Author: admin
ಮುಂಬೈ: ನಟ ಸುಶಾಂತ್ ಸಿಂಗ್ ರಜಪೂತ್ (ಮೃತ) ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಸಾವಿನ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಪ್ರಕರಣದ ತನಿಖೆಯನ್ನ ಸಿಬಿಐಗೆ (ಕೇಂದ್ರೀಯ ತನಿಖಾ ದಳ) ವಹಿಸುವಂತೆ ಬಾಂಬೆ ಹೈಕೋರ್ಟ್ ಆದೇಶ ನೀಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಪ್ರತ್ಯೇಕವಾಗಿ ಎಫ್‌ಐಆರ್ ದಾಖಲಿಸಿಕೊಂಡು ತನಿಖೆ ನಡೆಸುವಂತೆ ಕೋರ್ಟ್ ನಿರ್ದೇಶನ ನೀಡಿದೆ. ಏನಿದು ದಿಶಾ ಸಾಲಿಯಾನ್ ಕೇಸ್? ದಿಶಾ ಸಾಲಿಯಾನ್ 2020ರ ಜೂನ್ 8ರಂದು ಮೃತಪಟ್ಟಿದ್ದರು. ಇದಾದ ಕೆಲವೇ ದಿನಗಳ ಬಳಿಕ, ನಟ ಸುಶಾಂತ್ ಸಿಂಗ್ ರಜಪೂತ್ ಅವರು ಮುಂಬೈನ ಬಾಂದ್ರಾದ ನಿವಾಸದಲ್ಲಿ ಮೃತಪಟ್ಟಿದ್ದರು. ಈ ಎರಡು ಸಾವುಗಳ ನಡುವೆ ಸಂಬಂಧವಿದೆ ಎಂಬ ಹಲವು ಆರೋಪಗಳು ಮತ್ತು ಅನುಮಾನಗಳು ದಟ್ಟವಾಗಿದ್ದವು. ವಿಚಾರಣೆ ವೇಳೆ ಏನಾಯಿತು? ದಿಶಾ ಅವರ ತಂದೆ ಸತೀಶ್ ಸಾಲಿಯಾನ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ವೇಳೆ ಹೈಕೋರ್ಟ್ ಈ ಮಹತ್ವದ ನಿರ್ದೇಶನ ನೀಡಿದೆ. ಅರ್ಜಿದಾರರ ಪರ ವಕೀಲ ನಿಲೇಶ್ ಓಜಾ ಅವರು, ಸಿಬಿಐ ಸತೀಶ್ ಸಾಲಿಯಾನ್ ಅವರ ಹೇಳಿಕೆಯನ್ನು…
ಮಂಗಳೂರು:ಕರಂಬಾರು ಪೆಟ್ರೋಲ್ ಪಂಪ್ ಹತ್ತಿರ ಸೇತುವೆ ಕುಸಿದ ಹಿನ್ನಲೆ ಪ್ರಯಾಣಿಕರು ಪರ್ಯಾಯ ಮಾರ್ಗವನ್ನು ಬಳಸುವಂತೆ ಬಜಪೆ ಪೊಲೀಸ್ ರಾಣೆಯಿಂದ ಸಾರ್ವಜನಿಕರಿಗೆ ಸೂಚನೆ ನೀಡಲಾಗಿದೆ. ಮಂಗಳೂರು, ವಿಮಾನ ನಿಲ್ದಾಣ ಕಡೆಗೆ ಸಂಚರಿಸುವರು ಕಟೀಲು,ಬಜಪೆ, ಕೈಕಂಬ ಕಡೆಗೆ ಸಂಚರಿಸುವರು ಜರಿನಗರ ಅಥವಾ ಪೊರ್ಕೋಡಿ ರಸ್ತೆಯಾಗಿ ಸಂಚರಿಸುವುದು ಸೂಕ್ತ ಎಂದು ಮನವಿ ಮಾಡಲಾಗಿದೆ. ಪ್ರಯಾಣಿಕರು ಎಚ್ಚರಿಕೆಯಿಂದಿರಬೇಕು ಮತ್ತು ಅದಕ್ಕೆ ಅನುಗುಣವಾಗಿ ತಮ್ಮ ಮಾರ್ಗಗಳನ್ನು ಬಳಸಬೇಕು ಎಂದು ಕೋರಲಾಗಿದೆ.
ಲಕ್ನೋ: ಅಯೋಧ್ಯೆ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಸಿಇಓ ಆಗಿ ನಿವೃತ್ತ ಏರ್ ಮಾರ್ಷಲ್ ಜೀತೇಂದ್ರ ಮಿಶ್ರಾ ಅವರನ್ನು ನೇಮಕ ಮಾಡಲಾಗಿದೆ. ಸಿಇಓ ಆಗಿ ನೇಮಕ ಆಗಿರುವ ನಿವೃತ್ತ ಏರ್ ಮಾರ್ಷಲ್ ಜೀತೇಂದ್ರ ಮಿಶ್ರಾ ಅವರು ಆಪರೇಷನ್ ಸಿಂಧೂರದ ಸಮಯದಲ್ಲಿ ಪಶ್ಚಿಮ ವಾಯು ಕಮಾಂಡ್ ಮುಖ್ಯಸ್ಥರಾಗಿದ್ದರು. ಜೊತೆಗೆ ಅನುಭವಿ ಯುದ್ಧ ವಿಮಾನ ಪೈಲಟ್ ಆಗಿದ್ದಾರೆ. ಏರ್ ಮಾರ್ಷಲ್ ಜೀತೇಂದ್ರ ಮಿಶ್ರಾ ಅವರು ಭಾರತೀಯ ವಾಯುಪಡೆಯ ನಿವೃತ್ತ ಹಿರಿಯ ಅಧಿಕಾರಿಯಾಗಿದ್ದು, ವಾಯುಪಡೆಯ ಪಶ್ಚಿಮ ಕಮಾಂಡ್‌ನ ಏರ್ ಆಫೀಸರ್ ಕಮಾಂಡಿಂಗ್-ಇನ್-ಚೀಫ್ ಆಗಿ ಸೇವೆ ಸಲ್ಲಿಸಿದ್ದಾರೆ. ಸುಮಾರು 38 ವರ್ಷಗಳಿಗೂ ಅಧಿಕ ಅವಧಿಯ ವೃತ್ತಿ ಜೀವನದಲ್ಲಿ ಇವರು ವಾಯುಪಡೆಯಲ್ಲಿ ಹಲವು ಪ್ರಮುಖ ಆಡಳಿತ ಮತ್ತು ಕಮಾಂಡ್ ಹುದ್ದೆಗಳನ್ನು ಅಲಂಕರಿಸಿದ್ದಾರೆ. ಇವುಗಳಲ್ಲಿ ಫೈಟರ್ ಸ್ಕ್ವಾಡ್ರನ್‌ನ ಕಮಾಂಡಿಂಗ್ ಆಫೀಸರ್, ಏರ್‌ಕ್ರಾಫ್ಟ್ & ಸಿಸ್ಟಮ್ಸ್ ಟೆಸ್ಟಿಂಗ್ ಎಸ್ಟಾಬ್ಲಿಷ್ಮೆಂಟ್‌ನ (ASTE) ಮುಖ್ಯ ಪರೀಕ್ಷಾ ಪೈಲಟ್, ಎರಡು ವಾಯುನೆಲೆಗಳ ಏರ್ ಆಫೀಸರ್ ಕಮಾಂಡಿಂಗ್, ವಾಯುನೆಲೆ ಕಚೇರಿಯ ನಿರ್ದೇಶಕ, ಪ್ರಿನ್ಸಿಪಾಲ್ ಡೈರೆಕ್ಟರ್…
ಕೋಲಾರ: ಮಾಡಿಕೊಂಡಿದ್ದ ಕೈಸಾಲ ತೀರಿಸಲು ತಂದೆ ಹಣ ನೀಡಲಿಲ್ಲ ಎಂಬ ಕಾರಣಕ್ಕೆ ಕರುಳು ಹರಿದ ಮಗನೇ ತಂದೆಯನ್ನು ಕಬ್ಬಿಣದ ರಾಡ್‌ನಿಂದ ಭೀಕರವಾಗಿ ಹೊಡೆದು ಕೊಲೆ ಮಾಡಿರುವ ಘಟನೆ ಕೋಲಾರ ಜಿಲ್ಲೆಯ ಬಂಗಾರಪೇಟೆ ಪಟ್ಟಣದ ವಿಜಯನಗರ ಬಡಾವಣೆಯಲ್ಲಿ ನಡೆದಿದೆ. ಘಟನೆ ನಡೆದ 24 ಗಂಟೆಯೊಳಗೆ ಬಂಗಾರಪೇಟೆ ಪೊಲೀಸರು ಕೃತ್ಯದ ಬೆನ್ನತ್ತಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಗಾರಪೇಟೆಯ ವಿಜಯನಗರ ಬಡಾವಣೆಯ ನಿವಾಸಿ ವೆಂಕಟಕೃಷ್ಣ ಬಾಬು (70) ಕೊಲೆಯಾದ ದುರ್ದೈವಿ. ಮೃತ ವೆಂಕಟಕೃಷ್ಣ ಬಾಬು ಅವರಿಗೆ ಇಬ್ಬರು ಪುತ್ರರಿದ್ದು, ಹಿರಿಯ ಮಗ ಬೆಂಗಳೂರಿನಲ್ಲಿ ನೆಲೆಸಿದ್ದರೆ, ಕಿರಿಯ ಮಗ ಸೀಮೇಶ್ಕರ್ ತಂದೆಯೊಂದಿಗೆ ಬಂಗಾರಪೇಟೆಯಲ್ಲಿ ವಾಸವಾಗಿದ್ದ. ಸೀಮೇಶ್ಕರ್ ಸುಮಾರು 75 ಸಾವಿರ ರೂಪಾಯಿ ಕೈಸಾಲ ಮಾಡಿಕೊಂಡಿದ್ದು, ಅದನ್ನು ತೀರಿಸಲು ಹಣ ನೀಡುವಂತೆ ತಂದೆಯ ಬಳಿ ಪದೇಪದೇ ಒತ್ತಾಯಿಸುತ್ತಿದ್ದ ಎಂದು ತಿಳಿದುಬಂದಿದೆ. ಆಗಸ್ಟ್ 29ರ ರಾತ್ರಿ ಕೂಡ ಹಣದ ವಿಚಾರವಾಗಿ ತಂದೆ ಮತ್ತು ಮಗನ ನಡುವೆ ತೀವ್ರ ವಾಗ್ವಾದ ನಡೆದಿದೆ. ಮಾತಿಗೆ ಮಾತು ಬೆಳೆದು ಆಕ್ರೋಶಗೊಂಡ ಸೀಮೇಶ್ಕರ್, ಮನೆಯಲ್ಲಿದ್ದ ಕಬ್ಬಿಣದ…
ಅತ್ಯಂತ ಅಚ್ಚರಿ ಹಾಗೂ ಆಘಾತಕಾರಿ ಘಟನೆಯೊಂದು ನಡೆದಿದೆ. ಕಾಣೆಯಾಗಿದ್ದ 29 ವರ್ಷದ ಯುವಕನೊಬ್ಬ ಮೃತಪಟ್ಟಿದ್ದಾನೆ ಎಂದು ಭಾವಿಸಿ, ಆತನ ಕುಟುಂಬಸ್ಥರು ಗುರುತು ಸಿಗದ ಶವಕ್ಕೆ ಅಂತ್ಯಸಂಸ್ಕಾರ ನೆರವೇರಿಸಿ ತಿಂಗಳ ನಂತರ, ಆ ಯುವಕ ಸಜೀವವಾಗಿ ಮನೆಗೆ ಮರಳಿದ್ದಾನೆ. ಧೇಂಖನಾಲ್ ಜಿಲ್ಲೆಯ ಸನಾತನ ನಾಯಕ್ (29) ಎಂಬ ಯುವಕ ಕಳೆದ ಜುಲೈ 27 ರಂದು ಸೈಕಲ್‌ನಲ್ಲಿ ಮನೆಯಿಂದ ಹೊರಟು ಕಾಣೆಯಾಗಿದ್ದ. ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದ ಆತನಿಗಾಗಿ ಕುಟುಂಬಸ್ಥರು ಹುಡುಕಾಟ ನಡೆಸಿದ್ದರೂ ಆತ ಪತ್ತೆಯಾಗಿರಲಿಲ್ಲ. ಸುಮಾರು 10 ದಿನಗಳ ನಂತರ, ಹತ್ತಿರದ ಗದ್ದೆಯಲ್ಲಿ ಕೊಳೆತ ಸ್ಥಿತಿಯಲ್ಲಿದ್ದ ಅನಾಥ ಶವವೊಂದನ್ನು ಪೊಲೀಸರು ವಶಪಡಿಸಿಕೊಂಡಿದ್ದರು. ಶವದ ಮೇಲಿದ್ದ ಬಟ್ಟೆಗಳನ್ನು ಆಧರಿಸಿ, ಅದು ತಮ್ಮ ಮಗ ಸನಾತನ ನಾಯಕ್‌ನದ್ದೇ ಶವ ಎಂದು ಕುಟುಂಬಸ್ಥರು ಭಾವಿಸಿದ್ದರು.ಬಳಿಕ ಶವವನ್ನು ಪಡೆದು ಸಾಂಪ್ರದಾಯಿಕವಾಗಿ ಅಂತ್ಯಸಂಸ್ಕಾರ ನೆರವೇರಿಸಿ, ಉತ್ತರಕ್ರಿಯೆ (ಶುದ್ಧಿಕ್ರಿಯೆ) ವಿಧಿವಿಧಾನಗಳನ್ನೂ ಪೂರ್ಣಗೊಳಿಸಿದ್ದರು.ಆತನ ಹೆಂಡತಿಯೂ ವಿಧವೆಯ ಆಚಾರ-ವಿಚಾರಗಳನ್ನು ಪಾಲಿಸಲು ಪ್ರಾರಂಭಿಸಿದ್ದರು. ಘಟನೆ ನಡೆದು ಸುಮಾರು ಒಂದು ತಿಂಗಳ ನಂತರ, ಸನಾತನ ನಾಯಕ್ ಜೀವಂತವಾಗಿದ್ದಾನೆ ಎಂಬ…
ಬೆಂಗಳೂರಿನ ತಲಘಟ್ಟಪುರ ಪೊಲೀಸ್ ಠಾಣೆ ವ್ಯಾಪ್ತಿಯ ವಾಜರಹಳ್ಳಿಯಲ್ಲಿ ಮನಕಲಕುವ ಘಟನೆ ನಡೆದಿದೆ. ತನ್ನಿಬ್ಬರು ಅವಳಿ ಹೆಣ್ಣು ಮಕ್ಕಳನ್ನು ತಾಯಿ ಉಮಾದೇವಿ (42) ಉಸಿರುಗಟ್ಟಿಸಿ ಹತ್ಯೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ಬಳಿಕ ತಾನೂ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ತಾಯಿ ಉಮಾದೇವಿ ದಂಪತಿಗೆ ಮಕ್ಕಳಾಗದೇ ತೀವ್ರ ನೊಂದಿದ್ದರು. ಹೀಗಾಗಿ ಐವಿಎಫ್ ಚಿಕಿತ್ಸೆಯ ಮೂಲಕ ಅವರಿಗೆ ಅವಳಿ ಹೆಣ್ಣು ಮಕ್ಕಳು ಜನಿಸಿದ್ದರು. ಮಕ್ಕಳ ಜನನದ ನಂತರ ಉಮಾದೇವಿ ಅವರ ಮಾನಸಿಕ ಸ್ಥಿತಿಯಲ್ಲಿ ಸಮಸ್ಯೆ ಕಾಣಿಸಿಕೊಂಡಿತ್ತು ಎನ್ನಲಾಗಿದೆ. ಮಂಗಳವಾರ ಸಂಜೆ ಪತಿ ಕೆಲಸಕ್ಕೆ ತೆರಳಿದ್ದ ಸಂದರ್ಭದಲ್ಲಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ತಾಯಿ ಉಮಾದೇವಿ ಇಬ್ಬರು ಮಕ್ಕಳಿಗೆ ಉಸಿರುಗಟ್ಟಿಸಿ ಹತ್ಯೆ ಮಾಡಿ ಬಳಿಕ ತಾನೂ ಕೂಡ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಕೆಲಸ ಮುಗಿಸಿ ಮನೆಗೆ ಮರಳಿದ ಪತ್ನಿ ಆತ್ಮಹತ್ಯೆ ಮಾಡಿಕೊಳ್ಳುತಿರುವುದನ್ನು ಗಮನಿಸಿದ ಪತಿ ಕೂಡಲೇ ಆಕೆಯನ್ನು ರಕ್ಷಿಸಿದ್ದಾರೆ. ಆದರೆ ಇಬ್ಬರು ಪುಟ್ಟ ಮಕ್ಕಳು ಮೃತಪಟ್ಟಿದ್ದರು. ವಿಷಯ ತಿಳಿಯುತ್ತಿದ್ದಂತೆ ತಲಘಟ್ಟಪುರ ಪೊಲೀಸರು ಸ್ಥಳಕ್ಕೆ…
ಮಂಗಳೂರು: ಬಂಟ್ವಾಳ ತಾಲೂಕಿನ ಪೆರುವಾಯಿ ಗ್ರಾಮದ ಯತೀಶ್ ಎ. ವಿರುದ್ಧ ಕರ್ನಾಟಕ ಪೊಲೀಸ್ ಕಾಯ್ದೆಯ ಕಲಂ 55(ಎ), 55(ಬಿ) ಅಡಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಿಂದ ಹೊರ ಜಿಲ್ಲೆಗೆ ಗಡಿಪಾರು ಮಾಡುವಂತೆ ವಿಟ್ಲ ಪೊಲೀಸ್ ಠಾಣಾಧಿಕಾರಿ ಸಲ್ಲಿಸಿದ್ದ ಪ್ರಸ್ತಾವನೆಯನ್ನು ಸದ್ಯಕ್ಕೆ ಕೈಬಿಟ್ಟು ವಿಶೇಷ ಕಾರ್ಯನಿರ್ವಾಹಕ ದಂಡಾಧಿಕಾರಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಅರುಣ್ ಕೆ. ಐಪಿಎಸ್ ಆದೇಶ ಹೊರಡಿಸಿದ್ದಾರೆ. ಯತೀಶ್ ಪೆರುವಾಯಿ ವಿರುದ್ಧ ಕೆಲವು ತಿಂಗಳ ಹಿಂದೆ ಗಡಿಪಾರು ಶೋಕಾಸ್ ನೋಟೀಸ್ ಜಾರಿಯಾಗಿದ್ದು ಈ ಸಂಬಂಧ 2026ರ ಜುಲೈ 15ರಂದು ವಿಶೇಷ ಕಾರ್ಯನಿರ್ವಾಹಕ ದಂಡಾಧಿಕಾರಿ ಹಾಗೂ ಪೊಲೀಸ್ ಅಧೀಕ್ಷಕರ ನ್ಯಾಯಾಲಯದಲ್ಲಿ ವಿಚಾರಣೆ ನಿಗದಿಯಾಗಿತ್ತು. ಈ ಸಂದರ್ಭದಲ್ಲಿ ಯತೀಶ್ ಪೆರುವಾಯಿ ಅವರು ಸ್ವತಃ ನ್ಯಾಯಾಲಯಕ್ಕೆ ಹಾಜರಾಗಿ,ಯಾವುದೇ ವಕೀಲರನ್ನು ನೇಮಿಸಿಕೊಳ್ಳದೆ (Party-in-Person) ಆಗಿ ತಮ್ಮ ಪರವಾಗಿ ತಾವೇ ಆಕ್ಷೇಪಣೆ ಸಲ್ಲಿಸಿ ವಾದ ಮಂಡಿಸಲು ಅನುಮತಿ ಕೋರಿ ಮನವಿ ಸಲ್ಲಿಸಿದ್ದರು.ಸದರಿ ಮನವಿಯನ್ನು ಪರಿಗಣಿಸಿದ ಮಾನ್ಯ ನ್ಯಾಯಾಲಯವು, ಅವರಿಗೆ Party-in-Person ಆಗಿ ತಮ್ಮ ಪರವಾಗಿ…
ವಿಜಯಪುರ: ವಿಜಯಪುರ ಜಿಲ್ಲೆಯಲ್ಲಿ ತಡರಾತ್ರಿ ಎಟಿಎಂ ಮಷಿನ್ ಹೊತ್ತೊಯ್ದ ಘಟನೆ ನಡೆದಿದೆ. ನಿಡಗುಂದಿ ತಾಲೂಕಿನ ಗೊಳಸಂಗಿ ಗ್ರಾಮದಲ್ಲಿ ಕೆನರಾ ಬ್ಯಾಂಕ್‌ಗೆ ಸೇರಿದ ATM ಮಷಿನ್‌ನ್ನೇ ಕಳ್ಳರು ಕದ್ದೊಯ್ದಿದ್ದಾರೆ ಎಂದು ತಿಳಿದುಬಂದಿದೆ. ತಡರಾತ್ರಿ ಮುಸುಕು ಧರಿಸಿಕೊಂಡು ಬಂದ ಕಳ್ಳರು ATM ಕೇಂದ್ರವನ್ನು ಗುರಿಯಾಗಿಸಿಕೊಂಡಿದ್ದಾರೆ. ಬಳಿಕ ATM ಮಷಿನ್‌ನ್ನೇ ಕಳ್ಳತನ ಮಾಡಿ ಸ್ಥಳದಿಂದ ಪರಾರಿಯಾಗಿದ್ದಾರೆ ಎನ್ನಲಾಗಿದೆ. ಕಳ್ಳತನವಾಗಿರುವ ATM ಮಷಿನ್‌ನಲ್ಲಿ ಲಕ್ಷಾಂತರ ರೂಪಾಯಿ ನಗದು ಇದ್ದಿರಬಹುದು ಎಂದು ಶಂಕಿಸಲಾಗಿದೆ. ಆದರೆ ATMನಲ್ಲಿ ನಿಖರವಾಗಿ ಎಷ್ಟು ಹಣ ಇತ್ತು ಎಂಬುದು ಪೊಲೀಸ್ ತನಿಖೆಯ ಬಳಿಕವಷ್ಟೇ ಸ್ಪಷ್ಟವಾಗಲಿದೆ. ಕಳ್ಳರು ATM ಮಷಿನ್‌ನ್ನೇ ಹೊತ್ತೊಯ್ದಿರುವ ಹಿನ್ನೆಲೆಯಲ್ಲಿ, ಕೃತ್ಯ ಪೂರ್ವಯೋಜಿತವಾಗಿರಬಹುದೇ ಎಂಬ ಬಗ್ಗೆಯೂ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಘಟನೆ ಬೆಳಕಿಗೆ ಬರುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ATM ಕೇಂದ್ರದ ಸುತ್ತಮುತ್ತಲಿನ ಪ್ರದೇಶ ಹಾಗೂ ಲಭ್ಯವಿರುವ ಸಾಕ್ಷ್ಯಗಳನ್ನು ಪರಿಶೀಲಿಸಲಾಗುತ್ತಿದೆ. ಘಟನಾ ಸ್ಥಳದ ಸಿಸಿಟಿವಿ ದೃಶ್ಯಗಳು ಲಭ್ಯವಿದ್ದರೆ ಅವುಗಳನ್ನು ಪರಿಶೀಲಿಸಿ ಕಳ್ಳರ ಚಲನವಲನ ಪತ್ತೆಹಚ್ಚುವ ಪ್ರಯತ್ನ ನಡೆಯುವ ಸಾಧ್ಯತೆಯಿದೆ.…
ಮಂಗಳೂರು: ಕುತ್ತಾರು ಜಂಕ್ಷನ್‌ನ ವೃತ್ತದ ನಾಮಕರಣ ವಿಚಾರವಾಗಿ ಕೆಲಕಾಲದಿಂದ ವಿವಾದಕ್ಕೆ ಕಾರಣವಾಗಿದ್ದ ವಿಷಯಕ್ಕೆ ಇದೀಗ ತೆರೆ ಬಿದ್ದಿದೆ. ಕುತ್ತಾರು ಜಂಕ್ಷನ್‌ನಲ್ಲಿ ನಿರ್ಮಿಸಲಾಗಿರುವ ನೂತನ ‘ಸೌಹಾರ್ದ ವೃತ್ತ’ವನ್ನು ಆರೋಗ್ಯ ಸಚಿವ ಯು.ಟಿ. ಖಾದರ್ ಮಂಗಳವಾರ ರಾತ್ರಿ ಲೋಕಾರ್ಪಣೆ ಮಾಡಿದರು. ನೂತನ ವೃತ್ತದ ಮುಕುಟದಲ್ಲಿ ಕೊರಗಜ್ಜನ ಮುಟ್ಟಾಲೆ ಹಾಗೂ ದಂಟೆಯ ಪ್ರತಿಕೃತಿಯನ್ನು ಅಳವಡಿಸಲಾಗಿದ್ದು, ಕರಾವಳಿಯ ಸಾಂಸ್ಕೃತಿಕ ಪರಂಪರೆಯನ್ನು ಪ್ರತಿಬಿಂಬಿಸುವ ರೀತಿಯಲ್ಲಿ ವೃತ್ತವನ್ನು ವಿನ್ಯಾಸಗೊಳಿಸಲಾಗಿದೆ. ವೃತ್ತದಲ್ಲಿ ಕೊರಗಜ್ಜನ ಆದಿಕ್ಷೇತ್ರ, ರಾಣಿಪುರ ಚರ್ಚ್ ಹಾಗೂ ಕುಂಡೂರು ಜುಮಾ ಮಸೀದಿಗೆ ತೆರಳುವ ಮಾರ್ಗಗಳ ಕುರಿತು ಮಾರ್ಗಸೂಚಿ ಫಲಕಗಳನ್ನು ಅಳವಡಿಸಲಾಗಿದೆ. ಈ ಮೂಲಕ ವಿವಿಧ ಧರ್ಮಗಳ ಹಾಗೂ ಸಮುದಾಯಗಳ ನಡುವೆ ಸೌಹಾರ್ದದ ಸಂದೇಶ ಸಾರುವ ಉದ್ದೇಶವನ್ನು ಹೊಂದಲಾಗಿದೆ. ‘ಧಾರ್ಮಿಕ ನಂಬಿಕೆಗಳು ದೌರ್ಬಲ್ಯವಲ್ಲ’ ವೃತ್ತವನ್ನು ಉದ್ಘಾಟಿಸಿ ಮಾತನಾಡಿದ ಸಚಿವ ಯು.ಟಿ. ಖಾದರ್, ಧಾರ್ಮಿಕ ನಂಬಿಕೆಗಳು ದೌರ್ಬಲ್ಯವಲ್ಲ, ಈ ಮಣ್ಣಿನ ಶಕ್ತಿ ಎಂದು ಹೇಳಿದರು. ಎಲ್ಲ ಧರ್ಮಗಳ ಸಂದೇಶವೂ ಇನ್ನೊಬ್ಬರ ದೇಹದ ಗಾಯ ಹಾಗೂ ಮನಸ್ಸಿನ ನೋವನ್ನು ಗುಣಪಡಿಸುವ ಔಷಧಿಯಂತಿರಬೇಕು ಎಂದು ಅವರು…
ಬೆಳ್ತಂಗಡಿ: ಪಣಕಜೆ ಮಸೀದಿ ಸಮೀಪ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯುವಕನೊಬ್ಬ ಚಿಕಿತ್ಸೆಗೆ ಸ್ಪಂದಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಮಂಗಳವಾರ ಸಂಜೆ ನಡೆದಿದೆ. ಮೃತ ಯುವಕನನ್ನು ಉಜಿರೆ ನಿವಾಸಿ ರಿನ್ಸ್ ಶಿಬಿ (24) ಎಂದು ಗುರುತಿಸಲಾಗಿದೆ. ಮಂಗಳವಾರ ಸಂಜೆ ಪಣಕಜೆ ಮಸೀದಿ ಬಳಿ ತೆರಳುತ್ತಿದ್ದಾಗ ಟೆಂಪೋಗೆ ರಿನ್ಸ್ ಚಲಾಯಿಸುತ್ತಿದ್ದ ಬೈಕ್ ಹಿಂಬದಿಯಿಂದ ಢಿಕ್ಕಿಯಾಗಿದೆ. ಢಿಕ್ಕಿಯ ರಭಸಕ್ಕೆ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ರಿನ್ಸ್‌ನನ್ನು ತಕ್ಷಣವೇ ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ. ಮೃತ ರಿನ್ಸ್ ಶಿಬಿ ಅವರು ಕಾಂಗ್ರೆಸ್ ಪಕ್ಷದ ಸಕ್ರಿಯ ಕಾರ್ಯಕರ್ತನಾಗಿದ್ದು, ಪಕ್ಷದಲ್ಲಿ ವಿವಿಧ ಜವಾಬ್ದಾರಿಗಳನ್ನು ವಹಿಸಿಕೊಂಡಿದ್ದರು ಎಂದು ತಿಳಿದುಬಂದಿದೆ. ಘಟನೆಗೆ ಸಂಬಂಧಿಸಿದಂತೆ ಪೂಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.



