Author: admin

ಲಕ್ನೋ : ಕೌಟುಂಬಿಕ ಕಲಹ ಹಾಗೂ ದಾಂಪತ್ಯ ವಿವಾದದ ಹಿನ್ನೆಲೆಯಲ್ಲಿ ಎಸ್‌ಬಿಐ ಉದ್ಯೋಗಿಯೊಬ್ಬರು ಬ್ಯಾಂಕ್‌ ಅಧಿಕಾರಿಯಾಗಿದ್ದ ತಮ್ಮ ಪತ್ನಿಯನ್ನು ಕಚೇರಿ ಮುಂಭಾಗದಲ್ಲೇ ಗುಂಡಿಕ್ಕಿ ಕೊಂದ ಬಳಿಕ, ಮನೆಗೆ ತೆರಳಿ ತಂಗಿಗೂ ಗುಂಡಿಟ್ಟು ಕೊಂದು ತಾವೂ ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ಲಕ್ನೋದ ಗೋಮತಿ ನಗರದಲ್ಲಿ ಗುರುವಾರ ಮಧ್ಯಾಹ್ನ ಸಂಭವಿಸಿದೆ. ಸ್ಟೇಟ್‌ ಬ್ಯಾಂಕ್ ಆಫ್ ಇಂಡಿಯಾ (SBI) ಉದ್ಯೋಗಿಯಾಗಿದ್ದ ಮಾನಸ್ ವಾಜಪೇಯಿ (38) ಕೊಲೆ ಮಾಡಿ ಆತ್ಮಹತ್ಯೆಗೆ ಶರಣಾದ ದುರಂತ ನಾಯಕ. ಐಸಿಐಸಿಐ ಬ್ಯಾಂಕ್‌ ಉದ್ಯೋಗಿ ದಿವ್ಯಾ ಮಿಶ್ರಾ (35) ಹಾಗೂ ಮಾನಸ್‌ ಅವರ ಸಹೋದರಿ ಶಿವಾ ವಾಜಪೇಯಿ (28) ಮೃತಪಟ್ಟವರು. ಮಾನಸ್ ಹಾಗೂ ದಿವ್ಯಾಗೆ 12 ವರ್ಷಗಳ ಹಿಂದೆ ವಿವಾಹವಾಗಿದ್ದು, ಕಳೆದ ಒಂದು ವರ್ಷದಿಂದ ಪ್ರತ್ಯೇಕವಾಗಿ ವಾಸಿಸುತ್ತಿದ್ದರು. ದಿವ್ಯಾ ಕಳೆದ ವರ್ಷ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದರು. ಗುರುವಾರ ಮಧ್ಯಾಹ್ನ ಗೋಮತಿ ನಗರದ ಐಸಿಐಸಿಐ ಬ್ಯಾಂಕ್‌ಗೆ ತೆರಳಿದ ಮಾನಸ್, ಹೊರಗಡೆ ನಿಂತಿದ್ದ ಪತ್ನಿ ದಿವ್ಯಾ ಜೊತೆ ಕೆಲವು ನಿಮಿಷ ಮಾತನಾಡಿ, ಬಳಿಕ ಪಿಸ್ತೂಲ್‌ನಿಂದ…

Read More

ಮಂಗಳೂರು: ಸಿಮ್ ನೆಟ್‌ವರ್ಕ್ ಹ್ಯಾಕ್ ಮಾಡಿ ಅಕ್ರಮವಾಗಿ ಆನ್‌ಲೈನ್ ನೆಟ್ ಬ್ಯಾಂಕಿಂಗ್ ಅಕ್ಸೆಸ್ ಪಡೆದ ಸೈಬರ್ ವಂಚಕರ ತಂಡವೊಂದು ಮಂಗಳೂರಿನ ನಿವೃತ್ತ ಖಾಸಗಿ ಉದ್ಯೋಗಿಯೊಬ್ಬರ ಬ್ಯಾಂಕ್ ಗಳಿಂದ ಬರೋಬ್ಬರಿ ₹2.12 ಕೋಟಿಗೂ ಅಧಿಕ ಹಣವನ್ನು ದೋಚಿರುವ ಸೈಬರ್ ಅಪರಾಧ ಪ್ರಕರಣ ಬೆಳಕಿಗೆ ಬಂದಿದೆ. ಮುಂಬೈನಲ್ಲಿ 50 ವರ್ಷಗಳ ಕಾಲ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡಿ ನಿವೃತ್ತರಾಗಿ ಪ್ರಸ್ತುತ ಮಂಗಳೂರಿನಲ್ಲಿ ನೆಲೆಸಿರುವ 78 ವರ್ಷದ ವೃದ್ಧರೊಬ್ಬರು ಈ ಸೈಬರ್ ವಂಚನೆಗೆ ಬಲಿಯಾಗಿದ್ದಾರೆ. ಸಂತ್ರಸ್ತ ವೃದ್ಧರು ಮುಂಬೈನ ಕರ್ಲಾದಲ್ಲಿ ತಮ್ಮ ಹೆಸರಿನಲ್ಲಿ ಖರೀದಿಸಿದ್ದ ವೊಡಾಫೋನ್ ಮೊಬೈಲ್ ಸಂಖ್ಯೆಯನ್ನು ಕಳೆದ 10 ವರ್ಷಗಳಿಂದ ಬಳಸುತ್ತಿದ್ದು, ಅದನ್ನು ತಮ್ಮ ಎಲ್ಲಾ ಬ್ಯಾಂಕ್ ಖಾತೆಗಳಿಗೆ ಲಿಂಕ್ ಮಾಡಿದ್ದರು. ಕಳೆದ ಜುಲೈ ತಿಂಗಳಲ್ಲಿ ಇದ್ದಕ್ಕಿದ್ದಂತೆ ಅವರ ಮೊಬೈಲ್ ನೆಟ್‌ವರ್ಕ್ ಬಂದ್ ಆಗಿತ್ತು. ಬಳಿಕ ಮಂಗಳೂರಿನ ವೊಡಾಫೋನ್ ಕಚೇರಿಗೆ ತೆರಳಿ ವಿಚಾರಿಸಿದಾಗ, ಆ ಸಂಖ್ಯೆಯನ್ನು ಏರ್‌ಟೆಲ್ ನೆಟ್‌ವರ್ಕ್‌ಗೆ ಪೋರ್ಟ್ ಮಾಡಿ ಬೇರೊಬ್ಬರಿಗೆ ಮಾರಾಟ ಮಾಡಿರುವುದು ತಿಳಿದುಬಂದಿದೆ. ಕೂಡಲೇ ಅವರು ಏರ್‌ಟೆಲ್ ಕಚೇರಿಯಲ್ಲಿ…

Read More

ಬೆಳ್ತಂಗಡಿ: ಚಾರ್ಮಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತೋಟತ್ತಾಡಿ ಗ್ರಾಮದ ಬೆಂದ್ರಾಳದಲ್ಲಿ ಬುಧವಾರ ತಡರಾತ್ರಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಅವಘಡ ಸಂಭವಿಸಿದ್ದು, ದಿನಸಿ ಅಂಗಡಿಯೊಂದು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದೆ. ಬೆಂದ್ರಾಳ ನಿವಾಸಿ ಶರೀಫ್ ಅವರ ಒಡೆತನದ ಅಂಗಡಿಯಲ್ಲಿ ತಡರಾತ್ರಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದ್ದು, . ಜ್ವಾಲೆಗಳು ಅಂಗಡಿ ಮತ್ತು ಕಟ್ಟಡವನ್ನು ಬೇಗನೆ ವ್ಯಾಪಿಸಿದ್ದರಿಂದ ಸ್ಥಳೀಯ ನಿವಾಸಿಗಳು ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸುವ ಕಾರ್ಯಕ್ಕೆ ಮುಂದಾದರು. ಅವರ ಸಕಾಲಿಕ ಕಾರ್ಯಚರಣೆಯಿಂದ ಬೆಂಕಿ ಮತ್ತಷ್ಟು ಹರಡುವುದನ್ನು ತಡೆಯಲು ಸಾಧ್ಯವಾಯಿತು. ಆದರೆ, ಬೆಂಕಿಯ ತೀವ್ರತೆಗೆ ಅಂಗಡಿಯಲ್ಲಿ ದಾಸ್ತಾನು ಮಾಡಿದ್ದ ಎಲ್ಲಾ ದಿನಸಿ ವಸ್ತುಗಳು, ಕಟ್ಟಡ ಮತ್ತು ಸುಮಾರು 1 ಲಕ್ಷ ರೂಪಾಯಿ ನಗದು ಸುಟ್ಟು ಭಸ್ಮವಾಗಿದೆ . ಒಟ್ಟು 5 ಲಕ್ಷ ರೂ.ಗಳಿಗೂ ಹೆಚ್ಚು ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ. ಘಟನೆಯ ಬಗ್ಗೆ ಮಾಹಿತಿ ಪಡೆದ ನಂತರ ಗ್ರಾಮ ಪಂಚಾಯತ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡಿರಬಹುದು ಎಂದು…

Read More

ಹಿಸಾರ್: ಹರಿಯಾಣದ ಹಿಸಾರ್‌ನಲ್ಲಿ ನ್ಯಾಯಾಲಯದ ಆವರಣದ ಗೇಟ್ ಬಳಿ ಕುಖ್ಯಾತ ಗ್ಯಾಂಗ್‌ಸ್ಟರ್ ವಿನೋದ್ ಮೇಲೆ ಗುಂಡಿನ ದಾಳಿ ನಡೆದಿರುವ ಘಟನೆ ಭಾರೀ ಆತಂಕಕ್ಕೆ ಕಾರಣವಾಗಿದೆ. ನ್ಯಾಯಾಲಯಕ್ಕೆ ಹಾಜರಾಗಲು ಬಂದಿದ್ದ ವೇಳೆ ದಾಳಿ ನಡೆಸಲಾಗಿದ್ದು, ಆರೋಪಿಗಳು ಸುಮಾರು 12 ಸುತ್ತು ಗುಂಡು ಹಾರಿಸಿದ್ದಾರೆ ಎನ್ನಲಾಗಿದೆ. ಘಟನೆಯಿಂದ ನ್ಯಾಯಾಲಯದ ಆವರಣದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಗುಂಡಿನ ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡ ವಿನೋದ್‌ನನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಯಿತು. ನ್ಯಾಯಾಲಯದಂತಹ ಸೂಕ್ಷ್ಮ ಪ್ರದೇಶದಲ್ಲೇ ಶಸ್ತ್ರಾಸ್ತ್ರ ಬಳಸಿ ನಡೆದಿರುವ ದಾಳಿ ಭದ್ರತಾ ವ್ಯವಸ್ಥೆ ಕುರಿತು ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಘಟನೆಯ ಕುರಿತು ಪೊಲೀಸರು ತನಿಖೆ ಆರಂಭಿಸಿದ್ದು, ದಾಳಿಯ ಹಿಂದಿನ ಕಾರಣ ಹಾಗೂ ಭಾಗಿಯಾಗಿರುವ ಆರೋಪಿಗಳ ಪತ್ತೆಗೆ ಕ್ರಮ ಕೈಗೊಂಡಿದ್ದಾರೆ.

Read More

ಬಂಟ್ವಾಳದ ಇರಾಕೋಡಿಯಲ್ಲಿ ನಡೆದಿದ್ದ ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಪ್ರಕರಣದಲ್ಲಿ ‘ಕರ್ನಾಟಕ ಸಂಘಟಿತ ಅಪರಾಧಗಳ ನಿಯಂತ್ರಣ ಕಾಯ್ದೆ’ (ಕೊಕಾ) ಅಡಿಯಲ್ಲಿ ಆರೋಪಿಗಳಾಗಿದ್ದ ಐವರಿಗೆ ಹೈಕೋರ್ಟ್ ಷರತ್ತುಬದ್ಧ ನಿರೀಕ್ಷಣಾ ಜಾಮೀನು ಮಂಜೂರು . ಪ್ರಕರಣದಲ್ಲಿ ಬಂಧನ ಭೀತಿ ಎದುರಿಸುತ್ತಿದ್ದ ಆರೋಪಿಗಳಾದ ಪವನ್ ಮಾರುತಿ ಗಾಯಕ್ವಾಡ್ (ಎ19), ಅನಂತ ನಾಗೋಜಿ ಸಾವಂತ್ (ಎ21), ಬಿಟ್ಟಪ್ಪ ನಾಗಪ್ಪ ತರಿಹಾಳ (ಎ22), ಎಂ. ನವೀನ್ ಕುಮಾರ್ (ಎ23) ಹಾಗೂ ಸಾಗರದ ನಿವಾಸಿ ಪ್ರಕರಣದ 20ನೇ ಆರೋಪಿ ಪ್ರತಿಮಾ ಎ.ಎನ್ ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದ ಕ್ರಿಮಿನಲ್‌ ಅರ್ಜಿಯನ್ನು ನ್ಯಾಯಮೂರ್ತಿ ಎಸ್‌. ವಿಶ್ವಜಿತ್‌ ಶೆಟ್ಟಿ ಅವರಿದ್ದ ಏಕಸದಸ್ಯ ನ್ಯಾಯಪೀಠ ಇತ್ತೀಚೆಗೆ ಪುರಸ್ಕರಿಸಿದೆ. ಪ್ರಕರಣದಲ್ಲಿ ಕೊಕಾ ಅನ್ವಯಿಸಲಾಗಿದೆ ಎಂಬ ಮಾತ್ರಕ್ಕೆ ನಿರೀಕ್ಷಣಾ ಜಾಮೀನು ನೀಡಲು ಸಾಧ್ಯವಿಲ್ಲ ಎಂದು ಹೇಳಲಾಗದು. ಮೇಲ್ನೋಟಕ್ಕೆ ಅರ್ಜಿದಾರರ ವಿರುದ್ಧ ಕೊಕಾ ನಿಬಂಧನೆಗಳು ನೇರವಾಗಿ ಅನ್ವಯವಾಗುವುದಿಲ್ಲ ಎಂದಾದರೆ, ಕಾಯ್ದೆಯ ಸೆಕ್ಷನ್ 22(3) ಅಡಿಯಲ್ಲಿನ ನಿರ್ಬಂಧವು ನಿರೀಕ್ಷಣಾ ಜಾಮೀನು ಮಂಜೂರು ಮಾಡಲು ಅಡ್ಡಿಯಾಗುವುದಿಲ್ಲ ಎಂದು ಸ್ಪಷ್ಟಪಡಿಸಿ ನ್ಯಾಯಾಲಯ ಜಾಮೀನು…

Read More

ಬೆಳ್ತಂಗಡಿ: ಬಾಲಕ ಸುಮಂತ್ ಅವರ ನಿಗೂಢ ಸಾವಿನ ಪ್ರಕರಣ ಗೇರುಕಟ್ಟೆ ಸಮೀಪದ ಸಂಭೋಳ್ಯದ ತಂದೆ, ತಾಯಿ, ಸಹೋದರ ಸಹಿತ ಐವರ ಬ್ರೈನ್ ಮ್ಯಾಪಿಂಗ್ ಪ್ರಕ್ರಿಯೆ ಆರಂಭಗೊಂಡಿದೆ. ಬೆಳ್ತಂಗಡಿ ತಾಲೂಕಿನ ನಾಳಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ 2026ರ ಜ.14ರಂದು ಮುಂಜಾನೆ ಧನುಪೂಜೆಗೆ ತೆರಳಿದ್ದ ಗೇರುಕಟ್ಟೆ ಸಮೀಪದ ಓಡಿಲ್ನಾಳ ಗ್ರಾಮದ ಸಂಭೋಳ್ಯ ನಿವಾಸಿ ಸುಮಂತ್ (15) ಅವರ ಸಂಶಯಾಸ್ಪದ ಸಾವಿನ ಪ್ರಕರಣದ ನಿಗೂಢತೆ ಬಯಲಿಗೆಳೆಯಲು ಪೊಲೀಸ್ ಇಲಾಖೆ ಹರಸಾಹಸ ಪಟ್ಟಿದ್ದರೂ ಈ ಕೇಸ್ ನಿಗೂಢವಾಗಿಯೇ ಮುಂದುವರಿದಿರುವ ಹಿನ್ನೆಲೆಯಲ್ಲಿ ಮಂಪರು ಪರೀಕ್ಷೆಯ ಪ್ರಯೋಗ ನಡೆಸುತ್ತಿದೆ. ಸುಮಂತ್ ಅವರ ತಂದೆ ಸುಬ್ರಹ್ಮಣ್ಯ ನಾಯಕ್, ತಾಯಿ ರತ್ನಾವತಿ, ಸಹೋದರ ಸುದರ್ಶನ್, ರತ್ನಾವತಿ ಅವರ ತಮ್ಮ ರಾಧಾಕೃಷ್ಣ ಮತ್ತು ರತ್ನಾವತಿ ಅವರ ದೊಡ್ಡಪ್ಪನ ಮಗ ಲಕ್ಷ್ಮಿನಾರಾಯಣ ಅವರ ಮೊದಲ ಹಂತದ ಪ್ರಶ್ನೋತ್ತರ ಬೆಂಗಳೂರಿನ ಮಡಿವಾಳದಲ್ಲಿರುವ ವಿಧಿವಿಜ್ಞಾನ ಪ್ರಯೋಗಾಲಯದಲ್ಲಿ ನಡೆದಿದೆ. ಕೃಷಿಕರಾಗಿರುವ ಸುಬ್ರಹ್ಮಣ್ಯ ನಾಯಕ್ ಮತ್ತು ಗೃಹಿಣಿಯಾಗಿರುವ ರತ್ನಾವತಿ ಅವರನ್ನು ಆ.10ರಂದು ಬೆಳಿಗ್ಗೆಯಿಂದ ಮಧ್ಯಾಹ್ನದವರೆಗೆ ಪ್ರಶೋತ್ತರಕ್ಕೆ ಒಳಪಡಿಸಲಾಗಿದೆ. ನಿಟ್ಟೆಯಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿಯಾಗಿರುವ ಸುದರ್ಶನ್…

Read More

ಬೆಂಗಳೂರು: ಕರ್ನಾಟಕದ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯು 36 ರೈಲು ನಿಲ್ದಾಣಗಳಲ್ಲಿರುವ ಆಹಾರ ಮಳಿಗೆಗಳಲ್ಲಿ ನಡೆಸಿದ ವಿಶೇಷ ತಪಾಸಣೆಯಲ್ಲಿ ಸಿಹಿತಿಂಡಿಗಳಲ್ಲಿ ಅನುಮತಿಯಿಲ್ಲದ ಬಣ್ಣಗಳ ಬಳಕೆ, ಅವಧಿ ಮೀರಿದ ಡೈರಿ ಉತ್ಪನ್ನಗಳು ಮತ್ತು ಆಹಾರ ಪದಾರ್ಥಗಳು ಮತ್ತು ಕೊಳೆತ ತರಕಾರಿಗಳು ಪತ್ತೆಯಾಗಿದೆ. ಬೆಂಗಳೂರು ನಗರ ರೈಲು ನಿಲ್ದಾಣ (KRS), ಯಶವಂತಪುರ, ಕೃಷ್ಣರಾಜಪುರ, ಯಲಹಂಕ, ಕೋಲಾರ, ಮೈಸೂರು, ಹಾವೇರಿ, ಉಡುಪಿ, ಕೊಪ್ಪಳ, ಗದಗ, ದಾವಣಗೆರೆ, ಬಾಗಲಕೋಟೆ, ಕಾರವಾರ, ಯಾದಗಿರಿ, ಬೇರೂರು ಮತ್ತು ಕಡೂರು ಜಂಕ್ಷನ್, ಬಳ್ಳಾರಿ, ಹೊಸಪೇಟೆ, ಹುಬ್ಬಳ್ಳಿ ಮತ್ತು ಮಂಗಳೂರಿನಲ್ಲಿರುವ 112 ಆಹಾರ ಮಳಿಗೆಗಳಲ್ಲಿ ತಪಾಸಣೆ ನಡೆಸಲಾಗಿದೆ ಎಂದು ಆಹಾರ ಸುರಕ್ಷತಾ ಇಲಾಖೆಯ ಹೇಳಿಕೆ ತಿಳಿಸಿದೆ. ತಂಡಗಳು ರೈಲ್ವೆ ಪ್ಯಾಂಟ್ರಿ, ರೈಲ್ವೆ ಹೋಟೆಲ್ ಮತ್ತು ರೈಲಿನಲ್ಲಿ ಬಡಿಸುವ ಆಹಾರವನ್ನು ಪರಿಶೀಲಿಸಿದವು. ಮಂಗಳೂರು ಮತ್ತು ಕೇರಳ ಮತ್ತು ಹುಬ್ಬಳ್ಳಿ ಮತ್ತು ಬೆಂಗಳೂರು ನಡುವಿನ ವಂದೇ ಭಾರತ್ ರೈಲುಗಳು ಸ್ವಚ್ಛವಾಗಿರುವುದನ್ನು ತಂಡವು ಕಂಡುಕೊಂಡಿದೆ. ಆದಾಗ್ಯೂ, ಆಹಾರ ಉತ್ಪನ್ನಗಳಲ್ಲಿ ಅನುಮತಿಸದ ಬಣ್ಣಗಳ ‘ಶಂಕಿತ ಬಳಕೆ’ ಕಂಡುಬಂದಿದೆ…

Read More

ಉಡುಪಿ : ಕಾಪು ತಾಲೂಕಿನ ಮುದರಂಗಡಿ ಜಂಕ್ಷನ್‌ನಲ್ಲಿ ನಡೆದ ಪ್ರಿನ್ಸ್ ಎಂಟರ್‌ಪ್ರೈಸಸ್ ಮಾಲಕ ಡೇವಿಡ್ ಡಿಸೋಜಾ (David d’souza) ಅವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೃತ್ಯಕ್ಕೆ ಸಂಚು ರೂಪಿಸಿ ಹಣಕಾಸು ನೆರವು ನೀಡಿದ್ದ ಮತ್ತೋರ್ವ ಆರೋಪಿಯನ್ನು ಪೊಲೀಸರು ಉತ್ತರಾಖಂಡ ರಾಜ್ಯದ ನೈನಿತಾಲ್‌ನಲ್ಲಿ ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಬಿಹಾರ ರಾಜ್ಯದ ಶೇಖ್‌ಪುರ ಮೂಲದ ಸೂರಜ್ ಕುಮಾರ್ (31) ಎಂದು ಗುರುತಿಸಲಾಗಿದೆ. ಈತನ ಬಂಧನದೊಂದಿಗೆ ಈ ಕೊಲೆ ಪ್ರಕರಣದಲ್ಲಿ ಇದುವರೆಗೆ ಬಂಧಿತರಾದವರ ಒಟ್ಟು ಸಂಖ್ಯೆ 8ಕ್ಕೆ ಏರಿಕೆಯಾಗಿದೆ. ಆಗಸ್ಟ್ 7ರ ಸಂಜೆ ಸುಮಾರು 3:45ರ ವೇಳೆಗೆ ಮುದರಂಗಡಿಯ ಸೈಂಟ್ ಕ್ಷೇವಿಯರ್ ಚರ್ಚ್ ಕಾಂಪ್ಲೆಕ್ಸ್‌ನಲ್ಲಿರುವ ತಮ್ಮ ಕಚೇರಿಯಲ್ಲಿದ್ದ ಉದ್ಯಮಿ ಡೇವಿಡ್ ಡಿಸೋಜಾ ಅವರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆಗೈದು ಪರಾರಿಯಾಗಿದ್ದರು. ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಕಾರ್ಯಾಚರಣೆ ನಡೆಸಿದ ಉಡುಪಿ ಪೊಲೀಸರು ಕೃತ್ಯದಲ್ಲಿ ನೇರವಾಗಿ ಭಾಗಿಯಾಗಿದ್ದ ಪ್ರಮುಖ ಆರೋಪಿ ರಾಜು ಹಾಗೂ ಆತನ ಸಹಚರರಾದ ಅನ್ಮೋಲ್ ರಸ್ತೋಗಿ, ಜಿಯಾಹುಲ್ ವಾಜುಲ್ ಶೇಖ್ ಅವರನ್ನು ಬಂಧಿಸಿದ್ದರು. ಕಾರ್ಯಾಚರಣೆ ವೇಳೆ…

Read More

ಮಹಾರಾಷ್ಟ್ರ: ಸಿಸೇರಿಯನ್ ಹೆರಿಗೆಯ ವೇಳೆ ವೈದ್ಯರು ಸರ್ಜಿಕಲ್ ಗ್ಲೌಸ್ ಮತ್ತು ಪೇಪರ್ ವೈಪ್ಸ್‌ಗಳನ್ನು ಆಕೆಯ ಹೊಟ್ಟೆಯೊಳಗೇ ಬಿಟ್ಟು ಹೊಲಿಗೆ ಹಾಕಿದ ಘಟನೆ ಮಹಾರಾಷ್ಟ್ರದ ಬೀಡ್ ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ. ಪ್ರಸ್ತುತ 19 ವರ್ಷದ ನವವಧು ಸಂಧ್ಯಾ ಸೂರಜ್ ಗಾಯಕ್ವಾಡ್ ಎಂಬಾಕೆ ಗಂಭೀರ ಸ್ಥಿತಿಯಲ್ಲಿದ್ದು, ಸಾವು-ಬದುಕಿನ ನಡುವೆ ಹೋರಾಡುತ್ತಿದ್ದಾಳೆ. ಆಗಸ್ಟ್ 1 ರಂದು ನಡೆದಿದ್ದ ಶಸ್ತ್ರಚಿಕಿತ್ಸೆ ಸಂಧ್ಯಾ ಅವರು ಆಗಸ್ಟ್ 1 ರಂದು ಬೀಡ್ ಜಿಲ್ಲಾಸ್ಪತ್ರೆಯಲ್ಲಿ ಸಿಸೇರಿಯನ್ ಮೂಲಕ ಮಗುವಿಗೆ ಜನ್ಮ ನೀಡಿದ್ದರು. ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ ಎಂದು ನಾಲ್ಕು ದಿನಗಳ ನಂತರ ಆಕೆಯನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿತ್ತು. ಆದರೆ ಮನೆಗೆ ತೆರಳಿದ ಕೆಲವೇ ದಿನಗಳಲ್ಲಿ ಆಕೆಗೆ ಹೊಟ್ಟೆಯಲ್ಲಿ ತೀವ್ರ ಹಾಗೂ ತಡೆಯಲಾರದ ನೋವು ಕಾಣಿಸಿಕೊಂಡಿದೆ. ಖಾಸಗಿ ಆಸ್ಪತ್ರೆಯ ಸ್ಕ್ಯಾನಿಂಗ್‌ನಲ್ಲಿ ಬಯಲಾದ ಸತ್ಯ ನೋವು ಹೆಚ್ಚಾದ ಹಿನ್ನೆಲೆಯಲ್ಲಿ ಕುಟುಂಬಸ್ಥರು ಆಕೆಯನ್ನು ತಕ್ಷಣವೇ ಖಾಸಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಅಲ್ಲಿ ವೈದ್ಯರು ಸ್ಕ್ಯಾನಿಂಗ್ ಮಾಡಿದಾಗ ಆಕೆಯ ಹೊಟ್ಟೆಯೊಳಗೆ ವಿದೇಶಿ ಗ್ಲೌಸ್ ಇರುವುದು ಪತ್ತೆಯಾಗಿದೆ. ಪರಿಸ್ಥಿತಿ ಕೈಮೀರುತ್ತಿದ್ದಂತೆ ಆಕೆಯನ್ನು ಪುಣೆಯ…

Read More

ಹಾವೇರಿ: ನಿಂತಿದ್ದ ಲಾರಿಗೆ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ಮೂವರು ಸಾವನ್ನಪ್ಪಿದ ಘಟನೆ ರಾಣೆಬೆನ್ನೂರು ತಾಲೂಕಿನ ಚಳಗೇರಿ ಟೋಲ್ ನಾಕಾ ಬಳಿ ಕಳೆದ ರಾತ್ರಿ ನಡೆದಿದೆ. ದಾವಣಗೆರೆಯ ನಿಟವಳ್ಳಿ ಮೌನೇಶ್ವರ ಬಡಾವಣೆಯ ನಿವಾಸಿಗಳಾದ ಸಿದ್ದಾರ್ಥ (27), ಹಸನ್ಮುಖಿ (29) ಹಾಊ ಯಶೋಧಾ ಬಾಯಿ (51) ಮೃತರು. ಕಾರಿನಲ್ಲಿದ್ದ ಸೌಂದರ್ಯ, ಸಿಂಧು ಸೇರಿ ಮೂವರು ತೀವ್ರವಾಗಿ ಗಾಯಗೊಂಡಿದ್ದಾರೆ. ಅವರಿಗೆ ದಾವಣಗೆರೆ ಎಸ್.ಎಸ್. ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ರಾಣೆಬೆನ್ನೂರಿನಿಂದ ದಾವಣಗೆರೆಗೆ ಹೋಗುತ್ತಿದ್ದಾಗ ರಾಷ್ಟ್ರೀಯ ಹೆದ್ದಾರಿ 48ಕ್ಕೆ ಹೊಂದಿಕೊಂಡಂತಿರುವ ನಿಸರ್ಗ ಡಾಬಾ ಬಳಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದಿದೆ ಎಂದು ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ. ರಾಣೆಬೆನ್ನೂರು ಗ್ರಾಮೀಣ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Read More