Author: admin

ಬಂಟ್ವಾಳ: ಬಂಟ್ವಾಳ ಪಟ್ಟಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 16 ವರ್ಷದ ಅಪ್ರಾಪ್ತ ಬಾಲಕಿಯನ್ನು 47 ವರ್ಷದ ಅಪರಿಚಿತ ವ್ಯಕ್ತಿ ಹಿಂಬಾಲಿಸಿದ ಆರೋಪದ ಮೇಲೆ ಬಂಟ್ವಾಳ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಾಲಕಿಯ ತಾಯಿ ನೀಡಿದ ದೂರಿನ ಪ್ರಕಾರ, ಕಳೆದ ಕೆಲವು ದಿನಗಳಿಂದ ಬಾಲಕಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ಅಪರಿಚಿತ ಮಧ್ಯವಯಸ್ಕ ವ್ಯಕ್ತಿಯೊಬ್ಬ ಆಕೆಯನ್ನು ಹಿಂಬಾಲಿಸುತ್ತಿದ್ದ. ಆಗಸ್ಟ್ 19, 2026 ರ ಸಂಜೆ ಬಾಲಕಿ ಕಲ್ಲಡ್ಕ ಬಸ್ ನಿಲ್ದಾಣಕ್ಕೆ ಬಂದಾಗ, ಅದೇ ಅಪರಿಚಿತ ವ್ಯಕ್ತಿ ಆಕೆಯನ್ನು ಗಮನಿಸುತ್ತಿದ್ದ ಎನ್ನಲಾಗಿದೆ. ಇದರಿಂದ ಭಯಗೊಂಡ ಬಾಲಕಿ ತಾಯಿ ಕೆಲಸ ಮಾಡುತ್ತಿದ್ದಲ್ಲಿಗೆ ಹೋಗಿ ತಿಳಿಸಿದ್ದಾಳೆ. ಬಳಿಕ ದೂರುದಾರರು ತನ್ನ ಕಛೇರಿಯ ಮಾಲಿಕರೊಂದಿಗೆ ಬಸ್ ನಿಲ್ದಾಣದ ಬಳಿ ಬಂದಾಗ ಅಪರಿಚಿತ ವ್ಯಕ್ತಿ ಅಲ್ಲಿದ್ದ ಎನ್ನಲಾಗಿದೆ. ಆತನನ್ನು ವಿಚಾರಿಸಿದಾಗ ತನ್ನ ಹೆಸರು ಜಯಂತ್ ಎಂಬುದಾಗಿ ತಿಳಿಸಿ ತೆರಳಿದ್ದಾನೆ. ದೂರಿನ ಆಧಾರದ ಮೇಲೆ, ಬಂಟ್ವಾಳ ಪಟ್ಟಣ ಪೊಲೀಸರು ಅಪರಾಧ ಸಂಖ್ಯೆ 116/2026 ರ ಅಡಿಯಲ್ಲಿ ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್), 2023…

Read More

ಬೆಂಗಳೂರು: ಬೃಹತ್ ನಕಲಿ ಔಷಧಿ ಜಾಲ ಪತ್ತೆಯಾದ ಪ್ರಕರಣ ಸಂಬಂಧ, ಕ್ಯಾನ್ಸರ್‌ನಂತಹ ಮಾರಕ ರೋಗಗಳಿಗೆ ನಕಲಿ ಔಷಧಿಗಳನ್ನು ಮಾರಾಟ ಮಾಡುತ್ತಿದ್ದ ಕಿಂಗ್‌ಪಿನ್ ಪ್ರಶಾಂತ್‌ಗಾಗಿ ಪೊಲೀಸರು ತೀವ್ರ ಶೋಧ ನಡೆಸುತ್ತಿದ್ದಾರೆ. ಆತ ಇದುವರೆಗೂ 40,000ಕ್ಕೂ ಹೆಚ್ಚು ನಕಲಿ ಕ್ಯಾನ್ಸರ್ ಔಷಧ ಬಾಟಲಿಗಳನ್ನು ಮಾರಾಟ ಮಾಡಿರುವ ಅಂದಾಜಿದೆ. ಈ ಪ್ರಕರಣದ ಗಂಭೀರತೆ ಅರಿತು ರಾಜ್ಯ ಸರ್ಕಾರವು ಹಿರಿಯ ಐಪಿಎಸ್ ಅಧಿಕಾರಿ ವಂಶಿಕೃಷ್ಣ ನೇತೃತ್ವದಲ್ಲಿ ವಿಶೇಷ ತನಿಖಾ ದಳ (ಎಸ್‌ಐಟಿ) ರಚಿಸಿದೆ. ಪ್ರಶಾಂತ್‌ನ ಪತ್ನಿ ಮತ್ತು ಸಂಬಂಧಿಕರನ್ನು ವಿಚಾರಣೆ ನಡೆಸಲಾಗಿದ್ದು, ಆತ ವಿದೇಶದಲ್ಲಿದ್ದಾನೆ ಎಂದು ಪತ್ನಿ ಹೇಳಿದ್ದಾರೆ. ಆದರೆ, ಭಾರತದಲ್ಲೇ ಇರುವ ಬಗ್ಗೆ ಪೊಲೀಸರಿಗೆ ಅನುಮಾನವಿದೆ. ಆರೋಪಿಯ ಪತ್ತೆಗೆ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ. ರಾಮನಗರದ ತೋಟದ ಮನೆಯಲ್ಲಿ ನಕಲಿ ಔಷಧಿಗಳನ್ನು ತಯಾರಿಸಿ, ಅಮೆರಿಕಾ ಮೂಲದ ಕಂಪನಿಗಳ ಲೇಬಲ್ ಹಚ್ಚಿ ಮಾರಾಟ ಮಾಡುತ್ತಿದ್ದರು. ಈಗಾಗಲೇ ನಾಲ್ಕು ಜನ ಆರೋಪಿಗಳನ್ನು ಬಂಧಿಸಲಾಗಿದೆ.

Read More

ಜೈಪುರ್​: ನೀಟ್​ ಪ್ರತಿಭಟನೆ ಯಶಸ್ಸಿನ ನಂತರ ಕಾಕ್ರೋಚ್​ ಜನತಾ ಪಾರ್ಟಿ ಸರ್ಕಾರಿ ಶಾಲೆಗಳಲ್ಲಿನ ಅವ್ಯವಸ್ಥೆಯನ್ನು ಗುರಿಯಾಗಿಸಿಕೊಂಡು ಸರ್ಕಾರಿ ಶಾಲೆಗಳನ್ನು ಸರಿಪಡಿಸಿ ಎಂಬ ಅಭಿಯಾನವನ್ನು ಆರಂಭಿಸಿದ್ದಾರೆ. ಈ ಅಭಿಯಯಾನದ ಭಾಗವಾಗಿ ಸಿಜೆಪಿ ವಕ್ತಾರ, ಆಶುತೋಷ್​ ರಾಂಕಾ ನೇತೃತ್ವದಲ್ಲಿ ಜೈಪುರದ, ರಾಮಪುರದ ಶಾಲೆಯೊಂದಕ್ಕೆ ಬೇಟಿ ನೀಡಲು ಮುಂದಾದಾಗ ಸ್ಥಳೀಯರು ಮತ್ತು ಸಿಜೆಪಿ ಕಾರ್ಯಕರ್ತ ರ ನಡುವೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.  ಸರ್ಕಾರಿ ಶಾಲೆಗಳನ್ನು ಸರಿಪಡಿಸಿ ಎಂಬ ಅಭಿಯಾನದ ಅಂಗವಾಗಿ, ಆಶುತೋಷ್​ ರಾಂಕಾ ನೇತೃತ್ವದಲ್ಲಿ ಸಿಜೆಪಿ ಕಾರ್ಯಕರ್ತರು ರಾಮಪುರದ ಶಾಲೆಗೆ ಬೇಟಿ ನೀಡಲು ಮುಂದಾಗಿದ್ದಾರೆ. ಈ ಸಮಯದಲ್ಲಿ ಸ್ಥಳೀಯ ನಿವಾಸಿಗಳೊಂದಿಗೆ ವಾಗ್ವಾದ ಪ್ರಾರಂಭವಾಗಿದೆ. ನಂತರ ಈ ಮಾತಿನ ಚಕಮಕಿ, ಕೈ-ಕೈ ಮಿಲಾಯಿಸುವ ಮಟ್ಟಿಗೆ ಹೋಗಿದ್ದು, ಊರ ನಾಗರಿಕರು ಸಿಜೆಪಿ ಕಾರ್ಯಕರ್ತರನ್ನುಅಟ್ಟಾಡಿಸಿ ಹೊಡೆದಿದ್ದಾರೆ. ಅಂತೆಯೇ ನಮ್ಮ ಮೇಲೆ ಊರಿನ ಜನ ಕಲ್ಲು ತೂರಿದ್ದಾರೆ ಹಾಗೂ ನಮ್ಮ ಕಾರುಗಳನ್ನು ಜಕಂ ಮಾಡಿದ್ದಾಗಿ ಕಾಕ್ರೋಚ್​ ಕಾರ್ಯಕರ್ತರು ಆರೋಪಿಸಿದ್ದಾರೆ. ಇವರೆಲ್ಲಾ ಬಿಜೆಪಿ ಗೂಂಡಾಗಳು! ಈ ಘಟನೆ ಬಗ್ಗೆ ಮಾತನಾಡಿರುವ ಆಶುತೋಷ್​ ರಾಂಕಾ,…

Read More

ಚಿತ್ರದುರ್ಗ: ಬೆಂಗಳೂರಿಂದ ಗೋವಾಕ್ಕೆ ತೆರಳುತ್ತಿದ್ದ ಖಾಸಗಿ ಟೂರಿಸ್ಟ್‌ ಬಸ್‌ ಹಿರಿಯೂರು ತಾಲೂಕಿನ ಐಮಂಗಲ ಬಳಿ ಪಲ್ಟಿಯಾಗಿದ್ದು , ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರನ್ನು ಬಸ್ ಚಾಲಕ ಗುರುಪ್ರಸಾದ್ ಹಾಗೂ ಕ್ಲೀನರ್ ಶಂಕರ್ ಎಂದು ಗುರುತಿಸಲಾಗಿದೆ. ಓರ್ವ ಪ್ರಯಾಣಿಕನ ಸ್ಥಿತಿ ಗಂಭೀರವಾಗಿದೆ. ಐಮಂಗಲ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದೆ. ರಸ್ತೆಯ ಎಡ ಭಾಗದ ಟ್ರೆಂಚ್‌ಗೆ ಬಸ್‌ ಬಿದ್ದಿದ್ದು, ಬಸ್‌ನ ಮುಂಭಾಗ ಜಖಂ ಆಗಿದೆ. ಈ ಅಪಘಾತದಲ್ಲಿ 20 ಮಂದಿ ಗಾಯಗೊಂಡಿದ್ದು, ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಐಲ್ಯಾಂಡ್ ಬಸ್ ಬೆಂಗಳೂರಿನಿಂದ ಗೋವಾಕ್ಕೆ ತೆರಳುತಿತ್ತು. ಬಸ್‌ನಲ್ಲಿ 53 ಜನರು ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ. ಐಮಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಅಪಘಾತ ಸಂಭವಿಸಿದೆ. ಬಸ್‌ನಲ್ಲಿದ್ದ ಪ್ರಯಾಣಿಕರೆಲ್ಲರೂ ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯ ಅರಿಕೆರೆ ಬಳಿಕ ಖಾಸಗಿ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿನಿಯರು ಎಂದು ತಿಳಿದು ಬಂದಿದೆ. ಕೇರಳ ಮೂಲದ ವಿದ್ಯಾರ್ಥಿನಿಯರು ಗೋವಾ ಪ್ರವಾಸಕ್ಕೆ ತೆರಳಿ, ಬೆಂಗಳೂರಿಗೆ ವಾಪಸ್ಸಾಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ನಿದ್ದೆ ಮಂಪರಿನಲ್ಲಿ ಬಸ್…

Read More

ಮುಂಬೈ: ಮಹಾರಾಷ್ಟ್ರದ ಲಾತೂರ್ ಜಿಲ್ಲೆಯ ಔಸಾ ಪ್ರದೇಶದಲ್ಲಿರುವ ಸರ್ಕಾರಿ ಶಾಲೆಯೊಂದಕ್ಕೆ ಕಾಕ್ರೋಚ್ ಜನತಾ ಪಕ್ಷದ ಸಂಸ್ಥಾಪಕ ಅಭಿಜೀತ್ ದೀಪ್ಕೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಶಾಲೆಯ ನಿರ್ವಹಣೆ ಕುರಿತು ಗಂಭೀರ ಆರೋಪಗಳನ್ನು ಮಾಡಿದ್ದಾರೆ. ‘ಸ್ಕೂಲ್ ಠೀಕ್ ಕರೋ’ ಸಾಮಾಜಿಕ ಅಭಿಯಾನದ ಭಾಗವಾಗಿ ಶಾಲೆಗೆ ಭೇಟಿ ನೀಡಿದ ದೀಪ್ಕೆ, ಶಾಲಾ ತರಗತಿಗಳಲ್ಲಿ ಹಾಜರಾತಿ ಹೆಚ್ಚಾಗಿ ತೋರಿಸಲು ಇತರ ಶಾಲೆಗಳಿಂದ ವಿದ್ಯಾರ್ಥಿಗಳನ್ನು ಕರೆತಂದು ಕೂರಿಸಲಾಗಿದೆ ಎಂದು ಆರೋಪಿಸಿದ್ದಾರೆ. ಈ ಕುರಿತು ವಿಡಿಯೋ ಸಂವಾದದಲ್ಲಿ ಕೆಲವು ಮಕ್ಕಳು ತಾವು ಈ ಶಾಲೆಯ ವಿದ್ಯಾರ್ಥಿಗಳಲ್ಲ ಎಂದು ಹೇಳಿರುವುದು ದಾಖಲಾಗಿದೆ ಎಂದು ಅವರು ತಿಳಿಸಿದ್ದಾರೆ. ಶಾಲಾ ಆವರಣದಲ್ಲಿ ಮದ್ಯದ ಖಾಲಿ ಬಾಟಲಿಗಳು ಪತ್ತೆಯಾಗಿರುವುದನ್ನೂ ಅವರು ಪ್ರಶ್ನಿಸಿದ್ದು, ಶಾಲಾ ಪರಿಸರದಲ್ಲಿ ಅಕ್ರಮ ಚಟುವಟಿಕೆಗಳು ನಡೆಯುತ್ತಿರುವ ಸಾಧ್ಯತೆ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ. ಇದರ ಜೊತೆಗೆ ಶಾಲೆಯಲ್ಲಿ ಕುಡಿಯುವ ನೀರು ಮತ್ತು ಸಮರ್ಪಕ ಶೌಚಾಲಯ ವ್ಯವಸ್ಥೆ ಇಲ್ಲ ಎಂದು ಆರೋಪಿಸಿದ ದೀಪ್ಕೆ, ತಮ್ಮ ಭೇಟಿ ಬಗ್ಗೆ ಮಾಹಿತಿ ತಿಳಿದ ಬಳಿಕ ಪ್ರದರ್ಶನಕ್ಕಾಗಿ…

Read More

ಮಂಗಳೂರು: ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2020ರಲ್ಲಿ ದಾಖಲಾಗಿದ್ದ ಅಪ್ರಾಪ್ತ ವಯಸ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಮತ್ತು ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ 5 ವರ್ಷ ಜೈಲು, ₹35,000 ದಂಡ ವಿಧಿಸಿದ ಕೋರ್ಟ್ ಆದೇಶ ಹೊರಡಿಸಿದೆ. ಕಡಬ ತಾಲೂಕಿನ ಕುದ್ಮಾರು ನಿವಾಸಿ ಅಬ್ದುಲ್ಲಾ (64) ಎಂಬಾತನಿಗೆ ಮಂಗಳೂರಿನ 7ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 5 ವರ್ಷಗಳ ಸಾಧಾರಣ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ ತೀರ್ಪು ನೀಡಿದೆ. ಆರೋಪಿ ಅಬ್ದುಲ್ಲಾ ವಿರುದ್ಧ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಐಪಿಸಿ ಕಲಂ 354(A1), 506 ಹಾಗೂ ಪೋಕ್ಸೋ ಕಾಯ್ದೆಯ ಕಲಂ 8 ರ ಅಡಿಯಲ್ಲಿ (ಅ. ಕ್ರ : 12/2020) ಪ್ರಕರಣ ದಾಖಲಾಗಿತ್ತು. ಪ್ರಕರಣದ ಸುದೀರ್ಘ ವಿಚಾರಣೆ ನಡೆಸಿದ ಮಾನ್ಯ ನ್ಯಾಯಾಧೀಶರಾದ ಸುಮಂಗಲ ಚಕಲಬ್ಬಿ ಅವರು, ಆರೋಪಿಯ ಮೇಲಿನ ಅಪರಾಧ ಸಾಬೀತಾಗಿದೆ ಎಂದು ತೀರ್ಮಾನಿಸಿ ದೋಷಿ ಎಂದು ಘೋಷಿಸಿದ್ದಾರೆ. ನ್ಯಾಯಾಲಯವು ಆರೋಪಿಗೆ 5 ವರ್ಷಗಳ ಸಾಧಾರಣ ಕಾರಾಗೃಹ ವಾಸ ಮತ್ತು ₹35,000…

Read More

ನೆಡುಮಂಗಡ್ (ಕೇರಳ) : ಕೇರಳದ ನೆಡುಮಂಗಡ್‌ನಲ್ಲಿ ಒಂದೂವರೆ ವರ್ಷದ ಕಂದಮ್ಮ ಅರ್ಷಿತ್ ಮೇಲೆ ನಡೆದ ಭೀಕರ ಹಲ್ಲೆ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನ್ಯಾಯಾಲಯಕ್ಕೆ ಬೃಹತ್ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದಾರೆ. ಮಗುವಿನ ಹೆತ್ತ ತಾಯಿ ಅಖಿಲಾ ಚಂದ್ರನ್ ಹಾಗೂ ಆಕೆಯ ಲಿವ್-ಇನ್ ಪಾರ್ಟ್‌ಫರ್ ಎ. ಅಶ್ಕರ್ ಈ ಭೀಕರ ಕೃತ್ಯದ ಪ್ರಮುಖ ಆರೋಪಿಗಳಾಗಿದ್ದಾರೆ. ಆರೋಪಿಗಳನ್ನು ಬಂಧಿಸಿದ 83 ನೇ ದಿನದಂದು ನೆಡುಮಂಗಾಡ್ ಉಪ ಪೊಲೀಸ್ ವರಿಷ್ಠಾಧಿಕಾರಿ (DySP) ಟಿ. ಬಿನುಕುಮಾರ್ ಅವರು ನೆಡುಮಂಗಾಡ್ ಎಸ್‌ಸಿ/ಎಸ್‌ಟಿ ವಿಶೇಷ ನ್ಯಾಯಾಲಯಕ್ಕೆ 210 ಪುಟಗಳ ಸುದೀರ್ಘ ದೋಷಾರೋಪಣಾ ಪಟ್ಟಿಯನ್ನು ಸಲ್ಲಿಸಿದ್ದಾರೆ. ಆರೋಪಪಟ್ಟಿಯಲ್ಲಿ ಉಲ್ಲೇಖಿಸಲಾದ ವಿವರಗಳು ಕರುಳು ಹಿಂಡುವಂತಿವೆ. ಒಂದೂವರೆ ವರ್ಷದ ಮಗುವಿನ ದೇಹದ ಮೇಲೆ ಬರೋಬ್ಬರಿ 96 ಗಾಯ ಗುರುತುಗಳು ಪತ್ತೆಯಾಗಿದ್ದು, ಇವು ಬೇರೆ ಬೇರೆ ಸಮಯದಲ್ಲಿ ಉಂಟಾದ ಗಾಯಗಳಾಗಿವೆ. ಮಗುವನ್ನು ಗೋಡೆಗೆ ಅಪ್ಪಳಿಸುವುದು, ಸಿಗರೇಟ್ ಲೈಟರ್‌ನಿಂದ ಮಗುವಿನ ಕಾಲುಗಳನ್ನು ಸುಡುವುದು ಸೇರಿದಂತೆ ಅತ್ಯಂತ ಅಮಾನವೀಯ ರೀತಿಯಲ್ಲಿ ಕಿರುಕುಳ ನೀಡಲಾಗಿದೆ. ತಲೆಗೆ ಬಲವಾದ ಪೆಟ್ಟು…

Read More

ಬೆಂಗಳೂರು: ಕಾರಿನಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 9 ಕೋಟಿ ರೂಪಾಯಿ ನಗದನ್ನು ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ಜಪ್ತಿ ಮಾಡಿದ್ದಾರೆ. ಆಗಸ್ಟ್ 18ರಂದು ಎಲೆಕ್ಟ್ರಾನಿಕ್ ಸಿಟಿಯ ವೀರಸಂದ್ರ ಸಿಗ್ನಲ್ ಬಳಿ ಈ ಕಾರ್ಯಾಚರಣೆ ನಡೆದಿದ್ದು, ಐಟಿ ಅಧಿಕಾರಿಗಳಿಂದ ಬಂದ ಖಚಿತ ಮಾಹಿತಿ ಆಧರಿಸಿ ಪೊಲೀಸರು ವಾಹನವನ್ನು ತಡೆದು ಪರಿಶೀಲನೆ ನಡೆಸಿದ್ದರು. ತಪಾಸಣೆ ವೇಳೆ ಸೂಕ್ತ ದಾಖಲೆಗಳಿಲ್ಲದೆ ಸಾಗಿಸುತ್ತಿದ್ದ ಭಾರಿ ಪ್ರಮಾಣದ ನಗದು ಪತ್ತೆಯಾಗಿದೆ. ಪೊಲೀಸರು ಹಣ ಹಾಗೂ ಕಾರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ, ನಗದು ತಮಿಳುನಾಡಿನ ತೂತುಕುಡಿಯ ಸಿಂಧು ಜ್ಯುವೆಲ್ಲರ್ಸ್ ಮಾಲೀಕ ಸಚಿನ್‌ಗೆ ಸೇರಿದ್ದು ಎಂಬ ಮಾಹಿತಿ ಲಭ್ಯವಾಗಿದೆ. ಬಳಿಕ ಸಚಿನ್‌ನನ್ನು ಪೊಲೀಸರು ಆದಾಯ ತೆರಿಗೆ ಅಧಿಕಾರಿಗಳಿಗೆ ಹಸ್ತಾಂತರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಐಟಿ ಅಧಿಕಾರಿಗಳು ಸಚಿನ್ ನಿವಾಸದಲ್ಲೂ ಪರಿಶೀಲನೆ ನಡೆಸಿದ್ದು, ಅಲ್ಲಿ 1.3 ಕೋಟಿ ರೂ. ನಗದು ಪತ್ತೆಯಾಗಿದೆ. ಜಪ್ತಿಯಾದ 9 ಕೋಟಿ ರೂ. ಹಾಗೂ ಮನೆಯಲ್ಲಿ ಸಿಕ್ಕ 1.3 ಕೋಟಿ ರೂ. ಹಣಕ್ಕೆ ಸಂಬಂಧಿಸಿದ ದಾಖಲೆಗಳನ್ನು ಐಟಿ ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ. ಹಣದ…

Read More

ಹೈದರಾಬಾದ್: ತೆಲಂಗಾಣ ರಾಜಧಾನಿ ಹೈದರಾಬಾದ್‌ನ ಹೈಟೆಕ್ ಸಿಟಿ ಮಾಧಾಪುರ ಪ್ರದೇಶದಲ್ಲಿ ಅತಿವೇಗವಾಗಿ ಬಂದ ಕೋಟ್ಯಂತರ ರೂಪಾಯಿ ಮೌಲ್ಯದ ‘ಆಸ್ಟನ್ ಮಾರ್ಟಿನ್’ ಐಷಾರಾಮಿ ಕಾರು ಡಿಕ್ಕಿಯಾಗಿ 26 ವರ್ಷದ ಶೋರೂಂ ಉದ್ಯೋಗಿ ಯುವತಿಯೊಬ್ಬರು ದುರಂತ ಅಂತ್ಯ ಕಂಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶದ ಜನಸೇನಾ ಪಕ್ಷದ ರಾಜ್ಯಸಭಾ ಸಂಸದ ಲಿಂಗಮನೇನಿ ರಮೇಶ್ ಅವರ 21 ವರ್ಷದ ಪುತ್ರ ಲಿಂಗಮನೇನಿ ಸಂಜುಶ್ ವಿರುದ್ಧ ಸೈಬರಾಬಾದ್ ಪೊಲೀಸರು ಅತಿವೇಗ ಹಾಗೂ ರಫ್ ಚಾಲನೆ ಆರೋಪದಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಒಡಿಶಾ ಮೂಲದ ಸಂತ್ರಸ್ತೆ ಭಾರತಿ ಮುಖಿ (26) ಇನಾರ್ಬಿಟ್ ಮಾಲ್‌ನಲ್ಲಿರುವ ಲೈಫ್‌ಸ್ಟೈಲ್ ಬಟ್ಟೆ ಮಳಿಗೆಯಲ್ಲಿ ಉದ್ಯೋಗಿಯಾಗಿದ್ದರು. ಆಗಸ್ಟ್ 16ರ ಭಾನುವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ತಮ್ಮ ಸಹೋದ್ಯೋಗಿ ಪೂಜಾ ಜೊತೆ ಊಟ ಮುಗಿಸಿ ಕೆಲಸದ ಸ್ಥಳಕ್ಕೆ ಹಿಂತಿರುಗುತ್ತಿದ್ದಾಗ ಮಾಲ್ ಮುಂಭಾಗ ರಸ್ತೆ ದಾಟುವಾಗ ಅತಿವೇಗದಲ್ಲಿ ಬಂದ ಆಸ್ಟನ್ ಮಾರ್ಟಿನ್ ಕಾರು ಇವರಿಗೆ ಭೀಕರವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ತಲೆಗೆ ತೀವ್ರ ಪೆಟ್ಟಾಗಿ ರಕ್ತಸ್ರಾವಗೊಂಡ ಭಾರತಿ ಅವರನ್ನು…

Read More

ಕೋಲಾರ: ಸಾಲಗಾರರ ಕಾಟದಿಂದ ತಪ್ಪಿಸಿಕೊಳ್ಳಲು ತನ್ನದೇ ಸಾವಿನ ನಾಟಕವಾಡಿ ಬರೋಬ್ಬರಿ 11 ವರ್ಷಗಳ ಕಾಲ ಪೊಲೀಸರಿಗೆ ಸಿಗದೆ ತಲೆಮರೆಸಿಕೊಂಡಿದ್ದ ವ್ಯಕ್ತಿಯೊಬ್ಬ ಕೊನೆಗೂ ಪೊಲೀಸರ ಬಲೆಗೆ ಬಿದ್ದಿದ್ದಾನೆ. ‘ದೃಶ್ಯಂ’ ಸಿನಿಮಾ ಮಾದರಿಯಲ್ಲಿ ತನ್ನ ಸಾವಿನ ಸನ್ನಿವೇಶ ಸೃಷ್ಟಿಸಿದ್ದ ಅರುಣ್ ಕುಮಾರ್ ರೆಡ್ಡಿಯನ್ನು ಕ್ಯಾಸಂಬಳ್ಳಿ ಪೊಲೀಸರು ಚೆನ್ನೈನಲ್ಲಿ ಬಂಧಿಸಿದ್ದಾರೆ. 2015ರ ಫೆಬ್ರವರಿ 9ರಂದು ಕೆಜಿಎಫ್ ತಾಲೂಕಿನ ಕ್ಯಾಸಂಬಳ್ಳಿ ಸಮೀಪ ಸುಟ್ಟ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿತ್ತು. ಸ್ಥಳದಲ್ಲಿ ಅರುಣ್ ಕುಮಾರ್ ರೆಡ್ಡಿಯ ಬೈಕ್ ಹಾಗೂ ಗುರುತಿನ ಚೀಟಿ ದೊರೆತಿದ್ದ ಹಿನ್ನೆಲೆಯಲ್ಲಿ, ಮೃತಪಟ್ಟ ವ್ಯಕ್ತಿ ಅರುಣ್ ಆಗಿರಬಹುದು ಎಂದು ಆರಂಭದಲ್ಲಿ ಪೊಲೀಸರು ಭಾವಿಸಿದ್ದರು. ಆದರೆ ಮರಣೋತ್ತರ ಪರೀಕ್ಷೆಯ ವರದಿ ಬಂದ ಬಳಿಕ ಪ್ರಕರಣಕ್ಕೆ ದೊಡ್ಡ ತಿರುವು ಸಿಕ್ಕಿತ್ತು. ಪತ್ತೆಯಾದ ಶವ ಅರುಣ್ ಕುಮಾರ್ ರೆಡ್ಡಿಯದ್ದಲ್ಲ ಎಂಬುದು ದೃಢಪಟ್ಟಿತ್ತು. ತನಿಖೆಯಲ್ಲಿ ಅರುಣ್ ಕುಮಾರ್ ರೆಡ್ಡಿಯೇ ತನ್ನ ಸಾವಿನ ನಾಟಕ ರೂಪಿಸಿದ್ದಾನೆ ಎಂಬುದು ಬೆಳಕಿಗೆ ಬಂದಿದೆ. ಸಾಲಗಾರರಿಂದ ತಪ್ಪಿಸಿಕೊಳ್ಳುವುದರ ಜೊತೆಗೆ ವಿಮೆ ಹಣ ಪಡೆಯುವ ಉದ್ದೇಶದಿಂದ ತಾನು…

Read More