Author: admin
ಬೆಂಗಳೂರು: ದಸರಾ ಹಬ್ಬದ ಸಿದ್ಧತೆಯ ನಡುವೆ, ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (FSSAI) ಸ್ವೀಟ್ ಅಂಗಡಿಗಳ ಮೇಲೆ ಬಿಗ್ ಶಾಕ್ ನೀಡಿದೆ. ರಾಜ್ಯಾದ್ಯಂತ ಸ್ವೀಟ್ಸ್ ಶಾಪ್‌ಗಳ ಮೇಲೆ ದಾಳಿ ಮುಂದುವರೆಸಿದ್ದು, ಗುಣಮಟ್ಟ ಮತ್ತು ನೈರ್ಮಲ್ಯವನ್ನು ಪರಿಶೀಲಿಸಲಾಗುತ್ತಿದೆ. ಬೆಂಗಳೂರಿನಲ್ಲಿ ಒಟ್ಟು 90 ಕಡೆಗಳಲ್ಲಿ ದಾಳಿ ನಡೆಸಿ, ಎಫ್ಎಸ್ಎಸ್ಎಐ ಅಧಿಕಾರಿಗಳು ಕೂಲಂಕಷ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ 145 ವಿವಿಧ ಮಾದರಿಯ ಸ್ವೀಟ್ಸ್ ಸ್ಯಾಂಪಲ್ಸ್‌ಗಳನ್ನು ಸಂಗ್ರಹಿಸಲಾಗಿದೆ. ಸ್ವೀಟ್ ತಯಾರಿಕಾ ಘಟಕಗಳಲ್ಲಿ ಶುಚಿತ್ವ ಕಾಪಾಡದಿರುವುದು, ಸಿಬ್ಬಂದಿಗೆ ಕಡ್ಡಾಯವಾಗಿ ಇರಬೇಕಾದ ವೈದ್ಯಕೀಯ ಪ್ರಮಾಣಪತ್ರ ಇಲ್ಲದಿರುವುದು ಮತ್ತು ಉತ್ಪನ್ನಗಳ ಲೇಬಲಿಂಗ್‌ನಲ್ಲಿ ದೋಷಗಳು ದಾಳಿಯ ಸಂದರ್ಭದಲ್ಲಿ ಕಂಡುಬಂದಿವೆ. ಈ ಗಂಭೀರ ಲೋಪಗಳನ್ನು ಗಮನಿಸಿ, 15 ಸ್ವೀಟ್ಸ್ ತಯಾರಿಕಾ ಘಟಕಗಳಿಗೆ ನೋಟಿಸ್ ನೀಡಲಾಗಿದೆ. ಅಲ್ಲದೆ, ಎರಡು ಉದ್ದಿಮೆಗಳಿಗೆ 7,000 ರೂಪಾಯಿ ದಂಡವನ್ನು ಕೂಡ ಅಧಿಕಾರಿಗಳು ವಿಧಿಸಿದ್ದಾರೆ. ಕೊಪ್ಪಳ ಜಿಲ್ಲೆಯ ಬಸವೇಶ್ವರ ರಾಜಸ್ಥಾನ ಸ್ವೀಟ್ ಮಳಿಗೆಯ ಮೇಲೂ ಎಫ್ಎಸ್ಎಸ್ಎಐ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲಿಸಿದ್ದಾರೆ. ಹಬ್ಬದ ಸಂದರ್ಭದಲ್ಲಿ ಗ್ರಾಹಕರಿಗೆ ಶುದ್ಧ ಮತ್ತು…
ಮಂಗಳೂರು: ಸುರತ್ಕಲ್‌ನ ಎಂಆರ್‌ಪಿಎಲ್ ಘಟಕದಲ್ಲಿ ಸೆಪ್ಟೆಂಬರ್ 30ರಂದು ಸಂಭವಿಸಿದ್ದ ಭೀಕರ ಸ್ಫೋಟದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮತ್ತೊಬ್ಬ ಕಾರ್ಮಿಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ನಗರದ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರಾಜೇಶ್ ಡಿಸಿಲ್ವ (Rajesh D’Silva) ಅವರು ಶನಿವಾರ ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ. ಮೃತ ರಾಜೇಶ್ ಡಿಸಿಲ್ವ ಅವರು ಸುರತ್ಕಲ್‌ನ ಇಡ್ಯಾ ಗ್ರಾಮದ ಕಾನ ನಿವಾಸಿಯಾಗಿದ್ದು, ಹಲವು ವರ್ಷಗಳಿಂದ ಎಂಆರ್‌ಪಿಎಲ್‌ನಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಸೆಪ್ಟೆಂಬರ್ 30ರಂದು ಎಂಆರ್‌ಪಿಎಲ್‌ನ ಫೇಸ್–3 ವಿಭಾಗದ CHTU ಘಟಕದಲ್ಲಿ ಭಾರೀ ಸ್ಫೋಟ ಸಂಭವಿಸಿತ್ತು. ಈ ದುರ್ಘಟನೆಯಲ್ಲಿ ಹಳೆಯಂಗಡಿ ನಿವಾಸಿ ಮನೀಶ್ ಅವರು ಸ್ಥಳದಲ್ಲೇ ಮೃತಪಟ್ಟಿದ್ದರು. ಘಟನೆಯಲ್ಲಿ ಗಂಭೀರವಾಗಿ ಸುಟ್ಟ ಗಾಯಗಳಾಗಿದ್ದ ರಾಜೇಶ್ ಡಿಸಿಲ್ವ ಅವರನ್ನು ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲಿಸಿ, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಹಲವು ದಿನಗಳಿಂದ ಸಾವು-ಬದುಕಿನ ನಡುವೆ ಹೋರಾಡುತ್ತಿದ್ದ ರಾಜೇಶ್ ಅವರು ಚಿಕಿತ್ಸೆ ಫಲಕಾರಿಯಾಗದೆ ಶನಿವಾರ ಬೆಳಗ್ಗೆ ಮೃತಪಟ್ಟಿದ್ದಾರೆ. ಮೃತದೇಹವನ್ನು ವೆನ್‌ಲಾಕ್ ಆಸ್ಪತ್ರೆಯಲ್ಲಿ…
ಔಷಧಿಗಳ ಬೆಲೆ ನಿಯಂತ್ರಣದ ಬೆನ್ನಲ್ಲೇ, ಖಾಸಗಿ ಆಸ್ಪತ್ರೆಗಳಲ್ಲಿ ರೋಗಿಗಳಿಂದ ಮನಬಂದಂತೆ ಹಣ ವಸೂಲಿ ಮಾಡುತ್ತಿರುವ ಸುಲಿಗೆಗೆ ಬ್ರೇಕ್ ಹಾಕಲು ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಒಂದೇ ರೀತಿಯ ಶಸ್ತ್ರಚಿಕಿತ್ಸೆಗೆ (ಸರ್ಜರಿ) ವಿವಿಧ ಆಸ್ಪತ್ರೆಗಳಲ್ಲಿ ವಿಭಿನ್ನ ಹಾಗೂ ದುಬಾರಿ ಬಿಲ್ ವಿಧಿಸುತ್ತಿರುವುದಕ್ಕೆ ಕಡಿವಾಣ ಹಾಕಲು ಆರೋಗ್ಯ ಇಲಾಖೆ ಮುಂದಾಗಿದೆ. ಮಧ್ಯಮ ವರ್ಗದ ಜನರ ಸಂಕಷ್ಟ ಪ್ರಸ್ತುತ ಮಾರುಕಟ್ಟೆಯಲ್ಲಿ ಒಂದೇ ಕಾಯಿಲೆ ಅಥವಾ ಸರ್ಜರಿಗೆ ಒಂದು ಆಸ್ಪತ್ರೆಯಲ್ಲಿ 10 ಸಾವಿರ ರೂ. ಇದ್ದರೆ, ಮತ್ತೊಂದು ಆಸ್ಪತ್ರೆಯಲ್ಲಿ 50 ಸಾವಿರ ರೂ. ಹಾಗೂ ಟಾಪ್ ಕಾರ್ಪೊರೇಟ್ ಆಸ್ಪತ್ರೆಗಳಲ್ಲಿ ಬರೋಬ್ಬರಿ 1 ಲಕ್ಷ ರೂ. ವರೆಗೆ ಬಿಲ್ ಮಾಡಲಾಗುತ್ತಿದೆ. ಅಲ್ಲದೆ, ಬೆಂಗಳೂರು, ಹುಬ್ಬಳ್ಳಿ, ಮಂಗಳೂರಿನಂತಹ ಪ್ರಮುಖ ನಗರಗಳಲ್ಲಿ ಆಸ್ಪತ್ರೆಗಳ ದರಗಳಲ್ಲಿ ಭಾರೀ ವ್ಯತ್ಯಾಸವಿರುತ್ತದೆ. ಇದರಿಂದ ಸಾಮಾನ್ಯ ರೋಗಿಗಳು ಮತ್ತು ಮಧ್ಯಮ ವರ್ಗದ ಜನರು ಆರ್ಥಿಕವಾಗಿ ತೀವ್ರ ಸಂಕಷ್ಟಕ್ಕೆ ಸಿಲುಕುತ್ತಿದ್ದಾರೆ. ಏಕರೂಪದ ದರ ನಿಗದಿಪಡಿಸುವ ಸಾಧ್ಯತೆ ಈ ಅನ್ಯಾಯ ತಪ್ಪಿಸಲು ಮತ್ತು ಚಿಕಿತ್ಸಾ ವೆಚ್ಚದಲ್ಲಿ ಏಕರೂಪತೆ ತರಲು…
ನವದೆಹಲಿ: ದೆಹಲಿಯಲ್ಲಿ ನಿಗದಿಯಾಗಿದ್ದ ಪ್ರತಿಭಟನೆ ಮತ್ತು ‘ಲೆಹ್ರಾ ದೋ ತಿರಂಗಾ’ ರ‍್ಯಾಲಿಗೂ ಮುನ್ನ ಮುನ್ನೆಚ್ಚರಿಕೆ ಕ್ರಮವಾಗಿ ಕಾಕ್‌ರೋಚ್ ಜನತಾ ಪಾರ್ಟಿ(ಸಿಜೆಪಿ) ಸಂಸ್ಥಾಪಕ ಅಭಿಜಿತ್ ದೀಪ್ಕೆ ಅವರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ಇನ್ನು ಎಐಎಸ್‌ಎ ಮುಖ್ಯಸ್ಥೆ ನೇಹಾ ಬೋರಾ ಅವರನ್ನು ಕಸ್ಟಡಿಗೆ ಪಡೆದ ಬಳಿಕ ಬಿಡುಗಡೆ ಮಾಡಲಾಗಿದೆ. ಚುನಾವಣಾ ಆಯೋಗದ ವಿರುದ್ಧ ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಅಕ್ಟೋಬರ್ 16 ರಂದು ಸಂಜೆ 5 ಗಂಟೆಗೆ ದೆಹಲಿಯ ಕನ್ನಾಟ್ ಪ್ಲೇಸ್‌ನ ಸೆಂಟ್ರಲ್ ಪಾರ್ಕ್‌ನಲ್ಲಿ ರಾಷ್ಟ್ರಧ್ವಜದೊಂದಿಗೆ ಮೆರವಣಿಗೆಗೆ ಸಿಜೆಪಿ ಕರೆ ನೀಡಿತ್ತು. ಆದರೆ, ಮುಂಜಾಗ್ರತಾ ಕ್ರಮವಾಗಿ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಈ ಪ್ರತಿಭಟನೆಗೆ ಪೊಲೀಸರು ಅನುಮತಿ ನೀಡಲು ನಿರಾಕರಿಸಿದ್ದರು. ಜೊತೆಗೆ ಎನ್‌ಡಿಎಂಸಿ ಆಡಳಿತಾತ್ಮಕ ಕಾರಣಗಳನ್ನು ಉಲ್ಲೇಖಿಸಿ ಅಕ್ಟೋಬರ್ 16 ಮತ್ತು 17ರಂದು ಉದ್ಯಾನವನವು ಮುಚ್ಚಲಾಗುತ್ತದೆ ಎಂದು ಆದೇಶಿಸಿತ್ತು. ಆದರೆ ಇದೀಗ ನಿಷೇದಾಜ್ಞೆ ಉಲ್ಲಂಘಿಸಿ ಪ್ರತಿಭಟನೆಯಲ್ಲಿ ಭಾಗವಹಿಸಲು ಮುಂದಾಗಿದ್ದ ಪ್ರಮುಖರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸಿಜೆಪಿಯ ಸಂಸ್ಥಾಪಕ ಅಭಿಜಿತ್ ದೀಪ್ಕೆ ಅವರನ್ನು ದೆಹಲಿ…
ನವದೆಹಲಿ: ಬಿಜೆಪಿ ಹಿರಿಯ ಮುಖಂಡ, ಭಾರತದ ಮಾಜಿ ಉಪಪ್ರಧಾನಿ ಲಾಲ್ ಕೃಷ್ಣ ಅಡ್ವಾಣಿ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಅವರನ್ನು ಶುಕ್ರವಾರ ತಡರಾತ್ರಿ ದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಎದೆ ಸೋಂಕು ಹಾಗೂ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಎಲ್‌ಕೆ ಅಡ್ವಾಣಿ ಅವರನ್ನ ಆಸ್ಪತ್ರೆಗೆ ದಾಖಲಿಸಲಾಗಿದೆ. ಶ್ವಾಸಕೋಶ ವಿಭಾಗದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ತಿಳಿದುಬಂದಿದೆ.ಈ ವರ್ಷದ ಮೇ ತಿಂಗಳಲ್ಲಿಯೂ ವಯೋಸಹಜ ಆರೋಗ್ಯ ಸಮಸ್ಯೆಗಳ ಹಿನ್ನೆಲೆಯಲ್ಲಿ ಅಡ್ವಾಣಿ ಅವರು ಇದೇ ಆಸ್ಪತ್ರೆಗೆ ದಾಖಲಾಗಿದ್ದರು. ಕೆಲವು ದಿನಗಳ ಚಿಕಿತ್ಸೆಯ ಬಳಿಕ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದರು. ಇದೀಗ ಉಸಿರಾಟ ಸಮಸ್ಯೆ, ಎದೆ ಸೋಂಕಿನಿಂದಾಗಿ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಚಾಮರಾಜನಗರ: ಗೂಗಲ್ ಮ್ಯಾಪ್ ತೋರಿಸಿದ ದಾರಿಯಲ್ಲಿ ಸಾಗಿ ಸೇತುವೆಯಿಂದ ಕೆಳಬಿದ್ದ ಕಾರು, ಗೂಗಲ್ ಮ್ಯಾಪ್ ನೋಡಿಕೊಂಡು ಹೋಗಿ ಅಪಘಾತಕ್ಕೀಡಾದ ಸುದ್ದಿಗಳನ್ನು ನಾವು ನೋಡಿದ್ದೇವೆ. ಆದರೀಗ ನವರಾತ್ರಿ ಉತ್ಸವವನ್ನು ಕಣ್ತುಂಬಿಕೊಳ್ಳಲು ಮೈಸೂರಿಗೆ ಬಂದಿದ್ದ ಒಂಬತ್ತು ಟೆಕ್ಕಿಗಳು, ಗೂಗಲ್ ಮ್ಯಾಪ್ ತೋರಿಸಿದ ಮಾರ್ಗವನ್ನು ಅನುಸರಿಸಿ ದಟ್ಟ ಕಾಡಿನಲ್ಲಿ ಸಿಲುಕಿ ಸಂಕಷ್ಟಕ್ಕೆ ಸಿಲುಕಿದ ಘಟನೆ ನಡೆದಿದೆ. ಬೆಂಗಳೂರಿನಿಂದ ಮೈಸೂರಿಗೆ ಆಗಮಿಸಿದ್ದ ಈ ತಂಡ, ಉತ್ಸವ ವೀಕ್ಷಿಸಿದ ಬಳಿಕ ಚೆನ್ನೈಗೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ. ರೋಜರ್ ಪ್ರಿನ್ಸ್, ಪ್ರಿನ್ಸ್ ಮಾರ್ಟಿನ್, ಮಣಿ, ಅರಿವುಮತಿ, ಗಣ, ಶರ್ಮಿಳಾ, ತ್ರಿಷಾ, ಬೊಪೇಶ್ ಹಾಗೂ ಜೋಸಯ್ಯ ಸೇರಿದಂತೆ ಒಂಬತ್ತು ಮಂದಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಚಾಮರಾಜನಗರ ಮಾರ್ಗವಾಗಿ ದಿಂಬಂ ಘಾಟ್ ಮೂಲಕ ಚೆನ್ನೈಗೆ ತೆರಳಲು ನಿರ್ಧರಿಸಿದ್ದ ತಂಡ, ರಾತ್ರಿ ಗೂಗಲ್ ಮ್ಯಾಪ್ ಸಹಾಯದಿಂದ ಪ್ರಯಾಣ ಮುಂದುವರಿಸಿತ್ತು. ಈ ವೇಳೆ ಗೂಗಲ್ ಮ್ಯಾಪ್ ಕಾಡಿನ ಒಳಭಾಗದ ರಸ್ತೆಯನ್ನು ತೋರಿಸಿದ್ದು, ಅದೇ ಮಾರ್ಗದಲ್ಲಿ ಸಾಗಿದ ಕಾರು ರಸ್ತೆ ಬದಿಯ ಕಂದಕದಲ್ಲಿ ಸಿಲುಕಿಕೊಂಡಿದೆ. ದಟ್ಟ ಕಾಡಿನ…
ಪುತ್ತೂರು: ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಡಿಸೆಂಬರ್ 27, 2022 ರಂದು ನಡೆದ ಭೂ ವಿವಾದದ ನಂತರ ಮಹಿಳೆಯ ಮೇಲೆ ಹಲ್ಲೆ ನಡೆಸಿ ಆಕೆಯ ಮಾನಭಂಗ ಮಾಡಿದ ಪ್ರಕರಣದಲ್ಲಿ ಮೂವರು ಆರೋಪಿಗಳಿಗೆ ಪುತ್ತೂರಿನ ನ್ಯಾಯಾಲಯ ಶಿಕ್ಷೆ ವಿಧಿಸಿದೆ. ಅಪರಾಧ ಸಂಖ್ಯೆ 113/2022 ರ ಅಡಿಯಲ್ಲಿ ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 34 ರೊಂದಿಗೆ ಸೆಕ್ಷನ್ 447, 504, 506, 323 ಮತ್ತು 354 ರ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ. ಆಗ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಸುಬ್ರಹ್ಮಣ್ಯ ಎಚ್, ಪ್ರಕರಣದ ತನಿಖೆ ನಡೆಸಿ, ಅಗತ್ಯ ಸಾಕ್ಷ್ಯಗಳನ್ನು ಸಂಗ್ರಹಿಸಿ, ಅರುಣ್ ಕುಮಾರ್, ವಿನಯ್ ಕುಮಾರ್ ಜಿ ಮತ್ತು ಸುಂದರ್ ಪಿ ಎಂ ವಿರುದ್ಧ ಆರೋಪಪಟ್ಟಿ ಸಲ್ಲಿಸಿದರು. ಪುತ್ತೂರಿನ ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಪ್ರಥಮ ದರ್ಜೆ (ASCJ ಮತ್ತು JMFC ನ್ಯಾಯಾಲಯ)ದಲ್ಲಿ ನ್ಯಾಯಾಧೀಶ ದೇವರಾಜ್ ವೈ.ಎಚ್ ಅವರು ಪ್ರಕರಣದ ವಿಚಾರಣೆ ನಡೆಸಿದರು. ವಿಚಾರಣೆಯ ನಂತರ,…
ಕಾಸರಗೋಡು: ಕೇರಳದ ಕಾಸರಗೋಡು ಜಿಲ್ಲೆಯ ಬಾಳಾಲ್ ಪಂಚಾಯತ್ ವ್ಯಾಪ್ತಿಯಲ್ಲಿ ಬಾವಿಗೆ ಬಿದ್ದ 62 ವರ್ಷದ ಮಹಿಳೆಯನ್ನು ರಕ್ಷಿಸಲು ಆಟೋ ಚಾಲಕನೊಬ್ಬ ತನ್ನ ಜೀವದ ಹಂಗು ತೊರೆದು ಬಾವಿಗೆ ಇಳಿದ ಘಟನೆ ನಡೆದಿದೆ. ಸುಮಾರು 16 ಅಡಿ ಆಳದ ಬಾವಿಯಲ್ಲಿ ನೀರಿನ ಮಟ್ಟದ ನಡುವೆ ಮಹಿಳೆಯನ್ನು ಸುಮಾರು ಒಂದು ಗಂಟೆ ಕಾಲ ಮೇಲಕ್ಕೆ ಹಿಡಿದುಕೊಂಡು ನಿಂತಿದ್ದ ಚಾಲಕನಿಗೆ ಬಳಿಕ ಮತ್ತೊಬ್ಬ ವ್ಯಕ್ತಿ ನೆರವಾಗಿದ್ದಾರೆ. ಅಗ್ನಿಶಾಮಕ ಮತ್ತು ರಕ್ಷಣಾ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಮಹಿಳೆ ಸೇರಿದಂತೆ ಇಬ್ಬರನ್ನೂ ಸುರಕ್ಷಿತವಾಗಿ ಮೇಲಕ್ಕೆ ಕರೆತಂದಿದ್ದಾರೆ. ಮಲ್ಲೋಮ್‌ನ 55 ವರ್ಷದ ಆಟೋ ಚಾಲಕ ಪಪ್ಪಚ್ಚನ್ ಕೊನೂರ್ ಗುರುವಾರ ಸಂಜೆ ನಟ್ಟಕ್ಕಲ್‌ನ ಎಲಮ್ಮ ಅಂಬಟ್ಟುಪರಂಬಿಲ್ ಅವರ ಮನೆಗೆ ಹೋಗಿದ್ದರು. ಮೂರು ತಿಂಗಳ ಹಿಂದೆ ನಿಧನರಾದ ಅವರ ಪತಿ ಮತ್ತು ಎಲಮ್ಮ ಅವರ ಜಂಟಿ ಫೋಟೋವನ್ನು ಫ್ರೇಮ್ ಮಾಡಿಸಿ ತಲುಪಿಸಲು ಚಾಲಕ ಬಂದಿದ್ದರು. ಸಂಜೆ ಸುಮಾರು 5.15ಕ್ಕೆ ಅವರು ಮನೆ ತಲುಪಿದಾಗ, ಎಲಮ್ಮ ಅವರು ನೆರೆಮನೆಯವರ ಮಗಳೊಂದಿಗೆ ಫೋನ್‌ನಲ್ಲಿ ಮಾತನಾಡುತ್ತಿದ್ದರು. ಅದೇ…
ಬೆಂಗಳೂರು: ಕೆಪಿಎಸ್ಸಿ ನೇಮಕಾತಿಯಲ್ಲಿ ನಡೆದ ಅಕ್ರಮ ಬಗೆದಷ್ಟು ಬಯಲಾಗುತ್ತಿದೆ,ಪ್ರಕರಣ ಸಂಬಂಧ ಇಡಿ ನಡೆಸಿದ ತನಿಖೆಯಲ್ಲಿ ಅಕ್ರಮದಲ್ಲಿ ಶಾಮೀಲಾದ ಅಭ್ಯರ್ಥಿಗಳ ಎಕ್ಸಾಂ ಸೀಕ್ರೆಟ್ ಬಯಲಾಗಿದೆ. ಕೆಪಿಎಸ್ಸಿಯ ಕೆಲ ಸದಸ್ಯರೇ ಅಭ್ಯರ್ಥಿಗಳಿಗೆ ಫೈವ್ ಸ್ಟಾರ್ ಹೋಟೆಲ್ನಲ್ಲಿ ಪರೀಕ್ಷೆ ಬರೆಯಿಸಿರುವ ಮಾಹಿತಿ ಇಡಿಗೆ ಲಭ್ಯವಾಗಿದೆ. ಪರೀಕ್ಷೆಗೂ ಮುನ್ನವೇ ಅಭ್ಯರ್ಥಿಗಳಿಗೆ ಒಂದು ಚೀಟಿಯಲ್ಲಿ ಉತ್ತರ ಬರೆದು ನೀಡಲಾಗಿತ್ತು. ಆದ್ರೂ ಅದನ್ನೂ ಬರೆಯಲು ಸಾಧ್ಯವಾಗದವರಿಗೆ ವಿಶೇಷ ಪ್ಲ್ಯಾನ್ ಮಾಡಿದ್ದರು. ಖುದ್ದು ತಾವೇ ಪ್ರಶ್ನೆ ಪತ್ರಿಕೆ ಮತ್ತು ಒಎಂಆರ್ ಕೊಟ್ಟು ಫೈವ್ ಸ್ಟಾರ್ ಹೋಟೆಲ್ನಲ್ಲಿ ಪರೀಕ್ಷೆ ಬರೆಸಿದ್ದಾರೆ. ನಂತರ ಒಎಂಆರ್ ಶೀಟ್ಗಳನ್ನು ಆಯ್ಕೆ ಪಟ್ಟಿಯಲ್ಲಿ ಸೇರಿಸಿದ್ದರು. OMR ಶೀಟ್ಗಳು ಯಾರಿಗೂ ಅನುಮಾನ ಬಾರದಂತೆ ಮೌಲ್ಯಮಾಪನ ಮಾಡಲಾಗಿತ್ತು ಸದ್ಯ ಇಡಿ ವಿಚಾರಣೆ ವೇಳೆ ಪರೀಕ್ಷೆ ಬರೆಸುವಲ್ಲಿ ಭಾಗಿಯಾಗಿರುವುದು ಪತ್ತೆಯಾಗಿದ್ದು, ಅಭ್ಯರ್ಥಿಗಳಿಗೆ ಪರೀಕ್ಷೆ ಬರೆಸಿದ್ದ ಹೋಟೆಲ್ ಬಳಿ ಮಾಹಿತಿ ಸಂಗ್ರಹಿಸಿದ್ದಾರೆ. ಇಂಗ್ಲಿಷ್ನಲ್ಲಿ ಹೆಸರು, ಅಡ್ರೆಸ್ ಬರೆಯಲು ಬಾರದ ವ್ಯಕ್ತಿಗಳು ಸಹ ಸರ್ಕಾರಿ ಉದ್ಯೋಗ ಪಡೆಯುವಂತೆ ಮಾಡಿರೋದು ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಇಡಿ ಪರಿಶೀಲನೆ…
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ತೀವ್ರ ವಿವಾದಕ್ಕೆ ಕಾರಣವಾಗಿರುವ ಸ್ಟಿಂಗ್ ಆಪರೇಷನ್ ಪ್ರಕರಣದ ತನಿಖೆಯನ್ನು ಬೆಂಗಳೂರಿನ ಸೈಬರ್ ಕ್ರೈಂ ಪೊಲೀಸರು ಚುರುಕುಗೊಳಿಸಿದ್ದಾರೆ. ಸ್ಟಿಂಗ್ ಆಪರೇಷನ್‌ಗೆ ಸಂಬಂಧಿಸಿದ ವಿಡಿಯೋಗಳನ್ನು ಅಪ್‌ಲೋಡ್ ಮಾಡುವ ಉದ್ದೇಶಕ್ಕಾಗಿಯೇ ಹೊಸ ಯೂಟ್ಯೂಬ್ ಚಾನೆಲ್ ತೆರೆಯಲಾಗಿತ್ತು ಎಂಬ ಮಾಹಿತಿ ತನಿಖೆಯ ವೇಳೆ ಬೆಳಕಿಗೆ ಬಂದಿದೆ. ಪ್ರಕರಣದ ಮಾಸ್ಟರ್‌ಮೈಂಡ್ ಯಾರು ಎಂಬುದನ್ನು ಪತ್ತೆಹಚ್ಚಲು ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ವಿಡಿಯೋ ಅಪ್‌ಲೋಡ್‌ಗಾಗಿಯೇ ಹೊಸ ಚಾನೆಲ್! ‘ಕರ್ನಾಟಕ ಹನಿಟ್ರ್ಯಾಪ್’ ಎಂಬ ಹೆಸರಿನಲ್ಲಿ ಹೊಸ ಯೂಟ್ಯೂಬ್ ಚಾನೆಲ್ ತೆರೆಯಲಾಗಿತ್ತು ಎಂಬುದು ತನಿಖೆಯಲ್ಲಿ ಪತ್ತೆಯಾಗಿದೆ. ಚಾನೆಲ್ ಆರಂಭಿಸಿದ ಬೆನ್ನಲ್ಲೇ ನಾಲ್ಕು ವಿಡಿಯೋಗಳನ್ನು ಅಪ್‌ಲೋಡ್ ಮಾಡಲಾಗಿತ್ತು ಎಂಬುದೂ ತಿಳಿದುಬಂದಿದೆ. ಚಾನೆಲ್ ತೆರೆದ ಕೆಲವೇ ಕ್ಷಣಗಳಲ್ಲಿ 54 ಜನರು ಸಬ್‌ಸ್ಕ್ರೈಬ್ ಆಗಿರುವ ಮಾಹಿತಿಯೂ ಪೊಲೀಸರ ಗಮನಕ್ಕೆ ಬಂದಿದೆ. ಈ ಹಿನ್ನೆಲೆಯಲ್ಲಿ ಸಬ್‌ಸ್ಕ್ರೈಬರ್‌ಗಳ ಪಟ್ಟಿಯನ್ನು ಸಿದ್ಧಪಡಿಸಿರುವ ಸೈಬರ್ ಕ್ರೈಂ ಪೊಲೀಸರು, ಆ 54 ಜನರ ಹಿನ್ನೆಲೆಯನ್ನು ಪರಿಶೀಲಿಸಲು ಮುಂದಾಗಿದ್ದಾರೆ. ಸ್ಟಿಂಗ್ ಆಪರೇಷನ್ ವಿಡಿಯೋಗಳನ್ನು ವೀಕ್ಷಿಸಲು ಅಥವಾ ಚಾನೆಲ್‌ಗೆ ಸಬ್‌ಸ್ಕ್ರೈಬ್ ಆಗಲು ಯಾರಾದರೂ ಸೂಚನೆ…



