Author: admin

ದಾವಣಗೆರೆ: ಒಂದೇ ಕುಟುಂಬದ ನಾಲ್ವರು ಅನುಮಾನಾಸ್ಪದವಾಗಿ ನಾಪತ್ತೆಯಾಗಿರುವ ಘಟನೆ ದಾವಣಗೆರೆಯ ಬನಶಂಕರಿ ಬಡಾವಣೆಯಲ್ಲಿ ನಡೆದಿದೆ. ಪತಿ ರಮೇಶ್ ಕುಮಾರ್(38), ಪತ್ನಿ ಜಯಶೀಲ(36), ಪುತ್ರ ಹಿತೇಶ್(9) ಮತ್ತು ಪುತ್ರಿ ಪ್ರೇರಣ(3) ನಾಪತ್ತೆಯಾದವರಾಗಿದ್ದು, ಬೆಂಗಳೂರಿಗೆ ಹೋಗಿ ಬರುವುದಾಗಿ ಹೇಳಿ ಹೋಗಿದ್ದ ಕುಟುಂಬ ವಾಪಸ್ ಬಂದಿಲ್ಲ. ದಾವಣಗೆರೆ ತಾಲೂಕಿನ ಶಾಗಲೆ ಗ್ರಾಮದ ನಿವಾಸಿಯಾಗಿದ್ದ ರಮೇಶ್ ಕುಮಾರ್, ಷೇರು ಹೂಡಿಕೆ ವ್ಯವಹಾರ ಮಾಡಿಕೊಂಡು ದಾವಣಗೆರೆಯಲ್ಲಿ ನೆಲೆಸಿದ್ದರು. ಸಾರ್ವಜನಿಕರಿಂದ ಹಣ ಸಂಗ್ರಹಿಸಿ ಷೇರು ಮಾರುಕಟ್ಟೆ ಹೂಡಿಕೆ ಮಾಡಿದ್ದರು. ಆದರೆ ಇತ್ತೀಚೆಗೆ ಷೇರು ಮಾರುಕಟ್ಟೆಯಲ್ಲಿ ನಷ್ಟವಾಗಿತ್ತು ಎನ್ನಲಾಗಿದೆ. ಯಾರ ಸಂಪರ್ಕಕ್ಕೂ ಸಿಕ್ಕಿಲ್ಲ! ಆ.14ರಂದು ಪೋಷಕರಿಗೆ ಕರೆ ಮಾಡಿದ್ದ ರಮೇಶ್ ಕುಮಾರ್​​, ಬೆಂಗಳೂರಿಗೆ ಹೋಗಿ ಬರುವುದಾಗಿ ಹೇಳಿದ್ದರು. ಕಾರು, ಬೈಕ್ ಮನೆಯ ಬಳಿಯೇ ಬಿಟ್ಟು ಆಟೋದಲ್ಲಿ ಕುಟುಂಬಸ್ಥರು ನಗರದ KSRTC ಬಸ್ ನಿಲ್ದಾಣಕ್ಕೆ ಹೋಗಿದ್ದರು. ಬಳಿಕ ರಮೇಶ್ ಕುಮಾರ್​ ಮೊಬೈಲ್ ಸ್ವಿಚ್​ ಆಫ್​ ಮಾಡಿಕೊಂಡಿದ್ದು, ಅಂದಿನಿಂದ ಈವರೆಗೂ ಯಾರ ಸಂಪರ್ಕಕ್ಕೂ ಸಿಕ್ಕಿಲ್ಲ. ಸಂಬಂಧಿಕರ ಮನೆಗಳಿಗೂ ಹೋಗಿಲ್ಲ. ಇದರಿಂದ ಆತಂಕಗೊಂಡು ರಮೇಶ್​​ ಕುಮಾರ್​…

Read More

ಕಾಸರಗೋಡು: ವಿವಾಹ ವಿಚ್ಛೇದನ ಪ್ರಕರಣ ದಾಖಲಿಸಿದ ದ್ವೇಷದಿಂದ ಪತ್ನಿ ಮತ್ತು ಅತ್ತೆಯ ಮೈಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಸಂದರ್ಭದಲ್ಲಿ ಬೆಂಕಿ ತಗಲಿ ಗಂಭೀರ ಸುಟ್ಟು ಗಾಯಗೊಂಡ ಯುವಕ ಮಂಗಳವಾರ ಸಾವಿಗೀಡಾದ ಘಟನೆ ವರದಿಯಾಗಿದೆ. ಕರಿವೆಳ್ಳೂರು ಕೊಳಮ್ಮಲ್ ವರಿಕ್ಕರ ನಿವಾಸಿಯಾದ ಆಟೋ ರಿಕ್ಷಾ ಚಾಲಕ ಸಿ.ವಿ.ಸನಲ್ ಕುಮಾರ್ (46) ಸಾವಿಗೀಡಾದವರು ಸನಲ್ ಕುಮಾರ್ ಮತ್ತು ಪತ್ನಿ ಪ್ರಜೀಶ ದಾಂಪತ್ಯದಲ್ಲಿ ಬಿರುಕುಂಟಾಗಿತ್ತು. ಇದರಿಂದ ಪತ್ನಿ ಪ್ರಜೀಶ ವಿವಾಹ ವಿಚ್ಛೇದನ ಪ್ರಕರಣ ದಾಖಲಿಸಿದ್ದರು. ಈ ದ್ವೇಷದಿಂದ ಭಾನುವಾರ ಸನಲ್ ಕುಮಾರ್ ಕರಿವೆಳ್ಳೂರು ಕೂಕಾನಂ ಶ್ರೀ ಮುತ್ತಪ್ಪನ್ ಕ್ಷೇತ್ರ ಬಳಿಯಿರುವ ಪತ್ನಿ ಪ್ರಜೀಶರ ಮನೆಗೆ ತೆರಳಿ ಪ್ರಜೀಶ ಹಾಗೂ ಆಕೆಯ ತಾಯಿ ಪದ್ಮಿನಿ ಅವರ ಮೈಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದ. ಈ ಸಂದರ್ಭದಲ್ಲಿ ಬೆಂಕಿ ಸನಲ್ ಕುಮಾರ್‌ಗೂ ತಗಲಿ ಗಂಭೀರ ಸುಟ್ಟು ಗಾಯಗೊಂಡಿದ್ದರು. ಕಣ್ಣೂರಿನ ವೈದ್ಯಕೀಯ ಆಸ್ಪತ್ರೆಗೆ ದಾಖಲಿಸಿದರೂ ರಕ್ಷಿಸಲು ಸಾಧ್ಯವಾಗಲಿಲ್ಲ. ಪ್ರಜೀಶ ಹಾಗೂ ಪದ್ಮಿನಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Read More

ಮೈಸೂರು: ಮೈಸೂರು ಜಿಲ್ಲೆಯ ಟಿ. ನರಸೀಪುರ ತಾಲೂಕಿನ ತಲಕಾಡು ಗ್ರಾಮದಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತಿಯ ಶವ ಪತ್ತೆಯಾಗಿದೆ. ಮಹೇಶ್(40) ಮೃತಪಟ್ಟವರು ಎಂದು ಗುರುತಿಸಲಾಗಿದೆ. ನೇಣು ಬಿಗಿದ ಸ್ಥಿತಿಯಲ್ಲಿ ಅವರ ಶವ ಪತ್ತೆಯಾಗಿದ್ದು ಪತ್ನಿಯೇ ಕೊಲೆ ಮಾಡಿರುವುದಾಗಿ ಆರೋಪ ಕೇಳಿ ಬಂದಿದೆ. ಪತ್ನಿ ಪುಷ್ಪಲತಾ ವಿರುದ್ಧ ಮಹೇಶ್ ಸಂಬಂಧಿಕರು ಆರೋಪ ಮಾಡಿದ್ದಾರೆ. ದಂಪತಿಯ ನಡುವೆ ಆಗಾಗ ಜಗಳ ನಡೆಯುತ್ತಿತ್ತು ಎಂದು ಹೇಳಲಾಗಿದೆ. ಮಹೇಶ್ ಪತ್ನಿ ಪುಷ್ಪಲತಾ ಅವರನ್ನು ಪೊಲೀಸರು ವಿಚಾರಣೆ ನಡೆಸಿದ್ದಾರೆ. ತಲಕಾಡು ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು: ನಿತ್ಯ ಕುಡಿದು ಬಂದು ತಾಯಿಗೆ ಕಿರುಕುಳ ನೀಡುತ್ತಿದ್ದ ತಂದೆಯನ್ನು ಮಗನೇ ಭೀಕರವಾಗಿ ಹತ್ಯೆ  ಮಾಡಿರುವ ಆಘಾತಕಾರಿ ಘಟನೆ ಬೆಂಗಳೂರಿನ  ಶಿವಪುರದಲ್ಲಿ  ನಡೆದಿದೆ. ಪತ್ನಿ ಮೇಲಿನ ಹಲ್ಲೆ ತಡೆಯಲು ಹೋಗಿ ದುರಂತ ಶ್ರೀಧರ್ ಮೂರ್ತಿ ಅವರು ತಮ್ಮ ಮೂವರು ಮಕ್ಕಳೊಂದಿಗೆ ಶಿವಪುರದಲ್ಲಿ ವಾಸವಾಗಿದ್ದರು. ಅವರು ಪ್ರತಿದಿನ ಮದ್ಯಪಾನ ಮಾಡಿ ಮನೆಯಲ್ಲಿ ಗಲಾಟೆ ಮಾಡುತ್ತಿದ್ದರೆನ್ನಲಾಗಿದೆ. ಮಂಗಳವಾರವೂ ಗಲಾಟೆ ತೆಗೆದು ಪತ್ನಿಯ ಮೇಲೆ ಕತ್ತರಿಯಿಂದ ಹಲ್ಲೆ ನಡೆಸಲು ಮುಂದಾಗಿದ್ದಾರೆ. ಈ ವೇಳೆ ತಾಯಿಯ ರಕ್ಷಣೆಗೆ ಬಂದ ಎರಡನೇ ಮಗ ಉದಯ್, ತಂದೆಯ ಮೇಲೆ ಹಲ್ಲೆ ನಡೆಸಿದ್ದಾನೆ. ತೀವ್ರವಾಗಿ ಪೆಟ್ಟು ಬಿದ್ದ ಪರಿಣಾಮ ಶ್ರೀಧರ್ ಮೂರ್ತಿ ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ. ಆರೋಪಿ ಮಗನ ಬಂಧನ ವಿಷಯ ತಿಳಿದ ತಕ್ಷಣ ಸ್ಥಳಕ್ಕೆ ಆಗಮಿಸಿದ ಮಾದನಾಯಕನಹಳ್ಳಿ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ತಂದೆಯನ್ನು ಹತ್ಯೆ ಮಾಡಿದ ಆರೋಪಿ ಮಗ ಉದಯ್‌ನನ್ನು ಪೊಲೀಸರು ಬಂಧಿಸಿದ್ದು, ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

Read More

ಚಿತ್ರದುರ್ಗ: ಕಳೆದ ಶುಕ್ರವಾರ ಮದುವೆಯಾದ ದಿನವೇ ನವ ವಿವಾಹಿತೆ ನಾಪತ್ತೆಯಾಗಿದ್ದಳು. ಮೂರು ದಿನಗಳ ಬಳಿಕ ಬಾವಿಯಲ್ಲಿ ಶವವಾಗಿ ಪತ್ತೆಯಾಗಿದ್ದಳು. ಇದೀಗ ಈ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್​ ಸಿಕ್ಕಿದೆ. ಪೊಲೀಸರ ತನಿಖೆಯಲ್ಲಿ ಗಂಡನ ಸ್ನೇಹಿತರಿಂದಲೇ ಅತ್ಯಾಚಾರ ಎಸಗಿ ಕೊಲೆ ಮಾಡಿದ್ದು ಬೆಳಕಿಗೆ ಬಂದಿದ್ದು, ಚಿತ್ರದುರ್ಗ ಜಿಲ್ಲೆಯ ನಾಯಕನಹಟ್ಟಿ ಪೊಲೀಸರು ಇಬ್ಬರು ಹಂತಕರನ್ನು ಬಂಧಿಸಿದ್ದಾರೆ. ಆರೋಪಿ ಬೋರಯ್ಯ ಹಾಗೂ ಕಾರಯ್ಯ ಎಂಬ ಇಬ್ಬರು ಆರೋಪಿಗಳು ಅರೆಸ್ಟ್ ಆಗಿದ್ದಾರೆ. ಸ್ನೇಹಿತನಿಗೆ ಗೆಳೆಯರೇ ನಿಂತು ಬೆಳಗ್ಗೆ ಮದುವೆ ಮಾಡಿಸಿದ್ದರು ಆರೋಪಿಗಳಾದ ಬೋರಯ್ಯ ಮತ್ತು ಕಾರಯ್ಯ ಕಳೆದ ಶುಕ್ರವಾರ ತಮ್ಮ ಸ್ನೇಹಿತನಾದ ಗಜೇಂದ್ರನ ಪ್ರೇಮ ವಿವಾಹವನ್ನು ಮುಂದೆ ನಿಂತು ಮಾಡಿಸಿದ್ದರು. ಆದ್ರೆ, ಅದೇ ದಿನ ರಾತ್ರಿ ಪಾಪಿಗಳು ನೀಚ ಕೃತ್ಯವನ್ನು ಎಸಗಿದ್ದಾರೆ. ಸ್ನೇಹಿತನ ಹೆಂಡತಿ ಅಂತಲೂ ನೋಡದೇ ಕಾಮುಕರಂತೆ ಇಬ್ಬರು ಎರಗಿದ್ದಾರೆ. ನವವಿವಾಹಿತೆಯನ್ನು ಎನ್.ಮಹದೇವಪುರ ಬಳಿ ಕರೆದೊಯ್ದು ಅತ್ಯಾಚಾರ ಎಸಗಿ ಬಳಿಕ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾರೆ. ಬಳಿಕ ಕೊಲೆ ಪ್ರಕರಣ ಮುಚ್ಚಿ ಹಾಕಲು ಶವವನ್ನು ಬಾವಿಗೆ ಎಸೆದಿದ್ದಾರೆ. ಮೂರು…

Read More

ಬೆಳ್ಳೂರು: ಮಂಗಳೂರು-ಬೆಂಗಳೂರು ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ಬೆಳ್ಳೂರು ಟೋಲ್ ಬಳಿ ಸೈನ್‌ಬೋರ್ಡ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದು, 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಬೆಳ್ಳೂರು ಟೋಲ್ ಬಳಿ ಈ ದುರ್ಘಟನೆ ಸಂಭವಿಸಿದೆ. ವೇಗವಾಗಿ ಬರುತ್ತಿದ್ದ ಬಸ್ ಟೋಲ್ ಸಮೀಪ ಅಳವಡಿಸಿದ್ದ ಸೈನ್‌ಬೋರ್ಡ್‌ಗೆ ಡಿಕ್ಕಿ ಹೊಡೆದ ರಭಸಕ್ಕೆ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಅಪಘಾತದಲ್ಲಿ ಬೆಂಗಳೂರಿನ ನಿವಾಸಿ ಕಸ್ತೂರಿ ಶಾನ್‌ಬಾಗ್ (64) ಹಾಗೂ ಬಸ್ ಕ್ಲೀನರ್ ಅಶೋಕ್ (25) ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಬಸ್‌ನಲ್ಲಿದ್ದ 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯಗಳಾಗಿದ್ದು, ಗಾಯಾಳುಗಳನ್ನು ಬೆಳ್ಳೂರು ಬಿಜಿಎಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಗೆ ಸಂಬಂಧಿಸಿದಂತೆ ಬೆಳ್ಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಪಘಾತದ ನಿಖರ ಕಾರಣದ ಬಗ್ಗೆ ತನಿಖೆ ಮುಂದುವರಿದಿದೆ.

Read More

ಉಡುಪಿ: ಉಡುಪಿಯಿಂದ ಸಾಗರದತ್ತ ತೆರಳುತ್ತಿದ್ದ ಖಾಸಗಿ ಬಸ್‌ನಲ್ಲಿ ಬ್ರಹ್ಮಾವರ ಸಮೀಪ ಬೆಂಕಿ ಹೊತ್ತಿಕೊಂಡ ಘಟನೆ ಸಂಭವಿಸಿದ್ದು, ಬಸ್‌ನಲ್ಲಿದ್ದ ಏಳು ಪ್ರಯಾಣಿಕರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಉಡುಪಿಯಿಂದ ಸಾಗರದತ್ತ ತೆರಳುತ್ತಿದ್ದ ಖಾಸಗಿ ಬಸ್‌ನಲ್ಲಿ ಏಕಾಏಕಿ ಹೊಗೆ ಕಾಣಿಸಿಕೊಂಡಿದೆ. ಬಳಿಕ ಬಸ್‌ನ ಎಲೆಕ್ಟ್ರಿಕಲ್ ಬಾಕ್ಸ್  ಭಾಗದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕೆಲವೇ ಕ್ಷಣಗಳಲ್ಲಿ ಬೆಂಕಿ ವ್ಯಾಪಿಸಲು ಆರಂಭಿಸಿದೆ. ಪರಿಸ್ಥಿತಿಯ ಗಂಭೀರತೆಯನ್ನು ಅರಿತ ಬಸ್ ನಿರ್ವಾಹಕರು ತಕ್ಷಣ ಸಮಯಪ್ರಜ್ಞೆ ಮೆರೆದು ಬಸ್ ನಿಲ್ಲಿಸಿ ಎಲ್ಲಾ ಪ್ರಯಾಣಿಕರನ್ನು ಸುರಕ್ಷಿತವಾಗಿ ಕೆಳಗಿಳಿಸಿದ್ದಾನೆ. ನಿರ್ವಾಹಕನ ತ್ವರಿತ ಕ್ರಮದಿಂದ ಸಂಭವಿಸಬಹುದಾಗಿದ್ದ ದೊಡ್ಡ ದುರಂತ ತಪ್ಪಿದೆ. ಬೆಂಕಿ ಕಾಣಿಸಿಕೊಂಡ ವಿಷಯ ತಿಳಿಯುತ್ತಿದ್ದಂತೆಯೇ ಉಡುಪಿ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದಾರೆ. ಬಳಿಕ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

Read More

ನಲ್ಗೊಂಡ : ನಲ್ಗೊಂಡ ಜಿಲ್ಲೆಯ ಕೊಂಡಮಲ್ಲೇಪಲ್ಲಿ ಮಂಡಲ ಕೇಂದ್ರದಲ್ಲಿರುವ ನಾಗಾರ್ಜುನ ಪಬ್ಲಿಕ್ ಶಾಲೆಯ ಪ್ರಾಂಶುಪಾಲೆ ಕೆ. ರೂಪಾ ರೆಡ್ಡಿ ಅವರ ಹತ್ಯೆ ಪ್ರಕರಣದಲ್ಲಿ ಆಘಾತಕಾರಿ ಸತ್ಯ ಬೆಳಕಿಗೆ ಬಂದಿದ್ದು, ಅವರು ನಡೆಸುತ್ತಿದ್ದ ಶಾಲೆಯ 10ನೇ ತರಗತಿಯ ಇಬ್ಬರು ವಿದ್ಯಾರ್ಥಿಗಳೇ ಈ ಕೃತ್ಯ ಎಸಗಿರುವುದು ಪೊಲೀಸ್ ತನಿಖೆಯಿಂದ ತಿಳಿದುಬಂದಿದೆ. ವರ್ಗಾವಣೆ ಪ್ರಮಾಣಪತ್ರ (TC) ನೀಡಿ ಶಾಲೆಯಿಂದ ವಜಾಗೊಳಿಸಿದ್ದಕ್ಕಾಗಿ ಆಕ್ರೋಶಗೊಂಡಿದ್ದ ವಿದ್ಯಾರ್ಥಿ, ರೂಪಾ ರೆಡ್ಡಿ ಅವರ ವಿರುದ್ಧ ತೀವ್ರ ದ್ವೇಷ ಹೊಂದಿದ್ದನು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಅಗಸ್ಟ್ 11 ರಂದು ಮುಖವಾಡ ಹಾಗೂ ಹೂಡಿ ಧರಿಸಿದ್ದ ಇಬ್ಬರು ವಿದ್ಯಾರ್ಥಿಗಳು ರೂಪಾ ರೆಡ್ಡಿ ಅವರ ಮನೆಗೆ ತೆರಳಿದ್ದರು. ಒಬ್ಬ ವಿದ್ಯಾರ್ಥಿ ಮನೆಗೆ ನುಗ್ಗಿ ಹಣ ನೀಡುವಂತೆ ಬೆದರಿಕೆ ಹಾಕಿದಾಗ ಪ್ರಾಂಶುಪಾಲೆ ವಿರೋಧಿಸಿದ್ದಾರೆ. ಈ ವೇಳೆ ಆಕಸ್ಮಿಕವಾಗಿ ಮುಖವಾಡ ಕಳಚಿ ಬಿದ್ದಾಗ, ವಿದ್ಯಾರ್ಥಿಯನ್ನು ಗುರುತಿಸಿದ ರೂಪಾ ರೆಡ್ಡಿ ಕಿರುಚಾಡಿದ್ದಾರೆ. ತನ್ನ ಗುರುತು ಸಿಕ್ಕಿಬೀಳುವ ಭಯದಿಂದ ವಿದ್ಯಾರ್ಥಿಯು ತಂದಿದ್ದ ಚಾಕುವಿನಿಂದ ಆಕೆಗೆ ಇರಿದು ಕೊಲೆ ಮಾಡಿದ್ದಾನೆ. ಕೊಲೆಯ…

Read More

ಮಂಗಳೂರು: ನಗರದಲ್ಲಿ ಮಾದಕ ವಸ್ತುಗಳನ್ನು ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಜಾಲಗಳ ವಿರುದ್ಧ ಕಾರ್ಯಾಚರಣೆ ಚುರುಕುಗೊಳಿಸಿರುವ ಮಂಗಳೂರು ನಗರ ಪೊಲೀಸರು, ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಿ ಲಕ್ಷಾಂತರ ರೂಪಾಯಿ ಮೌಲ್ಯದ MDMA ಹಾಗೂ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ಪ್ರಕರಣ 1: ಪಂಪ್‌ವೆಲ್‌ನಲ್ಲಿ ಆಟೋದಲ್ಲಿ MDMA ಮಾರಾಟ – ಕೇರಳದ ವ್ಯಕ್ತಿ ಬಂಧನ ಆಗಸ್ಟ್ 18 ರಂದು ಮಂಗಳೂರು ಪೂರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಪಂಪ್‌ವೆಲ್‌ನಿಂದ ನಂತೂರು ಕಡೆಗೆ ತೆರಳುವ ಸರ್ವಿಸ್ ರಸ್ತೆಯಲ್ಲಿ ಆಟೋ ರಿಕ್ಷಾದಲ್ಲಿ ವ್ಯಕ್ತಿಯೊಬ್ಬ MDMA ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ದೊರೆತಿತ್ತು. ತಕ್ಷಣ ಸ್ಥಳಕ್ಕೆ ದಾಳಿ ನಡೆಸಿದ ಪೊಲೀಸರು ಕೇರಳ ರಾಜ್ಯದ ಮಂಜೇಶ್ವರದ ವರ್ಕಾಡಿ ನಿವಾಸಿ ಮೊಹಮ್ಮದ್ ಇರ್ಷಾದ್ (30) ಎಂಬಾತನನ್ನು ಬಂಧಿಸಿದ್ದಾರೆ. ಆರೋಪಿಯಿಂದ ₹1,36,000 ಮೌಲ್ಯದ 13.69 ಗ್ರಾಂ MDMA, ನಗದು ಹಣ ಹಾಗೂ ಕೃತ್ಯಕ್ಕೆ ಬಳಸಿದ್ದ ಆಟೋ ರಿಕ್ಷಾ ಸೇರಿದಂತೆ ಒಟ್ಟು ₹2,94,500 ಮೌಲ್ಯದ ಸ್ವತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ NDPS…

Read More

ಮುಂಬೈ : ಮುಂಬೈನಲ್ಲಿ  ಪ್ರಸಿದ್ಧ ವಿಚಾರವಾದಿ ಹಾಗೂ ಮೂಢನಂಬಿಕೆ ವಿರೋಧಿ ಹೋರಾಟಗಾರ ಡಾ. ನರೇಂದ್ರ ಧಾಬೋಲ್ಕರ್ ಹತ್ಯೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಪ್ರಮುಖ ಆರೋಪಿ ಸಚಿನ್ ಅಂದೂರೆಗೆ ಮುಂಬೈ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ. ಆರೋಪಿಯ ಜೀವಾವಧಿ ಶಿಕ್ಷೆಯನ್ನು ಅಮಾನತುಗೊಳಿಸಿರುವ ನ್ಯಾಯಪೀಠ, ಆತನಿಗೆ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ. ಕಳೆದ 2024ರ ಮೇ ತಿಂಗಳಲ್ಲಿ ಪುಣೆಯ ವಿಶೇಷ ನ್ಯಾಯಾಲಯವು ಸಚಿನ್ ಅಂದೂರೆ ಹಾಗೂ ಶರದ್ ಕಲಾಸ್ಕರ್‌ಗೆ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿತ್ತು. ಈ ತೀರ್ಪನ್ನು ಪ್ರಶ್ನಿಸಿ ಆರೋಪಿಗಳು ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ಪೈಕಿ ಶರದ್ ಕಲಾಸ್ಕರ್‌ಗೆ ಈಗಾಗಲೇ ಜಾಮೀನು ಸಿಕ್ಕಿದ್ದು, ಇದೀಗ ಮತ್ತೊಬ್ಬ ಆರೋಪಿ ಸಚಿನ್ ಅಂದೂರೆಗೂ ಜಾಮೀನು ದೊರೆತಂತಾಗಿದೆ. ಪ್ರಕರಣದ ಸುದೀರ್ಘ ವಿಚಾರಣೆ ನಡೆಸಿದ ಮುಂಬೈ ಹೈಕೋರ್ಟ್‌, ಸಚಿನ್ ಅಂದೂರೆ ವಿರುದ್ಧ ಸಲ್ಲಿಕೆಯಾಗಿರುವ ಸಾಕ್ಷ್ಯಾಧಾರಗಳು ಅತ್ಯಂತ ದುರ್ಬಲವಾಗಿವೆ ಎಂದು ಅಭಿಪ್ರಾಯಪಟ್ಟಿದೆ. ಸಾಕ್ಷಿಗಳ ಹೇಳಿಕೆಯಲ್ಲಿ ಸ್ಪಷ್ಟತೆ ಇಲ್ಲದಿರುವುದು ಮತ್ತು ಸೂಕ್ತ ಪುರಾವೆಗಳ ಕೊರತೆಯನ್ನು ಉಲ್ಲೇಖಿಸಿ, ಮೇಲ್ಮನವಿ ವಿಚಾರಣೆ…

Read More