Author: admin

ಬೆಂಗಳೂರು: ಕೆ.ಆರ್. ಪುರ ಠಾಣಾ ವ್ಯಾಪ್ತಿಯ ಸೀಗೇಹಳ್ಳಿಯ ಡಾಮಿನಿಕ್ ಲೇಔಟ್‌ನ ಸಾಯಿಗ್ರೀನ್ ಹೋಮ್ಸ್ ಅಪಾರ್ಟ್‌ಮೆಂಟ್‌ನ ಫ್ಲ್ಯಾಟ್‌ನಲ್ಲಿ ಜೂನ್‌ 22ರಂದು ನಡೆದಿದ್ದ ತ್ರಿವಳಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ಶ್ವೇತಾ, ತನ್ನ ಪ್ರಿಯಕರ ಕೆನತ್‌ ವಿರುದ್ಧ ‘ಮಾಫಿ ಸಾಕ್ಷಿ’ ಹೇಳಲು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ.‌ 29ನೇ ಎಸಿಜೆಎಂ ನ್ಯಾಯಾಲಯಕ್ಕೆ ಶ್ವೇತಾ ಅರ್ಜಿ ಸಲ್ಲಿಸಿ, ಪರಿಗಣಿಸುವಂತೆ ಮನವಿ ಮಾಡಿದ್ದಾರೆ. ಕೊಲೆ ಪ್ರಕರಣದಲ್ಲಿ ಶ್ವೇತಾ ಹಾಗೂ ಕೆನತ್‌ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿ ಇದ್ದಾರೆ. ತಮಿಳುನಾಡಿನ ಸೋಮಸುಂದರ್‌ (52), ಅವರ ಪತ್ನಿ ಮುತ್ತುಲಕ್ಷ್ಮಿ(48) ಹಾಗೂ ಕಿರಿಯ ಮಗಳು ಸುಪ್ರಿಯಾ(19) ಅವರ ಕೊಲೆ ನಡೆದಿತ್ತು. ಸೋಮಸುಂದರ್‌- ಮುತ್ತುಲಕ್ಷ್ಮಿ ಅವರ ಹಿರಿಯ ಪುತ್ರಿ ಶ್ವೇತಾ ಹಾಗೂ ಅವರ ಪ್ರಿಯಕರ ಕೆನೆತ್ ಸೇರಿಕೊಂಡು ಮೂವರನ್ನೂ ಜೂನ್‌ 22ರ ರಾತ್ರಿ ಕೊಲೆ ಮಾಡಿ, ಪುದುಚೆರಿಗೆ ತೆರಳಿ ತಲೆಮರೆಸಿಕೊಂಡಿದ್ದರು. ಪುದುಚೆರಿಯಲ್ಲಿ ಕಾರ್ಯಾಚರಣೆ ನಡೆಸಿದ್ದ ಪೊಲೀಸರು ಆರೋಪಿಗಳನ್ನು ಬಂಧಿಸಿ ನಗರಕ್ಕೆ ಕರೆ ತಂದಿದ್ದರು. ವಿಚಾರಣೆ ನಡೆಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು. ‘ಕೊಲೆ…

Read More

ಮಂಗಳೂರು: ಮುಲ್ಕಿ ಪೊಲೀಸ್‌ ಠಾಣಾ ವ್ಯಾಪ್ತಿಯ ಪ್ರಸಿದ್ಧ ಚಂದ್ರಮೌಳೇಶ್ವರ ದೇವಸ್ಥಾನದಲ್ಲಿ ಸಿಸಿಟಿವಿ ಕ್ಯಾಮೆರಾ ತಿರುಗಿಸಿ ಕಾಣಿಕೆ ಹುಂಡಿಯ ಬೀಗ ಮುರಿದು ಕಳ್ಳತನ ಮಾಡಿದ್ದ ಆರೋಪಿಯನ್ನು ಮಂಗಳೂರು ನಗರದ ಮುಲ್ಕಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತನಿಂದ ಕಳುವಾಗಿದ್ದ ನಗದನ್ನು ವಶಪಡಿಸಿಕೊಳ್ಳಲಾಗಿದೆ. ಕೊಡಗು ಜಿಲ್ಲೆ ಮಡಿಕೇರಿ ತಾಲೂಕಿನ ಅಯ್ಯಂಗೇರಿ ಅಜ್ಜಿಮಡ ನಿವಾಸಿ ರವಿಕುಮಾರ ಅಲಿಯಾಸ್ ರವಿ ಹೆಚ್.ಜಿ.  ಬಂಧಿತ ಆರೋಪಿ. ಆಗಸ್ಟ್ 18ರ ಮಧ್ಯರಾತ್ರಿ ಚಂದ್ರಮೌಳೇಶ್ವರ ದೇವಸ್ಥಾನದ ಮಾಡಿನ ಮೇಲಿದ್ದ ಜಾಲರಿಯ ಮೂಲಕ ಒಳಪ್ರವೇಶಿಸಿದ್ದ ಆರೋಪಿ, ಕೃತ್ಯ ಎಸಗುವ ಮುನ್ನ ದೇವಸ್ಥಾನದಲ್ಲಿದ್ದ ಸಿಸಿಟಿವಿ ಕ್ಯಾಮೆರಾವನ್ನು ಬೇರೆಡೆಗೆ ತಿರುಗಿಸಿದ್ದಾನೆ. ಬಳಿಕ ಕಾಣಿಕೆ ಡಬ್ಬಿಯ ಬೀಗ ಮುರಿದು ನಗದನ್ನು ದೋಚಿದ್ದ. ಆದರೆ, ಆತ ಕ್ಯಾಮೆರಾ ಮುಟ್ಟುತ್ತಿದ್ದಂತೆಯೇ ದೇವಸ್ಥಾನದ ಭದ್ರತಾ ವ್ಯವಸ್ಥೆ ಕಾರ್ಯಪ್ರವೃತ್ತವಾಗಿದೆ. ಸಿಸಿಟಿವಿ ಅಳವಡಿಸಿದ್ದ ಕುಂದಾಪುರ ಮೂಲದ ‘ಸೈನ್ ಇನ್ ಸೆಕ್ಯೂರಿಟಿ’ ಕಂಪನಿಯ ಕಂಟ್ರೋಲ್ ರೂಮ್‌ಗೆ ತಕ್ಷಣವೇ ತುರ್ತು ಅಲರ್ಟ್ ಸಂದೇಶ ರವಾನೆಯಾಗಿದೆ. ಇನ್ನು ಅಲರ್ಟ್ ಸಂದೇಶ ಬರುತ್ತಿದ್ದಂತೆ ಸೆಕ್ಯೂರಿಟಿ ಕಂಪನಿಯ ಸಿಬ್ಬಂದಿ ತಕ್ಷಣ ದೇವಸ್ಥಾನದ ಆಡಳಿತ…

Read More

ಮುಂಬೈ: ಮಹಾರಾಷ್ಟ್ರದ ಪುಣೆಯಲ್ಲಿನ ಜುನ್ನಾರ್ ತಹಸಿಲ್‌ನ ಪಿಂಪಲ್‌ವಾಂಡಿ ಗ್ರಾಮದಲ್ಲಿ 25 ವರ್ಷದ ಯುವಕನೊಬ್ಬ, 10 ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆಸಿ, ಕೊಲೆ ಮಾಡಿದ ಭೀಕರ ಕೃತ್ಯ ಬೆಳಕಿಗೆ ಬಂದಿದೆ. ಸದ್ಯ 25 ವರ್ಷದ ಆರೋಪಿ ಸಾಹಿಲ್ ಖೈರೆ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಸದ್ಯ ಮಹಾರಾಷ್ಟ್ರದ ಪುಣೆಯಲ್ಲಿ ಎಂಬಾತನು ತಪ್ಪನ್ನು ಒಪ್ಪಿಕೊಂಡಿದ್ದು, ಆತನನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಈ ಮಧ್ಯೆ ಗ್ರಾಮಸ್ಥರು ಆತನಿಗೆ ಗಲ್ಲು ಶಿಕ್ಷೆಯಾಗಲೇ ಬೇಕು ಎಂದು ಒತ್ತಾಯಿಸಿ ಪಿಂಪಲ್‌ವಾಂಡಿ ಗ್ರಾಮದಲ್ಲಿ ಪ್ರತಿಭಟನೆ ನಡೆಸಿ, ಆಡಳಿತ ಮಂಡಳಿಗೆ ಎಚ್ಚರಿಕೆ ಕೊಟ್ಟಿರುವ ದೃಶ್ಯಾವಳಿಗಳು ವೈರಲ್ ಆಗುತ್ತಿದೆ. ಏನಾಗಿತ್ತು? ಮಂಗಳವಾರ ಮಧ್ಯಾಹ್ನ 3:30ಕ್ಕೆ ಬಾಲಕಿ ತನ್ನ ಮನೆಯಲ್ಲಿ ಟಿವಿ ನೋಡುತ್ತಾ ಕುಳಿತ್ತಿತ್ತು. ಈ ವೇಳೆ ಬಂದ ಈ ಕಾಮುಕ ಬಾಲಕಿಗೆ ಪೇರಳೆ ಹಣ್ಣು ಕೊಟ್ಟಿದ್ದಾನೆ. ನಂತರ ಆಕೆಯನ್ನು, ಕಬ್ಬಿನ ಹೊಲಕ್ಕೆ ಸೈಕಲ್​ನಲ್ಲಿ ಕರೆದುಕೊಂಡು ಹೋಗಿದ್ದಾನೆ. ಅಲ್ಲಿ ಅತ್ಯಾಚಾರ ನಡೆಸಿ ಕೊಂದಿದ್ದಾನೆ. ಕತ್ತಲಾಗುತ್ತಿದ್ದರು ಮಗಳು ಬಾರದೆ ಇರುವುದನ್ನು ಕಂಡ ಪೋಷಕರು ಎಲ್ಲೆಡೆ ಹುಡುಕಾಡಿದ್ದಾರೆ. ಕೊನೆಗೆ…

Read More

ಕಾಸರಗೋಡು: ಶಾಲಾ ಬಸ್ ಮತ್ತು ಬೈಕ್‌ ನಡುವೆ ಸಂಭವಿಸಿದ ಅಪಘಾತದಲ್ಲಿ 25 ವರ್ಷದ ಯುವಕನೊಬ್ಬ ಸಾವನ್ನಪ್ಪಿದ್ದ ಘಟನೆ ಬೋವಿಕ್ಕನ್ ಬಳಿಯ ಪೊವ್ವಲ್ ಮಾಸ್ತಿಕುಂಡು ನಲ್ಲಿ ಗುರುವಾರ ನಡೆದಿದೆ ಮೃತ ವ್ಯಕ್ತಿಯನ್ನು ಕೇರಳ-ಕರ್ನಾಟಕ ಗಡಿಯಲ್ಲಿರುವ ಗಾಳಿಮುಖ ನಿವಾಸಿ ಶಮ್ಮಾಸ್ ಅಬ್ದುಲ್ಲಾ (25) ಎಂದು ಗುರುತಿಸಲಾಗಿದೆ. ಕೋಝಿಕ್ಕೋಡ್‌ನಲ್ಲಿ ಜ್ಯೂಸ್ ಅಂಗಡಿ ನಡೆಸುತ್ತಿದ್ದ ಶಮ್ಮಾಸ್ ಗುರುವಾರ ಬೆಳಿಗ್ಗೆ 8.30 ರ ಸುಮಾರಿಗೆ ತಮ್ಮ ಬೈಕ್‌ನಲ್ಲಿ ತಮ್ಮ ಊರಿಗೆ ಹಿಂತಿರುಗುತ್ತಿದ್ದರು. ಮಾಸ್ತಿಕುಂಡು ತಲುಪಿದಾಗ, ಅವರ ಬೈಕ್‌ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಖಾಸಗಿ ಶಾಲಾ ಬಸ್‌ಗೆ ಮುಖಾಮುಖಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಶಮ್ಮಾಸ್ ಅವರ ತಲೆಗೆ ಗಂಭೀರ ಗಾಯಗಳಾಗಿ ಸ್ಥಳದಲ್ಲೇ ಮೃತಪಟ್ಟರು. ಮೃತರು ಈ ಹಿಂದೆ ಸೌದಿ ಅರೇಬಿಯಾದಲ್ಲಿ ಕೆಲಸ ಮಾಡುತ್ತಿದ್ದರು. ಮೊಗ್ರಾಲ್ ನಿವಾಸಿ ಫಾತಿಮಾ ಅವರನ್ನು ಕೆಲವು ತಿಂಗಳ ಹಿಂದೆಯಷ್ಟೇ ವಿವಾಹವಾಗಿದ್ದರು. ಆದೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Read More

ಉತ್ತರ ಪ್ರದೇಶ : : ಕಳೆದ ನಾಲ್ಕು ತಿಂಗಳಲ್ಲಿ 10 ಪ್ರತ್ಯೇಕ ಪ್ರಕರಣಗಳಲ್ಲಿ ಬರೋಬ್ಬರಿ 22 ಮಂದಿ ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಿ ಕಠಿಣ ತೀರ್ಪು ನೀಡಿದ್ದ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ರವಿಕುಮಾರ್ ದಿವಾಕರ್ ಅವರ ನ್ಯಾಯಾಲಯದಲ್ಲಿದ್ದ ಸುಮಾರು 100 ಕೊಲೆ ಪ್ರಕರಣಗಳನ್ನು ಬೇರೆ ನ್ಯಾಯಾಲಯಕ್ಕೆ ವರ್ಗಾಯಿಸಲಾಗಿದೆ. ಆಡಳಿತಾತ್ಮಕ ಆದೇಶದ ಮೂಲಕ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರ ಪೀಠಕ್ಕೆ ಈ ಪ್ರಕರಣಗಳನ್ನು ವರ್ಗಾಯಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನ್ಯಾಯಾಧೀಶ ರವಿಕುಮಾರ್ ದಿವಾಕರ್ ಅವರು ಸತತವಾಗಿ ಮರಣದಂಡನೆ ಶಿಕ್ಷೆ ವಿಧಿಸುತ್ತಿದ್ದ ಪ್ರಮಾಣದ ಕುರಿತು ವಕೀಲರು ಹಾಗೂ ಕಕ್ಷಿದಾರರಲ್ಲಿ ತೀವ್ರ ಆತಂಕ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಪ್ರಕರಣಗಳನ್ನು ವರ್ಗಾಯಿಸಲಾಗಿದೆ ಎಂದು ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಪ್ರಮೋದ್ ತ್ಯಾಗಿ ಸ್ಪಷ್ಟಪಡಿಸಿದ್ದಾರೆ. 2022ರಲ್ಲಿ ವಾರಾಣಸಿಯ ಜ್ಞಾನವಾಪಿ ಮಸೀದಿ ಸಂಕೀರ್ಣದ ವಿಡಿಯೊಗ್ರಫಿ ಸಮೀಕ್ಷೆಗೆ ಆದೇಶ ನೀಡಿ ದೇಶದಾದ್ಯಂತ ಗಮನ ಸೆಳೆದಿದ್ದ ರವಿಕುಮಾರ್ ದಿವಾಕರ್ ಅವರು, ತಮ್ಮ ಕಠಿಣ ತೀರ್ಪುಗಳಿಗೆ ಹೆಸರಾಗಿದ್ದಾರೆ. ಪ್ರಸ್ತುತ ಮರಣದಂಡನೆ ಅಥವಾ…

Read More

ಮಂಗಳೂರು: ಉಳ್ಳಾಲದ ಕೋಟೆಪುರ ಸಮುದ್ರ ತೀರದಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದ ವ್ಯಕ್ತಿಯ ಶವ ಪ್ರಕರಣಕ್ಕೆ ಇದೀಗ ಮಹತ್ವದ ತಿರುವು ಸಿಕ್ಕಿದೆ. ಮೀನುಗಾರಿಕಾ ಬೋಟ್‌ನಿಂದ ಸಮುದ್ರಕ್ಕೆ ಬಿದ್ದು ನಾಪತ್ತೆಯಾಗಿದ್ದರೆಂದು ಶಂಕಿಸಲಾಗಿದ್ದ ವ್ಯಕ್ತಿಯ ಸಾವಿನ ಹಿಂದೆ ಕೊಲೆ ನಡೆದಿರುವ ಸಾಧ್ಯತೆ ಮರಣೋತ್ತರ ಪರೀಕ್ಷೆಯಲ್ಲಿ ಬೆಳಕಿಗೆ ಬಂದಿದೆ. ಆಗಸ್ಟ್ 17ರಂದು ಕೋಟೆಪುರ ಮಸೀದಿ ಹಿಂಭಾಗದ ಕಡಲ ಕಿನಾರೆಯಲ್ಲಿ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿತ್ತು. ಉಳ್ಳಾಲ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ ಬಳಿಕ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ವೆನ್ಲಾಕ್ ಆಸ್ಪತ್ರೆಗೆ ಕಳುಹಿಸಿದ್ದರು. ಈ ವೇಳೆ ಪಾಂಡೇಶ್ವರ ಠಾಣೆಯಲ್ಲಿ ದಾಖಲಾಗಿದ್ದ ನಾಪತ್ತೆ ಪ್ರಕರಣದ ಆಧಾರದ ಮೇಲೆ ಉಡುಪಿ ಜಿಲ್ಲೆಯ ಕುಂದಾಪುರ ಮೂಲದ ನಾರಾಯಣ ಅವರ ಕುಟುಂಬಸ್ಥರನ್ನು ಕರೆಸಲಾಗಿತ್ತು. ನಾರಾಯಣ ಅವರು ಆಗಸ್ಟ್ 3ರಂದು ಮಂಗಳೂರಿನ ಮೀನುಗಾರರೊಂದಿಗೆ ಬೋಟ್‌ನಲ್ಲಿ ಮೀನುಗಾರಿಕೆಗೆ ತೆರಳಿದ್ದರು. ಆಗಸ್ಟ್ 9ರಂದು ವಾಪಸ್ ಬರುತ್ತಿದ್ದ ವೇಳೆ ನೇತ್ರಾವತಿ ನದಿ ಸೇರುವ ಅಳಿವೆ ಬಾಗಿಲಿನಲ್ಲಿ ಅಲೆಯ ಹೊಡೆತಕ್ಕೆ ಸಿಲುಕಿ ಸಮುದ್ರಕ್ಕೆ ಬಿದ್ದು ನಾಪತ್ತೆಯಾಗಿದ್ದರು ಎನ್ನಲಾಗಿತ್ತು. ಈ ಕುರಿತು ಅವರ…

Read More

ಕಾಸರಗೋಡು: ಆಸ್ಪತ್ರೆಗೆ ನುಗ್ಗಿ ಟಿಪ್ಪರ್ ಲಾರಿ ಹತ್ತಿಸಿ ಕೊಲೆಗೈಯ್ಯುವುದಾಗಿ ವೈದ್ಯೆಗೆ ಬೆದರಿಕೆಯೊಡ್ಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಹೊಸದುರ್ಗದ ಖಾಸಗಿ ಆಸ್ಪತ್ರೆಯೊಂದರ ವೈದ್ಯೆ ಪಿ. ಜಸೀಲ ಅವರು ದೂರುದಾರರು. ಸಾಮಾಜಿಕ ಜಾಲತಾಣದಲ್ಲಿ ವೀಡಿಯೊ ದೃಶ್ಯಗಳನ್ನು ಆರೋಪಿಗಳು ಪ್ರಚಾರ ಮಾಡಿದ್ದಾರೆಂದೂ ದೂರಿನಲ್ಲಿ ತಿಳಿಸಲಾಗಿದೆ. ತುರ್ತು ಚಿಕಿತ್ಸೆಗಾಗಿ 85 ಸಾವಿರ ರೂ. ವನ್ನು ಮುಂಚಿತವಾಗಿ ಪಾವತಿಸಬೇಕೆಂದು ನಾನು ಹೇಳಿದ್ದೆನೆಂದೂ ಅದುವೇ ಆರೋಪಿಗಳು ಕೊಲೆ ಬೆದರಿಕೆಯೊಡ್ಡಲು ಕಾರಣವೆಂದು ದೂರಿನಲ್ಲಿ ವೈದ್ಯೆ ತಿಳಿಸಿದ್ದಾರೆ.

Read More

ಬಂಟ್ವಾಳ: ತಾಲೂಕಿನ ಗ್ರಾಮೀಣ ಭಾಗದ ಮುಲ್ಕಾಜೆ ಮಾಡದಲ್ಲಿ ಹಾಡಹಗಲೇ ಬೈಕ್ ಸವಾರನನ್ನು ಅಡ್ಡಗಟ್ಟಿ ನಾಲ್ವರು ದರೋಡೆ ನಡೆಸಿರುವ ಘಟನೆ ಗುರುವಾರ ನಡೆದಿದೆ. ಸುರತ್ಕಲ್ ನಿವಾಸಿ ಮಯ್ಯದಿ ಎಂಬವರು ವಿವಿಧ ಅಂಗಡಿಗಳಿಗೆ ಹೋಲ್‌ಸೇಲ್‌ನಲ್ಲಿ ಪೂರೈಸಿದ್ದ ಸಿಮೆಂಟ್‌ನ ಹಣವನ್ನು ವಸೂಲಿ ಮಾಡಿಕೊಂಡು ಬೈಕ್‌ನಲ್ಲಿ ಹಿಂದಿರುಗುತ್ತಿದ್ದ ವೇಳೆ ಈ ಘಟನೆ ನಡೆದಿದೆ ಎನ್ನಲಾಗಿದೆ. ಎರಡು ಬೈಕ್‌ಗಳಲ್ಲಿ ಬಂದ ನಾಲ್ವರು ವ್ಯಕ್ತಿಗಳು ಬೈಕ್ ಸವಾರನನ್ನು ಅಡ್ಡಗಟ್ಟಿ ತಲವಾರು ತೋರಿಸಿ ಬೆದರಿಸಿದ್ದಾರೆ. ಬಳಿಕ ಸವಾರನ ಬಳಿಯಿದ್ದ ಹಣದ ಬ್ಯಾಗ್‌ನ್ನು ದೋಚಿಕೊಂಡು ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ. ದರೋಡೆಗೊಳಗಾದ ಬ್ಯಾಗ್‌ನಲ್ಲಿ ರೂ. 8 ಲಕ್ಷಕ್ಕೂ ಅಧಿಕ ಹಣ ಇತ್ತು ಎನ್ನಲಾಗಿದೆ. ಘಟನೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮಾಹಿತಿ ಲಭ್ಯವಾಗುತ್ತಿದ್ದಂತೆ ಗ್ರಾಮಾಂತರ ಠಾಣೆಯ ಇನ್‌ಸ್ಪೆಕ್ಟರ್ ಅನಂತ ಪದ್ಮನಾಭ ಹಾಗೂ ಎಸ್‌ಐ ಮಂಜುನಾಥ್ ನೇತೃತ್ವದ ಪೊಲೀಸ್ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಪೊಲೀಸರು ಪ್ರಕರಣದ ತನಿಖೆ ಆರಂಭಿಸಿದ್ದು, ಆರೋಪಿಗಳ ಪತ್ತೆಗೆ ವಿವಿಧ ಆಯಾಮಗಳಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.…

Read More

ಉಡುಪಿ: ಬಾಳೆಹಣ್ಣುಗಳನ್ನು ಕೃತಕವಾಗಿ ಹಣ್ಣಾಗಿಸಲು ಹಾನಿಕಾರಕ ರಾಸಾಯನಿಕಗಳನ್ನು ಬಳಸಲಾಗುತ್ತಿದೆ ಎಂಬ ದೂರಿನ ಹಿನ್ನೆಲೆಯಲ್ಲಿ ಆಹಾರ ಮತ್ತು ಆರೋಗ್ಯ ಇಲಾಖೆ ಅಧಿಕಾರಿಗಳು ಉಡುಪಿಯ ಅಲೆವೂರಿನಲ್ಲಿರುವ ಮೂರರಿಂದ ನಾಲ್ಕು ಬಾಳೆಹಣ್ಣು ಸಂಗ್ರಹಣಾ ಕೇಂದ್ರಗಳ ಮೇಲೆ ದಾಳಿ ನಡೆಸಿದ್ದಾರೆ. ಕುಂದಾಪುರ ಸಹಾಯಕ ಆಯುಕ್ತೆ ರಶ್ಮಿ ಅವರ ನೇತೃತ್ವದಲ್ಲಿ ಆರೋಗ್ಯ ಇಲಾಖೆ ಹಾಗೂ ಆಹಾರ ಇಲಾಖೆ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ ಸಂಗ್ರಹಣಾ ಕೇಂದ್ರಗಳಲ್ಲಿ ತಪಾಸಣೆ ನಡೆಸಿದರು. ತಪಾಸಣೆ ವೇಳೆ ಬಾಳೆಹಣ್ಣುಗಳು ಶೀಘ್ರವಾಗಿ ಮಾಗುವಂತೆ ಮಾಡಲು ಹಾನಿಕಾರಕ ರಾಸಾಯನಿಕಗಳನ್ನು ಬಳಸಿರುವುದು ಪತ್ತೆಯಾಗಿದೆ ಎಂದು ತಿಳಿದುಬಂದಿದೆ. ಹಣ್ಣುಗಳಿಗೆ ಕೃತಕ ಬಣ್ಣ ನೀಡಲು ಬಳಸಲಾಗುತ್ತಿದೆ ಎನ್ನಲಾದ ಏಜೆಂಟ್‌ಗಳನ್ನೂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಬಾಳೆಹಣ್ಣುಗಳನ್ನು ಕೃತಕವಾಗಿ ಹಣ್ಣಾಗಿಸಲು ಹಾನಿಕಾರಕ ರಾಸಾಯನಿಕಗಳನ್ನು ಬಳಸಿದ ಆರೋಪದಡಿ ಸಂಬಂಧಪಟ್ಟವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಈ ಅಕ್ರಮ ಚಟುವಟಿಕೆಗೆ ಬಳಸಲಾಗಿದೆ ಎನ್ನಲಾದ ಕೆಲವು ವಾಹನಗಳನ್ನೂ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ವಶಪಡಿಸಿಕೊಂಡಿರುವ ರಾಸಾಯನಿಕಗಳು, ಕೃತಕ ಬಣ್ಣದ ಏಜೆಂಟ್‌ಗಳು ಹಾಗೂ ಇತರ ವಸ್ತುಗಳ ಪ್ರಮಾಣದ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.…

Read More

ಬೆಳ್ತಂಗಡಿ: ಚಾರ್ಮಾಡಿ ಚೆಕ್‌ಪೋಸ್ಟ್‌ನಲ್ಲಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಪಿಕಪ್ ವಾಹನವನ್ನು ಧರ್ಮಸ್ಥಳ ಪೊಲೀಸರು ಪತ್ತೆಹಚ್ಚಿ, ಚಾಲಕನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ನಿಯಮಿತ ತಪಾಸಣೆಯ ಸಮಯದಲ್ಲಿ, ಕಕ್ಕಿಂಜೆಯಿಂದ ಚಾರ್ಮಾಡಿ ಕಡೆಗೆ ಪ್ರಯಾಣಿಸುತ್ತಿದ್ದ KA 21 B 0593 ನೋಂದಣಿ ಸಂಖ್ಯೆಯನ್ನು ಹೊಂದಿರುವ ಪಿಕಪ್ ವಾಹನವನ್ನು ನಿಲ್ಲಿಸಲು ಪೊಲೀಸರು ಸಿಗ್ನಲ್ ಮಾಡಿದರು. ಚಾಲಕ ವಾಹನವನ್ನು ನಿಲ್ಲಿಸಿ ಸ್ಥಳದಿಂದ ಪರಾರಿಯಾಗಿದ್ದಾನೆ. ವಾಹನದಲ್ಲಿ 30 ಬುಟ್ಟಿ ಮರಳು ಪೊಲೀಸರಿಗೆ ಸಿಕ್ಕಿದೆ. ಚಾರ್ಮಾಡಿ ಗ್ರಾಮದ ನಿವಾಸಿ ಫಯಾಜ್ ವಿರುದ್ಧ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

Read More