Author: admin

ಮಂಗಳೂರು: ನಗರದ ಜಿಲ್ಲಾ ಕೇಂದ್ರ ಕಾರಾಗೃಹದಲ್ಲಿ ಅಳವಡಿಸಲಾಗಿರುವ ಜಾಮರ್‌ನಿಂದಾಗಿ ಕಳೆದ ಒಂದೂವರೆ ವರ್ಷದಿಂದ ಸುತ್ತಮುತ್ತಲಿನ ಸಾರ್ವಜನಿಕರು ಮೊಬೈಲ್ ನೆಟ್ವರ್ಕ್ ಸಿಗದೇ ತೀವ್ರ ಸಮಸ್ಯೆ ಅನುಭವಿಸುತ್ತಿದ್ದರೂ, ರಾಜ್ಯ ಕಾಂಗ್ರೆಸ್ ಸರ್ಕಾರ ಕಾಲಹರಣ ಮಾಡಿದೆಯೇ ಹೊರತು ಇಚ್ಛಾಶಕ್ತಿ ತೋರಿಲ್ಲ. ಕೂಡಲೇ ಕಾಲಮಿತಿ ನಿಗದಿಪಡಿಸಿ ಸಮಸ್ಯೆ ಇತ್ಯರ್ಥಪಡಿಸುವಂತೆ ಶಾಸಕ ವೇದವ್ಯಾಸ ಕಾಮತ್ ರವರು ಅಧಿವೇಶನದಲ್ಲಿ ಮತ್ತೊಮ್ಮೆ ಆಗ್ರಹಿಸಿದರು. ಸಾರ್ವಜನಿಕರ ಬೇಡಿಕೆಯಂತೆ ಕಳೆದ ಒಂದೂವರೆ ವರ್ಷದಿಂದ ಸಂಬಂಧಪಟ್ಟವರಲ್ಲಿ ಹಲವು ಬಾರಿ ಮನವಿ ಮಾಡಲಾಗಿದೆ. ಪ್ರತಿಭಟನೆಗಳಾಗಿವೆ. ಅಂದಿನ ಜಿಲ್ಲಾ ಉಸ್ತುವಾರಿ ಸಚಿವರಿಗೆ, ಗೃಹ ಸಚಿವರಿಗೆ ಮಾತ್ರವಲ್ಲದೇ, ಅಧಿವೇಶನದಲ್ಲೂ ನಾನೇ ಪ್ರಸ್ತಾಪಿಸಿದ್ದೇನೆ. ಜಿಲ್ಲಾ ನ್ಯಾಯಾಲಯದ ವಕೀಲರು ಸಹ ಈ ಬಗ್ಗೆ ಹೈಕೋರ್ಟ್ ಗೆ ಹೋಗಿದ್ದಾರೆ. ಆದರೂ ದಪ್ಪ ಚರ್ಮದ ರಾಜ್ಯ ಕಾಂಗ್ರೆಸ್ ಸರ್ಕಾರ ಸಮಸ್ಯೆ ಬಗೆಹರಿಸಲು ನಿರ್ಲಕ್ಷ್ಯ ತೋರಿದೆ ಎಂದರು. ಸಾರ್ವಜನಿಕರ ಬೇಡಿಕೆಯಂತೆ ಕಳೆದ ಒಂದೂವರೆ ವರ್ಷದಿಂದ ಸಂಬಂಧಪಟ್ಟವರಲ್ಲಿ ಹಲವು ಬಾರಿ ಮನವಿ ಮಾಡಲಾಗಿದೆ. ಪ್ರತಿಭಟನೆಗಳಾಗಿವೆ. ಅಂದಿನ ಜಿಲ್ಲಾ ಉಸ್ತುವಾರಿ ಸಚಿವರಿಗೆ, ಗೃಹ ಸಚಿವರಿಗೆ ಮಾತ್ರವಲ್ಲದೇ, ಅಧಿವೇಶನದಲ್ಲೂ ನಾನೇ ಪ್ರಸ್ತಾಪಿಸಿದ್ದೇನೆ.…

Read More

ತುಮಕೂರು: ಶಾಲೆಯ ಸಮೀಪವಿದ್ದ ನಂದಿನಿ ಡೈರಿಯ ಪಿಲ್ಲರ್ ಏಕಾಏಕಿ ಕುಸಿದು ಬಿದ್ದ ಪರಿಣಾಮ 4ನೇ ತರಗತಿ ವಿದ್ಯಾರ್ಥಿಯೊಬ್ಬ ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟ ಘಟನೆ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಬೆಳಗಿಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ ಧನುಷ್ ಮೃತಪಟ್ಟ ಬಾಲಕ. ಘಟನೆಯಲ್ಲಿ ಇಬ್ಬರು ವಿದ್ಯಾರ್ಥಿಗಳು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬುಧವಾರ ಬೆಳಿಗ್ಗೆ ಶಾಲೆಗೆ ಬಂದಿದ್ದ ಧನುಷ್ ಹಾಗೂ ಆತನ ಗೆಳೆಯರು ಶಾಲೆಯ ಪಕ್ಕದಲ್ಲಿದ್ದ ನಂದಿನಿ ಡೈರಿ ಕಟ್ಟಡದ ಬಳಿ ಆಟವಾಡುತ್ತಿದ್ದರು. ಡೈರಿಯ ಪಿಲ್ಲರ್‌ಗೆ ಕಟ್ಟಲಾಗಿದ್ದ ತೋರಣದ ಹಗ್ಗ ಹಿಡಿದು ಮಕ್ಕಳು ಜೋಕಾಲಿ ಆಡುತ್ತಿದ್ದಾಗ, ಏಕಾಏಕಿ ಪಿಲ್ಲರ್ ಕುಸಿದು ಧನುಷ್‌ ತಲೆಯ ಮೇಲೆ ಬಿದ್ದಿದೆ. ಪಿಲ್ಲರ್ ಭಾರಕ್ಕೆ ಬಾಲಕನ ತಲೆಬುರುಡೆ ಛಿದ್ರಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಡೈರಿ ಮುಂಭಾಗದ ಪಿಲ್ಲರ್ ಮುಂಚಿನಿಂದಲೂ ಬಿರುಕು ಬಿಟ್ಟಿತ್ತು, ಇದನ್ನು ಸರಿಪಡಿಸದೆ ನಿರ್ಲಕ್ಷ್ಯ ವಹಿಸಿದ್ದೇ ದುರಂತಕ್ಕೆ ಕಾರಣ ಎಂದು ಗ್ರಾಮಸ್ಥರು ಕಳಪೆ ಕಾಮಗಾರಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ತಹಶೀಲ್ದಾರ್…

Read More

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ನ ಇಕ್ಬಾಲ್ ಶೇಖ್ ವಿಚಿತ್ರ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದು, ದೇಹದಾದ್ಯಂತ ತೀವ್ರ ಉರಿ ಕಾಣಿಸಿಕೊಳ್ಳುವ ಕಾರಣ ಗಂಟೆಗಟ್ಟಲೆ ಕೆರೆಯ ನೀರಿನಲ್ಲಿ ಮುಳುಗಿ ಇರುತ್ತಿದ್ದ. ಈ ಪ್ರಕರಣದ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಬಳಿಕ ಉದ್ಯಮಿ ಅನಂತ್ ಅಂಬಾನಿ ಈತನ ಸಹಾಯಕ್ಕೆ ಬಂದಿದ್ದು, ಇದೀಗ ಇಕ್ಬಾಲ್‌ನನ್ನು ಚಿಕಿತ್ಸೆಗಾಗಿ ಮುಂಬೈಗೆ ಏರ್‌ಲಿಫ್ಟ್ ಮಾಡಲಾಗಿದೆ. ಅನಂತ್ ಅಂಬಾನಿ ಅವರು ಇಕ್ಬಾಲ್‌ನ ಪೋಷಕರು ಸಾಮಾಜಿಕ ಜಾಲತಾಣದಲ್ಲಿ ಸಹಾಯ ಕೋರಿ ಮಾಡಿದ್ದ ಮನವಿಯನ್ನು ಗಮನಿಸಿದ್ದರು. ಬಾಲಕನ ಚಿಕಿತ್ಸೆಗೆ ನೆರವು ನೀಡಲು ಮುಂದಾದ ಅವರು, ಆತನನ್ನು ಮುಂಬೈನ ಸರ್ ಹೆಚ್.ಎನ್.ರಿಲಯನ್ಸ್ ಫೌಂಡೇಶನ್ ಆಸ್ಪತ್ರೆಗೆ ದಾಖಲಿಸುವ ವ್ಯವಸ್ಥೆ ಮಾಡಿದ್ದಾರೆ. ಆಸ್ಪತ್ರೆಯಲ್ಲಿ ಇಕ್ಬಾಲ್‌ನ ಆರೋಗ್ಯ ಸ್ಥಿತಿಯನ್ನು ವೈದ್ಯರು ಸಮಗ್ರವಾಗಿ ಪರಿಶೀಲಿಸಲಿದ್ದಾರೆ. ದೇಹದಾದ್ಯಂತ ಉರಿ ಕಾಣಿಸಿಕೊಳ್ಳಲು ಕಾರಣವೇನು ಎಂಬುದನ್ನು ಪತ್ತೆಹಚ್ಚಲು ವಿವಿಧ ವೈದ್ಯಕೀಯ ಪರೀಕ್ಷೆಗಳನ್ನು ನಡೆಸಿ, ಅಗತ್ಯವಿರುವ ಚಿಕಿತ್ಸೆಯನ್ನು ನೀಡಲಾಗುತ್ತದೆ. ಇಕ್ಬಾಲ್‌ನ ಕುಟುಂಬವು ಆತನಿಗೆ ದೀರ್ಘಕಾಲದಿಂದ ಆರೋಗ್ಯ ಸಮಸ್ಯೆ ಕಾಡುತ್ತಿದೆ ಎಂದು ಹೇಳಿದೆ. ಈ ಹಿಂದೆ ಹಲವು ಬಾರಿ…

Read More

ದಾವಣಗೆರೆ: ಅಕ್ರಮ ಸಂಬಂಧಕ್ಕೆಪತಿ ಅಡ್ಡಿಯಾಗಿದ್ದಾನೆ ಎಂದು ಆರೋಪಿಸಿ ಪತ್ನಿಯೇ ಪ್ರಿಯಕರನ ಜೊತೆ ಸೇರಿ ಗಂಡನನ್ನು ಕೊಲೆ ಮಾಡಿ ಬಳಿಕ ಮೃತದೇಹವನ್ನು ತುಂಗಭದ್ರಾ ನದಿಗೆ  ಎಸೆದಿರುವ ಘಟನೆ ದಾವಣಗೆರೆ ತಾಲೂಕಿನ ಪಾಮೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ಪಾಮೇನಹಳ್ಳಿ ಗ್ರಾಮದ ರಘು (36) ಕೊಲೆಯಾದ ವ್ಯಕ್ತಿ. ಆತನ ಪತ್ನಿ ಶೃತಿ ಹಾಗೂ ಆಕೆಯ ಪ್ರಿಯಕರ ಉಬೇದುಲ್ಲಾ ಪ್ರಕರಣದ ಪ್ರಮುಖ ಆರೋಪಿಗಳಾಗಿದ್ದು, ಮೃತದೇಹ ಸಾಗಿಸಲು ಸಹಕರಿಸಿದ ಆರೋಪದಲ್ಲಿ ಉಬೇದುಲ್ಲಾ ಸ್ನೇಹಿತ ಸುರೇಶ್‌ನನ್ನೂ ಪೊಲೀಸರು ಬಂಧಿಸಿದ್ದಾರೆ. ರಘು ಮತ್ತು ಶೃತಿ ಸುಮಾರು 12 ವರ್ಷಗಳ ಹಿಂದೆ ವಿವಾಹವಾಗಿದ್ದರು. ರಘುವಿಗೆ ಕುಡಿತದ ಚಟವಿದ್ದ ಹಿನ್ನೆಲೆಯಲ್ಲಿ ದಂಪತಿ ನಡುವೆ ಆಗಾಗ್ಗೆ ಜಗಳ ನಡೆಯುತ್ತಿತ್ತು ಎನ್ನಲಾಗಿದೆ. ಇದೇ ವೇಳೆ ಕಳೆದ ಎರಡು-ಮೂರು ವರ್ಷಗಳಿಂದ ಶೃತಿ ಹಾಗೂ ಉಬೇದುಲ್ಲಾ ನಡುವೆ ಆತ್ಮೀಯ ಸಂಬಂಧ ಬೆಳೆದಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಪತಿಯೊಂದಿಗಿನ ಸಂಸಾರಕ್ಕೆ ಈ ಸಂಬಂಧ ಅಡ್ಡಿಯಾಗುತ್ತಿದೆ ಎಂದು ಭಾವಿಸಿದ್ದ ಶೃತಿ, ಪ್ರಿಯಕರ ಉಬೇದುಲ್ಲಾ ಜೊತೆ ಸೇರಿ ರಘುವನ್ನು ಕತ್ತು ಹಿಸುಕಿ ಕೊಲೆ ಮಾಡಿದ್ದಾಳೆ ಎನ್ನಲಾಗಿದೆ.…

Read More

ಚೆನ್ನೈ,: ತಮಿಳುನಾಡು ಶಾಸಕರಿಗೆ ಸಿಎಂ ಜೋಸೆಫ್‌ ವಿಜಯ್‌ ಬಂಪರ್‌ ಕೊಡುಗೆಗಳನ್ನು ಘೋಷಿಸಿದ್ದಾರೆ. ಇನ್ಮುಂದೆ ರಾಜ್ಯದ ಎಲ್ಲಾ 234 ಶಾಸಕರಿಗೆ ಕಾರು, ಇಂಧನ ಮತ್ತು ನಿರ್ವಹಣಾ ವೆಚ್ಚಗಳಿಗಾಗಿ ಭತ್ಯೆ ಸಿಗಲಿದೆ. ತಮಿಳುನಾಡು ಶಾಸಕರಿಗೆ ಕಾರು, ಇಂಧನ ಭತ್ಯೆ, ಕಾರ್ಯದರ್ಶಿ ವ್ಯವಸ್ಥೆ ಸಿಗಲಿದೆ. ಶಾಸಕರು ತಮ್ಮ ಕ್ಷೇತ್ರಕ್ಕೆ ಸಂಬಂಧಿಸಿದ ಕೆಲಸಗಳಿಗೆ ಸಹಾಯವಾಗಲೆಂದು ಸರ್ಕಾರಿ ವಾಹನ ನೀಡಲಾಗುವುದು ಎಂದು ಮುಖ್ಯಮಂತ್ರಿ ಘೋಷಿಸಿದ್ದಾರೆ. ಜನರ ಸಮಸ್ಯೆಗಳನ್ನು ಪರಿಹರಿಸಲು ಶಾಸಕರು ತಮ್ಮ ಕ್ಷೇತ್ರಗಳಿಗೆ ಆಗಾಗ್ಗೆ ಪ್ರಯಾಣಿಸಬೇಕಾಗುತ್ತದೆ. ಸರ್ಕಾರಿ ವಾಹನವು ಪಾರದರ್ಶಕ ಮತ್ತು ಭ್ರಷ್ಟಾಚಾರ ಮುಕ್ತ ಆಡಳಿತವನ್ನು ಖಚಿತಪಡಿಸುತ್ತದೆ ಎಂದು ಮುಖ್ಯಮಂತ್ರಿಗಳು ವಿಧಾನಸಭೆಯಲ್ಲಿ ತಿಳಿಸಿದ್ದಾರೆ. ಪ್ರಸ್ತುತ ವಿಧಾನಸಭೆಯಲ್ಲಿ ಮೊದಲ ಬಾರಿಗೆ ಆಯ್ಕೆಯಾದ ಮತ್ತು ಬಡ ಹಿನ್ನೆಲೆಯಿಂದ ಬಂದ ಹಲವಾರು ಶಾಸಕರಿದ್ದಾರೆ. ಜನಪ್ರತಿನಿಧಿಯಾಗಿ ತಮ್ಮ ಕರ್ತವ್ಯಗಳನ್ನು ನಿರ್ವಹಿಸಲು ಅವರಿಗೆ ಕಾರು ಬೇಕು ಎಂದು ಸಿಎಂ ಹೇಳಿದ್ದಾರೆ. ವಿಜಯ್ ಸರ್ಕಾರವು ಶಾಸಕರಿಗೆ ಚಾಲಕ, ಇಂಧನ ಮತ್ತು ಕಾರುಗಳ ನಿರ್ವಹಣೆ ವೆಚ್ಚಗಳಿಗಾಗಿ ತಿಂಗಳಿಗೆ 75,000 ರೂ.ಗಳ ಭತ್ಯೆಯನ್ನು ಘೋಷಿಸಿದೆ. ಹೆಚ್ಚುವರಿಯಾಗಿ, ಶಾಸಕರು ಈಗ ಅಧಿಕೃತ…

Read More

ಕಡಬ: ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ ವಂದೇ ಭಾರತ್ ರೈಲಿನ ಪ್ರಾಯೋಗಿಕ ಸಂಚಾರವನ್ನು ಪರಿಶೀಲಿಸಲಾಯಿತು. ಇದೇ ವೇಳೆ ವಿವಿಧ ಮೂಲಸೌಕರ್ಯ ಕಾಮಗಾರಿಗಳು ಹಾಗೂ ಪ್ರಯಾಣಿಕರ ಸೌಲಭ್ಯಗಳ ಪ್ರಗತಿಯನ್ನು ಅಧಿಕಾರಿಗಳು ಪರಿಶೀಲಿಸಿದರು. ಪಶ್ಚಿಮ ಘಟ್ಟಗಳ ಮೂಲಕ ಹಾದುಹೋಗುವ ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗವು ಇಳಿಜಾರು, ಸುರಂಗಗಳು, ಸೇತುವೆಗಳು ಹಾಗೂ ತಿರುವುಗಳನ್ನು ಒಳಗೊಂಡಿರುವ ತಾಂತ್ರಿಕವಾಗಿ ಸವಾಲಿನ ಮಾರ್ಗವಾಗಿದೆ. ಪರಿಶೀಲನೆ ವೇಳೆ ದಕ್ಷಿಣ ಪಶ್ಚಿಮ ರೈಲ್ವೆಯ ಪ್ರಧಾನ ವ್ಯವಸ್ಥಾಪಕ ಪಿ. ಅನಂತ್ ಅವರು ವಂದೇ ಭಾರತ್ ರೈಲಿನ ಪ್ರಾಯೋಗಿಕ ಸಂಚಾರಕ್ಕೆ ಸಂಬಂಧಿಸಿದ ಕಾರ್ಯಾಚರಣೆ ಹಾಗೂ ಸುರಕ್ಷತಾ ಅಂಶಗಳನ್ನು ಪರಿಶೀಲಿಸಿದರು. ಈ ಮಾರ್ಗದಲ್ಲಿನ ರೈಲ್ವೇ ಮೂಲಸೌಕರ್ಯದ ಸಿದ್ಧತೆಯನ್ನೂ ಅವರು ಅವಲೋಕಿಸಿದರು. ಜೊತೆಗೆ, ಅಮೃತ್ ಭಾರತ್ ಸ್ಟೇಷನ್ ಯೋಜನೆ ಅಡಿಯಲ್ಲಿ ಸಕಲೇಶಪುರ ಮತ್ತು ಸುಬ್ರಹ್ಮಣ್ಯ ರೋಡ್ ರೈಲು ನಿಲ್ದಾಣಗಳಲ್ಲಿ ನಡೆಯುತ್ತಿರುವ ಕಾಮಗಾರಿಗಳನ್ನೂ ಅವರು ಪರಿಶೀಲಿಸಿದರು. ನಿಲ್ದಾಣಗಳ ಪುನರಾಭಿವೃದ್ಧಿ, ಪ್ರಯಾಣಿಕರು ಹಾಗೂ ಪ್ಲಾಟ್‌ಫಾರ್ಮ್‌ಗಳಿಗೆ ಕಲ್ಪಿಸಲಾಗುತ್ತಿರುವ ಸೌಲಭ್ಯಗಳು, ನಿಲ್ದಾಣಗಳ ಸುತ್ತಮುತ್ತಲಿನ ಪ್ರದೇಶಗಳ ಅಭಿವೃದ್ಧಿ ಸೇರಿದಂತೆ ವಿವಿಧ ಮೂಲಸೌಕರ್ಯ ಕಾಮಗಾರಿಗಳ ಪ್ರಗತಿ…

Read More

ಮಧ್ಯಪ್ರದೇಶ: ಬೀದಿ ನಾಯಿಗಳ ಹಾವಳಿ ಹೆಚ್ಚುತ್ತಿರುವುದನ್ನು ಖಂಡಿಸಿ ವ್ಯಕ್ತಿಯೊಬ್ಬರು ನಾಯಿ ವೇಷ ಧರಿಸಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಾರ್ವಜನಿಕ ಅಹವಾಲು ಸ್ವೀಕಾರ ಸಭೆಗೆ ಆಗಮಿಸುವ ಮೂಲಕ ವಿಶಿಷ್ಟವಾಗಿ ಪ್ರತಿಭಟನೆ ನಡೆಸಿದ ಘಟನೆ ಮಧ್ಯಪ್ರದೇಶದ ಖಾಂಡ್ವಾದಲ್ಲಿ ವರದಿಯಾಗಿದೆ. ನಾಯಿ ವೇಷ ಧರಿಸಿದ ವ್ಯಕ್ತಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಾರ್ವಜನಿಕ ಅಹವಾಲು ಸ್ವೀಕಾರ ಸಭೆಗೆ ಆಗಮಿಸಿದ್ದಾರೆ. ಇದನ್ನು ನೋಡಲು ಅಧಿಕಾರಿಗಳು ಹಾಗೂ ಸ್ಥಳೀಯರು ಹೆಚ್ಚಿನ ಸಂಖ್ಯೆಯಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ಜಮಾಯಿಸಿದ್ದರು. ಸಾರ್ವಜನಿಕರ ಸುರಕ್ಷತೆಯನ್ನು ಖಚಿತಪಡಿಸುವುದು ಆಡಳಿತ ಇಲಾಖೆಯ ಜವಾಬ್ದಾರಿಯಾಗಿದೆ. ಈ ಸಮಸ್ಯೆಗೆ ಶಾಶ್ವತ ಹಾಗೂ ಸೂಕ್ಷ್ಮತೆಯಿಂದ ಕೂಡಿದ ಪರಿಹಾರ ಕಂಡುಕೊಳ್ಳುವುದು ಅಗತ್ಯವಾಗಿದೆ ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ. ‘ಕಳೆದ ನಾಲ್ಕು ವರ್ಷಗಳಲ್ಲಿ ಬೀದಿ ನಾಯಿಗಳ ಸಂತಾನಹರಣಕ್ಕಾಗಿ 40 ಲಕ್ಷ ರೂಪಾಯಿ ವೆಚ್ಚ ಮಾಡಿದ್ದರೂ 13,225 ನಾಯಿ ಕಡಿತ ಪ್ರಕರಣಗಳು ವರದಿಯಾಗಿವೆ. ಸಂತಾನಹರಣ ಕಾರ್ಯಕ್ರಮದಲ್ಲಿ ಅಕ್ರಮಗಳು ನಡೆದಿವೆ. ಈ ಯೋಜನೆಯಲ್ಲಿ ಪಾರದರ್ಶಕತೆ ಕಾಪಾಡಬೇಕು ಹಾಗೂ ಬೀದಿ ನಾಯಿಗಳ ನಿಯಂತ್ರಣಕ್ಕೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಜಿಲ್ಲಾಧಿಕಾರಿಗೆ…

Read More

ಉತ್ತರ ಪ್ರದೇಶ: ಜಮೀನು ಮಾರಾಟ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಪತಿ-ಪತ್ನಿಯ ನಡುವೆ ಉಂಟಾದ ವಿವಾದ ವಿಕೋಪಕ್ಕೆ ತಿರುಗಿ, ಪತಿಯೇ ಪತ್ನಿಯನ್ನು ಭೀಕರವಾಗಿ ಹತ್ಯೆ ಮಾಡಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶದ ರಾಮ್‌ಪುರದಲ್ಲಿ ನಡೆದಿದೆ. ಪತ್ನಿ ಜಮೀನು ಮಾರಾಟ ಮಾಡಲು ಒಪ್ಪದಿರುವುದೇ ಈ ಘಟನೆಗೆ ಪ್ರಮುಖ ಕಾರಣ ಎನ್ನಲಾಗಿದೆ. ಈ ವಿಚಾರವಾಗಿ ದಂಪತಿ ನಡುವೆ ಹಲವು ಬಾರಿ ಜಗಳ ನಡೆದಿತ್ತು ಎಂದು ತಿಳಿದುಬಂದಿದ್ದು, ಘಟನೆ ನಡೆದ ದಿನವೂ ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದೆ. ವಿವಾದ ತೀವ್ರಗೊಂಡ ವೇಳೆ ಆರೋಪಿ ಪತ್ನಿಯ ಮೇಲೆ ಹಲ್ಲೆ ನಡೆಸಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಆಕೆ ಮೃತಪಟ್ಟಿದ್ದಾಳೆ ಎಂದು ವರದಿಯಾಗಿದೆ. ಘಟನೆ ಬಳಿಕ ಆರೋಪಿ ಸ್ಥಳದಿಂದ ಪರಾರಿಯಾಗಲು ಯತ್ನಿಸಿದ್ದಾನೆ ಎನ್ನಲಾಗಿದೆ. ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಹತ್ಯೆಗೆ ನಿಖರ ಕಾರಣ, ಘಟನೆಯ ಸಂಪೂರ್ಣ ಹಿನ್ನೆಲೆ ಹಾಗೂ ಆರೋಪಿಯ ಪಾತ್ರದ ಕುರಿತು ಪೊಲೀಸರು ಹೆಚ್ಚಿನ…

Read More

ನವದೆಹಲಿ: ಬ್ಯಾಂಕ್ ಇಎಂಐಗಳ ಮೇಲೆ ಪರಿಣಾಮ ಬೀರಬಹುದಾದಂತಹ ಒಂದು ನಿಯಮ ಬದಲಾವಣೆಯನ್ನು ಆರ್‌ಬಿಐ (RBI) ಮಾಡಲು ಹೊರಟಿದೆ. ಬಡ್ಡಿದರ ಬದಲಾವಣೆ ಎಷ್ಟು ವೇಗವಾಗಿ ಆಗುತ್ತದೆ ಎನ್ನುವುದು ಈ ಪ್ರಸ್ತಾಪಿತ ನಿಯಮವು ಹೇಳುತ್ತದೆ. ಫ್ಲೋಟಿಂಗ್-ರೇಟ್ (Floating-rate) ಸಾಲಗಳ (ಗೃಹ ಸಾಲ) ಬಡ್ಡಿ ದರಗಳ ಬದಲಾವಣೆ ಗ್ರಾಹಕರಿಗೆ ಶೀಘ್ರವಾಗಿ ತಲುಪುವಂತೆ ಮಾಡಲು ಹೊಸ ಕರಡು ನಿಯಮಾವಳಿಯನ್ನು ಭಾರತೀಯ ರಿಸರ್ವ್ ಬ್ಯಾಂಕ್ ಪ್ರಸ್ತಾಪಿಸಿದೆ. ಸದ್ಯ ಇದು ಇನ್ನೂ ಪ್ರಸ್ತಾಪಿತ ಹಂತದಲ್ಲಿದೆ. ಇದು ಜಾರಿಯಾಗಲು ಐದಾರು ತಿಂಗಳಾದರೂ ಆಗಬಹುದು. ಮೂರು ತಿಂಗಳಿಗೊಮ್ಮೆ ಬಡ್ಡಿದರ ಬದಲಾವಣೆ ಪ್ರಸ್ತುತ ಹೆಚ್ಚಿನ ಫ್ಲೋಟಿಂಗ್-ರೇಟ್ ಗೃಹ ಸಾಲಗಳ ಬಡ್ಡಿದರವನ್ನು ವರ್ಷಕ್ಕೊಮ್ಮೆ ಮಾತ್ರ ಬ್ಯಾಂಕುಗಳು ಪರಿಶೀಲಿಸಿ ಬದಲಾಯಿಸುತ್ತವೆ (Reset). ಇದರಿಂದ ಆರ್‌ಬಿಐ ರೆಪೋ ದರ ಇಳಿಸಿದರೂ ಅದರ ಲಾಭ ಗ್ರಾಹಕರಿಗೆ ಸಿಗಲು ತಿಂಗಳುಗಳೇ ಕಾಯಬೇಕಾಗುತ್ತದೆ. ಪ್ರಸ್ತಾಪಿಸಲಾಗಿರುವ ಹೊಸ ನಿಯಮದ ಪ್ರಕಾರ, ಫ್ಲೋಟಿಂಗ್-ರೇಟ್ ಸಾಲಗಳ ಬಡ್ಡಿದರವನ್ನು ಗರಿಷ್ಠ 3 ತಿಂಗಳಿಗೊಮ್ಮೆ ಬದಲಾಯಿಸಬೇಕಾಗುತ್ತದೆ. ಇದರಿಂದ ಆರ್‌ಬಿಐ ರೆಪೋ ದರ ಇಳಿಸಿದಾಗ ಅಥವಾ ಹೆಚ್ಚಿಸಿದಾಗ, ಸಾಲಗಾರರ EMI ಮೇಲಾಗುವ…

Read More

ಢಾಕಾ: ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತ ಹಿಂದೂಗಳ ಮೇಲಿನ ದೌರ್ಜನ್ಯ ಮತ್ತು ಬೆದರಿಕೆಗಳು ಮುಂದುವರೆದಿರುವ ನಡುವೆಯೇ, ಅಲ್-ಖೈದಾ ಸಂಪರ್ಕ ಹೊಂದಿರುವ ಉಗ್ರ ನಾಯಕ ಹರುನ್ ಇಝಾರ್ ಹಿಂದೂಗಳಿಗೆ ಬಹಿರಂಗ ಹತ್ಯೆಯ ಬೆದರಿಕೆ ಹಾಕಿದ್ದಾನೆ. ಚಿತ್ತಗಾಂಗ್‌ನಲ್ಲಿ ನಡೆದ ‘ದವಾ ಚಳವಳಿ’ಯ ರ್ಯಾಲಿಯೊಂದರಲ್ಲಿ ಮಾತನಾಡಿದ ಆತ, “ಹಿಂದೂಗಳನ್ನು ಸುಲಭವಾಗಿ ಕೊಲ್ಲಬಹುದು, ಅದಕ್ಕಾಗಿ ನಾನು ಯಾವುದೇ ಕ್ರಮ ಕೈಗೊಳ್ಳುವ ಅಗತ್ಯವಿಲ್ಲ, ನನ್ನ ಜನರೇ ಸಾಕು” ಎಂದು ಪ್ರಚೋದನಕಾರಿ ಹೇಳಿಕೆ ನೀಡಿದ್ದಾನೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಬಾಂಗ್ಲಾದೇಶದ ಹಿಂದೂ ಸಮುದಾಯದಲ್ಲಿ ತೀವ್ರ ಆತಂಕ ಸೃಷ್ಟಿಸಿದೆ. ಹಿಂಸೆಗೆ ಪ್ರಚೋದನೆ ನೀಡಿದ ಹರುನ್ ಇಝಾರ್ ಮೂಲಭೂತವಾದಿ ಇಸ್ಲಾಮಿಕ್ ಸಂಘಟನೆಯಾದ ‘ಹೆಫಾಜತ್-ಎ-ಇಸ್ಲಾಂ’ ಜೊತೆ ಗುರುತಿಸಿಕೊಂಡಿರುವ ಮುಫ್ತಿ ಹರೂನ್ ಬಿನ್ ಇಝಾರ್, ಭಾರತ ವಿರೋಧಿ ಪ್ರಚೋದನೆ ಮತ್ತು ಉಗ್ರಗಾಮಿ ಚಟುವಟಿಕೆಗಳಿಗೆ ಕುಖ್ಯಾತನಾಗಿದ್ದಾನೆ. ಚಿತ್ತಗಾಂಗ್ ಸಮಾವೇಶದಲ್ಲಿ ಆತ ನೀಡಿರುವ ಬಹಿರಂಗ ಬೆದರಿಕೆಯು ಬಾಂಗ್ಲಾದೇಶದಲ್ಲಿರುವ ಹಿಂದೂ ಅಲ್ಪಸಂಖ್ಯಾತರ ರಕ್ಷಣೆ ಮತ್ತು ಜೀವದ ಹಕ್ಕಿನ ಬಗ್ಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಗಂಭೀರ ಪ್ರಶ್ನೆಗಳನ್ನು ಎತ್ತಿದೆ. ಯುಎನ್‌ಎಸ್‌ಸಿ ಎಚ್ಚರಿಕೆ:…

Read More