್ಟವಶಾತ್​​ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಘಟನೆಯಿಂದ ಅರಣ್ಯ ಇಲಾಖೆ ಮತ್ತೆ ಎಡವಟ್ಟು ಮಾಡಿಕೊಂಡಿದೆ. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಐವರ್ನಾಡು ಗ್ರಾಮದ ಬೆಂಗಮಲೆ ಎಂಬಲ್ಲಿ ಕಾಡಾನೆಗಳನ್ನು ಕಾಡಿಗೆ ಓಡಿಸುವ ಕಾರ್ಯಾಚರಣೆ ವೇಳೆ ಅರಣ್ಯ ಸಿಬ್ಬಂದಿ ಹಾರಿಸಿದ ಗುಂಡು ತಗುಲಿ ಬೈಕ್ ಸವಾರನೊಬ್ಬ ಗಾಯಗೊಂಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಮತ್ತೊಬ್ಬ ಸವಾರನ ಶರ್ಟ್ ಜೇಬಿನಲ್ಲಿದ್ದ ಮೊಬೈಲ್‌ಗೆ ಗುಂಡು ತಗುಲಿದ್ದು, ಆತ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಸುಮಾರು ನಾಲ್ಕೈದು ದಿನಗಳ ಹಿಂದೆ ಐವರ್ನಾಡು ವ್ಯಾಪ್ತಿಯಲ್ಲಿ ಅರಣ್ಯ ಸಿಬ್ಬಂದಿ ಕಾಡಾನೆಗಳನ್ನು ಓಡಿಸಲು ಕಾರ್ಯಾಚರಣೆ ನಡೆಸುತ್ತಿದ್ದರು. ಈ ವೇಳೆ ಸಿಬ್ಬಂದಿ ಹಾರಿಸಿದ ಗುಂಡು, ಅದೇ ಮಾರ್ಗವಾಗಿ ಬೈಕ್‌ನಲ್ಲಿ ತೆರಳುತ್ತಿದ್ದ ರಾಘವ ಪ್ರಭು ಎಂಬುವವರ ಕಾಲಿಗೆ ತಗುಲಿದೆ. ತಕ್ಷಣವೇ ಗಾಯಗೊಂಡ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅರಣ್ಯಾಧಿಕಾರಿಗಳೇ ಚಿಕಿತ್ಸಾ ವೆಚ್ಚವನ್ನು…

Read More

ಕನ್ನಡ ಪ್ರಭ ಪತ್ರಿಕೆಯ ವರದಿಗಾರರಾದ ಶ್ರೀಕಾಂತ್ ಅವರ ಮೇಲೆ ಹಲ್ಲೆ ನಡೆಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ ಹಾಗೂ ಕೊಲೆ ಬೆದರಿಕೆ ಹಾಕಿದ ಆರೋಪದ ಮೇರೆಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿತ ಡಾ. ಮಹೇಂದ್ರ ಕುಮಾರ್ ಶೆಟ್ಟಿ ಅವರು, ಈ ಹಿಂದೆ ಕುಂದಾಪುರ ಸರ್ಕಾರಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸಾ ವೈದ್ಯರಾಗಿದ್ದ ಸಂದರ್ಭದಲ್ಲಿ ಒಳರೋಗಿಗಳಿಂದ ಚಿಕಿತ್ಸೆಯ ಸಮಯದಲ್ಲಿ ಹಣ ಪಡೆಯಲಾಗುತ್ತಿದೆ ಎಂಬ ಕುರಿತು ಶ್ರೀಕಾಂತ್ ಅವರು ಪತ್ರಿಕೆಯಲ್ಲಿ ವರದಿ ಪ್ರಕಟಿಸಿದ್ದಕ್ಕೆ ದ್ವೇಷಗೊಂಡು ಹಲ್ಲೆ ನಡೆಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಈ ಸಂಬಂಧ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣದ ತನಿಖೆ ಮುಂದುವರಿದಿದ್ದು, ತನಿಖೆಯ ಬಳಿಕ ಆರೋಪಿಯ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

Read More

ನವದೆಹಲಿ: ದೇಶದ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆಯುವ ಸಾಧ್ಯತೆ ಕಾಣಿಸಿಕೊಂಡಿದ್ದು, ಕಾಂಗ್ರೆಸ್ ನೇತೃತ್ವದ ಇಂಡಿಯಾ ಮೈತ್ರಿಕೂಟದಲ್ಲಿರುವ ಡಿಎಂಕೆ ಮತ್ತು ಎನ್‌ಸಿಪಿ ಪಕ್ಷಗಳು ಬಿಜೆಪಿ ನೇತೃತ್ವದ ಎನ್‌ಡಿಎ ಕೂಟದತ್ತ ಮುಖ ಮಾಡಿವೆ ಎಂಬ ಚರ್ಚೆ ರಾಜಕೀಯ ವಲಯದಲ್ಲಿ ತೀವ್ರವಾಗಿದೆ. ಎರಡೂ ಪಕ್ಷಗಳ ನಾಯಕರೊಂದಿಗೆ ಬಿಜೆಪಿ ಪ್ರಮುಖರು ಮಾತುಕತೆ ನಡೆಸಿದ್ದಾರೆ ಎಂಬ ವರದಿಗಳು ಹರಿದಾಡುತ್ತಿದ್ದು, ಈ ಬೆಳವಣಿಗೆ ಇಂಡಿಯಾ ಮೈತ್ರಿಕೂಟಕ್ಕೆ ದೊಡ್ಡ ಆಘಾತವಾಗಬಹುದು ಎನ್ನಲಾಗಿದೆ. ಡಿಎಂಕೆ ಮತ್ತು ಎನ್‌ಸಿಪಿ ಪಕ್ಷಗಳು ತಮ್ಮ ಮುಂದಿನ ರಾಜಕೀಯ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಎನ್‌ಡಿಎ ಸೇರುವ ಬಗ್ಗೆ ಚಿಂತನೆ ನಡೆಸುತ್ತಿವೆ ಎನ್ನಲಾಗುತ್ತಿದೆ. ಕಾಂಗ್ರೆಸ್ ನೇತೃತ್ವದ ಇಂಡಿಯಾ ಕೂಟದಲ್ಲಿ ನಿರೀಕ್ಷಿತ ಬಲವರ್ಧನೆ ಕಾಣದಿರುವುದು ಹಾಗೂ ಪ್ರಾದೇಶಿಕ ರಾಜಕೀಯದಲ್ಲಿ ಎದುರಾಗಿರುವ ಸವಾಲುಗಳು ಈ ನಿರ್ಧಾರದ ಹಿಂದೆ ಪ್ರಮುಖ ಕಾರಣಗಳಾಗಿವೆ ಎಂಬ ಚರ್ಚೆ ನಡೆಯುತ್ತಿದೆ. ಇದೇ ವೇಳೆ, ಎನ್‌ಸಿಪಿ ನಾಯಕ ಶರದ್ ಪವಾರ್ ಅವರ ಮೂಲಕ ಡಿಎಂಕೆಯನ್ನೂ ಎನ್‌ಡಿಎಗೆ ಸೆಳೆಯಲು ಬಿಜೆಪಿ ನಾಯಕತ್ವ ತಂತ್ರ ರೂಪಿಸಿದೆ ಎನ್ನಲಾಗುತ್ತಿದೆ. ಮಾತುಕತೆಗಳು ಅಂತಿಮ ಹಂತ ತಲುಪಿವೆ ಎಂಬ…

Read More

ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಅತ್ಯಾಚಾರ ಪ್ರಕರಣ ಸಂಬಂಧ ಸಾಕ್ಷ್ಯ ದಾಖಲಿಸಿದ ಬಳಿಕ ಬೆದರಿಕೆ ಕರೆಗಳು ಬಂದಿವೆ ಎಂದು ಪ್ರಮುಖ ಸಾಕ್ಷಿಯೊಬ್ಬರು ವಿಚಾರಣೆ ವೇಳೆ ವಿಶೇಷ ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ತಮ್ಮ ಹಾಗೂ ತಮ್ಮ ಮಗನ ಸುರಕ್ಷತೆ ಬಗ್ಗೆ ಅವರು ಆತಂಕ ವ್ಯಕ್ತಪಡಿಸಿದ ಪ್ರಸಂಗ ನಡೆದಿದೆ. ಹಾಸನ ಜಿಲ್ಲೆಯ ಹೊಳೆನರಸೀಪುರ ಮೂಲದ 43 ವರ್ಷದ ಸಮಾಜ ಸೇವಕಿ ಜುಲೈ 6, 2026ರಂದು ಪ್ರಾಸಿಕ್ಯೂಷನ್ ಸಾಕ್ಷಿ-4 (PW-4) ಆಗಿ ನ್ಯಾಯಾಲಯದಲ್ಲಿ ಸಾಕ್ಷ್ಯ ದಾಖಲಿಸಿದ್ದರು. ಸಿಐಡಿ ತನಿಖೆಗೆ ನ್ಯಾಯಾಲಯ ಸೂಚನೆ ಸಾಕ್ಷಿಯ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಿದ ನ್ಯಾಯಾಲಯ, ಸಿಐಡಿ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಿಗೆ (ADGP) ಬೆದರಿಕೆ ಆರೋಪದ ಬಗ್ಗೆ ತನಿಖೆ ನಡೆಸಿ ಮುಂದಿನ ವಿಚಾರಣೆ ದಿನ ವರದಿ ಸಲ್ಲಿಸುವಂತೆ ನಿರ್ದೇಶಿಸಿದೆ. ಇದಲ್ಲದೆ, ನನಗೆ ಅಥವಾ ನನ್ನ ಮಗನಿಗೆ ಏನಾದರೂ ಆದರೆ ಅದಕ್ಕೆ ಆರೋಪಿಗಳೇ ಹೊಣೆ ಎಂದು ಸಾಕ್ಷಿದಾರರು ನ್ಯಾಯಾಲಯದಲ್ಲಿ ಹೇಳಿದ್ದಾರೆ. ಆರೋಪಿಗಳಿಂದ ಜೀವಕ್ಕೆ ಅಪಾಯವಿರುವ ಆತಂಕವನ್ನೂ ಅವರು ವ್ಯಕ್ತಪಡಿಸಿದ್ದಾರೆ ಎಂದು ವರದಿಯಾಗಿದೆ. ಇತ್ತೀಚೆಗೆ…

Read More

ಬೆಂಗಳೂರು: ಪೋಷಣೆ ವಿಚಾರದಲ್ಲಿ ತಾರತಮ್ಯ ಮಾಡುತ್ತಿದ್ದ ಮಲ ತಂದೆಯನ್ನು ಪುತ್ರ ಹತ್ಯೆಗೈದಿರುವ ಘಟನೆ ಮಾದನಾಯನಕಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಶಿವನಪುರ ನಿವಾಸಿ ಶ್ರೀಧರ್‌ (53) ಕೊಲೆಯಾದವರು. ಅವರ ಪುತ್ರ ಉದಯ್‌ ಕುಮಾರ್‌ (23) ಎಂಬಾತನನ್ನು ಬಂಧಿಸಲಾಗಿದೆ. ಆ.19ರಂದು ಬೆಳಗ್ಗೆ ಶಿವನಪುರದ ಮನೆಯಲ್ಲಿ ದುರ್ಘ‌ಟನೆ ನಡೆದಿದೆ. ಈ ಸಂಬಂಧ ಶ್ರೀಧರ್‌ ಸಹೋದರ ಶಶಿಕುಮಾರ್‌ ಎಂಬುವರು ನೀಡಿದ ದೂರಿನ ಮೇರೆಗೆ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದರು. ಶ್ರೀಧರ್‌ ಹಿರಿಯ ಪತ್ರಕರ್ತರಾಗಿದ್ದು, ಸ್ಥಳೀಯ ಪತ್ರಿಕೆಯಲ್ಲಿ ಕೆಲಸ ಮಾಡುತ್ತಿದ್ದರು. ಇನ್ನು ಅವರ ಪತ್ನಿ ಪಂಜಾಬ್‌ ಮೂಲದ ಬೀನಾಗೆ ಈಗಾಗಲೇ ಮದುವೆಯಾಗಿದ್ದು, ಪತಿ ಮೃತಪಟ್ಟಿದ್ದಾರೆ. ಪುತ್ರ ಉದಯ್‌ ಜತೆ 16 ವರ್ಷಗಳ ಹಿಂದೆಯೇ ಬೆಂಗಳೂರಿಗೆ ಬಂದಿದ್ದರು. ಈ ವೇಳೆ ಶ್ರೀಧರ್‌ ಪರಿಚಯವಾಗಿದೆ. ನಂತರ ಇಬ್ಬರು ಮದುವೆಯಾಗಿದ್ದರು. ಈ ದಂಪತಿಗೆ ಇಬ್ಬರು ಮಕ್ಕಳು ಇದ್ದಾರೆ. ಆದರೆ, ಶ್ರೀಧರ್‌, ಉದಯ್‌ ಕುಮಾರ್‌ನನ್ನು ಸಂಪೂರ್ಣವಾಗಿ ನಿರ್ಲಕ್ಷ್ಯ ಮಾಡಿದ್ದಾರೆ. ಆಧಾರ್‌ ಕಾರ್ಡ್‌ ಕೂಡ ಮಾಡಿಸಿಲ್ಲ. 3ನೇ ತರಗತಿ ನಂತರ ಶಾಲೆಗೂ ಕಳುಹಿಸಿಲ್ಲ.…

Read More

ರಾಯಚೂರು: ಸಿರವಾರ ತಾಲೂಕಿನ ಹೊಕ್ರಾಣಿ ಗ್ರಾಮದಲ್ಲಿ ಬಾವಿಯಯೊಂದರಲ್ಲಿ ಯುವತಿಯ ಶವ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಮತ್ತೊಬ್ಬ ಆರೋಪಿ ಪರಾರಿಯಾಗಿದ್ದಾನೆ. ಬಯಲು ಪ್ರದೇಶದಲ್ಲಿ ಶೌಚಕ್ಕೆ ಹೋಗಿದ್ದ ಯುವತಿಯ ಮೃತದೇಹ ಮರುದಿನ ಊರ ಬಾವಿಯ ಮೆಟ್ಟಿಲ ಮೇಲೆ ಪತ್ತೆಯಾಗಿತ್ತು. ಯುವತಿಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ್ದಾರೆ ಎಂದು ಆಕೆಯ ತಂದೆ ತಿಮ್ಮರೆಡ್ಡಿ ನೀಡಿದ ದೂರಿನ ಆಧಾರದ ಮೇಲೆ ಗುಂಡ್ಯ (22) ಮಹಾಂತೇಶ (22) ವೀರೇಶ (23) ಮುಂಡರಗಿ ಬಸವರಾಜ(45) ಎಂಬ ನಾಲ್ಕು ಜನರ ವಿರುದ್ದ ಪ್ರಕರಣ ದಾಖಲಾಗಿದ್ದು , ಮೂವರನ್ನು ವಶಕ್ಕೆ ಪಡೆದು ನ್ಯಾಯಾಂಗ ಬಂಧನ ಒಪ್ಪಿಸಲಾಗಿದೆ ಎಂದು ಸಿಪಿಐ ಎಂ.ಶಶಿಕಾಂತ ತಿಳಿಸಿದ್ದಾರೆ. ಐಜಿ ಭೇಟಿ : ಹೊಕ್ರಾಣಿ ಗ್ರಾಮಕ್ಕೆ ಗುರುವಾರ ಸಂಜೆ ಐಜಿ ಪಿಎಸ್ ಹರ್ಷ, ಜಿಲ್ಲಾಧಿಕಾರಿ ಪೂವಿತಾ ಎಸ್, ಅಪರ ಜಿಲ್ಲಾಧಿಕಾರಿ ಶಿವನಂದ ಭಜಂತ್ರಿ, ಡಿವೈಎಸ್ಪಿ ಚಂದ್ರಶೇಖರ ನಾಯಕ ಭೇಟಿ ನೀಡಿ ಪರಿಶೀಲಿಸಿದರು.

Read More

ಯಾದಗಿರಿ: ಗಂಡ – ಹೆಂಡತಿ ಜಗಳ ಕೋಪದಲ್ಲಿ ಇಬ್ಬರು ಮಕ್ಕಳನ್ನು ತಂದೆ ಕಾಲುವೆಗೆ ಎಸೆದ ಘಟನೆ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಗೋಗಿ ಗ್ರಾಮದ ಬಳಿಯ ಕಾಲುವೆಯಲ್ಲಿ ನಡೆದಿದೆ. ಗಂಗನಾಳ್ ಗ್ರಾಮದ ಶಾಂತಪ್ಪ ಬಿರಾದಾರ್ ಎಂಬ ಪಾಪಿ ತಂದೆಯಿಂದ ದುಷ್ಕೃತ್ಯ ನಡೆದಿದೆ. ಮೂವರು ಮಕ್ಕಳನ್ನು ಬೈಕ್‌ನಲ್ಲಿ ಕೂರಿಸಿಕೊಂಡು ಶಾಂತಪ್ಪ ಮನೆಯಿಂದ ಹೊರಟಿದ್ದರು. ಸಾನ್ವಿ (9) ಹಾಗೂ ಸೃಜನ್ (2) ಸಾವಿಗೀಡಾದ ಇಬ್ಬರು ಮಕ್ಕಳು. ಮತ್ತೊಬ್ಬ ಮಗಳನ್ನು ತಾಯಿ ಆಶ್ರಯಕ್ಕೆ ಶಾಂತಪ್ಪ ಒಪ್ಪಿಸಿದ್ದರು. ಕೌಟುಂಬಿಕ ಕಲಹದಿಂದ ಇಬ್ಬರು ಮಕ್ಕಳನ್ನು ಮಕ್ಕಳನ್ನು ಎಸೆದಿರುವುದಾಗಿ ಪೊಲೀಸರ ಮುಂದೆ ಹೇಳಿಕೆ ನೀಡಿದ್ದಾರೆ. ಕಾಲುವೆಯಲ್ಲಿ ಮೃತಪಟ್ಟ ಮಕ್ಕಳಿಗಾಗಿ ತೀವ್ರ ಶೋಧ ಮಾಡಿ ಪೋಲಿಸರು ಶವ ಹೊರಗೆ ತೆಗೆದಿದ್ದಾರೆ. ಗೋಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೌಟುಂಬಿಕ ಕಲಹವೇ ಕೃತ್ಯಕ್ಕೆ ಕಾರಣ ಎಂಬ ಶಂಕೆ ವ್ಯಕ್ತವಾಗಿದೆ. ಘಟನೆ ಕುರಿತು ಗೋಗಿ ಪೊಲೀಸರಿಂದ ತನಿಖೆ ಮುಂದುವರೆದಿದೆ. ಸಿಪಿಐ ದೀಪಕ್ ಬೂಸರೆಡ್ಡಿ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ.

Read More