Author: admin

ಪುಂಜಾಲಕಟ್ಟೆ: ಮನೆಯಲ್ಲಿ ಒಬ್ಬಂಟಿಯಾಗಿದ್ದ 82 ವರ್ಷದ ಅಜ್ಜಿಯ ಕೈಯಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನದ ಬಳೆಗಳನ್ನು ಬಲವಂತವಾಗಿ ಎಳೆದೊಯ್ದಿದ್ದ ಪ್ರಕರಣವನ್ನು ಪುಂಜಾಲಕಟ್ಟೆ ಪೊಲೀಸರು ಭೇದಿಸಿದ್ದು, ಅಜ್ಜಿಯ ಸ್ವಂತ ಮೊಮ್ಮಗನನ್ನೇ ಬಂಧಿಸಿದ್ದಾರೆ. ಬಂಟ್ವಾಳ ತೆಂಕಕಜೆಕಾರು ನಿವಾಸಿ ಶಬೀರ್ (33) ಬಂಧಿತ ಆರೋಪಿ. ಈತನಿಂದ ₹5 ಲಕ್ಷ ಮೌಲ್ಯದ 40 ಗ್ರಾಂ ತೂಕದ ಎರಡು ಚಿನ್ನದ ಬಳೆಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ತೆಂಕಕಜೆಕಾರು ಉದ್ದದ ಗುಡ್ಡೆ ನಿವಾಸಿ ಸಾದಿಕ್ ಎಂಬುವವರ ತಾಯಿ ಅವ್ವಮ್ಮ (82) ಅವರು ಆಗಸ್ಟ್ 14 ರಂದು ಮನೆಯಲ್ಲಿ ಒಬ್ಬಂಟಿಯಾಗಿದ್ದರು. ಈ ವೇಳೆ ಮುಖಕ್ಕೆ ಬಟ್ಟೆ ಧರಿಸಿ ಬಂದ ಅಪರಿಚಿತ ವ್ಯಕ್ತಿಯೊಬ್ಬ ಅಜ್ಜಿಯ ಎರಡೂ ಕೈಗಳಲ್ಲಿದ್ದ ಚಿನ್ನದ ಬಳೆಗಳನ್ನು ಬಲವಂತವಾಗಿ ಎಳೆದುಕೊಂಡು ಪರಾರಿಯಾಗಿದ್ದ. ಈ ವೇಳೆ ಅಜ್ಜಿಯ ಕೈಗೆ ರಕ್ತಗಾಯವಾಗಿತ್ತು. ಈ ಕುರಿತು ಸಾದಿಕ್ ನೀಡಿದ ದೂರಿನಂತೆ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ BNS ಕಾಯ್ದೆಯಡಿ ಪ್ರಕರಣ (ಅ.ಕ್ರ: 70/2026) ದಾಖಲಾಗಿತ್ತು. ಪ್ರಕರಣದ ತನಿಖೆಗೆ ಇಳಿದ ಪೊಲೀಸರಿಗೆ ಶಾಕಿಂಗ್ ಸುದ್ದಿ ಸಿಕ್ಕಿತ್ತು ಅಜ್ಜಿಯ ಸ್ವಂತ…

Read More

ಹೋಟೆಲ್‌, ಮೆಡಿಕಲ್‌ ಸ್ಟೋರ್‌ ಸೇರಿದಂತೆ ಸಾರ್ವಜನಿಕರು ಹೆಚ್ಚಾಗಿ ಭೇಟಿ ನೀಡುವ ಸ್ಥಳಗಳಲ್ಲಿ ಇನ್ಮುಂದೆ QR ಕೋಡ್ ಅಳವಡಿಸುವ ಹೊಸ ವ್ಯವಸ್ಥೆ ಜಾರಿಗೆ ತರಲು ಸರ್ಕಾರ ಮುಂದಾಗಿದೆ ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ. QR ಕೋಡ್ ಸ್ಕ್ಯಾನ್ ಮಾಡುವ ಮೂಲಕ ಸಾರ್ವಜನಿಕರು ಆಹಾರದ ಗುಣಮಟ್ಟ, ಸೇವೆ ಅಥವಾ ಇತರ ಸಮಸ್ಯೆಗಳ ಕುರಿತು ನೇರವಾಗಿ ದೂರು ಸಲ್ಲಿಸಬಹುದಾಗಿದೆ. ಸಾರ್ವಜನಿಕರ ದೂರುಗಳು ತ್ವರಿತವಾಗಿ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಲುಪುವಂತೆ ಈ ವ್ಯವಸ್ಥೆ ರೂಪಿಸಲಾಗುತ್ತಿದೆ ಎಂದು ಸಚಿವರು ಹೇಳಿದ್ದಾರೆ. ಕರ್ನಾಟಕದಲ್ಲಿ ಇದೇ ಮೊದಲ ಬಾರಿಗೆ ಈ ರೀತಿಯ ವ್ಯವಸ್ಥೆಯನ್ನು ಜಾರಿಗೆ ತರಲು ಸರ್ಕಾರ ಮುಂದಾಗಿದೆ ಎಂದು ಅವರು ತಿಳಿಸಿದ್ದಾರೆ. ಹೋಟೆಲ್‌ ಮಾತ್ರವಲ್ಲ; ಪಿಜಿ, ಬಸ್‌ ನಿಲ್ದಾಣದಲ್ಲೂ ತಪಾಸಣೆ! ಬೆಂಗಳೂರು ನಗರದ ಹೋಟೆಲ್‌ಗಳ ಮೇಲಿನ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ. ಇದರ ಜೊತೆಗೆ ಖಾಸಗಿ ಹಾಸ್ಟೆಲ್‌, ಪಿಜಿ, ಬಸ್‌ ನಿಲ್ದಾಣ, ಮದುವೆ ಮನೆ, ರೈಲ್ವೆ ಕ್ಯಾಂಟೀನ್‌ ಹಾಗೂ ವಿಮಾನಗಳಲ್ಲಿ ನೀಡುವ ಆಹಾರವನ್ನೂ…

Read More

ಬೆಳ್ತಂಗಡಿ: ಕೇರೆ ಹಾವನ್ನು ತಿನ್ನಲು ಅಟ್ಟಾಡಿಸಿಕೊಂಡು ಬಂದ ಬೃಹತ್ ಗಾತ್ರದ ಕಾಳಿಂಗ ಸರ್ಪವೊಂದು ಏಕಾಏಕಿ ಮನೆಯೊಳಗೆ ನುಗ್ಗಿದ ಘಟನೆ ತಾಲೂಕಿನ ಕಿಲ್ಲೂರು ಎಂಬಲ್ಲಿ ನಡೆದಿದೆ. ಕಿಲ್ಲೂರಿನ ಖಾಸಗಿ ಮನೆಯೊಂದರ ಬಳಿ ಕೇರೆ ಹಾವನ್ನು ಕಬಳಿಸಲು ಕಾಳಿಂಗ ಸರ್ಪ ಬೆನ್ನಟ್ಟಿಕೊಂಡು ಬಂದಿದೆ. ಪ್ರಾಣಭಯದಿಂದ ಕೇರೆ ಹಾವು ಮನೆಯೊಳಗೆ ನುಗ್ಗಿದ್ದು, ಅದರ ಬೆನ್ನಲ್ಲೇ ಬೃಹತ್ ಕಾಳಿಂಗ ಸರ್ಪವೂ ಮನೆ ಪ್ರವೇಶಿಸಿದೆ. ಇದನ್ನು ಕಂಡು ಆತಂಕಗೊಂಡ ಮನೆ ಮಂದಿ ತಕ್ಷಣವೇ ಸ್ಥಳೀಯ ಉರಗ ತಜ್ಞ ಬೆಳ್ತಂಗಡಿಯ ಅಶೋಕ್ ಲಾಯಿಲಾ ಅವರಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ಲಭಿಸುತ್ತಿದ್ದಂತೆಯೇ ಸ್ಥಳಕ್ಕೆ ಆಗಮಿಸಿದ ಅಶೋಕ್ ಲಾಯಿಲಾ ಅವರು ಸುದೀರ್ಘ ಕಾರ್ಯಾಚರಣೆ ನಡೆಸಿ ಕಾಳಿಂಗ ಸರ್ಪವನ್ನು ಸುರಕ್ಷಿತವಾಗಿ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಈ ವೇಳೆ ಕೈಗೆ ಸಿಕ್ಕ ಆಹಾರ (ಕೇರೆ ಹಾವು) ಕೈತಪ್ಪಿದ ಕೋಪದಲ್ಲಿ ಕಾಳಿಂಗ ಸರ್ಪ ಹಲವು ಬಾರಿ ಉರಗ ತಜ್ಞ ಅಶೋಕ್ ಅವರ ಮೇಲೆಯೇ ಬುಸುಗುಟ್ಟಿ ದಾಳಿಗೆ ಯತ್ನಿಸಿದೆ. ಕೊನೆಗೂ ಹರಸಾಹಸ ಪಟ್ಟು ಹಾವನ್ನು ಸೆರೆಹಿಡಿದ ಅಶೋಕ್ ಲಾಯಿಲಾ, ಅದನ್ನು…

Read More

ಉಡುಪಿ: ಮೀನುಗಾರಿಕೆ ವೇಳೆ ಮೀನುಗಾರರೊಬ್ಬ ಬೋಟಿನಿಂದ ಸಮುದ್ರಕ್ಕೆ ಬಿದ್ದು ಮೃತಪಟ್ಟ ಘಟನೆ ಮಲ್ಪೆಯಲ್ಲಿ ನಡೆದಿದೆ. ಮೃತರನ್ನು ಭದ್ರಾವತಿ ಬೆಳ್ಳಿಗೇರಿ ಗ್ರಾಮದ ಸುನಿತಮ್ಮ ಎಂಬವರ ಮಗ ಸಂಜೀವ(33) ಎಂದು ಗುರುತಿಸಲಾಗಿದೆ. ಮಲ್ಪೆ ಬಂದರಿನಲ್ಲಿ ರಜತ ಎಂಬ ಹೆಸರಿನ ಮೀನುಗಾರಿಕೆ ಬೋಟಿನಲ್ಲಿ ಕೆಲಸ ಮಾಡಿಕೊಂಡಿದ್ದ ಇವರು, ಆ.10 ರಂದು ರಾತ್ರಿ ಮೀನುಗಾರಿಕೆಗಾಗಿ ಇತರ ಮೀನುಗಾರರೊಂದಿಗೆ ಸಮುದ್ರಕ್ಕೆ ತೆರಳಿದ್ದರು. ಆ.14ರಂದು ಮಧ್ಯಾಹ್ನ 1:30ರ ಸುಮಾರಿಗೆ ಮೀನುಗಾರಿಕೆಗೆ ಬಿಟ್ಟ ಬಲೆಯನ್ನು ಮೇಲಕ್ಕೆ ಎಳೆಯುತ್ತಿರುವಾಗ ಒಮ್ಮೆಲೇ ಬಂದ ಅಬ್ಬರದ ಅಲೆಗೆ ಬೋಟು ಅಲುಗಾಡಿತ್ತೆನ್ನಲಾಗಿದೆ. ಇದರ ಪರಿಣಾಮ ಸಂಜೀವ ಕಾಲು ಜಾರಿ ನೀರಿಗೆ ಬಿದ್ದು ನಾಪತ್ತೆಯಾದರು. ಬಳಿಕ ಹುಡುಕಾಟ ನಡೆಸಿದಾಗ ಸಂಜೆ 6:30ರ ಸುಮಾರಿಗೆ ಅಲ್ಲೇ ಸಮೀಪ ಮೃತದೇಹ ಪತ್ತೆಯಾಗಿದೆ. ಈ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು: ರಾಜ್ಯದಲ್ಲಿ ವಿವಿಧ ಮಾದರಿಯ ವಾಹನಗಳ ವಾಯುಮಾಲಿನ್ಯ ಪರೀಕ್ಷಾ ಶುಲ್ಕವನ್ನು ರಾಜ್ಯ ಸರ್ಕಾರ ಪರಿಷ್ಕರಿಸಿದೆ ಮಾಲಿನ್ಯ ಪರೀಕ್ಷಾ ಕೇಂದ್ರಗಳ ನಿರ್ವಾಹಕರು ಕಾರ್ಯಾಚರಣೆ ವೆಚ್ಚ ಹೆಚ್ಚಿರುವುದನ್ನು ಉಲ್ಲೇಖಿಸಿ ಶುಲ್ಕ ಪರಿಷ್ಕರಣೆಗೆ ಮನವಿ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಸಾರಿಗೆ ಇಲಾಖೆ ಆ.13ರಂದು ಹೊಸ ದರಗಳ ಅಧಿಸೂಚನೆ ಹೊರಡಿಸಿದೆ. ಇದಕ್ಕೂ ಮೊದಲು ಕೊನೇ ಬಾರಿ ಏಪ್ರಿಲ್‌ 2022ರಲ್ಲಿ ಶುಲ್ಕ ಪರಿಷ್ಕರಿಸಲಾಗಿತ್ತು. ಯಾವ ವಾಹನಕ್ಕೆ ಎಷ್ಟು ಹೆಚ್ಚಳ? ವಾಹನ ಹಳೆ ಶುಲ್ಕ ಹೊಸ ಶುಲ್ಕ ದ್ವಿಚಕ್ರ 65 80 ತ್ರಿಚಕ್ರ  75 80 ನಾಲ್ಕು ಚಕ್ರದ ವಾಹನ 115 150 ಎಲ್ಲಾ ಡೀಸೆಲ್‌  ವಾಹನ 160 200

Read More

ನವದೆಹಲಿ:ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಬಿಗ್ ಶಾಕ್ ಎದುರಾಗಿದೆ. ತಮಿಳುನಾಡಿಗೆ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ನೀಡಿದ್ದ ಆದೇಶವನ್ನು ಪಾಲಿಸುವಂತೆ ಸುಪ್ರೀಂ ಕೋರ್ಟ್ ಕರ್ನಾಟಕಕ್ಕೆ ಸೂಚಿಸಿದೆ. ನಿತ್ಯ 12 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ನೀಡಲಾಗಿದ್ದ ನಿರ್ದೇಶನವನ್ನು ನ್ಯಾಯಾಲಯ ಎತ್ತಿಹಿಡಿದಿದೆ. ಇದರೊಂದಿಗೆ, ಮುಂಗಾರು ಮಳೆ ಕೊರತೆ ಎದುರಿಸುತ್ತಿರುವ ಕರ್ನಾಟಕಕ್ಕೆ ಮತ್ತಷ್ಟು ಸಂಕಷ್ಟ ಎದುರಾಗಿದೆ. ತಮಿಳುನಾಡು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ವೇಳೆ, CWMA ಆದೇಶ ಪಾಲಿಸುವಂತೆ ಕರ್ನಾಟಕಕ್ಕೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ. ಮುಂದಿನ ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಲಾಗಿದೆ. CWMA ಕರ್ನಾಟಕದಿಂದ ನಿತ್ಯ 12 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಸೂಚಿಸಿತ್ತು. ಆದರೆ ನಿರೀಕ್ಷಿತ ಪ್ರಮಾಣದಲ್ಲಿ ನೀರು ಹರಿದುಬರುತ್ತಿಲ್ಲ ಎಂದು ತಮಿಳುನಾಡು ಸುಪ್ರೀಂ ಕೋರ್ಟ್‌ನಲ್ಲಿ ವಾದಿಸಿದೆ. ನಿತ್ಯ ಕೇವಲ 5ರಿಂದ 6 ಸಾವಿರ ಕ್ಯೂಸೆಕ್‌ನಷ್ಟು ನೀರು ಬರುತ್ತಿದ್ದು, ಈವರೆಗೆ ಸುಮಾರು 13ರಿಂದ 14 ಟಿಎಂಸಿ ನೀರು ಮಾತ್ರ ಲಭಿಸಿದೆ ಎಂದು ತಮಿಳುನಾಡು ತನ್ನ ವಾದದಲ್ಲಿ ತಿಳಿಸಿದೆ. ಕರ್ನಾಟಕದ ಪರವಾಗಿ,…

Read More

ಭೋಪಾಲ್‌: ಮಧ್ಯಪ್ರದೇಶದ ಸಾಗರ್ ಜಿಲ್ಲೆಯ ಗೋಪಾಲಗಂಜ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಭಾನುವಾರ ಬೆಚ್ಚಿಬೀಳಿಸುವ ಘಟನೆಯೊಂದು ನಡೆದಿದೆ. ಆಟೋ ಚಾಲಕನ ಮನೆಯಲ್ಲಿ ಶಸ್ತ್ರಾಸ್ತ್ರ ಹುಡುಕಲು ಹೋಗಿದ ಪೊಲೀಸರು ಭಾರೀ ಹಣ ಕಂಡು ಬೆಚ್ಚಿಬಿದ್ದಿದ್ದಾರೆ. ಆಟೋ ಚಾಲಕನ ಮನೆಯೊಂದರಲ್ಲಿ ಸುಮಾರು 3 ಕೋಟಿ ರೂಪಾಯಿ ನಗದು ಪತ್ತೆಯಾಗಿದ್ದು (Cash Found), ಅಧಿಕಾರಿಗಳನ್ನೇ ಅಚ್ಚರಿಗೊಳಿಸಿದೆ.ಮನೆಯೊಂದರಲ್ಲಿ ಶಸ್ತ್ರಾಸ್ತ್ರ ಇರುವ ಬಗ್ಗೆ ಪೊಲೀಸರಿಗೆ ಮಾಹಿತಿ ಬಂದ ಹಿನ್ನೆಲೆಯಲ್ಲಿ ದಾಳಿ ನಡೆಸಲಾಗಿತ್ತು. ಆದರೆ ಶೋಧದ ವೇಳೆ ಯಾವುದೇ ಶಸ್ತ್ರಾಸ್ತ್ರ ಪತ್ತೆಯಾಗಿಲ್ಲ. ಬದಲಾಗಿ, ಮನೆಯಲ್ಲಿದ್ದ ಚೀಲಗಳಲ್ಲಿ ಕಂತೆ ಕಂತೆ ಹಣ ಪತ್ತೆಯಾಗಿದೆ. ಹಣದ ಪ್ರಮಾಣ ಹೆಚ್ಚಿದ್ದರಿಂದ ಸ್ಥಳದಲ್ಲೇ ನೋಟು ಎಣಿಸುವ ಯಂತ್ರವನ್ನು ತರಿಸಿ ಎಣಿಕೆ ಮಾಡಬೇಕಾಯಿತು. ವರದಿಗಳ ಪ್ರಕಾರ, ಯುವಕನೊಬ್ಬ ಸಾಮಾಜಿಕ ಜಾಲತಾಣದಲ್ಲಿ ಬಂದೂಕು ಹಿಡಿದಿರುವ ಫೋಟೋವನ್ನ ಹಂಚಿಕೊಂಡಿದ್ದಾನೆ ಎಂಬ ಮಾಹಿತಿ ಪೊಲೀಸರಿಗೆ ಲಭ್ಯವಾಗಿತ್ತು. ಈ ಮಾಹಿತಿ ಆಧರಿಸಿ ಗೋಪಾಲಗಂಜ್ ಪೊಲೀಸರು ರಾಜೇಶ್ ಅಹಿರ್ವಾರ್ ಅವರ ಪುತ್ರ ಸೌರಭ್ ಅವರ ಮನೆಗೆ ತೆರಳಿ ಶೋಧ ನಡೆಸಿದರು. ಶೋಧದ ವೇಳೆ ಯಾವುದೇ ಬಂದೂಕು…

Read More

ಖಮ್ಮಂ: ಸಾಕು ನಾಯಿ ಆಟೋ ಬಳಿ ಮೂತ್ರ ವಿಸರ್ಜನೆ ಮಾಡಿದ್ದಕ್ಕೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯಗೊಂಡಿರುವ ಆಘಾತಕಾರಿ ಘಟನೆ ತೆಲಂಗಾಣದ ಖಮ್ಮಂ ನಗರದಲ್ಲಿ ನಡೆದಿದೆ. ವಿವಾದದ ವೇಳೆ 23 ವರ್ಷದ ಯುವಕನಿಗೆ ಚಾಕುವಿನಿಂದ ಇರಿಯಲಾಗಿದ್ದು, ಗಂಭೀರವಾಗಿ ಗಾಯಗೊಂಡ ಆತ ಮೃತಪಟ್ಟಿದ್ದಾನೆ. ಮೃತ ಯುವಕನನ್ನು ಅಲಂಕಾರ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದ ಉಂಡೇಟಿ ಶ್ರೀನಾಥ್ (23) ಎಂದು ಗುರುತಿಸಲಾಗಿದೆ. ಆಗಸ್ಟ್ 13ರಂದು ರಾತ್ರಿ 10.30ರ ನಂತರ ಶ್ರೀನಾಥ್ ತನ್ನ ಸ್ನೇಹಿತ ವೀರೇಶ್ ಜೊತೆ ಆಟೋದಲ್ಲಿ ಕುಳಿತಿದ್ದಾಗ ಘಟನೆ ನಡೆದಿದೆ. ಇದೇ ವೇಳೆ ಸ್ಥಳೀಯ ನಿವಾಸಿ ವೇಮುಲ ಮಧು (28) ತನ್ನ ಸಾಕು ನಾಯಿಯನ್ನು ವಾಯುವಿಹಾರಕ್ಕೆ ಕರೆದುಕೊಂಡು ಹೋಗಿದ್ದ. ಈ ವೇಳೆ ನಾಯಿ ಶ್ರೀನಾಥ್ ಹಾಗೂ ವೀರೇಶ್ ಕುಳಿತಿದ್ದ ಆಟೋ ಸಮೀಪ ಮೂತ್ರ ವಿಸರ್ಜನೆ ಮಾಡಿದ್ದು, ಅವರತ್ತ ಬೊಗಳಿದೆ ಎನ್ನಲಾಗಿದೆ. ಇದನ್ನು ಪ್ರಶ್ನಿಸಿದ ಶ್ರೀನಾಥ್ ಹಾಗೂ ಮಧು ನಡುವೆ ಮಾತಿನ ಚಕಮಕಿ ನಡೆದಿದೆ. ಬಳಿಕ ಈ ವಿಚಾರ ಮತ್ತಷ್ಟು ವಿಕೋಪಕ್ಕೆ ತಿರುಗಿದ್ದು, ಶ್ರೀನಾಥ್ ಹಾಗೂ ವೀರೇಶ್ ಮಧುವಿನ…

Read More

ಬೆಂಗಳೂರು: ನಗರದಲ್ಲಿ ಟ್ರಾಫಿಕ್‌ ಪೊಲೀಸ್‌ ಮೇಲೆ ಹಲ್ಲೆಗೆ ಯತ್ನ‌ ಪ್ರಕರಣದಲ್ಲಿ ಜೆಡಿಎಸ್‌ ಮುಖಂಡ ಗೊಟ್ಟಿಗೆರೆ ಮಂಜು ಅವರನ್ನು ಪೊಲೀಸರು ಬಂಧಿಸಿದ್ದಾರೆ. ಹುಳಿಮಾವು ಟ್ರಾಫಿಕ್ ಸಿಬ್ಬಂದಿ ಮೇಲೆ ಹಲ್ಲೆಗೆ ಯತ್ನ ಹಿನ್ನೆಲೆ ಖಾಸಗಿ ಹೋಟೆಲ್‌ನಲ್ಲಿ ಪೊಲೀಸರು ಬಂಧನ ಮಾಡಿದ್ದಾರೆ. ಅರುಣ್ ಎಂಬ ಟ್ರಾಫಿಕ್ ಸಿಬ್ಬಂದಿ ಮೇಲೆ ಹಲ್ಲೆಗೆ ಮಂಜು ಅವರು ಯತ್ನಿಸಿದ್ದರೆಂಬ ಆರೋಪ ಇತ್ತು. ಸಿಬ್ಬಂದಿ ಜೊತೆ ಜಗಳ ಮಾಡುತ್ತಿದ್ದ ವೀಡಿಯೋ ಹರಿದಾಡುತ್ತಿದೆ. ಈ ಸಂಬಂಧ ಮಂಜು ಅವರ ವಿರುದ್ಧ ಟ್ರಾಫಿಕ್‌ ಸಿಬ್ಬಂದಿ ಹುಳಿಮಾವು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಗೊಟ್ಟಿಗೆರೆಯಲ್ಲಿ ನಿನ್ನೆ ಟ್ರಾಫಿಕ್ ಜಾಮ್ ಆಗಿತ್ತು. ಈ ವೇಳೆ ಕರ್ತವ್ಯದಲ್ಲಿದ್ದ ಅರುಣ್ ಎಂಬ ಸಿಬ್ಬಂದಿ ಜೆಡಿಎಸ್ ಮುಖಂಡ ಗೊಟ್ಟಿಗೆರೆ ಮಂಜು ಬರ್ತಿದ್ದ ಕಾರನ್ನು ತಡೆದಿದ್ದರು. ಕಾರು ತಡೆದಿದ್ದಕ್ಕೆ ಕೋಪಗೊಂಡ ಗೊಟ್ಟಿಗೆರೆ ಮಂಜು ಕಾರಿನಿಂದ ಇಳಿದು ಅವಾಚ್ಯವಾಗಿ ಸಿಬ್ಬಂದಿಗೆ ಬೈದಿದ್ದಾರೆ. ಅಷ್ಟೇ ಅಲ್ಲದೇ, ಸಾರ್ವಜನಿಕವಾಗಿ ಹಲ್ಲೆಗೆ ಯತ್ನಿಸಿದ ಆರೋಪ ಕೇಳಿಬಂದಿತ್ತು. ನೀನು ಇಲ್ಲಿ ಅದ್ಹೇಗೆ ಕೆಲಸ ಮಾಡ್ತೀಯಾ ನಾನು‌ ನೋಡ್ತಿನಿ ಅಂತಾ ಸಿಬ್ಬಂದಿಯನ್ನು…

Read More

ಮಂಗಳೂರು: ನಗರದ ಜಿಲ್ಲಾ ಖಜಾನೆ ಕಚೇರಿಯಲ್ಲಿ ಪ್ರಥಮ ದರ್ಜೆ ಸಹಾಯಕರಾಗಿ (ಎಫ್‌ಡಿಎ) ಕಾರ್ಯನಿರ್ವಹಿಸುತ್ತಿದ್ದ ಬೆಂಗಳೂರಿನ ನಿವಾಸಿ ರೋಹನ್ ಎಂ. (33) ಎಂಬುವವರು ಆಗಸ್ಟ್ ೧ರಿಂದ ನಾಪತ್ತೆಯಾಗಿದ್ದು, ಈ ಕುರಿತು ಪೊಲೀಸರಿಗೆ ದೂರು ನೀಡಲಾಗಿದೆ. ಬೆಂಗಳೂರಿನ ನಂಜಮ್ಮ ಲೇಔಟ್ ನಿವಾಸಿ ಮುನಿರಾಜ್ ರೆಡ್ಡಿ ಅವರ ಪುತ್ರ ರೋಹನ್, ಕಳೆದ ಎರಡು ವರ್ಷಗಳಿಂದ ಮಂಗಳೂರಿನ ಜಿಲ್ಲಾ ಖಜಾನೆ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಹುಣ್ಣಿಮೆಯ ಹಿನ್ನೆಲೆ ಗುಜರಾತ್‌ಗೆ ತೆರಳುವುದಾಗಿ ತಿಳಿಸಿ ರೋಹನ್ ಮನೆಯಿಂದ ಹೊರಟಿದ್ದರು. ಆದರೆ, ಬಳಿಕ ಅವರು ವಾಪಸ್ ಆಗಿಲ್ಲ. ನಾಪತ್ತೆಯಾದ ಬಳಿಕ ಅವರ ಮೊಬೈಲ್ ಫೋನ್ ಕೂಡ ಸಂಪರ್ಕಕ್ಕೆ ಸಿಗುತ್ತಿಲ್ಲ ಎಂದು ದೂರು ದಾಖಲಾಗಿದೆ. ಈ ಹಿನ್ನೆಲೆಯಲ್ಲಿ ರೋಹನ್ ಅವರ ತಂದೆ ಮುನಿರಾಜ್ ರೆಡ್ಡಿ ಅವರು ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದ್ದಾರೆ.

Read More