Author: admin
ಬೆಂಗಳೂರು: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಸಿವಿಲ್ ಎಂಜಿನಿಯರ್‌ವೊಬ್ಬರು ಪತ್ನಿಯನ್ನು ಹತ್ಯೆಗೈದು ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ಹೆಗ್ಗನಹಳ್ಳಿಯ ರಾಜೇಶ್ವರಿ ನಗರದಲ್ಲಿ ನಡೆದಿದೆ. ಮೃತರನ್ನು 32 ವರ್ಷದ ಸುಮಂತ್ ಹಾಗೂ ಹುಬ್ಬಳ್ಳಿ ಮೂಲದ 29 ವರ್ಷದ ಪದ್ಮಾವತಿ ಎಂದು ಗುರುತಿಸಲಾಗಿದೆ. ಸುಮಂತ್ ಹಾಗೂ ಪದ್ಮಾವತಿ ನಾಲ್ಕು ವರ್ಷಗಳ ಹಿಂದೆ ವಿವಾಹವಾಗಿದ್ದರು. ಇತ್ತೀಚೆಗೆ ಹೆಗ್ಗನಹಳ್ಳಿಯ ರಾಜೇಶ್ವರಿ ನಗರದಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು. ಭಾನುವಾರ ದಂಪತಿ ನಡುವೆ ಯಾವುದೋ ವಿಚಾರಕ್ಕೆ ತೀವ್ರ ವಾಗ್ವಾದ ನಡೆದಿದ್ದು, ಬಳಿಕ ಪರಿಸ್ಥಿತಿ ವಿಕೋಪಕ್ಕೆ ತಿರುಗಿದೆ ಎನ್ನಲಾಗಿದೆ. ಜಗಳದ ವೇಳೆ ಸುಮಂತ್ ಪತ್ನಿ ಪದ್ಮಾವತಿಯನ್ನು ದಿಂಬಿನಿಂದ ಮುಖದ ಮೇಲೆ ಒತ್ತಿ ಉಸಿರುಗಟ್ಟಿಸಿ ಹತ್ಯೆ ಮಾಡಿದ್ದಾನೆ ಎಂದು ವರದಿಯಾಗಿದೆ. ಪತ್ನಿ ಮೃತಪಟ್ಟಿರುವುದು ಗೊತ್ತಾದ ಬಳಿಕ ಸುಮಂತ್ ತನ್ನ ತಾಯಿಗೆ ಕರೆ ಮಾಡಿ ಘಟನೆ ಬಗ್ಗೆ ಮಾಹಿತಿ ನೀಡಿದ್ದಾನೆ. ತಾನೂ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ತಿಳಿಸಿದ್ದಾನೆ ಎನ್ನಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಆರಂಭಿಸಿದ್ದು, ದಂಪತಿ ನಡುವೆ ನಡೆದಿದ್ದ ಕಲಹಕ್ಕೆ ನಿಖರ ಕಾರಣವೇನು…
ನವದೆಹಲಿ: ಪೂರ್ವ ದೆಹಲಿಯ ಕಲ್ಯಾಣಪುರಿಯಲ್ಲಿ ಕರ್ತವ್ಯದಲ್ಲಿದ್ದ ಪೌರಕಾರ್ಮಿಕನೊಬ್ಬನನ್ನು ಹಾಡಹಗಲೇ ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ಘಟನೆ ಭಾನುವಾರ ನಡೆದಿದೆ. ಘಟನೆ ಬಳಿಕ ಆರೋಪಿಯನ್ನು ತಕ್ಷಣ ಬಂಧಿಸುವಂತೆ ಹಾಗೂ ಮೃತನ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡುವಂತೆ ಆಗ್ರಹಿಸಿ ಪೌರಕಾರ್ಮಿಕರು ಪ್ರತಿಭಟನೆ ನಡೆಸಿದರು. ಮೃತ ಪೌರಕಾರ್ಮಿಕನನ್ನು ಅನಿಲ್ ಎಂದು ಗುರುತಿಸಲಾಗಿದೆ. 27 ವರ್ಷದ ಅನಿಲ್, ದೆಹಲಿ ಮಹಾನಗರ ಪಾಲಿಕೆಯೊಂದಿಗೆ ಸಂಬಂಧ ಹೊಂದಿರುವ ತ್ಯಾಜ್ಯ ಸಂಗ್ರಹ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದರು. ಭಾನುವಾರ ಬೆಳಗ್ಗೆ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಅವರ ಮೇಲೆ ಚಾಕುವಿನಿಂದ ದಾಳಿ ನಡೆಸಲಾಗಿದ್ದು, ಗಂಭೀರವಾಗಿ ಗಾಯಗೊಂಡ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಯ ಬಳಿಕ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಸ್ಥಳದಲ್ಲಿದ್ದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದ್ದು, ದಾಳಿಕೋರನ ಗುರುತು ಪತ್ತೆಹಚ್ಚಲು ಶೋಧ ಕಾರ್ಯ ಮುಂದುವರಿದಿದೆ. ಘಟನೆಯ ದೃಶ್ಯಾವಳಿಗಳು ಸಾಮಾಜಿಕ ಜಾಲತಾಣಗಳಲ್ಲಿಯೂ ಹರಿದಾಡುತ್ತಿವೆ. ಘಟನೆಗೆ ಆಕ್ರೋಶ ವ್ಯಕ್ತಪಡಿಸಿದ ಆಮ್ ಆದ್ಮಿ ಪಕ್ಷದ ಕಾಂಡ್ಲಿ ಶಾಸಕ ಕುಲದೀಪ್…
ಹೈದರಾಬಾದ್: ಮದುವೆಯಾಗುವಂತೆ ಒತ್ತಾಯಿಸಿದ್ದಕ್ಕೆ ಉಂಟಾದ ವಿವಾದದ ಹಿನ್ನೆಲೆಯಲ್ಲಿ 21 ವರ್ಷದ ಯುವತಿಯೊಬ್ಬಳನ್ನು ಆಕೆಯ ಪ್ರಿಯಕರನೇ ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ಘಟನೆ ಹೈದರಾಬಾದ್‌ನ ಬಾಲಾಪುರದಲ್ಲಿ ನಡೆದಿದೆ. ಘಟನೆ ಬಳಿಕ ಆರೋಪಿ ಪರಾರಿಯಾಗಿದ್ದು, ಆತನಿಗಾಗಿ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ. ಮೃತ ಯುವತಿಯನ್ನು ಬಿಹಾರ ಮೂಲದ 21 ವರ್ಷದ ರೆಹಾನಾ ಎಂದು ಗುರುತಿಸಲಾಗಿದೆ. ಪ್ರಕರಣದ ಪ್ರಮುಖ ಆರೋಪಿ ಅಹ್ಮದ್ ಸಲಾಂ ಕೂಡ 21 ವರ್ಷದವನಾಗಿದ್ದು, ಸದ್ಯ ತಲೆಮರೆಸಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು ಎನ್ನಲಾಗಿದ್ದು, ಮದುವೆ ವಿಚಾರವಾಗಿ ಇಬ್ಬರ ನಡುವೆ ಇತ್ತೀಚೆಗೆ ಭಿನ್ನಾಭಿಪ್ರಾಯ ಉಂಟಾಗಿತ್ತು. ಪೊಲೀಸರ ಪ್ರಕಾರ, ಘಟನೆ ಬೆಳಗಿನ ಜಾವ ಬೆಳಕಿಗೆ ಬಂದಿದೆ. ಬಾಲಾಪುರ ಪ್ರದೇಶದ ಮನೆಯೊಂದರ ಬೆಡ್‌ರೂಮ್‌ನಲ್ಲಿ ಗೋಣಿ ಚೀಲದಲ್ಲಿ ಮೃತದೇಹವೊಂದು ಇರುವ ಬಗ್ಗೆ ‘ಡಯಲ್ 100’ ಮೂಲಕ ಪೊಲೀಸರಿಗೆ ಮಾಹಿತಿ ಬಂದಿತ್ತು. ತಕ್ಷಣ ಸ್ಥಳಕ್ಕೆ ತೆರಳಿದ ಪೊಲೀಸರು ಪರಿಶೀಲನೆ ನಡೆಸಿದಾಗ ರೆಹಾನಾ ಮೃತಪಟ್ಟಿರುವುದು ಪತ್ತೆಯಾಗಿದೆ. ಪ್ರಾಥಮಿಕ ತನಿಖೆಯಲ್ಲಿ, ರೆಹಾನಾ ತನ್ನನ್ನು ಮದುವೆಯಾಗುವಂತೆ ಅಹ್ಮದ್ ಸಲಾಂ ಮೇಲೆ…
ಸುಬ್ರಹ್ಮಣ್ಯ: ನಾಗರ ಪಂಚಮಿ ಸಂದರ್ಭವನ್ನು ದುರ್ಬಳಕೆ ಮಾಡಿಕೊಂಡು ಪುಣ್ಯ ಪುರಾಣ ಪ್ರಸಿದ್ಧ ನಾಗಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಹೆಸರಿನಲ್ಲಿ ಭಕ್ತರನ್ನು ವಂಚಿಸಲು ಯತ್ನಿಸಿರುವ ಆರೋಪ ಕೇಳಿಬಂದಿದೆ. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ನಕಲಿ ವಿಡಿಯೋವೊಂದರ ವಿರುದ್ಧ ದೇವಸ್ಥಾನದ ಆಡಳಿತ ಮಂಡಳಿ ಪೊಲೀಸ್ ಠಾಣೆಗೆ ದೂರು ನೀಡಿದೆ. ನಾಗರ ಪಂಚಮಿ ಹಿನ್ನೆಲೆಯಲ್ಲಿ ಪ್ರಸಾರವಾಗುತ್ತಿರುವ ವಿಡಿಯೋದಲ್ಲಿ, ₹750 ಮುಂಗಡ ಹಣ ಪಾವತಿಸಿದರೆ ದೇವಸ್ಥಾನದ ಸೇವೆ ನೆರವೇರಿಸಿ ಪ್ರಸಾದವನ್ನು ಭಕ್ತರ ಮನೆಗೆ ಕಳುಹಿಸಿಕೊಡಲಾಗುವುದು ಎಂಬ ಸಂದೇಶ ನೀಡಲಾಗಿದೆ. ಈ ವಿಡಿಯೋವನ್ನು ನಂಬಿ ಭಕ್ತರು ಹಣ ಕಳೆದುಕೊಳ್ಳುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ದೇವಸ್ಥಾನದ ಆಡಳಿತ ಎಚ್ಚರಿಕೆಯ ಮಾಹಿತಿ ರವಾನಿಸಿದೆ. ನಕಲಿ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವುದು ಗಮನಕ್ಕೆ ಬಂದ ತಕ್ಷಣ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಅರವಿಂದ ಅಯ್ಯಪ್ಪ ಸುತಗುಂಡಿ ಅವರು ಸಂಬಂಧಪಟ್ಟ ಪೊಲೀಸ್ ಠಾಣೆಗೆ ಈ ಬಗ್ಗೆ ದೂರು ನೀಡಿದ್ದಾರೆ. ದೇವಸ್ಥಾನದ ಹೆಸರನ್ನು ದುರ್ಬಳಕೆ ಮಾಡಿಕೊಂಡು ಭಕ್ತರಿಂದ ಹಣ ಪಡೆಯಲು ಯತ್ನಿಸಿರುವವರ ವಿರುದ್ಧ ತನಿಖೆ…
ತುಮಕೂರು: ಕಳೆದ ಕೆಲ ದಿನಗಳ ಹಿಂದೆ ತುಮಕೂರಿನಲ್ಲಿ ನಡೆದಿದ್ದ ಸುಹೇಲ್ ಕೊಲೆ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಆರಂಭದಲ್ಲಿ ಹಣಕಾಸಿನ ವಿಚಾರಕ್ಕೆ ಕೊಲೆ ನಡೆದಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದರು. ಆದ್ರೆ ತಿಲಕ್ ಪಾರ್ಕ್ ಪೊಲೀಸರ ತನಿಖೆಯಲ್ಲಿ ಬಯಲಾದ ಸಂಗತಿಯೇ ಬೇರೆ ಕಥೆ. ಹೌದು, ತುಮಕೂರಿನ ಹೆಗಡೆ ಕಾಲೋನಿಯಲ್ಲಿ ಇದೇ ತಿಂಗಳ 11ರ ರಾತ್ರಿ ಗೆಳೆಯರ ಜೊತೆ ಕುಳಿತಿದ್ದ ಸುಹೇಲ್ ಚಾಕು ಇರಿತಕ್ಕೊಳಗಾಗಿದ್ದ. ತೀವ್ರವಾಗಿ ಗಾಯಗೊಂಡಿದ್ದ ಸುಹೇಲ್ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆಯೇ ಸಾವನ್ನಪ್ಪಿದ್ದ.. ಘಟನೆ ಬಳಿಕ ಹಣಕಾಸಿನ ವಿಚಾರಕ್ಕೆ ಕೊಲೆ ನಡೆದಿದೆ ಎಂದು ಮೃತನ ಕುಟುಂಬ ಆರೋಪಿಸಿದ್ದರು.. ಪ್ರಕರಣ ದಾಖಲಿಸಿಕೊಂಡ ತಿಲಕ್ ಪಾರ್ಕ್ ಪೊಲೀಸರು ತನಿಖೆ ಆರಂಭಿಸಿದ್ದು, ರೀಲ್ಸ್ ನೋಡಿ ಗೇಲಿ ಮಾಡಿದ ಕಥೆಯೊಂದು ಬಯಲಾಗಿದೆ. ಕೊಲೆಗೀಡಾದ ಸುಹೇಲ್ ಮತ್ತು ಆರೋಪಿ ರಬ್ಬಾನ್ ಇಬ್ಬರೂ ಸ್ನೇಹಿತರೇ ಆಗಿದ್ದರು. ಬರೋಬ್ಬರಿ ಮೂರು ವರ್ಷದಿಂದ ಇಬ್ಬರೂ ಒಟ್ಟಿಗೆ ಓಡಾಡಿಕೊಂಡಿದ್ದರು. ಮಂಗಳವಾರ ರಾತ್ರಿ ಕೂಡ ಇಬ್ಬರು ಕೆಲ ಸ್ನೇಹಿತರ ಜೊತೆ ಸೇರಿ ಹೆಗಡೆ ಕಾಲೋನಿಯ ಅಂಗಡಿಯೊಂದರ ಬಳಿ…
ಹಾಸನ: ಜಿಲ್ಲೆಯಲ್ಲಿ ಮನೆಯಲ್ಲಿ ಜನರು ಇರುವಾಗಲೇ ಅವರನ್ನು ಬೆದರಿಸಿ ದರೋಡೆ ಮಾಡುತ್ತಿದ್ದ ಖತರ್ನಾಕ್ ಗ್ಯಾಂಗ್ ಅನ್ನು ಹಾಸನ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹಾಸನದ ಎಸ್.ಪಿ. ಶುಭಾನ್ವಿತ ಅವರ ನೇತೃತ್ವದಲ್ಲಿ ರಚಿಸಲಾದ ವಿಶೇಷ ತಂಡ ಈ ಕಾರ್ಯಾಚರಣೆ ನಡೆಸಿದೆ. ಜೂನ್ 2ರಂದು ಆಲೂರು ತಾಲೂಕಿನ ಮಣಿಪುರ ಗ್ರಾಮದ ನಿವೃತ್ತ ನೌಕರ ಚಂದ್ರಶೇಖರಯ್ಯ ಅವರ ಮನೆಯಲ್ಲಿ ಮತ್ತು ಜುಲೈ 22ರಂದು ಈಶ್ವರಹಳ್ಳಿ ಕೂಡುಗೆ ಗ್ರಾಮದ ಮಂಜೆಗೌಡರ ಮನೆಯಲ್ಲಿ ಒಟ್ಟು ಎರಡು ದರೋಡೆ ಪ್ರಕರಣಗಳು ನಡೆದಿತ್ತು. ಎರಡೂ ಪ್ರಕರಣಗಳಲ್ಲಿ ಸುಮಾರು 19.5 ಲಕ್ಷ ರೂಪಾಯಿಗೂ ಅಧಿಕ ಮೌಲ್ಯದ ಚಿನ್ನಾಭರಣಗಳನ್ನು ದರೋಡೆ ಮಾಡಲಾಗಿತ್ತು. ದರೋಡೆಕೋರರು ರಾಷ್ಟ್ರೀಯ ಹೆದ್ದಾರಿ 75ರ ಪಕ್ಕದ ಒಂಟಿ ಮನೆಗಳನ್ನು ಗುರಿಯಾಗಿಸಿಕೊಂಡಿದ್ದರು. ಪ್ರಕರಣದ ಗಂಭೀರತೆ ಅರಿತ ಪೊಲೀಸರು ವಿಶೇಷ ತಂಡ ರಚಿಸಿ ತನಿಖೆ ಆರಂಭಿಸಿದ್ದರು. ಸಿಸಿಟಿವಿ ದೃಶ್ಯಾವಳಿಗಳು ಮತ್ತು ಮೊಬೈಲ್ ಕರೆಗಳ ಆಧಾರದ ಮೇಲೆ ಆಗಸ್ಟ್ 7ರಂದು ಎಂಟು ಮಂದಿ ಆರೋಪಿಗಳನ್ನು ಬಂಧಿಸಲಾಯಿತು. ಬಂಧಿತರಲ್ಲಿ ದಕ್ಷಿಣ ಕನ್ನಡದ ಅಶ್ರಫ್, ಇಬ್ರಾಹಿಂ, ಹಾವೇರಿಯ ಈರಣ್ಣ, ಹಮೀದ್,…
ಬಂಟ್ವಾಳ: 1,05,59,450 ರೂ. ಮೌಲ್ಯದ ಎಂಡಿಎಂಎ, ಕೊಕೇನ್ ಸೇರಿದಂತೆ ಇತರ ವಸ್ತುಗಳನ್ನು ಸಾಗಿಸುತ್ತಿದ್ದ ಬೆಂಗಳೂರು ಮೂಲದ ವ್ಯಕ್ತಿಯನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬೆಂಗಳೂರು ಕೆಂಗೇರಿ ನಿವಾಸಿ ಮಹಮ್ಮದ್ ಅಮೀರ್ ಜರ್ತಾಬ್ (35) ಬಂಧಿತ ಆರೋಪಿ. ಆ.16 ರಂದು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕರಾದ ಮಂಜುನಾಥ ಟಿ ಅವರಿಗೆ ಹಾಸನ ಕಡೆಯಿಂದ ಮಂಗಳೂರು ಕಡೆಗೆ ಮಾದಕವಸ್ತು ಸಾಗಾಟ ಮಾಡುತ್ತಿರುವ ಬಗ್ಗೆ ಮಾಹಿತಿ ಬಂದಿತ್ತು. ಮಾಹಿತಿ ಮೇರೆಗೆ, ಸಿಬ್ಬಂದಿಗಳೊಂದಿಗೆ ತಡರಾತ್ರಿ ಕಾರೊಂದನ್ನು ತಡೆದು ವಾಹನ ಚಾಲಕನನ್ನು ವಿಚಾರಿಸಿದ್ದಾರೆ. ಈ ವೇಳೆ ಆತನು ಕಾರಿನಲ್ಲಿ ಮಾದಕವಸ್ತು ಸಾಗಿಸುತ್ತಿರುವುದಾಗಿ ಒಪ್ಪಿಕೊಂಡಿರುತ್ತಾನೆ. ಕಾರನ್ನು ತಪಾಸಣೆ ನಡೆಸಿದಾಗ ಒಟ್ಟು 3538.63 ಗ್ರಾಂ ಎಂಡಿಎಂಎ ಮತ್ತು 99.12 ಗ್ರಾಂ ಕೊಕೈನ್ ಹಾಗೂ ಖಾಲಿ ಪ್ಲಾಸ್ಟಿಕ್ ಡಬ್ಬಿಗಳು, ಡಿಜಿಟಲ್ ತೂಕದ ಯಂತ್ರ, ಸೇರಿದಂತೆ ಇತರೆ ಸೊತ್ತುಗಳು ಪತ್ತೆಯಾಗಿರುತ್ತದೆ. ಪೊಲೀಸರು ಅವುಗಳನ್ನು ವಶಕ್ಕೆ ಪಡೆದಿದ್ದಾರೆ. 53,86,300 ರೂ. ಮೌಲ್ಯದ ಎಂಡಿಎಂಎ, 49,56,000 ರೂ. ಮೌಲ್ಯದ ಕೊಕೈನ್ ಹಾಗೂ ಇತರೆ ವಶಪಡಿಸಿಕೊಂಡ…
ಮಂಗಳೂರು: ಮಂಗಳೂರಿನಲ್ಲಿ ಆಹಾರ ಸಂಸ್ಥೆಗಳ ವಿರುದ್ಧ ಆಹಾರ ಸುರಕ್ಷತಾ ಇಲಾಖೆ ನಡೆಸುತ್ತಿರುವ ತಪಾಸಣಾ ಕಾರ್ಯಾಚರಣೆ ಭಾನುವಾರವೂ ಮುಂದುವರಿದಿದ್ದು, ಜಿಲ್ಲಾ ಆಹಾರ ಸುರಕ್ಷತಾ ಅಧಿಕಾರಿಗಳ ತಂಡವು ಪ್ರಮುಖ ಫಾಸ್ಟ್‌ಫುಡ್ ಸಂಸ್ಥೆಯಾದ ಮೆಕ್‌ಡೊನಾಲ್ಡ್ಸ್‌ನ ಕಿಚನ್‌ನಲ್ಲಿ ದಿಢೀರ್ ತಪಾಸಣೆ ನಡೆಸಿತು. ಡಾ. ಪ್ರವೀಣ್ ನೇತೃತ್ವದ ತಂಡವು ನಡೆಯುತ್ತಿರುವ ಜಾರಿ ಕಾರ್ಯಾಚರಣೆಯ ಭಾಗವಾಗಿ ಮೆಕ್‌ಡೊನಾಲ್ಡ್ಸ್ ಕಿಚನ್‌ನನ್ನು ಪರಿಶೀಲಿಸಿತು. ಈ ವೇಳೆ ಆಹಾರ ಪದಾರ್ಥಗಳು, ಸಂಗ್ರಹಣಾ ವ್ಯವಸ್ಥೆ ಹಾಗೂ ಆವರಣದ ಸ್ವಚ್ಛತೆಯನ್ನು ಅಧಿಕಾರಿಗಳು ಪರಿಶೀಲಿಸಿದರು. ನಿಗದಿತ ಆಹಾರ ಸುರಕ್ಷತಾ ನಿಯಮಗಳು ಮತ್ತು ಮಾನದಂಡಗಳನ್ನು ಸಂಸ್ಥೆ ಪಾಲಿಸುತ್ತಿದೆಯೇ ಎಂಬುದನ್ನೂ ಅಧಿಕಾರಿಗಳು ಪರಿಶೀಲಿಸಿದರು. ಶನಿವಾರ ಮಂಗಳೂರಿನಾದ್ಯಂತ ಆಹಾರ ಸುರಕ್ಷತಾ ಅಧಿಕಾರಿಗಳು ತಪಾಸಣೆಯನ್ನು ತೀವ್ರಗೊಳಿಸಿದ ಬೆನ್ನಲ್ಲೇ ಈ ತಪಾಸಣೆ ನಡೆದಿದೆ. ಕೆ.ಎಸ್. ರಾವ್ ರಸ್ತೆಯ ಸಿಟಿ ಸೆಂಟರ್ ಮಾಲ್‌ನಲ್ಲಿರುವ ಕೆಎಫ್‌ಸಿ ಮೇಲೂ ದಿಢೀರ್ ದಾಳಿ ನಡೆಸಲಾಗಿತ್ತು. ಆನ್‌ಲೈನ್ ಮೂಲಕ ಆರ್ಡರ್ ಮಾಡಿದ್ದ ಆಹಾರದಲ್ಲಿ ಕೊಳೆತ ಹಾಗೂ ದುರ್ವಾಸನೆಯ ಕೋಳಿ ಮಾಂಸ ಇತ್ತು ಎಂಬ ದೂರಿನ ಹಿನ್ನೆಲೆಯಲ್ಲಿ ಅಧಿಕಾರಿಗಳು ಈ ದಾಳಿ ನಡೆಸಿದ್ದರು. ತಪಾಸಣೆ ವೇಳೆ ಆಹಾರ ಮಾದರಿಗಳನ್ನು…
ಮಂಗಳೂರು: ಆನ್‌ಲೈನ್‌ನಲ್ಲಿ ಆರ್ಡರ್ ಮಾಡಿದ್ದ ಚಿಕನ್‌ನಿಂದ ದುರ್ವಾಸನೆ ಬರುತ್ತಿದೆ ಎಂಬ ಗ್ರಾಹಕರ ದೂರಿನ ಬೆನ್ನಲ್ಲೇ ನಗರದ ಕೆ.ಎಸ್. ರಾವ್ ರಸ್ತೆಯಲ್ಲಿರುವ ಕೆಎಫ್‌ಸಿ ಮಳಿಗೆಗೆ ದಕ್ಷಿಣ ಕನ್ನಡ ಜಿಲ್ಲಾ ಆಹಾರ ಸುರಕ್ಷತಾ ಇಲಾಖೆ ಅಧಿಕಾರಿಗಳು ಶನಿವಾರ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಜಿಲ್ಲಾ ಆಹಾರ ಸುರಕ್ಷತಾ ಅಂಕಿತಾಧಿಕಾರಿ ಡಾ. ಪ್ರವೀಣ್ ಕುಮಾರ್ ಸಿ.ಎಚ್. ಅವರ ನೇತೃತ್ವದಲ್ಲಿ ಅಧಿಕಾರಿಗಳ ತಂಡ ಕೆಎಫ್‌ಸಿ ಮಳಿಗೆಯ ವಿವಿಧ ವಿಭಾಗಗಳನ್ನು ಪರಿಶೀಲಿಸಿದೆ. ಅಡುಗೆ ಮಾಡುವ ಸ್ಥಳ, ಕೋಲ್ಡ್ ಸ್ಟೋರೇಜ್, ಡೀಪ್ ಫ್ರೀಜರ್‌ಗಳಲ್ಲಿರುವ ಆಹಾರ ದಾಸ್ತಾನು ಸೇರಿದಂತೆ ಚಿಕನ್ ತಯಾರಿಕೆಗೆ ಬಳಸುವ ಅಡುಗೆ ಎಣ್ಣೆಯ ಗುಣಮಟ್ಟವನ್ನೂ ಅಧಿಕಾರಿಗಳು ಪರಿಶೀಲಿಸಿದ್ದಾರೆ. ಪೆರಿ ಪೆರಿ ಚಿಕನ್ ಬಗ್ಗೆ ಗ್ರಾಹಕರ ದೂರು ಆಗಸ್ಟ್ 15ರಂದು ಗ್ರಾಹಕರೊಬ್ಬರು ಕೆ.ಎಸ್. ರಾವ್ ರಸ್ತೆ ಕೆಎಫ್‌ಸಿ ಮಳಿಗೆಯಿಂದ ‘ಪೆರಿ ಪೆರಿ ಚಿಕನ್’ ಅನ್ನು ಆನ್‌ಲೈನ್ ಮೂಲಕ ಆರ್ಡರ್ ಮಾಡಿದ್ದರು. ಆಹಾರ ಮನೆಗೆ ತಲುಪಿದ ಬಳಿಕ ಚಿಕನ್‌ನಿಂದ ಅಸಹಜ ದುರ್ವಾಸನೆ ಬರುತ್ತಿರುವುದು ಗ್ರಾಹಕರ ಗಮನಕ್ಕೆ ಬಂದಿದೆ. ಚಿಕನ್ ಹಾಳಾಗಿರಬಹುದೆಂಬ…
ಗದಗ: ಮಾನಸಿಕ ಅಸ್ವಸ್ಥ ಯುವತಿಯನ್ನು ಪುಸಲಾಯಿಸಿ ನಿರಂತರವಾಗಿ ಅತ್ಯಾಚಾರ ಎಸಗಿ, ಗರ್ಭಿಣಿಯಾದ ಬಳಿಕ ಅಕ್ರಮವಾಗಿ ಗರ್ಭಪಾತ ಮಾಡಿಸಿರುವ ಅಮಾನವೀಯ ಘಟನೆಯೊಂದು ಗದಗದಲ್ಲಿ ಬೆಳಕಿಗೆ ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಾಚಾರ ಎಸಗಿದ ಮತ್ತು ಅಕ್ರಮವಾಗಿ ಗರ್ಭಪಾತ ಮಾಡಿಸಿದ ಆರ್‌ಎಂಪಿ ವೈದ್ಯ ಹಾಗೂ ಸ್ಟಾಫ್ ನರ್ಸ್ ಸೇರಿದಂತೆ ಒಟ್ಟು ಏಳು ಜನರನ್ನು ಗದಗ ಮಹಿಳಾ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಹಣದ ಆಮಿಷ: ದೂರು ನೀಡದಂತೆ ಜೀವಬೆದರಿಕೆ ಗದಗದ ಬೆಟಗೇರಿ ನಿವಾಸಿಗಳಾದ ಸಿಕಂದರ್ ಬೇಪಾರಿ, ಶಬ್ಬೀರಹ್ಮದ್ ಲಂಗೋಟಿ, ಪ್ರದೀಪ್ ನವಲೇಕರ್ ಹಾಗೂ ಭರತ ಕೊರವರ ಎಂಬುವವರು ಯುವತಿಯನ್ನು ಪ್ರತ್ಯೇಕ ನಿರ್ಜನ ಪ್ರದೇಶ ಹಾಗೂ ಮನೆಗೆ ಕರೆದೊಯ್ದು ನಿರಂತರವಾಗಿ ಅತ್ಯಾಚಾರ ಎಸಗಿದ್ದಾರೆ. ಯುವತಿ ಮೂರು ತಿಂಗಳ ಗರ್ಭಿಣಿಯಾದಾಗ ಈ ನೀಚ ಕೃತ್ಯ ಪೋಷಕರಿಗೆ ತಿಳಿದಿದೆ. ಈ ವೇಳೆ ಆರೋಪಿಗಳು ಬಡ ಕುಟುಂಬಕ್ಕೆ ಹಣದ ಆಮಿಷವೊಡ್ಡಿ, ದೂರು ನೀಡದಂತೆ ಜೀವಬೆದರಿಕೆ ಹಾಕಿ ಪ್ರಕರಣ ಮುಚ್ಚಿಹಾಕಲು ಯತ್ನಿಸಿದ್ದಾರೆ. ಅಲ್ಲದೆ, ಲಕ್ಷ್ಮೇಶ್ವರ ತಾಲೂಕಿನ ಬೆಳ್ಳಟ್ಟಿ ಗ್ರಾಮದ ಆರ್‌ಎಂಪಿ ವೈದ್ಯ ಡಾ. ನಾಗರಾಜ್…



